Ezekiel · chapter 17 · verse 5
Ezekiel 17:5 in Kannada
ಅದು ದೇಶದ ಬೀಜವನ್ನೂ ಸಹ ತೆಗೆದು ಕೊಂಡು ಹೋಗಿ ಫಲವುಳ್ಳ ಹೊಲದಲ್ಲಿ ಇರಿಸಿತು; ಅದು ಹೆಚ್ಚು ನೀರಿರುವ ಸ್ಥಳದಲ್ಲಿ ಅದನ್ನು ನೆಟ್ಟು ನೀರವಂಜಿಯ ಮರದ ಹಾಗೆ ಬೆಳೆಯಿಸಿತು.
Adu deshada beejavannoo saha tegedu kondu hogi phalavulla holadalli irisitu; adu hechchu neeriruva sthaladalli adannu nettu neeravanjiya marada haage beleyisitu.
Ezekiel 17:5 in English
- King James Version (KJV)
- He took also of the seed of the land, and planted it in a fruitful field; he placed [it] by great waters, [and] set it [as] a willow tree.
- World English Bible (WEB)
- “‘“He also took some of the seed of the land and planted it in fruitful soil. He placed it beside many waters. He set it as a willow tree.
- American Standard Version (ASV)
- He took also of the seed of the land, and planted it in a fruitful soil; he placed it beside many waters; he set it as a willow-tree.
- Bible in Basic English (BBE)
- And he took some of the seed of the land, planting it in fertile earth, placing it by great waters; he put it in like a willow-tree.
- Darby Translation (DBY)
- And he took of the seed of the land, and planted it in a fruitful field; he placed it by great waters, he set it as a willow tree.
- Webster's Bible (WBS)
- He took also of the seed of the land, and planted it in a fruitful field; he placed [it] by great waters, [and] set it [as] a willow tree.
- Young's Literal Translation (YLT)
- And it taketh of the seed of the land, And doth put it in a field of seed, To take by many waters, In a conspicuous place it hath set it.
Read in context
- 3ಹೇಳತಕ್ಕದ್ದೇನಂದರೆ--ದೇವರಾದ ಕರ್ತನು ಹೀಗೆ ಹೇಳುತ್ತಾನೆ. ದೊಡ್ಡ ರೆಕ್ಕೆಗಳೂ ಉದ್ದವಾದ ರೆಕ್ಕೆಗಳೂ ಉಳ್ಳಂಥ ವಿಧವಿಧವಾದ ಬಣ್ಣ ಬಣ್ಣದ ಪುಕ್ಕಗಳಿಂದ ತುಂಬಿದ್ದಂಥ ಒಂದು ದೊಡ್ಡ ಹದ್ದು ಲೆಬನೋನಿಗೆ ಬಂದು, ದೇವದಾರಿನ ಮರದ ಮೇಲ್ಗಡೆಯ ಕೊಂಬೆಯನ್ನು ಕಿತ್ತುಹಾಕಿತು.
- 4ಅದರ ಚಿಗುರುಗಳ ಕೊನೆಯನ್ನು ಕಿತ್ತು ವ್ಯಾಪಾರದ ದೇಶಕ್ಕೆ ತೆಗೆದುಕೊಂಡು ಹೋಗಿ ವರ್ತಕರಿರುವ ನಗರದಲ್ಲಿ ಇಟ್ಟಿತು.
- 5ಅದು ದೇಶದ ಬೀಜವನ್ನೂ ಸಹ ತೆಗೆದು ಕೊಂಡು ಹೋಗಿ ಫಲವುಳ್ಳ ಹೊಲದಲ್ಲಿ ಇರಿಸಿತು; ಅದು ಹೆಚ್ಚು ನೀರಿರುವ ಸ್ಥಳದಲ್ಲಿ ಅದನ್ನು ನೆಟ್ಟು ನೀರವಂಜಿಯ ಮರದ ಹಾಗೆ ಬೆಳೆಯಿಸಿತು.
