Ezekiel · chapter 20 · verse 7
Ezekiel 20:7 in Kannada
ಆಮೇಲೆ ನಾನು ಅವರಿಗೆ ನಿಮ್ಮಲ್ಲಿ ಒಬ್ಬೊಬ್ಬನು ತಮ್ಮ ತಮ್ಮ ಕಣ್ಣುಗಳಿಗೆ ಅಸಹ್ಯವಾದವುಗಳನ್ನು ಬಿಸಾಡಿ. ಐಗುಪ್ತದ ವಿಗ್ರಹಗಳಿಂದ ನಿಮ್ಮನ್ನು ಅಶುದ್ಧಪಡಿಸಿ ಕೊಳ್ಳಬೇಡಿರಿ. ನಿಮ್ಮ ದೇವರಾದ ಕರ್ತನು ನಾನಾಗಿರು ವೆನು ಅಂದೆನು.
Aamele naanu avarige nimmalli obbobbanu tamma tamma kannugalige asahyavaadavugalannu bisaadi. Aiguptada vigrahagalinda nimmannu ashuddhapadisi kollabediri. Nimma devaraada kartanu naanaagiru venu andenu.
Ezekiel 20:7 in English
- King James Version (KJV)
- Then said I unto them, Cast ye away every man the abominations of his eyes, and defile not yourselves with the idols of Egypt: I [am] the LORD your God.
- World English Bible (WEB)
- I said to them, ‘Each of you throw away the abominations of his eyes. Don’t defile yourselves with the idols of Egypt. I am the LORD your God.’
- American Standard Version (ASV)
- And I said unto them, Cast ye away every man the abominations of his eyes, and defile not yourselves with the idols of Egypt; I am Jehovah your God.
- Bible in Basic English (BBE)
- And I said to them, Let every man among you put away the disgusting things to which his eyes are turned, and do not make yourselves unclean with the images of Egypt; I am the Lord your God.
- Darby Translation (DBY)
- and I said unto them, Cast ye away every man the abominations of his eyes, and defile not yourselves with the idols of Egypt: I [am] Jehovah your God.
- Webster's Bible (WBS)
- Then said I to them, Cast ye away every man the abominations of his eyes, and defile not yourselves with the idols of Egypt: I [am] the LORD your God.
- Young's Literal Translation (YLT)
- And I say unto them, Let each cast away the detestable things of his eyes, And with the idols of Egypt be not defiled, I [am] Jehovah your God.
Read in context
- 5ಅವರಿಗೆ ಹೇಳಬೇಕಾದದ್ದೇನಂದರೆ --ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಾನು ಇಸ್ರಾಯೇಲನ್ನು ಆದುಕೊಂಡು ಯಾಕೋಬನ ಮನೆಯ ವಂಶದವರಿಗೆ ನನ್ನ ಕೈಯೆತ್ತಿ ಮತ್ತು ಐಗುಪ್ತ ದೇಶದಲ್ಲಿ ಅವರಿಗೆ ನನ್ನನ್ನು ತಿಳಿಯಪಡಿಸಿದ ದಿನದಲ್ಲಿ ನಾನು ಅವರಿಗೆ ನನ್ನ ಕೈಯೆತ್ತಿ ನಿಮ್ಮ ದೇವರಾದ ಕರ್ತನು ನಾನೇ ಎಂದು ಅವರಿಗೆ ಹೇಳಿದಾಗ,
- 6ನಾನು ಅವರಿಗೆ ನನ್ನ ಕೈಯೆತ್ತಿ--ಐಗುಪ್ತ ದೇಶದಿಂದ ಹೊರಗೆ ತಂದು ಅವರಿಗೋಸ್ಕರ ನಾನೇ ನೋಡಿಕೊಂಡಂಥ ಹಾಲೂ ಜೇನೂ ಹರಿಯುವ ಕೀರ್ತಿಯುಳ್ಳ ಎಲ್ಲಾ ದೇಶಗಳಿಗೂ ಅವರನ್ನು ಆ ದಿವಸದಲ್ಲಿ ಕರೆತಂದೆನು.
- 7ಆಮೇಲೆ ನಾನು ಅವರಿಗೆ ನಿಮ್ಮಲ್ಲಿ ಒಬ್ಬೊಬ್ಬನು ತಮ್ಮ ತಮ್ಮ ಕಣ್ಣುಗಳಿಗೆ ಅಸಹ್ಯವಾದವುಗಳನ್ನು ಬಿಸಾಡಿ. ಐಗುಪ್ತದ ವಿಗ್ರಹಗಳಿಂದ ನಿಮ್ಮನ್ನು ಅಶುದ್ಧಪಡಿಸಿ ಕೊಳ್ಳಬೇಡಿರಿ. ನಿಮ್ಮ ದೇವರಾದ ಕರ್ತನು ನಾನಾಗಿರು ವೆನು ಅಂದೆನು.
