Ezekiel · chapter 16 · verse 24
Ezekiel 16:24 in Kannada
ನೀನು ಪ್ರತಿಯೊಂದು ಬೀದಿಯಲ್ಲಿಯೂ ಉನ್ನತ ಸ್ಥಳಗಳನ್ನು ಕಟ್ಟಿ ನಿನಗೆ ಉತ್ತಮವಾದ ಸ್ಥಳಗ ಳನ್ನು ಮಾಡಿಕೊಂಡಿರುವಿ.
Neenu pratiyondu beediyalliyoo unnata sthalagalannu katti ninage uttamavaada sthalaga lannu maadikondiruvi.
Ezekiel 16:24 in English
- King James Version (KJV)
- [That] thou hast also built unto thee an eminent place, and hast made thee an high place in every street.
- World English Bible (WEB)
- “that you have built for yourselves a vaulted place, and have made yourselves a lofty place in every street.
- American Standard Version (ASV)
- that thou hast built unto thee a vaulted place, and hast made thee a lofty place in every street.
- Bible in Basic English (BBE)
- That you made for yourself an arched room in every open place.
- Darby Translation (DBY)
- that thou didst also build unto thee a place of debauchery, and didst make thee a high place in every street:
- Webster's Bible (WBS)
- [That] thou hast also built to thee an eminent place, and hast made thee a high place in every street.
- Young's Literal Translation (YLT)
- That thou dost build to thee an arch, And dost make to thee a high place in every broad place.
Read in context
- 22ನಿನ್ನ ಎಲ್ಲಾ ಅಸಹ್ಯಗಳ ಲ್ಲಿಯೂ ನಿನ್ನ ವ್ಯಭಿಚಾರಗಳಲ್ಲಿಯೂ ನಿನ್ನ ಎಳೆಯ ಪ್ರಾಯದ ದಿವಸಗಳನ್ನು ನೀನು ಬರೀ ಬೆತ್ತಲೆಯಾಗಿ ನಿನ್ನ ರಕ್ತದಲ್ಲಿ ಹೊರಳಾಡುತ್ತಿದ್ದದ್ದನ್ನು ನೀನು ಜ್ಞಾಪಕ ಮಾಡಲಿಲ್ಲ.
- 23ಇದಲ್ಲದೆ ಈ ನಿನ್ನ ಎಲ್ಲಾ ಕೆಟ್ಟತನಗಳ ತರುವಾಯ ಆಗಿದ್ದೇನಂದರೆ (ಅಯ್ಯೋ! ಅಯ್ಯೋ ಎಂದು ನಿನಗೆ ದೇವರಾದ ಕರ್ತನು ಹೇಳುತ್ತಾನೆ;)
- 24ನೀನು ಪ್ರತಿಯೊಂದು ಬೀದಿಯಲ್ಲಿಯೂ ಉನ್ನತ ಸ್ಥಳಗಳನ್ನು ಕಟ್ಟಿ ನಿನಗೆ ಉತ್ತಮವಾದ ಸ್ಥಳಗ ಳನ್ನು ಮಾಡಿಕೊಂಡಿರುವಿ.
- 25ಪ್ರತಿಯೊಂದು ಕಡೆ ಮೂಲೆ ಮೂಲೆಗೂ ಉನ್ನತ ಸ್ಥಳವನ್ನು ಕಟ್ಟಿ ನಿನ್ನ ಸೌಂದರ್ಯವನ್ನು ದುರುಪಯೋಗಪಡಿಸಿಕೊಂಡು ಹಾದು ಹೋಗುವ ಪ್ರತಿಯೊಬ್ಬರಿಗೂ ನಿನ್ನ ಕಾಲು ಗಳನ್ನು ಅಗಲಿಸಿದಿ; ನಿನ್ನ ವ್ಯಭಿಚಾರವನ್ನು ವೃದ್ಧಿಸಿದಿ.
- 26ಇದಲ್ಲದೆ ಮಾಂಸದಲ್ಲಿ (ಶರೀರಭಾವದಲ್ಲಿ) ಮದಿ ಸಿದ ನಿನ್ನ ನೆರೆಯವರಾದ ಐಗುಪ್ತ್ಯರ ಸಂಗಡ ವ್ಯಭಿ ಚಾರ ಮಾಡಿದಿ; ಮತ್ತು ನನ್ನನ್ನು ರೇಗಿಸುವ ಹಾಗೆ ವ್ಯಭಿಚಾರವನ್ನು ಹೆಚ್ಚಿಸಿದಿ.
