Ezekiel · chapter 18 · verse 19
Ezekiel 18:19 in Kannada
ಆದಾಗ್ಯೂ ಇನ್ನೂ ನೀವು--ಮಗನು ತಂದೆಯ ಅಕ್ರಮವನ್ನು ಹೊರುವದಿಲ್ಲವೇ ಎಂದು ಹೇಳುವಿರಿ; ನಿಶ್ಚಯವಾಗಿ ಮಗನು ನ್ಯಾಯವನ್ನೂ ನೀತಿಯನ್ನೂ ಮಾಡಿ ನನ್ನ ನಿಯಮಗಳನ್ನೆಲ್ಲಾ ಕೈಕೊಂಡು ನಡೆದರೆ ಅವನು ನಿಶ್ಚಯವಾಗಿ ಬದುಕುವನು.
Aadaagyoo innoo neevu--maganu tandeya akramavannu horuvadillave endu heluviri; nishchayavaagi maganu nyaayavannoo neetiyannoo maadi nanna niyamagalannellaa kaikondu nadedare avanu nishchayavaagi badukuvanu.
Ezekiel 18:19 in English
- King James Version (KJV)
- Yet say ye, Why? doth not the son bear the iniquity of the father? When the son hath done that which is lawful and right, [and] hath kept all my statutes, and hath done them, he shall surely live.
- World English Bible (WEB)
- “Yet you say, ‘Why doesn’t the son bear the iniquity of the father?’ When the son has done that which is lawful and right, and has kept all my statutes, and has done them, he will surely live.
- American Standard Version (ASV)
- Yet say ye, Wherefore doth not the son bear the iniquity of the father? When the son hath done that which is lawful and right, and hath kept all my statutes, and hath done them, he shall surely live.
- Bible in Basic English (BBE)
- But you say, Why does not the son undergo punishment for the evil-doing of the father? When the son has done what is ordered and right, and has kept my rules and done them, life will certainly be his.
- Darby Translation (DBY)
- And ye say, Why doth not the son bear the iniquity of the father? But the son hath done judgment and justice, hath kept all my statutes, and hath done them; he shall certainly live.
- Webster's Bible (WBS)
- Yet say ye, Why? doth not the son bear the iniquity of the father? When the son hath done that which is lawful and right, [and] hath kept all my statutes, and hath done them, he shall surely live.
- Young's Literal Translation (YLT)
- And ye have said, Wherefore hath not the son, Borne of the iniquity of the father? And — the son judgment and righteousness hath done, All My statutes he hath kept, And he doeth them, he surely liveth.
Read in context
- 17ಬಡವನ ಮೇಲೆ ಕೈಮಾಡದೆ, ಬಡ್ಡಿಯನ್ನೂ ಲಾಭವನ್ನು ತೆಗೆದುಕೊಳ್ಳದೆ, ನನ್ನ ನ್ಯಾಯ ಗಳನ್ನು ಮಾಡಿ ನಿಯಮಗಳಲ್ಲಿ ನಡೆದರೆ, ಅವನು ತನ್ನ ತಂದೆಯ ಅಕ್ರಮಗಳ ನಿಮಿತ್ತ ಸಾಯುವದಿಲ್ಲ ನಿಶ್ಚಯವಾಗಿ ಬದುಕುವನು.
- 18ಆತನ ತಂದೆಯ ವಿಷಯವಾದರೋ ಅವನು ಬಹಳ ಬಲಾತ್ಕಾರ ಮಾಡಿ ದ್ದರಿಂದಲೂ ತನ್ನ ಸಹೋದರನನ್ನು ಹಿಂಸಿಸಿ ಸುಲಿಗೆ ಮಾಡಿದ್ದರಿಂದಲೂ ತನ್ನ ಜನರ ಮಧ್ಯದಲ್ಲಿ ಕೆಟ್ಟದನ್ನು ಮಾಡಿದ್ದರಿಂದಲೂ ಇಗೋ, ಅವನು ಅಕ್ರಮದಲಿ ಸಾಯುವನು.
