Ezekiel · chapter 18 · verse 5
Ezekiel 18:5 in Kannada
ಒಬ್ಬ ಮನುಷ್ಯನು ನೀತಿವಂತ ನಾಗಿದ್ದು, ನೀತಿಯನ್ನೂ ನ್ಯಾಯವನ್ನೂ ನಡಿಸಿ,
Obba manushyanu neetivanta naagiddu, neetiyannoo nyaayavannoo nadisi,
Ezekiel 18:5 in English
- King James Version (KJV)
- But if a man be just, and do that which is lawful and right,
- World English Bible (WEB)
- “But if a man is just, and does that which is lawful and right,
- American Standard Version (ASV)
- But if a man be just, and do that which is lawful and right,
- Bible in Basic English (BBE)
- But if a man is upright, living rightly and doing righteousness,
- Darby Translation (DBY)
- And if a man be righteous, and do judgment and justice:
- Webster's Bible (WBS)
- But if a man is just, and doeth that which is lawful and right,
- Young's Literal Translation (YLT)
- And a man, when he is righteous, And hath done judgment and righteousness,
Read in context
- 3ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ನನ್ನ ಜೀವದಾಣೆ, ನೀವು ಈ ಗಾದೆಯನ್ನು ಇಸ್ರಾಯೇಲಿನಲ್ಲಿ ಇನ್ನು ಹೇಳುವ ಸಂದರ್ಭವು ಇರುವದಿಲ್ಲ.
- 4ಇಗೋ, ಎಲ್ಲಾ ಪ್ರಾಣಗಳು ನನ್ನವೇ; ತಂದೆಯ ಪ್ರಾಣವು ಹೇಗೋ ಹಾಗೆಯೇ ಮಗನ ಪ್ರಾಣವು ನನ್ನದೇ; ಪಾಪ ಮಾಡುವವನೇ ತಾನಾ ಗಿಯೇ ಸಾಯುವನು.
- 5ಒಬ್ಬ ಮನುಷ್ಯನು ನೀತಿವಂತ ನಾಗಿದ್ದು, ನೀತಿಯನ್ನೂ ನ್ಯಾಯವನ್ನೂ ನಡಿಸಿ,
- 6ಪರ್ವತಗಳ ಮೇಲೆ ತಿನ್ನದೆ, ಇಸ್ರಾಯೇಲಿನ ಮನೆ ತನದವರ ವಿಗ್ರಹಗಳ ಕಡೆಗೆ ತನ್ನ ಕಣ್ಣುಗಳನ್ನು ಎತ್ತದೆ, ತನ್ನ ನೆರೆಯವನ ಹೆಂಡತಿಯನ್ನು ಕೆಡಿಸದೆ, ಮುಟ್ಟಾ ಗಿರುವ ಸ್ತ್ರೀ ಹತ್ತಿರ ಸವಿಾಪಿಸದೆ;
- 7ಯಾರನ್ನೂ ಉಪದ್ರಪಡಿಸದೆ, ಸಾಲ ಮಾಡಿದವನ ಒತ್ತೆಯನ್ನು ಹಿಂದಕ್ಕೆ ಕೊಟ್ಟು, ಹಿಂಸಿಸಿ, ಸುಲಿಗೆ ಮಾಡದೆ, ಹಸಿದವನಿಗೆ ತನ್ನ ರೊಟ್ಟಿಯನ್ನು ಕೊಟ್ಟು ಮತ್ತು ಬೆತ್ತಲೆ ಯಿರುವವನಿಗೆ ಬಟ್ಟೆಯನ್ನು ಹೊದಿಸಿ,
Cross references
- Ezekiel 33:14 ಯೆಹೆಜ್ಕೇಲನು 33:14ನಾನು ದುಷ್ಟನಿಗೆ--ನೀನು ನಿಶ್ಚಯ ವಾಗಿ ಸಾಯುವಿ ಎಂದು ಹೇಳುವಾಗ ಅವನು ಪಾಪ ದಿಂದ ತಿರುಗಿಕೊಂಡರೆ ಮತ್ತು ನ್ಯಾಯವನ್ನೂ ನೀತಿ ಯನ್ನೂ ಮಾಡಿದರೆ
- Proverbs 21:3 ಜ್ಞಾನೋಕ್ತಿಗಳು 21:3ಯಜ್ಞಕ್ಕಿಂತ ನೀತಿನ್ಯಾಯಗಳನ್ನು ನಡಿಸುವದು ಕರ್ತ ನಿಗೆ ಎಷ್ಟೋ ಮೆಚ್ಚಿಕೆಯಾಗಿದೆ.