Cross references
- Ezekiel 16:39 ಯೆಹೆಜ್ಕೇಲನು 16:39ಇದಲ್ಲದೆ ನಿನ್ನನ್ನು ಅವರ ಕೈಗಳಲ್ಲಿ ಒಪ್ಪಿಸುವೆನು. ಅವರು ನಿನ್ನ ಎತ್ತರ ಸ್ಥಳಗಳನ್ನೆಲ್ಲಾ ಕೆಡವಿಹಾಕಿ ನಿನ್ನ ಉನ್ನತ ಸ್ಥಾನ ಗಳನ್ನು ಒಡೆದು ಬಿಡುವರು; ಅವರು ನಿನ್ನ ವಸ್ತ್ರಗಳನ್ನು ತೆಗೆದುಹಾಕಿ ನಿನ್ನ ಸೌಂದರ್ಯವುಳ್ಳ ಆಭರಣಗಳನ್ನು ಕಸಿದುಕೊಂಡು ನಿನ್ನನ್ನು ಬರೀ ಬೆತ್ತಲೆಯನ್ನಾಗಿ ಮಾಡಿ ಬಿಟ್ಟು ಹೋಗುವರು.
- Psalm 78:58 ಕೀರ್ತನೆಗಳು 78:58ತಮ್ಮ ಉನ್ನತ ಸ್ಥಳಗಳಿಂದ ಆತನಿಗೆ ಕೋಪವನ್ನೆಬ್ಬಿಸಿ ಕೆತ್ತಿದ ತಮ್ಮ ವಿಗ್ರಹಗಳಿಂದ ಆತನಿಗೆ ರೋಷವನ್ನೆಬ್ಬಿಸಿದರು.
- Jeremiah 2:20 ಯೆರೆಮೀಯ 2:20ಪೂರ್ವದಲ್ಲಿ ನಾನು ನಿನ್ನ ನೊಗವನ್ನು ಮುರಿದು ನಿನ್ನ ಬಂಧನಗಳನ್ನು ಹರಿದುಬಿಟ್ಟೆನು; ನೀನು--ನಾನು ವಿಾರುವದಿಲ್ಲ ಎಂದು ನೀನು ಹೇಳಿದಿ; ಆದರೆ ಒಂದೊಂದು ಎತ್ತರವಾದ ಗುಡ್ಡದ ಮೇಲೆಯೂ ಒಂದೊಂದು ಹಸುರಾದ ಮರದ ಕೆಳಗೂ ನೀನು ಸೂಳೆಯಾಗಿ ಅಲೆದಾಡುತ್ತಿ.
- Isaiah 57:7 ಯೆಶಾಯ 57:7ಮಹೋನ್ನತ ಪರ್ವತದಲ್ಲಿ ನೀನು ಹಾಸಿಗೆಯನ್ನು ಹಾಕಿಕೊಂಡಿದ್ದೀ. ಬಲಿ ಅರ್ಪಿಸುವ ದಕ್ಕೂ ಅಲ್ಲಿಗೆ ಏರಿದ್ದೀ.
- Ezekiel 16:31 ಯೆಹೆಜ್ಕೇಲನು 16:31ಪ್ರತಿಯೊಂದು ಬೀದಿಯ ಕೊನೆಯಲ್ಲಿಯೂ ಗದ್ದುಗೆಯನ್ನು ಕಟ್ಟಿ ಪ್ರತಿಯೊಂದು ಹಾದಿಯಲ್ಲಿಯೂ ಉನ್ನತಸ್ಥಾನವನ್ನು ಮಾಡಿಕೊಂಡು ಕೂಲಿಯನ್ನು ಉದಾಸೀನ ಮಾಡುವ ವ್ಯಭಿಚಾರಿಣಿಯು ನೀನಲ್ಲ;
- Ezekiel 20:28–29 ಯೆಹೆಜ್ಕೇಲನು 20:28–29ನಾನು ಕೈ ಎತ್ತಿ ಅವರಿಗೆ ಕೊಟ್ಟ ದೇಶದಲ್ಲಿ ನಾನು ಅವರನ್ನು ಬರಮಾಡಿದ ಮೇಲೆ ಅವರು ಎತ್ತರವಾದ ಎಲ್ಲಾ ಗುಡ್ಡಗಳನ್ನೂ ಗಾತ್ರವಾದ ಮರಗಳನ್ನೂ ನೋಡಿ ಅಲ್ಲಿ ತಮ್ಮ ಬಲಿಗಳನ್ನರ್ಪಿಸಿ ಅಲ್ಲಿ ರೇಗಿಸುವ ತಮ್ಮ ಕಾಣಿಕೆಗಳನ್ನರ್ಪಿಸಿ ಸುವಾಸನೆ ಗಳನ್ನಿಟ್ಟು ಪಾನದ್ರವ್ಯವನ್ನು ಸುರಿದರು. ಆಗ ನಾನು ಅವರಿಗೆ ಹೇಳಿದ್ದೇನಂದರೆ--ನೀವು ಹೋಗುವ ಈ ಎತ್ತರವಾದ ಸ್ಥಳವು ಏನು? ಅದಕ್ಕೆ ಈ ದಿನದ ವರೆಗೂ ಬಾ--ಮಾ ಎಂದು ಕರೆಯುವರು.
