Ezekiel · chapter 16 · verse 30
Ezekiel 16:30 in Kannada
ನೀನು ಈ ಸಂಗತಿ ಗಳನ್ನೆಲ್ಲಾ ಸ್ವಯಿಚ್ಛೆಯಾಗಿ ನಡೆಸುವ ಜಾರಸ್ತ್ರೀಯ ಕೆಲಸವನ್ನೇ ಮಾಡಿದಿಯಲ್ಲಾ! ನಿನ್ನ ಹೃದಯವು ಎಷ್ಟೊಂದು ಬಲಹೀನವಾಗಿದೆ ಎಂದು ದೇವರಾದ ಕರ್ತನು ಹೇಳುತ್ತಾನೆ.
Neenu ee sangati galannellaa svayichchheyaagi nadesuva jaarastreeya kelasavanne maadidiyallaa! Ninna hrudayavu eshtondu balaheenavaagide endu devaraada kartanu heluttaane.
Ezekiel 16:30 in English
- King James Version (KJV)
- How weak is thine heart, saith the Lord GOD, seeing thou doest all these [things], the work of an imperious whorish woman;
- World English Bible (WEB)
- “‘“How weak is your heart,” says the Lord GOD, “since you do all these things, the work of an impudent prostitute;
- American Standard Version (ASV)
- How weak is thy heart, saith the Lord Jehovah, seeing thou doest all these things, the work of an impudent harlot;
- Bible in Basic English (BBE)
- How feeble is your heart, says the Lord, seeing that you do all these things, the work of a loose and overruling woman;
- Darby Translation (DBY)
- How weak is thy heart, saith the Lord Jehovah, seeing thou doest all these [things], the work of a whorish woman, under no restraint;
- Webster's Bible (WBS)
- How weak is thy heart, saith the Lord GOD, seeing thou doest all these [things] , the work of an imperious lewd woman;
- Young's Literal Translation (YLT)
- How weak [is] thy heart, An affirmation of the Lord Jehovah, In thy doing all these, The work of a domineering whorish woman.
Read in context
- 28ಇದಲ್ಲದೆ ಅಶ್ಶೂರ್ಯ ರೊಂದಿಗೂ ತೃಪ್ತಿಯಾಗಲಾರದಷ್ಟು ವ್ಯಭಿಚಾರಮಾಡಿ ದರೂ ನಿನಗೆ ತೃಪ್ತಿಯಾಗಲಿಲ್ಲ; ಹೌದು, ಅವರ ಸಂಗಡ ವ್ಯಭಿಚಾರ ಮಾಡಿದ್ದೀ; ಆದರೂ ತೃಪ್ತಿಯಾಗ ಲಿಲ್ಲ.
- 29ಇದಲ್ಲದೆ ಈ ನಿನ್ನ ವ್ಯಭಿಚಾರವನ್ನು ಕಾನಾನ್ ದೇಶದಿಂದ ಕಸ್ದೀಯ ದೇಶದವರೆಗೂ ಹೆಚ್ಚು ಮಾಡಿದಿ. ಆದರೂ ನೀನು ಇದರಲ್ಲಿ ತೃಪ್ತಿ ಹೊಂದಲಿಲ್ಲ.
- 30ನೀನು ಈ ಸಂಗತಿ ಗಳನ್ನೆಲ್ಲಾ ಸ್ವಯಿಚ್ಛೆಯಾಗಿ ನಡೆಸುವ ಜಾರಸ್ತ್ರೀಯ ಕೆಲಸವನ್ನೇ ಮಾಡಿದಿಯಲ್ಲಾ! ನಿನ್ನ ಹೃದಯವು ಎಷ್ಟೊಂದು ಬಲಹೀನವಾಗಿದೆ ಎಂದು ದೇವರಾದ ಕರ್ತನು ಹೇಳುತ್ತಾನೆ.
