Ezekiel · chapter 20 · verse 4
Ezekiel 20:4 in Kannada
ಅವರಿಗೆ ನ್ಯಾಯತೀರಿಸುವಿಯೋ? ಮನುಷ್ಯಪುತ್ರನೇ, ನೀನು ಅವರಿಗೆ ನ್ಯಾಯತೀರಿಸು ವಿಯೋ? ಅವರ ತಂದೆಗಳ ಅಸಹ್ಯವಾದವುಗಳನ್ನು ಅವರಿಗೆ ತಿಳಿಸು.
Avarige nyaayateerisuviyo? Manushyaputrane, neenu avarige nyaayateerisu viyo? Avara tandegala asahyavaadavugalannu avarige tilisu.
Ezekiel 20:4 in English
- King James Version (KJV)
- Wilt thou judge them, son of man, wilt thou judge [them]? cause them to know the abominations of their fathers:
- World English Bible (WEB)
- “Will you judge them, son of man? Will you judge them? Cause them to know the abominations of their fathers.
- American Standard Version (ASV)
- Wilt thou judge them, son of man, wilt thou judge them? Cause them to know the abominations of their fathers;
- Bible in Basic English (BBE)
- Will you be their judge, O son of man, will you be their judge? make clear to them the disgusting ways of their fathers,
- Darby Translation (DBY)
- Wilt thou judge them, wilt thou judge, son of man? Cause them to know the abominations of their fathers,
- Webster's Bible (WBS)
- Wilt thou judge them, son of man, wilt thou judge [them] ? cause them to know the abominations of their fathers:
- Young's Literal Translation (YLT)
- Dost thou judge them? Dost thou judge, son of man? The abominations of their fathers cause them to know,
Read in context
- 2ಆಮೇಲೆ ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ,
- 3ಮನುಷ್ಯಪುತ್ರನೇ, ನೀನು ಇಸ್ರಾಯೇಲಿನ ಹಿರಿಯರ ಸಂಗಡ ಮಾತನಾಡಿ ಅವ ರಿಗೆ ಹೇಳಬೇಕಾದದ್ದೇನಂದರೆ--ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನನ್ನ ಬಳಿಗೆ ವಿಚಾರಣೆಗಾಗಿ ಬಂದಿರೋ? ನನ್ನ ಜೀವದಾಣೆ, ನಾನು ನಿಮ್ಮಿಂದ ವಿಚಾರಿಸಲ್ಪಡುವದಿಲ್ಲವೆಂದು ದೇವರಾದ ಕರ್ತನು ಹೇಳುತ್ತಾನೆ.
- 4ಅವರಿಗೆ ನ್ಯಾಯತೀರಿಸುವಿಯೋ? ಮನುಷ್ಯಪುತ್ರನೇ, ನೀನು ಅವರಿಗೆ ನ್ಯಾಯತೀರಿಸು ವಿಯೋ? ಅವರ ತಂದೆಗಳ ಅಸಹ್ಯವಾದವುಗಳನ್ನು ಅವರಿಗೆ ತಿಳಿಸು.
- 5ಅವರಿಗೆ ಹೇಳಬೇಕಾದದ್ದೇನಂದರೆ --ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಾನು ಇಸ್ರಾಯೇಲನ್ನು ಆದುಕೊಂಡು ಯಾಕೋಬನ ಮನೆಯ ವಂಶದವರಿಗೆ ನನ್ನ ಕೈಯೆತ್ತಿ ಮತ್ತು ಐಗುಪ್ತ ದೇಶದಲ್ಲಿ ಅವರಿಗೆ ನನ್ನನ್ನು ತಿಳಿಯಪಡಿಸಿದ ದಿನದಲ್ಲಿ ನಾನು ಅವರಿಗೆ ನನ್ನ ಕೈಯೆತ್ತಿ ನಿಮ್ಮ ದೇವರಾದ ಕರ್ತನು ನಾನೇ ಎಂದು ಅವರಿಗೆ ಹೇಳಿದಾಗ,
- 6ನಾನು ಅವರಿಗೆ ನನ್ನ ಕೈಯೆತ್ತಿ--ಐಗುಪ್ತ ದೇಶದಿಂದ ಹೊರಗೆ ತಂದು ಅವರಿಗೋಸ್ಕರ ನಾನೇ ನೋಡಿಕೊಂಡಂಥ ಹಾಲೂ ಜೇನೂ ಹರಿಯುವ ಕೀರ್ತಿಯುಳ್ಳ ಎಲ್ಲಾ ದೇಶಗಳಿಗೂ ಅವರನ್ನು ಆ ದಿವಸದಲ್ಲಿ ಕರೆತಂದೆನು.
