Ezekiel · chapter 20 · verse 1
Ezekiel 20:1 in Kannada
ಏಳನೆಯ ವರುಷದ ಐದನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಆದದ್ದೇನಂದರೆ-- ಇಸ್ರಾಯೇಲಿನ ಹಿರಿಯರಲ್ಲಿ ಕೆಲವರು ಕರ್ತನ ಬಳಿಗೆ ವಿಚಾರಣೆಗಾಗಿ ಬಂದು ನನ್ನ ಮುಂದೆ ಕುಳಿತು ಕೊಂಡರು.
Elaneya varushada aidaneya tingalina hattaneya dinadalli aadaddenandare-- israayelina hiriyaralli kelavaru kartana balige vichaaranegaagi bandu nanna munde kulitu kondaru.
Ezekiel 20:1 in English
- King James Version (KJV)
- And it came to pass in the seventh year, in the fifth [month], the tenth [day] of the month, [that] certain of the elders of Israel came to enquire of the LORD, and sat before me.
- World English Bible (WEB)
- In the seventh year, in the fifth month, the tenth day of the month, some of the elders of Israel came to inquire of the LORD, and sat before me.
- American Standard Version (ASV)
- And it came to pass in the seventh year, in the fifth [month], the tenth [day] of the month, that certain of the elders of Israel came to inquire of Jehovah, and sat before me.
- Bible in Basic English (BBE)
- Now it came about in the seventh year, in the fifth month, on the tenth day of the month, that certain of the responsible men of Israel came to get directions from the Lord and were seated before me.
- Darby Translation (DBY)
- And it came to pass in the seventh year, in the fifth [month], the tenth of the month, [that] certain of the elders of Israel came to inquire of Jehovah, and they sat before me.
- Webster's Bible (WBS)
- And it came to pass in the seventh year, in the fifth [month] , the tenth [day] of the month, [that] certain of the elders of Israel came to inquire of the LORD, and sat before me.
- Young's Literal Translation (YLT)
- And it cometh to pass, in the seventh year, in the fifth [month], in the tenth of the month, come in have certain of the elders of Israel to seek Jehovah, and they sit before me;
Read in context
- 1ಏಳನೆಯ ವರುಷದ ಐದನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಆದದ್ದೇನಂದರೆ-- ಇಸ್ರಾಯೇಲಿನ ಹಿರಿಯರಲ್ಲಿ ಕೆಲವರು ಕರ್ತನ ಬಳಿಗೆ ವಿಚಾರಣೆಗಾಗಿ ಬಂದು ನನ್ನ ಮುಂದೆ ಕುಳಿತು ಕೊಂಡರು.
- 2ಆಮೇಲೆ ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ,
- 3ಮನುಷ್ಯಪುತ್ರನೇ, ನೀನು ಇಸ್ರಾಯೇಲಿನ ಹಿರಿಯರ ಸಂಗಡ ಮಾತನಾಡಿ ಅವ ರಿಗೆ ಹೇಳಬೇಕಾದದ್ದೇನಂದರೆ--ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನನ್ನ ಬಳಿಗೆ ವಿಚಾರಣೆಗಾಗಿ ಬಂದಿರೋ? ನನ್ನ ಜೀವದಾಣೆ, ನಾನು ನಿಮ್ಮಿಂದ ವಿಚಾರಿಸಲ್ಪಡುವದಿಲ್ಲವೆಂದು ದೇವರಾದ ಕರ್ತನು ಹೇಳುತ್ತಾನೆ.
Cross references
- Ezekiel 8:1 ಯೆಹೆಜ್ಕೇಲನು 8:1ಆರನೇ ವರುಷದ ಆರನೆಯ ತಿಂಗಳಿನ ಐದನೆಯ ದಿನದಲ್ಲಿ ಆಗಿದ್ದೇನಂದರೆ--ನಾನೂ ಯೆಹೂದದ ಹಿರಿಯರೂ ನನ್ನ ಮನೆಯಲ್ಲಿ ಕುಳಿತುಕೊಂಡಿರುವಾಗ ಅಲ್ಲಿ ದೇವರಾದ ಕರ್ತನ ಹಸ್ತವು ನನ್ನ ಮೇಲೆ ಬಿತ್ತು.