- 1 John 3:7 1 ಯೋಹಾನನು 3:7ಚಿಕ್ಕ ಮಕ್ಕಳೇ, ಯಾರೂ ನಿಮ್ಮನ್ನು ಮೋಸಗೊಳಿಸದಿರಲಿ. ಆತನು ಹೇಗೆ ನೀತಿವಂತ ನಾಗಿದ್ದಾನೋ ಹಾಗೆಯೇ ನೀತಿಯನ್ನನುಸರಿಸುವವನು ನೀತಿವಂತನಾಗಿದ್ದಾನೆ.
- James 1:22–25 ಯಾಕೋಬನು 1:22–25ನೀವು ವಾಕ್ಯದ ಪ್ರಕಾರ ನಡೆಯುವವರಾಗಿರ್ರಿ; ಅದನ್ನು ಕೇಳುವವರು ಮಾತ್ರವೇ ಆಗಿದ್ದು ನಿಮ್ಮನ್ನು ನೀವೇ ಮೋಸಗೊಳಿಸ ಬೇಡಿರಿ. ಯಾವನಾದರೂ ವಾಕ್ಯವನ್ನು ಕೇಳುವವ ನಾಗಿದ್ದು ಅದರ ಪ್ರಕಾರ ನಡೆಯದಿದ್ದರೆ ಅವನು ಕನ್ನಡಿಯಲ್ಲಿ ತನ್ನ ಹುಟ್ಟು ಮುಖವನ್ನು ನೋಡಿದ ಮನುಷ್ಯನಂತಿರುವನು. ಇವನು ತನ್ನನ್ನು ನೋಡಿ ಕೊಂಡು ಹೋಗಿ ತಾನು ಹೀಗಿದ್ದೇನೆಂಬದನ್ನು ಆ ಕ್ಷಣವೇ ಮರೆತುಬಿಡುವನು. ಆದರೆ ಬಿಡುಗಡೆ ಯನ್ನುಂಟುಮಾಡುವ ಪರಿಪೂರ್ಣವಾದ ನಿಯಮ ವನ್ನು ಲಕ್ಷ್ಯಕೊಟ್ಟು ನೋಡಿ ಇನ್ನೂ ನೋಡುತ್ತಲೇ ಇರುವವನು (ವಾಕ್ಯವನ್ನು) ಕೇಳಿ ಮರೆತುಹೋಗುವವ ನಾಗಿರದೆ ಅದರ ಪ್ರಕಾರ ನಡೆಯುವವನಾಗಿದ್ದು ತನ್ನ ಕ್ರಿಯೆಯಿಂದ ಧನ್ಯನಾಗುವನು.
- Psalm 24:4–6 ಕೀರ್ತನೆಗಳು 24:4–6ಶುದ್ಧ ಹಸ್ತಗಳೂ ನಿರ್ಮಲವಾದ ಹೃದ ಯವೂ ಉಳ್ಳವನಾಗಿದ್ದು ತನ್ನ ಪ್ರಾಣವನ್ನು ವ್ಯರ್ಥ ತ್ವಕ್ಕೆ ಎತ್ತದೆಯೂ ಇಲ್ಲವೆ ಮೋಸದಿಂದ ಆಣೆ ಇಡ ದೆಯೂ ಇರುವವನೇ. ಅವನೇ ಕರ್ತನ ಕಡೆಯಿಂದ ಆಶೀರ್ವಾದವನ್ನೂ ತನ್ನ ರಕ್ಷಕನಾದ ದೇವರಿಂದ ನೀತಿ ಯನ್ನೂ ಹೊಂದುವನು. ಆತನನ್ನು ಹುಡುಕುವ ಸಂತತಿಯು ಇದೇ; ಓ ಯಾಕೋಬ್ಯರ ದೇವರೇ, ನಿನ್ನ ಸನ್ನಿಧಿಯನ್ನು ಹುಡುಕುವವರು ಇಂಥವರೇ. ಸೆಲಾ.
