Ezekiel · chapter 18 · verse 28
Ezekiel 18:28 in Kannada
ತಾನು ಆಲೋಚಿಸಿ ತಾನು ಮಾಡುವ ಎಲ್ಲಾ ದುಷ್ಕೃತ್ಯಗಳನ್ನು ಬಿಟ್ಟು ತಿರುಗಿ ಕೊಳ್ಳುವದರಿಂದ ಸಾಯದೆ ನಿಶ್ಚಯವಾಗಿ ಬದುಕು ವನು.
Taanu aalochisi taanu maaduva ellaa dushkrutyagalannu bittu tirugi kolluvadarinda saayade nishchayavaagi baduku vanu.
Ezekiel 18:28 in English
- King James Version (KJV)
- Because he considereth, and turneth away from all his transgressions that he hath committed, he shall surely live, he shall not die.
- World English Bible (WEB)
- Because he considers, and turns away from all his transgressions that he has committed, he shall surely live. He shall not die.
- American Standard Version (ASV)
- Because he considereth, and turneth away from all his transgressions that he hath committed, he shall surely live, he shall not die.
- Bible in Basic English (BBE)
- Because he had fear and was turned away from all the wrong which he had done, life will certainly be his, death will not be his fate.
- Darby Translation (DBY)
- Because he considereth, and turneth from all his transgressions which he hath committed, he shall certainly live, he shall not die.
- Webster's Bible (WBS)
- Because he considereth and turneth away from all his transgressions that he hath committed, he shall surely live, he shall not die.
- Young's Literal Translation (YLT)
- And he seeth and turneth back, From all his transgressions that he hath done, He doth surely live, he doth not die,
Read in context
- 26ನೀತಿವಂತನು ತನ್ನ ನೀತಿಯನ್ನು ಬಿಟ್ಟು ತಿರುಗಿಕೊಂಡು ಅನ್ಯಾಯಮಾಡಿ ಇವುಗಳಲ್ಲಿ ಸತ್ತರೆ, ಅವನು ಮಾಡಿದ ಅನ್ಯಾಯದಿಂದಲೇ ಸಾಯುವನು.
- 27ದುಷ್ಟನು ತನ್ನ ದುಷ್ಟತನವನ್ನು ಬಿಟ್ಟು ನ್ಯಾಯವನ್ನೂ ನೀತಿಯನ್ನೂ ಅನುಸರಿಸಿದರೆ ತನ್ನ ಪ್ರಾಣವನ್ನು ಉಳಿಸಿಕೊಂಡು ಬದುಕುವನು.
- 28ತಾನು ಆಲೋಚಿಸಿ ತಾನು ಮಾಡುವ ಎಲ್ಲಾ ದುಷ್ಕೃತ್ಯಗಳನ್ನು ಬಿಟ್ಟು ತಿರುಗಿ ಕೊಳ್ಳುವದರಿಂದ ಸಾಯದೆ ನಿಶ್ಚಯವಾಗಿ ಬದುಕು ವನು.
- 29ಆದರೆ ಇಸ್ರಾಯೇಲಿನ ಮನೆತನದವರು ಕರ್ತನ ಮಾರ್ಗ ಸಮವಲ್ಲ ಎನ್ನುತ್ತಾರೆ. ಇಸ್ರಾಯೇಲಿನ ಮನೆತನದವರೇ, ನನ್ನ ಮಾರ್ಗ ಸರಿಯಲ್ಲವೇ? ನಿಮ್ಮ ಮಾರ್ಗಗಳು ಸಮವಲ್ಲದವುಗಳೇ.
- 30ಆದದರಿಂದ ಇಸ್ರಾಯೇಲಿನ ಮನೆತನದವರೇ, ನಿಮ್ಮ ನಿಮ್ಮ ಮಾರ್ಗಗಳ ಪ್ರಕಾರ ನ್ಯಾಯತೀರಿಸುವೆನಂದು ದೇವ ರಾದ ಕರ್ತನು ಹೇಳುತ್ತಾನೆ; ನಿಮ್ಮ ದುಷ್ಟತ್ವಗಳನ್ನೆಲ್ಲಾ ಬಿಟ್ಟು ತಿರುಗಿಕೊಂಡು ಪಶ್ಚಾತ್ತಾಪಪಡಿರಿ; ಆಗ ಅಕ್ರಮ ಗಳು ನಿಮ್ಮನ್ನು ಆಳುವದಿಲ್ಲ.
