Ezekiel · chapter 16 · verse 40
Ezekiel 16:40 in Kannada
ಅವರು ನಿನಗೆ ವಿರುದ್ಧವಾಗಿ ಒಂದು ಕೂಟವನ್ನು ಕರಕೊಂಡು ಬಂದು ಕಲ್ಲುಗಳನ್ನು ನಿನ್ನ ಮೇಲೆ ಎಸೆದು, ತಮ್ಮ ಕತ್ತಿಗಳಿಂದ ನಿನ್ನನ್ನು ತಿವಿಯುವರು.
Avaru ninage viruddhavaagi ondu kootavannu karakondu bandu kallugalannu ninna mele esedu, tamma kattigalinda ninnannu tiviyuvaru.
Ezekiel 16:40 in English
- King James Version (KJV)
- They shall also bring up a company against thee, and they shall stone thee with stones, and thrust thee through with their swords.
- World English Bible (WEB)
- They will also bring up a company against you, and they will stone you with stones, and thrust you through with their swords.
- American Standard Version (ASV)
- They shall also bring up a company against thee, and they shall stone thee with stones, and thrust thee through with their swords.
- Bible in Basic English (BBE)
- And they will get together a meeting against you, stoning you with stones and wounding you with their swords.
- Darby Translation (DBY)
- And they shall bring up an assemblage against thee, and they shall stone thee with stones, and thrust thee through with their swords.
- Webster's Bible (WBS)
- They shall also bring up a company against thee, and they shall stone thee with stones, and thrust thee through with their swords.
- Young's Literal Translation (YLT)
- And have caused an assembly to come up against thee, And stoned thee with stones, And thrust thee through with their swords,
Read in context
- 38ದಾಂಪತ್ಯವನ್ನು ಮುರಿದು ರಕ್ತ ಸುರಿಸುವಂಥ ಹೆಂಗಸರಿಗೆ ವಿಧಿಸುವಂಥ ತಕ್ಕ ದಂಡನೆಗಳನ್ನು ನಿನಗೂ ವಿಧಿಸಿ, ಕೋಪೋದ್ರೇಕದಿಂದಲೂ ರೋಷಾವೇಶ ದಿಂದಲೂ ನಿನಗೆ ರಕ್ತವನ್ನು ಸುರಿಸುವೆನು.
- 39ಇದಲ್ಲದೆ ನಿನ್ನನ್ನು ಅವರ ಕೈಗಳಲ್ಲಿ ಒಪ್ಪಿಸುವೆನು. ಅವರು ನಿನ್ನ ಎತ್ತರ ಸ್ಥಳಗಳನ್ನೆಲ್ಲಾ ಕೆಡವಿಹಾಕಿ ನಿನ್ನ ಉನ್ನತ ಸ್ಥಾನ ಗಳನ್ನು ಒಡೆದು ಬಿಡುವರು; ಅವರು ನಿನ್ನ ವಸ್ತ್ರಗಳನ್ನು ತೆಗೆದುಹಾಕಿ ನಿನ್ನ ಸೌಂದರ್ಯವುಳ್ಳ ಆಭರಣಗಳನ್ನು ಕಸಿದುಕೊಂಡು ನಿನ್ನನ್ನು ಬರೀ ಬೆತ್ತಲೆಯನ್ನಾಗಿ ಮಾಡಿ ಬಿಟ್ಟು ಹೋಗುವರು.
- 40ಅವರು ನಿನಗೆ ವಿರುದ್ಧವಾಗಿ ಒಂದು ಕೂಟವನ್ನು ಕರಕೊಂಡು ಬಂದು ಕಲ್ಲುಗಳನ್ನು ನಿನ್ನ ಮೇಲೆ ಎಸೆದು, ತಮ್ಮ ಕತ್ತಿಗಳಿಂದ ನಿನ್ನನ್ನು ತಿವಿಯುವರು.
- 41ಅವರು ನಿನ್ನ ಮನೆಗಳನ್ನು ಸುಟ್ಟು ಬಹಳ ಸ್ತ್ರೀಯರ ಕಣ್ಣುಗಳ ಮುಂದೆ ನಿನಗೆ ನ್ಯಾಯ ತೀರಿಸುವರು; ನೀನು ವ್ಯಭಿಚಾರ ಮಾಡುವದನ್ನು ನಾನು ನಿಲ್ಲಿಸುವೆನು; ಆಗ ನೀನು ಕೂಲಿ ಸಹ ಕೊಡುವದನ್ನು ನಿಲ್ಲಿಸುವೆನು;
- 42ಈ ರೀತಿ ನನ್ನ ಸಿಟ್ಟನ್ನು ನಿನ್ನಲ್ಲಿ ವಿಶ್ರಾಂತಿ ಪಡಿಸುತ್ತೇನೆ, ನನ್ನ ರೋಷವನ್ನು ನಿನ್ನ ಕಡೆಯಿಂದ ತೊಲಗಿಸುತ್ತೇನೆ; ಶಾಂತನಾಗಿ ನಿನ್ನ ಮೇಲೆ ಕೋಪ ಗೊಳ್ಳುವದಿಲ್ಲ.
