Ezekiel · chapter 18 · verse 27
Ezekiel 18:27 in Kannada
ದುಷ್ಟನು ತನ್ನ ದುಷ್ಟತನವನ್ನು ಬಿಟ್ಟು ನ್ಯಾಯವನ್ನೂ ನೀತಿಯನ್ನೂ ಅನುಸರಿಸಿದರೆ ತನ್ನ ಪ್ರಾಣವನ್ನು ಉಳಿಸಿಕೊಂಡು ಬದುಕುವನು.
Dushtanu tanna dushtatanavannu bittu nyaayavannoo neetiyannoo anusarisidare tanna praanavannu ulisikondu badukuvanu.
Ezekiel 18:27 in English
- King James Version (KJV)
- Again, when the wicked [man] turneth away from his wickedness that he hath committed, and doeth that which is lawful and right, he shall save his soul alive.
- World English Bible (WEB)
- Again, when the wicked man turns away from his wickedness that he has committed, and does that which is lawful and right, he will save his soul alive.
- American Standard Version (ASV)
- Again, when the wicked man turneth away from his wickedness that he hath committed, and doeth that which is lawful and right, he shall save his soul alive.
- Bible in Basic English (BBE)
- Again, when the evil-doer, turning away from the evil he has done, does what is ordered and right, he will have life for his soul.
- Darby Translation (DBY)
- And when the wicked turneth from his wickedness which he hath committed, and doeth judgment and justice, he shall keep his soul alive.
- Webster's Bible (WBS)
- Again, when a wicked [man] turneth away from his wickedness that he hath committed, and doeth that which is lawful and right, he shall save his soul alive.
- Young's Literal Translation (YLT)
- And in the turning back of the wicked From his wickedness that he hath done, And he doth judgment and righteousness, He his soul doth keep alive.
Read in context
- 25ಆದರೆ ನೀವು, ಕರ್ತನ ಮಾರ್ಗವು ಸರಿಯಲ್ಲ ಅನ್ನುತ್ತೀರಿ; ಓ ಇಸ್ರಾ ಯೇಲಿನ ಮನೆಯವರೇ, ಈಗ ಕೇಳಿರಿ, ನನ್ನ ಮಾರ್ಗವು ಸಮವಲ್ಲವೇ? ನಿಮ್ಮ ಮಾರ್ಗಗಳು ಸಮವಲ್ಲದವು ಗಳೇ.
- 26ನೀತಿವಂತನು ತನ್ನ ನೀತಿಯನ್ನು ಬಿಟ್ಟು ತಿರುಗಿಕೊಂಡು ಅನ್ಯಾಯಮಾಡಿ ಇವುಗಳಲ್ಲಿ ಸತ್ತರೆ, ಅವನು ಮಾಡಿದ ಅನ್ಯಾಯದಿಂದಲೇ ಸಾಯುವನು.
- 27ದುಷ್ಟನು ತನ್ನ ದುಷ್ಟತನವನ್ನು ಬಿಟ್ಟು ನ್ಯಾಯವನ್ನೂ ನೀತಿಯನ್ನೂ ಅನುಸರಿಸಿದರೆ ತನ್ನ ಪ್ರಾಣವನ್ನು ಉಳಿಸಿಕೊಂಡು ಬದುಕುವನು.
- 28ತಾನು ಆಲೋಚಿಸಿ ತಾನು ಮಾಡುವ ಎಲ್ಲಾ ದುಷ್ಕೃತ್ಯಗಳನ್ನು ಬಿಟ್ಟು ತಿರುಗಿ ಕೊಳ್ಳುವದರಿಂದ ಸಾಯದೆ ನಿಶ್ಚಯವಾಗಿ ಬದುಕು ವನು.
- 29ಆದರೆ ಇಸ್ರಾಯೇಲಿನ ಮನೆತನದವರು ಕರ್ತನ ಮಾರ್ಗ ಸಮವಲ್ಲ ಎನ್ನುತ್ತಾರೆ. ಇಸ್ರಾಯೇಲಿನ ಮನೆತನದವರೇ, ನನ್ನ ಮಾರ್ಗ ಸರಿಯಲ್ಲವೇ? ನಿಮ್ಮ ಮಾರ್ಗಗಳು ಸಮವಲ್ಲದವುಗಳೇ.
Cross references
- Isaiah 1:18 ಯೆಶಾಯ 1:18ಈಗ ಬನ್ನಿರಿ, ನಾವು ಒಟ್ಟಾಗಿ ವಾದಿಸೋಣ ಎಂದು ಕರ್ತನು ಹೇಳುತ್ತಾನೆ; ನಿಮ್ಮ ಪಾಪಗಳು ಕಡು ಕೆಂಪಾಗಿದ್ದರೂ ಹಿಮದಂತೆ ಬಿಳುಪಾಗುವವು; ಕಡು ಕೆಂಪಿನಂತೆ ಕೆಂಪಾಗಿದ್ದರೂ ಉಣ್ಣೆಯಂತೆ ಆಗುವವು.
