Ezekiel · chapter 2 · verse 3
Ezekiel 2:3 in Kannada
ಆತನು ನನಗೆ ಹೇಳಿದ್ದೇನಂದರೆ--ಮನುಷ್ಯಪುತ್ರನೇ, ನನಗೆ ವಿರೋಧವಾಗಿ ತಿರುಗಿಬಿದ್ದಂಥ ಮತ್ತು ಬೀಳುವಂಥ ಜನಾಂಗದವರಾದ ಇಸ್ರಾಯೇಲ್ಯರ ಮಕ್ಕಳ ಬಳಿಗೆ ನಾನು ನಿನ್ನನ್ನು ಕಳುಹಿಸು ತ್ತೇನೆ; ಅವರೂ ಅವರ ಪಿತೃಗಳೂ ಇಂದಿನ ವರೆಗೂ ನನಗೆ ವಿರೋಧವಾಗಿ ದ್ರೋಹಮಾಡಿದ್ದಾರೆ.
Aatanu nanage heliddenandare--manushyaputrane, nanage virodhavaagi tirugibiddantha mattu beeluvantha janaangadavaraada israayelyara makkala balige naanu ninnannu kaluhisu ttene; avaroo avara pitrugaloo indina varegoo nanage virodhavaagi drohamaadiddaare.
Ezekiel 2:3 in English
- King James Version (KJV)
- And he said unto me, Son of man, I send thee to the children of Israel, to a rebellious nation that hath rebelled against me: they and their fathers have transgressed against me, [even] unto this very day.
- World English Bible (WEB)
- He said to me, “Son of man, I send you to the children of Israel, to a nation of rebels who have rebelled against me. They and their fathers have transgressed against me even to this very day.
- American Standard Version (ASV)
- And he said unto me, Son of man, I send thee to the children of Israel, to nations that are rebellious, which have rebelled against me: they and their fathers have transgressed against me even unto this very day.
- Bible in Basic English (BBE)
- And he said to me, Son of man, I am sending you to the children of Israel, to an uncontrolled nation which has gone against me: they and their fathers have been sinners against me even to this very day.
- Darby Translation (DBY)
- And he said unto me, Son of man, I send thee to the children of Israel, to nations that are rebellious, which have rebelled against me: they and their fathers have transgressed against me unto this very day;
- Webster's Bible (WBS)
- And he said to me, Son of man, I send thee to the children of Israel, to a rebellious nation that hath rebelled against me: they and their fathers have transgressed against me: [even] to this very day.
- Young's Literal Translation (YLT)
- And He saith unto Me, 'Son of man, I am sending thee unto the sons of Israel, unto nations who are rebels, who have rebelled against Me; they and their fathers have transgressed against Me, unto this self-same day.
Read in context
- 1ಆತನು ನನಗೆ ಹೇಳಿದ್ದೇನಂದರೆ--ಮನುಷ್ಯಪುತ್ರನೇ, ನಿನ್ನ ಪಾದದ ಮೇಲೆ ನಿಲ್ಲು; ನಿನ್ನೊಡನೆ ನಾನು ಮಾತನಾಡುವೆನು ಅಂದನು.
- 2ಹೀಗೆ ಆತನು ನನ್ನ ಸಂಗಡ ಮಾತನಾಡಿದಾಗ ಆತ್ಮನು ನನ್ನೊಳಗೆ ಪ್ರವೇಶಿಸಿ ನನ್ನನ್ನು ನಿಂತುಕೊಳ್ಳುವಂತೆ ಮಾಡಿತು; ಈ ರೀತಿ ನನ್ನ ಸಂಗಡ ಮಾತನಾಡುವದನ್ನು ನಾನು ಕೇಳಿದೆನು.
- 3ಆತನು ನನಗೆ ಹೇಳಿದ್ದೇನಂದರೆ--ಮನುಷ್ಯಪುತ್ರನೇ, ನನಗೆ ವಿರೋಧವಾಗಿ ತಿರುಗಿಬಿದ್ದಂಥ ಮತ್ತು ಬೀಳುವಂಥ ಜನಾಂಗದವರಾದ ಇಸ್ರಾಯೇಲ್ಯರ ಮಕ್ಕಳ ಬಳಿಗೆ ನಾನು ನಿನ್ನನ್ನು ಕಳುಹಿಸು ತ್ತೇನೆ; ಅವರೂ ಅವರ ಪಿತೃಗಳೂ ಇಂದಿನ ವರೆಗೂ ನನಗೆ ವಿರೋಧವಾಗಿ ದ್ರೋಹಮಾಡಿದ್ದಾರೆ.
- 4ಅವರು ನಿರ್ಲಜ್ಜರಾದ ಒರಟು ಹೃದಯವುಳ್ಳ ಮಕ್ಕಳಾಗಿದ್ದಾರೆ. ನಾನು ನಿನ್ನನ್ನು ಅವರ ಬಳಿಗೆ ಕಳುಹಿಸುತ್ತೇನೆ ನೀನು ಅವರಿಗೆ--ದೇವರಾದ ಕರ್ತನು ಹೀಗೆ ಹೇಳುತ್ತಾನೆಂದು ಹೇಳಬೇಕು.
- 5ಅವರು ಕೇಳಲಿ ಅಥವಾ ಕೇಳದಿರಲಿ (ಅವರು ತಿರುಗಿಬೀಳುವ ಮನೆಯವರು); ಆದರೆ ತಮ್ಮೊಳಗೆ ಒಬ್ಬ ಪ್ರವಾದಿ ಇರುವನೆಂದು ತಿಳಿದು ಕೊಂಡರೆ ಸಾಕು.
Cross references
- Jeremiah 3:25 ಯೆರೆಮೀಯ 3:25ನಮ್ಮ ನಾಚಿಕೆಯಲ್ಲಿ ಮಲಗಿಕೊಳ್ಳುತ್ತೇವೆ; ನಮ್ಮ ಗಲಭೆ ನಮ್ಮನ್ನು ಮುಚ್ಚಿಕೊಳ್ಳುತ್ತದೆ; ನಾವೂ ನಮ್ಮ ತಂದೆಗಳೂ ನಮ್ಮ ಯೌವನದಾರಭ್ಯ ಇಂದಿನವರೆಗೂ ನಮ್ಮ ದೇವರಾದ ಕರ್ತನಿಗೆ ವಿರೋಧವಾಗಿ ಪಾಪಮಾಡಿ ನಮ್ಮ ದೇವ ರಾದ ಕರ್ತನ ಸ್ವರಕ್ಕೆ ಕಿವಿಗೊಡಲಿಲ್ಲ.
- 1 Samuel 8:7–8 1 ಸಮುವೇಲನು 8:7–8ಆಗ ಕರ್ತನು ಸಮು ವೇಲನಿಗೆ--ಜನರು ನಿನಗೆ ಹೇಳಿದ್ದೆಲ್ಲಾದರಲ್ಲಿ ಅವರ ಮಾತು ಕೇಳು. ಯಾಕಂದರೆ ಅವರು ನಿನ್ನನ್ನು ತೊರೆ ದಿಲ್ಲ; ನಾನು ಅವರನ್ನು ಆಳದ ಹಾಗೆ ನನ್ನನ್ನು ತೊರೆದಿದ್ದಾರೆ. ನಾನು ಅವರನ್ನು ಐಗುಪ್ತದಿಂದ ಬರ ಮಾಡಿದ ದಿನ ಮೊದಲುಗೊಂಡು ಈ ದಿನದ ವರೆಗೂ ಅವರು ನನ್ನನ್ನು ಬಿಟ್ಟು ಅನ್ಯದೇವರುಗಳನ್ನು ಸೇವಿಸಿ ಮಾಡಿದ ಸಮಸ್ತ ಕೃತ್ಯಗಳ ಪ್ರಕಾರ ನಿನಗೂ ಮಾಡು ತ್ತಾರೆ.