Cross references
- Ezekiel 23:47 ಯೆಹೆಜ್ಕೇಲನು 23:47ಆ ಸಂಘದವರು ಅವರ ಮೇಲೆ ಕಲ್ಲೆಸೆದು ತಮ್ಮ ಕತ್ತಿಗಳಿಂದ ಕೊಯ್ದು ಅವರ ಕುಮಾರರನ್ನೂ ಕುಮಾರ್ತೆಯರನ್ನೂ ಕೊಂದು ಹಾಕಿ ಬೆಂಕಿಯಿಂದ ಅವರ ಮನೆಗಳನ್ನೆಲ್ಲಾ ಸುಟ್ಟು ಬಿಡುವರು.
- Habakkuk 1:6–10 ಹಬಕ್ಕೂಕ 1:6–10ಇಗೋ, ನಾನು ಕಸ್ದೀಯರನ್ನು ಎಬ್ಬಿಸುತ್ತೇನೆ; ಅದು ಕಹಿಯಾದ ತೀವ್ರವಾದ ಜನಾಂಗವು; ತಮ್ಮದಲ್ಲದ ನಿವಾಸಗಳನ್ನು ವಶಮಾಡಿ ಕೊಳ್ಳುವದಕ್ಕೆ ವಿಶಾಲ ವಾದ ದೇಶದಲ್ಲಿ ಹಾದುಹೋಗುವದು. ಅವರು ಭಯಂಕರವಾದವರು ಮತ್ತು ಕ್ರೂರವಾದವರು; ಅವರ ನ್ಯಾಯವೂ ಘನತೆಯೂ ಅವರಿಂದಲೇ ಹೊರಡುತ್ತವೆ. ಅವರ ಕುದುರೆಗಳು ಸಹ ಚಿರತೆಗಳಿಗಿಂತ ವೇಗ ವಾಗಿಯೂ ಸಂಜೆಯ ತೋಳಗಳಿಗಿಂತ ಚುರುಕಾ ಗಿಯೂ ಅವೆ; ಅವರ ಕುದುರೆ ಸವಾರರು ತಾವೇ ಹರಡಿಕೊಳ್ಳುವರು; ಅವರ ಸವಾರರು ದೂರದಿಂದ ಬರುವರು; ತಿನ್ನುವದಕ್ಕೆ ತ್ವರೆಪಡುವ ಹದ್ದಿನಂತೆ ಹಾರಿಬರುವರು. ಅವರೆಲ್ಲರು ಹಿಂಸಿಸುವದಕ್ಕೆ ಬರುವರು; ಅವರ ಮುಖಗಳು ಮೂಡಣ ಗಾಳಿ ಯಂತೆಯೇ ತಿಂದುಬಿಡುವವು; ಸೆರೆಯವರನ್ನು ಮರ ಳಿನ ಹಾಗೆ ಕೂಡಿಸುವರು. ಅವರು ಅರಸರನ್ನು ಧಿಕ್ಕರಿಸುವರು; ಪ್ರಧಾನರು ಅವರಿಗೆ ಪರಿಹಾಸ್ಯ ಮಾಡುವರು. ಕೋಟೆಗಳಿಗೆಲ್ಲಾ ಕುಚೋದ್ಯ ಮಾಡು ವರು. ಮಣ್ಣನ್ನು ಕುಪ್ಪೆಮಾಡಿ ಅದನ್ನು ಹಿಡಿಯುವರು.
- Jeremiah 25:9 ಯೆರೆಮೀಯ 25:9ನೀವು ನನ್ನ ಮಾತುಗಳನ್ನು ಕೇಳದ ಕಾರಣ ಇಗೋ, ಕರ್ತನು ಹೇಳುವದೇನಂದರೆ--ನಾನು ಕಳು ಹಿಸಿ ಉತ್ತರ ದಿಕ್ಕಿನ ಗೋತ್ರಗಳೆಲ್ಲವನ್ನೂ ನನ್ನ ಸೇವಕ ನಾದ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನನ್ನೂ ತಕ್ಕೊಂಡು, ಈ ದೇಶಕ್ಕೆ ವಿರೋಧವಾಗಿಯೂ ಅದರ ನಿವಾಸಿಗಳಿಗೆ ವಿರೋಧವಾಗಿಯೂ ಸುತ್ತಲಿರುವ ಈ ಎಲ್ಲಾ ಜನಾಂಗಗಳಿಗೆ ವಿರೋಧವಾಗಿಯೂ ಕರೆಯಿಸಿ ಅವರನ್ನು ಸಂಪೂರ್ಣ ನಾಶಮಾಡಿ ಅವರನ್ನು ವಿಸ್ಮ ಯಕ್ಕೂ ಸಿಳ್ಳಿಡುವಿಕೆಗೂ ಗುರಿಯಾಗಿಯೂ ನಿತ್ಯ ಹಾಳಾಗಿಯೂ ಮಾಡುತ್ತೇನೆ.
