Ezekiel · chapter 22 · verse 15
Ezekiel 22:15 in Kannada
ನಿನ್ನನ್ನು ಅನ್ಯ ಜನಾಂಗಗಳಲ್ಲಿ ಚದರಿಸಿ, ದೇಶಗಳಲ್ಲಿ ಹರಡಿಸುವೆನು; ನಿನ್ನ ಅಶುದ್ಧತ್ವವನ್ನು ನಿನ್ನಿಂದ ತೆಗೆದು ನಾಶಮಾಡುವೆನು.
Ninnannu anya janaangagalalli chadarisi, deshagalalli haradisuvenu; ninna ashuddhatvavannu ninninda tegedu naashamaaduvenu.
Ezekiel 22:15 in English
- King James Version (KJV)
- And I will scatter thee among the heathen, and disperse thee in the countries, and will consume thy filthiness out of thee.
- World English Bible (WEB)
- I will scatter you among the nations, and disperse you through the countries. I will purge your filthiness out of you.
- American Standard Version (ASV)
- And I will scatter thee among the nations, and disperse thee through the countries; and I will consume thy filthiness out of thee.
- Bible in Basic English (BBE)
- And I will send you in flight among the nations and wandering among the countries; and I will completely take away out of you everything which is unclean.
- Darby Translation (DBY)
- And I will scatter thee among the nations, and disperse thee through the countries, and will consume thy filthiness out of thee.
- Webster's Bible (WBS)
- And I will scatter thee among the heathen, and disperse thee in the countries, and will consume thy filthiness out of thee.
- Young's Literal Translation (YLT)
- And I have scattered thee among nations, And have spread thee out among lands, And consumed thy uncleanness out of thee.
Read in context
- 13ಆದದರಿಂದ ಇಗೋ, ನೀನು ಮಾಡಿದ ಈ ದುರ್ಲಾಭದಿಂದಲೂ ನಿನ್ನಲ್ಲಿರುವ ನಿನ್ನ ರಕ್ತಾಪ ರಾಧದಿಂದಲೂ ನಾನು ನನ್ನ ಕೈ ಬಡಿದುಕೊಂಡಿದ್ದೇನೆ.
- 14ನಾನು ನಿನ್ನೊಳಗೆ ಕೆಲಸ ನಡೆಸುವ ದಿವಸಗಳಲ್ಲಿ ನಿನ್ನ ಹೃದಯವು ನಿಲ್ಲುವದೋ? ನಿನ್ನ ಕೈಗಳು ಬಲವಾಗಿರುವವೋ? ಕರ್ತನಾದ ನಾನೇ ಹೇಳಿದ್ದೇನೆ, ನಾನೇ ಅದನ್ನು ಮಾಡುತ್ತೇನೆ.
- 15ನಿನ್ನನ್ನು ಅನ್ಯ ಜನಾಂಗಗಳಲ್ಲಿ ಚದರಿಸಿ, ದೇಶಗಳಲ್ಲಿ ಹರಡಿಸುವೆನು; ನಿನ್ನ ಅಶುದ್ಧತ್ವವನ್ನು ನಿನ್ನಿಂದ ತೆಗೆದು ನಾಶಮಾಡುವೆನು.
- 16ಆಗ ನೀನು ಅನ್ಯಜನಾಂಗಗಳ ಮುಂದೆ ನೀನು ನಿನ್ನ ಬಾಧ್ಯತೆಯನ್ನು ತಕ್ಕೊಳ್ಳುವಿ; ನಾನೇ ಕರ್ತನೆಂದು ನೀನು ತಿಳಿದುಕೊಳ್ಳುವಿ.
- 17ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇ ನಂದರೆ --
Cross references
- Nehemiah 1:8 ನೆಹೆಮೀಯ 1:8ದಯಮಾಡಿ ನಿನ್ನ ಸೇವಕನಾದ ಮೋಶೆಗೆ ಹೇಳಿದ ಮಾತನ್ನು ಜ್ಞಾಪಕಮಾಡು, ಏನಂದರೆ--ನೀವು ಅಕೃತ್ಯ ಮಾಡಿದರೆ ನಾನು ನಿಮ್ಮನ್ನು ಜನಾಂಗಗಳನ್ನು ಚದರಿಸುವಂತೆ ಚದರಿಸುವೆನು.
