Ezekiel · chapter 16 · verse 59
Ezekiel 16:59 in Kannada
ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನೀನು ಮಾಡಿದ್ದಕ್ಕೆ ತಕ್ಕ ಹಾಗೆ ನಾನು ನಿನಗೆ ಮಾಡುತ್ತೇನೆ; ನೀನು ಒಡಂಬಡಿಕೆಯನ್ನು ವಿಾರಿ ನನ್ನ ಆಣೆಯನ್ನು ತಿರಸ್ಕರಿಸಿರುವಿ.
Devaraada kartanu heege heluttaane--neenu maadiddakke takka haage naanu ninage maaduttene; neenu odambadikeyannu viాri nanna aaneyannu tiraskarisiruvi.
Ezekiel 16:59 in English
- King James Version (KJV)
- For thus saith the Lord GOD; I will even deal with thee as thou hast done, which hast despised the oath in breaking the covenant.
- World English Bible (WEB)
- “‘For the Lord GOD says: “I will also deal with you as you have done, who have despised the oath in breaking the covenant.
- American Standard Version (ASV)
- For thus saith the Lord Jehovah: I will also deal with thee as thou hast done, who hast despised the oath in breaking the covenant.
- Bible in Basic English (BBE)
- For this is what the Lord has said: I will do to you as you have done, you who, putting the oath on one side, have let the agreement be broken.
- Darby Translation (DBY)
- For thus saith the Lord Jehovah: I will even deal with thee as thou hast done, who hast despised the oath, and broken the covenant.
- Webster's Bible (WBS)
- For thus saith the Lord GOD; I will even deal with thee as thou hast done, who hast despised the oath in breaking the covenant.
- Young's Literal Translation (YLT)
- For thus said the Lord Jehovah: I have dealt with thee as thou hast done, In that thou hast despised an oath — to break covenant.
Read in context
- 57ಅರಾಮಿನ ಕುಮಾರ್ತೆಯರಿಂದಲೂ ಮತ್ತು ಅದರ ಸುತ್ತಲಿರುವಂತೆ ಎಲ್ಲವುಗಳಿಂದಲೂ, ನಿನ್ನನ್ನು ಉದಾ ಸೀನ ಮಾಡಿದಂತ ಎಲ್ಲಾ ಫಿಲಿಷ್ಟಿಯರ ಕುಮಾರ್ತೆಯ ರಿಂದಲೂ ನಿನಗೆ ನಿಂದೆಯು ಬಂದ ಕಾಲದ ಹಾಗೆ ನಿನ್ನ ಕೆಟ್ಟತನವು ಪ್ರಕಟವಾಗುವದಕ್ಕೆ ಪೂರ್ವದಲ್ಲಿಯೇ
- 58ನೀನು ನಿನ್ನ ದುಷ್ಕರ್ಮಗಳನ್ನೂ ಅಸಹ್ಯಗಳನ್ನೂ ಹೊತ್ತುಕೊಂಡಿರುವಿ ಎಂದು ಕರ್ತನು ಹೇಳುತ್ತಾನೆ.
- 59ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನೀನು ಮಾಡಿದ್ದಕ್ಕೆ ತಕ್ಕ ಹಾಗೆ ನಾನು ನಿನಗೆ ಮಾಡುತ್ತೇನೆ; ನೀನು ಒಡಂಬಡಿಕೆಯನ್ನು ವಿಾರಿ ನನ್ನ ಆಣೆಯನ್ನು ತಿರಸ್ಕರಿಸಿರುವಿ.
- 60ಆದಾಗ್ಯೂ ನಿನ್ನ ಯೌವನದ ದಿನಗಳಲ್ಲಿ ನಾನು ನಿನ್ನ ಸಂಗಡ ಮಾಡಿದ ನನ್ನ ಒಡಂಬಡಿಕೆಯನ್ನು ಜ್ಞಾಪಕ ಮಾಡಿಕೊಂಡು ನಿನಗಾಗಿ ನಿತ್ಯವಾದ ಒಡಂಬಡಿಕೆ ಯೊಂದನ್ನು ಸ್ಥಾಪಿಸುವೆನು.
