Ezekiel · chapter 18 · verse 13
Ezekiel 18:13 in Kannada
ಬಡ್ಡಿಗೆ ಕೊಟ್ಟು ಲಾಭ ತೆಗೆದುಕೊಂಡು ಅವನು ಬದುಕುವನೋ? ಅವನು ಬದುಕುವದಿಲ್ಲ, ಅವನು ಈ ಅಸಹ್ಯಗಳನ್ನೆಲ್ಲಾ ಮಾಡಿ ದ್ದಾನೆ; ಅವನು ನಿಶ್ಚಯವಾಗಿ ಸಾಯುವನು ಅವನ ರಕ್ತವು ಅವನ ಮೇಲೆಯೇ ಇರುವದು.
Baddige kottu laabha tegedukondu avanu badukuvano? Avanu badukuvadilla, avanu ee asahyagalannellaa maadi ddaane; avanu nishchayavaagi saayuvanu avana raktavu avana meleye iruvadu.
Ezekiel 18:13 in English
- King James Version (KJV)
- Hath given forth upon usury, and hath taken increase: shall he then live? he shall not live: he hath done all these abominations; he shall surely die; his blood shall be upon him.
- World English Bible (WEB)
- has lent with interest, and has taken increase from the poor, shall he then live? He shall not live. He has done all these abominations. He shall surely die. His blood will be on him.
- American Standard Version (ASV)
- hath given forth upon interest, and hath taken increase; shall he then live? he shall not live: he hath done all these abominations; he shall surely die; his blood shall be upon him.
- Bible in Basic English (BBE)
- And has given out his money at interest and taken great profits: he will certainly not go on living: he has done all these disgusting things: death will certainly be his fate; his blood will be on him.
- Darby Translation (DBY)
- given forth upon usury, and taken increase; shall he then live? He shall not live: he hath done all these abominations; he shall certainly die; his blood shall be upon him.
- Webster's Bible (WBS)
- Hath given forth upon interest, and hath taken increase: shall he then live? he shall not live: he hath done all these abominations; he shall surely die; his blood shall be upon him.
- Young's Literal Translation (YLT)
- In usury he hath given, and increase taken, And he liveth: he doth not live, All these abominations he hath done, He doth surely die, his blood is on him.
Read in context
- 11ಅಂತಹ ಕೆಲಸಗಳನ್ನು ಮಾಡಿದರೂ ಪರ್ವತಗಳ ಮೇಲೆ ತಿಂದು ತನ್ನ ನೆರೆಯವನ ಹೆಂಡತಿಯನ್ನು ಕೆಡಿಸಿ,
- 12ಬಡವರನ್ನೂ ದರಿದ್ರರನ್ನೂ ಉಪದ್ರಗೊಳಿಸಿ, ಹಿಂಸಿಸಿ, ಸುಲಿಗೆ ಮಾಡಿ ಒತ್ತೆಗಳನ್ನು ಹಿಂದಕ್ಕೆ ಕೊಡದೆ, ವಿಗ್ರಹಗಳ ಕಡೆಗೆ ತನ್ನ ಕಣ್ಣುಗಳನ್ನು ಎತ್ತಿ ಅಸಹ್ಯ ವಾದವುಗಳನ್ನು ಮಾಡಿ;
- 13ಬಡ್ಡಿಗೆ ಕೊಟ್ಟು ಲಾಭ ತೆಗೆದುಕೊಂಡು ಅವನು ಬದುಕುವನೋ? ಅವನು ಬದುಕುವದಿಲ್ಲ, ಅವನು ಈ ಅಸಹ್ಯಗಳನ್ನೆಲ್ಲಾ ಮಾಡಿ ದ್ದಾನೆ; ಅವನು ನಿಶ್ಚಯವಾಗಿ ಸಾಯುವನು ಅವನ ರಕ್ತವು ಅವನ ಮೇಲೆಯೇ ಇರುವದು.
