Ezekiel · chapter 17 · verse 3
Ezekiel 17:3 in Kannada
ಹೇಳತಕ್ಕದ್ದೇನಂದರೆ--ದೇವರಾದ ಕರ್ತನು ಹೀಗೆ ಹೇಳುತ್ತಾನೆ. ದೊಡ್ಡ ರೆಕ್ಕೆಗಳೂ ಉದ್ದವಾದ ರೆಕ್ಕೆಗಳೂ ಉಳ್ಳಂಥ ವಿಧವಿಧವಾದ ಬಣ್ಣ ಬಣ್ಣದ ಪುಕ್ಕಗಳಿಂದ ತುಂಬಿದ್ದಂಥ ಒಂದು ದೊಡ್ಡ ಹದ್ದು ಲೆಬನೋನಿಗೆ ಬಂದು, ದೇವದಾರಿನ ಮರದ ಮೇಲ್ಗಡೆಯ ಕೊಂಬೆಯನ್ನು ಕಿತ್ತುಹಾಕಿತು.
Helatakkaddenandare--devaraada kartanu heege heluttaane. Dodda rekkegaloo uddavaada rekkegaloo ullantha vidhavidhavaada banna bannada pukkagalinda tumbiddantha ondu dodda haddu lebanonige bandu, devadaarina marada melgadeya kombeyannu kittuhaakitu.
Ezekiel 17:3 in English
- King James Version (KJV)
- And say, Thus saith the Lord GOD; A great eagle with great wings, longwinged, full of feathers, which had divers colours, came unto Lebanon, and took the highest branch of the cedar:
- World English Bible (WEB)
- and say, ‘The Lord GOD says: “A great eagle with great wings and long feathers, full of feathers which had various colors, came to Lebanon and took the top of the cedar.
- American Standard Version (ASV)
- and say, Thus saith the Lord Jehovah: A great eagle with great wings and long pinions, full of feathers, which had divers colors, came unto Lebanon, and took the top of the cedar:
- Bible in Basic English (BBE)
- And say, This is what the Lord has said: A great eagle with great wings, full of long feathers of different colours, came to Lebanon, and took the top of the cedar:
- Darby Translation (DBY)
- and say, Thus saith the Lord Jehovah: A great eagle with great wings, long-pinioned, full of feathers, which was of divers colours, came unto Lebanon, and took the highest branch of the cedar.
- Webster's Bible (WBS)
- And say, Thus saith the Lord GOD; A great eagle with great wings, long-winged, full of feathers, which had divers colors, came to Lebanon, and took the highest branch of the cedar:
- Young's Literal Translation (YLT)
- and thou hast said: Thus said the Lord Jehovah: The great eagle, great-winged, long-pinioned, Full of feathers, that hath diverse colours, Hath come in unto Lebanon, And it taketh the foliage of the cedar,
Read in context
- 1ಕರ್ತನ ವಾಕ್ಯವು ನನ್ನ ಕಡೆಗೆ ಬಂದು ಹೇಳಿದ್ದೇನಂದರೆ--
- 2ಮನುಷ್ಯಪುತ್ರನೇ, ಇಸ್ರಾಯೇಲಿನ ಮನೆತನದವರಿಗೆ ಸಾಮ್ಯಗಳನು ಒಗಟಾಗಿ ಹೇಳು.
- 3ಹೇಳತಕ್ಕದ್ದೇನಂದರೆ--ದೇವರಾದ ಕರ್ತನು ಹೀಗೆ ಹೇಳುತ್ತಾನೆ. ದೊಡ್ಡ ರೆಕ್ಕೆಗಳೂ ಉದ್ದವಾದ ರೆಕ್ಕೆಗಳೂ ಉಳ್ಳಂಥ ವಿಧವಿಧವಾದ ಬಣ್ಣ ಬಣ್ಣದ ಪುಕ್ಕಗಳಿಂದ ತುಂಬಿದ್ದಂಥ ಒಂದು ದೊಡ್ಡ ಹದ್ದು ಲೆಬನೋನಿಗೆ ಬಂದು, ದೇವದಾರಿನ ಮರದ ಮೇಲ್ಗಡೆಯ ಕೊಂಬೆಯನ್ನು ಕಿತ್ತುಹಾಕಿತು.
