Ezekiel · chapter 21 · verse 5
Ezekiel 21:5 in Kannada
ಆಗ ಕರ್ತನಾದ ನಾನೇ ನನ್ನ ಕತ್ತಿಯನ್ನು ಹೊರಗೆ ತೆಗೆದೆನೆಂದು ಮನುಷ್ಯ ರೆಲ್ಲರಿಗೂ ತಿಳಿಯುವದು; ಅದು ಮತ್ತೆ ತಿರುಗಿ ಬರು ವದೇ ಇಲ್ಲ.
Aaga kartanaada naane nanna kattiyannu horage tegedenendu manushya rellarigoo tiliyuvadu; adu matte tirugi baru vade illa.
Ezekiel 21:5 in English
- King James Version (KJV)
- That all flesh may know that I the LORD have drawn forth my sword out of his sheath: it shall not return any more.
- World English Bible (WEB)
- All flesh will know that I, the LORD, have drawn my sword out of its sheath. It will not return any more.”’
- American Standard Version (ASV)
- and all flesh shall know that I, Jehovah, have drawn forth my sword out of its sheath; it shall not return any more.
- Bible in Basic English (BBE)
- And all flesh will see that I the Lord have taken my sword out of its cover: and it will never go back.
- Darby Translation (DBY)
- and all flesh shall know that I Jehovah have drawn forth my sword out of its sheath: it shall not return any more.
- Webster's Bible (WBS)
- That all flesh may know that I the LORD have drawn my sword out of its sheath: it shall not return any more.
- Young's Literal Translation (YLT)
- And known have all flesh that I, Jehovah, Have brought out My sword from its scabbard, It doth not turn back any more.
Read in context
- 3ಇಸ್ರಾ ಯೇಲ್ ದೇಶಕ್ಕೆ ಹೇಳಬೇಕಾದದ್ದೇನಂದರೆ--ಕರ್ತನು ಹೀಗೆ ಹೇಳುತ್ತಾನೆ; ಇಗೋ, ನಾನು ನಿಮಗೆ ವಿರೋಧವಾಗಿದ್ದೇನೆ ಮತ್ತು ನನ್ನ ಕತ್ತಿಯನ್ನು ಅದರ ಒರೆಯಿಂದ ಹೊರಗೆ ತೆಗೆದು ನಿನ್ನೊಳಗಿರುವ ನೀತಿ ವಂತನನ್ನೂ ದುಷ್ಟನನ್ನೂ ಕಡಿದುಬಿಡುವೆನು.
- 4ನಾನು ನೀತಿವಂತನನ್ನೂ ದುಷ್ಟನನ್ನೂ ಕಡಿದು ಬಿಡುವದರಿಂದ ನನ್ನ ಕತ್ತಿಯು ದಕ್ಷಿಣದಿಂದ ಮೊದಲುಗೊಂಡು ಉತ್ತ ರದ ಮನುಷ್ಯರೆಲ್ಲರಿಗೆ ವಿರೋಧವಾಗಿ ಅದರ ಒರೆ ಯನ್ನು ಬಿಟ್ಟು ಹೋಗುವದು.
- 5ಆಗ ಕರ್ತನಾದ ನಾನೇ ನನ್ನ ಕತ್ತಿಯನ್ನು ಹೊರಗೆ ತೆಗೆದೆನೆಂದು ಮನುಷ್ಯ ರೆಲ್ಲರಿಗೂ ತಿಳಿಯುವದು; ಅದು ಮತ್ತೆ ತಿರುಗಿ ಬರು ವದೇ ಇಲ್ಲ.
- 6ಆದದರಿಂದ ಮನುಷ್ಯಪುತ್ರನೇ, ನಿನ್ನ ನಡು ಮುರಿದಂತೆ ನಿಟ್ಟುಸಿರಿಡು, ಕಹಿಯಾದ ಮನಸ್ಸಿ ನಿಂದ ಅವರ ಕಣ್ಣುಗಳ ಮುಂದೆಯೇ ನಿಟ್ಟುಸಿರಿಡು.