- 8ಆದರೆ ಅವರು ನನಗೆ ವಿರುದ್ಧವಾಗಿ ತಿರುಗಿಬಿದ್ದರು; ನನಗೆ ಕಿವಿಗೊಡಲಿಲ್ಲ. ಅವರು ತಮ್ಮ ತಮ್ಮ ಕಣ್ಣುಗಳಿಗೆ ಅಸಹ್ಯವಾದವುಗಳನ್ನು ಬಿಸಾಡಲಿಲ್ಲ; ಅವರು ಐಗುಪ್ತದ ವಿಗ್ರಹಗಳನ್ನು ಬಿಡಲಿಲ್ಲ; ಆಗ ನಾನು ಅವರ ಮೇಲೆ ನನ್ನ ರೋಷವನ್ನು ಸುರಿಸಿ, ಐಗುಪ್ತದೇಶದಲ್ಲಿ ಅವರ ಮೇಲೆ ನನ್ನ ಕೋಪವನ್ನು ತೀರಿಸುವೆನೆಂದು ಹೇಳಿದೆನು.
- 9ಆದರೆ ಅವರು ಯಾರ ಮಧ್ಯದಲ್ಲಿದ್ದರೋ ನಾನು ಯಾರ ಮುಂದೆ ಅವರನ್ನು ಐಗುಪ್ತದೇಶದಿಂದ ಹೊರಗೆ ತಂದು ನನ್ನನ್ನು ತಿಳಿಯ ಪಡಿಸಿದೆನೋ? ಆ ಅನ್ಯ ಜನಾಂಗಗಳ ಕಣ್ಣುಗಳ ಮುಂದೆ ನನ್ನ ಹೆಸರು ಅಪವಿತ್ರವಾಗದ ಹಾಗೆ ನನ್ನ ಹೆಸರಿಗೋಸ್ಕರವೇ ಈ ಕೆಲಸ ಮಾಡಿದೆನು;
Cross references
- Leviticus 18:3 ಯಾಜಕಕಾಂಡ 18:3ನೀವು ವಾಸವಾಗಿದ್ದ ಐಗುಪ್ತದೇಶದ ಕೃತ್ಯಗಳಂತೆ ಮಾಡಬಾರದು; ನಾನು ನಿಮ್ಮನ್ನು ತರುವದಕ್ಕಿರುವ ಕಾನಾನ್ದೇಶದ ಕೃತ್ಯಗಳಂತೆ ನೀವು ಮಾಡಬಾರದು ಇಲ್ಲವೆ ನೀವು ಅವರ ನಿಯಮಗಳಿಗನುಸಾರವೂ ನಡೆ ಯಬಾರದು.
- Ezekiel 20:8 ಯೆಹೆಜ್ಕೇಲನು 20:8ಆದರೆ ಅವರು ನನಗೆ ವಿರುದ್ಧವಾಗಿ ತಿರುಗಿಬಿದ್ದರು; ನನಗೆ ಕಿವಿಗೊಡಲಿಲ್ಲ. ಅವರು ತಮ್ಮ ತಮ್ಮ ಕಣ್ಣುಗಳಿಗೆ ಅಸಹ್ಯವಾದವುಗಳನ್ನು ಬಿಸಾಡಲಿಲ್ಲ; ಅವರು ಐಗುಪ್ತದ ವಿಗ್ರಹಗಳನ್ನು ಬಿಡಲಿಲ್ಲ; ಆಗ ನಾನು ಅವರ ಮೇಲೆ ನನ್ನ ರೋಷವನ್ನು ಸುರಿಸಿ, ಐಗುಪ್ತದೇಶದಲ್ಲಿ ಅವರ ಮೇಲೆ ನನ್ನ ಕೋಪವನ್ನು ತೀರಿಸುವೆನೆಂದು ಹೇಳಿದೆನು.