Cross references
- Ezekiel 22:2 ಯೆಹೆಜ್ಕೇಲನು 22:2ಈಗ ಮನುಷ್ಯ ಪುತ್ರನೇ, ನೀನು ನ್ಯಾಯತೀರಿಸುವೆಯಾ? ರಕ್ತಾಪರಾಧ ವುಳ್ಳ ಪಟ್ಟಣಕ್ಕೆ ನ್ಯಾಯತೀರಿಸುವೆಯಾ ಹೌದು ಅದರ ಅಸಹ್ಯವಾದವುಗಳನ್ನೆಲ್ಲಾ ಅದಕ್ಕೆ ತಿಳಿಸುವಿ.
- Ezekiel 23:36 ಯೆಹೆಜ್ಕೇಲನು 23:36ಇದಲ್ಲದೆ ಕರ್ತನು ನನಗೆ ಹೇಳಿದ್ದೇನಂದರೆ --ಮನುಷ್ಯಪುತ್ರನೇ, ಒಹೊಲಳಿಗೂ ಒಹೊಲೀ ಬಳಿಗೂ ನ್ಯಾಯತೀರಿಸುವಿಯೋ? ಹೌದು, ಅವರ ಅಸಹ್ಯಗಳನ್ನು ಅವರಿಗೆ ತಿಳಿಸು.
- Ezekiel 16:2–3 ಯೆಹೆಜ್ಕೇಲನು 16:2–3ಮನುಷ್ಯಪುತ್ರನೇ, ಯೆರೂಸಲೇಮಿಗೆ ಅದರ ಅಸಹ್ಯವಾದವುಗಳನ್ನು ತಿಳಿದುಕೊಳ್ಳುವ ಹಾಗೆ ಮಾಡು. ದೇವರಾದ ಕರ್ತನು ಯೆರೂಸಲೇಮಿನವರಿಗೆ ಹೀಗೆ ಹೇಳುತ್ತಾನೆ--ನಿನ್ನ ಹುಟ್ಟುವಿಕೆಯೂ ನಿನ್ನ ಹುಟ್ಟಿದ ಸ್ಥಳವೂ ಕಾನಾನ್ ದೇಶದಿಂದಾದದ್ದೇ; ನಿನ್ನ ತಂದೆ ಅಮೋರಿಯನು, ನಿನ್ನ ತಾಯಿ ಹಿತ್ತಿಯಳು
- Jeremiah 7:16 ಯೆರೆಮೀಯ 7:16ಆದದರಿಂದ ನೀನು ಈ ಜನರಿಗೋಸ್ಕರ ಪ್ರಾರ್ಥನೆ ಮಾಡಬೇಡ; ಅವರಿಗೋಸ್ಕರ ಮೊರೆ ಯನ್ನೂ ಪ್ರಾರ್ಥನೆಯನ್ನೂ ಎತ್ತಬೇಡ ಇಲ್ಲವೆ ನನಗೆ ವಿಜ್ಞಾಪನೆ ಮಾಡಬೇಡ; ನಾನು ಅದನ್ನು ಕೇಳಿಸಿಕೊಳ್ಳು ವದಿಲ್ಲ.
- Ezekiel 23:45 ಯೆಹೆಜ್ಕೇಲನು 23:45ನೀತಿ ಯುಳ್ಳ ಮನುಷ್ಯರು ಅವರಿಗೆ ನ್ಯಾಯತೀರಿಸಿ ವ್ಯಭಿ ಚಾರಿಣಿಯರಿಗೂ ರಕ್ತಸುರಿಸುವ ಹೆಂಗಸರಿಗೂ ತಕ್ಕ ದಂಡನೆಯನ್ನು ವಿಧಿಸುವರು; ಅವರು ವ್ಯಭಿಚಾರಿಣಿ ಯರು, ಅವರ ಕೈ ರಕ್ತವಾಗಿದೆ.
- Isaiah 5:3 ಯೆಶಾಯ 5:3ಓ ಯೆರೂಸಲೇಮಿನ ನಿವಾಸಿಗಳೇ, ಯೆಹೂದದ ಮನುಷ್ಯರೇ, ನನಗೂ ನನ್ನ ದ್ರಾಕ್ಷೆಯ ತೋಟಕ್ಕೂ ನ್ಯಾಯತೀರಿಸಿರಿ ಎಂದು ನಿಮ್ಮನ್ನು ಪ್ರಾರ್ಥಿಸುತ್ತೇನೆ.
