Ezekiel · chapter 17 · verse 19
Ezekiel 17:19 in Kannada
ಆದದರಿಂದ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಅವನು ತಿರಸ್ಕರಿಸಿದ ನನ್ನ ಪ್ರಮಾಣವನ್ನೂ ಅವನು ವಿಾರಿದ ಒಡಂಬಡಿಕೆಯನ್ನೂ ನನ್ನ ಜೀವ ದಾಣೆ ನಿಶ್ಚಯವಾಗಿ ಅವನ ತಲೆಯ ಮೇಲೆಯೇ ಮುಯ್ಯಿ ತೀರಿಸುವೆನು.
Aadadarinda devaraada kartanu heege helu ttaane--avanu tiraskarisida nanna pramaanavannoo avanu viాrida odambadikeyannoo nanna jeeva daane nishchayavaagi avana taleya meleye muyyi teerisuvenu.
Ezekiel 17:19 in English
- King James Version (KJV)
- Therefore thus saith the Lord GOD; [As] I live, surely mine oath that he hath despised, and my covenant that he hath broken, even it will I recompense upon his own head.
- World English Bible (WEB)
- “Therefore the Lord GOD says: ‘As I live, I will surely bring on his own head my oath that he has despised and my covenant that he has broken.
- American Standard Version (ASV)
- Therefore thus saith the Lord Jehovah: As I live, surely mine oath that he hath despised, and my covenant that he hath broken, I will even bring it upon his own head.
- Bible in Basic English (BBE)
- And so the Lord has said, By my life, truly, for my oath which he put on one side, and my agreement which has been broken, I will send punishment on his head.
- Darby Translation (DBY)
- Therefore thus saith the Lord Jehovah: [As] I live, verily, mine oath which he hath despised, and my covenant which he hath broken, even it will I recompense upon his head.
- Webster's Bible (WBS)
- Therefore thus saith the Lord GOD; [As] I live, surely my oath that he hath despised, and my covenant that he hath broken, even that will I recompense upon his own head.
- Young's Literal Translation (YLT)
- Therefore, thus said the Lord Jehovah: I live — Mine oath that he hath despised, And My covenant that he hath broken, Have I not put it on his head?
Read in context
- 17ಇಲ್ಲವೆ ಫರೋಹನೂ ಅವನ ಮಹಾ ಸೈನ್ಯವೂ ದೊಡ್ಡ ಪರಿವಾರವೂ ಬಂದು ಬಹಳ ಜನ ರನ್ನು ಕೊಲ್ಲುವದಕ್ಕೆ ದಿಬ್ಬಗಳನ್ನು ಕೋಟೆಗಳನ್ನೂ ಕಟ್ಟುವಾಗಲೂ ಅವನಿಗೆ ಯುದ್ಧದಲ್ಲಿ ಸಹಾಯ ಮಾಡುವದಿಲ್ಲ.
- 18ಅವನು ಪ್ರಮಾಣವನ್ನು ತಿರಸ್ಕರಿಸಿ ಕೈಕೊಟ್ಟಾಗ್ಯೂ; ಇಗೋ, ಒಡಂಬಡಿಕೆಯನ್ನು ವಿಾರಿ ಇವುಗಳನ್ನೆಲ್ಲಾ ಮಾಡಿದ್ದ ರಿಂದ ತಪ್ಪಿಸಿಕೊಳ್ಳುವದಿಲ್ಲ.
- 19ಆದದರಿಂದ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಅವನು ತಿರಸ್ಕರಿಸಿದ ನನ್ನ ಪ್ರಮಾಣವನ್ನೂ ಅವನು ವಿಾರಿದ ಒಡಂಬಡಿಕೆಯನ್ನೂ ನನ್ನ ಜೀವ ದಾಣೆ ನಿಶ್ಚಯವಾಗಿ ಅವನ ತಲೆಯ ಮೇಲೆಯೇ ಮುಯ್ಯಿ ತೀರಿಸುವೆನು.
- 20ನಾನು ಅವನ ಮೇಲೆ ನನ್ನ ಬಲೆಯನ್ನು ಬೀಸುತ್ತೇನೆ; ಆಗ ಅವನು ನನ್ನ ಉರ್ಲಿನಲ್ಲಿ ಸಿಕ್ಕಿಬೀಳುವನು; ನಾನು ಅವನನ್ನು ಬಾಬೆಲಿಗೆ ಒಯ್ದು ಅವನು ನನಗೆ ವಿರೋಧವಾಗಿ ಮಾಡಿರುವ ಅಪರಾಧದ ವಿಷಯದಲ್ಲಿ ನಾನು ಅವರೊಂದಿಗೆ ವಾದಿಸುವೆನು.