- 31ಪ್ರತಿಯೊಂದು ಬೀದಿಯ ಕೊನೆಯಲ್ಲಿಯೂ ಗದ್ದುಗೆಯನ್ನು ಕಟ್ಟಿ ಪ್ರತಿಯೊಂದು ಹಾದಿಯಲ್ಲಿಯೂ ಉನ್ನತಸ್ಥಾನವನ್ನು ಮಾಡಿಕೊಂಡು ಕೂಲಿಯನ್ನು ಉದಾಸೀನ ಮಾಡುವ ವ್ಯಭಿಚಾರಿಣಿಯು ನೀನಲ್ಲ;
- 32ಆದರೆ ಗಂಡನಿಗೆ ಬದ ಲಾಗಿ ಅನ್ಯರನ್ನು ಅಂಗೀಕರಿಸುವ ವ್ಯಭಿಚಾರಿ ಹೆಂಡತಿ ಯಾಗಿರುವಿ!
Cross references
- Isaiah 1:3 ಯೆಶಾಯ 1:3ಎತ್ತು ತನ್ನ ಯಜಮಾನನನ್ನು ಮತ್ತು ಕತ್ತೆಯು ತನ್ನ ಒಡೆ ಯನ ಕೊಟ್ಟಿಗೆಯನ್ನು ತಿಳಿದಿರುವವು; ಆದರೆ ಇಸ್ರಾ ಯೇಲಿಗೆ ತಿಳಿದಿಲ್ಲ; ನನ್ನ ಜನರು ಆಲೋಚಿಸುವ ದಿಲ್ಲ.
- Jeremiah 3:3 ಯೆರೆಮೀಯ 3:3ಆದದರಿಂದ ಮಳೆ ನಿಂತು ಹೋಯಿತು, ಹಿಂಗಾರೂ ಆಗಲಿಲ್ಲ; ಸೂಳೆಯ ಹಣೆ ನಿನಗಿತ್ತು; ನಾಚುವದನ್ನು ನಿರಾಕರಿಸಿದಿ.
- Isaiah 3:9 ಯೆಶಾಯ 3:9ಅವರ ಮುಖಭಾವವೇ ಅವರಿಗೆ ವಿರುದ್ಧವಾಗಿ ಸಾಕ್ಷಿಯಾಗಿದೆ. ತಮ್ಮ ಪಾಪ ಗಳನ್ನು ಸೊದೋಮಿನವರಂತೆ ಮರೆಮಾಜದೆ ಪ್ರಕಟ ಮಾಡುತ್ತಾರೆ. ಅವರ ಆತ್ಮಕ್ಕೆ ಅಯ್ಯೋ! ತಮಗೆ ತಾವೇ ಕೇಡನ್ನು ಪ್ರತೀಕಾರವಾಗಿ ಮಾಡಿಕೊಂಡಿದ್ದಾರೆ.
- Jeremiah 4:22 ಯೆರೆಮೀಯ 4:22ನನ್ನ ಜನರು ಮೂಢರಾಗಿದ್ದಾರೆ, ನನ್ನನ್ನು ಅವರು ಅರಿಯರು; ಕುಡಿಕರಾದ ಮಕ್ಕಳಾಗಿದ್ದಾರೆ, ಗ್ರಹಿಕೆ ಯುಳ್ಳವರಲ್ಲ; ಕೆಟ್ಟದ್ದನ್ನು ಮಾಡುವದಕ್ಕೆ ಜಾಣರಾಗಿ ದ್ದಾರೆ, ಒಳ್ಳೇದನ್ನು ಮಾಡುವದನ್ನು ಅರಿಯರು.
- Proverbs 9:13 ಜ್ಞಾನೋಕ್ತಿಗಳು 9:13ಬುದ್ಧಿಹೀನಳಾದ ಸ್ತ್ರೀಯು ಕೂಗಾಟದವಳು. ಅವಳು ಅಜ್ಞಾನಿ; ಏನೂ ತಿಳಿಯದವಳು.
