Ezekiel · chapter 21 · verse 23
Ezekiel 21:23 in Kannada
ಅದು ಅವರಿಗೆ ಸುಳ್ಳು ಶಕುನದ ಹಾಗೆ ಕಾಣುವದು; ಆಣೆಯಿಟ್ಟು ಮಾಡಿದ ಪ್ರಮಾಣಗಳು ಅವರ ಮೇಲೆ ಉಂಟಾಗು ವವು; ಆದರೆ ಅವರು ಹಿಡಿಯಲ್ಪಡುವ ಹಾಗೆ ಅಕ್ರಮವನ್ನು ಜ್ಞಾಪಕಪಡಿಸುವರು.
Adu avarige sullu shakunada haage kaanuvadu; aaneyittu maadida pramaanagalu avara mele untaagu vavu; aadare avaru hidiyalpaduva haage akramavannu jnyaapakapadisuvaru.
Ezekiel 21:23 in English
- King James Version (KJV)
- And it shall be unto them as a false divination in their sight, to them that have sworn oaths: but he will call to remembrance the iniquity, that they may be taken.
- World English Bible (WEB)
- It will be to them as a false divination in their sight, who have sworn oaths to them; but he brings iniquity to memory, that they may be taken.
- American Standard Version (ASV)
- And it shall be unto them as a false divination in their sight, who have sworn oaths unto them; but he bringeth iniquity to remembrance, that they may be taken.
- Bible in Basic English (BBE)
- And this answer given by secret arts will seem false to those who have given their oaths and have let them be broken: but he will keep the memory of evil-doing so that they may be taken.
- Darby Translation (DBY)
- And this shall be a false divination in their sight, for them that have sworn oaths; but he will call to remembrance the iniquity, that they may be taken.
- Webster's Bible (WBS)
- And it shall be to them as a false divination in their sight, to them that have sworn oaths: but he will call to remembrance the iniquity, that they may be taken.
- Young's Literal Translation (YLT)
- And it hath been to them as a false divination in their eyes, Who have sworn oaths to them, And he is causing iniquity to be remembered to be caught.
Read in context
- 21ಬಾಬೆಲಿನ ಅರಸನು ಮಾರ್ಗವು ಒಡೆಯುವ ಸ್ಥಳದಲ್ಲಿ (ಎರಡು ದಾರಿಯ ಮಗ್ಗುಲಲ್ಲಿ) ಶಕುನವನ್ನು ನೋಡುವದಕ್ಕೆ ನಿಂತಿದ್ದಾನೆ; ಬಾಣಗಳನ್ನು ಅಲ್ಲಾಡಿಸಿ ದನು; ಮೂರ್ತಿಗಳ ಹತ್ತಿರ ವಿಚಾರಿಸಿದನು. ಪಿತ್ತ ಚೀಲವನ್ನು ನೋಡಿದನು.
- 22ಅವನು ಬಲಗೈಯಲ್ಲಿ ಯೆರೂಸಲೇಮಿಗಾದ ಶಕುನವು ಇತ್ತು. ಬಡಿಯುವ ಆಯುಧಗಳನ್ನಿಟ್ಟು ಬಾಯಿಬಿಟ್ಟು ಸಂಹಾರ ಧ್ವನಿಗೈದು ಆರ್ಭಟದಿಂದ ಬಾಗಿಲುಗಳ ಎದುರಾಗಿ ಬಡಿಯುವ ಆಯುಧಗಳನ್ನಿಟ್ಟು ಮೊಹರ್ಚೆಯನ್ನು ಹಾಕಿ ಕೋಟೆ ಯನ್ನು ಕಟ್ಟಿದ್ದು ಸೂಚನೆಯಾಗಿದೆ.
- 23ಅದು ಅವರಿಗೆ ಸುಳ್ಳು ಶಕುನದ ಹಾಗೆ ಕಾಣುವದು; ಆಣೆಯಿಟ್ಟು ಮಾಡಿದ ಪ್ರಮಾಣಗಳು ಅವರ ಮೇಲೆ ಉಂಟಾಗು ವವು; ಆದರೆ ಅವರು ಹಿಡಿಯಲ್ಪಡುವ ಹಾಗೆ ಅಕ್ರಮವನ್ನು ಜ್ಞಾಪಕಪಡಿಸುವರು.
