Ezekiel · chapter 16 · verse 25
Ezekiel 16:25 in Kannada
ಪ್ರತಿಯೊಂದು ಕಡೆ ಮೂಲೆ ಮೂಲೆಗೂ ಉನ್ನತ ಸ್ಥಳವನ್ನು ಕಟ್ಟಿ ನಿನ್ನ ಸೌಂದರ್ಯವನ್ನು ದುರುಪಯೋಗಪಡಿಸಿಕೊಂಡು ಹಾದು ಹೋಗುವ ಪ್ರತಿಯೊಬ್ಬರಿಗೂ ನಿನ್ನ ಕಾಲು ಗಳನ್ನು ಅಗಲಿಸಿದಿ; ನಿನ್ನ ವ್ಯಭಿಚಾರವನ್ನು ವೃದ್ಧಿಸಿದಿ.
Pratiyondu kade moole moolegoo unnata sthalavannu katti ninna saundaryavannu durupayogapadisikondu haadu hoguva pratiyobbarigoo ninna kaalu galannu agalisidi; ninna vyabhichaaravannu vruddhisidi.
Ezekiel 16:25 in English
- King James Version (KJV)
- Thou hast built thy high place at every head of the way, and hast made thy beauty to be abhorred, and hast opened thy feet to every one that passed by, and multiplied thy whoredoms.
- World English Bible (WEB)
- You have built your lofty place at the head of every way, and have made your beauty an abomination, and have opened your feet to everyone who passed by, and multiplied your prostitution.
- American Standard Version (ASV)
- Thou hast built thy lofty place at the head of every way, and hast made thy beauty an abomination, and hast opened thy feet to every one that passed by, and multiplied thy whoredom.
- Bible in Basic English (BBE)
- You put up your high places at the top of every street, and made the grace of your form a disgusting thing, opening your feet to everyone who went by, increasing your loose ways.
- Darby Translation (DBY)
- thou didst build thy high place at every head of the way, and madest thy beauty to be abhorred, and thou didst open thy feet to every one that passed by, and multiply thy whoredom.
- Webster's Bible (WBS)
- Thou hast built thy high place at every head of the way, and hast made thy beauty to be abhorred, and hast prostituted thyself to every one that passed by, and multiplied thy lewd deeds.
- Young's Literal Translation (YLT)
- At every head of the way thou hast built thy high place, And thou dost make thy beauty abominable, And dost open wide thy feet to every passer by, And dost multiply thy whoredoms,
Read in context
- 23ಇದಲ್ಲದೆ ಈ ನಿನ್ನ ಎಲ್ಲಾ ಕೆಟ್ಟತನಗಳ ತರುವಾಯ ಆಗಿದ್ದೇನಂದರೆ (ಅಯ್ಯೋ! ಅಯ್ಯೋ ಎಂದು ನಿನಗೆ ದೇವರಾದ ಕರ್ತನು ಹೇಳುತ್ತಾನೆ;)
- 24ನೀನು ಪ್ರತಿಯೊಂದು ಬೀದಿಯಲ್ಲಿಯೂ ಉನ್ನತ ಸ್ಥಳಗಳನ್ನು ಕಟ್ಟಿ ನಿನಗೆ ಉತ್ತಮವಾದ ಸ್ಥಳಗ ಳನ್ನು ಮಾಡಿಕೊಂಡಿರುವಿ.
- 25ಪ್ರತಿಯೊಂದು ಕಡೆ ಮೂಲೆ ಮೂಲೆಗೂ ಉನ್ನತ ಸ್ಥಳವನ್ನು ಕಟ್ಟಿ ನಿನ್ನ ಸೌಂದರ್ಯವನ್ನು ದುರುಪಯೋಗಪಡಿಸಿಕೊಂಡು ಹಾದು ಹೋಗುವ ಪ್ರತಿಯೊಬ್ಬರಿಗೂ ನಿನ್ನ ಕಾಲು ಗಳನ್ನು ಅಗಲಿಸಿದಿ; ನಿನ್ನ ವ್ಯಭಿಚಾರವನ್ನು ವೃದ್ಧಿಸಿದಿ.
- 26ಇದಲ್ಲದೆ ಮಾಂಸದಲ್ಲಿ (ಶರೀರಭಾವದಲ್ಲಿ) ಮದಿ ಸಿದ ನಿನ್ನ ನೆರೆಯವರಾದ ಐಗುಪ್ತ್ಯರ ಸಂಗಡ ವ್ಯಭಿ ಚಾರ ಮಾಡಿದಿ; ಮತ್ತು ನನ್ನನ್ನು ರೇಗಿಸುವ ಹಾಗೆ ವ್ಯಭಿಚಾರವನ್ನು ಹೆಚ್ಚಿಸಿದಿ.