- 19ಆದಾಗ್ಯೂ ಇನ್ನೂ ನೀವು--ಮಗನು ತಂದೆಯ ಅಕ್ರಮವನ್ನು ಹೊರುವದಿಲ್ಲವೇ ಎಂದು ಹೇಳುವಿರಿ; ನಿಶ್ಚಯವಾಗಿ ಮಗನು ನ್ಯಾಯವನ್ನೂ ನೀತಿಯನ್ನೂ ಮಾಡಿ ನನ್ನ ನಿಯಮಗಳನ್ನೆಲ್ಲಾ ಕೈಕೊಂಡು ನಡೆದರೆ ಅವನು ನಿಶ್ಚಯವಾಗಿ ಬದುಕುವನು.
- 20ಪಾಪ ಮಾಡುವ ಪ್ರಾಣವು ತಾನಾಗಿ ಸಾಯುವದು; ಮಗನು ತಂದೆಯ ಅಕ್ರಮವನ್ನು ಹೊರುವದಿಲ್ಲ. ತಂದೆಯು ಮಗನ ಅಕ್ರಮವನ್ನು ಹೊರುವದಿಲ್ಲ. ನೀತಿವಂತನ ನೀತಿಯು ಅವನ ಮೇಲೆಯೇ ಇರುವದು. ದುಷ್ಟನ ದುಷ್ಟತ್ವವು ಅವನ ಮೇಲೆಯೇ ಇರುವದು.
- 21ಆದರೆ ದುಷ್ಟನು ತಾನು ಮಾಡಿದ ಪಾಪಗಳನ್ನೆಲ್ಲಾ ಬಿಟ್ಟು ತಿರುಗಿಕೊಂಡು ನನ್ನ ನಿಯಮಗಳನ್ನೆಲ್ಲಾ ಕೈಕೊಂಡು ನ್ಯಾಯವನ್ನೂ ನೀತಿಯನ್ನೂ ನಡೆಸಿದರೆ ಅವನು ಸಾಯದೆ ನಿಶ್ಚಯವಾಗಿ ಬದುಕುವನು.
Cross references
- Exodus 20:5 ವಿಮೋಚನಕಾಂಡ 20:5ನೀನು ಅವುಗಳಿಗೆ ಅಡ್ಡಬೀಳಬಾರದು, ಸೇವಿಸಲೂ ಬಾರದು. ನಿನ್ನ ದೇವರಾದ ಕರ್ತನಾಗಿರುವ ನಾನು ರೋಷವುಳ್ಳ ದೇವರಾಗಿದ್ದೇನೆ. ನನ್ನನ್ನು ಹಗೆ ಮಾಡುವ ತಂದೆಗಳ ಅಪರಾಧವನ್ನು ಮಕ್ಕಳ ಮೇಲೆ ಯೂ ಮೂರನೆಯ ನಾಲ್ಕನೆಯ ತಲೆಗಳ ವರೆಗೂ ಬರಮಾಡುವೆನು.
