Ezekiel · chapter 16 · verse 39
Ezekiel 16:39 in Kannada
ಇದಲ್ಲದೆ ನಿನ್ನನ್ನು ಅವರ ಕೈಗಳಲ್ಲಿ ಒಪ್ಪಿಸುವೆನು. ಅವರು ನಿನ್ನ ಎತ್ತರ ಸ್ಥಳಗಳನ್ನೆಲ್ಲಾ ಕೆಡವಿಹಾಕಿ ನಿನ್ನ ಉನ್ನತ ಸ್ಥಾನ ಗಳನ್ನು ಒಡೆದು ಬಿಡುವರು; ಅವರು ನಿನ್ನ ವಸ್ತ್ರಗಳನ್ನು ತೆಗೆದುಹಾಕಿ ನಿನ್ನ ಸೌಂದರ್ಯವುಳ್ಳ ಆಭರಣಗಳನ್ನು ಕಸಿದುಕೊಂಡು ನಿನ್ನನ್ನು ಬರೀ ಬೆತ್ತಲೆಯನ್ನಾಗಿ ಮಾಡಿ ಬಿಟ್ಟು ಹೋಗುವರು.
Idallade ninnannu avara kaigalalli oppisuvenu. Avaru ninna ettara sthalagalannellaa kedavihaaki ninna unnata sthaana galannu odedu biduvaru; avaru ninna vastragalannu tegeduhaaki ninna saundaryavulla aabharanagalannu kasidukondu ninnannu baree bettaleyannaagi maadi bittu hoguvaru.
Ezekiel 16:39 in English
- King James Version (KJV)
- And I will also give thee into their hand, and they shall throw down thine eminent place, and shall break down thy high places: they shall strip thee also of thy clothes, and shall take thy fair jewels, and leave thee naked and bare.
- World English Bible (WEB)
- I will also give you into their hand, and they will throw down your vaulted place, and break down your lofty places. They will strip you of your clothes and take your beautiful jewels. They will leave you naked and bare.
- American Standard Version (ASV)
- I will also give thee into their hand, and they shall throw down thy vaulted place, and break down thy lofty places; and they shall strip thee of thy clothes, and take thy fair jewels; and they shall leave thee naked and bare.
- Bible in Basic English (BBE)
- I will give you into their hands, and your arched room will be overturned and your high places broken down; they will take your clothing off you and take away your fair jewels: and when they have done, you will be uncovered and shamed.
- Darby Translation (DBY)
- and I will give thee into their hand, and they shall throw down thy place of debauchery, and shall break down thy high places; and they shall strip thee of thy garments, and shall take thy fair jewels, and leave thee naked and bare.
- Webster's Bible (WBS)
- And I will also give thee into their hand, and they shall throw down thy eminent place, and shall break down thy high places: they shall strip thee also of thy clothes, and shall take thy fair jewels, and leave thee naked and bare.
- Young's Literal Translation (YLT)
- And I have given thee into their hand, And they have thrown down thine arch, And they have broken down thy high places, And they have stript thee of thy garments, And they have taken thy beauteous vessels, And they have left thee naked and bare.
Read in context
- 37ಇಗೋ, ನೀನು ಆನಂದ ಪಟ್ಟವರೊಂದಿಗೆ ಪ್ರೀತಿ ಮಾಡಿದವರೆ ಲ್ಲರನ್ನೂ ಹಗೆಮಾಡಿದವರೆಲ್ಲರನ್ನೂ ಸಹ ಕೂಡಿಸು ವೆನು; ನಾನು ಅವರನ್ನು ನಿನಗೆ ವಿರುದ್ಧವಾಗಿ ಸುತ್ತಲೂ ಕೂಡಿಸಿ ಅವರಿಗೆ ನಿನ್ನ ಬೆತ್ತಲೆಯನ್ನು ಪ್ರಕಟಪಡಿಸು ವೆನು. ಆಗ ಅವರು ನಿನ್ನ ಬೆತ್ತಲೆಯನ್ನು ನೋಡುವರು.