- Revelation 17:1–6 ಪ್ರಕಟನೆ 17:1–6ಏಳು ಪಾತ್ರೆಗಳನ್ನು ಹಿಡಿದಿದ್ದ ಏಳು ಮಂದಿ ದೂತರಲ್ಲಿ ಒಬ್ಬನು ಬಂದು ನನ್ನ ಸಂಗಡ ಮಾತನಾಡಿ--ಇಲ್ಲಿಗೆ ಬಾ, ಬಹಳ ನೀರುಗಳ ಮೇಲೆ ಕೂತಿರುವ ಮಹಾ ಜಾರಸ್ತ್ರೀಗೆ ಬರುವ ದಂಡನೆಯನ್ನು ನಾನು ನಿನಗೆ ತೋರಿಸುತ್ತೇನೆ. ಅವಳೊಂದಿಗೆ ಭೂರಾಜರು ಜಾರತ್ವ ಮಾಡಿದರು. ಭೂನಿವಾಸಿಗಳು ಅವಳ ಜಾರತ್ವವೆಂಬ ದ್ರಾಕ್ಷಾರಸವನ್ನು ಕುಡಿದು ಮತ್ತರಾದರು ಎಂದು ಹೇಳಿದನು. ಆಗ ಅವನು ಆತ್ಮದಲ್ಲಿ ನನ್ನನ್ನು ಎತ್ತಿಕೊಂಡು ಅಡವಿಗೆ ಹೋದನು; ಅಲ್ಲಿ ದೇವದೂಷಣೆಯ ಹೆಸರುಗಳಿಂದ ತುಂಬಿದ್ದು ಏಳು ತಲೆಗಳು ಹತ್ತು ಕೊಂಬುಗಳೂ ಇದ್ದ ಕೆಂಪುಬಣ್ಣದ ಮೃಗದ ಮೇಲೆ ಕೂತಿದ್ದ ಒಬ್ಬ ಸ್ತ್ರೀಯನ್ನು ನಾನು ಕಂಡೆನು. ಆ ಸ್ತ್ರೀಯು ಧೂಮ್ರ ಮತ್ತು ಕೆಂಪುವರ್ಣದ ವಸ್ತ್ರಗಳನ್ನು ಧರಿಸಿಕೊಂಡು ಚಿನ್ನ ಅಮೂಲ್ಯವಾದ ಕಲ್ಲುಗಳು ಮತ್ತು ಮುತ್ತುಗಳು ಇವುಗಳಿಂದ ಅಲಂಕರಿಸಿಕೊಂಡಿದ್ದಳು; ಅವಳ ಕೈಯಲ್ಲಿ ಒಂದು ಚಿನ್ನದ ಬಟ್ಟಲು ಇತ್ತು; ಅದು ಅವಳ ಜಾರತ್ವದ ಅಸಹ್ಯವಾದವುಗಳಿಂದಲೂ ಅಶುದ್ಧತ್ವದಿಂದಲೂ ತುಂಬಿತು ಇದಲ್ಲದೆ ಮರ್ಮ, ಮಹಾ ಬಾಬೆಲು, ಭೂಮಿಯಲ್ಲಿರುವ ಜಾರಸ್ತ್ರೀಯರಿಗೂ ಅಸಹ್ಯವಾದ ವುಗಳಿಗೂ ತಾಯಿ ಎಂಬ ಹೆಸರು ಅವಳ ಹಣೆಯ ಮೇಲೆ ಬರೆದಿತ್ತು. ಆ ಸ್ತ್ರೀಯು ಪರಿಶುದ್ದರ ರಕ್ತವನ್ನೂ ಯೇಸುವಿಗೋಸ್ಕರ ಸಾಕ್ಷಿಕೊಟ್ಟು ಹತರಾದವರ ರಕಆ ಸ್ತ್ರೀಯು ಪರಿಶುದ್ದರ ರಕ್ತವನ್ನೂ ಯೇಸುವಿಗೋಸ್ಕರ ಸಾಕ್ಷಿಕೊಟ್ಟು ಹತರಾದವರ ರಕ
- Proverbs 7:21 ಜ್ಞಾನೋಕ್ತಿಗಳು 7:21ಬಹಳವಾದ ತನ್ನ ಸವಿಮಾತಿನಿಂದ ಅವಳು ಅವನನ್ನು ಒಪ್ಪಿಸಿ ತನ್ನ ತುಟಿಗಳ ಮುಖಸ್ತುತಿ ಯಿಂದ ಅವನನ್ನು ಬಲಾತ್ಕರಿಸಿದಳು.