- 14ಆಗ ಇಗೋ, ಅವನು ಮಗನನ್ನು ಪಡೆದ ಮೇಲೆ ತನ್ನ ತಂದೆ ಮಾಡಿದ ಪಾಪಗಳನ್ನೆಲ್ಲಾ ನೋಡಿ ಆಲೊಚಿಸಿ, ಅವುಗಳಂತೆ ಮಾಡದೆ;
- 15ಪರ್ವತಗಳ ಮೇಲೆ ತಿನ್ನದೆ, ಇಸ್ರಾಯೇಲಿನ ಮನೆತನ ದವರ ವಿಗ್ರಹಗಳ ಕಡೆಗೆ ತನ್ನ ಕಣ್ಣುಗಳನ್ನು ಎತ್ತದೆ, ತನ್ನ ನೆರೆಯವನ ಹೆಂಡತಿಯನ್ನು ಕೆಡಿಸದೆ,
Cross references
- Exodus 22:25 ವಿಮೋಚನಕಾಂಡ 22:25ನಿನ್ನ ಬಳಿಯಲ್ಲಿ ಬಡವರಾಗಿರುವ ನನ್ನ ಜನರಿಗೆ ಹಣವನ್ನು ಸಾಲವಾಗಿ ಕೊಟ್ಟರೆ ಅವರಿಂದ ಬಡ್ಡಿ ತಕ್ಕೊಳ್ಳಬಾರದು. ಇಲ್ಲವೆ ಅವರ ಮೇಲೆ ಬಡ್ಡಿ ಹೊರಿಸ ಬೇಡ.
- Ezekiel 18:8 ಯೆಹೆಜ್ಕೇಲನು 18:8ಬಡ್ಡಿಗೆ ಸಾಲ ಕೊಡದೆ, ಲಾಭವನ್ನು ತೆಗೆದುಕೊಳ್ಳದೆ, ಅನ್ಯಾಯ ದಿಂದ ತನ್ನ ಕೈಯನ್ನು ಹಿಂತೆಗೆದು ಒಬ್ಬರಿಗೊಬ್ಬರು ಸತ್ಯದ ನ್ಯಾಯವನ್ನು ನಡಿಸಿ,
- Leviticus 20:9 ಯಾಜಕಕಾಂಡ 20:9ತನ್ನ ತಂದೆಯನ್ನಾಗಲಿ ತಾಯಿಯನ್ನಾಗಲಿ ಶಪಿಸುವ ವನಿಗೆ ನಿಶ್ಚಯವಾಗಿ ಮರಣದಂಡನೆ ವಿಧಿಸಬೇಕು; ಯಾವನು ತನ್ನ ತಂದೆಯನ್ನಾಗಲಿ ತಾಯಿಯನ್ನಾಗಲಿ ಶಪಿಸುವನೋ ಅವನ ರಕ್ತವು ಅವನ ಮೇಲೆಯೇ ಇರುವದು.
- Acts 18:6 ಅಪೊಸ್ತಲರ ಕೃತ್ಯಗಳು 18:6ಅವರು ಎದುರಿಸಿ ದೇವದೂಷಣೆ ಮಾಡಲಾಗಿ ಅವನು ತನ್ನ ವಸ್ತ್ರವನ್ನು ಝಾಡಿಸಿ ಅವರಿಗೆ--ನಿಮ್ಮ ರಕ್ತವು ನಿಮ್ಮ ತಲೆಗಳ ಮೇಲೆ ಇರಲಿ; ನಾನು ಇಂದಿನಿಂದ ದೋಷರಹಿತನಾಗಿ ಅನ್ಯಜನರ ಬಳಿಗೆ ಹೋಗುತ್ತೇನೆ ಎಂದು ಹೇಳಿ
- Ezekiel 18:17 ಯೆಹೆಜ್ಕೇಲನು 18:17ಬಡವನ ಮೇಲೆ ಕೈಮಾಡದೆ, ಬಡ್ಡಿಯನ್ನೂ ಲಾಭವನ್ನು ತೆಗೆದುಕೊಳ್ಳದೆ, ನನ್ನ ನ್ಯಾಯ ಗಳನ್ನು ಮಾಡಿ ನಿಯಮಗಳಲ್ಲಿ ನಡೆದರೆ, ಅವನು ತನ್ನ ತಂದೆಯ ಅಕ್ರಮಗಳ ನಿಮಿತ್ತ ಸಾಯುವದಿಲ್ಲ ನಿಶ್ಚಯವಾಗಿ ಬದುಕುವನು.
