Ezekiel · chapter 21 · verse 6
Ezekiel 21:6 in Kannada
ಆದದರಿಂದ ಮನುಷ್ಯಪುತ್ರನೇ, ನಿನ್ನ ನಡು ಮುರಿದಂತೆ ನಿಟ್ಟುಸಿರಿಡು, ಕಹಿಯಾದ ಮನಸ್ಸಿ ನಿಂದ ಅವರ ಕಣ್ಣುಗಳ ಮುಂದೆಯೇ ನಿಟ್ಟುಸಿರಿಡು.
Aadadarinda manushyaputrane, ninna nadu muridante nittusiridu, kahiyaada manassi ninda avara kannugala mundeye nittusiridu.
Ezekiel 21:6 in English
- King James Version (KJV)
- Sigh therefore, thou son of man, with the breaking of [thy] loins; and with bitterness sigh before their eyes.
- World English Bible (WEB)
- “Therefore sigh, you son of man. You shall sigh before their eyes with a broken heart and with bitterness.
- American Standard Version (ASV)
- Sigh therefore, thou son of man; with the breaking of thy loins and with bitterness shalt thou sigh before their eyes.
- Bible in Basic English (BBE)
- Make sounds of grief, son of man; with body bent and a bitter heart make sounds of grief before their eyes.
- Darby Translation (DBY)
- Sigh then, thou son of man; with breaking of the loins, and with bitterness sigh before their eyes.
- Webster's Bible (WBS)
- Sigh therefore, thou son of man, with the breaking of [thy] loins; and with bitterness sigh before their eyes.
- Young's Literal Translation (YLT)
- And thou, son of man, sigh with breaking of loins, yea, with bitterness thou dost sigh before their eyes,
Read in context
- 4ನಾನು ನೀತಿವಂತನನ್ನೂ ದುಷ್ಟನನ್ನೂ ಕಡಿದು ಬಿಡುವದರಿಂದ ನನ್ನ ಕತ್ತಿಯು ದಕ್ಷಿಣದಿಂದ ಮೊದಲುಗೊಂಡು ಉತ್ತ ರದ ಮನುಷ್ಯರೆಲ್ಲರಿಗೆ ವಿರೋಧವಾಗಿ ಅದರ ಒರೆ ಯನ್ನು ಬಿಟ್ಟು ಹೋಗುವದು.
- 5ಆಗ ಕರ್ತನಾದ ನಾನೇ ನನ್ನ ಕತ್ತಿಯನ್ನು ಹೊರಗೆ ತೆಗೆದೆನೆಂದು ಮನುಷ್ಯ ರೆಲ್ಲರಿಗೂ ತಿಳಿಯುವದು; ಅದು ಮತ್ತೆ ತಿರುಗಿ ಬರು ವದೇ ಇಲ್ಲ.
- 6ಆದದರಿಂದ ಮನುಷ್ಯಪುತ್ರನೇ, ನಿನ್ನ ನಡು ಮುರಿದಂತೆ ನಿಟ್ಟುಸಿರಿಡು, ಕಹಿಯಾದ ಮನಸ್ಸಿ ನಿಂದ ಅವರ ಕಣ್ಣುಗಳ ಮುಂದೆಯೇ ನಿಟ್ಟುಸಿರಿಡು.
- 7ನೀನು ಯಾಕೆ ನಿಟ್ಟುಸಿರಿಡುತ್ತೀ ಎಂದು ಅವರು ನಿನಗೆ ಕೇಳಿದಾಗ ನೀನು ಹೇಳಬೇಕಾದದ್ದೇನಂದರೆ -- ಆ ಸುದ್ದಿಯ ನಿಮಿತ್ತವೇ ಅದು ಬರುವದು; ಯಾಕಂದರೆ ಆಗ ಹೃದಯಗಳೆಲ್ಲಾ ಕರಗುವವು; ಕೈಗಳೆಲ್ಲಾ ನಿತ್ರಾಣ ವಾಗುವವು, ಪ್ರತಿಯೊಂದು ಆತ್ಮವು ಕುಂದಿ ಹೋಗು ವದು, ಮತ್ತು ಎಲ್ಲಾ ಮೊಣಕಾಲುಗಳು ನೀರಿನ ಹಾಗೆ ನಿತ್ರಾಣಗೊಳ್ಳುವವು; ಇಗೋ, ಅದು ಬರುತ್ತದೆ, ತರಲ್ಪಡುತ್ತದೆ ಎಂದು ದೇವರಾದ ಕರ್ತನು ಹೇಳುತ್ತಾನೆ.