- 38ದಾಂಪತ್ಯವನ್ನು ಮುರಿದು ರಕ್ತ ಸುರಿಸುವಂಥ ಹೆಂಗಸರಿಗೆ ವಿಧಿಸುವಂಥ ತಕ್ಕ ದಂಡನೆಗಳನ್ನು ನಿನಗೂ ವಿಧಿಸಿ, ಕೋಪೋದ್ರೇಕದಿಂದಲೂ ರೋಷಾವೇಶ ದಿಂದಲೂ ನಿನಗೆ ರಕ್ತವನ್ನು ಸುರಿಸುವೆನು.
- 39ಇದಲ್ಲದೆ ನಿನ್ನನ್ನು ಅವರ ಕೈಗಳಲ್ಲಿ ಒಪ್ಪಿಸುವೆನು. ಅವರು ನಿನ್ನ ಎತ್ತರ ಸ್ಥಳಗಳನ್ನೆಲ್ಲಾ ಕೆಡವಿಹಾಕಿ ನಿನ್ನ ಉನ್ನತ ಸ್ಥಾನ ಗಳನ್ನು ಒಡೆದು ಬಿಡುವರು; ಅವರು ನಿನ್ನ ವಸ್ತ್ರಗಳನ್ನು ತೆಗೆದುಹಾಕಿ ನಿನ್ನ ಸೌಂದರ್ಯವುಳ್ಳ ಆಭರಣಗಳನ್ನು ಕಸಿದುಕೊಂಡು ನಿನ್ನನ್ನು ಬರೀ ಬೆತ್ತಲೆಯನ್ನಾಗಿ ಮಾಡಿ ಬಿಟ್ಟು ಹೋಗುವರು.
- 40ಅವರು ನಿನಗೆ ವಿರುದ್ಧವಾಗಿ ಒಂದು ಕೂಟವನ್ನು ಕರಕೊಂಡು ಬಂದು ಕಲ್ಲುಗಳನ್ನು ನಿನ್ನ ಮೇಲೆ ಎಸೆದು, ತಮ್ಮ ಕತ್ತಿಗಳಿಂದ ನಿನ್ನನ್ನು ತಿವಿಯುವರು.
- 41ಅವರು ನಿನ್ನ ಮನೆಗಳನ್ನು ಸುಟ್ಟು ಬಹಳ ಸ್ತ್ರೀಯರ ಕಣ್ಣುಗಳ ಮುಂದೆ ನಿನಗೆ ನ್ಯಾಯ ತೀರಿಸುವರು; ನೀನು ವ್ಯಭಿಚಾರ ಮಾಡುವದನ್ನು ನಾನು ನಿಲ್ಲಿಸುವೆನು; ಆಗ ನೀನು ಕೂಲಿ ಸಹ ಕೊಡುವದನ್ನು ನಿಲ್ಲಿಸುವೆನು;
Cross references
- Hosea 2:3 ಹೋಶೇಯ 2:3ಇಲ್ಲದಿದ್ದರೆ ನಾನು ಅವಳನ್ನು ಬೆತ್ತಲೆಯಾಗಿ ಮಾಡಿ ಅವಳು ಹುಟ್ಟಿದ ದಿನದಲ್ಲಾದ ಹಾಗೆ ನಿಲ್ಲಿಸಿ ಅವಳನ್ನು ಅರಣ್ಯ ದಂತೆ ಮಾಡುವೆನು. ಅವಳನ್ನು ಒಣಗಿದ ಭೂಮಿ ಯಂತೆ ಇಟ್ಟು ದಾಹದಿಂದ ಅವಳನ್ನು ಕೊಲ್ಲುತ್ತೇನೆ.