- Deuteronomy 29:16–18 ಧರ್ಮೋಪದೇಶಕಾಂಡ 29:16–18ಯಾಕಂದರೆ ನಾವು ಐಗುಪ್ತದೇಶದಲ್ಲಿ ಹೇಗೆ ವಾಸವಾಗಿದ್ದೇವೆಂದೂ ನೀವು ದಾಟಿಬಂದ ಜನಾಂಗಗಳನ್ನು ನಾವು ಹೇಗೆ ದಾಟಿಬಂದೆವೆಂದೂ ನಿಮಗೆ ತಿಳಿಯಿತಲ್ಲಾ? ಅವರ ಬಳಿಯಲ್ಲಿರುವ ಮರ, ಕಲ್ಲು, ಬೆಳ್ಳಿ, ಬಂಗಾರಗಳ ಅಸಹ್ಯವಾದವು ಗಳನ್ನೂ ಬೊಂಬೆಗಳನ್ನೂ ನೀವು ನೋಡಿದಿರಲ್ಲಾ? ಈಹೊತ್ತು ನಮ್ಮ ದೇವರಾದ ಕರ್ತನನ್ನು ಬಿಟ್ಟು ಆ ಜನಾಂಗಗಳ ದೇವರುಗಳಿಗೆ ಸೇವೆಮಾಡುವದಕ್ಕೆ ತಿರುಗಿಕೊಳ್ಳುವ ಹೃದಯವುಳ್ಳ ಪುರುಷನಾದರೂ ಸ್ತ್ರೀಯಾದರೂ ಕುಟುಂಬವಾದರೂ ಗೋತ್ರವಾದರೂ ಇರಬಾರದು. ವಿಷವನ್ನೂ ಮಾಚಿಪತ್ರೆಯನ್ನೂ ಬೆಳೆ ಸುವ ಬೇರು ನಿಮ್ಮಲ್ಲಿ ಇರಬಾರದು.
- Ezekiel 18:31 ಯೆಹೆಜ್ಕೇಲನು 18:31ನೀವು ಮಾಡುವ ದುಷ್ಟತ್ವಗಳನ್ನೆಲ್ಲಾ ನಿಮ್ಮಿಂದ ಬಿಟ್ಟುಬಿಡಿರಿ; ಹೊಸ ಹೃದಯವನ್ನೂ ಹೊಸ ಆತ್ಮವನ್ನೂ ನೀವು ಪಡಕೊಳ್ಳಿರಿ; ಯಾಕಂದರೆ ಓ ಇಸ್ರಾಯೇಲಿನ ಮನೆತನದವರೇ, ನೀವು ಸಾಯುವದೇಕೆ?ಸಾಯುವವನ ಸಾವಿನಲ್ಲಿ ನನಗೆ ಸಂತೋಷವಿಲ್ಲವೆಂದು ದೇವರಾದ ಕರ್ತನು ಹೇಳುತ್ತಾನೆ; ಆದಕಾರಣ ತಿರುಗಿಕೊಂಡು ಬಾಳಿರಿ.
- Leviticus 11:44 ಯಾಜಕಕಾಂಡ 11:44ಯಾಕಂದರೆ ನಾನೇ ನಿಮ್ಮ ದೇವರಾದ ಕರ್ತನು. ಆದದರಿಂದ ನಿಮ್ಮನ್ನು ನೀವು ಶುದ್ಧೀಕರಿಸಿಕೊಂಡು ಪರಿಶುದ್ಧರಾಗಿರ್ರಿ; ನಾನು ಪರಿಶುದ್ಧನು. ಇದಲ್ಲದೆ ಭೂಮಿಯ ಮೇಲೆ ಹರಿದಾ ಡುವ ಯಾವ ಬಗೆಯ ಜಂತುಗಳಿಂದಲೂ ನಿಮ್ಮನ್ನು ಮಲಿನ ಮಾಡಿಕೊಳ್ಳಬಾರದು.
- Ezekiel 23:8 ಯೆಹೆಜ್ಕೇಲನು 23:8ಇಲ್ಲವೆ ಅವಳು ಐಗುಪ್ತದಲ್ಲಿದ್ದಂದಿನಿಂದಲೂ ವ್ಯಭಿ ಚಾರವನ್ನು ಸಹ ಬಿಡಲಿಲ್ಲ. ಅವಳ ಯೌವನದಲ್ಲಿ ಅವರು ಅವಳ ಸಂಗಡ ಇದ್ದರು; ಅವರೆಲ್ಲರೂ ಅವಳ ಕನ್ಯತ್ವದ ಸ್ತನಗಳನ್ನು ಒತ್ತಿ, ತಮ್ಮ ವ್ಯಭಿಚಾರಗಳನ್ನು ಅವಳ ಮೇಲೆ ನಡೆಸಿದರು.
- Ezekiel 14:6 ಯೆಹೆಜ್ಕೇಲನು 14:6ಇಸ್ರಾಯೇಲಿನ ಮನೆತನದವರಿಗೆ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಮಾನ ಸಾಂತರಪಟ್ಟು ನಿಮ್ಮ ವಿಗ್ರಹಗಳನ್ನು ಬಿಟ್ಟು ನೀವಾ ಗಿಯೇ ತಿರುಗಿ ಕೊಳ್ಳಿರಿ; ನಿಮ್ಮ ಅಸಹ್ಯವಾದವುಗಳ ನ್ನೆಲ್ಲಾ ಬಿಟ್ಟು ನಿಮ್ಮ ಮುಖಗಳನ್ನು ತಿರುಗಿಸಿರಿ.