- 7ನೀನು ಯಾಕೆ ನಿಟ್ಟುಸಿರಿಡುತ್ತೀ ಎಂದು ಅವರು ನಿನಗೆ ಕೇಳಿದಾಗ ನೀನು ಹೇಳಬೇಕಾದದ್ದೇನಂದರೆ -- ಆ ಸುದ್ದಿಯ ನಿಮಿತ್ತವೇ ಅದು ಬರುವದು; ಯಾಕಂದರೆ ಆಗ ಹೃದಯಗಳೆಲ್ಲಾ ಕರಗುವವು; ಕೈಗಳೆಲ್ಲಾ ನಿತ್ರಾಣ ವಾಗುವವು, ಪ್ರತಿಯೊಂದು ಆತ್ಮವು ಕುಂದಿ ಹೋಗು ವದು, ಮತ್ತು ಎಲ್ಲಾ ಮೊಣಕಾಲುಗಳು ನೀರಿನ ಹಾಗೆ ನಿತ್ರಾಣಗೊಳ್ಳುವವು; ಇಗೋ, ಅದು ಬರುತ್ತದೆ, ತರಲ್ಪಡುತ್ತದೆ ಎಂದು ದೇವರಾದ ಕರ್ತನು ಹೇಳುತ್ತಾನೆ.
Cross references
- Ezekiel 21:30 ಯೆಹೆಜ್ಕೇಲನು 21:30ಅದನ್ನು ನಾನು ಮತ್ತೆ ಒರೆಗೆ ಸೇರಿಸುವೆನೋ? ನೀನು ನಿರ್ಮಿಸಲ್ಪಟ್ಟ ಸ್ಥಳದಲ್ಲಿಯೇ ನೀನು ಹುಟ್ಟಿದ ಸ್ಥಳದಲ್ಲಿಯೇ ನಿನಗೆ ನ್ಯಾಯತೀರಿಸುವೆನು.
- Nahum 1:9 ನಹೂಮ 1:9ಕರ್ತನಿಗೆ ವಿರೋಧವಾಗಿ ಏನು ಯೋಚಿಸುತ್ತೀರಿ? ಆತನು ಸಂಪೂರ್ಣವಾಗಿ ಮುಗಿಸಿಬಿಡುತ್ತಾನೆ; ಇಕ್ಕಟ್ಟು ಎರ ಡನೇ ಸಾರಿ ಏಳದು.
- Jeremiah 23:20 ಯೆರೆಮೀಯ 23:20ಆತನು ತನ್ನ ಹೃದಯದ ಅಲೋ ಚನೆಗಳನ್ನು ನಡೆಸಿ ತೀರಿಸುವ ವರೆಗೂ ಕರ್ತನ ಕೋಪವು ತಿರುಗುವದಿಲ್ಲ; ಅಂತ್ಯದಿನಗಳಲ್ಲಿ ಅದನ್ನು ಸಂಪೂರ್ಣವಾಗಿ ಯೋಚನೆ ಮಾಡುವಿರಿ.
- Ezekiel 20:48 ಯೆಹೆಜ್ಕೇಲನು 20:48ಕರ್ತನಾದ ನಾನೇ ಅದನ್ನು ಹಚ್ಚಿದೆನೆಂದು ಶರೀರ ದಲ್ಲಿರುವವರೆಲ್ಲರೂ ತಿಳಿದುಕೊಳ್ಳುವರು! ಅದು ಆರಿ ಹೋಗುವ ದಿಲ್ಲ.ಆಗ ನಾನು ಹೇಳಿದ್ದೇನಂದರೆ --ಹಾ, ದೇವರಾದ ಕರ್ತನೇ, ಅವನು ಸಾಮ್ಯಗಳನ್ನು ಹೇಳುವದಿಲ್ಲವೇ ಎಂದು ನನ್ನ ವಿಷಯವಾಗಿ ಹೇಳುತ್ತಾರೆ.
- 1 Samuel 3:12 1 ಸಮುವೇಲನು 3:12ನಾನು ಏಲಿಯ ಮನೆಯನ್ನು ಕುರಿತು ಹೇಳಿದ್ದನ್ನೆಲ್ಲಾ ಅವರಿಗೆ ಆ ದಿವಸದಲ್ಲಿ ಮಾಡುತ್ತೇನೆ; ನಾನು ಆರಂಭಿಸಿದ ಹಾಗೆ ಅಂತ್ಯ ವನ್ನು ಮಾಡುವೆನು.
- Isaiah 45:23 ಯೆಶಾಯ 45:23ನನ್ನಷ್ಟಕ್ಕೆ ನಾನೇ ಆಣೆಯನ್ನು ಇಟ್ಟಿದ್ದೇನೆ, ನೀತಿಯುಳ್ಳ ವಾಕ್ಯವು ನನ್ನ ಬಾಯಿಂದ ಹೊರಟಿದೆ, ಅದು ಹಿಂದಿರುಗದು: ಎಲ್ಲರೂ ನನಗೆ ಅಡ್ಡಬೀಳುವರು, ಪ್ರತಿ ನಾಲಿಗೆಯು ಪ್ರತಿಜ್ಞೆ ಮಾಡು ವದು.
- Deuteronomy 29:24–28 ಧರ್ಮೋಪದೇಶಕಾಂಡ 29:24–28ಯಾಕೆ ಕರ್ತನು ಈ ದೇಶಕ್ಕೆ ಹೀಗೆ ಮಾಡಿದ್ದಾನೆ. ಈ ದೊಡ್ಡ ಕೊಪಾಗ್ನಿ ಏನು ಎಂದು ಜನಾಂಗಗಳೆಲ್ಲಾ ಕೇಳುವರು. ಆಗ ಜನರು--ಅವರು ತಮ್ಮನ್ನು ಐಗುಪ್ತ ದೇಶದೊಳಗಿಂದ ಹೊರಗೆ ತರುವಾಗ ತಮ್ಮ ಪಿತೃಗಳ ದೇವರಾದ ಕರ್ತನು ತಮ್ಮ ಸಂಗಡ ಮಾಡಿದ ಒಡಂಬಡಿಕೆಯನ್ನು ಮರೆತುಬಿಟ್ಟು, ಹೋಗಿ ಬೇರೆ ದೇವರುಗಳನ್ನೂ ತಮಗೆ ತಿಳಿಯದಂಥ, ಆತನು ತಮಗೆ ನೇಮಿಸದಂಥ ದೇವರುಗಳನ್ನೂ ಸೇವಿಸಿ ಅಡ್ಡಬಿದ್ದ ದರಿಂದ ಕರ್ತನ ಕೋಪವು ಈ ದೇಶದ ಮೇಲೆ ಈ ಪುಸ್ತಕದಲ್ಲಿ ಬರೆದಿರುವ ಶಾಪವನ್ನೆಲ್ಲಾ ಅವರ ಮೇಲೆ ತರುವ ಹಾಗೆ ಉರಿಯಿತು. ಕರ್ತನು ಅವ ರನ್ನು ಕೋಪದಲ್ಲಿಯೂ ಸಿಟ್ಟಿನಲ್ಲಿಯೂ ಮಹಾರೌದ್ರ ದಲ್ಲಿಯೂ ದೇಶದಲ್ಲಿಂದ ಕಿತ್ತುಹಾಕಿ ಇಂದು ಇರುವ ಪ್ರಕಾರ ಬೇರೆ ದೇಶಕ್ಕೆ ಕಳುಹಿಸಿದ್ದಾನೆ.ರಹಸ್ಯಗಳು ನಮ್ಮ ದೇವರಾದ ಕರ್ತನಿಗೆ ಸೇರಿದ್ದು; ಆದರೆ ಪ್ರಕಟವಾದ ಈ ನ್ಯಾಯಪ್ರಮಾಣದ ಮಾತು ಗಳನ್ನೆಲ್ಲಾ ನಾವು ಮಾಡುವಹಾಗೆ ನಮಗೂ ನಮ್ಮ ಮಕ್ಕಳಿಗೂ ನಿತ್ಯವಾಗಿ ಇರುತ್ತವೆ.
- Isaiah 55:11 ಯೆಶಾಯ 55:11ನನ್ನ ಬಾಯಿಂದ ಹೊರಡುವ ನನ್ನ ವಾಕ್ಯವು ಹಾಗೆಯೂ ಇರುವದು; ಅದು ಸುಮ್ಮನೆ ನನ್ನ ಬಳಿಗೆ ಹಿಂತಿರುಗದೆ ನಾನು ಯಾವದನ್ನು ಮೆಚ್ಚು ತ್ತೇನೋ ಅದನ್ನು ಅದು ಮಾಡುವದು; ನಾನು ಅದನ್ನು ಯಾವದರ ನಿಮಿತ್ತ ಕಳುಹಿಸಿದೆನೋ ಅದರಲ್ಲಿ ಅದು ಸಫಲವಾಗುವದು.