- Daniel 9:5–13 ದಾನಿಯೇಲನು 9:5–13ನಾವು ಪಾಪ ಅಕ್ರಮವನ್ನು ಮಾಡಿದ್ದೇವೆ; ಇದಲ್ಲದೆ ಕೆಟ್ಟವರಾಗಿ ನಡೆದು ತಿರುಗಿಬಿದ್ದಿದ್ದೇವೆ; ಅಂದರೆ ನಿನ್ನ ಕಟ್ಟಳೆಗಳನ್ನೂ ನ್ಯಾಯಗಳನ್ನೂ ಬಿಟ್ಟುಹೋಗಿದ್ದೇವೆ. ಇಲ್ಲವೆ ನಿನ್ನ ಹೆಸರಿನಲ್ಲಿ ನಮ್ಮ ಅರಸರಿಗೂ ಪ್ರಧಾನ ರಿಗೂ ತಂದೆಗಳಿಗೂ ದೇಶದ ಎಲ್ಲಾ ಜನರಿಗೂ ಮಾತ ನಾಡಿದ ನಿನ್ನ ಸೇವಕರಾದ ಪ್ರವಾದಿಗಳಿಗೆ ಕಿವಿಗೊಡ ಲಿಲ್ಲ. ಓ ಕರ್ತನೇ, ನೀನು ನೀತಿವಂತನು; ಆದರೆ ನಾವು ಈ ದಿನದ ಪ್ರಕಾರ ನಾಚಿಕೆಗೀಡಾದವರು; ಯೆಹೂದದ ಮನುಷ್ಯರನ್ನೂ ಯೆರೂಸಲೇಮಿನ ನಿವಾ ಸಿಗಳನ್ನೂ ಸಮಸ್ತ ಇಸ್ರಾಯೇಲ್ಯರನ್ನೂ ಹತ್ತಿರದಲ್ಲಿ ರುವವರನ್ನೂ ಮತ್ತು ದೂರದಲ್ಲಿರುವವರನ್ನೂ ಅವರು ನಿನಗೆ ವಿರುದ್ಧವಾಗಿ ಮಾಡಿರುವ ಅವರ ಅಪರಾಧದ ನಿಮಿತ್ತ ನೀನು ಅವರನ್ನು ಎಲ್ಲಾ ದೇಶಗಳಲ್ಲಿಯೂ ಓಡಿಸಿ ಬಿಟ್ಟಿದ್ದೀ. ಓ ಕರ್ತನೇ, ನಿನಗೆ ವಿರುದ್ಧವಾಗಿ ನಾವು ಪಾಪಮಾಡಿದ್ದರಿಂದ ನಮ್ಮ ಅರಸರಿಗೂ ಪ್ರಧಾ ನರಿಗೂ ಮತ್ತು ನಮ್ಮ ತಂದೆಗಳಿಗೂ ನಮಗೂ ನಾಚಿಕೆಯ ಮುಖಗಳಿವೆ. ನಾವು ಆತನಿಗೆ ವಿರುದ್ಧ ವಾಗಿ ತಿರುಗಿಬಿದ್ದಿದ್ದರೂ ಕರ್ತನಾದ ನಮ್ಮ ದೇವರ ಕರುಣೆಯೂ ಮತ್ತು ಕ್ಷಮೆಯೂ ನಮಗಿದೆ. ನಾವು ನಮ್ಮ ದೇವರಾದ ಕರ್ತನ ಸ್ವರಕ್ಕೆ ಕಿವಿಗೊಡದೆ ಆತನು ನಮ್ಮ ಮುಂದೆ ಇಟ್ಟ ಆತನ ಸೇವಕರಾದ ಪ್ರವಾದಿಗಳ ನ್ಯಾಯಪ್ರಮಾಣದಂತೆ ನಡೆಯಲಿಲ್ಲ. ಹೌದು, ಎಲ್ಲಾ ಇಸ್ರಾಯೇಲ್ಯರು ನಿನ್ನ ನ್ಯಾಯ ಪ್ರಮಾಣವನ್ನು ವಿಾರಿ ನಿನ್ನ ಸ್ವರಕ್ಕೆ ಕಿವಿಗೊಡದೆ ತೊಲಗಿದ್ದದರಿಂದ ಶಾಪವು ದೇವರ ಸೇವಕನಾದ ಮೋಶೆಯು ನ್ಯಾಯ ಪ್ರಮಾಣದಲ್ಲಿ ಬರೆದ ಆಣೆಯು, ಆತನಿಗೆ ವಿರುದ್ಧವಾಗಿ ನಾವು