- Leviticus 20:27 ಯಾಜಕಕಾಂಡ 20:27ಮನುಷ್ಯನಾಗಲಿ ಸ್ತ್ರೀಯಾಗಲಿ ಮಂತ್ರವಾದಿ ಇಲ್ಲವೆ ಮಾಟಗಾರರಾಗಿರುವದಾಗಿದ್ದರೆ ಅವರನ್ನು ನಿಶ್ಚಯವಾಗಿ ಕಲ್ಲೆಸೆದು ಕೊಲ್ಲಬೇಕು; ಅವರ ರಕ್ತವು ಅವರ ಮೇಲೆ ಇರುವದು.
- Ezekiel 18:24 ಯೆಹೆಜ್ಕೇಲನು 18:24ಆದರೆ ನೀತಿ ವಂತನು ತನ್ನ ನೀತಿಯನ್ನು ಬಿಟ್ಟು ಅನ್ಯಾಯ ಮಾಡಿ ದುಷ್ಟನು ಮಾಡುವ ಎಲ್ಲಾ ಅಸಹ್ಯವಾದವುಗಳ ಹಾಗೆ ಮಾಡಿದರೆ ಅವನು ಬದುಕುವನೇ? ಅವನು ಮಾಡಿ ರುವ ಎಲ್ಲಾ ನೀತಿಯು ಜ್ಞಾಪಕಮಾಡಲ್ಪಡುವದಿಲ್ಲ; ಅವನು ಮಾಡಿರುವ ಅಪರಾಧದಿಂದಲೂ ಪಾಪ ದಿಂದಲೂ ಅವುಗಳಲ್ಲಿ ಸಾಯುವನು.
- Ezekiel 33:4–5 ಯೆಹೆಜ್ಕೇಲನು 33:4–5ಯಾವನು ಕಹಳೆಯ ಧ್ವನಿಯನ್ನು ಕೇಳಿ ಎಚ್ಚರವಾಗುವದಿಲ್ಲವೋ? ಆಗ ಕತ್ತಿಯು ಬಂದು ಅವನನ್ನು ತೆಗೆದುಕೊಂಡರೆ ಅವನ ರಕ್ತವು ಅವನ ತಲೆಯ ಮೇಲೆಯೇ ಇರುವದು. ಅವನು ಕಹಳೆಯ ಧ್ವನಿಯನ್ನು ಕೇಳಿ ಎಚ್ಚರಗೊಳ್ಳಲಿಲ್ಲ; ಅವನ ರಕ್ತವು ಅವನ ಮೇಲೆ ಇರುವದು. ಆದರೆ ಎಚ್ಚರಿಕೆಯಾಗುವವನು ತನ್ನ ಪ್ರಾಣವನ್ನು ಉಳಿಸಿಕೊ ಳ್ಳುವನು.
