Ezekiel · chapter 16 · verse 46
Ezekiel 16:46 in Kannada
ನಿನ್ನ ಎಡಗಡೆಯಲ್ಲಿ ಕುಮಾರ್ತೆಯರೊಂದಿಗೆ ವಾಸಿಸುವ ಸಮಾರ್ಯವೇ ನಿನ್ನ ಅಕ್ಕ; ಬಲಗಡೆಯಲ್ಲಿ ಕುಮಾರ್ತೆಯರೊಂದಿಗೆ ವಾಸಿಸುವ ಸೊದೋಮ್ ನಿನ್ನ ತಂಗಿ.
Ninna edagadeyalli kumaarteyarondige vaasisuva samaaryave ninna akka; balagadeyalli kumaarteyarondige vaasisuva sodom ninna tangi.
Ezekiel 16:46 in English
- King James Version (KJV)
- And thine elder sister [is] Samaria, she and her daughters that dwell at thy left hand: and thy younger sister, that dwelleth at thy right hand, [is] Sodom and her daughters.
- World English Bible (WEB)
- Your elder sister is Samaria, who dwells at your left hand, she and her daughters; and your younger sister, who dwells at your right hand, is Sodom with her daughters.
- American Standard Version (ASV)
- And thine elder sister is Samaria, that dwelleth at thy left hand, she and her daughters; and thy younger sister, that dwelleth at thy right hand, is Sodom and her daughters.
- Bible in Basic English (BBE)
- Your older sister is Samaria, living at your left hand, she and her daughters: and your younger sister, living at your right hand, is Sodom and her daughters.
- Darby Translation (DBY)
- And thine elder sister is Samaria that dwelleth at thy left hand, she and her daughters; and thy younger sister, that dwelleth at thy right hand, is Sodom and her daughters.
- Webster's Bible (WBS)
- And thy elder sister [is] Samaria, she and her daughters that dwell at thy left hand: and thy younger sister, that dwelleth at thy right hand, [is] Sodom and her daughters.
- Young's Literal Translation (YLT)
- And thine elder sister [is] Samaria, she and her daughters, Who is dwelling at thy left hand, And thy younger sister, who is dwelling on thy right hand, [is] Sodom and her daughters.
Read in context
- 44ಇಗೋ, ಗಾದೆ ಹೇಳುವವರೆಲ್ಲರೂ--ತಾಯಿಯಂತೆ ಮಗಳು ಎಂಬ ಗಾದೆಯನ್ನು ನಿನಗೆ ವಿರುದ್ಧವಾಗಿ ಹೇಳುವರು.
- 45ಗಂಡನಿಗೂ ಮಕ್ಕಳಿಗೂ ಬೇಸರ ಪಡುವವಳಾದ ನಿನ್ನ ತಾಯಿಗೆ ನೀನು ತಕ್ಕ ಮಗಳು; ಗಂಡನಿಗೂ ಮಕ್ಕಳಿಗೂ ಬೇಸರ ಪಡುವವರಾದ ನಿನ್ನ ಅಕ್ಕಂದಿರಿಗೆ ನೀನು ತಕ್ಕ ತಂಗಿ; ನಿನ್ನ ತಾಯಿ ಹಿತ್ತಿಯಳು, ನಿನ್ನ ತಂದೆ ಅಮೋರಿಯನು.
- 46ನಿನ್ನ ಎಡಗಡೆಯಲ್ಲಿ ಕುಮಾರ್ತೆಯರೊಂದಿಗೆ ವಾಸಿಸುವ ಸಮಾರ್ಯವೇ ನಿನ್ನ ಅಕ್ಕ; ಬಲಗಡೆಯಲ್ಲಿ ಕುಮಾರ್ತೆಯರೊಂದಿಗೆ ವಾಸಿಸುವ ಸೊದೋಮ್ ನಿನ್ನ ತಂಗಿ.