ಮಾಡಿದ ಪಾಪದ ನಿಮಿತ್ತ ನಮ್ಮ ಮೇಲೆ ಹೊಯ್ಯಲ್ಪಟ್ಟಿದೆ. ಆತನು ನಮಗೂ ನಮಗೆ ನ್ಯಾಯ ತೀರಿಸಿದ ನ್ಯಾಯಾಧಿಪತಿಗಳಿಗೂ ವಿರೋಧವಾಗಿ ತಾನು ಹೇಳಿದ ಮಾತುಗಳನ್ನು ನೆರವೇರಿಸಿ; ನಮ್ಮ ಮೇಲೆ ದೊಡ್ಡ ಕೇಡು ಬರುವ ಹಾಗೆ ಮಾಡಿದ್ದಾನೆ; ಯೆರೂಸಲೇಮಿನಲ್ಲಿ ನಡೆದ ಹಾಗೆ ಪೂರ್ಣ ಆಕಾಶದ ಕೆಳಗೆಲ್ಲಾ (ಭೂಮಂಡಲದ ಮೇಲೆ) ಎಲ್ಲಿಯೂ ನಡೆಯಲಿಲ್ಲ. ಮೋಶೆಯ ನ್ಯಾಯಪ್ರಮಾಣದಲ್ಲಿ ಬರೆದಿರುವ ಪ್ರಕಾರ ಈ ಕೇಡು ನಮ್ಮ ಮೇಲೆ ಬಂತು, ಆದಾಗ್ಯೂ ನಾವು ನಮ್ಮ ಅಕ್ರಮಗಳನ್ನು ಬಿಟ್ಟು, ತಿರುಗಿಕೊಂಡು ನಿನ್ನ ಸತ್ಯವನ್ನು ತಿಳಿದುಕೊಳ್ಳುವ ಹಾಗೆ, ನಮ್ಮ ದೇವರಾದ ಕರ್ತನ ಮುಂದೆ ನಾವು ಪ್ರಾರ್ಥನೆ ಗಳನ್ನು ಮಾಡಲಿಲ್ಲ.
- Deuteronomy 9:24 ಧರ್ಮೋಪದೇಶಕಾಂಡ 9:24ನಾನು ನಿಮ್ಮನ್ನು ತಿಳಿದಂದಿನಿಂದ ನೀವು ಕರ್ತನಿಗೆ ವಿರೋಧವಾಗಿ ತಿರುಗಿಬೀಳುವವರಾಗಿದ್ದಿರಿ.
- Nehemiah 9:33–35 ನೆಹೆಮೀಯ 9:33–35ಆದರೆ ನೀನು ನಮ್ಮ ಮೇಲೆ ಬರಮಾಡಿದ ಎಲ್ಲಾದರಲ್ಲಿ ನೀತಿಪರನಾಗಿದ್ದಿ. ಯಾಕಂದರೆ ನೀನು ಮಾಡಿದ್ದು ಸತ್ಯವಾದದ್ದು; ಆದರೆ ನಾವು ದುಷ್ಟರಾಗಿ ನಡೆದೆವು. ನಮ್ಮ ಅರಸುಗಳೂ ಪ್ರಧಾನರೂ ಯಾಜಕರೂ ನಮ್ಮ ಪಿತೃಗಳೂ ನಿನ್ನ ನ್ಯಾಯಪ್ರಮಾಣವನ್ನು ಕೈಕೊಳ್ಳದೆ ನಿನ್ನ ಆಜ್ಞೆಗಳನ್ನೂ ನೀನು ಅವರಿಗೆ ಸಾಕ್ಷಿಯಾಗಿ ಹೇಳಿದ ನಿನ್ನ ಸಾಕ್ಷಿಗ ಳನ್ನೂ ಆಲೈಸದೆ ಹೋದರು. ಅವರು ತಮ್ಮ ರಾಜ್ಯದಲ್ಲಿಯೂ ನೀನು ಅವರಿಗೆ ಮಾಡಿದ ಮಹಾ ಉಪಕಾರದಲ್ಲಿಯೂ ನೀನು ಅವರಿಗೆ ಕೊಟ್ಟ ವಿಸ್ತಾರ ವಾದ, ರಸವತ್ತಾದ ದೇಶದಲ್ಲಿಯೂ ನಿನ್ನನ್ನು ಸೇವಿಸ ಲಿಲ್ಲ; ತಮ್ಮ ಕೆಟ್ಟ ಕಾರ್ಯಗಳನ್ನು ಬಿಟ್ಟು ತಿರುಗಲೂ ಇಲ್ಲ.