- 24ಆದದರಿಂದ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಿಮ್ಮ ದ್ರೋಹಗಳು ಪ್ರಕಟವಾಗಿ ನಿಮ್ಮ ಕೆಲಸಗಳಲ್ಲೆಲ್ಲಾ ನಿಮ್ಮ ಪಾಪಗಳು ಕಾಣುವ ಹಾಗೆ ನೀವು ನಿಮ್ಮ ಅಕ್ರಮಗಳನ್ನು ಜ್ಞಾಪಕಕ್ಕೆ ತಂದದ್ದರಿಂದ ನೀವು ಕೈಯಲ್ಲಿ ಹಿಡಿಯಲ್ಪಡುವಿರಿ.
- 25ದುಷ್ಟನಾದ ಭ್ರಷ್ಟ ಇಸ್ರಾಯೇಲನ ಪ್ರಭುವೇ, ನೀನು ಮಾಡಿದ ಅಕ್ರಮಗಳಿಂದ ನಿನಗೆ ಅಂತ್ಯ ದಿವಸವು ಬಂದಿತು.
Cross references
- Numbers 5:15 ಅರಣ್ಯಕಾಂಡ 5:15ಆ ಮನು ಷ್ಯನು ತನ್ನ ಹೆಂಡತಿಯನ್ನು ಯಾಜಕನ ಬಳಿಗೆ ತಂದು ಅವಳಿಗೋಸ್ಕರ ಕಾಣಿಕೆಯಾಗಿ ಏಫದ ಹತ್ತನೇ ಪಾಲನ್ನು ಜವೆಗೋಧಿಯ ಹಿಟ್ಟನ್ನು ತರಬೇಕು. ಅದರ ಮೇಲೆ ಎಣ್ಣೆಯನ್ನಾದರೂ ಸಾಂಬ್ರಾಣಿಯನ್ನಾದರೂ ಹಾಕ ಬಾರದು; ಅದು ರೋಷದ ಕಾಣಿಕೆಯೂ ಅಪರಾಧ ವನ್ನು ಜ್ಞಾಪಕಕ್ಕೆ ತರುವ ಕಾಣಿಕೆಯೂ ಆಗಿದೆ.
- Ezekiel 29:16 ಯೆಹೆಜ್ಕೇಲನು 29:16ಇನ್ನು ಅದು ಇಸ್ರಾಯೇಲ್ ವಂಶದವರ ಭರವಸವಾಗದೆ, ಇವರು ಅವರ ಕಡೆಗೆ ನೋಡಿದಾಗ ಅಕ್ರಮವನ್ನು ಜ್ಞಾಪಕಕ್ಕೆ ತರಬೇಕಾಗಿರುವದಿಲ್ಲ; ಆಗ ನಾನೇ ದೇವ ರಾದ ಕರ್ತನೆಂದು ಅವರಿಗೆ ತಿಳಿಯುವದು.
- Ezekiel 21:24 ಯೆಹೆಜ್ಕೇಲನು 21:24ಆದದರಿಂದ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಿಮ್ಮ ದ್ರೋಹಗಳು ಪ್ರಕಟವಾಗಿ ನಿಮ್ಮ ಕೆಲಸಗಳಲ್ಲೆಲ್ಲಾ ನಿಮ್ಮ ಪಾಪಗಳು ಕಾಣುವ ಹಾಗೆ ನೀವು ನಿಮ್ಮ ಅಕ್ರಮಗಳನ್ನು ಜ್ಞಾಪಕಕ್ಕೆ ತಂದದ್ದರಿಂದ ನೀವು ಕೈಯಲ್ಲಿ ಹಿಡಿಯಲ್ಪಡುವಿರಿ.