- Matthew 23:29–37 ಮತ್ತಾಯನು 23:29–37ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ಯಾಕಂದರೆ ನೀವು ಪ್ರವಾದಿಗಳ ಸಮಾಧಿಗಳನ್ನು ಕಟ್ಟಿ ನೀತಿವಂತರ ಸಮಾಧಿಗಳನ್ನು ಅಲಂಕರಿಸುತ್ತೀರಿ. ಆದರೂ--ನಾವು ನಮ್ಮ ಪಿತೃಗಳ ದಿನಗಳಲ್ಲಿ ಇರುತ್ತಿದ್ದರೆ ಪ್ರವಾದಿಗಳ ರಕ್ತದಲ್ಲಿ ಅವರೊಂದಿಗೆ ಪಾಲುಗಾರರಾಗುತ್ತಿರಲಿಲ್ಲ ಎಂದು ಹೇಳುತ್ತೀರಿ. ಆದದರಿಂದ ನೀವು ಆ ಪ್ರವಾದಿ ಗಳನ್ನು ಕೊಂದವರ ಮಕ್ಕಳೇ ಎಂದು ನಿಮಗೆ ನೀವೇ ಸಾಕ್ಷಿಗಳಾಗಿದ್ದೀರಿ. ಹಾಗಾದರೆ ನಿಮ ಪಿತೃಗಳ ಅಳತೆಯನ್ನು ನೀವೇ ತುಂಬಿಸಿರಿ. ಹಾವು ಗಳೇ, ಸರ್ಪಸಂತತಿಯವರೇ, ನೀವು ನರಕದಂಡನೆ ಯಿಂದ ಹೇಗೆ ತಪ್ಪಿಸಿಕೊಂಡೀರಿ? ಆದದರಿಂದ ಇಗೋ, ನಾನು ಪ್ರವಾದಿಗಳನ್ನೂ ಜ್ಞಾನಿಗಳನ್ನೂ ಶಾಸ್ತ್ರಿಗಳನ್ನೂ ನಿಮ್ಮ ಬಳಿಗೆ ಕಳುಹಿ ಸುತ್ತೇನೆ. ಅವರಲ್ಲಿ ಕೆಲವರನ್ನು ನೀವು ಕೊಂದು ಶಿಲುಬೆಗೆ ಹಾಕುವಿರಿ; ಮತ್ತು ಕೆಲವರನ್ನು ನೀವು ನಿಮ್ಮ ಸಭಾಮಂದಿರಗಳಲ್ಲಿ ಕೊರಡೆಗಳಿಂದ ಹೊಡೆದು ಅವ ರನ್ನು ಪಟ್ಟಣದಿಂದ ಪಟ್ಟಣಕ್ಕೆ ಅಟ್ಟಿ ಹಿಂಸಿಸ ಹೀಗೆ ನೀತಿವಂತನಾದ ಹೇಬೆಲನ ರಕ್ತ ಮೊದಲು ಗೊಂಡು ದೇವಾಲಯಕ್ಕೂ ಯಜ್ಞವೇದಿಗೂ ನಡುವೆ ನೀವು ಕೊಂದು ಹಾಕಿದ ಬರಕೀಯನ ಮಗನಾದ ಜಕರೀಯನ ರಕ್ತದವರೆಗೂ ಭೂಮಿಯ ಮೇಲೆ ಸುರಿಸಲ್ಪಟ್ಟ ಎಲ್ಲಾ ನೀತಿವಂತರ ರಕ್ತಾಪರಾಧವು ನಿಮ್ಮ ಮೇಲೆ ಬರುವದು. ನಿಮಗೆ ನಿಜವಾಗಿ ಹೇಳು ತ್ತೇನೆ--ಇವೆಲ್ಲವುಗಳು ಈ ಸಂತತಿಯವರ ಮೇಲೆ ಬರುವವು. ಓ ಯೆರೂಸಲೇಮೇ, ಯೆರೂಸಲೇಮೇ, ಪ್ರವಾದಿಗಳನ್ನು ಕೊಲ್ಲುವವಳೇ, ನಿನ್ನ ಬಳಿಗೆ ಕಳುಹಿಸ ಲ್ಪಟ್ಟವರನ್ನು ಕಲ್ಲೆಸೆಯುವವಳೇ, ಕೋಳಿಯು ಮರಿಗಳನ್ನು ತನ್ನ ರೆಕ್ಕೆಗಳ ಕೆಳಗೆ ಕೂಡಿಸುವಂತೆ ನಿನ್ನ ಮಕ್ಕಳನ್ನು ಕೂಡಿಸುವದಕ್ಕೆ ನನಗೆ ಎಷ್ಟೋ ಸಾರಿ ಮನಸ್ಸಿತ್ತು; ಆದರೆ ನಿನಗೆ ಮನ