- 21ಅವನ ಸೈನ್ಯಗಳೆಲ್ಲಾ ಚದರಿಸಲ್ಪಟ್ಟು ಓಡಿಹೋಗಿ ಅವನ ಸಂಗಡ ಕತ್ತಿಯಿಂದ ಬೀಳುವರು; ಉಳಿದವರು ಎಲ್ಲಾ ದಿಕ್ಕುಗಳಿಗೆ ಚದರಿಸ ಲ್ಪಡುವರು; ಆಗ ಕರ್ತನಾದ ನಾನೇ ಅದನ್ನು ಹೇಳಿ ದೆನೆಂದು ನಿಮಗೆ ತಿಳಿಯುವದು.
Cross references
- Jeremiah 5:2 ಯೆರೆಮೀಯ 5:2ಅವರು--ಕರ್ತನು ಜೀವಿಸುತ್ತಾನೆಂದು ಹೇಳಿದರೂ ನಿಶ್ಚಯವಾಗಿ ಸುಳ್ಳಾಗಿಯೇ ಅವರು ಆಣೆ ಇಡುತ್ತಾರೆ.
- Jeremiah 5:9 ಯೆರೆಮೀಯ 5:9ಇವುಗಳ ನಿಮಿತ್ತ ನಾನು ವಿಚಾರಿಸುವ ದಿಲ್ಲವೋ? ಇಂಥಾ ಜನಾಂಗಕ್ಕೆ ನನ್ನ ಪ್ರಾಣವು ಮುಯ್ಯಿಗೆ ಮುಯ್ಯಿ ತೀರಿಸುವದಿಲ್ಲವೋ? ಎಂದು ಕರ್ತನು ಅನ್ನುತ್ತಾನೆ.
- Deuteronomy 5:11 ಧರ್ಮೋಪದೇಶಕಾಂಡ 5:11ನಿನ್ನ ದೇವರಾದ ಕರ್ತನ ಹೆಸರನ್ನು ವ್ಯರ್ಥವಾಗಿ ಎತ್ತಬೇಡ; ಕರ್ತನು ತನ್ನ ಹೆಸರನ್ನು ವ್ಯರ್ಥವಾಗಿ ಎತ್ತುವವನನ್ನು ನಿರ್ದೋಷಿಯೆಂದು ಎಣಿಸುವದಿಲ್ಲ.
- Ezekiel 21:23–27 ಯೆಹೆಜ್ಕೇಲನು 21:23–27ಅದು ಅವರಿಗೆ ಸುಳ್ಳು ಶಕುನದ ಹಾಗೆ ಕಾಣುವದು; ಆಣೆಯಿಟ್ಟು ಮಾಡಿದ ಪ್ರಮಾಣಗಳು ಅವರ ಮೇಲೆ ಉಂಟಾಗು ವವು; ಆದರೆ ಅವರು ಹಿಡಿಯಲ್ಪಡುವ ಹಾಗೆ ಅಕ್ರಮವನ್ನು ಜ್ಞಾಪಕಪಡಿಸುವರು. ಆದದರಿಂದ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಿಮ್ಮ ದ್ರೋಹಗಳು ಪ್ರಕಟವಾಗಿ ನಿಮ್ಮ ಕೆಲಸಗಳಲ್ಲೆಲ್ಲಾ ನಿಮ್ಮ ಪಾಪಗಳು ಕಾಣುವ ಹಾಗೆ ನೀವು ನಿಮ್ಮ ಅಕ್ರಮಗಳನ್ನು ಜ್ಞಾಪಕಕ್ಕೆ ತಂದದ್ದರಿಂದ ನೀವು ಕೈಯಲ್ಲಿ ಹಿಡಿಯಲ್ಪಡುವಿರಿ. ದುಷ್ಟನಾದ ಭ್ರಷ್ಟ ಇಸ್ರಾಯೇಲನ ಪ್ರಭುವೇ, ನೀನು ಮಾಡಿದ ಅಕ್ರಮಗಳಿಂದ ನಿನಗೆ ಅಂತ್ಯ ದಿವಸವು ಬಂದಿತು. ದೇವರಾದ ಕರ್ತನು ಹೀಗೆ ಹೇಳುತ್ತಾನೆ-- ಮುಂಡಾಸವನ್ನು ಎತ್ತಿಡು, ಕಿರೀಟವನ್ನು ತೆಗೆದುಹಾಕು; ಅದು ಹಾಗೆಯೇ ಇರುವದಿಲ್ಲ; ತಗ್ಗಿಸಲ್ಪಟ್ಟವನನ್ನು ಹೆಚ್ಚಿಸಿ ಹೆಚ್ಚಿಸಲ್ಪಟ್ಟವನನ್ನು ತಗ್ಗಿಸು. ನಾನು ತಳ್ಳಿಬಿಡು ವೆನು, ತಳ್ಳಿಬಿಡುವೆನು, ಅದನ್ನು ತಳ್ಳಿಬಿಡುವೆನು; ನ್ಯಾಯ ಯಾರದು? ಅವನು ಬರುವ ವರೆಗೂ ಇದು ಇರುವದಿಲ್ಲ; ನಾನು ಅವನಿಗೆ ಇದನ್ನು ಕೊಟ್ಟು ಬಿಡುತ್ತೇನೆ.
- Jeremiah 7:9–15 ಯೆರೆಮೀಯ 7:9–15ಕಳ್ಳತನ ಹತ್ಯಹಾದರ ಇವುಗಳನ್ನು ನೀವು ನಡಿಸುವಿರೋ? ಸುಳ್ಳುಪ್ರಮಾಣವನ್ನು ಮಾಡಿ ಬಾಳನಿಗೆ ಧೂಪವನ್ನು ಸುಡುವಿರೋ? ನಿಮಗೆ ತಿಳಿಯದ ಬೇರೆ ದೇವರು ಗಳನ್ನು ಹಿಂಬಾಲಿಸಿ ಆಮೇಲೆ ಬಂದು ನನ್ನ ಹೆಸರಿನಲ್ಲಿ ಕರೆಯಲ್ಪಟ್ಟ ಈ ಆಲಯದಲ್ಲಿ ನನ್ನ ಮುಂದೆ ನಿಂತು ಕೊಂಡು--ನಾವು ಈ ಅಸಹ್ಯವಾದವುಗಳನ್ನೆಲ್ಲಾ ಮಾಡುವ ಹಾಗೆ ಒಪ್ಪಿಸಲ್ಪಟ್ಟಿದ್ದೇವೆಂದು ಹೇಳು ವಿರೋ? ನನ್ನ ಹೆಸರಿನಲ್ಲಿ ಕರೆಯಲ್ಪಟ್ಟ ಈ ಆಲಯವು ನಿಮ್ಮ ಕಣ್ಣುಗಳಲ್ಲಿ ಕಳ್ಳರ ಗವಿಯಾಯಿತೋ? ಇಗೋ, ನಾನೇ ಅದನ್ನು ನೋಡಿದ್ದೇನೆಂದು ಕರ್ತನು ಅನ್ನುತ್ತಾನೆ. ಆದರೆ ಈಗ ಶಿಲೋವಿನಲ್ಲಿದ್ದ ನನ್ನ ಸ್ಥಳಕ್ಕೆ ಅಂದರೆ ನಾನು ಮೊದಲು ನನ್ನ ಹೆಸರನ್ನು ಇಟ್ಟಲ್ಲಿಗೆ ಹೋಗಿರಿ; ಅದಕ್ಕೆ ನಾನು ನನ್ನ ಜನರಾದ ಇಸ್ರಾಯೇಲಿನ ಕೆಟ್ಟತನದ ನಿಮಿತ್ತ ಏನು ಮಾಡಿದೆನೆಂದು ನೋಡಿರಿ. ಈಗ ಕರ್ತನು ಅನ್ನುವದೇನಂದರೆ--ನೀವು ಈ ಕೆಲಸಗಳ ನ್ನೆಲ್ಲಾ ಮಾಡಿದ್ದರಿಂದ ನಾನು ಬೆಳಿಗ್ಗೆ ಎದ್ದು ನಿಮ್ಮ ಸಂಗಡ ಮಾತಾಡಿದರೂ ನೀವು ಕೇಳದೆ ಹೋದಿರಿ. ನಾನು ನಿಮ್ಮನ್ನು ಕರೆದರೂ ನೀವು ಉತ್ತರ ಕೊಡದೆ ಹೋದಿರಿ. ಆದಕಾರಣ ನನ್ನ ಹೆಸರಿನಿಂದ ಕರೆ ಯಲ್ಪಟ್ಟಂಥ ನೀವು ನಂಬಿಕೊಂಡಿರುವಂಥ ಈ ಆಲಯಕ್ಕೂ ನಾನು ನಿಮಗೂ ನಿಮ್ಮ ಪಿತೃಗಳಿಗೂ ಕೊಟ್ಟ ಸ್ಥಳಕ್ಕೂ ಶಿಲೋವಿಗೆ ಮಾಡಿದ ಹಾಗೆ ಮಾಡುವೆನು. ನಿಮ್ಮ ಸಹೋದರರೆಲ್ಲರನ್ನೂ ಎಫ್ರಾಯಾಮಿನ ಎಲ್ಲಾ ಸಂತಾನವನ್ನೂ ಹೊರಗೆ ಹಾಕಿದ ಹಾಗೆ ನಿಮ್ಮನ್ನು ನನ್ನ ಸಮ್ಮುಖದಿಂದ ಹೊರಗೆ ಹಾಕುವೆನು.