- Ezekiel 17:13–19 ಯೆಹೆಜ್ಕೇಲನು 17:13–19ಅರಸನ ಸಂತಾನ ದವರನ್ನು ಕರೆದುಕೊಂಡು ಅವನ ಸಂಗಡ ಒಡಂಬಡಿಕೆ ಮಾಡಿ ಅವನಿಂದ ಪ್ರಮಾಣಮಾಡಿಸಿ ದೇಶದ ಬಲಿಷ್ಠರನ್ನು ತೆಗೆದುಕೊಂಡು ಹೋಗಿದ್ದಾನೆ. ಆ ರಾಜ್ಯವು ತಗ್ಗಾಗಿ ಮೇಲೇಳದ ಹಾಗಿದ್ದರೂ ಅವನು ಒಡಂಬಡಿಕೆಯನ್ನು ಕೈಕೊಳ್ಳುವದರಿಂದ ಅದು ನಿಲ್ಲುವದು. ಆದರೆ ಇವನು ಅವನಿಗೆ ವಿರುದ್ಧವಾಗಿ ತಿರುಗಿಬಿದ್ದು ತನ್ನ ರಾಯಭಾರಿಗಳನ್ನು ಐಗುಪ್ತಕ್ಕೆ ಕಳು ಹಿಸಿ ತನಗೆ ಕುದುರೆಗಳನ್ನೂ ಬಹಳ ಜನರನ್ನೂ ಕೊಡ ಬೇಕೆಂದು ಹೇಳಿ ಕಳುಹಿಸಿದನು. ಇವನು ಅಭಿವೃದ್ಧಿ ಯಾಗುವನೋ? ಇಂಥಾ ಸಂಗತಿಗಳನ್ನು ಮಾಡುವ ವನು ತಪ್ಪಿಸಿಕೊಳ್ಳುವನೋ? ಅಥವಾ ಒಡಂಬಡಿಕೆ ಯನ್ನು ಮುರಿದು ತಪ್ಪಿಸಿಕೊಳ್ಳಲಾಗುವದೋ? ನಿಶ್ಚ ಯವಾಗಿ ಅವನಿಗೆ ಅರಸುತನವನ್ನು ಕೊಟ್ಟ ಅರಸನೂ ಅಂದರೆ ಯಾವನ ಪ್ರಮಾಣವನ್ನು ತಿರಸ್ಕರಿಸಿದನೋ ಯಾವನ ಒಡಂಬಡಿಕೆಯನ್ನು ವಿಾರಿದನೋ ಅವನು ಇರುವಲ್ಲಿಯೇ ಬಾಬೆಲಿನ ಮಧ್ಯದಲ್ಲಿ ನನ್ನ ಜೀವದಾಣೆ, ಇವನು ಸಾಯುವನು ಎಂದು ದೇವರಾದ ಕರ್ತನು ಹೇಳುತ್ತಾನೆ. ಇಲ್ಲವೆ ಫರೋಹನೂ ಅವನ ಮಹಾ ಸೈನ್ಯವೂ ದೊಡ್ಡ ಪರಿವಾರವೂ ಬಂದು ಬಹಳ ಜನ ರನ್ನು ಕೊಲ್ಲುವದಕ್ಕೆ ದಿಬ್ಬಗಳನ್ನು ಕೋಟೆಗಳನ್ನೂ ಕಟ್ಟುವಾಗಲೂ ಅವನಿಗೆ ಯುದ್ಧದಲ್ಲಿ ಸಹಾಯ ಮಾಡುವದಿಲ್ಲ. ಅವನು ಪ್ರಮಾಣವನ್ನು ತಿರಸ್ಕರಿಸಿ ಕೈಕೊಟ್ಟಾಗ್ಯೂ; ಇಗೋ, ಒಡಂಬಡಿಕೆಯನ್ನು ವಿಾರಿ ಇವುಗಳನ್ನೆಲ್ಲಾ ಮಾಡಿದ್ದ ರಿಂದ ತಪ್ಪಿಸಿಕೊಳ್ಳುವದಿಲ್ಲ. ಆದದರಿಂದ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಅವನು ತಿರಸ್ಕರಿಸಿದ ನನ್ನ ಪ್ರಮಾಣವನ್ನೂ ಅವನು ವಿಾರಿದ ಒಡಂಬಡಿಕೆಯನ್ನೂ ನನ್ನ ಜೀವ ದಾಣೆ ನಿಶ್ಚಯವಾಗಿ ಅವನ ತಲೆಯ ಮೇಲೆಯೇ ಮುಯ್ಯಿ ತೀರಿಸುವೆನು.