- Jeremiah 3:2 ಯೆರೆಮೀಯ 3:2ನಿನ್ನ ಕಣ್ಣುಗಳನ್ನು ಉನ್ನತ ಸ್ಥಳಗಳ ಮೇಲೆತ್ತುಕೊಂಡು ಎಲ್ಲಿ ನಿನ್ನ ಸಂಗಡ ಮಲಗಲಿಲ್ಲವೋ ನೋಡು. ಅರಣ್ಯದಲ್ಲಿ ಅರಬಿಯನ ಹಾಗೆ ದಾರಿಗಳಲ್ಲಿ ಅವರಿಗೋಸ್ಕರ ಕೂತುಕೊಂಡಿದ್ದೀ; ಹೀಗೆ ನಿನ್ನ ಸೂಳೆತನಗಳಿಂದಲೂ ನಿನ್ನ ಕೆಟ್ಟತನಗಳಿಂದಲೂ ದೇಶವನ್ನು ಅಪವಿತ್ರ ಮಾಡಿದ್ದೀ.
- 2 Kings 23:11–12 2 ಅರಸುಗಳು 23:11–12ಬೈಲ ಲ್ಲಿರುವ ಪ್ರಧಾನನಾದ ನಾತಾನ್ ಮೆಲೆಕನ ಕೊಠಡಿಯ ಹತ್ತಿರ ಇದ್ದ ಕರ್ತನ ಮನೆಯ ದ್ವಾರದ ಬಳಿಯಲ್ಲಿ ಯೆಹೂದದ ಅರಸುಗಳು ಸೂರ್ಯನಿಗೆ ಕೊಟ್ಟ ಕುದುರೆ ಗಳನ್ನು ತೆಗೆದುಹಾಕಿ ಸೂರ್ಯನ ರಥಗಳನ್ನು ಬೆಂಕಿ ಯಿಂದ ಸುಟ್ಟುಬಿಟ್ಟನು. ಯೆಹೂದದ ಅರಸರು ಉಂಟು ಮಾಡಿದ ಆಹಾಜನ ಮೇಲು ಮಾಳಿಗೆಯ ಮೇಲೆ ಇದ್ದ ಬಲಿಪೀಠಗಳನ್ನೂ ಮನಸ್ಸೆಯು ಕರ್ತನ ಮನೆಯ ಎರಡು ಅಂಗಳಗಳಲ್ಲಿ ಮಾಡಿದ ಬಲಿಪೀಠ ಗಳನ್ನೂ ಅರಸನು ಕೆಡವಿಸಿ ಅಲ್ಲಿಂದ ಅದರ ಧೂಳನ್ನು ಕಿದ್ರೋನ್ ಹಳ್ಳದಲ್ಲಿ ಹಾಕಿಸಿದನು.
- Isaiah 57:5 ಯೆಶಾಯ 57:5ಹಸಿರಾದ ಏಲಾ ಮರಗಳ ಕೆಳಗೆ ವಿಗ್ರಹಗಳಿಂದ ಮದವೇರಿಸಿ ಕೊಂಡು ಹಳ್ಳಗಳಲ್ಲಿ ಬಂಡೆಗಳ ಬಿರುಕುಗಳಲ್ಲಿ ಮಕ್ಕಳನ್ನು ಕೊಂದುಹಾಕುವ ನೀವು ದ್ರೋಹದ ಮಕ್ಕಳೂ ಸುಳ್ಳಿನ ಸಂತತಿಯೂ ಅಲ್ಲವೋ?