- Ezekiel 18:21 ಯೆಹೆಜ್ಕೇಲನು 18:21ಆದರೆ ದುಷ್ಟನು ತಾನು ಮಾಡಿದ ಪಾಪಗಳನ್ನೆಲ್ಲಾ ಬಿಟ್ಟು ತಿರುಗಿಕೊಂಡು ನನ್ನ ನಿಯಮಗಳನ್ನೆಲ್ಲಾ ಕೈಕೊಂಡು ನ್ಯಾಯವನ್ನೂ ನೀತಿಯನ್ನೂ ನಡೆಸಿದರೆ ಅವನು ಸಾಯದೆ ನಿಶ್ಚಯವಾಗಿ ಬದುಕುವನು.
- Isaiah 55:7 ಯೆಶಾಯ 55:7ದುಷ್ಟನು ತನ್ನ ಮಾರ್ಗವನ್ನೂ ಅನೀತಿವಂತನು ತನ್ನ ಆಲೋಚನೆಗಳನ್ನೂ ತೊರೆದುಬಿಟ್ಟು ಕರ್ತನ ಕಡೆಗೆ ಹಿಂತಿರುಗಲಿ; ಆತನು ಅವನ ಮೇಲೆ ಕರುಣೆಯಿಡು ವನು; ನಮ್ಮ ದೇವರ ಬಳಿಗೂ ಹಿಂತಿರುಗಲಿ, ಆತನು ಹೇರಳವಾಗಿ ಕ್ಷಮಿಸುವನು.
- Acts 3:19 ಅಪೊಸ್ತಲರ ಕೃತ್ಯಗಳು 3:19ಆದದರಿಂದ ನಿಮ್ಮ ಪಾಪಗಳು ಅಳಿಸಲ್ಪಡು ವಂತೆ ನೀವು ಮಾನಸಾಂತರಪಟ್ಟು ತಿರುಗಿಕೊಳ್ಳಿರಿ; ಆಗ ಕರ್ತನ ಸನ್ನಿಧಾನದಿಂದ ನಿಮಗೆ ವಿಶ್ರಾಂತಿಕಾಲಗಳು ಒದಗುವವು.
- Acts 20:21 ಅಪೊಸ್ತಲರ ಕೃತ್ಯಗಳು 20:21ಯೆಹೂ ದ್ಯರೂ ಗ್ರೀಕರೂ ದೇವರ ಕಡೆಗೆ ಮಾನಸಾಂತರಪಟ್ಟು ನಮ್ಮ ಕರ್ತನಾದ ಯೇಸುಕ್ರಿಸ್ತನ ಮೇಲೆ ನಂಬಿಕೆಯಿಡಬೇಕೆಂದು ಸಾಕ್ಷೀಕರಿಸುವವನಾಗಿದ್ದೆನು.
- Acts 2:40 ಅಪೊಸ್ತಲರ ಕೃತ್ಯಗಳು 2:40ಅವನು ಇನ್ನೂ ಬೇರೆ ಅನೇಕ ಮಾತುಗಳಿಂದ ಸಾಕ್ಷಿಕೊಟ್ಟು--ಈ ಮೂರ್ಖ ಸಂತತಿಯವರಿಂದ ನಿಮ್ಮನ್ನು ನೀವು ರಕ್ಷಿಸಿಕೊಳ್ಳಿರಿ ಎಂದು ಎಚ್ಚರಿಸಿ ಹೇಳಿದನು.
- Ezekiel 33:5 ಯೆಹೆಜ್ಕೇಲನು 33:5ಅವನು ಕಹಳೆಯ ಧ್ವನಿಯನ್ನು ಕೇಳಿ ಎಚ್ಚರಗೊಳ್ಳಲಿಲ್ಲ; ಅವನ ರಕ್ತವು ಅವನ ಮೇಲೆ ಇರುವದು. ಆದರೆ ಎಚ್ಚರಿಕೆಯಾಗುವವನು ತನ್ನ ಪ್ರಾಣವನ್ನು ಉಳಿಸಿಕೊ ಳ್ಳುವನು.
- Acts 26:20 ಅಪೊಸ್ತಲರ ಕೃತ್ಯಗಳು 26:20ಆದರೆ ಅವರು ಮಾನಸಾಂತರಪಟ್ಟು ದೇವರ ಕಡೆಗೆ ತಿರುಗಿ ಕೊಂಡು ಮಾನಸಾಂತರಪಟ್ಟದ್ದಕ್ಕಾಗಿ ಯೋಗ್ಯವಾದ ಕ್ರಿಯೆಗಳನ್ನು ಮಾಡಬೇಕೆಂದು ಮೊದಲನೆಯದಾಗಿ ದಮಸ್ಕದವರಿಗೂ ಯೆರೂಸಲೇಮಿನಲ್ಲಿಯೂ ಯೂದಾಯದ ಎಲ್ಲಾ ಕಡೆಯ ತೀರಗಳಲ್ಲಿಯೂ ಅನ್ಯಜನಾಂಗದವರಿಗೂ ಪ್ರಕಟಿಸಿದೆನು.