- Ezekiel 23:10 ಯೆಹೆಜ್ಕೇಲನು 23:10ಅವರು ಅವಳ ಬೆತ್ತಲೆತನವನ್ನು ಬಯಲು ಪಡಿಸಿದರು ಅವಳ ಪುತ್ರರನ್ನೂ ಹೆಣ್ಣು ಮಕ್ಕಳನ್ನೂ ತೆಗೆದುಕೊಂಡು ಖಡ್ಗದಿಂದ ಕೊಂದುಹಾಕಿದರು; ಸ್ತ್ರೀಯರಲ್ಲಿ (ಕೆಟ್ಟತನಕ್ಕೆ) ಹೆಸರುಗೊಂಡಳು; ಅವಳಲ್ಲಿ ನ್ಯಾಯ ತೀರ್ಪುಮಾಡಿದರು.
- Ezekiel 24:21 ಯೆಹೆಜ್ಕೇಲನು 24:21ಇಸ್ರಾಯೇಲ್ಯರ ಮನೆ ತನದವರೊಂದಿಗೆ ಮಾತನಾಡಿ ದೇವರಾದ ಕರ್ತನು ಹೀಗೆ ಹೇಳುತ್ತಾನೆಂದು ಹೇಳು--ಇಗೋ, ನಾನು ನನ್ನ ಪರಿಶುದ್ಧ ಸ್ಥಳವನ್ನೂ ನಿಮ್ಮ ಬಲದ ಶ್ರೇಷ್ಠತ್ವವನ್ನೂ ನಿಮ್ಮ ನೇತ್ರಾನಂದಕರವಾದದ್ದನ್ನೂ ನಿಮ್ಮ ಮನಸ್ಸು ಅಭಿಲಾಷಿಸುವದನ್ನೂ ನಾನು ಅಪವಿತ್ರಪಡಿಸುವೆನು; ನೀವು ಬಿಟ್ಟಿರುವ ನಿಮ್ಮ ಕುಮಾರರೂ ಕುಮಾರ್ತೆಯರೂ ಕತ್ತಿಯಿಂದ ಬೀಳುವರು.
- John 8:5–7 ಯೋಹಾನನು 8:5–7ಇಂಥವರು ಕಲ್ಲೆಸೆಯಲ್ಪಡಬೇಕೆಂದು ಮೋಶೆಯು ನ್ಯಾಯಪ್ರಮಾಣದಲ್ಲಿ ನಮಗೆ ಅಪ್ಪಣೆ ಕೊಟ್ಟಿದ್ದಾನೆ; ಆದರೆ ನೀನು ಏನು ಹೇಳುತ್ತೀ ಎಂದು ಕೇಳಿದರು. ಅವರು ಆತನನ್ನು ಶೋಧಿಸುವವರಾಗಿ ಆತನ ಮೇಲೆ ತಪ್ಪು ಹೊರಿಸಬೇಕೆಂದು ಹೀಗೆ ಹೇಳಿ ದರು. ಆದರೆ ಯೇಸು ಅವರ ಮಾತುಗಳನ್ನು ಕೇಳದವ ನಂತೆ ಬೊಗ್ಗಿಕೊಂಡು ತನ್ನ ಬೆರಳಿನಿಂದ ನೆಲದ ಮೇಲೆ ಬರೆದನು. ಆದರೆ ಅವರು ಬಿಡದೆ ಆತನನ್ನು ಕೇಳುತ್ತಿರಲು ಆತನು ಮೇಲಕ್ಕೆ ನೋಡಿ--ನಿಮ್ಮೊಳಗೆ ಯಾವನು ಪಾಪವಿಲ್ಲದವನಾಗಿದ್ದಾನೋ ಅವನೇ ಮೊದಲು ಆಕೆಯ ಮೇಲೆ ಕಲ್ಲನ್ನು ಹಾಕಲಿ ಎಂದು ಅವರಿಗೆ ಹೇಳಿದನು.