- 4ಅದರ ಚಿಗುರುಗಳ ಕೊನೆಯನ್ನು ಕಿತ್ತು ವ್ಯಾಪಾರದ ದೇಶಕ್ಕೆ ತೆಗೆದುಕೊಂಡು ಹೋಗಿ ವರ್ತಕರಿರುವ ನಗರದಲ್ಲಿ ಇಟ್ಟಿತು.
- 5ಅದು ದೇಶದ ಬೀಜವನ್ನೂ ಸಹ ತೆಗೆದು ಕೊಂಡು ಹೋಗಿ ಫಲವುಳ್ಳ ಹೊಲದಲ್ಲಿ ಇರಿಸಿತು; ಅದು ಹೆಚ್ಚು ನೀರಿರುವ ಸ್ಥಳದಲ್ಲಿ ಅದನ್ನು ನೆಟ್ಟು ನೀರವಂಜಿಯ ಮರದ ಹಾಗೆ ಬೆಳೆಯಿಸಿತು.
Cross references
- Hosea 8:1 ಹೋಶೇಯ 8:1ನಿನ್ನ ಬಾಯಿಗೆ ತುತೂರಿಯನ್ನು ಇಟ್ಟುಕೋ, ಅವರು ನನ್ನ ಒಡಂಬಡಿಕೆಯನ್ನು ವಿಾರಿ ನನ್ನ ನ್ಯಾಯಪ್ರಮಾಣಕ್ಕೆ ವಿರುದ್ಧವಾಗಿ ಅಪರಾಧ ಮಾಡಿದ್ದರಿಂದ ಅವನು ಹದ್ದಿನ ಹಾಗೆ ಕರ್ತನ ಆಲಯಕ್ಕೆ ವಿರುದ್ಧವಾಗಿ ಬರುತ್ತಾನೆ.
- Jeremiah 48:40 ಯೆರೆಮೀಯ 48:40ಕರ್ತನು ಹೀಗೆ ಹೇಳುತ್ತಾನೆ--ಇಗೋ, ಅವನು ಹದ್ದಿನ ಹಾಗೆ ಹಾರಿ ಮೋವಾಬಿನ ಮೇಲೆ ತನ್ನ ರೆಕ್ಕೆಗಳನ್ನು ಚಾಚುವೆನು.
- Ezekiel 17:7 ಯೆಹೆಜ್ಕೇಲನು 17:7ದೊಡ್ಡ ರೆಕ್ಕೆಗಳೂ ಬಹಳ ಗರಿಗಳೂ ಇದ್ದ ಇನ್ನೊಂದು ದೊಡ್ಡ ಹದ್ದು ಇತ್ತು; ಆಗ ಇಗೋ, ಆ ದ್ರಾಕ್ಷೇ ಗಿಡವು ತಾನು ನಾಟಿಕೊಂಡಿದ್ದ ಪಾತಿಯೊಳಗಿಂದ ಅದರ ಕಡೆಗೆ ತನ್ನ ಬೇರುಗಳನ್ನು ತಿರುಗಿಸಿ ತನ್ನ ರೆಂಬೆಗಳನ್ನು ಚಾಚಿ ಅದರ ಮೂಲಕ ನೀರನ್ನು ಹಾಯಿಸುತ್ತಿತ್ತು.
- Daniel 4:22 ದಾನಿಯೇಲನು 4:22ಓ ಅರಸನೇ, ಆ ಮರವು ನೀನೇ ಆಗಿರುವಿ, ನೀನು ಬೆಳೆದು ಬಲವಾಗಿರುವಿ; ಹೌದು, ನಿನ್ನ ಮಹತ್ತು ಬೆಳೆದು ಆಕಾಶಕ್ಕೂ ನಿನ್ನ ಅಧಿಕಾರವು ಭೂಮಿಯ ಅಂತ್ಯದ ವರೆಗೂ ಮುಟ್ಟುವದು.
