Ezekiel · chapter 18 · verse 31
Ezekiel 18:31 in Kannada
ನೀವು ಮಾಡುವ ದುಷ್ಟತ್ವಗಳನ್ನೆಲ್ಲಾ ನಿಮ್ಮಿಂದ ಬಿಟ್ಟುಬಿಡಿರಿ; ಹೊಸ ಹೃದಯವನ್ನೂ ಹೊಸ ಆತ್ಮವನ್ನೂ ನೀವು ಪಡಕೊಳ್ಳಿರಿ; ಯಾಕಂದರೆ ಓ ಇಸ್ರಾಯೇಲಿನ ಮನೆತನದವರೇ, ನೀವು ಸಾಯುವದೇಕೆ?ಸಾಯುವವನ ಸಾವಿನಲ್ಲಿ ನನಗೆ ಸಂತೋಷವಿಲ್ಲವೆಂದು ದೇವರಾದ ಕರ್ತನು ಹೇಳುತ್ತಾನೆ; ಆದಕಾರಣ ತಿರುಗಿಕೊಂಡು ಬಾಳಿರಿ.
Neevu maaduva dushtatvagalannellaa nimminda bittubidiri; hosa hrudayavannoo hosa aatmavannoo neevu padakolliri; yaakandare o israayelina manetanadavare, neevu saayuvadeke?saayuvavana saavinalli nanage santoshavillavendu devaraada kartanu heluttaane; aadakaarana tirugikondu baaliri.
Ezekiel 18:31 in English
- King James Version (KJV)
- Cast away from you all your transgressions, whereby ye have transgressed; and make you a new heart and a new spirit: for why will ye die, O house of Israel?
- World English Bible (WEB)
- Cast away from you all your transgressions in which you have transgressed; and make yourself a new heart and a new spirit. For why will you die, house of Israel?
- American Standard Version (ASV)
- Cast away from you all your transgressions, wherein ye have transgressed; and make you a new heart and a new spirit: for why will ye die, O house of Israel?
- Bible in Basic English (BBE)
- Put away all your evil-doing in which you have done sin; and make for yourselves a new heart and a new spirit: why are you desiring death, O children of Israel?
- Darby Translation (DBY)
- Cast away from you all your transgressions wherewith ye have transgressed, and make you a new heart and a new spirit: why then will ye die, house of Israel?
- Webster's Bible (WBS)
- Cast away from you all your transgressions, by which ye have transgressed; and make you a new heart and a new spirit: for why will ye die, O house of Israel?
- Young's Literal Translation (YLT)
- Cast from off you all your transgressions, By which ye have transgressed, And make to you a new heart, and a new spirit, And why do ye die, O house of Israel?
Read in context
- 29ಆದರೆ ಇಸ್ರಾಯೇಲಿನ ಮನೆತನದವರು ಕರ್ತನ ಮಾರ್ಗ ಸಮವಲ್ಲ ಎನ್ನುತ್ತಾರೆ. ಇಸ್ರಾಯೇಲಿನ ಮನೆತನದವರೇ, ನನ್ನ ಮಾರ್ಗ ಸರಿಯಲ್ಲವೇ? ನಿಮ್ಮ ಮಾರ್ಗಗಳು ಸಮವಲ್ಲದವುಗಳೇ.
- 30ಆದದರಿಂದ ಇಸ್ರಾಯೇಲಿನ ಮನೆತನದವರೇ, ನಿಮ್ಮ ನಿಮ್ಮ ಮಾರ್ಗಗಳ ಪ್ರಕಾರ ನ್ಯಾಯತೀರಿಸುವೆನಂದು ದೇವ ರಾದ ಕರ್ತನು ಹೇಳುತ್ತಾನೆ; ನಿಮ್ಮ ದುಷ್ಟತ್ವಗಳನ್ನೆಲ್ಲಾ ಬಿಟ್ಟು ತಿರುಗಿಕೊಂಡು ಪಶ್ಚಾತ್ತಾಪಪಡಿರಿ; ಆಗ ಅಕ್ರಮ ಗಳು ನಿಮ್ಮನ್ನು ಆಳುವದಿಲ್ಲ.
