Ezekiel · chapter 21 · verse 26
Ezekiel 21:26 in Kannada
ದೇವರಾದ ಕರ್ತನು ಹೀಗೆ ಹೇಳುತ್ತಾನೆ-- ಮುಂಡಾಸವನ್ನು ಎತ್ತಿಡು, ಕಿರೀಟವನ್ನು ತೆಗೆದುಹಾಕು; ಅದು ಹಾಗೆಯೇ ಇರುವದಿಲ್ಲ; ತಗ್ಗಿಸಲ್ಪಟ್ಟವನನ್ನು ಹೆಚ್ಚಿಸಿ ಹೆಚ್ಚಿಸಲ್ಪಟ್ಟವನನ್ನು ತಗ್ಗಿಸು.
Devaraada kartanu heege heluttaane-- mundaasavannu ettidu, kireetavannu tegeduhaaku; adu haageye iruvadilla; taggisalpattavanannu hechchisi hechchisalpattavanannu taggisu.
Ezekiel 21:26 in English
- King James Version (KJV)
- Thus saith the Lord GOD; Remove the diadem, and take off the crown: this [shall] not [be] the same: exalt [him that is] low, and abase [him that is] high.
- World English Bible (WEB)
- the Lord GOD says: “Remove the turban, and take off the crown. This will not be as it was. Exalt that which is low, and humble that which is high.
- American Standard Version (ASV)
- thus saith the Lord Jehovah: Remove the mitre, and take off the crown; this [shall be] no more the same; exalt that which is low, and abase that which is high.
- Bible in Basic English (BBE)
- This is what the Lord has said: Take away the holy head-dress, take off the crown: this will not be again: let that which is low be lifted up, and that which is high be made low.
- Darby Translation (DBY)
- — thus saith the Lord Jehovah: Remove the mitre and take off the crown; what is shall be no [more]. Exalt that which is low, and abase that which is high.
- Webster's Bible (WBS)
- Thus saith the Lord GOD; Remove the diadem, and take off the crown: this [shall] not [be] the same: exalt [him that is] low, and abase [him that is] high.
- Young's Literal Translation (YLT)
- Thus said the Lord Jehovah: Turn aside the mitre, and bear away the crown, This — not this — the low make high, And the high make low.
Read in context
- 24ಆದದರಿಂದ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಿಮ್ಮ ದ್ರೋಹಗಳು ಪ್ರಕಟವಾಗಿ ನಿಮ್ಮ ಕೆಲಸಗಳಲ್ಲೆಲ್ಲಾ ನಿಮ್ಮ ಪಾಪಗಳು ಕಾಣುವ ಹಾಗೆ ನೀವು ನಿಮ್ಮ ಅಕ್ರಮಗಳನ್ನು ಜ್ಞಾಪಕಕ್ಕೆ ತಂದದ್ದರಿಂದ ನೀವು ಕೈಯಲ್ಲಿ ಹಿಡಿಯಲ್ಪಡುವಿರಿ.
- 25ದುಷ್ಟನಾದ ಭ್ರಷ್ಟ ಇಸ್ರಾಯೇಲನ ಪ್ರಭುವೇ, ನೀನು ಮಾಡಿದ ಅಕ್ರಮಗಳಿಂದ ನಿನಗೆ ಅಂತ್ಯ ದಿವಸವು ಬಂದಿತು.
- 26ದೇವರಾದ ಕರ್ತನು ಹೀಗೆ ಹೇಳುತ್ತಾನೆ-- ಮುಂಡಾಸವನ್ನು ಎತ್ತಿಡು, ಕಿರೀಟವನ್ನು ತೆಗೆದುಹಾಕು; ಅದು ಹಾಗೆಯೇ ಇರುವದಿಲ್ಲ; ತಗ್ಗಿಸಲ್ಪಟ್ಟವನನ್ನು ಹೆಚ್ಚಿಸಿ ಹೆಚ್ಚಿಸಲ್ಪಟ್ಟವನನ್ನು ತಗ್ಗಿಸು.