- 6ಅದು ಮೊಳೆತು ತಗ್ಗಾದ ಪ್ರಮಾಣದಲ್ಲಿ ಹಬ್ಬುವ ದ್ರಾಕ್ಷೇ ಗಿಡವಾಯಿತು; ಅದರ ಬಳ್ಳಿಗಳು ಅದರ ಕಡೆಗೆ ತಿರುಗಿ ಕೊಂಡವು, ಅದರ ಬೇರುಗಳು ಅದರ ಕೆಳಗಿದ್ದವು; ಹೀಗೆ ಅದು ದ್ರಾಕ್ಷೇ ಗಿಡವಾಯಿತು, ಕೊಂಬೆಗಳು ಒಡೆದು ಬಳ್ಳಿಗಳು ಹಬ್ಬಿದವು.
- 7ದೊಡ್ಡ ರೆಕ್ಕೆಗಳೂ ಬಹಳ ಗರಿಗಳೂ ಇದ್ದ ಇನ್ನೊಂದು ದೊಡ್ಡ ಹದ್ದು ಇತ್ತು; ಆಗ ಇಗೋ, ಆ ದ್ರಾಕ್ಷೇ ಗಿಡವು ತಾನು ನಾಟಿಕೊಂಡಿದ್ದ ಪಾತಿಯೊಳಗಿಂದ ಅದರ ಕಡೆಗೆ ತನ್ನ ಬೇರುಗಳನ್ನು ತಿರುಗಿಸಿ ತನ್ನ ರೆಂಬೆಗಳನ್ನು ಚಾಚಿ ಅದರ ಮೂಲಕ ನೀರನ್ನು ಹಾಯಿಸುತ್ತಿತ್ತು.
Cross references
- Deuteronomy 8:7–9 ಧರ್ಮೋಪದೇಶಕಾಂಡ 8:7–9ನಿನ್ನ ದೇವರಾದ ಕರ್ತನು ನಿನ್ನನ್ನು ಉತ್ತಮ ದೇಶಕ್ಕೆ ಬರಮಾಡುತ್ತಾನೆ; ಅದು ನೀರಿನ ಹಳ್ಳಗಳೂ ತಗ್ಗಿನಲ್ಲಿಯೂ ಬೆಟ್ಟದಲ್ಲಿಯೂ ಉಕ್ಕುವ ಬುಗ್ಗೆಗಳುಳ್ಳ ದೇಶವೇ. ಗೋಧಿಯೂ ಜವೆಗೋಧಿಯೂ ದ್ರಾಕ್ಷೆಯೂ ಅಂಜೂರ ಮರಗಳೂ ದಾಳಿಂಬರಗಳೂ ಇರುವ ದೇಶವೇ; ಅದು ಹಿಪ್ಪೇ ಎಣ್ಣೆಯೂ ಜೇನೂ ಉಳ್ಳದೇಶವೇ. ನೀನು ಕೊರತೆಯಿಲ್ಲದೆ ರೊಟ್ಟಿ ತಿನ್ನುವ ಆ ದೇಶದಲ್ಲಿ ಯಾವದರ ಕೊರತೆ ನಿನಗೆ ಆಗದು; ಅದರ ಕಲ್ಲುಗಳು ಕಬ್ಬಿಣವಾಗಿಯೂ ಅದರ ಬೆಟ್ಟ ಗಳೊಳಗಿಂದ ತಾಮ್ರವನ್ನು ಅಗಿಯಬಹುದಾದದ್ದೂ ಆಗಿರುವ ದೇಶ.
- Isaiah 44:4 ಯೆಶಾಯ 44:4ನೀರಿನ ಕಾಲುವೆಗಳ ಬಳಿಯಲ್ಲಿ ಹಸಿರು ಹುಲ್ಲಿನ ನಡುವೆ ಬೆಳೆಯುವ ನೀರವಂಜಿಗಳಂತೆ ವೃದ್ಧಿ ಯಾಗುವರು.