- 31ನೀವು ಮಾಡುವ ದುಷ್ಟತ್ವಗಳನ್ನೆಲ್ಲಾ ನಿಮ್ಮಿಂದ ಬಿಟ್ಟುಬಿಡಿರಿ; ಹೊಸ ಹೃದಯವನ್ನೂ ಹೊಸ ಆತ್ಮವನ್ನೂ ನೀವು ಪಡಕೊಳ್ಳಿರಿ; ಯಾಕಂದರೆ ಓ ಇಸ್ರಾಯೇಲಿನ ಮನೆತನದವರೇ, ನೀವು ಸಾಯುವದೇಕೆ?ಸಾಯುವವನ ಸಾವಿನಲ್ಲಿ ನನಗೆ ಸಂತೋಷವಿಲ್ಲವೆಂದು ದೇವರಾದ ಕರ್ತನು ಹೇಳುತ್ತಾನೆ; ಆದಕಾರಣ ತಿರುಗಿಕೊಂಡು ಬಾಳಿರಿ.
- 32ಸಾಯುವವನ ಸಾವಿನಲ್ಲಿ ನನಗೆ ಸಂತೋಷವಿಲ್ಲವೆಂದು ದೇವರಾದ ಕರ್ತನು ಹೇಳುತ್ತಾನೆ; ಆದಕಾರಣ ತಿರುಗಿಕೊಂಡು ಬಾಳಿರಿ.
Cross references
- Psalm 51:10 ಕೀರ್ತನೆಗಳು 51:10ಓ ದೇವರೇ, ಶುದ್ಧಹೃದಯವನ್ನು ನನ್ನಲ್ಲಿ ಸೃಷ್ಟಿಸು, ಸ್ಥಿರವಾದ ಆತ್ಮವನ್ನು ನನ್ನ ಅಂತರಂಗದಲ್ಲಿ ನೂತನಪಡಿಸು.
- Ezekiel 36:26 ಯೆಹೆಜ್ಕೇಲನು 36:26ನಿನಗೆ ಹೊಸ ಹೃದಯವನ್ನು ಕೊಟ್ಟು ಹೊಸ ಆತ್ಮ ವನ್ನು ನಿಮ್ಮೊಳಗೆ ಇಡುವೆನು; ನಿಮ್ಮ ದೇಹದಿಂದ ಕಲ್ಲಿನ ಹೃದಯವನ್ನು ಹೊರಗೆ ತೆಗೆದು ನಿಮಗೆ ಮಾಂಸದ ಹೃದಯವನ್ನು ಕೊಡುತ್ತೇನೆ.
- Ezekiel 11:19 ಯೆಹೆಜ್ಕೇಲನು 11:19ಅವರಿಗೆ ಒಂದು ಹೃದಯವನ್ನು ಕೊಡು ವೆನು. ನಿಮ್ಮಲ್ಲಿ ಒಂದು ಹೊಸ ಆತ್ಮವನ್ನು ಇಡುವೆನು; ಅವರೊಳಗಿಂದ ಕಠಿಣ ಹೃದಯವನ್ನು ಹೊರಗೆ ತೆಗೆದು ಮೃದು ಹೃದಯವನ್ನು ಕೊಡುವೆನು.
- Romans 8:13 ರೋಮಾಪುರದವರಿಗೆ 8:13ನೀವು ಶರೀರಭಾವವನ್ನು ಅನುಸರಿಸಿದರೆ ಸಾಯುವಿರಿ; ಆದರೆ ನೀವು ಆತ್ಮನಿಂದ ದೇಹದ ಕ್ರಿಯೆಗಳನ್ನು ಸಾಯಿಸುವದಾದರೆ ಜೀವಿಸುವಿರಿ.