- Deuteronomy 4:27 ಧರ್ಮೋಪದೇಶಕಾಂಡ 4:27ಆಗ ಕರ್ತನು ನಿಮ್ಮನ್ನು ಜನಾಂಗ ಗಳಲ್ಲಿ ಚದರಿಸುವನು; ಕರ್ತನು ನಿಮ್ಮನ್ನು ನಡಿಸುವಲ್ಲಿ ಅವರ ಮಧ್ಯದಲ್ಲಿ ಸ್ವಲ್ಪ ಮಂದಿಯಾಗಿ ಉಳಿಯುವಿರಿ.
- Zechariah 7:14 ಜೆಕರ್ಯ 7:14ಇದಲ್ಲದೆ ಅವರು ಅರಿಯದ ಎಲ್ಲಾ ಜನಾಂಗಗಳೊಳಗೆ ಅವರನ್ನು ಸುಂಟರ ಗಾಳಿಯಿಂದ ಚದರಿಸಿಬಿಟ್ಟೆನು. ಹೀಗೆ ಅವರ ಹಿಂದೆ ದೇಶವು ನಾಶವಾಯಿತು; ಹಾದುಹೋಗುವವನೂ ತಿರುಗಿಕೊಳ್ಳುವವನೂ ಇಲ್ಲದೆ ಹೋದರು. ರಮ್ಯವಾದ ದೇಶವನ್ನು ಹಾಳಾಗಿ ಮಾಡಿದರು.
- Ezekiel 22:22 ಯೆಹೆಜ್ಕೇಲನು 22:22ಬೆಳ್ಳಿಯು ಕುಲುಮೆಯಲ್ಲಿ ಕರಗುವ ಹಾಗೆ ನೀವು ನನ್ನ ರೋಷಾಗ್ನಿಯಲ್ಲಿ ಕರಗು ವಿರಿ; ನಿನ್ನ ಮೇಲೆ ರೋಷಾಗ್ನಿಯನ್ನು ಸುರಿಸಿದಾತನು ಕರ್ತನಾದ ನಾನೇ ಎಂದು ನಿಮಗೆ ತಿಳಿಯುತ್ತದೆ.
- Ezekiel 36:19 ಯೆಹೆಜ್ಕೇಲನು 36:19ನಾನು ಅವರನ್ನು ಅನ್ಯಜನಾಂಗಗಳಲ್ಲಿ ಚದರಿಸಿದೆನು. ಅವರು ಆ ದೇಶ ಗಳಲ್ಲಿ ಚದರಿಹೋದರು; ಅವರ ಮಾರ್ಗಗಳ ದುಷ್ಕ್ರಿ ಯೆಗಳ ಪ್ರಕಾರವಾಗಿ ಅವರಿಗೆ ನಾನು ನ್ಯಾಯ ತೀರಿಸಿದೆನು.
- Leviticus 26:33 ಯಾಜಕಕಾಂಡ 26:33ನಿಮ್ಮನ್ನು ಜನಾಂಗಗಳಲ್ಲಿ ಚದರಿಸಿ ನಿಮ್ಮ ಹಿಂದೆ ಕತ್ತಿಯನ್ನು ಬೀಸುವೆನು; ನಿಮ್ಮ ಭೂಮಿ ಹಾಳಾಗಿ ರುವದು; ನಿಮ್ಮ ಪಟ್ಟಣಗಳು ನಾಶವಾಗಿರುವವು.
- Jeremiah 15:4 ಯೆರೆಮೀಯ 15:4ಅವರನ್ನು ಹಿಜ್ಕೀಯನ ಮಗನಾದ ಯೆಹೂದದ ಅರಸನಾದ ಮನಸ್ಸೆಯ ನಿಮಿತ್ತವೂ ಇವನು ಯೆರೂಸಲೇಮಿನಲ್ಲಿ ಮಾಡಿದ್ದರ ನಿಮಿತ್ತವೂ ಭೂಮಿಯ ಎಲ್ಲಾ ರಾಜ್ಯಗಳಿಗೆ ಚದರಿಹೋಗುವಂತೆ ಮಾಡುವೆನು.