- Ezekiel 19:11–12 ಯೆಹೆಜ್ಕೇಲನು 19:11–12ಆಳುವವರ ರಾಜದಂಡ ಗಳಿಗೆ ತಕ್ಕ ಬಲವುಳ್ಳ ಬಳ್ಳಿಗಳು ಅದರಲ್ಲಿವೆ; ಅದರ ಉದ್ದವು ಎಲ್ಲಾ ರೆಂಬೆಗಳಿಗಿಂತ ಹೆಚ್ಚಾಗಿವೆ; ಹಾಗೆಯೇ ಅದು ತನ್ನ ಎತ್ತರಕ್ಕೆ ಬಹು ಕೊಂಬೆಗಳ ಮಧ್ಯದಲ್ಲಿ ಉದ್ದವಾಗಿ ಕಾಣಬರುತ್ತಿದೆ. ಆದರೆ ಅದು ರೋಷ ದಲ್ಲಿ ಕೀಳಲ್ಪಟ್ಟು ನೆಲಕ್ಕೆ ಹಾಕಲ್ಪಟ್ಟಿತು; ಮೂಡಣ ಗಾಳಿಯು ಅದರ ಫಲವನ್ನು ಒಣಗಿಸಿತು; ಬಲವಾದ ಬಳ್ಳಿಗಳು ಮುರಿಯಲ್ಪಟ್ಟು ಒಣಗಿ ಹೋದವು; ಬೆಂಕಿಯು ಅವುಗಳನ್ನು ಸುಟ್ಟುಹಾಕಿತು.
- 2 Kings 24:17 2 ಅರಸುಗಳು 24:17ಬಾಬೆಲಿನ ಅರ ಸನು ಯೆಹೋಯಾಖೀನನ ಚಿಕ್ಕಪ್ಪನಾದ ಮತ್ತನ್ಯ ನನ್ನು ಅವನಿಗೆ ಬದಲಾಗಿ ಅರಸನನ್ನಾಗಿ ಮಾಡಿ ಅವನಿಗೆ ಚಿದ್ಕೀಯ ಎಂಬ ಹೆಸರನ್ನಿಟ್ಟನು.
- Jeremiah 37:1 ಯೆರೆಮೀಯ 37:1ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಯೆಹೂದ ದೇಶದಲ್ಲಿ ಅರಸನಾಗಿ ಇಟ್ಟ ಯೆಹೋಯಾಕೀಮನ ಮಗನಾದ ಕೊನ್ಯನಿಗೆ ಬದ ಲಾಗಿ ಯೋಷೀಯನ ಮಗನಾದ ಚಿದ್ಕೀಯನು ಅರಸ ನಾಗಿ ಆಳಿದನು.
- Ezekiel 17:13 ಯೆಹೆಜ್ಕೇಲನು 17:13ಅರಸನ ಸಂತಾನ ದವರನ್ನು ಕರೆದುಕೊಂಡು ಅವನ ಸಂಗಡ ಒಡಂಬಡಿಕೆ ಮಾಡಿ ಅವನಿಂದ ಪ್ರಮಾಣಮಾಡಿಸಿ ದೇಶದ ಬಲಿಷ್ಠರನ್ನು ತೆಗೆದುಕೊಂಡು ಹೋಗಿದ್ದಾನೆ.
- Isaiah 15:7 ಯೆಶಾಯ 15:7ಆದಕಾರಣ ತಾವು ಸಂಪಾದಿಸಿದ ಆಸ್ತಿಯನ್ನೂ ಕೂಡಿಸಿಟ್ಟ ಸೊತ್ತನ್ನೂ ನೀರವಂಜಿಯ ಹೊಳೆಯ ಆಚೆಗೆ ಹೊತ್ತುಕೊಂಡು ಹೋಗುತ್ತಾರೆ.