- 27ಆದದರಿಂದ ಇಗೋ, ನಾನು ನನ್ನ ಕೈಯನ್ನು ನಿನ್ನ ಮೇಲೆ ಚಾಚಿ ನಿನ್ನ ಸಾಮಾನ್ಯವಾದ ಆಹಾರವನ್ನು ಕಡಿಮೆಮಾಡಿದೆ; ನಿನ್ನ ದುರ್ಮಾರ್ಗಕ್ಕೆ ನಾಚಿಕೆಪಟ್ಟು ನಿನ್ನ ಕೆಟ್ಟ ನಡತೆಗೆ ಅಸಹ್ಯಪಡುವವರಾದ ಫಿಲಿಷ್ಟಿಯರ ಕುಮಾರ್ತೆಯರ ಚಿತ್ತಕ್ಕೆ ನಿನ್ನನ್ನು ಒಪ್ಪಿಸಿಬಿಟ್ಟೆ.
Cross references
- Jeremiah 3:2 ಯೆರೆಮೀಯ 3:2ನಿನ್ನ ಕಣ್ಣುಗಳನ್ನು ಉನ್ನತ ಸ್ಥಳಗಳ ಮೇಲೆತ್ತುಕೊಂಡು ಎಲ್ಲಿ ನಿನ್ನ ಸಂಗಡ ಮಲಗಲಿಲ್ಲವೋ ನೋಡು. ಅರಣ್ಯದಲ್ಲಿ ಅರಬಿಯನ ಹಾಗೆ ದಾರಿಗಳಲ್ಲಿ ಅವರಿಗೋಸ್ಕರ ಕೂತುಕೊಂಡಿದ್ದೀ; ಹೀಗೆ ನಿನ್ನ ಸೂಳೆತನಗಳಿಂದಲೂ ನಿನ್ನ ಕೆಟ್ಟತನಗಳಿಂದಲೂ ದೇಶವನ್ನು ಅಪವಿತ್ರ ಮಾಡಿದ್ದೀ.
- Ezekiel 16:31 ಯೆಹೆಜ್ಕೇಲನು 16:31ಪ್ರತಿಯೊಂದು ಬೀದಿಯ ಕೊನೆಯಲ್ಲಿಯೂ ಗದ್ದುಗೆಯನ್ನು ಕಟ್ಟಿ ಪ್ರತಿಯೊಂದು ಹಾದಿಯಲ್ಲಿಯೂ ಉನ್ನತಸ್ಥಾನವನ್ನು ಮಾಡಿಕೊಂಡು ಕೂಲಿಯನ್ನು ಉದಾಸೀನ ಮಾಡುವ ವ್ಯಭಿಚಾರಿಣಿಯು ನೀನಲ್ಲ;
- Isaiah 3:9 ಯೆಶಾಯ 3:9ಅವರ ಮುಖಭಾವವೇ ಅವರಿಗೆ ವಿರುದ್ಧವಾಗಿ ಸಾಕ್ಷಿಯಾಗಿದೆ. ತಮ್ಮ ಪಾಪ ಗಳನ್ನು ಸೊದೋಮಿನವರಂತೆ ಮರೆಮಾಜದೆ ಪ್ರಕಟ ಮಾಡುತ್ತಾರೆ. ಅವರ ಆತ್ಮಕ್ಕೆ ಅಯ್ಯೋ! ತಮಗೆ ತಾವೇ ಕೇಡನ್ನು ಪ್ರತೀಕಾರವಾಗಿ ಮಾಡಿಕೊಂಡಿದ್ದಾರೆ.
- Genesis 38:21 ಆದಿಕಾಂಡ 38:21ಅದುಲ್ಲಾಮ್ಯನು ಆಕೆಯ ಊರಿನವರನ್ನು--ಬಹಿರಂಗ ಮಾರ್ಗದ ಬಳಿಯಲ್ಲಿದ್ದ ಸೂಳೆ ಎಲ್ಲಿ ಎಂದು ಕೇಳಿದಾಗ ಅವರು--ಈ ಸ್ಥಳದಲ್ಲಿ ಯಾವ ಸೂಳೆಯೂ ಇರಲಿಲ್ಲ ಅಂದರು.