- 61ಆಗ ನೀನು ನಿನ್ನ ಮಾರ್ಗಗಳನ್ನು ಜ್ಞಾಪಕಮಾಡಿಕೊಂಡು ನಿನ್ನ ಸಹೋ ದರಿಗಳಾದ ನಿನ್ನ ಅಕ್ಕತಂಗಿಯರನ್ನು ಸೇರುವಾಗ ನಾಚಿಕೆಪಡುವಿ. ಅವರನ್ನು ನಿನ್ನ ಕುಮಾರ್ತೆಗಳಂತೆ ಕೊಡುವೆನು. ಆದರೆ ಇದು ನಿನ್ನ ಒಡಂಬಡಿಕೆ ಯಿಂದಲ್ಲ.
Cross references
- Ezekiel 17:19 ಯೆಹೆಜ್ಕೇಲನು 17:19ಆದದರಿಂದ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಅವನು ತಿರಸ್ಕರಿಸಿದ ನನ್ನ ಪ್ರಮಾಣವನ್ನೂ ಅವನು ವಿಾರಿದ ಒಡಂಬಡಿಕೆಯನ್ನೂ ನನ್ನ ಜೀವ ದಾಣೆ ನಿಶ್ಚಯವಾಗಿ ಅವನ ತಲೆಯ ಮೇಲೆಯೇ ಮುಯ್ಯಿ ತೀರಿಸುವೆನು.
- Isaiah 24:5 ಯೆಶಾಯ 24:5ಭೂನಿವಾಸಿಗಳು ನ್ಯಾಯಪ್ರಮಾಣಗಳನ್ನು ವಿಾರಿ ನಿಯಮಗಳನ್ನು ಬದ ಲಾಯಿಸಿ ನಿತ್ಯವಾದ ಒಡಂಬಡಿಕೆಯನ್ನು ಭಂಗಪಡಿಸಿ ದ್ದರಿಂದ ಭೂಮಿಯು ಸಹ ಅದರ ನಿವಾಸಿಗಳ ಹೆಜ್ಜೆ ಯಿಂದ ಅಪವಿತ್ರವಾಗುವದು.
- Deuteronomy 29:10–15 ಧರ್ಮೋಪದೇಶಕಾಂಡ 29:10–15ನೀವೆಲ್ಲರು ಈಹೊತ್ತು ನಿಮ್ಮ ದೇವರಾದ ಕರ್ತನ ಮುಂದೆ ನಿಂತಿದ್ದೀರಿ; ನಿನ್ನ ದೇವರಾದ ಕರ್ತನು ಈಹೊತ್ತು ನಿನ್ನ ಸಂಗಡ ಮಾಡುವ ಒಡಂಬಡಿಕೆಯ ಲ್ಲಿಯೂ ಆಣೆಯಲ್ಲಿಯೂ ಸೇರುವದಕ್ಕೆ ನಿಮ್ಮ ಗೋತ್ರ ಗಳ ಮುಖ್ಯಸ್ಥರೂ ಹಿರಿಯರೂ ಅಧಿಕಾರಿಗಳೂ ಇಸ್ರಾಯೇಲಿನ ಮನುಷ್ಯರೆಲ್ಲರೂ ನಿಮ್ಮ ಚಿಕ್ಕವರೂ ಪತ್ನಿಯರೂ ನಿನ್ನ ಪಾಳೆಯದಲ್ಲಿರುವ ಪರವಾಸಿಯರೂ ನಿನಗಾಗಿ ಕಟ್ಟಿಗೆ ಕಡಿಯುವವರೂ ನೀರು ಸೇದುವ ವರೂ ಇದ್ದೀರಿ. ಆ ಒಡಂಬಡಿಕೆ ಯಾವದಂದರೆ, ಆತನು ನಿನಗೆ ಹೇಳಿದಂತೆಯೂ ನಿನ್ನ ಪಿತೃಗಳಾದ ಅಬ್ರಹಾಮನಿಗೂ ಇಸಾಕನಿಗೂ ಯಾಕೋಬನಿಗೂ ಪ್ರಮಾಣಮಾಡಿದಂತೆಯೂ ಈಹೊತ್ತು ನಿನ್ನನ್ನು ತನಗೆ ಜನಾಂಗವಾಗಿ ಸ್ಥಾಪಿಸಿ ನಿನಗೆ ದೇವರಾಗ ಬೇಕೆಂಬದೇ. ಇದಲ್ಲದೆ ನಿಮ್ಮ ಸಂಗಡ ಮಾತ್ರ ಈ ಒಡಂಬಡಿಕೆ ಯನ್ನೂ ಈ ಆಣೆಯನ್ನೂ ನಾನು ಮಾಡುವದಿಲ್ಲ; ಈಹೊತ್ತು ಇಲ್ಲಿ ನಮ್ಮ ಸಂಗಡ ನಮ್ಮ ದೇವರಾದ ಕರ್ತನ ಮುಂದೆ ನಿಂತವನ ಸಂಗಡವೂ ಈಹೊತ್ತು ಇಲ್ಲಿ ನಮ್ಮ ಸಂಗಡ ಇರದವನ ಸಂಗಡವೂ ಮಾಡು ತ್ತೇನೆ.