- 2 Kings 21:3–7 2 ಅರಸುಗಳು 21:3–7ಅವನು ತನ್ನ ತಂದೆಯಾದ ಹಿಜ್ಕೀಯನು ನಾಶಮಾಡಿದ ಉನ್ನತ ಸ್ಥಳಗಳನ್ನು ತಿರಿಗಿ ಕಟ್ಟಿಸಿ ಬಾಳನಿಗೆ ಬಲಿಪೀಠ ಗಳನ್ನು ಉಂಟುಮಾಡಿ ಇಸ್ರಾಯೇಲಿನ ಅರಸನಾದ ಅಹಾಬನು ಮಾಡಿದ ಹಾಗೆ ವಿಗ್ರಹದ ತೋಪನ್ನು ಮಾಡಿ ಆಕಾಶದ ಎಲ್ಲಾ ಸೈನ್ಯಕ್ಕೆ ಅಡ್ಡಬಿದ್ದು ಅವುಗಳನ್ನು ಸೇವಿಸಿದನು. ಇದಲ್ಲದೆ ಯೆರೂಸಲೇಮಿನಲ್ಲಿ ನನ್ನ ನಾಮವನ್ನು ಇರಿಸುವೆನೆಂದು ಕರ್ತನು ಯಾವದನ್ನು ಕುರಿತು ಹೇಳಿದ್ದನೋ ಆ ಕರ್ತನ ಮನೆಯಲ್ಲಿ ಅವನು ಬಲಿಪೀಠಗಳನ್ನು ಕಟ್ಟಿಸಿದನು. ಕರ್ತನ ಮನೆಯ ಎರಡು ಅಂಗಳಗಳಲ್ಲಿ ಆಕಾಶದ ಎಲ್ಲಾ ಸೈನ್ಯಕ್ಕೋಸ್ಕರ ಬಲಿಪೀಠಗಳನ್ನು ಕಟ್ಟಿಸಿದನು. ಅವನು ತನ್ನ ಮಗನನ್ನು ಬೆಂಕಿಯಲ್ಲಿ ದಾಟುವಂತೆ ಮಾಡಿದನು; ಮೇಘ ಮಂತ್ರ ಗಳನ್ನೂ ಸರ್ಪಮಂತ್ರಗಳನ್ನೂ ಮಾಡಿದನು; ಯಕ್ಷಿಣಿ ಗಾರರ ಬಳಿಯಲ್ಲೂ ಮಂತ್ರಜ್ಞರ ಬಳಿಯಲ್ಲೂ ವಿಚಾರಿ ಸಿದನು; ಕರ್ತನಿಗೆ ಕೋಪವನ್ನು ಎಬ್ಬಿಸಲು ಆತನ ದೃಷ್ಟಿಯಲ್ಲಿ ಅತ್ಯಂತ ಕೆಟ್ಟತನವನ್ನು ಮಾಡಿದನು. ಈ ಮನೆಯಲ್ಲಿಯೂ ಇಸ್ರಾಯೇಲಿನ ಸಕಲ ಗೋತ್ರಗಳ ಲ್ಲಿಯೂ ನಾನು ಆದುಕೊಂಡ ಯೆರೂಸಲೇಮಿನ ಲ್ಲಿಯೂ ನನ್ನ ನಾಮವನ್ನು ಯುಗಯುಗಕ್ಕೂ ಇರುವಂತೆ ಮಾಡುವೆನೆಂದು ಕರ್ತನು ದಾವೀದನಿಗೂ ಅವನ ಮಗನಾದ ಸೊಲೊಮೋನನಿಗೂ ಯಾವದನ್ನು ಕುರಿತು ಹೇಳಿದ್ದನೋ ಆ ಮನೆಯಲ್ಲಿ ತಾನು ಮಾಡಿದ ತೋಪಿನ ಕೆತ್ತಿದ ವಿಗ್ರಹವನ್ನು ಇಟ್ಟನು.
- Jeremiah 17:3 ಯೆರೆಮೀಯ 17:3ಹೊಲದಲ್ಲಿರುವ ನನ್ನ ಪರ್ವತವೇ, ನಿನ್ನ ಬದುಕನ್ನೂ ಎಲ್ಲಾ ಬೊಕ್ಕಸಗಳನ್ನೂ ಎಲ್ಲಾ ಪ್ರಾಂತ್ಯಗಳಲ್ಲಿ ಪಾಪಕ್ಕಾಗಿರುವ ನಿನ್ನ ಉನ್ನತ ಸ್ಥಳಗಳನ್ನೂ ನಾನು ಕೊಳ್ಳೆಗೆ ಒಪ್ಪಿಸುವೆನು.
- Leviticus 26:30 ಯಾಜಕಕಾಂಡ 26:30ಇದಲ್ಲದೆ ನಾನು ನಿಮ್ಮ ಉನ್ನತ ಸ್ಥಳಗಳನ್ನು ಹಾಳುಮಾಡಿ ನಿಮ್ಮ ಪ್ರತಿಮೆಗಳನ್ನು ಕಡಿದುಹಾಕಿ ವಿಗ್ರಹಗಳ ಮೇಲೆ ನಿಮ್ಮ ಹೆಣಗಳನ್ನು ಹಾಕುವೆನು; ನನ್ನ ಪ್ರಾಣವು ನಿಮ್ಮನ್ನು ಹೇಸಿಕೊಳ್ಳು ವದು.