Ezekiel · chapter 16 · verse 29
Ezekiel 16:29 in Kannada
ಇದಲ್ಲದೆ ಈ ನಿನ್ನ ವ್ಯಭಿಚಾರವನ್ನು ಕಾನಾನ್ ದೇಶದಿಂದ ಕಸ್ದೀಯ ದೇಶದವರೆಗೂ ಹೆಚ್ಚು ಮಾಡಿದಿ. ಆದರೂ ನೀನು ಇದರಲ್ಲಿ ತೃಪ್ತಿ ಹೊಂದಲಿಲ್ಲ.
Idallade ee ninna vyabhichaaravannu kaanaan deshadinda kasdeeya deshadavaregoo hechchu maadidi. Aadaroo neenu idaralli trupti hondalilla.
Ezekiel 16:29 in English
- King James Version (KJV)
- Thou hast moreover multiplied thy fornication in the land of Canaan unto Chaldea; and yet thou wast not satisfied herewith.
- World English Bible (WEB)
- You have moreover multiplied your prostitution to the land of merchants, to Chaldea; and yet you weren’t satisfied with this.
- American Standard Version (ASV)
- Thou hast moreover multiplied thy whoredom unto the land of traffic, unto Chaldea; and yet thou wast not satisfied herewith.
- Bible in Basic English (BBE)
- And you went on in your loose ways, even as far as the land of Chaldaea, and still you had not enough.
- Darby Translation (DBY)
- And thou didst multiply thy whoredom with the land of merchants, Chaldea, and yet thou wast not satisfied herewith.
- Webster's Bible (WBS)
- Thou hast moreover multiplied thy fornication in the land of Canaan to Chaldea; and yet with this thou wast not satisfied.
- Young's Literal Translation (YLT)
- And thou dost multiply thy whoredoms On the land of Canaan — toward Chaldea, And even with this thou hast not been satisfied.
Read in context
- 27ಆದದರಿಂದ ಇಗೋ, ನಾನು ನನ್ನ ಕೈಯನ್ನು ನಿನ್ನ ಮೇಲೆ ಚಾಚಿ ನಿನ್ನ ಸಾಮಾನ್ಯವಾದ ಆಹಾರವನ್ನು ಕಡಿಮೆಮಾಡಿದೆ; ನಿನ್ನ ದುರ್ಮಾರ್ಗಕ್ಕೆ ನಾಚಿಕೆಪಟ್ಟು ನಿನ್ನ ಕೆಟ್ಟ ನಡತೆಗೆ ಅಸಹ್ಯಪಡುವವರಾದ ಫಿಲಿಷ್ಟಿಯರ ಕುಮಾರ್ತೆಯರ ಚಿತ್ತಕ್ಕೆ ನಿನ್ನನ್ನು ಒಪ್ಪಿಸಿಬಿಟ್ಟೆ.
- 28ಇದಲ್ಲದೆ ಅಶ್ಶೂರ್ಯ ರೊಂದಿಗೂ ತೃಪ್ತಿಯಾಗಲಾರದಷ್ಟು ವ್ಯಭಿಚಾರಮಾಡಿ ದರೂ ನಿನಗೆ ತೃಪ್ತಿಯಾಗಲಿಲ್ಲ; ಹೌದು, ಅವರ ಸಂಗಡ ವ್ಯಭಿಚಾರ ಮಾಡಿದ್ದೀ; ಆದರೂ ತೃಪ್ತಿಯಾಗ ಲಿಲ್ಲ.
- 29ಇದಲ್ಲದೆ ಈ ನಿನ್ನ ವ್ಯಭಿಚಾರವನ್ನು ಕಾನಾನ್ ದೇಶದಿಂದ ಕಸ್ದೀಯ ದೇಶದವರೆಗೂ ಹೆಚ್ಚು ಮಾಡಿದಿ. ಆದರೂ ನೀನು ಇದರಲ್ಲಿ ತೃಪ್ತಿ ಹೊಂದಲಿಲ್ಲ.