- Ezekiel 31:1 ಯೆಹೆಜ್ಕೇಲನು 31:1ಹನ್ನೊಂದನೇ ವರುಷದಲ್ಲಿ ಮೂರನೇ ತಿಂಗಳಿನ, ಮೊದಲನೇ ದಿನದಲ್ಲಿ ಕರ್ತನ ವಾಕ್ಯವು ನನಗೆ ಉಂಟಾಗಿ ಹೇಳಿದ್ದೇನಂದರೆ--
- Ezekiel 40:1 ಯೆಹೆಜ್ಕೇಲನು 40:1ನಮ್ಮ ಸೆರೆಯ ಇಪ್ಪತ್ತೈದನೆಯ ವರ್ಷದ ಆರಂಭದ ತಿಂಗಳಿನ ಹತ್ತನೇ ದಿನದಲ್ಲಿ ಪಟ್ಟಣವು ಒಡೆದು ಹಾಕಲ್ಪಟ್ಟ ಮೇಲೆ, ಹದಿನಾಲ್ಕನೇ ವರುಷದ ಅದೇ ದಿನದಲ್ಲಿ, ಕರ್ತನ ಕೈ ನನ್ನ ಮೇಲೆ ಇದ್ದು ನನ್ನನ್ನು ಅಲ್ಲಿಗೆ ಬರಮಾಡಿತು.
- Ezekiel 26:1 ಯೆಹೆಜ್ಕೇಲನು 26:1ಹನ್ನೊಂದನೇ ವರುಷದ ತಿಂಗಳಿನ ಮೊದಲನೇ ದಿನದಲ್ಲಿ ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ--
- Ezekiel 29:1 ಯೆಹೆಜ್ಕೇಲನು 29:1ಹತ್ತನೇ ವರುಷದ ಹತ್ತನೇ ತಿಂಗಳಿನ, ಹನ್ನೆರಡನೇ ದಿನದಲ್ಲಿ ಕರ್ತನ ವಾಕ್ಯವು ನನಗೆ ಹೇಳಿದ್ದೇನಂದರೆ--
- Ezekiel 24:1 ಯೆಹೆಜ್ಕೇಲನು 24:1ಒಂಭತ್ತನೇ ವರುಷದ ಹತ್ತನೇ ತಿಂಗಳಿನ ಹತ್ತನೇ ದಿನದಲ್ಲಿ ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ
- Ezekiel 29:17 ಯೆಹೆಜ್ಕೇಲನು 29:17ಇಪ್ಪತ್ತೇಳನೇ ವರುಷದ ಮೊದಲನೇ ತಿಂಗಳಿನ, ಮೊದಲನೇ ದಿನದಲ್ಲಿ ಆದದ್ದೇನಂದರೆ ಕರ್ತನ ವಾಕ್ಯವು ನನಗೆ ಬಂದು ಹೀಗೆ ಹೇಳಿತು.
- Ezekiel 30:20 ಯೆಹೆಜ್ಕೇಲನು 30:20ಇದಲ್ಲದೆ ಹನ್ನೊಂದನೇ ವರುಷದಲ್ಲಿ ಮೊದಲ ನೆಯ ತಿಂಗಳಿನ, ಏಳನೆಯ ದಿನದಲ್ಲಿ ಏನಾಯಿತಂದರೆ, ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ --
- Ezekiel 32:1 ಯೆಹೆಜ್ಕೇಲನು 32:1ಹನ್ನೆರಡನೇ ವರುಷದ, ಹನ್ನೆರಡನೇ ತಿಂಗಳಿನ, ಮೊದಲನೇ ದಿನದಲ್ಲಿ ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ--
- Jeremiah 37:17 ಯೆರೆಮೀಯ 37:17ಅವನನ್ನು ಹೊರಗೆ ತನ್ನ ಮನೆಯಲ್ಲಿ ಕರತರಿಸಿ--ರಹಸ್ಯವಾಗಿ ಕರ್ತನಿಂದ ವಾಕ್ಯ ಉಂಟೋ ಎಂದು ಅವನನ್ನು ಕೇಳಿದನು; ಉಂಟು ಎಂದು ಯೆರೆವಿಾಯನು ಹೇಳಿ ರಹಸ್ಯವಾಗಿ ನೀನು ಬಾಬೆಲಿನ ಅರಸನ ಕೈಯಲ್ಲಿ ಒಪ್ಪಿಸಲ್ಪಡುವಿ ಅಂದನು.
- 2 Kings 3:13 2 ಅರಸುಗಳು 3:13ಎಲೀ ಷನು ಇಸ್ರಾಯೇಲಿನ ಅರಸನಿಗೆ -- ನಿನ್ನೊಂದಿಗೆ ನಾನೇನು ಮಾಡಬೇಕು? ನೀನು ನಿನ್ನ ತಂದೆ ತಾಯಿಯ ಪ್ರವಾದಿಗಳ ಬಳಿಗೆ ಹೋಗು ಅಂದನು. ಇಸ್ರಾಯೇ ಲಿನ ಅರಸನು ಅವನಿಗೆ--ಇಲ್ಲ, ಕರ್ತನು ಈ ಮೂರು ಮಂದಿ ಅರಸರುಗಳನ್ನು ಮೋವಾಬ್ಯರ ಕೈಯಲ್ಲಿ ಒಪ್ಪಿಸಿ ಕೊಡುವದಕ್ಕೆ ಒಟ್ಟಾಗಿ ಕರೆದಿದ್ದಾನಲ್ಲಾ ಅಂದನು.