- 8ಇದಲ್ಲದೆ ಮತ್ತೆ ಕರ್ತನ ವಾಕ್ಯವು ಬಂದು ನನಗೆ ಹೇಳಿದ್ದೇನಂದರೆ--
Cross references
- Ezekiel 6:11 ಯೆಹೆಜ್ಕೇಲನು 6:11ದೇವರಾದ ಕರ್ತನು ಹೇಳುವದೇನಂದರೆ; ನಿನ್ನ ಕೈಯಿಂದ ಬಡಿದು ನಿನ್ನ ಪಾದದಿಂದ ತುಳಿದು ಹೇಳ ಬೇಕಾದದ್ದೇನಂದರೆ--ಮನೆಯವರ ಸಮಸ್ತ ಕೆಟ್ಟ ಅಸಹ್ಯಗಳೇ ಅಯ್ಯೋ, ಅವರು ಕತ್ತಿಯಿಂದಲೂ ಬರ ದಿಂದಲೂ ಮತ್ತು ವ್ಯಾಧಿಗಳಿಂದಲೂ ಬೀಳುವರು.
- Isaiah 22:4 ಯೆಶಾಯ 22:4ಹೀಗಿರಲು ನನ್ನ ಕಡೆ ಯಿಂದ ದೃಷ್ಟಿ ತಿರುಗಿಸಿರಿ. ಬಹುಸಂಕಟದಿಂದ ನಾನು ಅಳುವೆನು. ನನ್ನ ಜನವೆಂಬ ಯುವತಿಯು ಹಾಳಾದ ವಿಷಯದಲ್ಲಿ ನನ್ನನ್ನು ಸಂತೈಸುವದಕ್ಕೆ ತವಕಗೊಳ್ಳದಿರಿ ಅಂದೆನು.
- Daniel 8:27 ದಾನಿಯೇಲನು 8:27ದಾನಿಯೇಲನಾದ ನಾನು ಮೂರ್ಛೆ ಹೋಗಿ ಕೆಲವು ದಿನಗಳ ವರೆಗೂ ಅಸ್ವಸ್ಥನಾದೆನು; ಅನಂತರ ನಾನು ಎದ್ದು ಅರಸನ ಕೆಲಸ ಕಾರ್ಯಗಳನ್ನು ಮಾಡಿದೆನು; ನಾನು ಆ ದರ್ಶನದ ವಿಷಯ ಆಶ್ಚರ್ಯ ಪಟ್ಟೆನು, ಆದರೆ ಅದನ್ನು ಅರ್ಥಮಾಡಿಕೊಂಡವರು ಯಾರೂ ಇಲ್ಲ.
- Ezekiel 21:12 ಯೆಹೆಜ್ಕೇಲನು 21:12ಮನುಷ್ಯಪುತ್ರನೇ, ಕೂಗು ಮತ್ತು ಗೋಳಾಡು; ಇದು ನನ್ನ ಜನರ ಮೇಲೆಯೂ ಇಸ್ರಾಯೇಲಿನ ಎಲ್ಲಾ ಅಧಿಪತಿಗಳ ಮೇಲೆಯೂ ಇರುವದು; ಕತ್ತಿಯ ಮುಖಾಂತರ ಅಂಜಿಕೆಯು ನನ್ನ ಜನರ ಮೇಲೆ ಬರುವದು. ಆದದರಿಂದ ತೊಡೆಯನ್ನು ಬಡಿದುಕೋ.
- Nahum 2:10 ನಹೂಮ 2:10ಅದು ಬರಿದಾಗಿಯೂ, ಬೈಲಾಗಿಯೂ, ಹಾಳಾ ಗಿಯೂ ಇತ್ತು; ಹೃದಯ ಕರಗುತ್ತದೆ; ಮೊಣಕಾಲುಗಳು ಒಟ್ಟಾಗಿ ಬಡಿದುಕೊಳ್ಳುತ್ತವೆ. ಎಲ್ಲಾ ನಡುವುಗಳಲ್ಲಿ ಹೆಚ್ಚು ಸಂಕಟ ಉಂಟು; ಎಲ್ಲಾ ಮುಖಗಳು ಕಳೆ ಗುಂದುತ್ತವೆ.
- Isaiah 16:11 ಯೆಶಾಯ 16:11ಆದದರಿಂದ ಮೋವಾಬಿನ ನಿಮಿತ್ತ ನನ್ನ ಕರುಳುಗಳು ಮತ್ತು ಕೀರ್ ಹರೇಷೆಥಿನ ನಿಮಿತ್ತ ನನ್ನ ಅಂತರಿಂದ್ರಿಯಗಳು ಕಿನ್ನರಿಯಂತೆ ಸ್ವರಗೈಯುವವು.
- Jeremiah 4:19 ಯೆರೆಮೀಯ 4:19ನನ್ನ ಕರುಳುಗಳು, ನನ್ನ ಕರುಳುಗಳು! ನನ್ನ ಹೃದಯದಲ್ಲಿಯೇ ನೊಂದುಕೊಂಡಿದ್ದೇನೆ; ನನ್ನ ಹೃದ ಯವು ನನ್ನಲ್ಲಿ ಕೂಗುತ್ತದೆ, ಮೌನವಾಗಿರಲಾರೆನು; ಓ ನನ್ನ ಪ್ರಾಣವೇ, ತುತೂರಿಯ ಶಬ್ದವನ್ನೂ ಯುದ್ಧದ ಆರ್ಭಟವನ್ನೂ ನೀನು ಕೇಳಿದ್ದೀ.