- Jeremiah 52:3–11 ಯೆರೆಮೀಯ 52:3–11ಕರ್ತನು ಯೆಹೂದದ ಮೇಲೆಯೂ ಯೆರೂಸಲೇಮಿನ ಮೇಲೆಯೂ ಅವರನ್ನು ತನ್ನ ಸನ್ನಿಧಿಯಿಂದ ತಳ್ಳಿಬಿಡುವ ವರೆಗೆ ಮಾಡಿದ ಕೋಪದಿಂದ ಚಿದ್ಕೀಯನು ಬಾಬೆಲಿನ ಅರಸನಿಗೆ ವಿರೋಧವಾಗಿ ತಿರುಗಿಬಿದ್ದನು. ಅವನ ಆಳಿಕೆಯ ಒಂಭತ್ತನೇ ವರುಷದಲ್ಲಿ, ಹತ್ತನೇ ತಿಂಗಳಿನ ಹತ್ತನೇ ದಿವಸದಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ತಾನು ತನ್ನ ಸಮಸ್ತ ಸೈನ್ಯದ ಸಂಗಡ ಯೆರೂಸಲೇಮಿಗೆ ವಿರೋಧವಾಗಿ ಬಂದು ಅದಕ್ಕೆ ವಿರೋಧವಾಗಿ ದಂಡಿಳಿದು ಅದಕ್ಕೆ ವಿರೋಧವಾಗಿ ಸುತ್ತಲೂ ಕೋಟೆಗಳನ್ನು ಕಟ್ಟಿದನು. ಈ ಪ್ರಕಾರ ಅರಸನಾದ ಚಿದ್ಕೀಯನ ಹನ್ನೊಂದನೇ ವರುಷದ ವರೆಗೆ ಪಟ್ಟಣಕ್ಕೆ ಮುತ್ತಿಗೆ ಹಾಕಿದನು. ನಾಲ್ಕನೇ ತಿಂಗಳಲ್ಲಿ, ತಿಂಗಳಿನ ಒಂಭತ್ತನೇ ದಿವಸದಲ್ಲಿ ದೇಶಸ್ಥರಿ ಗೋಸ್ಕರ ರೊಟ್ಟಿ ಇಲ್ಲದೆ ಪಟ್ಟಣದಲ್ಲಿ ಕ್ಷಾಮವು ಕಠಿಣವಾಗಿತ್ತು. ಆಗ ಪಟ್ಟಣವು ವಿಭಾಗವಾಯಿತು; ಯುದ್ಧಸ್ಥರೆಲ್ಲರು ಓಡಿಹೋಗಿ, ಅರಸನ ತೋಟದ ಬಳಿಯಲ್ಲಿದ್ದ ಎರಡು ಗೋಡೆಗಳ ಮಧ್ಯದ ಬಾಗಲಿನ ಮಾರ್ಗವಾಗಿ ರಾತ್ರಿಯಲ್ಲಿ ಪಟ್ಟಣವನ್ನು ಬಿಟ್ಟು ಹೊರಟು, ಬೈಲು ಸೀಮೆಯ ಮಾರ್ಗವಾಗಿ ಹೋದರು. ಆದರೆ ಕಸ್ದೀಯರು ಪಟ್ಟಣದ ಸುತ್ತಲೂ ಇದ್ದರು. ಆಗ ಕಸ್ದೀಯರ ದಂಡು ಅರಸನನ್ನು ಹಿಂದಟ್ಟಿ ಚಿದ್ಕೀಯನನ್ನು ಯೆರಿಕೋವಿನ ಬೈಲಿನಲ್ಲಿ ಹಿಡಿದರು. ಅವನ ದಂಡೆಲ್ಲಾ ಅವನನ್ನು ಬಿಟ್ಟು ಚದರಿಹೋಯಿತು. ಆಗ ಅವರು ಅರಸನನ್ನು ಹಿಡಿದು, ಬಾಬೆಲಿನ ಅರಸನ ಬಳಿಗೆ ಹಮಾತ್ ದೇಶದಲ್ಲಿರುವ ರಿಬ್ಲಕ್ಕೆ ತಕ್ಕೊಂಡು ಹೋದರು; ಅಲ್ಲಿ ಅವನು ಅವನ ವಿಷಯ ನ್ಯಾಯತೀರ್ಪು ಮಾಡಿದನು. ಬಾಬೇಲಿನ ಅರಸನು ಚಿದ್ಕೀಯನ ಮಕ್ಕಳನ್ನು ಅವನ ಕಣ್ಣುಗಳ ಮುಂದೆ ಕೊಂದು ಹಾಕಿಸಿದನು. ಯೆಹೂದದ ಪ್ರಧಾನರೆಲ್ಲ ರನ್ನೂ ಸಹ ರಿಬ್ಲದಲ್ಲಿ ಕೊಂದು ಹಾಕಿಸಿದನು. ಇದಲ್ಲದೆ ಬಾಬೆಲಿನ ಅಸನು ಚಿದ್ಕೀಯನ ಕಣ್ಣುಗಳನ್ನು ಕಿತ್ತುಹಾಕಿಸಿ, ಅವನನ್ನು ಹಿತ್ತಾಳೆಯ ಸಂಕೋಲೆಗಳಿಂದ ಕಟ್ಟಿಸಿ, ಬಾಬೆಲಿಗೆ ಒಯ್ದು ಅವನು ಸಾಯುವ ದಿನದ ವರೆಗೆ ಸೆರೆಮನೆಯಲ್ಲಿ ಇಟ್ಟನು.