- Ezekiel 7:8–9 ಯೆಹೆಜ್ಕೇಲನು 7:8–9ಈಗ ಸ್ವಲ್ಪ ಹೊತ್ತಿನಲ್ಲಿ ನನ್ನ ಉಗ್ರವನ್ನು ನಿನ್ನ ಮೇಲೆ ಸುರಿಯುವೆನು; ನನ್ನ ಕೋಪವನ್ನು ನಿನ್ನ ಮೇಲೆ ತೀರಿಸಿಬಿಡುವೆನು; ನಾನು ನಿನ್ನ ಮಾರ್ಗಗಳ ಪ್ರಕಾರ ಮುಯ್ಯಿ ತೀರಿಸುವೆನು; ನಿನ್ನ ಎಲ್ಲಾ ಅಸಹ್ಯಗಳ ಪ್ರಕಾರ ನಿನ್ನ ಮೇಲೆ ಮುಯ್ಯಿ ತೀರಿಸುವೆನು. ನನ್ನ ಕಣ್ಣು ಕಟಾಕ್ಷಿಸುವದಿಲ್ಲ; ನಾನು ನಿನ್ನನ್ನು ಕನಿಕರಿಸುವದೂ ಇಲ್ಲ, ನಿನ್ನ ಮಾರ್ಗಗಳಿಗೂ ನಿನ್ನ ಮಧ್ಯದಲ್ಲಿರುವ ಅಸಹ್ಯಗಳಿಗೂ ತಕ್ಕದ್ದನ್ನು ನಿನಗೆ ಮುಯ್ಯಿ ತೀರಿಸುತ್ತೇನೆ. ಆಗ ಕರ್ತನಾದ ನಾನೇ ಹೊಡೆಯುತ್ತಿರುವನೆಂದು ನಿನಗೆ ತಿಳಿಯುವದು.
- Exodus 24:1–8 ವಿಮೋಚನಕಾಂಡ 24:1–8ಆತನು ಮೋಶೆಗೆ--ನೀನೂ ಆರೋನನೂ ನಾದಾಬನೂ ಅಬೀಹೂ ಇಸ್ರಾಯೇಲಿನ ಹಿರಿಯರಲ್ಲಿ ಎಪ್ಪತ್ತು ಮಂದಿಯೂ ಕರ್ತನ ಬಳಿಗೆ ಬಂದು ದೂರದಲ್ಲಿ ಆರಾಧಿಸಿರಿ. ಮೋಶೆ ಒಬ್ಬನೇ ಕರ್ತನ ಸವಿಾಪಕ್ಕೆ ಬರಲಿ; ಆದರೆ ಅವರು ಸವಿಾಪಕ್ಕೆ ಬರಬಾರದು. ಇಲ್ಲವೆ ಜನರು ಅವನ ಸಂಗಡ ಬರಬಾರದು ಎಂದು ಹೇಳಿದನು. ಮೋಶೆಯು ಬಂದು ಕರ್ತನ ಎಲ್ಲಾ ಮಾತುಗಳನ್ನೂ ಎಲ್ಲಾ ನ್ಯಾಯವಿಧಿಗಳನ್ನೂ ಜನರಿಗೆ ತಿಳಿಯಪಡಿ ಸಿದನು; ಆಗ ಜನರೆಲ್ಲಾ ಒಂದೇ ಸ್ವರದಿಂದ--ಕರ್ತನು ಹೇಳಿದ ಎಲ್ಲಾ ಮಾತುಗಳ ಪ್ರಕಾರ ಮಾಡುತ್ತೇವೆ ಎಂದು ಉತ್ತರಕೊಟ್ಟರು. ಮೋಶೆಯು ಕರ್ತನ ಮಾತುಗಳನ್ನೆಲ್ಲಾ ಬರೆದು ಬೆಳಿಗ್ಗೆ ಎದ್ದು ಬೆಟ್ಟದ ಕೆಳಗೆ ಯಜ್ಞವೇದಿಯನ್ನು ಕಟ್ಟಿಸಿ ಇಸ್ರಾಯೇಲಿನ ಹನ್ನೆರಡು ಕುಲಗಳಿಗೆ ಅನುಸಾರವಾಗಿ ಹನ್ನೆರಡು ಸ್ತಂಭಗಳನ್ನು ನಿಲ್ಲಿಸಿದನು. ಅವನು ಕರ್ತನಿಗೆ ದಹನಬಲಿಗಳನ್ನೂ ಸಮಾಧಾನದ ಬಲಿಗಾಗಿ ಎತ್ತು ಗಳನ್ನೂ ಅರ್ಪಿಸುವದಕ್ಕಾಗಿ ಇಸ್ರಾಯೇಲ್ ಮಕ್ಕಳ ಯೌವನಸ್ಥರನ್ನು ಕಳುಹಿಸಿದನು. ಮೋಶೆಯು ರಕ್ತದಲ್ಲಿ ಅರ್ಧವನ್ನು ತೆಗೆದುಕೊಂಡು ಬೋಗುಣಿಗಳಲ್ಲಿ ಹಾಕಿ ದನು ಮತ್ತು ರಕ್ತದಲ್ಲಿ ಅರ್ಧವನ್ನು ಯಜ್ಞವೇದಿಯ ಮೇಲೆ ಚಿಮುಕಿಸಿದನು. ಇದಲ್ಲದೆ ಒಡಂಬಡಿಕೆಯ ಪ್ರುಸ್ತಕವನ್ನು ತೆಗೆದುಕೊಂಡು ಜನರ ಮುಂದೆ ಓದಿದನು. ಆಗ ಅವರು--ಕರ್ತನು ಹೇಳುವದನ್ನೆಲ್ಲಾ ನಾವು ಮಾಡಿ ವಿಧೇಯರಾಗುವೆವು ಅಂದರು. ತರು ವಾಯ ಮೋಶೆಯು ರಕ್ತವನ್ನು ತೆಗೆದುಕೊಂಡು ಜನರ ಮೇಲೆ ಚಿಮುಕಿಸಿ--ಇಗೋ, ಈ ಎಲ್ಲಾ ಮಾತುಗಳ ವಿಷಯದಲ್ಲಿ ಕರ್ತನು ನಿಮ್ಮೊಂದಿಗೆ ಮಾಡಿದ ಒಡಂಬಡಿಕೆಯ ರಕ್ತವು ಇದೇ ಅಂದನು.
- Deuteronomy 29:25 ಧರ್ಮೋಪದೇಶಕಾಂಡ 29:25ಆಗ ಜನರು--ಅವರು ತಮ್ಮನ್ನು ಐಗುಪ್ತ ದೇಶದೊಳಗಿಂದ ಹೊರಗೆ ತರುವಾಗ ತಮ್ಮ ಪಿತೃಗಳ ದೇವರಾದ ಕರ್ತನು ತಮ್ಮ ಸಂಗಡ ಮಾಡಿದ ಒಡಂಬಡಿಕೆಯನ್ನು ಮರೆತುಬಿಟ್ಟು,
- Jeremiah 2:19 ಯೆರೆಮೀಯ 2:19ನಿನ್ನ ಕೆಟ್ಟತನವೇ ನಿನ್ನನ್ನು ತಿದ್ದುವದು; ನಿನ್ನ ಹಿಂಜಾರಿಕೆಗಳೇ ನಿನ್ನನ್ನು ಗದರಿಸುವವು; ಹೀಗಿ ರುವದರಿಂದ ನೀನು ನಿನ್ನ ದೇವರಾದ ಕರ್ತನನ್ನು ಬಿಟ್ಟದ್ದೂ ನನ್ನ ಭಯವೂ ನಿನ್ನಲ್ಲಿ ಇಲ್ಲದಿರುವದೂ ಕೆಟ್ಟದ್ದೂ ಕಹಿಯಾದದ್ದೂ ಎಂದು ತಿಳುಕೊಂಡು ನೋಡು ಎಂದು ಸೈನ್ಯಗಳ ಕರ್ತನಾದ ದೇವರು ಅನ್ನುತ್ತಾನೆ.