- Isaiah 1:16–17 ಯೆಶಾಯ 1:16–17ನಿಮ್ಮನ್ನು ತೊಳೆದುಕೊಂಡು ಶುದ್ಧ ಮಾಡಿಕೊಳ್ಳಿರಿ; ನನ್ನ ಕಣ್ಣೆದುರಿನಿಂದ ನಿಮ್ಮ ದುಷ್ಟ ಕೃತ್ಯಗಳನ್ನು ತೆಗೆದುಹಾಕಿರಿ, ಕೆಟ್ಟದ್ದನ್ನು ನಿಲ್ಲಿಸಿಬಿಡಿರಿ; ಒಳ್ಳೆಯದನ್ನು ಮಾಡಲು ಕಲಿತುಕೊಳ್ಳಿರಿ; ನ್ಯಾಯ ವನ್ನು ಹುಡುಕಿರಿ, ಹಿಂಸೆಪಡುವವರನ್ನು ಉಪಚರಿಸಿರಿ, ಅನಾಥರಿಗೆ ನ್ಯಾಯತೀರಿಸಿರಿ, ವಿಧವೆಯರ ಪರವಾಗಿವಾದಿಸಿರಿ.
- Romans 12:2 ರೋಮಾಪುರದವರಿಗೆ 12:2ಇಹಲೋಕವನ್ನು ಅನುಸರಿಸದೆ ಉತ್ತಮ ವಾದದ್ದೂ ಮೆಚ್ಚಿಕೆಯಾದದ್ದೂ ಪರಿಪೂರ್ಣ ವಾದದ್ದೂ ಆಗಿರುವ ದೇವರ ಚಿತ್ತವೇನೆಂದು ನೀವು ವಿವೇಚಿಸಿ ತಿಳಿದುಕೊಳ್ಳುವಂತೆ ನೂತನ ಮನಸ್ಸನ್ನು ಹೊಂದಿಕೊಂಡು ರೂಪಾಂತರಗೊಂಡವರಾಗಿರ್ರಿ.
- Ezekiel 33:11 ಯೆಹೆಜ್ಕೇಲನು 33:11ಅವರಿಗೆ ಹೀಗೆ ಹೇಳು ಎಂದು ದೇವರಾದ ಕರ್ತನು ಹೇಳುತ್ತಾನೆ --ನನ್ನ ಜೀವದಾಣೆ, ನನಗೆ ದುಷ್ಟನ ಸಾವಿನಿಂದ ಸಂತೋಷ ಸಿಗುವದಿಲ್ಲ; ಆದರೆ ಆ ದುಷ್ಟನು ದುರ್ಮಾ ರ್ಗದಿಂದ ತಿರುಗಿಕೊಂಡು ಜೀವಿಸುವದಾದರೆ ಅದರಲ್ಲಿಯೇ ನನಗೆ ಸಂತೋಷಸಿಗುವದು; ಇಸ್ರಾ ಯೇಲಿನ ಮನೆತನದವರೇ, ನೀವು ನಿಮ್ಮ ನಿಮ್ಮ ದುಷ್ಟಮಾರ್ಗಗಳನ್ನು ಬಿಟ್ಟು ತಿರುಗಿರಿ, ನೀವು ತಿರುಗಿ ಕೊಳ್ಳಿರಿ. ನೀವು ಸಾಯುವದು ಯಾಕೆ?
- 1 Peter 2:1 1 ಪೇತ್ರನು 2:1ಆದಕಾರಣ ಎಲ್ಲಾ ಕೆಟ್ಟತನವನ್ನೂ ಎಲ್ಲಾ ವಂಚನೆಯನ್ನೂ ಕಪಟವನ್ನೂ ಹೊಟ್ಟೇ ಕಿಚ್ಚನ್ನೂ ಎಲ್ಲಾ ಕೆಟ್ಟ ಮಾತುಗಳನ್ನೂ ವಿಸರ್ಜಿಸಿರಿ.