- 30ನೀನು ಈ ಸಂಗತಿ ಗಳನ್ನೆಲ್ಲಾ ಸ್ವಯಿಚ್ಛೆಯಾಗಿ ನಡೆಸುವ ಜಾರಸ್ತ್ರೀಯ ಕೆಲಸವನ್ನೇ ಮಾಡಿದಿಯಲ್ಲಾ! ನಿನ್ನ ಹೃದಯವು ಎಷ್ಟೊಂದು ಬಲಹೀನವಾಗಿದೆ ಎಂದು ದೇವರಾದ ಕರ್ತನು ಹೇಳುತ್ತಾನೆ.
- 31ಪ್ರತಿಯೊಂದು ಬೀದಿಯ ಕೊನೆಯಲ್ಲಿಯೂ ಗದ್ದುಗೆಯನ್ನು ಕಟ್ಟಿ ಪ್ರತಿಯೊಂದು ಹಾದಿಯಲ್ಲಿಯೂ ಉನ್ನತಸ್ಥಾನವನ್ನು ಮಾಡಿಕೊಂಡು ಕೂಲಿಯನ್ನು ಉದಾಸೀನ ಮಾಡುವ ವ್ಯಭಿಚಾರಿಣಿಯು ನೀನಲ್ಲ;
Cross references
- Ezekiel 13:14–23 ಯೆಹೆಜ್ಕೇಲನು 13:14–23ನೀವು ಸುಣ್ಣ ಬಳಿದ ಗೋಡೆಯನ್ನು ನಾನು ಈಗ ಕೆಡವಿ ನೆಲಸಮ ಮಾಡಿ ಅದರ ಅಸ್ತಿವಾರ ವನ್ನು ಕಾಣದ ಹಾಗೆ ಮಾಡುವೆನು. ಅದು ಬಿದ್ದು ಹೋಗುವದು, ನೀವು ಅದರಲ್ಲಿ ನಾಶ ಮಾಡಲ್ಪಡು ವಿರಿ. ಆಗ ನಾನೇ ಕರ್ತನೆಂದು ನಿಮಗೆ ತಿಳಿದು ಬರುವದು. ಹೀಗೆ ನಾನು ಗೋಡೆಯಲ್ಲಿಯೂ ಅದಕ್ಕೆ ಸುಣ್ಣ ಬಳಿದವರಲ್ಲಿಯೂ ರೋಷವನ್ನು ತೀರಿಸಿ ಕೊಂಡು ಇನ್ನು ಗೋಡೆಯಾದರೂ ಅದಕ್ಕೆ ಸುಣ್ಣ ಹಚ್ಚಿದವರಾದರೂ ಇಲ್ಲವೆಂದು ಯೆರೂಸಲೇಮಿನ ವಿಷಯ ಪ್ರವಾದಿಸಿ ಸಮಾಧಾನವಿಲ್ಲದಿರುವಾಗ ಅದಕ್ಕೆ ಸಮಾಧಾನದ ದರ್ಶನವನ್ನು ಕಂಡ ಇಸ್ರಾಯೇಲಿನ ಪ್ರವಾದಿಗಳು ನಿಮಗೆ ಇಲ್ಲವೆಂದು ದೇವರಾದ ಕರ್ತನು ಹೇಳುತ್ತಾನೆ. ಇದೇ ರೀತಿ ಮನುಷ್ಯಪುತ್ರನೇ, ತಮ್ಮ ಹೃದಯ ದೊಳಗಿಂದ ಪ್ರವಾದಿಸುವ ನಿನ್ನ ಜನರ ಕುಮಾರ್ತೆ ಯರಿಗೆ ವಿರೋಧವಾಗಿ ನಿನ್ನ ಮುಖವನ್ನು ಮಾಡಿ, ನೀನು ಅವರಿಗೆ ಪ್ರವಾದಿಸಿ ಹೀಗೆ ಹೇಳು ಎಂದು ದೇವರಾದ ಕರ್ತನು ಹೇಳುತ್ತಾನೆ-- ಪ್ರಾಣಗಳನ್ನು ಬೇಟೆಯಾಡಬೇಕೆಂದು ಎಲ್ಲರ ಮೊಣಕೈಗಳಿಗೆ ದಿಂಡು ಗಳನ್ನು ಹೊಲಿದು ಪ್ರತಿಯೊಂದು ಎತ್ತರದ ತಲೆಗಳಿಗೆ ವಸ್ತ್ರಗಳನ್ನು ಕಟ್ಟುವ ಕುಮಾರ್ತೆಯರಿಗೆ ಅಯ್ಯೋ! ನನ್ನ ಜನರ ಪ್ರಾಣಗಳನ್ನು