- Jeremiah 49:16 ಯೆರೆಮೀಯ 49:16ಬಂಡೆಯ ಬಿರುಕು ಗಳಲ್ಲಿ ವಾಸಮಾಡುವವನೇ ಗುಡ್ಡದ ಕೊನೆಯನ್ನು ಹಿಡಿಯುವವನೇ, ನಿನ್ನ ಭಯಂಕರತ್ವವೂ ಹೃದಯದ ಗರ್ವವೂ ನಿನ್ನನ್ನು ಮೋಸಗೊಳಿಸಿದವು; ನೀನು ಹದ್ದಿನಂತೆ ನಿನ್ನ ಗೂಡನ್ನು ಎತ್ತರ ಮಾಡಿದರೂ ಅಲ್ಲಿಂದ ನಿನ್ನನ್ನು ಇಳಿಸುತ್ತೇನೆಂದು ಕರ್ತನು ಅನ್ನುತ್ತಾನೆ.
- 2 Chronicles 36:9–10 2 ಪೂರ್ವಕಾಲವೃತ್ತಾಂತ 36:9–10ಯೆಹೋಯಾಕೀನನು ಆಳಲು ಆರಂಭಿಸಿದಾಗ ಹದಿನೆಂಟು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಮೂರು ತಿಂಗಳು ಹತ್ತು ದಿವಸ ಆಳಿದನು. ಅವನು ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿದನು. ಆದರೆ ಒಂದು ವರುಷವು ತೀರಿದ ಮೇಲೆ ಅರಸನಾದ ನೆಬೂಕದ್ನೆಚ್ಚರನು ಜನರನ್ನು ಕಳುಹಿಸಿ ಅವನನ್ನೂ ಕರ್ತನ ಆಲಯದ ಬೆಲೆಯುಳ್ಳ ಪಾತ್ರೆಗಳನ್ನೂ ಬಾಬೆ ಲಿಗೆ ತಕ್ಕೊಂಡು ತರಿಸಿಕೊಂಡು ಅವನ ಸಹೋದರ ನಾದ ಚಿದ್ಕೀಯನನ್ನು ಯೆಹೂದ ಯೆರೂಸಲೇಮಿನ ಮೇಲೆ ಅರಸನಾಗಿ ಮಾಡಿದನು.
- Ezekiel 17:12–21 ಯೆಹೆಜ್ಕೇಲನು 17:12–21ಇದರ ಅಭಿಪ್ರಾಯ ನಿಮಗೆ ತಿಳಿಯುವದಿಲ್ಲವೋ? ಅವರಿಗೆ ಎದುರು ಬೀಳುವ ಮನೆಯವರಿಗೆ ಹೀಗೆ ಹೇಳು--ಇಗೋ, ಬಾಬೆಲಿನ ಅರಸನು ಯೆರೂಸಲೇಮಿಗೆ ಬಂದು ಅದರ ಅರಸ ನನ್ನೂ ಅದರ ಪ್ರಧಾನರನ್ನೂ ಕರೆದುಕೊಂಡು ತನ್ನ ಬಳಿಗೆ ಬಾಬೆಲಿಗೆ ಒಯ್ದಿದ್ದಾನೆ. ಅರಸನ ಸಂತಾನ ದವರನ್ನು ಕರೆದುಕೊಂಡು ಅವನ ಸಂಗಡ ಒಡಂಬಡಿಕೆ ಮಾಡಿ ಅವನಿಂದ ಪ್ರಮಾಣಮಾಡಿಸಿ ದೇಶದ ಬಲಿಷ್ಠರನ್ನು ತೆಗೆದುಕೊಂಡು ಹೋಗಿದ್ದಾನೆ. ಆ ರಾಜ್ಯವು ತಗ್ಗಾಗಿ ಮೇಲೇಳದ ಹಾಗಿದ್ದರೂ ಅವನು ಒಡಂಬಡಿಕೆಯನ್ನು ಕೈಕೊಳ್ಳುವದರಿಂದ ಅದು ನಿಲ್ಲುವದು. ಆದರೆ ಇವನು ಅವನಿಗೆ ವಿರುದ್ಧವಾಗಿ ತಿರುಗಿಬಿದ್ದು ತನ್ನ ರಾಯಭಾರಿಗಳನ್ನು ಐಗುಪ್ತಕ್ಕೆ ಕಳು ಹಿಸಿ ತನಗೆ ಕುದುರೆಗಳನ್ನೂ ಬಹಳ ಜನರನ್ನೂ ಕೊಡ ಬೇಕೆಂದು ಹೇಳಿ ಕಳುಹಿಸಿದನು. ಇವನು ಅಭಿವೃದ್ಧಿ ಯಾಗುವನೋ? ಇಂಥಾ ಸಂಗತಿಗಳನ್ನು ಮಾಡುವ ವನು ತಪ್ಪಿಸಿಕೊಳ್ಳುವನೋ? ಅಥವಾ ಒಡಂಬಡಿಕೆ ಯನ್ನು ಮುರಿದು ತಪ್ಪಿಸಿಕೊಳ್ಳಲಾಗುವದೋ? ನಿಶ್ಚ ಯವಾಗಿ ಅವನಿಗೆ ಅರಸುತನವನ್ನು ಕೊಟ್ಟ ಅರಸನೂ ಅಂದರೆ ಯಾವನ ಪ್ರಮಾಣವನ್ನು ತಿರಸ್ಕರಿಸಿದನೋ ಯಾವನ ಒಡಂಬಡಿಕೆಯನ್ನು ವಿಾರಿದನೋ ಅವನು ಇರುವಲ್ಲಿಯೇ ಬಾಬೆಲಿನ ಮಧ್ಯದಲ್ಲಿ ನನ್ನ ಜೀವದಾಣೆ, ಇವನು ಸಾಯುವನು ಎಂದು ದೇವರಾದ ಕರ್ತನು ಹೇಳುತ್ತಾನೆ. ಇಲ್ಲವೆ ಫರೋಹನೂ ಅವನ ಮಹಾ ಸೈನ್ಯವೂ ದೊಡ್ಡ ಪರಿವಾರವೂ ಬಂದು ಬಹಳ ಜನ ರನ್ನು ಕೊಲ್ಲುವದಕ್ಕೆ ದಿಬ್ಬಗಳನ್ನು ಕೋಟೆಗಳನ್ನೂ ಕಟ್ಟುವಾಗಲೂ ಅವನಿಗೆ ಯುದ್ಧದಲ್ಲಿ ಸಹಾಯ ಮಾಡುವದಿಲ್ಲ. ಅವನು ಪ್ರಮಾಣವನ್ನು ತಿರಸ್ಕರಿಸಿ ಕೈಕೊಟ್ಟಾಗ್ಯೂ; ಇಗೋ, ಒಡಂಬಡಿಕೆಯನ್ನು ವಿಾರಿ ಇವುಗಳನ್ನೆಲ್ಲಾ ಮಾಡಿದ್ದ ರಿಂದ ತಪ್ಪಿಸಿಕೊಳ್ಳುವದಿಲ್ಲ. ಆದದರಿಂದ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಅವನು ತಿರಸ್ಕರಿಸಿದ ನನ್ನ ಪ್ರಮಾಣವನ್ನೂ ಅವನು ವಿಾರಿದ ಒಡಂಬಡಿಕೆಯನ್ನೂ ನನ್ನ ಜೀವ ದಾಣೆ ನಿಶ್ಚಯವಾಗಿ ಅವನ ತಲೆಯ ಮೇಲೆಯೇ ಮುಯ್ಯಿ ತೀರಿಸುವೆನು. ನಾನು ಅವನ ಮೇಲೆ ನನ್ನ ಬಲೆಯನ್ನು ಬೀಸುತ್ತೇನೆ; ಆಗ ಅವನು ನನ್ನ ಉರ್ಲಿನಲ್ಲಿ ಸಿಕ್ಕಿಬೀಳುವನು; ನಾನು ಅವನನ್ನು ಬಾಬೆಲಿಗೆ ಒಯ್ದು ಅವನು ನನಗೆ ವಿರೋಧವಾಗಿ ಮಾಡಿರುವ ಅಪರಾಧದ ವಿಷಯದಲ್ಲಿ ನಾನು ಅವರೊಂದಿಗೆ ವಾದಿಸುವೆನು. ಅವನ ಸೈನ್ಯಗಳೆಲ್ಲಾ ಚದರಿಸಲ್ಪಟ್ಟು ಓಡಿಹೋಗಿ ಅವನ ಸಂಗಡ ಕತ್ತಿಯಿಂದ ಬೀಳುವರು; ಉಳಿದವರು ಎಲ್ಲಾ ದಿಕ್ಕುಗಳಿಗೆ ಚದರಿಸ ಲ್ಪಡುವರು; ಆಗ ಕರ್ತನಾದ ನಾನೇ ಅದನ್ನು ಹೇಳಿ ದೆನೆಂದು ನಿಮಗೆ ತಿಳಿಯುವದು.