- Revelation 17:12–13 ಪ್ರಕಟನೆ 17:12–13ನೀನು ಕಂಡ ಆ ಹತ್ತು ಕೊಂಬುಗಳು ರಾಜ್ಯವನ್ನು ಇನ್ನೂ ಹೊಂದದಿರುವ ಹತ್ತು ಮಂದಿ ರಾಜರು. ಅವರು ಮೃಗದೊಂದಿಗೆ ರಾಜರಂತೆ ಒಂದು ತಾಸಿನವರೆಗೆ ಅಧಿಕಾರವನ್ನು ಹೊಂದುತ್ತಾರೆ. ಅವರು ಒಂದೇ ಮನಸ್ಸುಳ್ಳವರಾಗಿದ್ದು ತಮ್ಮ ಅಧಿಕಾರವನ್ನೂ ಶಕ್ತಿಯನ್ನೂ ಮೃಗಕ್ಕೆ ಕೊಡುತ್ತಾರೆ.
- Revelation 17:1–5 ಪ್ರಕಟನೆ 17:1–5ಏಳು ಪಾತ್ರೆಗಳನ್ನು ಹಿಡಿದಿದ್ದ ಏಳು ಮಂದಿ ದೂತರಲ್ಲಿ ಒಬ್ಬನು ಬಂದು ನನ್ನ ಸಂಗಡ ಮಾತನಾಡಿ--ಇಲ್ಲಿಗೆ ಬಾ, ಬಹಳ ನೀರುಗಳ ಮೇಲೆ ಕೂತಿರುವ ಮಹಾ ಜಾರಸ್ತ್ರೀಗೆ ಬರುವ ದಂಡನೆಯನ್ನು ನಾನು ನಿನಗೆ ತೋರಿಸುತ್ತೇನೆ. ಅವಳೊಂದಿಗೆ ಭೂರಾಜರು ಜಾರತ್ವ ಮಾಡಿದರು. ಭೂನಿವಾಸಿಗಳು ಅವಳ ಜಾರತ್ವವೆಂಬ ದ್ರಾಕ್ಷಾರಸವನ್ನು ಕುಡಿದು ಮತ್ತರಾದರು ಎಂದು ಹೇಳಿದನು. ಆಗ ಅವನು ಆತ್ಮದಲ್ಲಿ ನನ್ನನ್ನು ಎತ್ತಿಕೊಂಡು ಅಡವಿಗೆ ಹೋದನು; ಅಲ್ಲಿ ದೇವದೂಷಣೆಯ ಹೆಸರುಗಳಿಂದ ತುಂಬಿದ್ದು ಏಳು ತಲೆಗಳು ಹತ್ತು ಕೊಂಬುಗಳೂ ಇದ್ದ ಕೆಂಪುಬಣ್ಣದ ಮೃಗದ ಮೇಲೆ ಕೂತಿದ್ದ ಒಬ್ಬ ಸ್ತ್ರೀಯನ್ನು ನಾನು ಕಂಡೆನು. ಆ ಸ್ತ್ರೀಯು ಧೂಮ್ರ ಮತ್ತು ಕೆಂಪುವರ್ಣದ ವಸ್ತ್ರಗಳನ್ನು ಧರಿಸಿಕೊಂಡು ಚಿನ್ನ ಅಮೂಲ್ಯವಾದ ಕಲ್ಲುಗಳು ಮತ್ತು ಮುತ್ತುಗಳು ಇವುಗಳಿಂದ ಅಲಂಕರಿಸಿಕೊಂಡಿದ್ದಳು; ಅವಳ ಕೈಯಲ್ಲಿ ಒಂದು ಚಿನ್ನದ ಬಟ್ಟಲು ಇತ್ತು; ಅದು ಅವಳ ಜಾರತ್ವದ ಅಸಹ್ಯವಾದವುಗಳಿಂದಲೂ ಅಶುದ್ಧತ್ವದಿಂದಲೂ ತುಂಬಿತು ಇದಲ್ಲದೆ ಮರ್ಮ, ಮಹಾ ಬಾಬೆಲು, ಭೂಮಿಯಲ್ಲಿರುವ ಜಾರಸ್ತ್ರೀಯರಿಗೂ ಅಸಹ್ಯವಾದ ವುಗಳಿಗೂ ತಾಯಿ ಎಂಬ ಹೆಸರು ಅವಳ ಹಣೆಯ ಮೇಲೆ ಬರೆದಿತ್ತು.