- Luke 11:47–51 ಲೂಕನು 11:47–51ನಿಮಗೆ ಅಯ್ಯೋ! ಯಾಕಂದರೆ ನಿಮ್ಮ ತಂದೆಗಳು ಪ್ರವಾದಿಗಳನ್ನು ಕೊಂದರು. ನೀವು ಅವರ ಸಮಾಧಿಗಳನ್ನು ಕಟ್ಟುತ್ತೀರಿ. ಇದರಿಂದ ನಿಜವಾ ಗಿಯೂ ನಿಮ್ಮ ತಂದೆಗಳ ಕೃತ್ಯಗಳನ್ನು ನೀವು ಒಪ್ಪಿ ಕೊಳ್ಳುವಂತೆ ಸಾಕ್ಷೀಕರಿಸುತ್ತೀರಿ; ಯಾಕಂದರೆ ಅವರು ನಿಜವಾಗಿಯೂ ಅವರನ್ನು ಕೊಂದರು; ನೀವು ಅವರ ಸಮಾಧಿಗಳನ್ನು ಕಟ್ಟುತ್ತೀರಿ. ಆದದರಿಂದ ದೇವರ ಜ್ಞಾನವು ಸಹ ಹೇಳಿದ್ದೇನಂದರೆ -- ನಾನು ಅವರ ಬಳಿಗೆ ಪ್ರವಾದಿಗಳನ್ನೂ ಅಪೊಸ್ತಲರನ್ನೂ ಕಳುಹಿಸು ವೆನು; ಅವರಲ್ಲಿ ಕೆಲವರನ್ನು ಅವರು ಕೊಲ್ಲುವರು ಮತ್ತು ಹಿಂಸಿಸುವರು. ಹೀಗೆ ಜಗತ್ತಿನ ಅಸ್ತಿವಾರ ಮೊದಲುಗೊಂಡು ಸುರಿಸಲ್ಪಟ್ಟ ಎಲ್ಲಾ ಪ್ರವಾದಿಗಳ ರಕ್ತಕ್ಕೆ ಈ ಸಂತತಿಯು ಉತ್ತರ ಕೊಡಬೇಕಾಗಿರುವದು. ಹೇಬೆಲನ ರಕ್ತ ಮೊದಲುಗೊಂಡು ಯಜ್ಞವೇದಿಗೂ ದೇವಾಲಯಕ್ಕೂ ಮಧ್ಯದಲ್ಲಿ ಹತವಾದ ಜಕರೀಯನ ರಕ್ತದವರೆಗೂ ಈ ಸಂತತಿಯು ಉತ್ತರಕೊಡಬೇಕು; ಹೌದು, ಈ ಸಂತತಿಯವರೇ ಉತ್ತರಕೊಡಬೇಕೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.
- Ezekiel 14:14 ಯೆಹೆಜ್ಕೇಲನು 14:14ನೋಹ ದಾನಿಯೇಲ ಯೋಬ ಎಂಬ ಈ ಮೂವರು ಅದರಲ್ಲಿದ್ದರೂ ತಮ್ಮ ನೀತಿಯಿಂದ ತಮ್ಮ ಪ್ರಾಣಗಳನ್ನು ಉಳಿಸಿಕೊಳ್ಳುತ್ತಿದ್ದರು ಎಂದು ದೇವರಾದ ಕರ್ತನು ಹೇಳುತ್ತಾನೆ.