- Ezekiel 3:18 ಯೆಹೆಜ್ಕೇಲನು 3:18ನಾನು ದುಷ್ಟನಿಗೆ--ನೀನು ನಿಶ್ಚಯವಾಗಿ ಸಾಯುವಿ ಯೆಂದು ಹೇಳುವಾಗ ನೀನು ಅವನನ್ನು ಎಚ್ಚರಿಸದೆ ಅವನನ್ನು ಬದುಕಿಸುವ ಹಾಗೆ ದುಷ್ಟನನ್ನು ಅವನ ದುಷ್ಟಮಾರ್ಗದ ವಿಷಯದಲ್ಲಿ ಎಚ್ಚರಿಸಿ ಮಾತನಾಡದೆ ಹೋದರೆ ಆ ದುಷ್ಟನು ತನ್ನ ಅಕ್ರಮದಲ್ಲೇ ಸಾಯು ವನು. ಆದರೆ ಅವನ ರಕ್ತವನ್ನು ನಿನ್ನ ಕೈಯಿಂದ ದುಷ್ಟತ್ವ ಕ್ಕಾಗಿ ನಾನು ವಿಚಾರಿಸುವೆನು.
- Ezekiel 18:28 ಯೆಹೆಜ್ಕೇಲನು 18:28ತಾನು ಆಲೋಚಿಸಿ ತಾನು ಮಾಡುವ ಎಲ್ಲಾ ದುಷ್ಕೃತ್ಯಗಳನ್ನು ಬಿಟ್ಟು ತಿರುಗಿ ಕೊಳ್ಳುವದರಿಂದ ಸಾಯದೆ ನಿಶ್ಚಯವಾಗಿ ಬದುಕು ವನು.
- Leviticus 20:11–13 ಯಾಜಕಕಾಂಡ 20:11–13ತನ್ನ ತಂದೆಯ ಹೆಂಡತಿಯೊಡನೆ ಸಂಗಮಿಸುವವನು ತನ್ನ ತಂದೆಯ ಬೆತ್ತಲೆತನವನ್ನು ಕಾಣುವಂತೆ ಮಾಡಿದ್ದಾನೆ; ಅವರಿಬ್ಬರಿಗೂ ನಿಶ್ಚಯವಾಗಿ ಮರಣದಂಡನೆ ವಿಧಿಸ ಬೇಕು; ಅವರ ರಕ್ತವು ಅವರ ಮೇಲೆ ಇರುವದು; ಒಬ್ಬನು ತನ್ನ ಸೊಸೆಯೊಂದಿಗೆ ಸಂಗಮಿಸಿದರೆ ಅವರಿಬ್ಬರಿಗೂ ನಿಶ್ಚಯವಾಗಿ ಮರಣದಂಡನೆ ವಿಧಿಸ ಬೇಕು; ಅವರು ಗಲಿಬಿಲಿಯನ್ನುಂಟುಮಾಡಿದ್ದಾರೆ; ಅವರ ರಕ್ತವು ಅವರ ಮೇಲೆ ಇರುವದು. ಒಬ್ಬ ಮನುಷ್ಯನು ಸ್ತ್ರೀಯೊಂದಿಗೆ ಮಲಗುವಂತೆ ಮತ್ತೊಬ್ಬ ಮನುಷ್ಯನೊಂದಿಗೆ ಮಲಗಿದರೆ ಅವರಿಬ್ಬರೂ ಅಸಹ್ಯ ವಾದದ್ದನ್ನು ಮಾಡಿದವರಾಗಿದ್ದಾರೆ; ಅವರಿಗೆ ನಿಶ್ಚಯ ವಾಗಿಯೂ ಮರಣದಂಡನೆ ವಿಧಿಸಬೇಕು; ಅವರ ರಕ್ತವು ಅವರ ಮೇಲೆ ಇರುವದು.
- Ezekiel 18:32 ಯೆಹೆಜ್ಕೇಲನು 18:32ಸಾಯುವವನ ಸಾವಿನಲ್ಲಿ ನನಗೆ ಸಂತೋಷವಿಲ್ಲವೆಂದು ದೇವರಾದ ಕರ್ತನು ಹೇಳುತ್ತಾನೆ; ಆದಕಾರಣ ತಿರುಗಿಕೊಂಡು ಬಾಳಿರಿ.