- Matthew 9:13 ಮತ್ತಾಯನು 9:13ನೀವು ಹೋಗಿ--ನಾನು ಯಜ್ಞವನ್ನಲ್ಲ; ಕರುಣೆಯನ್ನೇ ಅಪೇಕ್ಷಿಸುತ್ತೇನೆ ಎಂಬದರ ಅರ್ಥವನ್ನು ಕಲಿಯಿರಿ; ಯಾಕಂದರೆ ನಾನು ನೀತಿ ವಂತರನ್ನಲ್ಲ, ಪಾಪಿಗಳನ್ನು ಮಾನಸಾಂತರಪಡು ವದಕ್ಕಾಗಿ ಕರೆಯಲು ಬಂದೆನು ಎಂದು ಹೇಳಿದನು.
- 1 Timothy 4:16 1 ತಿಮೊಥೆಯನಿಗೆ 4:16ನಿನ್ನ ವಿಷಯದಲ್ಲಿಯೂ ಉಪ ದೇಶದ ವಿಷಯದಲ್ಲಿಯೂ ಎಚ್ಚರಿಕೆಯಾಗಿರು. ನೀನು ಇವುಗಳಲ್ಲಿ ನಿರತನಾಗಿರು; ಹೀಗೆ ಮಾಡುವದರಿಂದ ನೀನು ನಿನ್ನನ್ನೂ ನಿನ್ನ ಉಪದೇಶ ಕೇಳುವವರನ್ನೂ ರಕ್ಷಿಸುವಿ.
- Matthew 21:28–32 ಮತ್ತಾಯನು 21:28–32ನೀವು ನೆನಸುವದೇನು? ಒಬ್ಬ ಮನುಷ್ಯನಿಗೆ ಇಬ್ಬರು ಮಕ್ಕಳಿದ್ದರು; ಅವನು ಮೊದಲನೆಯವನ ಬಳಿಗೆ ಬಂದು--ಮಗನೇ, ಹೋಗಿ ಈ ಹೊತ್ತು ನನ್ನ ದ್ರಾಕ್ಷೇತೋಟದಲ್ಲಿ ಕೆಲಸಮಾಡು ಎಂದು ಹೇಳಿದನು. ಅವನು ಪ್ರತ್ಯುತ್ತರವಾಗಿ--ನಾನು ಹೋಗುವದಿಲ್ಲ ಎಂದು ಹೇಳಿ ತರುವಾಯ ಪಶ್ಚಾ ತ್ತಾಪಪಟ್ಟು ಹೋದನು. ಆಮೇಲೆ ಅವನು ಎರಡ ನೆಯವನ ಬಳಿಗೆ ಬಂದು ಅದೇ ಪ್ರಕಾರ ಅವನಿಗೆ ಹೇಳಿದನು. ಅದಕ್ಕವನು ಪ್ರತ್ಯುತ್ತರವಾಗಿ--ಅಯ್ಯಾ, ನಾನು ಹೋಗುತ್ತೇನೆ ಎಂದು ಹೇಳಿ ಹೋಗಲಿಲ್ಲ. ಈ ಇಬ್ಬರಲ್ಲಿ ಯಾವನು ತನ್ನ ತಂದೆಯ ಇಷ್ಟದಂತೆ ಮಾಡಿದನು ಎಂದು ಕೇಳಲು ಅವರು ಆತನಿಗೆ--ಮೊದಲನೆಯವನು ಅಂದರು. ಆಗ ಯೇಸು ಅವರಿಗೆ --ಸುಂಕದವರೂ ಸೂಳೆಯರೂ ನಿಮಗಿಂತ ಮೊದಲು ದೇವರರಾಜ್ಯದೊಳಗೆ ಸೇರುವರೆಂದು ನಿಮಗೆ ನಿಜವಾಗಿ ಹೇಳುತ್ತೇನೆ. ಯಾಕಂದರೆ ಯೋಹಾನನು ನೀತಿಯ ಮಾರ್ಗದಲ್ಲಿ ನಿಮ್ಮ ಬಳಿಗೆ ಬಂದನು. ಮತ್ತು ನೀವು ಅವನನ್ನು ನಂಬಲಿಲ್ಲ; ಆದರೆ ಸುಂಕದವರೂ ಸೂಳೆಯರೂ ಅವನನ್ನು ನಂಬಿದರು; ನೀವು ಅದನ್ನು ನೋಡಿದ ಮೇಲೆಯೂ ಅವನನ್ನು ನಂಬುವಂತೆ ಪಶ್ಚಾತ್ತಾಪ ಪಡಲಿಲ್ಲ.