- Deuteronomy 30:19 ಧರ್ಮೋಪದೇಶಕಾಂಡ 30:19ನಾನು ಜೀವವನ್ನೂ ಮರಣವನ್ನೂ, ಆಶೀರ್ವಾದವನ್ನೂ ಶಾಪ ವನ್ನೂ ನಿನ್ನ ಮುಂದೆ ಇಟ್ಟಿದ್ದೇನೆಂಬದಕ್ಕೆ ಆಕಾಶವನ್ನೂ ಭೂಮಿಯನ್ನೂ ಈಹೊತ್ತು ನಿಮ್ಮ ಮೇಲೆ ಸಾಕ್ಷಿಗಳಾಗಿ ಕರೆಯುತ್ತೇನೆ.ನಾನು ಜೀವವನ್ನೂ ಮರಣವನ್ನೂ, ಆಶೀರ್ವಾದವನ್ನೂ ಶಾಪ ವನ್ನೂ ನಿನ್ನ ಮುಂದೆ ಇಟ್ಟಿದ್ದೇನೆಂಬದಕ್ಕೆ ಆಕಾಶವನ್ನೂ ಭೂಮಿಯನ್ನೂ ಈಹೊತ್ತು ನಿಮ್ಮ ಮೇಲೆ ಸಾಕ್ಷಿಗಳಾಗಿ ಕರೆಯುತ್ತೇನೆ.
- Deuteronomy 30:15 ಧರ್ಮೋಪದೇಶಕಾಂಡ 30:15ನೋಡು, ನಾನು ಈಹೊತ್ತು ಜೀವವನ್ನೂ ಮರಣವನ್ನೂ, ಒಳ್ಳೇದನ್ನೂ ಕೆಟ್ಟದ್ದನ್ನೂ ನಿನ್ನ ಮುಂದೆ ಇಟ್ಟಿದ್ದೇನೆ.
- Isaiah 55:7 ಯೆಶಾಯ 55:7ದುಷ್ಟನು ತನ್ನ ಮಾರ್ಗವನ್ನೂ ಅನೀತಿವಂತನು ತನ್ನ ಆಲೋಚನೆಗಳನ್ನೂ ತೊರೆದುಬಿಟ್ಟು ಕರ್ತನ ಕಡೆಗೆ ಹಿಂತಿರುಗಲಿ; ಆತನು ಅವನ ಮೇಲೆ ಕರುಣೆಯಿಡು ವನು; ನಮ್ಮ ದೇವರ ಬಳಿಗೂ ಹಿಂತಿರುಗಲಿ, ಆತನು ಹೇರಳವಾಗಿ ಕ್ಷಮಿಸುವನು.
- Ephesians 4:22–32 ಎಫೆಸದವರಿಗೆ 4:22–32ಯೇಸುವಿನಲ್ಲಿರುವ ಸತ್ಯೋಪದೇಶವು ಯಾವದೆಂದರೆ--ನೀವು ನಿಮ ಹಿಂದಿನ ನಡತೆಯನ್ನು ಅನುಸರಿಸದೆ ಪೂರ್ವಸ್ವಭಾವ ವನ್ನು ತೆಗೆದು ಹಾಕಿಬಿಡಬೇಕು; ಅದು ಮೋಸಕರವಾದ ದುರಾಶೆಗಳಿಂದ ಕೆಟ್ಟು ಹೋಗುವಂಥದು. ನೀವು ನಿಮ್ಮ ಮನಸ್ಸಿನಭಾವದಲ್ಲಿ ಹೊಸಬರಾಗಿ ನೂತನ ಸ್ವಭಾವವನ್ನು ಧರಿಸಿಕೊಳ್ಳಿರಿ. ಆ ಸ್ವಭಾವವು ದೇವರ ಹೋಲಿಕೆಯ ಮೇರೆಗೆ ನೀತಿಯಲ್ಲಿಯೂ ನಿಜವಾದ ಪರಿಶುದ್ಧತೆಯಲ್ಲಿಯೂ ನಿರ್ಮಿಸಲ್ಪಟ್ಟಿದೆ. ಆದ ಕಾರಣ ಸುಳ್ಳಾಡುವದನ್ನು ಬಿಟ್ಟು ಪ್ರತಿಯೊಬ್ಬನು ತನ್ನ ನೆರೆಯವನ ಸಂಗಡ ಸತ್ಯವನ್ನೇ ಆಡಲಿ; ಯಾಕಂದರೆ ನಾವು ಒಬ್ಬರಿಗೊಬ್ಬರು ಅಂಗಗಳಾಗಿದ್ದೇವಲ್ಲಾ. ಕೋಪಮಾಡಬೇಕಾದರೂ ಪಾಪ ಮಾಡಬೇಡಿರಿ; ಸೂರ್ಯನು ಮುಳುಗುವದಕ್ಕಿಂತ ಮುಂಚೆ ನಿಮ್ಮ ಸಿಟ್ಟು ತೀರಲಿ; ಸೈತಾನನಿಗೆ ಅವಕಾಶ ಕೊಡಲೇಬೇಡಿರಿ. ಕಳವು ಮಾಡುವವನು ಇನ್ನು ಮೇಲೆ ಕಳವು ಮಾಡದೆ ಕೈಯಿಂದ ಯಾವದಾದರೊಂದು ಒಳ್ಳೇ ಉದ್ಯೋಗವನ್ನು ಮಾಡಿ ದುಡಿಯಲಿ; ಆಗ ಕೊರತೆಯಲ್ಲಿರುವವರಿಗೆ ಕೊಡು ವದಕ್ಕೆ ಅವನಿಂದಾ ಗುವದು. ನಿಮ್ಮ ಬಾಯೊಳಗಿಂದ ಯಾವ ಕೆಟ್ಟ ಮಾತೂ ಹೊರಡಬಾರದು; ಆದರೆ ಭಕ್ತಿಯನ್ನು ವೃದ್ಧಿ ಮಾಡುವಂಥ ಒಳ್ಳೆಮಾತು ಇದ್ದರೆ ಕೇಳುವವರ ಹಿತ ಕ್ಕಾಗಿ ಅದನ್ನು ಆಡಿರಿ. ದೇವರ ಪವಿತ್ರಾತ್ಮನನ್ನು ದುಃಖಪಡಿಸಬೇಡಿರಿ; ಆತನಲ್ಲಿಯೇ ವಿಮೋಚನೆಯ ದಿನಕ್ಕಾಗಿ ಮುದ್ರೆ ಹೊಂದಿದ್ದೀರಲ್ಲಾ. ಎಲ್ಲಾ ದ್ವೇಷ, ಕೋಪ, ಕ್ರೋಧ, ಕಲಹ, ದೂಷಣೆ ಇವುಗಳನ್ನೂ ಸಕಲ ವಿಧವಾದ ದುಷ್ಟತನವನ್ನೂ ನಿಮ್ಮಿಂದ ದೂರ ಮಾಡಿರಿ.ದೇವರು ನಿಮಗೆ ಕ್ರಿಸ್ತನಲ್ಲಿ ಕ್ಷಮಿಸಿ ದಂತೆಯೇ ನೀವು ಒಬ್ಬರಿಗೊಬ್ಬರು ಉಪಕಾರಿಗಳಾ ಗಿಯೂ ಕರುಣೆಯುಳ್ಳವರಾಗಿಯೂ ಕ್ಷಮಿಸುವವ ರಾಗಿಯೂ ಇರ್ರಿ. ದೇವರು ನಿಮಗೆ ಕ್ರಿಸ್ತನಲ್ಲಿ ಕ್ಷಮಿಸಿ ದಂತೆಯೇ ನೀವು ಒಬ್ಬರಿಗೊಬ್ಬರು ಉಪಕಾರಿಗಳಾ ಗಿಯೂ ಕರುಣೆಯುಳ್ಳವರಾಗಿಯೂ ಕ್ಷಮಿಸುವವ ರಾಗಿಯೂ ಇರ್ರಿ.