- Psalm 106:16–21 ಕೀರ್ತನೆಗಳು 106:16–21ಅವರು ಪಾಳೆಯದಲ್ಲಿ ಮೋಶೆಯ ಮೇಲೆಯೂ ಕರ್ತನ ಪರಿಶುದ್ದನಾದ ಆರೋನನ ಮೇಲೆಯೂ ಹೊಟ್ಟೇಕಿಚ್ಚು ಪಟ್ಟರು. ಭೂಮಿಯು ಬಾಯಿತೆರೆದು ದಾತಾನನನ್ನು ನುಂಗಿ ಅಬಿರಾಮನ ಗುಂಪನ್ನು ಮುಚ್ಚಿ ಬಿಟ್ಟಿತು. ಬೆಂಕಿಯು ಅವರ ಗುಂಪಿನಲ್ಲಿ ಉರಿದು, ಜ್ವಾಲೆಯು ದುಷ್ಟರನ್ನು ಸುಟ್ಟಿತು. ಅವರು ಹೋರೇಬಿ ನಲ್ಲಿ ಕರುವನ್ನು ಮಾಡಿ ಎರಕದ ವಿಗ್ರಹಕ್ಕೆ ಅಡ್ಡ ಬಿದ್ದರು. ತಮ್ಮ ಘನವನ್ನು ಹುಲ್ಲು ತಿನ್ನುವ ಎತ್ತಿನ ರೂಪಕ್ಕೆ ಬದಲಾಯಿಸಿದರು. ತಮ್ಮ ರಕ್ಷಕನಾಗಿ ಐಗುಪ್ತದೇಶದಲ್ಲಿ ದೊಡ್ಡ ಕೆಲಸಗಳನ್ನೂ
- Acts 7:51 ಅಪೊಸ್ತಲರ ಕೃತ್ಯಗಳು 7:51ಬಗ್ಗದ ಕುತ್ತಿಗೆಯುಳ್ಳವರೇ, ಹೃದಯದಲ್ಲಿಯೂ ಕಿವಿಗಳಲ್ಲಿಯೂ ಸುನ್ನತಿಯಿಲ್ಲದವರೇ, ನಿಮ್ಮ ಪಿತೃಗಳು ಹೇಗೋ ಹಾಗೆಯೇ ನೀವು ಯಾವಾಗಲೂ ಪವಿತ್ರಾತ್ಮನನ್ನು ಎದುರಿಸುವವರಾಗಿದ್ದೀರಿ.
- Jeremiah 16:11–12 ಯೆರೆಮೀಯ 16:11–12ನಿಮ್ಮ ತಂದೆಗಳು ನನ್ನನ್ನು ಬಿಟ್ಟು ಬೇರೆ ದೇವರುಗಳನ್ನು ಹಿಂಬಾಲಿಸಿ ಸೇವಿಸಿ ಆರಾಧಿಸಿ ನನ್ನನ್ನು ತೊರೆದುಬಿಟ್ಟು, ನನ್ನ ನ್ಯಾಯ ಪ್ರಮಾಣವನ್ನು ಕೈಕೊಳ್ಳಲಿಲ್ಲ. ನೀವು ನಿಮ್ಮ ತಂದೆಗಳಿಗಿಂತ ಇನ್ನೂ ಕೆಟ್ಟ ಕೆಲಸ ಮಾಡಿದ್ದೀರಿ; ಇಗೋ, ನನ್ನನ್ನು ಕೇಳದ ಹಾಗೆ ನಿಮ್ಮ ನಿಮ್ಮ ಕೆಟ್ಟ ಹೃದಯದ ಕಲ್ಪನೆಯ ಪ್ರಕಾರ ನಡೆದುಕೊಂಡಿದ್ದೀರಿ.