- Romans 2:7–10 ರೋಮಾಪುರದವರಿಗೆ 2:7–10ಯಾರು ಒಳ್ಳೆಯದನ್ನು ಮಾಡುವದರಲ್ಲಿ ತಾಳ್ಮೆಯಿಂದಿದ್ದು ಮಹಿಮೆ ಮಾನ ಮತ್ತು ನಿರ್ಲಯತ್ವವನ್ನು ಹುಡುಕು ತ್ತಾರೋ ಅವರಿಗೆ ನಿತ್ಯಜೀವವನ್ನೂ ಕಲಹಪ್ರಿಯ ರಾಗಿದ್ದು ಸತ್ಯಕ್ಕೆ ವಿಧೇಯರಾಗದೆ ಅನೀತಿಗೆ ವಿಧೇಯ ರಾಗಿ ಕೆಟ್ಟದ್ದನ್ನು ಮಾಡುವ ಪ್ರತಿಯೊಬ್ಬನಿಗೆ ಅಂದರೆ ಮೊದಲು ಯೆಹೂದ್ಯರಿಗೆ ಆಮೇಲೆ ಅನ್ಯರಿಗೆ ಸಹ ರೌದ್ರ, ಕೋಪ, ಸಂಕಟ ಮತ್ತು ಯಾತನೆಯನೂ ಆದರೆ ಒಳ್ಳೆಯದನ್ನು ಮಾಡುವ ಪ್ರತಿ ಮನುಷ್ಯನಿಗೆ ಅಂದರೆ ಮೊದಲು ಯೆಹೂದ್ಯರಿಗೆ ಆಮೇಲೆ ಅನ್ಯರಿಗೆ ಸಹ ಮಹಿಮೆ ಮಾನ ಮತ್ತು ಸಮಾಧಾನವನ್ನೂ ಕೊಡುವನು.
- 1 John 5:2–5 1 ಯೋಹಾನನು 5:2–5ನಾವು ದೇವರನ್ನು ಪ್ರೀತಿಸಿ ಆತನ ಆಜ್ಞೆಗಳನ್ನು ಅನುಸರಿಸುವದರಿಂದಲೇ ದೇವರ ಮಕ್ಕಳನ್ನು ಪ್ರೀತಿಸುತ್ತೇವೆಂಬದನ್ನು ತಿಳಿದುಕೊಳ್ಳುತ್ತೇವೆ. ದೇವರ ಪ್ರೀತಿ ಏನಂದರೆ ಆತನ ಆಜ್ಞೆಗಳನ್ನು ಕೈಕೊಂಡು ನಡೆಯುವದೇ, ಆತನ ಆಜ್ಞೆಗಳು ಕಠಿಣ ವಾದವುಗಳಲ್ಲ. ಯಾಕಂದರೆ ದೇವರಿಂದ ಹುಟ್ಟಿರು ವಂಥದೆಲ್ಲವು ಲೋಕವನ್ನು ಜಯಿಸುತ್ತದೆ. ಲೋಕವನ್ನು ಜಯಿಸಿದಂಥ ಆ ಜಯವು ನಮ್ಮ ನಂಬಿಕೆಯೇ. ಯೇಸುವು ದೇವರ ಮಗನೆಂದು ನಂಬಿದವನೇ ಅಲ್ಲದೆ ಲೋಕವನ್ನು ಜಯಿಸುವವನು ಯಾರು?