- 2 Kings 24:10–16 2 ಅರಸುಗಳು 24:10–16ಆ ಕಾಲದಲ್ಲಿ ಬಾಬೆಲಿನ ಅರಸನಾದ ನೆಬೂಕ ದ್ನೆಚರನ ಸೇವಕರು ಯೆರೂಸಲೇಮಿಗೆ ವಿರೋಧವಾಗಿ ಬಂದಾಗ ಆ ಪಟ್ಟಣವು ಮುತ್ತಿಗೆ ಹಾಕಲ್ಪಟ್ಟಿತು. ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಪಟ್ಟಣಕ್ಕೆ ವಿರೋಧವಾಗಿ ಬಂದನು; ಅವನ ಸೇವಕರು ಅದನ್ನು ಮುತ್ತಿಗೆ ಹಾಕಿದರು. ಆಗ ಯೆಹೂದದ ಅರಸನಾದ ಯೆಹೋಯಾಖೀನನೂ ಅವನ ತಾಯಿಯೂ ಸೇವ ಕರೂ ಪ್ರಧಾನರೂ ಕಂಚುಕಿಯರೂ ಅಧಿಕಾರಿಗಳ ಸಹಿತವಾಗಿ ಬಾಬೆಲಿನ ಅರಸನ ಬಳಿಗೆ ಹೋದರು. ಬಾಬೆಲಿನ ಅರಸನು ತನ್ನ ಆಳಿಕೆಯ ಎಂಟನೇ ವರುಷ ದಲ್ಲಿ ಅವನನ್ನು ಸೆರೆಹಿಡಿದನು. ಕರ್ತನು ಹೇಳಿದ ಪ್ರಕಾರವೇ ಅವನು ಅಲ್ಲಿಂದ ಕರ್ತನ ಮನೆಯ ಎಲ್ಲಾ ಬೊಕ್ಕಸಗಳನ್ನೂ ಅರಮನೆಯ ಬೊಕ್ಕಸಗಳನ್ನೂ ಇಸ್ರಾಯೇಲಿನ ಅರಸನಾದ ಸೊಲೊಮೋನನು ಕರ್ತನ ಮನೆಯಲ್ಲಿ ಮಾಡಿದ ಬಂಗಾರದ ಎಲ್ಲಾ ಪಾತ್ರೆಗಳನ್ನೂ ತುಂಡು ತುಂಡಾಗಿ ಕತ್ತರಿಸಿಬಿಟ್ಟನು. ಅವನು ಯೆರೂಸಲೇಮಿನವರೆಲ್ಲರನ್ನೂ ಎಲ್ಲಾ ಪ್ರಧಾನರನ್ನೂ ಎಲ್ಲಾ ಸ್ಥಿತಿಯುಳ್ಳ ಪರಾಕ್ರಮಶಾಲಿ ಗಳನ್ನೂ ಹತ್ತು ಸಾವಿರ ಸೆರೆಯವರನ್ನೂ ಮತ್ತು ಎಲ್ಲಾ ಕೌಶಲ್ಯಗಾರರನ್ನೂ ಕಮ್ಮಾರರನ್ನೂ ಅಲ್ಲಿಂದ ಒಯ್ದನು; ದೇಶದ ಬಡವರ ಹೊರತು ಉಳಿದವರು ಯಾರೂ ಅಲ್ಲಿ ಇರಲಿಲ್ಲ. ಯೆಹೋಯಾಖೀನನನ್ನು ಬಾಬೆ ಲಿಗೆ ಒಯ್ದನು; ಅವನು ಅರಸನ ತಾಯಿಯನ್ನೂ ಅರಸನ ಹೆಂಡತಿಯರನ್ನೂ ಅವನ ಅಧಿಕಾರಿಗಳನ್ನೂ ದೇಶದ ಬಲಶಾಲಿಗಳನ್ನೂ ಯೆರೂಸಲೇಮಿನಿಂದ ಬಾಬೆಲಿಗೆ ಸೆರೆಯಾಗಿ ಒಯ್ದನು. ಬಾಬೆಲಿನ ಅರಸನು ಎಲ್ಲಾ ಸ್ಥಿತಿವಂತರಾದ ಏಳುಸಾವಿರ ಜನರನ್ನೂ ಕೌಶಲ್ಯಗಾರರೂ ಮತ್ತು ಕಮ್ಮಾರರೂ ಆದ ಸಾವಿರ ಜನರನ್ನೂ ಬಲವುಳ್ಳ ಯುದ್ಧ ಮಾಡತಕ್ಕವರೆಲ್ಲರನ್ನೂ ಬಾಬೆಲಿಗೆ ಸೆರೆಯಾಗಿ ಒಯ್ದನು.