- Jeremiah 2:12–13 ಯೆರೆಮೀಯ 2:12–13ಓ ಆಕಾಶಗಳೇ, ಇದಕ್ಕೆ ನೀವು ಆಶ್ಚರ್ಯಪಡಿರಿ, ಭಯಭ್ರಾಂತಿಗೊಳ್ಳಿರಿ, ತೀರ ಹಾಳಾಗಿರಿ ಎಂದು ಕರ್ತನು ಅನ್ನುತ್ತಾನೆ. ನನ್ನ ಜನರು ಎರಡು ದುಷ್ಕೃತ್ಯಗಳನ್ನು ಮಾಡಿದ್ದಾರೆ; ಜೀವವುಳ್ಳ ನೀರಿನ ಬುಗ್ಗೆಯಾಗಿರುವ ನನ್ನನ್ನು ಬಿಟ್ಟು ತಮಗೆ ತೊಟ್ಟಿಗಳನ್ನು ನೀರು ಹಿಡಿಯಲಾರದ ಒಡಕು ತೊಟ್ಟಿಗಳನ್ನು ಕೆತ್ತಿಕೊಂಡಿದ್ದಾರೆ.
- Proverbs 7:11–13 ಜ್ಞಾನೋಕ್ತಿಗಳು 7:11–13(ಅವಳು ಕೂಗಾಡುವವಳು, ಹಠ ಮಾರಿ; ಅವಳ ಪಾದಗಳು ಮನೆಯಲ್ಲಿ ನಿಲ್ಲುವದಿಲ್ಲ. ಒಂದು ಸಮಯದಲ್ಲಿ ಅವಳು ಹೊರಗೆ ಮತ್ತೊಂದು ಸಮಯದಲ್ಲಿ ಬೀದಿಗಳಲ್ಲಿ ಪ್ರತಿಯೊಂದು ಮೂಲೆ ಯಲ್ಲಿ ಹೊಂಚುಹಾಕುವಳು). ಹೀಗೆ ಅವಳು ಅವ ನನ್ನು--ಹಿಡುಕೊಂಡು ಮುದ್ದಿಟ್ಟು
- Judges 16:15–16 ನ್ಯಾಯಸ್ಥಾಪಕರು 16:15–16ಅವಳು ಅವನಿಗೆ--ನಿನ್ನ ಹೃದಯವು ನನ್ನ ಸಂಗಡ ಇಲ್ಲದೆ ಇರುವಾಗ ನಿನ್ನನ್ನು ಪ್ರೀತಿ ಮಾಡುತ್ತೇನೆ ಎಂದು ನೀನು ಹೇಗೆ ಹೇಳುತ್ತೀ? ನೀನು ಈ ಮೂರು ಸಾರಿ ನನಗೆ ವಂಚನೆಮಾಡಿದಿ; ನಿನ್ನ ದೊಡ್ಡ ಶಕ್ತಿ ಯಾವದರಲ್ಲಿ ಉಂಟೋ ನನಗೆ ತಿಳಿಸಲಿಲ್ಲ ಅಂದಳು. ಅವಳು ಅವನನ್ನು ದಿನದಿನವೂ ತನ್ನ ಮಾತುಗಳಿಂದ ಪೀಡಿಸಿ ತೊಂದರೆಪಡಿಸಿದ್ದರಿಂದ ಅವನ ಪ್ರಾಣವು ಸಾಯು ವಷ್ಟು ವ್ಯಸನಪಟ್ಟಿತು.