- 27ನಾನು ತಳ್ಳಿಬಿಡು ವೆನು, ತಳ್ಳಿಬಿಡುವೆನು, ಅದನ್ನು ತಳ್ಳಿಬಿಡುವೆನು; ನ್ಯಾಯ ಯಾರದು? ಅವನು ಬರುವ ವರೆಗೂ ಇದು ಇರುವದಿಲ್ಲ; ನಾನು ಅವನಿಗೆ ಇದನ್ನು ಕೊಟ್ಟು ಬಿಡುತ್ತೇನೆ.
- 28ಮನುಷ್ಯಪುತ್ರನೇ, ನೀನು ಪ್ರವಾದಿಸಿ ಹೇಳ ಬೇಕಾದದ್ದೇನಂದರೆ--ದೇವರಾದ ಕರ್ತನು ಅಮ್ಮೋನಿ ಯರ ವಿಷಯವಾಗಿಯೂ ಅವರ ನಿಂದೆಯ ವಿಷಯವಾಗಿಯೂ ಹೀಗೆ ಹೇಳುತ್ತಾನೆ--ಹೌದು, ನೀನು ಹೀಗೆ ಹೇಳು, ಹಿರಿದ ಕತ್ತಿಯು ಥಳಥಳಿಸುವದ ರಿಂದ ಸಂಹರಿಸುವದಕ್ಕೆ ಹಿಡಿದಿದೆ; ಮಿಂಚುವಂತೆ ಬಹಳವಾಗಿ ಮಸೆದಿದೆ.
Cross references
- Ezekiel 17:24 ಯೆಹೆಜ್ಕೇಲನು 17:24ಕರ್ತ ನಾದ ನಾನು ಎತ್ತರವಾದ ಮರವನ್ನು ತಗ್ಗಿಸಿ, ತಗ್ಗಾ ದದ್ದನ್ನು ಎತ್ತರಪಡಿಸಿ (ಬೆಳಸಿ) ಹಸುರಾಗಿರುವದನ್ನು ಒಣಗಿಸಿ, ಒಣಗಿದ್ದನ್ನು ಚಿಗುರಿಸಿದ್ದೇನೆ ಎಂದು ಅರ ಣ್ಯದ ಸಕಲ ವೃಕ್ಷಗಳು ತಿಳಿಯುವವೆಂದು ಕರ್ತನಾದ ನಾನೇ ಮಾತನಾಡಿ ಅದನ್ನು ಮಾಡಿದ್ದೇನೆ.
- Psalm 75:7 ಕೀರ್ತನೆಗಳು 75:7ಆದರೆ ದೇವರು ನ್ಯಾಯತೀರಿಸುವಾ ತನಾಗಿದ್ದಾನೆ; ಒಬ್ಬನನ್ನು ತಗ್ಗಿಸುತ್ತಾನೆ; ಇನ್ನೊಬ್ಬನನ್ನು ಎತ್ತುತ್ತಾನೆ.