- 1 Kings 9:7–9 1 ಅರಸುಗಳು 9:7–9ಅನ್ಯ ದೇವರುಗಳನ್ನು ಸೇವಿಸಿ ಅವುಗಳಿಗೆ ಅಡ್ಡಬಿದ್ದರೆ ನಾನು ಆಗ ಇಸ್ರಾಯೇಲಿಗೆ ಕೊಟ್ಟ ಭೂಮಿಯಲ್ಲಿಂದ ಅವ ರನ್ನು ಕಡಿದುಬಿಟ್ಟು ನನ್ನ ಹೆಸರಿಗೋಸ್ಕರ ಪರಿಶುದ್ಧ ಮಾಡಿದ ಈ ಮಂದಿರವನ್ನು ನನ್ನ ಎದುರಿನಿಂದ ತೆಗೆದು ಬಿಡುವೆನು. ಇಸ್ರಾಯೇಲು ಸಮಸ್ತ ಜನಗಳಲ್ಲಿ ಗಾದೆ ಯಾಗಿಯೂ ಅಪಹಾಸ್ಯವಾಗಿಯೂ ಇರುವದು. ಇದ ಲ್ಲದೆ ಈ ಎತ್ತರವಾಗಿರುವ ಮನೆಯನ್ನು ಹಾದುಹೋಗು ವವರೆಲ್ಲರೂ ಅದಕ್ಕೆ ಆಶ್ಚರ್ಯಪಟ್ಟು--ಛೀ ಅಂದುಕರ್ತನು ಈ ದೇಶಕ್ಕೂ ಈ ಮಂದಿರಕ್ಕೂ ಹೀಗೆ ಯಾಕೆ ಮಾಡಿದನು ಎಂದು ಅನ್ನುವರು. ಅವರು ಪ್ರತ್ಯುತ್ತರವಾಗಿ--ತಮ್ಮ ತಂದೆಗಳನ್ನು ಐಗುಪ್ತದೇಶ ದೊಳಗಿಂದ ಬರಮಾಡಿದ ತಮ್ಮ ದೇವರಾದ ಕರ್ತ ನನ್ನು ಬಿಟ್ಟು ಅನ್ಯದೇವರುಗಳನ್ನು ಹೊಂದಿಕೊಂಡು ಅವುಗಳಿಗೆ ಅಡ್ಬಬಿದ್ದು ಸೇವಿಸಿದ್ದರಿಂದ ಕರ್ತನು ಈ ಕೇಡನ್ನೆಲ್ಲಾ ನಮ್ಮ ಮೇಲೆ ಬರಮಾಡಿದನೆಂದು ಹೇಳು ವರು ಅಂದನು.
- Numbers 14:21–23 ಅರಣ್ಯಕಾಂಡ 14:21–23ಆದಾಗ್ಯೂ ನನ್ನ ಜೀವದಾಣೆ, ಭೂಮಿಯೆಲ್ಲಾ ಕರ್ತನ ಮಹಿಮೆಯಿಂದ ತುಂಬಿರುವದು. ಐಗುಪ್ತ ದೇಶದಲ್ಲಿಯೂ ಅರಣ್ಯದಲ್ಲಿಯೂ ನಾನು ನಡಿಸಿದ ಸೂಚಕಕಾರ್ಯಗಳನ್ನೂ ನನ್ನ ಮಹಿಮೆಯನ್ನೂ ನೋಡಿದ ಈ ಸಕಲ ಮನುಷ್ಯರು ನನ್ನನ್ನು ಈಗ ಹತ್ತು ಸಾರಿ ಶೊಧಿಸಿ ಕೇಳದೆ ಹೋದದ್ದರಿಂದ ನಾನು ಅವರ ಪಿತೃಗಳಿಗೆ ಪ್ರಮಾಣಮಾಡಿದ ದೇಶವನ್ನು ನಿಶ್ಚಯವಾಗಿ ಅವರು ನೋಡುವದಿಲ್ಲ; ಇಲ್ಲವೆ ನನಗೆ ಕೋಪವನ್ನು ಎಬ್ಬಿಸಿದವರು ಸಹ ಅದನ್ನು ನೋಡು ವದಿಲ್ಲ.