- Genesis 18:19 ಆದಿಕಾಂಡ 18:19ಕರ್ತನು ಅಬ್ರಹಾಮ ನಿಗೆ ಹೇಳಿದ್ದು ನೆರವೇರುವಂತೆ ಅವನು ತನ್ನ ಮಕ್ಕಳಿಗೂ ತರುವಾಯ ಅವನ ಮನೆಯವರಿಗೂ ಆತನ ಮಾರ್ಗವನ್ನು ಕೈಕೊಂಡು ನೀತಿನ್ಯಾಯಗಳನ್ನು ಅನುಸರಿಸಬೇಕೆಂದು ಅಪ್ಪಣೆಕೊಡುವನು ಎಂದು ನನಗೆ ತಿಳಿದದೆ ಎಂದು ಅಂದುಕೊಂಡನು.
- 1 John 2:3 1 ಯೋಹಾನನು 2:3ನಾವು ಆತನ ಆಜ್ಞೆಗಳನ್ನು ಕೈಕೊಂಡು ನಡೆಯು ವದರಿಂದಲೇ ಆತನನ್ನು ಬಲ್ಲವರಾಗಿದ್ದೇವೆಂದು ತಿಳು ಕೊಳ್ಳುತ್ತೇವೆ.
- 1 John 2:29 1 ಯೋಹಾನನು 2:29ಆತನು ನೀತಿವಂತನಾಗಿ ದ್ದಾನೆಂಬದು ನಿಮಗೆ ಗೊತ್ತಾಗಿದ್ದರೆ ನೀತಿಯನ್ನು ಅನುಸರಿಸುವ ಪ್ರತಿಯೊಬ್ಬನು ಆತನಿಂದ ಹುಟ್ಟಿದವನಾಗಿದ್ದಾನೆಂದು ನೀವು ತಿಳಿದಿದ್ದೀರಿ.
- James 2:14–26 ಯಾಕೋಬನು 2:14–26ನನ್ನ ಸಹೋದರರೇ, ಒಬ್ಬನು ತನಗೆ ನಂಬಿಕೆ ಯುಂಟೆಂದು ಹೇಳಿಕೊಂಡು ಕ್ರಿಯೆಗಳಿಲ್ಲದವನಾಗಿದ್ದರೆ ಪ್ರಯೋಜನವೇನು? ಅಂಥ ನಂಬಿಕೆಯು ಅವನನ್ನು ರಕ್ಷಿಸುವದೋ? ಒಬ್ಬ ಸಹೋದರನಿಗೆ ಇಲ್ಲವೆ ಒಬ್ಬ ಸಹೋದರಿಗೆ ಬಟ್ಟೆಯೂ ಆ ದಿನದ ಆಹಾರವೂ ಇಲ್ಲದಿರುವಾಗ ನಿಮ್ಮಲ್ಲಿ ಒಬ್ಬನು ಅವರಿಗೆ ದೇಹಕ್ಕೆ ಬೇಕಾದವುಗಳನ್ನು ಕೊಡದೆ--ಸಮಾಧಾನದಿಂದ ಹೋಗಿರಿ, ಬೆಂಕಿಕಾಯಿಸಿಕೊಳ್ಳಿರಿ, ಹೊಟ್ಟೆತುಂಬಿಸಿ ಕೊಳ್ಳಿರಿ ಎಂದು ಹೇಳಿದರೆ ಪ್ರಯೋಜನವೇನು? ಹಾಗೆಯೇ ಕ್ರಿಯೆಗಳಿಲ್ಲದಿದ್ದರೆ ನಂಬಿಕೆಯು ಒಂಟಿಯಾಗಿದ್ದು ಸತ್ತದ್ದಾಗಿದೆ. ಹೌದು, ಒಬ್ಬ ಮನುಷ್ಯನು--ನಿನಗೆ ನಂಬಿಕೆಯುಂಟು, ನನಗೆ ಕ್ರಿಯೆಗಳುಂಟು; ನೀನು ಕ್ರಿಯೆಗಳಿಲ್ಲದೆ ನಿನ್ನ ನಂಬಿಕೆ ಯನ್ನು ನನಗೆ ತೋರಿಸು; ನಾನು ನನ್ನ ಕ್ರಿಯೆಗಳ ಮುಖಾಂತರ ನನ್ನ ನಂಬಿಕೆಯನ್ನು ನಿನಗೆ ತೋರಿಸುತ್ತೇನೆ ಎಂದು ಹೇಳಬಹುದು. ದೇವರು ಒಬ್ಬನೇ ಎಂದು ನೀನು ನಂಬುವವನು, ನೀನು ಒಳ್ಳೇದು ಮಾಡುತ್ತೀ. ದೆವ್ವಗಳು ಕೂಡ ಹಾಗೆಯೇ ನಂಬಿ ನಡುಗುತ್ತವೆ. ಆದರೆ ಓ ವ್ಯರ್ಥವಾದವನೇ, ಕ್ರಿಯೆಗಳಿಲ್ಲದ ನಂಬಿಕೆಯು ಸತ್ತದ್ದೆಂದು ತಿಳಿದುಕೊಳ್ಳಲು ನಿನಗೆ ಇಷ್ಟವಿದೆಯೋ? ನಮ್ಮ ಪಿತೃವಾದ ಅಬ್ರಹಾಮನು ತನ್ನ ಮಗನಾದ ಇಸಾಕನನ್ನು ಯಜ್ಞವೇದಿಯ ಮೇಲೆ ಅರ್ಪಿಸಿದಾಗ ನೀತಿ ನಿರ್ಣಯವನ್ನು ಹೊಂದಿದ್ದು ಕ್ರಿಯೆಗಳಿಂದಲ್ಲವೇ? ಅವನ ನಂಬಿಕೆಯು ಹೇಗೆ ತನ್ನ ಕ್ರಿಯೆಗಳೊಂದಿಗೆ ಕಾರ್ಯ ನಡಿಸಿ ಆ ಕ್ರಿಯೆ ಗಳಿಂದಲೇ ನಂಬಿಕೆಯು ಸಿದ್ಧಿಗೆ ಬಂತೆಂಬದನ್ನು ನೀನು ಕಾಣುತ್ತೀಯಲ್ಲಾ? ಹೀಗೆ--ಅಬ್ರಹಾಮನು ದೇವರನ್ನು ನಂಬಿದನು; ಆ ನಂಬಿಕೆಯು ಅವನ ಲೆಕ್ಕಕ್ಕೆ ನೀತಿಯೆಂದು ಎಣಿಸಲ್ಪಟ್ಟಿತು ಎಂಬ ಬರಹವು ಹೇಳುವಂತೆ ನೆರವೇರಿತು. ಅವನು ದೇವರ ಸ್ನೇಹಿತ ನೆಂದು ಕರೆಯಲ್ಪಟ್ಟನು. ಹೀಗೆ ಮನುಷ್ಯನು ಕ್ರಿಯೆ ಗಳಿಂದ ನೀತಿವಂತನೆಂದು ನಿರ್ಣಯಿಸಲ್ಪಡುತ್ತಾನೆ ಹೊರತು ಬರೀ ನಂಬಿಕೆಯಿಂದಲ್ಲವೆಂದು ನೀವು ನೋಡುತ್ತೀರಿ. ಅದೇ ರೀತಿಯಾಗಿ ಸೂಳೆಯಾದ ರಹಾಬಳು ಸಹ ಗೂಢಚಾರರನ್ನು ಸೇರಿಸಿಕೊಂಡು ಬೇರೆ ದಾರಿಯಿಂದ ಅವರನ್ನು ಕಳುಹಿಸಿದ್ದರಲ್ಲಿ ಕ್ರಿಯೆಗಳಿಂದಲೇ ನೀತಿ ನಿರ್ಣಯವನ್ನು ಹೊಂದ ಲಿಲ್ಲವೇ?ಆತ್ಮವಿಲ್ಲದ ದೇಹವು ಸತ್ತದ್ದಾಗಿರುವ ಪ್ರಕಾರವೇ ಕ್ರಿಯೆಗಳಿಲ್ಲದ ನಂಬಿಕೆಯೂ ಸತ್ತದ್ದೇ. ಆತ್ಮವಿಲ್ಲದ ದೇಹವು ಸತ್ತದ್ದಾಗಿರುವ ಪ್ರಕಾರವೇ ಕ್ರಿಯೆಗಳಿಲ್ಲದ ನಂಬಿಕೆಯೂ ಸತ್ತದ್ದೇ.