- Jeremiah 52:31–34 ಯೆರೆಮೀಯ 52:31–34ಯೆಹೂದದ ಅರಸನಾದ ಯೆಹೋಯಾಖೀನನ ಸೆರೆಯ ಮೂವತ್ತೇಳನೇ ವರುಷದಲ್ಲಿ, ಹನ್ನೆರಡನೇ ತಿಂಗಳಿನ ಇಪ್ಪತ್ತೈದನೇ ದಿವಸದಲ್ಲಿ ಆದದ್ದೇನಂ ದರೆ--ಬಾಬೆಲಿನ ಅರಸನಾದ ಎವೀಲ್ಮೆರೋದಕನು ತನ್ನ ಆಳಿಕೆಯ ಮೊದಲನೇ ವರುಷದಲ್ಲಿ ಯೆಹೂದದ ಅರಸನಾದ ಯೆಹೋಯಾಖೀನನ ತಲೆಯನ್ನು ಎತ್ತಿ ಅವನನ್ನು ಸೆರೆಮನೆಯೊಳಗಿಂದ ಹೊರಗೆ ತರಿಸಿ ಅವನ ಸಂಗಡ ಕರುಣೆಯಿಂದ ಮಾತನಾಡಿ ಅವನ ಸಿಂಹಾ ಸನವನ್ನು ತನ್ನ ಸಂಗಡ ಬಾಬೆಲಿನಲ್ಲಿದ್ದ ಅರಸರ ಸಿಂಹಾಸನಗಳ ಮೇಲೆ ಇರಿಸಿ ಅವನ ಸೆರೆಮನೆಯ ವಸ್ತ್ರಗಳನ್ನು ಬದಲಾಯಿಸಿದನು. ಆಗ ಅವನು ಬದುಕಿದ ದಿನಗಳೆಲ್ಲಾ ಯಾವಾಗಲೂ ಅವನ ಮುಂದೆ ಊಟಮಾಡುತ್ತಿದ್ದನು.ಅವನ ಆಹಾರದ ವಿಷಯ ವೇನಂದರೆ--ಅವನು ಬದುಕಿದ ದಿನಗಳೆಲ್ಲಾ ಅವನು ಸಾಯುವ ದಿನದವರೆಗೆ ದಿನದಿನಕ್ಕೆ ತಕ್ಕ ಆಹಾರವು ಯಾವಾಗಲೂ ಬಾಬೆಲಿನ ಅರಸನ ಕಡೆಯಿಂದ ಕೊಡಲ್ಪಡುತ್ತಿತ್ತು. ಅವನ ಆಹಾರದ ವಿಷಯ ವೇನಂದರೆ--ಅವನು ಬದುಕಿದ ದಿನಗಳೆಲ್ಲಾ ಅವನು ಸಾಯುವ ದಿನದವರೆಗೆ ದಿನದಿನಕ್ಕೆ ತಕ್ಕ ಆಹಾರವು ಯಾವಾಗಲೂ ಬಾಬೆಲಿನ ಅರಸನ ಕಡೆಯಿಂದ ಕೊಡಲ್ಪಡುತ್ತಿತ್ತು.
- Jeremiah 13:18 ಯೆರೆಮೀಯ 13:18ಅರಸನಿಗೂ ರಾಣಿಗೂ ನೀನು ಹೇಳತಕ್ಕದ್ದೇ ನಂದರೆ--ನೀವು ತಗ್ಗಿಸಿಕೊಂಡು ಕೂತುಕೊಳ್ಳಿರಿ; ನಿಮ್ಮ ದೊರೆತನಗಳು ಅಂದರೆ ನಿಮ್ಮ ಗೌರವದ ಕಿರೀಟವು ಕೆಳಗೆ ಬರುವದು.
- Ezekiel 16:12 ಯೆಹೆಜ್ಕೇಲನು 16:12ನಿನ್ನ ಹಣೆಯ ಮೇಲೆ ರತ್ನಾಭರಣವನ್ನೂ ನಿನ್ನ ಕಿವಿಗಳಲ್ಲಿ ವಾಲೆಗಳನ್ನೂ ನಿನ್ನ ತಲೆಯ ಮೇಲೆ ಶೃಂಗಾರ ಕಿರೀಟವನ್ನೂ ಇಟ್ಟೆನು.
- Luke 1:52 ಲೂಕನು 1:52ಬಲಿಷ್ಠ ರನ್ನು ಅವರ ಸ್ಥಾನಗಳಿಂದ ಕೆಳಗೆ ದೊಬ್ಬಿ ದೀನರನ್ನು ಮೇಲಕ್ಕೆ ಎತ್ತಿದ್ದಾನೆ.