- 47ಆದರೂ ನೀನು ಅವರ ಮಾರ್ಗಗಳಲ್ಲಿ ನಡೆಯಲಿಲ್ಲ, ಅವರ ಅಸಹ್ಯಗಳ ಹಾಗೆ ಮಾಡಲಿಲ್ಲ, ಅವರ ದುರ್ನಡತೆಯು ಅತ್ಯಲ್ಪವೆಂದು ಸದಾ ಅವರಿಗಿಂತ ಬಹಳ ಕೆಟ್ಟವಳಾಗಿ ನಡೆದುಕೊಂಡೆ.
- 48ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನನ್ನ ಜೀವದಾಣೆ, ನಿನ್ನ ತಂಗಿಯಾದ ಸೊದೋಮು, ತಾನಾದರೂ ತನ್ನ ಕುಮಾರ್ತೆಯ ರಾದರೂ ನೀನು ನಿನ್ನ ಕುಮಾರ್ತೆಯರು ಮಾಡಿದ ಹಾಗೆ ಮಾಡಲಿಲ್ಲ.
Cross references
- Ezekiel 23:4 ಯೆಹೆಜ್ಕೇಲನು 23:4ಅವರುಗಳ ಹೆಸರುಗಳೇನಂದರೆ ಒಹೊಲ ಎಂಬವಳು ದೊಡ್ಡವಳು ಒಹೊಲೀಬ ಎಂಬವಳು ಚಿಕ್ಕವಳು; ಅವರು ನನ್ನವ ರಾಗಿದ್ದು ಕುಮಾರ ಮತ್ತು ಕುಮಾರ್ತೆಯರನ್ನು ಹೆತ್ತರು; ಅವರ ಹೆಸರು ಹೀಗೆ--ಒಹೋಲ ಎಂಬದು ಸಮಾ ರ್ಯವು ಮತ್ತು ಒಹೊಲೀಬ ಎಂಬದು ಯೆರೂಸ ಲೇಮು.
- Ezekiel 16:48–49 ಯೆಹೆಜ್ಕೇಲನು 16:48–49ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನನ್ನ ಜೀವದಾಣೆ, ನಿನ್ನ ತಂಗಿಯಾದ ಸೊದೋಮು, ತಾನಾದರೂ ತನ್ನ ಕುಮಾರ್ತೆಯ ರಾದರೂ ನೀನು ನಿನ್ನ ಕುಮಾರ್ತೆಯರು ಮಾಡಿದ ಹಾಗೆ ಮಾಡಲಿಲ್ಲ. ಇಗೋ, ಸೊದೋಮ್ ಎಂಬ ನಿನ್ನ ತಂಗಿಯ ಅಕ್ರಮವನ್ನೂ ಗರ್ವವನ್ನೂ ನೋಡು; ರೊಟ್ಟಿಯ ತೃಪ್ತಿಯು ಅವಳಿಗೂ ಅವಳ ಕುಮಾರ್ತೆ ಯರಿಗೂ ನಿರ್ಭಯವಾದ ಸೌಖ್ಯವಾಗಿದೆ; ಆಕೆಯು ದೀನದರಿದ್ರರಿಗೆ ಬೆಂಬಲವಾಗಿರಲಿಲ್ಲ.
- Ezekiel 16:51 ಯೆಹೆಜ್ಕೇಲನು 16:51ಸಮಾರ್ಯವೆಂಬಾಕೆಯು ಸಹ ನೀನು ಮಾಡಿದ ಪಾಪಗಳಲ್ಲಿ ಅರ್ಧವನ್ನೂ ಮಾಡಲಿಲ್ಲ. ನೀನು ನಿನ್ನ ಅಕ್ಕತಂಗಿಯರಿಗಿಂತಲೂ ಅತ್ಯಧಿಕವಾದ ಅಸಹ್ಯವಾದ ಕಾರ್ಯಗಳನ್ನು ಮಾಡಿದಿ, ನೀನು ಮಾಡಿದ ಲೆಕ್ಕವಿಲ್ಲ ದಷ್ಟು ದುರಾಚಾರಗಳಿಂದ ಅವರನ್ನು ನೀತಿವಂತರೆಂದು ತೋರ್ಪಡಿಸಿದೆ.