- Ezekiel 23:47–48 ಯೆಹೆಜ್ಕೇಲನು 23:47–48ಆ ಸಂಘದವರು ಅವರ ಮೇಲೆ ಕಲ್ಲೆಸೆದು ತಮ್ಮ ಕತ್ತಿಗಳಿಂದ ಕೊಯ್ದು ಅವರ ಕುಮಾರರನ್ನೂ ಕುಮಾರ್ತೆಯರನ್ನೂ ಕೊಂದು ಹಾಕಿ ಬೆಂಕಿಯಿಂದ ಅವರ ಮನೆಗಳನ್ನೆಲ್ಲಾ ಸುಟ್ಟು ಬಿಡುವರು. ಹೀಗೆ ಸ್ತ್ರೀಯರೆಲ್ಲರೂ ನಿಮ್ಮ ದುಷ್ಕ ರ್ಮದ ಪ್ರಕಾರ ಮಾಡದಿರಲೆಂದು ಬೋಧಿಸಿ ದೇಶ ದೊಳಗಿಂದ ದುಷ್ಕರ್ಮವನ್ನು ತೆಗೆದುಹಾಕುವೆನು.ನಿಮ್ಮ ದುಷ್ಕರ್ಮದ ಫಲವನ್ನು ನಿಮ್ಮ ಮೇಲೆಯೇ ಮುಯ್ಯಿ ತೀರಿಸುವೆನು. ನೀವು ನಿಮ್ಮ ವಿಗ್ರಹಗಳ ಪಾಪಗಳನ್ನು ಹೊರುವಿರಿ; ಆಗ ದೇವರಾದ ಕರ್ತನು ನಾನೇ ಎಂದು ತಿಳಿದುಕೊಳ್ಳುವಿರಿ.
- Ezekiel 34:6 ಯೆಹೆಜ್ಕೇಲನು 34:6ನನ್ನ ಕುರಿಗಳು ಎಲ್ಲಾ ಪರ್ವತಗಳ ಮೇಲೆಯೂ ಪ್ರತಿಯೊಂದು ಎತ್ತರವಾದ ಬೆಟ್ಟಗಳ ಮೇಲೆಯೂ ಅಲೆದಾಡುತ್ತಿವೆ; ಹೌದು, ನನ್ನ ಮಂದೆಯು ಭೂಮಂಡಲದಲ್ಲೆಲ್ಲಾ ಚದರಿ ಹೋಗಿದೆ; ಯಾವನೂ ಅವುಗಳಿಗಾಗಿ ವಿಚಾರಿಸಲಿಲ್ಲ ಅಥವಾ ಹುಡುಕಲಿಲ್ಲ.
- 1 Peter 4:12 1 ಪೇತ್ರನು 4:12ಪ್ರಿಯರೇ, ನಿಮ್ಮನ್ನು ಶೋಧಿಸುವದಕ್ಕೆ ಅಗ್ನಿ ಯಂತಿರುವ ಪರಿಶೋಧನೆಗಾಗಿ ನೀವು ಆಶ್ಚರ್ಯಪಡ ಬೇಡಿರಿ; ಅಪೂರ್ವವಾದ ಸಂಗತಿ ನಿಮಗೆ ಸಂಭವಿಸಿ ತೆಂದು ಯೋಚಿಸಬೇಡಿರಿ.
- Ezekiel 12:14–15 ಯೆಹೆಜ್ಕೇಲನು 12:14–15ಅವನ ಸುತ್ತಲೂ ಅವನಿಗೆ ಸಹಾಯ ಮಾಡುವವರೆಲ್ಲರನ್ನೂ ಅವನ ಎಲ್ಲಾ ಸೈನ್ಯಗಳನ್ನೂ ಎಲ್ಲಾ ದಿಕ್ಕುಗಳಿಗೆ ಚದರಿಸಿ ಅವರ ಹಿಂದೆ ಕತ್ತಿಯನ್ನು ಬೀಸುವೆನು. ನಾನು ಅವರನ್ನು ಜನಾಂಗಗಳಲ್ಲಿ ಚದರಿಸಿ ದೇಶಗಳ ಮೇಲೆ ಚದರಿಸುವಾಗ ನಾನೇ ಕರ್ತನು ಎಂದು ಅವರು ತಿಳಿದುಕೊಳ್ಳುವರು.