- Matthew 7:21–27 ಮತ್ತಾಯನು 7:21–27ಕರ್ತನೇ, ಕರ್ತನೇ ಎಂದು ನನಗೆ ಹೇಳುವ ಪ್ರತಿಯೊಬ್ಬನು ಪರಲೋಕರಾಜ್ಯದಲ್ಲಿ ಪ್ರವೇಶಿಸು ವದಿಲ್ಲ; ಆದರೆ ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತದಂತೆ ಮಾಡುವವನೇ ಅದರಲ್ಲಿ ಪ್ರವೇಶಿ ಸುವನು. ಆ ದಿನದಲ್ಲಿ--ಕರ್ತನೇ, ಕರ್ತನೇ ನಿನ್ನ ಹೆಸರಿನಲ್ಲಿ ನಾವು ಪ್ರವಾದಿಸಲಿಲ್ಲವೇ? ಮತ್ತು ನಿನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸಲಿಲ್ಲವೇ? ಇದಲ್ಲದೆ ನಿನ್ನ ಹೆಸರಿನಲ್ಲಿ ಬಹಳ ಮಹತ್ಕಾರ್ಯಗಳನ್ನು ಮಾಡಲಿಲ್ಲವೇ ಎಂದು ಬಹಳ ಜನರು ನನಗೆ ಹೇಳುವರು. ಆಗ ನಾನು ಅವರಿಗೆ--ನಾನು ನಿಮ್ಮನ್ನು ಎಂದಿಗೂ ಅರಿಯೆನು; ದುಷ್ಟತನ ಮಾಡುವ ನೀವು ನನ್ನಿಂದ ತೊಲಗಿ ಹೋಗಿರಿ ಎಂದು ಹೇಳಿಬಿಡುವೆನು. ಆದದರಿಂದ ಯಾವನಾದರೂ ನಾನು ಹೇಳುವ ಈ ನನ್ನ ಮಾತುಗಳನ್ನು ಕೇಳಿ ಅವುಗಳಂತೆ ಮಾಡುವವನನ್ನು ಬಂಡೆಯ ಮೇಲೆ ತನ್ನ ಮನೆಯನ್ನು ಕಟ್ಟಿದ ಬುದ್ಧಿವಂತನಿಗೆ ಹೋಲಿಸುವೆನು. ಮಳೆಯು ಸುರಿದು ಪ್ರವಾಹಗಳು ಬಂದು ಗಾಳಿಯು ಬೀಸಿ ಆ ಮನೆಗೆ ಬಡಿದವು; ಆದರೂ ಅದು ಬೀಳಲಿಲ್ಲ; ಯಾಕಂದರೆ ಅದರ ಅಸ್ತಿವಾರವು ಬಂಡೆಯ ಮೇಲೆ ಹಾಕಲ್ಪಟ್ಟಿತು. ಈ ನನ್ನ ಮಾತುಗಳನ್ನು ಕೇಳುವ ಪ್ರತಿಯೊಬ್ಬನು ಅವುಗಳಂತೆ ನಡೆಯದೆ ಹೋದರೆ ಅವನು ಮರಳಿನ ಮೇಲೆ ತನ್ನ ಮನೆಯನ್ನು ಕಟ್ಟಿದ ಬುದ್ಧಿಹೀನನಿಗೆ ಹೋಲಿಕೆಯಾಗಿರುವನು. ಹೇಗಂದರೆ ಮಳೆಯು ಸುರಿದು ಪ್ರವಾಹಗಳು ಬಂದು ಗಾಳಿಯು ಬೀಸಿ ಆ ಮನೆಗೆ ಬಡಿದವು; ಆಗ ಅದು ಬಿತ್ತು; ಮತ್ತು ಅದರ ಬೀಳುವಿಕೆಯು ದೊಡ್ಡದಾಗಿತ್ತು.