- Zechariah 1:3–6 ಜೆಕರ್ಯ 1:3–6ಆದದರಿಂದ ನೀನು ಅವರಿಗೆ ಹೇಳತಕ್ಕದ್ದೇ ನಂದರೆ--ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನನ್ನ ಕಡೆಗೆ ತಿರುಗಿ ಕೊಳ್ಳಿರಿ, ಆಗ ನಾನು ನಿಮ್ಮ ಬಳಿಗೆ ತಿರುಗಿಕೊಳ್ಳುವೆನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ. ನೀವು ನಿಮ್ಮ ಪಿತೃಗಳ ಹಾಗಿರಬೇಡಿರಿ; ಅವರಿಗೆ ಪೂರ್ವದ ಪ್ರವಾದಿಗಳು ಕೂಗಿ--ನಿಮ್ಮ ಕೆಟ್ಟ ಮಾರ್ಗಗಳನ್ನೂ ನಿಮ್ಮ ಕೆಟ್ಟ ಕ್ರಿಯೆಗಳನ್ನೂ ಬಿಟ್ಟು ತಿರುಗಿರಿ ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆಂದು ಹೇಳಿದರು; ಆದರೆ ಅವರು ಕೇಳಲಿಲ್ಲ; ನನ್ನಲ್ಲಿ ಲಕ್ಷ್ಯ ವಿಡಲಿಲ್ಲವೆಂದು ಕರ್ತನು ಅನ್ನುತ್ತಾನೆ. ನಿಮ್ಮ ಪಿತೃ ಗಳೋ, ಅವರು ಎಲ್ಲಿ? ಪ್ರವಾದಿಗಳು, ಅವರು ನಿತ್ಯವಾಗಿ ಬದುಕುತ್ತಾರೋ? ಆದರೆ ನಾನು ನನ್ನ ಸೇವಕರಾದ ಪ್ರವಾದಿಗಳಿಗೆ ಆಜ್ಞಾಪಿಸಿದ ನನ್ನ ವಾಕ್ಯ ಗಳೂ ನನ್ನ ನಿಯಮಗಳೂ ನಿಮ್ಮ ಪಿತೃಗಳಿಗೆ ಸೇರಲಿ ಲ್ಲವೋ? ಆಗ ಅವರು ತಿರುಗಿಕೊಂಡು--ಸೈನ್ಯಗಳ ಕರ್ತನು ಯೋಚಿಸಿದ ಹಾಗೆಯೇ ನಮ್ಮ ಮಾರ್ಗಗಳ ಪ್ರಕಾರವಾಗಿಯೂ ನಮ್ಮ ಕ್ರಿಯೆಗಳ ಪ್ರಕಾರವಾ ಗಿಯೂ ನಮಗೆ ಮಾಡಿದ್ದಾನೆಂದು ಹೇಳಿದರು ಎಂಬದು.
- Ezekiel 18:2 ಯೆಹೆಜ್ಕೇಲನು 18:2ತಂದೆಗಳು ಹುಳಿ ದ್ರಾಕ್ಷೆಗಳನ್ನು ತಿಂದರು ಮಕ್ಕಳ ಹಲ್ಲು ಉಳಿತು ಹೋಯಿತು ಎಂಬ ಗಾದೆಯನ್ನು ಇಸ್ರಾಯೇಲ್ ದೇಶದ ವಿಷಯವಾಗಿ ನೀವು ಉಪಯೋಗಿಸುವ ಇದರ ಅರ್ಥವೇನು?
- Ezekiel 20:18–20 ಯೆಹೆಜ್ಕೇಲನು 20:18–20ಆದರೆ ನಾನು ಅರಣ್ಯದಲ್ಲಿ ಅವರ ಮಕ್ಕಳಿಗೆ ಹೇಳಿದ್ದೇನಂದರೆ--ನಿಮ್ಮ ತಂದೆಗಳ ನಿಯಮಗಳಲ್ಲಿ ನಡೆಯಬೇಡಿರಿ, ಅವರ ನ್ಯಾಯಗಳನ್ನು ಅನುಸರಿಸ ಬೇಡಿರಿ, ಅವರ ವಿಗ್ರಹಗಳಿಂದ ನಿಮ್ಮನ್ನು ಅಪವಿತ್ರ ಮಾಡಿಕೊಳ್ಳಬೇಡಿರಿ; ನಾನೇ ಕರ್ತನೂ ನಿಮ್ಮ ದೇವರೂ ಆಗಿದ್ದೇನೆ ನನ್ನ ನಿಯಮಗಳಲ್ಲಿಯೇ ನಡೆ ಯಿರಿ ನ್ಯಾಯಗಳನ್ನು ಕೈಕೊಂಡು ಅವುಗಳನ್ನೇ ಮಾಡಿರಿ; ನನ್ನ ಸಬ್ಬತ್ತುಗಳನ್ನು ಪರಿಶುದ್ಧಮಾಡಿರಿ ನಾನೇ ನಿಮ್ಮ ದೇವರಾದ ಕರ್ತನು ಎಂದು ಅವು ನಿಮಗೂ ನನಗೂ ನೀವು ತಿಳಿಯುವ ಹಾಗೆ ಗುರುತುಗಳಾಗಿರುವವು.