ಬೇಟೆಯಾಡುವಿರೋ? ನಿಮ್ಮ ಬಳಿಗೆ ಬರುವ ಪ್ರಾಣಗಳನ್ನು ಬದುಕಿಸುವಿರೋ? ಸುಳ್ಳಿಗೆ ಕಿವಿಗೊಡುವ ನನ್ನ ಜನರಿಗೆ ಸುಳ್ಳು ಹೇಳಿ, ಸಾಯದಿರುವವರನ್ನು ಸಾಯಿಸಿ, ಸಾಯುವವರನ್ನು ಬದುಕಿಸಿ, ಒಂದು ಹಿಡಿ ಬಾರ್ಲಿಗೂ ತುಂಡು ರೊಟ್ಟಿಗೂ ನನ್ನನ್ನು ನನ್ನ ಜನರೊಳಗೆ ಅಪವಿತ್ರಪಡಿಸುವಿರೋ? ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಿಮ್ಮ ಪ್ರಾಣಗಳನ್ನು ಹಾರಿಸುವದಕ್ಕಾಗಿ ಬೇಟೆಯಾ ಡುವ ದಂಡುಗಳಿಗೆ ವಿರೋಧವಾಗಿದ್ದೇನೆ. ಅವುಗಳನ್ನು ನಿಮ್ಮ ತೋಳುಗಳಿಂದ ಹರಿದುಬಿಡುವೆನು. ನೀವು ಹಾರಿಸುವದಕ್ಕಿರುವ ಬೇಟೆಯಾಡುವ ಪ್ರಾಣಗಳನ್ನು ಬಿಡಿಸುತ್ತೇನೆ. ನಿಮ್ಮ ವಸ್ತ್ರಗಳನ್ನು ಹರಿದು ಬಿಟ್ಟು ನನ್ನ ಜನರನ್ನು ನಿಮ್ಮ ಕೈಯೊಳಗಿಂದ ತಪ್ಪಿಸುತ್ತೇನೆ. ಅವರು ಇನ್ನು ಮೇಲೆ ನಿಮ್ಮ ಕೈಗೆ ಬೇಟೆಯಾಗಿ ಸಿಕ್ಕು ವದಿಲ್ಲ. ನಾನೇ ಕರ್ತನೆಂದು ನೀವು ತಿಳಿದುಕೊಳ್ಳುವಿರಿ. ನಾನು ಯಾವನನ್ನು ದುಃಖಪಡಿಸಲಿಲ್ಲವೋ ಆ ನೀತಿವಂತನ ಹೃದಯಕ್ಕೆ ನೀವು ಸುಳ್ಳಾಡಿ ದುಃಖಪಡಿಸಿ ದ್ದೀರಿ; ದುಷ್ಟನು ತನ್ನ ದುರ್ಮಾರ್ಗವನ್ನು ಬಿಟ್ಟು ಪ್ರಾಣವನ್ನು ಉಳಿಸಿಕೊಳ್ಳದಂತೆ ನೀವು ಅವನ ಕೈಗಳನ್ನು ಬಲಪಡಿಸಿದ್ದೀರಿ.ಆದದರಿಂದ ನೀವು ಇನ್ನು ಮೇಲೆ ವ್ಯರ್ಥವಾದದ್ದನ್ನು ಕಾಣುವದಿಲ್ಲ; ಭವಿಷ್ಯವನ್ನೂ ಕಾಣು ವದಿಲ್ಲ; ಯಾಕಂದರೆ ನಾನು ನನ್ನ ಜನರನ್ನು ನಿಮ್ಮ ಕೈಯೊಳಗಿಂದ ತಪ್ಪಿಸುವೆನು; ನಾನೇ ಕರ್ತನೆಂದು ನೀವು ತಿಳಿದುಕೊಳ್ಳುವಿರಿ. ಆದದರಿಂದ ನೀವು ಇನ್ನು ಮೇಲೆ ವ್ಯರ್ಥವಾದದ್ದನ್ನು ಕಾಣುವದಿಲ್ಲ; ಭವಿಷ್ಯವನ್ನೂ ಕಾಣು ವದಿಲ್ಲ; ಯಾಕಂದರೆ ನಾನು ನನ್ನ ಜನರನ್ನು ನಿಮ್ಮ ಕೈಯೊಳಗಿಂದ ತಪ್ಪಿಸುವೆನು; ನಾನೇ ಕರ್ತನೆಂದು ನೀವು ತಿಳಿದುಕೊಳ್ಳುವಿರಿ.
- 2 Kings 21:9 2 ಅರಸುಗಳು 21:9ಆದರೆ ಅವರು ಕೇಳದೆ ಹೋದರು; ಕರ್ತನು ಇಸ್ರಾಯೇಲ್ ಮಕ್ಕಳ ಮುಂದೆ ನಾಶಮಾಡಿದ ಜನಾಂಗಗಳ ಕೆಟ್ಟತನಕ್ಕಿಂತ ಅಧಿಕ ವಾಗಿ ಮಾಡಲು ಮನಸ್ಸೆಯು ಅವರನ್ನು ಮಾರ್ಗ ತಪ್ಪಿಸಿದನು.
- Ezekiel 23:14–21 ಯೆಹೆಜ್ಕೇಲನು 23:14–21ಅವಳು ತನ್ನ ವ್ಯಭಿಚಾರವನ್ನು ಇನ್ನು ಹೆಚ್ಚಿಸಿದಳು; ಗೋಡೆಯ ಮೇಲೆ ಬರೆಯಲ್ಪಟ್ಟ ಮನುಷ್ಯರನ್ನೂ ಕುಂಕುಮ ಇಟ್ಟುಕೊಂಡ ಕಸ್ದೀಯರ ಹಾಗೆ ಕಂಡು ಬರುವ ಪ್ರತಿಮೆಗಳನ್ನೂ (ಮನುಷ್ಯ ಆಕಾರಗಳನ್ನೂ) ನೋಡಿದಾಗ, ಸೊಂಟಕ್ಕೆ ನಡುಕಟ್ಟನ್ನು ಕಟ್ಟಿ ಕೊಂಡಂಥ ತನ್ನ ತಲೆಗಳಲ್ಲಿ ಅಲಂಕಾರವಾದ ರುಮಾ ಲನ್ನು ಧರಿಸಿದಂಥ ಎಲ್ಲರೂ ನೋಟದಲ್ಲಿ ಅವರ ಸ್ವದೇಶವಾದ ಕಸ್ದೀಯಕ್ಕೆ ಸೇರಿದ ಬಾಬೆಲಿನ ಕುಮಾರರ ಹಾಗಿರುವದನ್ನು; ಅವಳು ಅವಳ ಕಣ್ಣುಗಳಿಂದ ತಕ್ಷಣವೇ ಅವರನ್ನು ನೋಡಿದಾಗ ಅವರನ್ನು ಮೋಹಿಸಿ ದಳು; ಅವರ ಬಳಿಗೆ ಕಸ್ದೀಯಕ್ಕೆ ದೂತರನ್ನು ಕಳುಹಿಸಿ ದಳು. ಬಾಬೆಲಿನವರು ಅವಳ, ಪ್ರೀತಿಯ ಹಾಸಿ ಗೆಯ ಮೇಲೆ ಬಂದು ಅವಳನ್ನು ವ್ಯಭಿಚಾರದಿಂದ ಅಪವಿತ್ರಪಡಿಸಿದರು; ಅವಳು ಅವರಿಂದ ಹಾಳಾದ ಮೇಲೆ ತನ್ನ ಮನಸ್ಸನ್ನು ಅವರ ಕಡೆಯಿಂದ ಅಗಲಿಸಿ ಕೊಂಡಳು. ಹೀಗೆ ಅವಳು ವ್ಯಭಿಚಾರವನ್ನು ಕಂಡುಹಿಡಿದು ತನ್ನ ಬೆತ್ತಲೆತನವನು ಬಯಲುಪಡಿಸಿ ಕೊಂಡಾಗ, ತನ್ನ ಅನುರಾಗವು ಮೊದಲು ಇವಳ ಸಹೋದರಿಯಿಂದ ಅಗಲಿದ ಹಾಗೆ ಇವಳಿಂದಲೂ ಅಗಲಿತು. ಆದರೂ ಅವಳು ಐಗುಪ್ತದೇಶದಲ್ಲಿ ವ್ಯಭಿಚಾರ ಮಾಡಿದಾಗ ತನ್ನ ಯೌವನದ ದಿನಗಳನ್ನು ಜ್ಞಾಪಕಮಾಡಿಕೊಂಡು ತನ್ನ ವ್ಯಭಿಚಾರವನ್ನು ಹೆಚ್ಚಿಸಿ ದಳು. ಹೇಗಂದರೆ, ಕತ್ತೆಗಳ ಮಾಂಸದಂತೆ ಮಾಂಸ ವುಳ್ಳವರಾಗಿಯೂ ಕುದುರೆಗಳ ವೀರ್ಯದಂತೆ ವೀರ್ಯ ವುಳ್ಳವರಾಗಿಯೂ ಇರುವ ತನ್ನ ಉಪಪತಿಗಳನ್ನು ಮೋಹಿಸಿದರು. ಹೀಗೆ ಐಗುಪ್ತರಿಂದ ನಿನ್ನ ಯೌವ ನದ ಸ್ತನಗಳ ತೊಟ್ಟುಗಳನ್ನು ಒತ್ತಿಸಿಕೊಂಡು ನಿನ್ನ ಯೌವನದ ದುಷ್ಕರ್ಮವನ್ನು ನೆನಪಿಗೆ ತಂದುಕೋ.
- Judges 2:12–19 ನ್ಯಾಯಸ್ಥಾಪಕರು 2:12–19ತಮ್ಮ ತಂದೆಗಳನ್ನು ಐಗುಪ್ತದಿಂದ ಹೊರಡಮಾಡಿದ ತಮ್ಮ ದೇವರಾದ ಕರ್ತನನ್ನು ಬಿಟ್ಟು ತಮ್ಮ ಸುತ್ತಲಿರುವ ಜನಗಳ ಅನ್ಯ ದೇವರುಗಳ ಹಿಂದೆಹೋಗಿ ಅವುಗಳಿಗೆ ಅಡ್ಡಬಿದ್ದು ಕರ್ತನಿಗೆ ಕೋಪವನ್ನೆಬ್ಬಿಸಿದರು. ಅವರು ಕರ್ತನನ್ನು ಬಿಟ್ಟು ಬಾಳನನ್ನೂ ಅಷ್ಟೋರೆತನ್ನೂ ಸೇವಿಸಿದರು. ಆದದರಿಂದ ಕರ್ತನು ಇಸ್ರಾಯೇಲಿಗೆ ವಿರೋಧ ವಾಗಿ ಉರಿಗೊಂಡು ಅವರನ್ನು ಕೊಳ್ಳೆಹೊಡೆಯುವ ಕೊಳ್ಳೆಗಾರರ ಕೈಯಲ್ಲಿ ಒಪ್ಪಿಸಿಕೊಟ್ಟನು. ತರುವಾಯ ಅವರು ತಮ್ಮ ಶತ್ರುಗಳಿಗೆ ಎದುರಾಗಿ ನಿಲ್ಲದ ಹಾಗೆ ಅವರ ಸುತ್ತಲಿರುವ ಅವರ ಶತ್ರುಗಳ ಕೈಗೆ ಅವರನ್ನು