- Jeremiah 52:9–11 ಯೆರೆಮೀಯ 52:9–11ಆಗ ಅವರು ಅರಸನನ್ನು ಹಿಡಿದು, ಬಾಬೆಲಿನ ಅರಸನ ಬಳಿಗೆ ಹಮಾತ್ ದೇಶದಲ್ಲಿರುವ ರಿಬ್ಲಕ್ಕೆ ತಕ್ಕೊಂಡು ಹೋದರು; ಅಲ್ಲಿ ಅವನು ಅವನ ವಿಷಯ ನ್ಯಾಯತೀರ್ಪು ಮಾಡಿದನು. ಬಾಬೇಲಿನ ಅರಸನು ಚಿದ್ಕೀಯನ ಮಕ್ಕಳನ್ನು ಅವನ ಕಣ್ಣುಗಳ ಮುಂದೆ ಕೊಂದು ಹಾಕಿಸಿದನು. ಯೆಹೂದದ ಪ್ರಧಾನರೆಲ್ಲ ರನ್ನೂ ಸಹ ರಿಬ್ಲದಲ್ಲಿ ಕೊಂದು ಹಾಕಿಸಿದನು. ಇದಲ್ಲದೆ ಬಾಬೆಲಿನ ಅಸನು ಚಿದ್ಕೀಯನ ಕಣ್ಣುಗಳನ್ನು ಕಿತ್ತುಹಾಕಿಸಿ, ಅವನನ್ನು ಹಿತ್ತಾಳೆಯ ಸಂಕೋಲೆಗಳಿಂದ ಕಟ್ಟಿಸಿ, ಬಾಬೆಲಿಗೆ ಒಯ್ದು ಅವನು ಸಾಯುವ ದಿನದ ವರೆಗೆ ಸೆರೆಮನೆಯಲ್ಲಿ ಇಟ್ಟನು.
- Ezekiel 12:12–13 ಯೆಹೆಜ್ಕೇಲನು 12:12–13ಅವರ ಮಧ್ಯದಲ್ಲಿರುವ ಪ್ರಭುವು ಹೆಗಲ ಮೇಲೆ ಹೊರೆಯನ್ನು ಹೊತ್ತು ಕೊಂಡು ಕತ್ತಲಲ್ಲಿ ಹೊರಟು ಹೋಗುವನು; ಅವರು ಗೋಡೆಯನ್ನು ಕೊರೆದು ಆ ಕಿಂಡಿಯ ಮೂಲಕ ತಮ್ಮ ಸಾಮಗ್ರಿಗಳನ್ನು ಹೊರಗೆ ಸಾಗಿಸುವರು. ಅವನು ತನ್ನ ಕಣ್ಣುಗಳಿಂದ ನೆಲವನ್ನು ನೋಡದ ಹಾಗೆ ಮುಖ ವನ್ನು ಮುಚ್ಚಿಕೊಳ್ಳುವನು. ನನ್ನ ಬಲೆಯನ್ನು ಸಹ ನಾನು ಅವನ ಮೇಲೆ ಹರಡುವೆನು. ಅವನು ನನ್ನ ಉರ್ಲಿನಲ್ಲಿ ಸಿಕ್ಕಿಬೀಳುವನು. ನಾನು ಅವನನ್ನು ಕಸ್ದೀಯ ದೇಶದ ಬಾಬೆಲಿಗೆ ಒಯ್ಯುವೆನು. ಆದರೆ ಅವನು ಅದನ್ನು ನೋಡದೆ ಅಲ್ಲಿಯೇ ಸಾಯುವನು.