Cross references
- Deuteronomy 32:29 ಧರ್ಮೋಪದೇಶಕಾಂಡ 32:29ಅವರು ಜ್ಞಾನವಂತರಾಗಿ ಇದರ ವಿಷಯ ಬುದ್ಧಿ ತಂದುಕೊಂಡು ತಮ್ಮ ಕಡೇಕಾಲಕ್ಕಾಗಿ ಗ್ರಹಿಕೆಯುಳ್ಳ ವರಾದರೆ ಎಷ್ಟೋ ಒಳ್ಳೇದು!
- Luke 15:17–18 ಲೂಕನು 15:17–18ಅವನಿಗೆ ಬುದ್ದಿ ಬಂದಾಗ ಅವನು--ನನ್ನ ತಂದೆಯ ಎಷ್ಟೋ ಕೂಲಿಯಾಳುಗಳಿಗೆ ಸಾಕಾಗಿ ಉಳಿಯುವಷ್ಟು ಆಹಾರವಿದೆಯಲ್ಲಾ! ನಾನಾದರೋ ಹಸಿವೆಯಿಂದ ಸಾಯುತ್ತಿದ್ದೇನೆ. ನಾನು ಎದ್ದು ನನ್ನ ತಂದೆಯ ಬಳಿಗೆ ಹೋಗಿ ಅವನಿಗೆ--ಅಪ್ಪಾ, ಪರಲೋಕಕ್ಕೆ ವಿರೋಧವಾಗಿಯೂ ನಿನ್ನ ಮುಂದೆಯೂ ನಾನು ಪಾಪಮಾಡಿದ್ದೇನೆ;
- Colossians 3:5–9 ಕೊಲೊಸ್ಸೆಯವರಿಗೆ 3:5–9ಆದದರಿಂದ ನಿಮ್ಮಲ್ಲಿರುವ ಭೂಸಂಬಂಧವಾದ ಭಾವಗಳನ್ನು ಅಂದರೆ ಜಾರತ್ವ ಬಂಡುತನ ಕಾಮಾಭಿ ಲಾಷೆ ದುರಾಶೆ ವಿಗ್ರಹಾರಾಧನೆಯಾಗಿರುವ ಲೋಭ ಇವುಗಳನ್ನು ಸಾಯಿಸಿರಿ. ಇವುಗಳ ನಿಮಿತ್ತ ಅವಿಧೇಯ ರಾದ ಮಕ್ಕಳ ಮೇಲೆ ದೇವರ ಕೋಪವು ಬರುತ್ತದೆ. ಪೂರ್ವದಲ್ಲಿ ನೀವು ಸಹ ಅಂಥವುಗಳಲ್ಲಿ ಜೀವಿಸುತ್ತಿ ದ್ದಾಗ ಅವುಗಳಂತೆ ನಡೆದಿರಿ. ಈಗಲಾದರೋ ಕ್ರೋಧ ಕೋಪ ಮತ್ಸರ ದೇವದೂಷಣೆ ನಿಮ ಬಾಯಿಂದ ಹೊರಡುವ ದುರ್ಭಾಷೆ ಇವುಗಳನ್ನು ವಿಸರ್ಜಿಸಿಬಿಡಿರಿ. ಒಬ್ಬರಿಗೊಬ್ಬರು ಸುಳ್ಳಾಡಬೇಡಿರಿ; ನೀವು ಹಳೇ ಮನುಷ್ಯನನ್ನು ಅವನ ಕೃತ್ಯಗಳ ಕೂಡ ತೆಗೆದುಹಾಕಿದ್ದೀರಲ್ಲವೇ?