- Habakkuk 3:16 ಹಬಕ್ಕೂಕ 3:16ನಾನು ಕೇಳಿದಾಗ ನನ್ನ ಹೊಟ್ಟೆಯು ತಳಮಳಗೊಂಡಿತು, ಆ ಶಬ್ದಕ್ಕೆ ನನ್ನ ತುಟಿಗಳು ಅದರಿದವು; ಇಕ್ಕಟ್ಟಿನ ದಿನದಲ್ಲಿ ನಾನು ವಿಶ್ರಾಂತಿಯನ್ನು ಹೊಂದುವ ಹಾಗೆ ಕೊಳೆಯುವಿಕೆಯು ನನ್ನ ಎಲುಬುಗಳಲ್ಲಿ ಸೇರಿತು, ನಾನು ನಿಂತ ಹಾಗೆಯೇ ನಡುಗಿದೆನು; ಆತನು ಜನರ ಬಳಿಗೆ ಬರುವಾಗ ತನ್ನ ಸೈನ್ಯಗಳ ಕೂಡ ಅವರ ಮೇಲೆ ದಾಳಿ ಮಾಡುವನು.
- Isaiah 21:3 ಯೆಶಾಯ 21:3ಆದ ದರಿಂದ ನನ್ನ ಸೊಂಟಗಳು ನೋವಿನಿಂದ ತುಂಬಿವೆ. ಹೆರುವವಳ ವೇದನೆಗಳಂತಿರುವ ವೇದನೆಗಳು ನನ್ನನ್ನು ಹಿಡಿದಿವೆ; ಕೇಳಕೂಡದ ಹಾಗೆ ಸಂಕಟಪಡುತ್ತೇನೆ, ನೋಡಕೂಡದ ಹಾಗೆ ಭ್ರಾಂತನಾಗಿದ್ದೇನೆ.
- Ezekiel 37:20 ಯೆಹೆಜ್ಕೇಲನು 37:20ನೀನು ಬರೆದ ಆ ಕೋಲುಗಳನ್ನು ಅವರ ಕಣ್ಣುಗಳ ಮುಂದೆ ನಿನ್ನ ಕೈಯಲ್ಲಿರುವವು.
- Ezekiel 12:3–5 ಯೆಹೆಜ್ಕೇಲನು 12:3–5ಮನುಷ್ಯ ಪುತ್ರನೇ, ನೀನು ತೆಗೆದುಹಾಕು ವದಕ್ಕೆ ಸಾಮಾನುಗಳನ್ನು ಸಿದ್ಧಮಾಡಿ ಹಗಲಿನಲ್ಲಿ ಅವರ ದೃಷ್ಟಿಯಿಂದ ತೊಲಗಿ ಹೋಗು; ಹೌದು, ಅವರ ಕಣ್ಣುಗಳ ಮುಂದೆಯೇ ನಿನ್ನ ಸ್ಥಳವನ್ನು ಬಿಟ್ಟು ಬೇರೊಂದು ಸ್ಥಳಕ್ಕೆ ಹೋಗು; ಅವರು ತಿರುಗಿ ಬೀಳುವ ಮನೆತನದವರಾದಾಗ್ಯೂ ಒಂದು ವೇಳೆ ಮನಸ್ಸು ಮಾಡಿಯಾರು. ನಿನ್ನ ಸಾಮಾಗ್ರಿಗಳನ್ನು ತೆಗೆದುಹಾಕು ವದಕ್ಕಾಗುವಂತ ಸಾಮಾಗ್ರಿಗಳನ್ನು ಹಗಲಿನಲ್ಲಿ ಅವರ ಕಣ್ಣುಗಳ ಮುಂದೆ ಹೊರಗೆ ತರಬೇಕು; ಸಂಜೆಯಲ್ಲಿ ಸೆರೆಗೆ ಹೋಗುವವರ ಹಾಗೆ ನೀನು ಅವರ ಕಣ್ಣುಗಳ ಮುಂದೆಹೋಗಬೇಕು. ಅವರ ಕಣ್ಣುಗಳ ಮುಂದೆಯೇ ನೀನು ಗೋಡೆಯನ್ನು ಕೊರೆದು ಅಲ್ಲಿಂದ ಹೊತ್ತು ಕೊಂಡು ಹೊರಗೆ ಹೊರಟುಹೋಗು.
- John 11:33–35 ಯೋಹಾನನು 11:33–35ಆಕೆಯು ಅಳುವದನ್ನು ಮತ್ತು ಆಕೆಯೊಂದಿಗೆ ಬಂದ ಯೆಹೂದ್ಯರು ಸಹ ಅಳುವದನ್ನು ಯೇಸು ನೋಡಿದಾಗ ಆತ್ಮದಲ್ಲಿ ಕಳವಳಪಟ್ಟು ಮೂಲ್ಗುತ್ತಾ-- ಅವನನ್ನು ಎಲ್ಲಿ ಇಟ್ಟಿದ್ದೀರಿ ಅಂದನು. ಅವರು ಆತನಿಗೆ--ಕರ್ತನೇ, ಬಂದು ನೋಡು ಅಂದರು. ಯೇಸು ಅತ್ತನು.