- Psalm 113:7–8 ಕೀರ್ತನೆಗಳು 113:7–8ಅಧಿಪತಿಗಳ ಸಂಗಡವೂ ತನ್ನ ಜನರ ಅಧಿಪತಿಗಳ ಸಂಗಡವೂ ಕುಳ್ಳಿರಿಸುವದಕ್ಕೆ, ಧೂಳಿನೊಳಗಿಂದ ದರಿದ್ರನನ್ನು ಏಳಮಾಡಿ ತಿಪ್ಪೆಯೊಳಗಿಂದ ಬಡವನನ್ನು ಎತ್ತುತ್ತಾನೆ.ಬಂಜೆಯಾದವಳನ್ನು ಮಕ್ಕಳ ಸಂತೋಷ ವುಳ್ಳ ತಾಯಿಯಾಗಿ ಮನೆಯಲ್ಲಿ ನಿವಾಸಿಸುವಂತೆ ಮಾಡುತ್ತಾನೆ ಕರ್ತನನ್ನು ಸ್ತುತಿಸಿರಿ.
- 1 Samuel 2:7–8 1 ಸಮುವೇಲನು 2:7–8ಕರ್ತನು ಬಡತನವನ್ನು ಐಶ್ವರ್ಯ ವನ್ನು ಕೊಡುವಾತನೂ ತಗ್ಗಿಸುವಾತನೂ ಉನ್ನತಮಾಡು ವಾತನೂ ಆಗಿದ್ದಾನೆ. ದರಿದ್ರನನ್ನು ಭೂಮಿಯ ಧೂಳಿನಿಂದ ಎತ್ತುವಾ ತನೂ ಭಿಕ್ಷುಕನನ್ನು ತಿಪ್ಪೆಗುಂಡಿಯಿಂದ ತೆಗೆದು ಉನ್ನತ ಮಾಡುವಾತನೂ ಆಗಿದ್ದಾನೆ. ಅವರನ್ನು ಪ್ರಧಾ ನರ ಮಧ್ಯದಲ್ಲಿ ಕೂಡ್ರಿಸುತ್ತಾನೆ; ಘನತೆಯ ಸಿಂಹಾ ಸನವನ್ನು ಬಾಧ್ಯವಾಗಿ ಕೊಡುತ್ತಾನೆ. ಯಾಕಂದರೆ ಭೂಮಿಯ ಆಧಾರಸ್ತಂಭಗಳು ಕರ್ತನದಾಗಿವೆ, ಭೂಲೋಕವನ್ನು ಅವುಗಳ ಮೇಲೆ ಇಟ್ಟಿದ್ದಾನೆ.
- Jeremiah 39:6–7 ಯೆರೆಮೀಯ 39:6–7ಬಾಬೆಲಿನ ಅರಸನು ಚಿದ್ಕೀಯನ ಕುಮಾರರನ್ನು ರಿಬ್ಲದಲ್ಲಿ ಅವನ ಕಣ್ಣುಗಳ ಮುಂದೆ ಕೊಂದುಹಾಕಿದನು; ಯೆಹೂದದ ಘನವುಳ್ಳವರೆಲ್ಲ ರನ್ನು ಸಹ ಬಾಬೆಲಿನ ಅರಸನು ಕೊಂದುಹಾಕಿದನು. ಇದಲ್ಲದೆ ಚಿದ್ಕೀಯನ ಕಣ್ಣುಗಳನ್ನು ಅವನು ಕಿತ್ತುಹಾಕಿ ಬಾಬೆಲಿಗೆ ತಕ್ಕೊಂಡು ಹೋಗಬೇಕೆಂದು ಅವನನ್ನು ಸರಪಣಿಗಳಿಂದ ಕಟ್ಟಿಸಿದನು.
- Lamentations 5:16 ಪ್ರಲಾಪಗಳು 5:16ಕಿರೀಟವು ನಮ್ಮ ತಲೆಯ ಮೇಲಿಂದ ಬಿದ್ದು ಹೋಯಿತು; ನಮಗೆ ಅಯ್ಯೋ, ನಾವು ಪಾಪಮಾಡಿದ್ದೇವೆ.