- Ezekiel 18:9 ಯೆಹೆಜ್ಕೇಲನು 18:9ಸತ್ಯವನ್ನು ಮಾಡುವದ ಕ್ಕಾಗಿ ನನ್ನ ನಿಯಮಗಳಲ್ಲಿ ನಡೆದು, ನನ್ನ ನ್ಯಾಯಗಳನ್ನು ಕೈಕೊಂಡು ಸತ್ಯಪರನಾಗಿ ನಡೆದರೆ ಅವನು ನೀತಿ ವಂತನು ಮತ್ತು ನಿಶ್ಚಯವಾಗಿ ಬದುಕುವವನು ಎಂದು ದೇವರಾದ ಕರ್ತನು ಹೇಳಿದ್ದಾನೆ.
- Deuteronomy 5:9 ಧರ್ಮೋಪದೇಶಕಾಂಡ 5:9ಅವುಗಳಿಗೆ ಅಡ್ಡಬೀಳಲೂಬಾರದು, ಸೇವಿಸಲೂಬಾರದು. ಯಾಕಂದರೆ ನಿನ್ನ ದೇವರಾದ ಕರ್ತನಾಗಿರುವ ನಾನು ರೋಷವುಳ್ಳ ದೇವರಾಗಿದ್ದೇನೆ. ನನ್ನನ್ನು ಹಗೆಮಾಡುವವರಲ್ಲಿ ಪಿತೃಗಳ ಅಕ್ರಮವನ್ನು ಮಕ್ಕಳ ಮೇಲೆ ಮೂರನೆಯ ನಾಲ್ಕನೆಯ ತಲಾಂತರದ ವರೆಗೆ ನ್ಯಾಯತೀರಿಸುತ್ತೇನೆ.
- Jeremiah 15:4 ಯೆರೆಮೀಯ 15:4ಅವರನ್ನು ಹಿಜ್ಕೀಯನ ಮಗನಾದ ಯೆಹೂದದ ಅರಸನಾದ ಮನಸ್ಸೆಯ ನಿಮಿತ್ತವೂ ಇವನು ಯೆರೂಸಲೇಮಿನಲ್ಲಿ ಮಾಡಿದ್ದರ ನಿಮಿತ್ತವೂ ಭೂಮಿಯ ಎಲ್ಲಾ ರಾಜ್ಯಗಳಿಗೆ ಚದರಿಹೋಗುವಂತೆ ಮಾಡುವೆನು.
- Ezekiel 20:30 ಯೆಹೆಜ್ಕೇಲನು 20:30ಆದದರಿಂದ ನೀನು ಇಸ್ರಾಯೇಲಿನ ಮನೆತನದವರಿಗೆ ಹೇಳಬೇಕಾ ದದ್ದೇನಂದರೆ--ದೇವರಾದ ಕರ್ತನು ಹೀಗೆ ಹೇಳು ತ್ತಾನೆ; ನಿಮ್ಮ ಪಿತೃಗಳ ಹಾಗೆ ನಿಮ್ಮನ್ನು ಅಪವಿತ್ರ ಪಡಿಸಿಕೊಳ್ಳುತ್ತೀರೋ? ಅವರ ಅಸಹ್ಯವಾದವುಗಳ ಪ್ರಕಾರ ವ್ಯಭಿಚಾರಮಾಡುತ್ತೀರೋ?