- Jeremiah 3:8–11 ಯೆರೆಮೀಯ 3:8–11ಆಗ ನಾನು ನೋಡಿದ್ದೇ ನಂದರೆ, ಹಿಂದಿರುಗಿದ ಇಸ್ರಾಯೇಲು ವ್ಯಭಿಚಾರ ಮಾಡಿದ ಎಲ್ಲಾ ಕಾರಣಗಳ ನಿಮಿತ್ತ ನಾನು ಅವಳನ್ನು ಬಿಟ್ಟುಬಿಟ್ಟು ತ್ಯಾಗಪತ್ರವನ್ನು ಕೊಟ್ಟಿದ್ದಾಗ್ಯೂ ವಂಚನೆ ಯುಳ್ಳ ಅವಳ ಸಹೋದರಿಯಾದ ಯೆಹೂದಳು ಭಯಪಡದೆ ತಾನು ಕೂಡ ಹೋಗಿ ಸೂಳೆತನವನ್ನು ಮಾಡಿದಳು. ಅವಳ ಸೂಳೆತನದ ಸುದ್ದಿಯಿಂದ ಅವಳು ದೇಶವನ್ನು ಅಪವಿತ್ರ ಮಾಡಿ ಕಲ್ಲುಗಳ ಸಂಗ ಡಲೂ ಮರಗಳ ಸಂಗಡಲೂ ವ್ಯಭಿಚಾರ ಮಾಡಿದಳು. ಇದೆಲ್ಲಾ ಆದಾಗ್ಯೂ ವಂಚನೆಯುಳ್ಳ ಅವಳ ಸಹೋ ದರಿಯಾದ ಯೆಹೂದಳು ಪೂರ್ಣ ಹೃದಯದಿಂದಲ್ಲ, ಕಪಟದಿಂದಲೇ ನನ್ನ ಬಳಿಗೆ ತಿರುಗಿಕೊಂಡಿದ್ದಾಳೆ ಎಂದು ಕರ್ತನು ಅನ್ನುತ್ತಾನೆ. ಕರ್ತನು ನನಗೆ ಹೇಳಿದ್ದೇ ನಂದರೆ--ಹಿಂದಿರುಗಿದ ಇಸ್ರಾಯೇಲು ವಂಚನೆಯುಳ್ಳ ಯೆಹೂದಕ್ಕಿಂತ ಹೆಚ್ಚಾಗಿ ತನ್ನನ್ನು ನೀತಿವಂತಳನ್ನಾಗಿ ಮಾಡಿಕೊಂಡಿದ್ದಾಳೆ.
- Ezekiel 16:53–56 ಯೆಹೆಜ್ಕೇಲನು 16:53–56ನಾನು ಅವರ ಸೆರೆಯನ್ನೂ ಕುಮಾರ್ತೆಯರ ಸಹಿತವಾದ ಸೊದೋಮಿನ ಸೆರೆಯನ್ನೂ ಕುಮಾರ್ತೆ ಯರ ಸಹಿತವಾದ ಸಮಾರ್ಯದ ಸೆರೆಯನ್ನೂ ತಪ್ಪಿಸುವಾಗ ಅವರೊಂದಿಗೆ ನಿನ್ನ ಸೆರೆಯವರ ಸೆರೆಯನ್ನು ತಪ್ಪಿಸುವೆನು. ನೀನು ನಿನ್ನ ನಿಂದೆಯನ್ನು ಹೊತ್ತು ಕೊಂಡು ಅವರನ್ನು ಆದರಿಸುವಾಗ ನೀನು ಲಜ್ಜೆಪಡುವಿ, ನಾಚಿಕೆಗೊಳ್ಳುವಿ. ಆ ಸಮಾರ್ಯ, ಸೊದೋಮ್ ಎಂಬ ನಿನ್ನ ಅಕ್ಕತಂಗಿಯರೂ ಕುಮಾರ್ತೆಯರೂ ತಮ್ಮ ಪೂರ್ವಸ್ಥಿತಿಗೆ ತಿರುಗುವರು. ನೀನೂ ಕುಮಾರ್ತೆ ಯರೂ ಪೂರ್ವಸ್ಥಿತಿಗೆ ತಿರುಗಿಕೊಳ್ಳುವಿರಿ. ನಿನ್ನ ಸಹೋದರಿಯಾದ ಸೊದೋಮ್ ನಿನ್ನ ಗರ್ವದ ದಿವಸಗಳಲ್ಲಿ ನಿನ್ನ ಬಾಯಿಂದ ಉಚ್ಚರಿಸಲ್ಪಡಲಿ.
- Ezekiel 16:61 ಯೆಹೆಜ್ಕೇಲನು 16:61ಆಗ ನೀನು ನಿನ್ನ ಮಾರ್ಗಗಳನ್ನು ಜ್ಞಾಪಕಮಾಡಿಕೊಂಡು ನಿನ್ನ ಸಹೋ ದರಿಗಳಾದ ನಿನ್ನ ಅಕ್ಕತಂಗಿಯರನ್ನು ಸೇರುವಾಗ ನಾಚಿಕೆಪಡುವಿ. ಅವರನ್ನು ನಿನ್ನ ಕುಮಾರ್ತೆಗಳಂತೆ ಕೊಡುವೆನು. ಆದರೆ ಇದು ನಿನ್ನ ಒಡಂಬಡಿಕೆ ಯಿಂದಲ್ಲ.
- Genesis 13:10–13 ಆದಿಕಾಂಡ 13:10–13ಲೋಟನು ತನ್ನ ಕಣ್ಣುಗಳನ್ನು ಎತ್ತಿ ಯೊರ್ದನಿನ ಮೈದಾನವನ್ನೆಲ್ಲಾ ನೋಡಿದನು. ಯಾಕಂದರೆ ಕರ್ತನು ಸೊದೋಮನ್ನೂ ಗೊಮೋರ ವನ್ನೂ ನಾಶಮಾಡುವದಕ್ಕಿಂತ ಮುಂಚೆ ಅದೆಲ್ಲಾ ಚೋಗರಿನ ವರೆಗೆ ನೀರಾವರಿಯಾಗಿದ್ದು ಕರ್ತನ ತೋಟದಂತೆಯೂ ಐಗುಪ್ತದೇಶದಂತೆಯೂ ಇತ್ತು. ತರುವಾಯ ಲೋಟನು ಯೊರ್ದನಿನ ಮೈದಾನ ವನ್ನೆಲ್ಲಾ ತನಗಾಗಿ ಆರಿಸಿಕೊಂಡನು; ಹೀಗೆ ಲೋಟನು ಮೂಡಣಕ್ಕೆ ಹೊರಟು ಹೋದದ್ದರಿಂದ ಅವರು ಒಬ್ಬರಿಂದೊಬ್ಬರು ಪ್ರತ್ಯೇಕಿಸಲ್ಪಟ್ಟರು. ಅಬ್ರಾಮನು ಕಾನಾನ್ ದೇಶದಲ್ಲಿ ವಾಸಮಾಡಿದನು. ಲೋಟನು ಸೊದೋಮಿನ ಬಳಿಯಲ್ಲಿ ಗುಡಾರಗಳನ್ನು ಹಾಕಿ ಕೊಂಡು ಮೈದಾನದ ಪಟ್ಟಣಗಳಲ್ಲಿ ವಾಸಿಸಿದನು. ಆದರೆ ಸೊದೋಮಿನ ಮನುಷ್ಯರು ದುಷ್ಟರೂ ಕರ್ತನ ದೃಷ್ಟಿಯಲ್ಲಿ ಬಹು ಪಾಪಿಷ್ಠರೂ ಆಗಿದ್ದರು.