- Ezekiel 23:26 ಯೆಹೆಜ್ಕೇಲನು 23:26ಇದಲ್ಲದೆ ನಿನ್ನ ವಸ್ತ್ರಗಳನ್ನು ತೆಗೆದುಹಾಕಿ, ನಿನ್ನ ಸೌಂದರ್ಯದ ಒಡವೆಗಳನ್ನು ಕಸಿದುಕೊಳ್ಳುವರು;
- Ezekiel 16:24–25 ಯೆಹೆಜ್ಕೇಲನು 16:24–25ನೀನು ಪ್ರತಿಯೊಂದು ಬೀದಿಯಲ್ಲಿಯೂ ಉನ್ನತ ಸ್ಥಳಗಳನ್ನು ಕಟ್ಟಿ ನಿನಗೆ ಉತ್ತಮವಾದ ಸ್ಥಳಗ ಳನ್ನು ಮಾಡಿಕೊಂಡಿರುವಿ. ಪ್ರತಿಯೊಂದು ಕಡೆ ಮೂಲೆ ಮೂಲೆಗೂ ಉನ್ನತ ಸ್ಥಳವನ್ನು ಕಟ್ಟಿ ನಿನ್ನ ಸೌಂದರ್ಯವನ್ನು ದುರುಪಯೋಗಪಡಿಸಿಕೊಂಡು ಹಾದು ಹೋಗುವ ಪ್ರತಿಯೊಬ್ಬರಿಗೂ ನಿನ್ನ ಕಾಲು ಗಳನ್ನು ಅಗಲಿಸಿದಿ; ನಿನ್ನ ವ್ಯಭಿಚಾರವನ್ನು ವೃದ್ಧಿಸಿದಿ.
- Isaiah 27:9 ಯೆಶಾಯ 27:9ಹೀಗಿರಲು (ಈ ಕಾರಣದಿಂದ) ಯಾಕೋಬು ಯಜ್ಞವೇದಿಯ ಕಲ್ಲುಗಳನ್ನೆಲ್ಲಾ ಒಡೆದುಹೋದ ಸುಣ್ಣದ ಕಲ್ಲುಗಳಂತೆ ಮಾಡುವಾಗ ವಿಗ್ರಹಸ್ತಂಭಗಳೂ ಸೂರ್ಯಸ್ತಂಭ ಗಳೂ ಏಳುವದಿಲ್ಲ ಮತ್ತು ಅದರ ಪಾಪಪರಿಹಾರಕ್ಕೆ ಗುರುತಾದ ಪೂರ್ಣಫಲವು ಇದೇ.
- Ezekiel 16:10–20 ಯೆಹೆಜ್ಕೇಲನು 16:10–20ಇದಲ್ಲದೆ ನಾನು ಕಸೂ ತಿಯ ಬಟ್ಟೆಯನ್ನು ನಿನಗೆ ತೊಡಿಸಿ, ಕಡಲ ಪ್ರಾಣಿಯ ಜೋಡುಗಳನ್ನು ಕೊಟ್ಟೆನು, ನಯವಾದ ನಾರುಮಡಿ ಯನ್ನು ನಿನಗೆ ಉಡಿಸಿದೆನು, ರೇಷ್ಮೆಯ ಹೊದಿಕೆಯನ್ನು ನಿನಗೆ ಹೊದಿಸಿದೆನು. ನಾನು ಆಭರಣಗಳಿಂದಲೂ ನಿನ್ನನ್ನು ಅಲಂಕರಿಸಿದೆನು; ನಾನು ನಿನ್ನ ಕೈಗಳಿಗೆ ಕಡಗ ಗಳನ್ನು, ನಿನ್ನ ಕೊರಳಿಗೆ ಸರವನ್ನು ಹಾಕಿದೆನು. ನಿನ್ನ ಹಣೆಯ ಮೇಲೆ ರತ್ನಾಭರಣವನ್ನೂ ನಿನ್ನ ಕಿವಿಗಳಲ್ಲಿ ವಾಲೆಗಳನ್ನೂ ನಿನ್ನ ತಲೆಯ ಮೇಲೆ ಶೃಂಗಾರ ಕಿರೀಟವನ್ನೂ ಇಟ್ಟೆನು. ನಿನ್ನ ಒಡವೆಗಳು ಬೆಳ್ಳಿ ಬಂಗಾರಗಳು, ನಿನ್ನ ಉಡುಪು ನಯವಾದ ನಾರುಮಡಿ, ರೇಷ್ಮೆಯ ಹೊದಿಕೆ, ಕಸೂತಿಯ ಬಟ್ಟೆ; ನಯವಾದ ಹಿಟ್ಟನ್ನೂ ಜೇನನ್ನೂ ಎಣ್ಣೆಯನ್ನೂ ತಿನ್ನುತ್ತಿದ್ದೆ, ನಿನ್ನ ಲಾವಣ್ಯವು ಅತಿ ಮನೋಹರವಾಗಿ ವೃದ್ಧಿಗೊಂಡು ನೀನು ರಾಣಿಯಾದೆ. ಇದಲ್ಲದೆ, ನಿನ್ನ ಸೌಂದ ರ್ಯದಿಂದ ನಿನ್ನ ಕೀರ್ತಿಯು ಅನ್ಯಜನಾಂಗಗಳಲ್ಲಿ ಹಬ್ಬಿತು; ಯಾಕಂದರೆ ನಾನು ನಿನ್ನ ಮೇಲೆ ಇಟ್ಟ ಸಂಪೂರ್ಣ ವೈಭವದಿಂದಲೇ ಎಂದು ದೇವರಾದ ಕರ್ತನು ಹೇಳುತ್ತಾನೆ. ಆದರೆ ನೀನು ನಿನ್ನ ಸೌಂದರ್ಯದಲ್ಲಿ ಭರವಸ ವಿಟ್ಟು ನಿನ್ನ ಕೀರ್ತಿಯ ನಿಮಿತ್ತವಾಗಿ ಸೂಳೆತನ ಮಾಡಿದೆ; ಹಾದುಹೋಗುವ ಪ್ರತಿಯೊಬ್ಬನ ಸಂಗಡ ಮಿತಿವಿಾರಿ ಹಾದರತನ ಮಾಡಿದೆ; ಒಬ್ಬೊಬ್ಬನಿಗೂ ಒಳಗಾದೆ. ನಿನ್ನ ವಸ್ತ್ರಗಳನ್ನು ತೆಗೆದುಕೊಂಡು ಚಿತ್ರ ವಿಚಿತ್ರ ಮಾಡಿ ಅಲಂಕರಿಸಿಕೊಂಡು ಪೂಜಾಸ್ಥಳದಲ್ಲಿ ವ್ಯಭಿಚಾರ ಮಾಡಿದೆ, ಇದು ನಡೆಯತಕ್ಕದ್ದಲ್ಲ ಮತ್ತು ನಡೆಯಬಾರದಂಥ ಕೆಲಸವಾಗಿದೆ. ಇದಲ್ಲದೆ ನಾನು ನಿನಗೆ ಬೆಳ್ಳಿ ಬಂಗಾರದಿಂದ ಮಾಡಿಸಿಕೊಟ್ಟಿದ್ದ ನಿನ್ನ ಅಂದವಾದ ಆಭರಣಗಳನ್ನು ತೆಗೆದು ಅವುಗಳಿಂದ ಪುರುಷ ರೂಪಗಳನ್ನು ಮಾಡಿಕೊಂಡು ಅದರ ಸಂಗಡ ವ್ಯಭಿಚಾರ ಮಾಡಿದಿ. ನಿನ್ನ ಕಸೂತಿಯ ಬಟ್ಟೆಗಳನ್ನು ತೆಗೆದು ಅವರಿಗೆ ಹೊದಿಸಿ ನನ್ನ ಎಣ್ಣೆಯನ್ನೂ ಧೂಪ ವನ್ನೂ ಅವರ ಮುಂದೆ ಇಟ್ಟೆ. ನಾನು ನಿನಗೆ ನನ್ನ ಆಹಾರವನ್ನೂ ನಿನಗೆ ನಯವಾದ ಹಿಟ್ಟನ್ನೂ ಎಣ್ಣೆ ಮತ್ತು ಜೇನುಗಳನ್ನೂ ಸುವಾಸನೆಗಾಗಿ ಕೊಟ್ಟೆ. ಆದರೆ ನೀನು ಅವುಗಳನ್ನು ಅವರ ಮುಂದೆ ಇಟ್ಟೆ ಎಂದು ದೇವರಾದ ಕರ್ತನು ಹೇಳುತ್ತಾನೆ. ಇದಾದ ಮೇಲೆ ನನಗೆ ಹುಟ್ಟಿದ್ದ ನನ್ನ ಕುಮಾರರನ್ನೂ ಕುಮಾರ್ತೆ ಯರನ್ನೂ ಅವರ ಆಹಾರಕ್ಕಾಗಿ ಅರ್ಪಿಸಿದಿ. ಈ ನಿನ್ನ ವ್ಯಭಿಚಾರ ಸಾಮಾನ್ಯವಾದದ್ದಲ್ಲ,
- Ezekiel 23:29 ಯೆಹೆಜ್ಕೇಲನು 23:29ಅವರು ನಿನ್ನ ವಿಷಯದಲ್ಲಿ ಹಗೆಯವರಾಗಿ ನಡೆಯುವರು; ನಿನ್ನ ಕಷ್ಟಾರ್ಜಿತವನ್ನು ತೆಗೆದುಕೊಂಡು ನಿನ್ನನ್ನು ಬೆತ್ತಲೆಯಾಗಿಯೂ ಬರಿದಾಗಿಯೂ ಮಾಡಿ ಬಿಡುವರು. ಆಗ ನಿನ್ನ ವ್ಯಭಿಚಾರವೂ ದುಷ್ಕರ್ಮವೂ ಜಾರತ್ವವೂ ಪ್ರಕಟವಾಗುವದು.
- Ezekiel 16:31 ಯೆಹೆಜ್ಕೇಲನು 16:31ಪ್ರತಿಯೊಂದು ಬೀದಿಯ ಕೊನೆಯಲ್ಲಿಯೂ ಗದ್ದುಗೆಯನ್ನು ಕಟ್ಟಿ ಪ್ರತಿಯೊಂದು ಹಾದಿಯಲ್ಲಿಯೂ ಉನ್ನತಸ್ಥಾನವನ್ನು ಮಾಡಿಕೊಂಡು ಕೂಲಿಯನ್ನು ಉದಾಸೀನ ಮಾಡುವ ವ್ಯಭಿಚಾರಿಣಿಯು ನೀನಲ್ಲ;
- Hosea 2:9–13 ಹೋಶೇಯ 2:9–13ಆದ್ದರಿಂದ ನಾನು ತಿರುಗಿ ಕೊಂಡು ನನ್ನ ಧಾನ್ಯವನ್ನು ಅದರ ಕಾಲದಲ್ಲಿಯೂ ನನ್ನ ದ್ರಾಕ್ಷಾರಸವನ್ನು ಅದರ ಸಮಯದಲ್ಲಿಯೂ ತೆಗೆದಹಾಗೆ ಅವಳ ಬೆತ್ತಲೆತನವನ್ನು ಮುಚ್ಚುವದ ಕ್ಕಿದ್ದ ನನ್ನ ಉಣ್ಣೆಯನ್ನೂ ನನ್ನ ನಾರು ಬಟ್ಟೆಯನ್ನೂ ತೆಗೆದುಕೊಳ್ಳುವೆನು. ಈಗ ಅವಳ ತುಚ್ಛತನವನ್ನು ಅವಳ ಮಿಂಡರ ಕಣ್ಣುಗಳ ಮುಂದೆ ಬಯಲು ಪಡಿಸುವೆನು; ನನ್ನ ಕೈಯೊಳಗಿಂದ ಅವಳನ್ನು ಯಾರೂ ಬಿಡಿಸರು. ನಾನು ಅವಳ ಉಲ್ಲಾಸವನ್ನೆಲ್ಲಾ ಅಂದರೆ ಅವಳ ಹಬ್ಬ ಅವಳ ಅಮಾವಾಸ್ಯೆ ಅವಳ ಸಬ್ಬತ್ತು ಅವಳ ಪರಿಶುದ್ಧ ಹಬ್ಬಗಳನ್ನೆಲ್ಲಾ ನಿಲ್ಲಿಸಿಬಿಡುವೆನು. ಮತ್ತು--ನನ್ನ ಮಿಂಡರಿಂದಾದ ಪ್ರತಿಫಲ ಇವುಗಳೇ ಎಂದು ಅವಳು ಹೇಳಿದ ಅವಳ ದ್ರಾಕ್ಷೇ ಬಳ್ಳಿಗಳನ್ನು ಅವಳ ಅಂಜೂರದ ಮರಗಳನ್ನು ನಾನು ಹಾಳುಮಾಡಿ ಅವುಗಳನ್ನು ಕಾಡನ್ನಾಗಿ ಮಾಡುವೆನು; ಅಡವಿಯ ಮೃಗಗಳು ಅವುಗಳನ್ನು ತಿನ್ನುವವು. ತರುವಾಯ ಅವಳು ನನ್ನನ್ನು ಮರೆತು ಕಿವಿಯೋಲೆ ಮೊದಲಾದ ಒಡವೆಗಳಿಂದ ಸಿಂಗರಿಸಿಕೊಂಡು, ಮಿಂಡರ ಹಿಂದೆ ಹೋಗಿ ಬಾಳ್ ದೇವತೆಗಳ ದಿವಸಗಳಲ್ಲಿ ಧೂಪ ಸುಟ್ಟಿದ್ದಕ್ಕೆ ನಾನು ಅವಳನ್ನು ದಂಡಿಸುವೆನು ಎಂದು ಕರ್ತನು ಹೇಳುತ್ತಾನೆ.
- Isaiah 3:16–24 ಯೆಶಾಯ 3:16–24ಇದಲ್ಲದೆ ಕರ್ತನು ಇಂತೆನ್ನುತ್ತಾನೆ --ಚೀಯೋನ್ ಕುಮಾರ್ತೆಯರು ಅಹಂಕಾರಿಗಳಾಗಿದ್ದು ಕತ್ತು ತೂಗುತ್ತಾ ಕಣ್ಣುಗಳನ್ನು ತಿರುಗಿಸುತ್ತಾ ನಾಜೂಕಿ ನಿಂದ ಹೆಜ್ಜೆಇಡುತ್ತಾ ಕಾಲುಗೆಜ್ಜೆ ಜಣಜಣಿಸುತ್ತಾ ನಡೆ ಯುವವರಾಗಿರುವದರಿಂದ, ಚೀಯೋನ್ ಕುಮಾ ರ್ತೆಯರ ತಲೆಯ ಮೇಲ್ಭಾಗವನ್ನು ಕಜ್ಜಿಯಿಂದ ಕರ್ತನು ಹೊಡೆಯುವನು, ಅವರ ಗುಪ್ತಾಂಗಗಳನ್ನು ಬೈಲುಪಡಿಸುವನು. ಆ ದಿನದಲ್ಲಿ ಕರ್ತನು ಅವರ ಅಂದುಗೆ, ತುರುಬುಬಲೆ, ಅರ್ಧಚಂದ್ರ, ಸರ, ಬಳೆ, ಮುಂಡಾಸ, ಟೊಪ್ಪಿಗೆ, ಕಾಲಸರಪಣಿ, ಶಿರೋ ವೇಷ್ಟನ, ಗಂಧದ ಡಬ್ಬಿ, ಓಲೆ, ಉಂಗುರ, ಮೂಗುತಿ, ಬದಲಾಯಿಸತಕ್ಕ ಬಟ್ಟೆ, ಶಾಲು, ತಲೆಕೌದಿ, ಅಲಂ ಕಾರದ ಪಿನ್ನುಗಳು, ಕೈಗನ್ನಡಿ, ನಾರು ಮಡಿ, ಮೇಲ್ಹೊ ದಿಕೆ ಮುಸುಕು ಈ ಎಲ್ಲಾ ಭೂಷಣಗಳನ್ನು ತೆಗೆದು ಹಾಕುವನು. ಆಗ ಸುವಾಸನೆಯ ಬದಲಾಗಿ ದುರ್ವಾಸನೆ, ಡಾಬಿಗೆ ಬದಲಾಗಿ ಹಗ್ಗ; ಜಡೆಯ ಬದಲಾಗಿ ಬೋಳುತಲೆ; ನಡುವಿನ ಶಲ್ಯಕ್ಕೆ ಪ್ರತಿಯಾಗಿ ಗೋಣೀತಟ್ಟು; ಸೌಂದರ್ಯಕ್ಕೆ ಬದಲಾಗಿ ಬರೆ, ಇವು ಆಗುವವು;