- 2 Kings 23:26 2 ಅರಸುಗಳು 23:26ಆದರೆ ಮನಸ್ಸೆಯು ಕರ್ತನಿಗೆ ಕೋಪ ವನ್ನು ಎಬ್ಬಿಸಲು ಮಾಡಿದ ಎಲ್ಲಾ ಕ್ರಿಯೆಗಳಿಗೋಸ್ಕರ ಯೆಹೂದಕ್ಕೆ ವಿರೋಧವಾಗಿ ತನ್ನನ್ನು ಉದ್ರೇಕಿಸಿದ ಕೋಪವನ್ನೂ ತನ್ನ ಮಹಾಕೋಪದ ಉರಿಯನ್ನೂ ಕರ್ತನು ಬಿಟ್ಟುಬಿಡಲಿಲ್ಲ.
- Lamentations 5:7 ಪ್ರಲಾಪಗಳು 5:7ನಮ್ಮ ತಂದೆಗಳು ಪಾಪ ಮಾಡಿ ಇಲ್ಲದೆ ಹೋದರು; ನಾವು ಅವರ ಅಕ್ರಮಗಳನ್ನು ಹೊರುತ್ತೇವೆ.
- Ezekiel 20:24 ಯೆಹೆಜ್ಕೇಲನು 20:24ಅವರು ನನ್ನ ನ್ಯಾಯಗಳಲ್ಲಿ ನಡೆಯದೆ, ನನ್ನ ನಿಯಮಗಳನ್ನು ಅಲಕ್ಷಿಸಿ ನನ್ನ ಸಬ್ಬತ್ತುಗಳನ್ನು ಅಪವಿತ್ರಪಡಿಸಿದರು; ತಮ್ಮ ಪಿತೃಗಳ ವಿಗ್ರಹಗಳ ಕಡೆಗೆ ಕಣ್ಣಿಟ್ಟಿದ್ದರು.
- 2 Kings 24:3–4 2 ಅರಸುಗಳು 24:3–4ನಿಶ್ಚಯವಾಗಿ ಕರ್ತನ ಅಪ್ಪಣೆಯಿಂದ ಇದು ಯೆಹೂದದ ಮೇಲೆ ಆಯಿತು. ಅದೇನಂದರೆ, ಮನಸ್ಸೆಯು ತನ್ನ ಎಲ್ಲಾ ಕೃತ್ಯಗಳಿಂದ ಮಾಡಿದ ಪಾಪಗಳ ನಿಮಿತ್ತ ಅವರನ್ನು ಆತನು ತನ್ನ ಸಮ್ಮುಖದಿಂದ ತೆಗೆದು ಹಾಕುವದಕ್ಕೋಸ್ಕರವೇ. ಇದಲ್ಲದೆ ಅವನು ಚೆಲ್ಲಿದ ನಿರಪರಾಧದ ರಕ್ತದ ನಿಮಿತ್ತ ಇದು ಉಂಟಾಯಿತು. ಅವನು ನಿರಪರಾಧದ ರಕ್ತದಿಂದ ಯೆರೂಸಲೇಮನ್ನು ತುಂಬಿಸಿದ್ದನು. ಕರ್ತನು ಅದನ್ನು ಮನ್ನಿಸಲೊಲ್ಲದೆ ಇದ್ದನು.
Original words (Hebrew)
- say · H559אָמַר ʼâmar
- son · H1121בֵּן bên
- bear · H5375נָשָׂא nâsâʼ
- iniquity · H5771עָוֺן ʻâvôn
- father · H1אָב ʼâb
- son · H1121בֵּן bên
- done · H6213עָשָׂה ʻâsâh
- lawful · H4941מִשְׁפָּט mishpâṭ
- right · H6666צְדָקָה tsᵉdâqâh
- kept · H8104שָׁמַר shâmar
- statutes · H2708חֻקָּה chuqqâh
- done · H6213עָשָׂה ʻâsâh
- surely · H2421חָיָה châyâh
- live · H2421חָיָה châyâh