- Jeremiah 4:13 ಯೆರೆಮೀಯ 4:13ಇಗೋ, ಮೇಘಗಳ ಹಾಗೆ ಏರಿ ಬರುವನು; ಆತನ ರಥಗಳು ಬಿರುಗಾಳಿಯ ಹಾಗೆ ಇರುವವು, ಆತನ ಕುದುರೆಗಳು ಹದ್ದುಗಳಿಗಿಂತ ತೀವ್ರವಾಗಿವೆ. ನಮಗೆ ಅಯ್ಯೋ, ಹಾಳಾದೆವು.
- Matthew 24:28 ಮತ್ತಾಯನು 24:28ಯಾಕಂದರೆ ಹೆಣ ಇದ್ದಲ್ಲಿ ಹದ್ದುಗಳು ಕೂಡಿಕೊಳ್ಳುವವು.
- Jeremiah 24:1 ಯೆರೆಮೀಯ 24:1ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಯೆಹೂದದ ಅರಸನಾದ ಯೆಹೋಯಾ ಕೀಮನ ಮಗನಾದ ಯೆಕೊನ್ಯನನ್ನೂ ಯೆಹೂದದ ಪ್ರಧಾನರನ್ನೂ ಬಡಗಿಯವರನ್ನೂ ಕಮ್ಮಾರರನೂ ಯೆರೂಸಲೇಮಿನಿಂದ ಸೆರೆಗೆ ಒಯ್ದು ಬಾಬೆಲಿಗೆ ತಕ್ಕೊಂಡುಹೋದ ಮೇಲೆ ಕರ್ತನು ನನಗೆ ತೋರಿಸ ಲಾಗಿ, ಅಗೋ, ಎರಡು ಪುಟ್ಟಿ ಅಂಜೂರದ ಹಣ್ಣುಗಳು ಕರ್ತನ ದೇವಾಲಯದ ಮುಂದೆ ಇದ್ದವು.
- Daniel 2:38 ದಾನಿಯೇಲನು 2:38ಮನುಷ್ಯರ ಮಕ್ಕಳು, ಭೂಮಿಯ ಮೃಗಗಳೂ ಆಕಾಶದ ಪಕ್ಷಿಗಳೂ ವಾಸಿಸುವಂತಾದ್ದೆಲ್ಲವನ್ನೂ ನಿನ್ನ ಕೈಯಲ್ಲಿ ಕೊಟ್ಟು ಅವೆಲ್ಲವುಗಳನ್ನು ಆಳುವಂತೆ ನಿನ್ನನ್ನು ಮಾಡಿದ್ದಾನೆ. ಆ ಬಂಗಾರದ ತಲೆಯು ನೀನೇ.
Original words (Hebrew)
- say · H559אָמַר ʼâmar
- saith · H559אָמַר ʼâmar
- Lord · H136אֲדֹנָי ʼĂdônây
- great · H1419גָּדוֹל gâdôwl
- eagle · H5404נֶשֶׁר nesher
- great · H1419גָּדוֹל gâdôwl
- wings · H3671כָּנָף kânâph
- longwinged · H83אֵבֶר ʼêber
- full · H4392מָלֵא mâlêʼ
- feathers · H5133נוֹצָה nôwtsâh
- colours · H7553רִקְמָה riqmâh
- came · H935בּוֹא bôwʼ
- Lebanon · H3844לְבָנוֹן Lᵉbânôwn
- took · H3947לָקַח lâqach
- branch · H6788צַמֶּרֶת tsammereth
- cedar · H730אֶרֶז ʼerez