- Deuteronomy 9:27 ಧರ್ಮೋಪದೇಶಕಾಂಡ 9:27ನಿನ್ನ ದಾಸರಾದ ಅಬ್ರಹಾಮ್ ಇಸಾಕ್ ಯಾಕೋಬರನ್ನು ಜ್ಞಾಪಕಮಾಡಿಕೋ; ಈ ಜನರ ಕಾಠಿಣ್ಯದ ಮೇಲೆಯೂ ಇಲ್ಲವೆ ಅವರ ದುಷ್ಟತ್ವದ ಮೇಲೆಯೂ ಅವರ ಪಾಪದ ಮೇಲೆಯೂ ದೃಷ್ಟಿ ಇಡಬೇಡ.
- 2 Chronicles 36:15–16 2 ಪೂರ್ವಕಾಲವೃತ್ತಾಂತ 36:15–16ಅವರ ಪಿತೃಗಳ ಕರ್ತನಾದ ದೇವರು ತನ್ನ ಸೇವಕರನ್ನು ಅವನ ಬಳಿಗೆ ಕಳುಹಿಸಿದನು, ಹೊತ್ತಾರೆಯಿಂದ ಕಳುಹಿಸುತ್ತಾ ಬಂದನು, ಯಾಕಂದರೆ ಆತನು ತನ್ನ ಜನರ ಮೇಲೆಯೂ ತನ್ನ ನಿವಾಸಸ್ಥಾನದ ಮೇಲೆಯೂ ಕನಿಕರಪಟ್ಟನು. ಆದರೆ ಕರ್ತನ ಕೋಪವು ತನ್ನ ಜನರಿಗೆ ವಿರೋಧ ವಾಗಿ ಏಳುವ ವರೆಗೂ ಅಂದರೆ ಪರಿಹಾರವಾಗದಷ್ಟೂ ಅವರು ದೇವರ ಸೇವಕರನ್ನು ಅಪಹಾಸ್ಯಮಾಡಿ ಆತನ ವಾಕ್ಯಗಳನ್ನು ತಿರಸ್ಕರಿಸಿ ಆತನ ಪ್ರವಾದಿಗಳಿಗೆ ವಂಚನೆ ಮಾಡಿದರು.
- Jeremiah 7:2 ಯೆರೆಮೀಯ 7:2ಕರ್ತನ ಆಲಯದ ಬಾಗಿಲಿನಲ್ಲಿ ನಿಂತುಕೊಂಡು ಈ ವಾಕ್ಯವನ್ನು ಅಲ್ಲಿ ಸಾರು, ಏನಂದರೆ ಯೆಹೂದದವರೆಲ್ಲರೇ, ಕರ್ತನನ್ನು ಆರಾಧಿಸುವದಕ್ಕೆ ಈ ಬಾಗಿಲುಗಳಲ್ಲಿ ಸೇರುವವರೇ, ಕರ್ತನ ವಾಕ್ಯವನ್ನು ಕೇಳಿರಿ.
- Numbers 20:10 ಅರಣ್ಯಕಾಂಡ 20:10ಮೋಶೆಯೂ ಆರೋನನೂ ಸಭೆಯನ್ನು ಬಂಡೆಯ ಮುಂದೆ ಕೂಡಿಸಿ ಅವರಿಗೆ--ತಿರುಗಿಬಿದ್ದವರೇ, ಕೇಳಿರಿ; ನಾವು ನಿಮಗೋಸ್ಕರ ಈ ಬಂಡೆಯೊಳಗಿಂದ ನೀರನ್ನು ಹೊರಡಿಸಬೇಕೋ ಎಂದು ಹೇಳಿದರು.
Original words (Hebrew)
- said · H559אָמַר ʼâmar
- Son · H1121בֵּן bên
- man · H120אָדָם ʼâdâm
- send · H7971שָׁלַח shâlach
- children · H1121בֵּן bên
- Israel · H3478יִשְׂרָאֵל Yisrâʼêl
- rebellious · H4775מָרַד mârad
- nation · H1471גּוֹי gôwy
- rebelled · H4775מָרַד mârad
- fathers · H1אָב ʼâb
- transgressed · H6586פָּשַׁע pâshaʻ
- very · H6106עֶצֶם ʻetsem
- day · H3117יוֹם yôwm