- James 2:10–12 ಯಾಕೋಬನು 2:10–12ಯಾಕಂದರೆ ಯಾವನಾದರೂ ನ್ಯಾಯಪ್ರಮಾಣವನ್ನೆಲ್ಲಾ ಕೈಕೊಂಡು ನಡೆದು ಒಂದೇ ಒಂದರಲ್ಲಿ ತಪ್ಪಿದರೆ ಅವನು ಎಲ್ಲಾ ವಿಷಯದಲ್ಲಿಯೂ ಅಪರಾಧಿಯಾಗುತ್ತಾನೆ. ವ್ಯಭಿಚಾರ ಮಾಡಬಾರ ದೆಂದು ಹೇಳಿದಾತನೇ--ನರಹತ್ಯ ಮಾಡಬಾರ ದೆಂತಲೂ ಹೇಳಿದನು. ಆದಕಾರಣ ನೀನು ವ್ಯಭಿಚಾರ ಮಾಡದೆ ಇದ್ದರೂ ನರಹತ್ಯ ಮಾಡಿದರೆ ನ್ಯಾಯ ಪ್ರಮಾಣವನ್ನು ವಿಾರಿದವನಾದಿ. ಬಿಡುಗಡೆಯ ನ್ನುಂಟು ಮಾಡುವ ನ್ಯಾಯಪ್ರಮಾಣದಿಂದ ಅವರು ತೀರ್ಪು ಹೊಂದುವವರಿಗೆ ತಕ್ಕಂತೆಯೇ ನೀವು ಮಾತನಾಡಿರಿ. ಹಾಗೆಯೇ ಮಾಡಿರಿ.
- Psalm 119:59 ಕೀರ್ತನೆಗಳು 119:59ನನ್ನ ಮಾರ್ಗಗಳನ್ನು ಯೋಚಿಸಿಕೊಂಡು ನಿನ್ನ ಸಾಕ್ಷಿಗಳ ಕಡೆಗೆ ನನ್ನ ಪಾದ ಗಳನ್ನು ತಿರುಗಿಸಿದ್ದೇನೆ.
- Ezekiel 18:21 ಯೆಹೆಜ್ಕೇಲನು 18:21ಆದರೆ ದುಷ್ಟನು ತಾನು ಮಾಡಿದ ಪಾಪಗಳನ್ನೆಲ್ಲಾ ಬಿಟ್ಟು ತಿರುಗಿಕೊಂಡು ನನ್ನ ನಿಯಮಗಳನ್ನೆಲ್ಲಾ ಕೈಕೊಂಡು ನ್ಯಾಯವನ್ನೂ ನೀತಿಯನ್ನೂ ನಡೆಸಿದರೆ ಅವನು ಸಾಯದೆ ನಿಶ್ಚಯವಾಗಿ ಬದುಕುವನು.
- Ezekiel 12:3 ಯೆಹೆಜ್ಕೇಲನು 12:3ಮನುಷ್ಯ ಪುತ್ರನೇ, ನೀನು ತೆಗೆದುಹಾಕು ವದಕ್ಕೆ ಸಾಮಾನುಗಳನ್ನು ಸಿದ್ಧಮಾಡಿ ಹಗಲಿನಲ್ಲಿ ಅವರ ದೃಷ್ಟಿಯಿಂದ ತೊಲಗಿ ಹೋಗು; ಹೌದು, ಅವರ ಕಣ್ಣುಗಳ ಮುಂದೆಯೇ ನಿನ್ನ ಸ್ಥಳವನ್ನು ಬಿಟ್ಟು ಬೇರೊಂದು ಸ್ಥಳಕ್ಕೆ ಹೋಗು; ಅವರು ತಿರುಗಿ ಬೀಳುವ ಮನೆತನದವರಾದಾಗ್ಯೂ ಒಂದು ವೇಳೆ ಮನಸ್ಸು ಮಾಡಿಯಾರು.
- Titus 2:14 ತೀತನಿಗೆ 2:14ಆತನು ನಮ್ಮನ್ನು ಸಕಲ ದುಷ್ಟತನದಿಂದ ವಿಮೋಚಿಸುವದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಅಸಮಾನ್ಯ ಜನರನ್ನು ತನಗಾಗಿ ಪರಿಶುದ್ಧ ಮಾಡುವದಕ್ಕೂ ನಮಗೋಸ್ಕರ ತನ್ನನ್ನು ತಾನೇ ಒಪ್ಪಿಸಿ ಕೊಟ್ಟನು.ಈ ಕಾರ್ಯಗಳ ವಿಷಯದಲ್ಲಿ ಮಾತನಾಡುತ್ತಾ ಎಚ್ಚರಿಸುತ್ತಾ ಪೂರ್ಣ ಅಧಿಕಾರದಿಂದ ಖಂಡಿಸುತ್ತಾ ಇರು. ಯಾರೂ ನಿನ್ನನ್ನು ತಿರಸ್ಕರಿಸದಿರಲಿ.