- Ezekiel 24:6–14 ಯೆಹೆಜ್ಕೇಲನು 24:6–14ಆದಕಾರಣ ದೇವರಾದ ಕರ್ತನು ಹೀಗೆ ಹೇಳು ತ್ತಾನೆ; ರಕ್ತಮಯವಾದ ಆ ಪಟ್ಟಣಕ್ಕೆ ಅಯ್ಯೋ! ಯಾವದರ ಕಲ್ಮಶವು ಹೊರಗೆ ಬಾರದೆ ಅದರಲ್ಲಿ ಉಳಿದಿರುವದೋ ಆ ಹಂಡೆಗೆ ಅಯ್ಯೋ, ಅದರಿಂದ ತುಂಡು ತುಂಡಾಗಿ ಹೊರಗೆ ತೆಗೆ; ಆಯ್ಕೆಯ ಚೀಟಿಯು ಅದರ ಮೇಲೆ ಬೀಳದಿರಲಿ. ಅದರ ರಕ್ತವು ಅದರ ಮಧ್ಯದಲ್ಲಿದೆ; ಅದು ಅದನ್ನು ಬಂಡೆಯ ತುದಿಯಲ್ಲಿ ಇಟ್ಟಿದೆ; ದೂಳು ಮುಚ್ಚುವ ಹಾಗೆ ನೆಲದ ಮೇಲೆ ಚೆಲ್ಲಲಿಲ್ಲ; ಮುಯ್ಯಿಗೆಮುಯ್ಯಿ ತೀರಿಸುವದಕ್ಕೆ ರೋಷ ವನ್ನೆಬ್ಬಿಸುವ ಹಾಗೆ ನಾನು ಅದರ ರಕ್ತಾಪರಾಧವನ್ನು ಮುಚ್ಚಿಬಿಡದಂತೆ ಬಂಡೆಯ ತುದಿಯ ಮೇಲೆ ಇಟ್ಟಿ ದ್ದೇನೆ; ಆದದರಿಂದ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಆ ರಕ್ತಾಪರಾಧವುಳ್ಳ ಪಟ್ಟಣವು ಹಾಳಾ ಗಲಿ, ನಾನೇ ಬೆಂಕಿಯನ್ನು ರಾಶಿಯಾಗಿ ಹೆಚ್ಚಿಸುವೆನು. ಬಹಳ ಸೌದೆ ಹಾಕಿ, ಬೆಂಕಿಯನ್ನು ಹೆಚ್ಚಿಸಿ, ಮಾಂಸ ವನ್ನು ಬೇಯಿಸು; ಮಸಾಲೆ ಚೆನ್ನಾಗಿ ಇರಲಿ, ಮತ್ತು ಎಲುಬುಗಳು ಸುಡಲಿ. ಆಮೇಲೆ ಅದರ ಹಿತ್ತಾಳೆ ಬಿಸಿಯಾಗಿ ಮೈಲಿಗೆ ಕರಗಿ ಕಲ್ಮಶವು ಹೋಗುವ ಹಾಗೆ ಅದನ್ನು ಬರಿದು ಮಾಡಿ ಕೆಂಡಗಳ ಮೇಲೆ ಇಡು. ಅದರ ಕಲ್ಮಶವು ಆಯಾಸವನ್ನುಂಟು ಮಾಡಿತೇ ಹೊರತು ಅದಕ್ಕೆ ಹತ್ತಿದ್ದ ಆ ಬಹಳವಾದ ಕಿಲುಬು ಹೋಗಲಿಲ್ಲ, ಅದು ಬೆಂಕಿಯಲ್ಲಿರಲಿ; ನಿನ್ನ ಅಶುದ್ಧ ತ್ವವು ದುಷ್ಕರ್ಮವುಳ್ಳದ್ದು; ನಾನು ನಿನ್ನನ್ನು ಪರಿಶುದ್ಧ ಮಾಡಿದರೂ ನೀನು ಶುದ್ಧವಾಗದ ಕಾರಣ ನಾನು ನನ್ನ ರೋಷವನ್ನು ನಿನ್ನ ಮೇಲೆ ಕಳುಹಿಸುವಷ್ಟು ಕಾಲದ ವರೆಗೂ ಇನ್ನು ಮೇಲೆ ನೀನು ನಿನ್ನ ಅಪವಿತ್ರತ್ವದಿಂದ ಇನ್ನು ಶುದ್ಧವಾಗುವದಿಲ್ಲ. ಕರ್ತನಾದ ನಾನೇ ಅದನ್ನು ಹೇಳಿದ್ದೇನೆ, ಅದು ನಡೆಯುವದು; ನಾನು ಅದನ್ನು ಮಾಡದೆ ಬಿಡುವದಿಲ್ಲ; ಕಟಾಕ್ಷ ತೋರಿಸು ವದಿಲ್ಲ; ಪಶ್ಚಾತ್ತಾಪಪಡುವದಿಲ್ಲ. ನಿನ್ನ ಮಾರ್ಗಗಳ ಪ್ರಕಾರವೂ ನಿನ್ನ ಕ್ರಿಯೆಗಳ ಪ್ರಕಾರವೂ ನಿನಗೆ ನ್ಯಾಯ ತೀರಿಸುವೆನೆಂದು ದೇವರಾದ ಕರ್ತನು ಹೇಳುತ್ತಾನೆ.