- Deuteronomy 29:23 ಧರ್ಮೋಪದೇಶಕಾಂಡ 29:23ಕರ್ತನು ತನ್ನ ಕೋಪದಲ್ಲಿಯೂ ರೌದ್ರದಲ್ಲಿಯೂ ಕೆಡವಿ ಹಾಕಿದ ಸೊದೋಮ್ ಗೊಮೋರ ಅದ್ಮಾಚೆಬೋ ಯಾಮ್ ಇವುಗಳ ಹಾಗೆ ಆ ದೇಶವೆಲ್ಲಾ ಗಂಧಕವೂ ಉಪ್ಪೂ ಉರಿಯುತ್ತಾ ಬಿತ್ತಲ್ಪಡದೆ ಮೊಳೆಯದೆ ಯಾವ ಹುಲ್ಲನ್ನಾದರೂ ಬೆಳೆಸದೆ ಇರುವದನ್ನು ನೋಡಿ--
- Luke 17:28–30 ಲೂಕನು 17:28–30ಅದೇ ಪ್ರಕಾರ ಲೋಟನ ದಿವಸಗಳಲ್ಲಿಯೂ ಇತ್ತು. ಅವರು ತಿನ್ನು ತ್ತಿದ್ದರು, ಕುಡಿಯುತ್ತಿದ್ದರು; ಅವರು ಕೊಂಡುಕೊಳ್ಳು ತ್ತಿದ್ದರು, ಮಾರುತ್ತಿದ್ದರು; ಅವರು ನೆಡುತ್ತಿದ್ದರು ಮತ್ತು ಕಟ್ಟುತ್ತಿದ್ದರು. ಆದರೆ ಲೋಟನು ಸೊದೋಮಿನಿಂದ ಹೊರಗೆ ಹೋದ ದಿನವೇ ಆಕಾಶದಿಂದ ಬೆಂಕಿಯೂ ಗಂಧಕವೂ ಸುರಿದು ಎಲ್ಲರನ್ನು ನಾಶಪಡಿಸಿದವು. ಮನುಷ್ಯಕುಮಾರನು ಪ್ರತ್ಯಕ್ಷನಾಗುವ ದಿನದಲ್ಲಿ ಹೀಗೆಯೇ ಇರುವದು.
- Genesis 14:8 ಆದಿಕಾಂಡ 14:8ಸೊದೋಮಿನ ಅರಸನೂ ಗೊಮೋರದ ಅರಸನೂ ಅದ್ಮಾಹದ ಅರಸನೂ ಚೆಬೋಯಾಮಿನ ಅರಸನೂ ಚೋಗ ರೆಂಬ ಬೇಲದ ಅರಸನೂ ಹೊರಟು
- Ezekiel 16:27 ಯೆಹೆಜ್ಕೇಲನು 16:27ಆದದರಿಂದ ಇಗೋ, ನಾನು ನನ್ನ ಕೈಯನ್ನು ನಿನ್ನ ಮೇಲೆ ಚಾಚಿ ನಿನ್ನ ಸಾಮಾನ್ಯವಾದ ಆಹಾರವನ್ನು ಕಡಿಮೆಮಾಡಿದೆ; ನಿನ್ನ ದುರ್ಮಾರ್ಗಕ್ಕೆ ನಾಚಿಕೆಪಟ್ಟು ನಿನ್ನ ಕೆಟ್ಟ ನಡತೆಗೆ ಅಸಹ್ಯಪಡುವವರಾದ ಫಿಲಿಷ್ಟಿಯರ ಕುಮಾರ್ತೆಯರ ಚಿತ್ತಕ್ಕೆ ನಿನ್ನನ್ನು ಒಪ್ಪಿಸಿಬಿಟ್ಟೆ.