- Ezekiel 7:4 ಯೆಹೆಜ್ಕೇಲನು 7:4ನನ್ನ ಕಣ್ಣುಗಳು ನಿನ್ನನ್ನು ಕಟಾಕ್ಷಿಸುವದಿಲ್ಲ; ನಾನು ನಿನ್ನನ್ನು ಕನಿಕರಿಸು ವದೂ ಇಲ್ಲ, ಆದರೆ ನಿನ್ನ ಮಾರ್ಗಗಳ ಪ್ರಕಾರ ನಿನ್ನ ಮೇಲೆ ಮುಯ್ಯಿ ತೀರಿಸುತ್ತೇನೆ, ನಿನ್ನ ಅಸಹ್ಯಗಳು ನಿನ್ನ ಮಧ್ಯೆ ಇರುವವು, ನಾನೇ ಕರ್ತನೆಂದು ನಿನಗೆ ತಿಳಿಯುವದು.
- Ezekiel 14:4 ಯೆಹೆಜ್ಕೇಲನು 14:4ಆದದರಿಂದ ನೀನು ಅವರ ಸಂಗಡ ಮಾತನಾಡಿ ಹೇಳಬೇಕಾದದ್ದೇನಂದರೆ --ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಸ್ರಾ ಯೇಲಿನ ಮನೆತನದವರ ಪ್ರತಿಯೊಬ್ಬನೂ ತಮ್ಮ ವಿಗ್ರಹಗಳನ್ನು ಹೃದಯಗಳಲ್ಲಿ ನೆಲೆಗೊಳಿಸಿ ಅಕ್ರಮದ ಎಡೆತಡೆಗಳನ್ನು ತಮ್ಮ ಮುಂದೆ ಇಟ್ಟುಕೊಂಡು ಪ್ರವಾ ದಿಯ ಬಳಿಗೆ ಬರುವ ಮನುಷ್ಯನು ಯಾವನೋ ಅವನಿಗೆ ಕರ್ತನಾದ ನಾನು ಅವರ ವಿಗ್ರಹಗಳ ಸಮೂ ಹಕ್ಕೆ ತಕ್ಕ ಹಾಗೆ ಉತ್ತರ ಕೊಡುತ್ತೇನೆ.
- Romans 2:8–9 ರೋಮಾಪುರದವರಿಗೆ 2:8–9ಕಲಹಪ್ರಿಯ ರಾಗಿದ್ದು ಸತ್ಯಕ್ಕೆ ವಿಧೇಯರಾಗದೆ ಅನೀತಿಗೆ ವಿಧೇಯ ರಾಗಿ ಕೆಟ್ಟದ್ದನ್ನು ಮಾಡುವ ಪ್ರತಿಯೊಬ್ಬನಿಗೆ ಅಂದರೆ ಮೊದಲು ಯೆಹೂದ್ಯರಿಗೆ ಆಮೇಲೆ ಅನ್ಯರಿಗೆ ಸಹ ರೌದ್ರ, ಕೋಪ, ಸಂಕಟ ಮತ್ತು ಯಾತನೆಯನೂ
- Jeremiah 31:32 ಯೆರೆಮೀಯ 31:32ನಾನು ಅವರ ತಂದೆಗಳ ಸಂಗಡ ಅವರನ್ನು ಐಗುಪ್ತದೇಶದಿಂದ ಹೊರತರುವದಕ್ಕೆ ಅವರ ಕೈ ಹಿಡಿದ ದಿನದಲ್ಲಿ ಮಾಡಿದ ಒಡಂಬಡಿಕೆಯ ಹಾಗಲ್ಲ; ನಾನು ಅವರ ಯಜಮಾನನಾಗಿದ್ದಾಗ್ಯೂ ಆ ನನ್ನ ಒಡಂಬಡಿಕೆಯನ್ನು ಅವರು ವಿಾರಿದರೆಂದು, ಕರ್ತನು ಅನ್ನುತ್ತಾನೆ.
- Jeremiah 22:9 ಯೆರೆಮೀಯ 22:9ಆಗ ಅವರು--ತಮ್ಮ ದೇವರಾದ ಕರ್ತನ ಒಡಂಬಡಿಕೆಯನ್ನು ಬಿಟ್ಟು, ಬೇರೆ ದೇವರುಗಳಿಗೆ ನಮ ಸ್ಕರಿಸಿ ಸೇವಿಸಿದ್ದರಿಂದಲೇ ಎಂದು ಅವರು ಉತ್ತರ ಕೊಡುವರು.