ಮಾರಿಬಿಟ್ಟನು. ಕರ್ತನು ಹೇಳಿದ ಹಾಗೆಯೂ ಕರ್ತನು ಅವರಿಗೆ ಆಣೆಇಟ್ಟ ಹಾಗೆಯೂ ಅವರು ಎಲ್ಲಿ ಹೋದರೂ ಅಲ್ಲಿ ಕೇಡು ಆಗುವದಕ್ಕೆ ಕರ್ತನ ಕೈ ಅವರ ಮೇಲೆ ಇತ್ತು. ಆದಾಗ್ಯೂ ಕರ್ತನು ಅವರನ್ನು ಕೊಳ್ಳೆ ಹೊಡೆಯುವವರ ಕೈಯೊಳಗಿಂದ ಬಿಡಿಸಿದ ನ್ಯಾಯಾಧಿಪತಿಗಳನ್ನು ಎಬ್ಬಿಸಿದರೂ; ಅವರು ತಮ್ಮ ನ್ಯಾಯಾಧಿಪತಿಗಳ ಮಾತನ್ನು ಕೇಳದೆ ಅನ್ಯದೇವರುಗಳ ಹಿಂದೆ ಜಾರತ್ವಮಾಡಿ ಅವುಗಳಿಗೆ ಅಡ್ಡಬಿದ್ದು ತಮ್ಮ ತಂದೆಗಳು ಕರ್ತನ ಆಜ್ಞೆಗಳನ್ನು ಕೇಳಿ ನಡೆದ ಮಾರ್ಗವನ್ನು ಶೀಘ್ರವಾಗಿ ತೊರೆದು ಬಿಟ್ಟರು; ಅವರು ಮಾಡಿದ ಪ್ರಕಾರ ಮಾಡಲಿಲ್ಲ. ಕರ್ತನು ಅವರಿಗೆ ನ್ಯಾಯಾಧಿಪತಿಗಳನ್ನು ಎಬ್ಬಿಸಿ ಆತನು ನ್ಯಾಯಾಧಿಪತಿಯ ಸಂಗಡ ಇದ್ದು ಆ ನ್ಯಾಯಾಧಿಪತಿಯ ದಿನಗಳೆಲ್ಲಾ ಅವರನ್ನು ಅವರ ಶತ್ರುಗಳ ಕೈಯಿಂದ ರಕ್ಷಿಸುತ್ತಿದ್ದನು. ಯಾಕಂದರೆ ಅವರು ತಮ್ಮನ್ನು ಬಾಧಿಸಿ ಶ್ರಮೆಪಡಿಸುವವರ ನಿಮಿತ್ತ ಗೋಳಾಡುವದರಿಂದ ಕರ್ತನು ಪಶ್ಚಾತ್ತಾಪಪಟ್ಟನು. ಆ ನ್ಯಾಯಾಧಿಪತಿ ಸತ್ತಾಗ ಅವರು ತಿರುಗಿ ಮಾರ್ಗ ತಪ್ಪಿ ಅನ್ಯದೇವರುಗಳನ್ನು ಹಿಂಬಾಲಿಸಿ ಅವುಗಳನ್ನು ಸೇವಿಸಿ ಅವುಗಳಿಗೆ ಅಡ್ಡಬಿದ್ದು ತಮ್ಮ ತಂದೆಗಳಿಗಿಂತ ಅಧಿಕವಾಗಿ ತಮ್ಮನ್ನು ಕೆಡಿಸಿಕೊಂಡು ತಮ್ಮ ಕೃತ್ಯಗಳನ್ನೂ ತಮ್ಮ ಕಾಠಿಣ್ಯದ ಮಾರ್ಗವನ್ನೂ ಬಿಡದೇ ಹೋದರು.