- Jeremiah 14:11–14 ಯೆರೆಮೀಯ 14:11–14ಆಗ ಕರ್ತನು ನನಗೆ ಈ ಜನರಿಗೋಸ್ಕರ ಒಳ್ಳೇದಕ್ಕಾಗಿ ಪ್ರಾರ್ಥನೆ ಮಾಡಬೇಡ; ಅವರು ಉಪವಾಸ ಮಾಡಿದಾಗ್ಯೂ ನಾನು ಅವರ ಮೊರೆಯನ್ನು ಕೇಳುವದಿಲ್ಲ; ಅವರು ದಹನಬಲಿಗಳನ್ನೂ ಕಾಣಿಕೆಗಳನ್ನೂ ಅರ್ಪಿಸಿದಾಗ್ಯೂ ನಾನು ಅವರನ್ನು ಅಂಗೀಕರಿಸುವದಿಲ್ಲ; ಆದರೆ ನಾನು ಕತ್ತಿಯಿಂದಲೂ ಕ್ಷಾಮದಿಂದಲೂ ಜಾಡ್ಯದಿಂದಲೂ ಅವರನ್ನು ನಿರ್ಮೂಲ ಮಾಡಿಬಿಡುತ್ತೇನೆ ಎಂದು ಹೇಳಿದನು. ಆಗ ನಾನು--ಹಾ, ದೇವರಾದ ಕರ್ತನೇ, ಇಗೋ, ಪ್ರವಾದಿಗಳು ಅವರಿಗೆ--ನೀವು ಕತ್ತಿಯನ್ನು ನೋಡುವದಿಲ್ಲ, ನಿಮಗೆ ಕ್ಷಾಮವು ಬಾರದು, ಆದರೆ ಕರ್ತನು ನಿಮಗೆ ಈ ಸ್ಥಳದಲ್ಲಿ ಸ್ಥಿರ ಸಮಾಧಾನ ಕೊಡುತ್ತಾನೆಂದು ಹೇಳುತ್ತಾರೆ ಅಂದೆನು. ಆಗ ಕರ್ತನು ನನಗೆ ಹೇಳಿದ್ದೇನಂದರೆ --ಪ್ರವಾದಿಗಳು ನನ್ನ ಹೆಸರಿನಲ್ಲಿ ಸುಳ್ಳಾಗಿ ಪ್ರವಾದಿ ಸುತ್ತಾರೆ; ನಾನು ಅವರನ್ನು ಕಳುಹಿಸಲಿಲ್ಲ; ಅವ ರಿಗೆ ಆಜ್ಞೆ ಕೊಡಲಿಲ್ಲ; ಅವರ ಸಂಗಡ ಮಾತಾಡ ಲಿಲ್ಲ; ಸುಳ್ಳಿನ ದರ್ಶನವನ್ನೂ ಶಕುನವನ್ನೂ ಶೂನ್ಯ ವನ್ನೂ ತಮ್ಮ ಹೃದಯದ ಕಪಟವನ್ನೂ ನಿಮಗೆ ಪ್ರವಾದಿಸುತ್ತಾರೆ.
- Jeremiah 11:14 ಯೆರೆಮೀಯ 11:14ಆದದರಿಂದ ನೀನು ಈ ಜನರಿಗೋಸ್ಕರ ಪ್ರಾರ್ಥನೆ ಮಾಡಬೇಡ; ಅವರಿಗೋಸ್ಕರ ಮೊರೆ ಯನ್ನೂ ಪ್ರಾರ್ಥನೆಯನ್ನೂ ಎತ್ತಬೇಡ; ಅವರು ತಮ್ಮ ಕೇಡಿನ ನಿಮಿತ್ತ ನನ್ನನ್ನು ಕೂಗುವ ಸಮಯದಲ್ಲಿ ನಾನು ಕೇಳೆನು.
- Acts 7:51–52 ಅಪೊಸ್ತಲರ ಕೃತ್ಯಗಳು 7:51–52ಬಗ್ಗದ ಕುತ್ತಿಗೆಯುಳ್ಳವರೇ, ಹೃದಯದಲ್ಲಿಯೂ ಕಿವಿಗಳಲ್ಲಿಯೂ ಸುನ್ನತಿಯಿಲ್ಲದವರೇ, ನಿಮ್ಮ ಪಿತೃಗಳು ಹೇಗೋ ಹಾಗೆಯೇ ನೀವು ಯಾವಾಗಲೂ ಪವಿತ್ರಾತ್ಮನನ್ನು ಎದುರಿಸುವವರಾಗಿದ್ದೀರಿ. ಪ್ರವಾದಿ ಗಳಲ್ಲಿ ನಿಮ್ಮ ಪಿತೃಗಳು ಹಿಂಸೆಪಡಿಸದವರು ಯಾರಿ ದ್ದಾರೆ? ಅವರು ಆ ನೀತಿವಂತನ ಆಗಮನದ ವಿಷಯದಲ್ಲಿ ಮುಂತಿಳಿಸಿದವರನ್ನು ಕೊಂದರು. ನೀವು ಈಗ ಆತನನ್ನು ಹಿಡುಕೊಟ್ಟು ಕೊಂದವರಾದಿರಿ.