- Jeremiah 31:18–20 ಯೆರೆಮೀಯ 31:18–20ಎಫ್ರಾಯಾಮನು ಅಂಗಲಾಚುವದನ್ನು ನಿಶ್ಚಯ ವಾಗಿ ಕೇಳಿದೆನು; ಹೇಗಂದರೆ--ನೀನು ನನ್ನನ್ನು ಶಿಕ್ಷಿ ಸಿದಿ; ತಿದ್ದುಪಾಟಾಗದ ಎತ್ತಿಗೆ ಆದ ಹಾಗೆ ನನಗೆ ಶಿಕ್ಷೆ ಆಯಿತು; ನನ್ನನ್ನು ತಿರುಗಿಸು, ಆಗ ತಿರುಗಿ ಕೊಳ್ಳುವೆನು; ಓ ಕರ್ತನೇ, ನೀನೇ ನನ್ನ ದೇವ ರಾಗಿದ್ದೀ. ನಿಶ್ಚಯವಾಗಿ ನಾನು ತಿರುಗಿಕೊಂಡ ಮೇಲೆ ಪಶ್ಚಾತ್ತಾಪಪಟ್ಟೆನು; ಉಪದೇಶಹೊಂದಿದ ಮೇಲೆ ತೊಡೆಯ ಮೇಲೆ ಬಡಕೊಂಡೆನು; ನಾಚಿಕೆಪಟ್ಟೆನು, ಹೌದು, ಅವಮಾನ ಹೊಂದಿದೆನು; ನನ್ನ ಯೌವನದ ನಿಂದೆಯನ್ನು ತಾಳಿಕೊಂಡೆನು. ಎಫ್ರಾಯಾಮನು ನನಗೆ ಪ್ರಿಯಕುಮಾರನೋ? ಅವನು ಆನಂದವುಳ್ಳ ಮಗುವೋ? ನಾನು ಅವನಿಗೆ ವಿರೋಧವಾಗಿ ಮಾತ ನಾಡಿದಂದಿನಿಂದ ಅವನನ್ನು ಇನ್ನು ಬಹಳವಾಗಿ ಜ್ಞಾಪಕಮಾಡುತ್ತೇನೆ; ಆದದರಿಂದ ನನ್ನ ಕರುಳುಗಳು ಅವನಿಗೋಸ್ಕರ ಕಳವಳಪಡುತ್ತವೆ. ನಾನು ನಿಶ್ಚಯವಾಗಿ ಅವನನ್ನು ಕನಿಕರಿಸುವೆನೆಂದು ಕರ್ತನು ಅನ್ನುತ್ತಾನೆ.
- Psalm 119:6 ಕೀರ್ತನೆಗಳು 119:6ಆಗ ನಿನ್ನ ಆಜ್ಞೆಗಳನ್ನೆಲ್ಲಾ ದೃಷ್ಟಿಸುವಾಗ ನಾಚಿಕೆ ಪಡೆನು.
- Ezekiel 18:31 ಯೆಹೆಜ್ಕೇಲನು 18:31ನೀವು ಮಾಡುವ ದುಷ್ಟತ್ವಗಳನ್ನೆಲ್ಲಾ ನಿಮ್ಮಿಂದ ಬಿಟ್ಟುಬಿಡಿರಿ; ಹೊಸ ಹೃದಯವನ್ನೂ ಹೊಸ ಆತ್ಮವನ್ನೂ ನೀವು ಪಡಕೊಳ್ಳಿರಿ; ಯಾಕಂದರೆ ಓ ಇಸ್ರಾಯೇಲಿನ ಮನೆತನದವರೇ, ನೀವು ಸಾಯುವದೇಕೆ?ಸಾಯುವವನ ಸಾವಿನಲ್ಲಿ ನನಗೆ ಸಂತೋಷವಿಲ್ಲವೆಂದು ದೇವರಾದ ಕರ್ತನು ಹೇಳುತ್ತಾನೆ; ಆದಕಾರಣ ತಿರುಗಿಕೊಂಡು ಬಾಳಿರಿ.
- Ezekiel 18:14 ಯೆಹೆಜ್ಕೇಲನು 18:14ಆಗ ಇಗೋ, ಅವನು ಮಗನನ್ನು ಪಡೆದ ಮೇಲೆ ತನ್ನ ತಂದೆ ಮಾಡಿದ ಪಾಪಗಳನ್ನೆಲ್ಲಾ ನೋಡಿ ಆಲೊಚಿಸಿ, ಅವುಗಳಂತೆ ಮಾಡದೆ;