- Ezekiel 23:9–10 ಯೆಹೆಜ್ಕೇಲನು 23:9–10ಆದದರಿಂದ ನಾನು ಅವಳನ್ನು ಅವಳ ಪ್ರಿಯರಿಂದಲೂ ಒಪ್ಪಿಸುವ ಅವಳ ಅಶ್ಶೂರ್ಯರಿಂದಲೂ ಅವರೆಲ್ಲರಿಂದಲೂ ಮೋಹಿಸ ಲ್ಪಟ್ಟಳು; ಅವರು ಅವಳ ಬೆತ್ತಲೆತನವನ್ನು ಬಯಲು ಪಡಿಸಿದರು ಅವಳ ಪುತ್ರರನ್ನೂ ಹೆಣ್ಣು ಮಕ್ಕಳನ್ನೂ ತೆಗೆದುಕೊಂಡು ಖಡ್ಗದಿಂದ ಕೊಂದುಹಾಕಿದರು; ಸ್ತ್ರೀಯರಲ್ಲಿ (ಕೆಟ್ಟತನಕ್ಕೆ) ಹೆಸರುಗೊಂಡಳು; ಅವಳಲ್ಲಿ ನ್ಯಾಯ ತೀರ್ಪುಮಾಡಿದರು.
- Revelation 17:16 ಪ್ರಕಟನೆ 17:16ಮೃಗದ ಮೇಲೆ ನೀನು ನೋಡಿದ ಹತ್ತು ಕೊಂಬು ಗಳು ಆ ಜಾರ ಸ್ತ್ರೀಯನ್ನು ದ್ವೇಷಿಸಿ ಅವಳನ್ನು ಗತಿಗೆಟ್ಟ ವಳನ್ನಾಗಿಯೂ ಬಟ್ಟೆಯಿಲ್ಲದವಳನ್ನಾಗಿಯೂ ಮಾಡಿ ಅವಳ ಮಾಂಸವನ್ನು ತಿಂದು ಅವಳನ್ನು ಬೆಂಕಿಯಿಂದ ಸುಟ್ಟುಬಿಡುವವು.
- Ezekiel 23:32 ಯೆಹೆಜ್ಕೇಲನು 23:32ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನೀನು ನಿನ್ನ ಸಹೋದರಿಯ ಆಳವಾದ ದೊಡ್ಡ ಪಾತ್ರೆಯಲ್ಲಿ ಕುಡಿಯುವಿ. ನೀನು ಹಾಸ್ಯಕ್ಕೂ ನಿಂದೆಗೂ ಗುರಿ ಯಾಗುವಿ. ಅದೇ ನಿನಗೆ ಹೆಚ್ಚಾಗುವದು.
- Proverbs 9:14–15 ಜ್ಞಾನೋಕ್ತಿಗಳು 9:14–15ತನ್ನ ಮನೆಯ ಬಾಗಲಿನಲ್ಲಿ ಪಟ್ಟಣದ ಎತ್ತರವಾದ ಸ್ಥಳಗಳ ಪೀಠದ ಮೇಲೆ ಕೂತುಕೊಂಡಿರುತ್ತಾಳೆ. ಮಾರ್ಗಕ್ಕನುಸಾರವಾಗಿ ಹೋಗುವ ಪ್ರಯಾಣಿಕ ರನ್ನು ಕರೆಯುತ್ತಾಳೆ.
- Genesis 38:14 ಆದಿಕಾಂಡ 38:14ಆಕೆಯು ವಿಧವೆಯ ವಸ್ತ್ರಗಳನ್ನು ತೆಗೆದಿಟ್ಟು ಮುಸುಕು ಹಾಕಿ ಮುಚ್ಚಿಕೊಂಡು ತಿಮ್ನಾತಿನ ಮಾರ್ಗದಲ್ಲಿರುವ ಬಹಿರಂಗ ಸ್ಥಳದಲ್ಲಿ ಕೂತು ಕೊಂಡಳು; ಯಾಕಂದರೆ ಶೇಲಹನು ದೊಡ್ಡವನಾ ಗಿದ್ದರೂ ತನ್ನನ್ನು ಅವನಿಗೆ ಹೆಂಡತಿಯಾಗಿ ಕೊಡಲಿಲ್ಲ ವೆಂದು ನೋಡಿದಳು.
- Jeremiah 6:15 ಯೆರೆಮೀಯ 6:15ಅಸಹ್ಯವನ್ನು ಮಾಡಿದ ಮೇಲೆ ನಾಚಿಕೆಪಟ್ಟರೋ? ಇಲ್ಲ, ಸ್ವಲ್ಪವಾದರೂ ನಾಚಿಕೆಪಡ ಲಿಲ್ಲ; ಇಲ್ಲವೆ ಲಜ್ಜೆಯನ್ನು ಅರಿಯರು; ಆದದರಿಂದ ಅವರು ಬೀಳುವವರೊಳಗೆ ಬೀಳುವರು; ನಾನು ಅವ ರನ್ನು ವಿಚಾರಿಸುವ ಕಾಲದಲ್ಲಿ ಅವರು ಕೆಳಗೆ ಹಾಕ ಲ್ಪಡುವರು ಎಂದು ಕರ್ತನು ಹೇಳುತ್ತಾನೆ.