- Ezekiel 11:3 ಯೆಹೆಜ್ಕೇಲನು 11:3ಅದು ಸವಿಾಪವಲ್ಲ, ಮನೆಗ ಳನ್ನು ಕಟ್ಟೋಣ; ಈ ಪಟ್ಟಣವು ಅಂಡೆ, ನಾವು ಮಾಂಸವು ಎನ್ನುತ್ತಾರೆ.
- Isaiah 28:14–15 ಯೆಶಾಯ 28:14–15ಆದಕಾರಣ ಯೆರೂಸಲೇಮಿನಲ್ಲಿರುವ ಈ ಜನ ರನ್ನು ಆಳುವ ಹಾಸ್ಯದ ಜನರಾದ ನೀವು ಕರ್ತನ ಮಾತನ್ನು ಕೇಳಿರಿ, ಮರಣದ ಸಂಗಡ ಒಡಂಬಡಿಕೆಯನ್ನು ಮಾಡಿದ್ದೇವೆ. ಪಾತಾಳದ (ನರಕದ)ಸಂಗಡ ಒಪ್ಪಂದ ಮಾಡಿಕೊಂಡಿದ್ದೇವೆ; ವಿಪರೀತವಾದ ಶಿಕ್ಷೆ ಯು ಹಾದುಹೋಗುವಾಗ ನಮ್ಮ ಮೇಲೆ ಬಾರದು; ಸುಳ್ಳನ್ನು ನಮ್ಮ ಆಶ್ರಯವಾಗಿ ಮಾಡಿಕೊಂಡು ಮೋಸದಲ್ಲಿ ಅಡಗಿಕೊಂಡಿದ್ದೇವೆ ಎಂದು ನೀವು ಅನ್ನುತ್ತೀರಲ್ಲಾ?
- Revelation 16:19 ಪ್ರಕಟನೆ 16:19ಆ ಮಹಾಪಟ್ಟಣವು ಮೂರು ಭಾಗಗಳಾಗಿ ವಿಭಾಗವಾಯಿತು; ಜನಾಂಗಗಳ ಪಟ್ಟಣಗಳು ಬಿದ್ದವು; ಇದಲ್ಲದೆ ಮಹಾಬಾಬೆಲಿಗೆ ಉಗ್ರಕೋಪವೆಂಬ ದ್ರಾಕ್ಷಾರಸದ ಪಾತ್ರೆಯನ್ನು ಕೊಡು ವಂತೆ ದೇವರ ಮುಂದೆ ಅದು ಜ್ಞಾಪಕಕ್ಕೆ ಬಂತು.
- Ezekiel 12:22 ಯೆಹೆಜ್ಕೇಲನು 12:22ಮನುಷ್ಯಪುತ್ರನೇ, ದಿನಗಳು ಬಹಳವಾ ಗುತ್ತಿವೆ; ಪ್ರತಿ ದರ್ಶನವು ತಪ್ಪುತ್ತದೆ ಎಂದು ಇಸ್ರಾ ಯೇಲ್ ದೇಶದಲ್ಲಿ ಹೇಳಿಕೊಳ್ಳುವ ಆ ಗಾದೆ ಏನು?
- 1 Kings 17:18 1 ಅರಸುಗಳು 17:18ಆಗ ಅವಳು ಎಲೀಯ ನಿಗೆ--ಓ ದೇವರ ಮನುಷ್ಯನೇ, ನನಗೂ ನಿನಗೂ ಏನು? ನನ್ನ ಅಕ್ರಮವನ್ನು ಜ್ಞಾಪಕಪಡಿಸುವ ದಕ್ಕೂ ನನ್ನ ಮಗನು ಸಾಯುವದಕ್ಕೂ ನನ್ನ ಬಳಿಗೆ ಬಂದಿಯೋ ಅಂದಳು.
- 2 Chronicles 36:13 2 ಪೂರ್ವಕಾಲವೃತ್ತಾಂತ 36:13ಇದಲ್ಲದೆ ಅವನು ದೇವರ ಮೇಲೆ ಆಣೆ ಇಡುವಂತೆ ಮಾಡಿದ ಅರಸನಾದ ನೆಬೂಕದ್ನೆಚ್ಚರನಿಗೆ ತಿರುಗಿ ಬಿದ್ದನು. ಹೇಗಂದರೆ ಅವನು ಇಸ್ರಾಯೇಲಿನ ದೇವರಾದ ಕರ್ತನ ಕಡೆಗೆ ತಿರುಗದೆಯೂ ತನ್ನ ಕುತ್ತಿಗೆ ಯನ್ನು ಬೊಗ್ಗಿಸದೆಯೂ ತನ್ನ ಹೃದಯವನ್ನು ಕಠಿಣ ಮಾಡಿಕೊಂಡನು.