- Ezekiel 7:22–24 ಯೆಹೆಜ್ಕೇಲನು 7:22–24ನನ್ನ ಮುಖವನ್ನು ನಾನು ಅವರ ಕಡೆಯಿಂದ ತಿರುಗಿಸುವೆನು; ನನ್ನ ರಹಸ್ಯ ಸ್ಥಳವನ್ನು ಅಪವಿತ್ರಪಡಿಸುವರು. ದರೋಡೆ ಕೋರರು ಅದರಲ್ಲಿ ಸೇರಿ ಅದನ್ನು ಅಪವಿತ್ರ ಪಡಿಸುವರು. ಒಂದು ಸರಪಳಿಯನ್ನು ಮಾಡು; ಯಾಕಂದರೆ ದೇಶವು ರಕ್ತಾಪರಾಧದಿಂದ ತುಂಬಿದೆ ಮತ್ತು ನಗರವು ಹಿಂಸೆಯಿಂದ ತುಂಬಿದೆ. ಆದ ಕಾರಣ ನಾನು ಅನ್ಯಜನಾಂಗಗಳಲ್ಲಿ ಕೆಟ್ಟವರನ್ನು ತರುತ್ತೇನೆ ಮತ್ತು ಅವರು ಅವರ ಮನೆಗಳನ್ನು ವಶ ಪಡಿಸಿಕೊಳ್ಳುವರು; ನಾನು ಬಲಿಷ್ಠರ ಅಟ್ಟಹಾಸವನ್ನು ನಿಲ್ಲಿಸುತ್ತೇನೆ ಮತ್ತು ಅವರ ಪರಿಶುದ್ಧ ಸ್ಥಳಗಳು ಅಪವಿತ್ರವಾಗುವವು.
Original words (Hebrew)
- give · H5414נָתַן nâthan
- hand · H3027יָד yâd
- down · H2040הָרַס hâraç
- place · H1354גַב gab
- down · H5422נָתַץ nâthats
- places · H7413רָמָה râmâh
- strip · H6584פָּשַׁט pâshaṭ
- clothes · H899בֶּגֶד beged
- take · H3947לָקַח lâqach
- fair · H8597תִּפְאָרָה tiphʼârâh
- jewels · H3627כְּלִי kᵉlîy
- leave · H3240יָנַח yânach
- naked · H5903עֵירֹם ʻêyrôm
- bare · H6181עֶרְיָה ʻeryâh