- 1 Kings 22:15–28 1 ಅರಸುಗಳು 22:15–28ಅರಸನು ಅವನಿಗೆ--ವಿಾಕಾಯೆ ಹುವೇ, ನಾವು ಗಿಲ್ಯಾದಿನಲ್ಲಿರುವ ರಾಮೋತಿನ ಮೇಲೆ ಯುದ್ಧಕ್ಕೆಹೋಗಬಹುದೋ ಹೋಗಬಾ ರದೋ ಅಂದನು. ಇವನು ಪ್ರತ್ಯುತ್ತರವಾಗಿ--ಹೋಗಿ ಸಾಫಲ್ಯ ಹೊಂದು; ಕರ್ತನು ಅದನ್ನು ಅರಸನ ಕೈಯಲ್ಲಿ ಒಪ್ಪಿಸಿಕೊಡುವನು ಅಂದನು. ಆಗ ಅರಸನು ಅವನಿಗೆ--ನೀನು ಕರ್ತನ ಹೆಸರಿನಲ್ಲಿ ಸತ್ಯವನ್ನಲ್ಲದೆ ಬೇರೊಂದು ನನಗೆ ಹೇಳಬಾರದೆಂದು ನಾನು ಎಷ್ಟು ಸಾರಿ ನಿನಗೆ ಆಣೆ ಇಡಬೇಕು ಅಂದನು. ಅದಕ್ಕ ವನು ಕಾಯುವವನಿಲ್ಲದ ಕುರಿಗಳ ಹಾಗೆಯೇ ಬೆಟ್ಟ ಗಳ ಮೇಲೆ ಚದರಿಸಲ್ಪಟ್ಟ ಸಮಸ್ತ ಇಸ್ರಾಯೇಲನ್ನು ನೋಡಿದೆನು. ಆಗ ಕರ್ತನು--ಇವರಿಗೆ ಯಜಮಾ ನನು ಇಲ್ಲದೆ ಪ್ರತಿ ಮನುಷ್ಯನು ತನ್ನ ತನ್ನ ಮನೆಗೆ ಸಮಾಧಾನವಾಗಿ ಹಿಂತಿರಿಗಿ ಹೋಗಲಿ ಅಂದನು. ಆಗ ಇಸ್ರಾಯೇಲಿನ ಅರಸನು ಯೆಹೋಷಾಫಾಟ ನಿಗೆ--ಇವನು ನನ್ನನ್ನು ಕುರಿತು ಒಳ್ಳೇದನ್ನಲ್ಲ, ಕೆಟ್ಟದ್ದನ್ನೇ ಪ್ರವಾದಿಸುವನೆಂದು ನಾನು ನಿನಗೆ ಹೇಳಲಿಲ್ಲವೇ ಅಂದನು. ವಿಾಕಾಯೆಹುವು--ಆದದರಿಂದ ಕರ್ತನ ವಾಕ್ಯವನ್ನು ಕೇಳು--ಕರ್ತನು ತನ್ನ ಸಿಂಹಾಸನದ ಮೇಲೆ ಕುಳಿತುಕೊಂಡಿರುವದನ್ನೂ ಆಕಾಶದ ಸಮಸ್ತ ಸೈನ್ಯವು ಆತನ ಬಲಪಾರ್ಶ್ವದಲ್ಲಿಯೂ ಎಡಪಾರ್ಶ್ವದಲ್ಲಿಯೂ ನಿಂತಿರುವದನ್ನೂ ನೋಡಿದೆನು ಅಂದನು. ಆಗ ಕರ್ತನು--ಅಹಾಬನು ಹೋಗಿ ಗಿಲ್ಯಾದಿನ ರಾಮೋ ತಿನ ಬಳಿಯಲ್ಲಿ ಬೀಳುವ ಹಾಗೆ ಅವನನ್ನು ಮರುಳು ಗೊಳಿಸುವವನು ಯಾರು ಅಂದನು. ಒಬ್ಬನು ಹೀಗೆಯೂ ಮತ್ತೊಬ್ಬನು ಹಾಗೆಯೂ ಹೇಳುತ್ತಿರುವಾಗ ಒಂದು ಆತ್ಮವು ಹೊರಟು ಬಂದು ಕರ್ತನ ಮುಂದೆ ನಿಂತು--ನಾನು ಅವನನ್ನು ಮರುಳುಗೊಳಿಸುತ್ತೇನೆ ಅಂದಿತು. ಆಗ ಕರ್ತನು ಅದಕ್ಕೆ--ಯಾವದರಿಂದ ಅಂದನು. ಅದಕ್ಕದು-- ನಾನು ಹೊರಟು ಅವನ ಎಲ್ಲಾ ಪ್ರವಾದಿಗಳ ಬಾಯಿಯಲ್ಲಿ ಸುಳ್ಳಾದ ಆತ್ಮನಾಗಿ ರುವೆನು ಅಂದಿತು. ಅದಕ್ಕೆ ಆತನು--ನೀನು ಅವ ನನ್ನು ಮರುಳುಗೊಳಿಸುವಿ ಮತ್ತು ಜಯಿಸುವಿ. ನೀನು ಹೋಗಿ ಹಾಗೆ ಮಾಡು ಅಂದನು. ಆದದರಿಂದ ಇಗೋ, ಈಗ ಕರ್ತನು ಈ ಎಲ್ಲಾ ನಿನ್ನ ಪ್ರವಾದಿಗಳ ಬಾಯಿಯಲ್ಲಿ ಸುಳ್ಳಾದ ಆತ್ಮವನ್ನು ಇಟ್ಟಿದ್ದಾನೆ; ಇದ ಲ್ಲದೆ ಕರ್ತನು ನಿನ್ನನ್ನು ಕುರಿತು ಕೇಡನ್ನು ಹೇಳಿದ್ದಾನೆ ಅಂದನು. ಆಗ ಕೆನಾನನ ಮಗನಾದ ಚಿದ್ಕೀಯನು ಸವಿಾ ಪಕ್ಕೆ ಬಂದು ವಿಾಕಾಯೆಹುವಿನ ಕೆನ್ನೆಯ ಮೇಲೆ ಹೊಡೆದು--ಕರ್ತನ ಆತ್ಮವು ನನ್ನನ್ನು ಬಿಟ್ಟು ನಿನ್ನ ಸಂಗಡ ಮಾತನಾಡಲು ಯಾವ ಮಾರ್ಗವಾಗಿ ಹೋಯಿತು ಅಂದನು. ಅದಕ್ಕೆ ವಿಾಕಾಯೆಹುವುಇಗೋ, ನಿನ್ನನ್ನು ಬಚ್ಚಿಟ್ಟುಕೊಳ್ಳಲು ಒಳಕೊಠಡಿ ಯೊಳಗೆ ನೀನು ಹೋಗುವ ದಿವಸದಲ್ಲಿ ನೋಡುವಿ ಅಂದನು. ಆಗ ಇಸ್ರಾಯೇಲಿನ ಅರಸನು ಹೇಳಿದ್ದೇ ನಂದರೆ -- ವಿಾಕಾಯೆಹುನನ್ನು ಹಿಡಿದು ಪಟ್ಟಣದ ಅಧಿಪತಿಯಾದ ಆಮೋನನ ಬಳಿಗೂ ಅರಸನ ಮಗ ನಾದ ಯೋವಾಷನ ಬಳಿಗೂ ಅವನನ್ನು ಹಿಂದಕ್ಕೆ ತಕ್ಕೊಂಡುಹೋಗಿ ನೀವು ಇವನನ್ನು ಸೆರೆಮನೆಯ ಲ್ಲಿಟ್ಟು ನಾನು ಸಮಾಧಾನವಾಗಿ ತಿರಿಗಿ ಬರುವ ವರೆಗೂ ಅವನಿಗೆ ಬಾಧೆಯ ರೊಟ್ಟಿಯನ್ನೂ ಬಾಧೆಯ ನೀರನ್ನೂ ಕೊಡಿರಿ ಎಂದು ಅರಸನು ಹೇಳುತ್ತಾನೆಂದು ಹೇಳಿರಿ ಅಂದನು. ಅದಕ್ಕೆ ವಿಾಕಾಯೆಹುವು ನೀನು ಸಮಾ ಧಾನದಿಂದ ತಿರಿಗಿ ನಿಜವಾಗಿ ಬಂದರೆ ಕರ್ತನು ನನ್ನ ಮುಖಾಂತರ ಮಾತನಾಡಿದ್ದಿಲ್ಲವೆಂದು ಜನರೇ, ನೀವೆ ಲ್ಲರೂ ಕೇಳಿರಿ ಅಂದನು.
Original words (Hebrew)
- seventh · H7637שְׁבִיעִי shᵉbîyʻîy
- year · H8141שָׁנֶה shâneh
- fifth · H2549חֲמִישִׁי chămîyshîy
- tenth · H6218עָשׂוֹר ʻâsôwr
- month · H2320חֹדֶשׁ chôdesh
- certain · H582אֱנוֹשׁ ʼĕnôwsh
- elders · H2205זָקֵן zâqên
- Israel · H3478יִשְׂרָאֵל Yisrâʼêl
- came · H935בּוֹא bôwʼ
- enquire · H1875דָּרַשׁ dârash
- sat · H3427יָשַׁב yâshab
- before · H6440פָּנִים pânîym