- Genesis 18:20–33 ಆದಿಕಾಂಡ 18:20–33ಕರ್ತನು--ಸೊದೋಮ್ ಗೊಮೋರಗಳ ಕೂಗು ದೊಡ್ಡದಾಗಿರುವದರಿಂದಲೂ ಅವರ ಪಾಪವು ಘೋರವಾಗಿರುವದರಿಂದಲೂ ನಾನು ಇಳಿದು ಹೋಗಿ ನನ್ನ ಬಳಿಗೆ ಬಂದ ಅದರ ಕೂಗಿನ ಪ್ರಕಾರವೇ ಅವರು ಮಾಡಿದ್ದಾರೋ ಇಲ್ಲವೋ ಎಂದು ನೋಡಿ ತಿಳುಕೊಳ್ಳುವೆನು ಅಂದನು. ಆ ಮನುಷ್ಯರು ಅಲ್ಲಿಂದ ತಮ್ಮ ಮುಖಗಳನ್ನು ತಿರುಗಿಸಿಕೊಂಡು ಸೊದೋಮಿನ ಕಡೆಗೆ ಹೋದರು. ಆದರೆ ಅಬ್ರಹಾಮನು ಇನ್ನೂ ಕರ್ತನ ಮುಂದೆ ನಿಂತುಕೊಂಡಿದ್ದನು. ಆಗ ಅಬ್ರಹಾಮನು ಹತ್ತಿರ ಬಂದು--ದುಷ್ಟರ ಸಂಗಡ ನೀತಿವಂತರನ್ನೂ ನಾಶಮಾಡು ವಿಯಾ? ಒಂದು ವೇಳೆ ಆ ಪಟ್ಟಣದಲ್ಲಿ ಐವತ್ತು ಮಂದಿ ನೀತಿವಂತರಿದ್ದರೆ ಅದರೊಳಗಿರುವ ಆ ಐವತ್ತು ನೀತಿವಂತರಿಗೋಸ್ಕರ ಆ ಸ್ಥಳವನ್ನು ಉಳಿಸದೆ ನಾಶಮಾಡುವಿಯೋ? ಆ ಪ್ರಕಾರ ಮಾಡಿ ನೀತಿವಂತರನ್ನು ದುಷ್ಟರ ಸಂಗಡ ಕೊಲ್ಲುವದು ನಿನಗೆ ದೂರವಾಗಿರಲಿ; ಹಾಗೆ ನೀತಿವಂತರನ್ನು ದುಷ್ಟರಿಗೆ ಸಮಾನಮಾಡುವದು ನಿನಗೆ ದೂರ ವಾಗಿರಲಿ; ಭೂಲೋಕಕ್ಕೆಲ್ಲಾ ನ್ಯಾಯಾಧಿಪತಿಯಾಗಿ ರುವಾತನು ನ್ಯಾಯವಾದದ್ದನ್ನು ಮಾಡದೆ ಇರುವನೇ ಅಂದನು. ಅದಕ್ಕೆ ಕರ್ತನು--ನನಗೆ ಸೊದೋಮ್ ಪಟ್ಟಣದೊಳಗೆ ಐವತ್ತು ಮಂದಿ ನೀತಿವಂತರು ಸಿಕ್ಕಿದರೆ ಅವರಿಗೊಸ್ಕರ ಆ ಸ್ಥಳವನ್ನೆಲ್ಲಾ ಉಳಿಸುವೆನು ಅಂದನು. ಆಗ ಅಬ್ರಹಾಮನು--ಇಗೋ, ಮಣ್ಣೂ ಬೂದಿಯೂ ಆಗಿರುವ ನಾನು ಕರ್ತನ ಸಂಗಡ ಮಾತನಾಡುವದಕ್ಕೆ ಮುಂಗೊಂಡಿದ್ದೇನೆ. ಒಂದು ವೇಳೆ ಐವತ್ತು ನೀತಿವಂತರಲ್ಲಿ ಐದು ಕಡಿಮೆ ಇದ್ದರೆ ಆ ಐದು ಮಂದಿ ಇಲ್ಲದ್ದರಿಂದ ಆ ಪಟ್ಟಣವನ್ನು ನಾಶಮಾಡುವಿಯೋ ಎಂದು ಪ್ರತ್ಯುತ್ತರವಾಗಿ ಅಂದನು. ಆದಕ್ಕೆ ಆತನು--ನಾಲ್ವತ್ತೈದು ಮಂದಿ ಅಲ್ಲಿ ಸಿಕ್ಕಿದರೆ ನಾನು ನಾಶಮಾಡುವದಿಲ್ಲ ಅಂದನು. ಅಬ್ರಹಾಮನು ಆತನ ಸಂಗಡ ಇನ್ನೂ ಮಾತನಾಡಿ--ಒಂದು ವೇಳೆ ಅಲ್ಲಿ ನಾಲ್ವತ್ತು ಮಂದಿ ಸಿಕ್ಕಾರು ಅಂದನು. ಅದಕ್ಕೆ ಆತನು--ನಾಲ್ವತ್ತು ಮಂದಿಗೋಸ್ಕರ ಅದನ್ನು ನಾನು ನಾಶಮಾಡುವದಿಲ್ಲ ಅಂದನು. ಅವನು-- ಕರ್ತನಿಗೆ ಕೋಪಬಾರದೆ ಇರಲಿ; ನಾನು ಮಾತನಾ ಡುತ್ತೇನೆ--ಒಂದು ವೇಳೆ ಅಲ್ಲಿ ಮೂವತ್ತು ಮಂದಿ ಸಿಕ್ಕಾರು ಅಂದಾಗ ಆತನು--ನನಗೆ ಅಲ್ಲಿ ಮೂವತ್ತು ಮಂದಿ ಸಿಕ್ಕಿದರೆ ನಾಶಮಾಡುವದಿಲ್ಲ ಅಂದನು. ಅವನು--ಇಗೋ, ಕರ್ತನ ಸಂಗಡ ಮಾತನಾಡು ವದಕ್ಕೆ ಮುಂಗೊಂಡಿದ್ದೇನೆ; ಒಂದು ವೇಳೆ ಇಪ್ಪತ್ತು ಮಂದಿ ಅಲ್ಲಿ ಸಿಕ್ಕಾರು ಅಂದಾಗ ಆತನು-- ಆ ಇಪ್ಪತ್ತು ಮಂದಿಗೋಸ್ಕರ ನಾನು ಅದನ್ನು ನಾಶಮಾಡುವದಿಲ್ಲ ಅಂದನು. ಅವನು--ಹಾ, ಕರ್ತನೇ, ನಿನಗೆ ಕೋಪಬಾರದೆ ಇರಲಿ; ಇನ್ನು ಒಂದೇ ಸಾರಿ ಮಾತನಾಡುತ್ತೇನೆ--ಒಂದು ವೇಳೆ ಅಲ್ಲಿ ಹತ್ತು ಮಂದಿ ಸಿಕ್ಕಾರು ಅಂದಾಗ ಆತನು--ಹತ್ತು ಮಂದಿಗೋಸ್ಕರ ನಾಶಮಾಡೆನು ಅಂದನು.ಕರ್ತನು ಅಬ್ರಹಾಮನ ಸಂಗಡ ಮಾತನಾಡು ವದನ್ನು ಮುಗಿಸಿದ ಕೂಡಲೆ ಹೊರಟುಹೋದನು. ಅಬ್ರಹಾಮನು ತನ್ನ ಸ್ಥಳಕ್ಕೆ ತಿರುಗಿಕೊಂಡನು. ಕರ್ತನು ಅಬ್ರಹಾಮನ ಸಂಗಡ ಮಾತನಾಡು ವದನ್ನು ಮುಗಿಸಿದ ಕೂಡಲೆ ಹೊರಟುಹೋದನು. ಅಬ್ರಹಾಮನು ತನ್ನ ಸ್ಥಳಕ್ಕೆ ತಿರುಗಿಕೊಂಡನು.
Original words (Hebrew)
- elder · H1419גָּדוֹל gâdôwl
- sister · H269אָחוֹת ʼâchôwth
- Samaria · H8111שֹׁמְרוֹן Shômᵉrôwn
- daughters · H1323בַּת bath
- dwell · H3427יָשַׁב yâshab
- hand · H8040שְׂמֹאול sᵉmôʼwl
- younger · H6996קָטָן qâṭân
- sister · H269אָחוֹת ʼâchôwth
- dwelleth · H3427יָשַׁב yâshab
- hand · H3225יָמִין yâmîyn
- Sodom · H5467סְדֹם Çᵉdôm
- daughters · H1323בַּת bath