- Ezekiel 20:19 ಯೆಹೆಜ್ಕೇಲನು 20:19ನಾನೇ ಕರ್ತನೂ ನಿಮ್ಮ ದೇವರೂ ಆಗಿದ್ದೇನೆ ನನ್ನ ನಿಯಮಗಳಲ್ಲಿಯೇ ನಡೆ ಯಿರಿ ನ್ಯಾಯಗಳನ್ನು ಕೈಕೊಂಡು ಅವುಗಳನ್ನೇ ಮಾಡಿರಿ;
- Ezekiel 18:15 ಯೆಹೆಜ್ಕೇಲನು 18:15ಪರ್ವತಗಳ ಮೇಲೆ ತಿನ್ನದೆ, ಇಸ್ರಾಯೇಲಿನ ಮನೆತನ ದವರ ವಿಗ್ರಹಗಳ ಕಡೆಗೆ ತನ್ನ ಕಣ್ಣುಗಳನ್ನು ಎತ್ತದೆ, ತನ್ನ ನೆರೆಯವನ ಹೆಂಡತಿಯನ್ನು ಕೆಡಿಸದೆ,
- Isaiah 2:20–21 ಯೆಶಾಯ 2:20–21ಆ ದಿನದಲ್ಲಿ ಮನುಷ್ಯನು ಅಡ್ಡಬೀಳುವದಕ್ಕೋಸ್ಕರ ತಾವು ಮಾಡಿ ಕೊಂಡ ಬೆಳ್ಳಿಯ ವಿಗ್ರಹಗಳನ್ನೂ ಚಿನ್ನದ ವಿಗ್ರಹ ಗಳನ್ನೂ ಇಲಿ ಬಾವಲಿಗಳಿಗೆ ಬಿಸಾಡಿಬಿಡುವನು. ಕರ್ತನು ಭೂಮಿಯನ್ನು ಭಯಂಕರವಾಗಿ ನಡುಗಿ ಸಲು ಏಳುವಾಗ ಕರ್ತನ ಭಯಕ್ಕೂ ಆತನ ಮಹಿ ಮೆಯ ಘನಕ್ಕೂ ಹೆದರಿ ಬಂಡೆಗಳ ಸಂದುಗಳಿಗೂ ಎತ್ತರವಾಗಿರುವ ಬಂಡೆಗಳ ಕಡಿದಾದ ಸ್ಥಳಗಳಿಗೂ ಹೋಗುವರು.ಉಸಿರು ಮೂಗಿನಲ್ಲಿ ಇರುವ ವರೆಗೆ ಬದುಕುವ ನರಮನುಷ್ಯನನ್ನು ಬಿಟ್ಟುಬಿಡಿರಿ; ಅವನು ಎಷ್ಟರವ ನೆಂದು ಎಣಿಸಬಹುದು?
- Isaiah 31:7 ಯೆಶಾಯ 31:7ನೀವು ನಿಮ್ಮ ಸ್ವಂತ ಕೈಗಳಿಂದ ಪಾಪಕ್ಕೋ ಸ್ಕರ ಮಾಡಿದ ಬೆಳ್ಳಿಬಂಗಾರದ ವಿಗ್ರಹಗಳನ್ನು ಆ ದಿನದಲ್ಲಿ ಪ್ರತಿಯೊಬ್ಬನು ಬಿಸಾಡಿಬಿಡುವನು.
- Ezekiel 6:9 ಯೆಹೆಜ್ಕೇಲನು 6:9ನಿಮ್ಮಲ್ಲಿ ತಪ್ಪಿಸಿಕೊಂಡವರು ತಾವು ಸೆರೆಗೆ ಒಯ್ಯಲ್ಪ ಡುವ ಜನಾಂಗಗಳಲ್ಲಿ ನನ್ನನ್ನು ಜ್ಞಾಪಕಮಾಡಿಕೊಳ್ಳು ವರು, ಯಾಕಂದರೆ ನನ್ನನ್ನು ಬಿಟ್ಟುಬಿಡುವ ಅವರ ಜಾರಹೃದಯದಿಂದಲೂ ಅವರ ದೇವರ ವಿಗ್ರಹಗಳ ಹಿಂದೆ ಜಾರತ್ವ ಮಾಡುವವರ ಕಣ್ಣುಗಳಿಂದಲೂ ಮುರಿದುಹೋದೆನು; ಅವರು ತಮ್ಮ ಅಸಹ್ಯಗಳಲ್ಲಿ ಮಾಡುವ ಕೇಡುಗಳ ನಿಮಿತ್ತ ತಮಗೆ ತಾವೇ ಹೇಸಿ ಕೊಳ್ಳುವರು.