Ezekiel · chapter 22 · verse 16
Ezekiel 22:16 in Kannada
ಆಗ ನೀನು ಅನ್ಯಜನಾಂಗಗಳ ಮುಂದೆ ನೀನು ನಿನ್ನ ಬಾಧ್ಯತೆಯನ್ನು ತಕ್ಕೊಳ್ಳುವಿ; ನಾನೇ ಕರ್ತನೆಂದು ನೀನು ತಿಳಿದುಕೊಳ್ಳುವಿ.
Aaga neenu anyajanaangagala munde neenu ninna baadhyateyannu takkolluvi; naane kartanendu neenu tilidukolluvi.
Ezekiel 22:16 in English
- King James Version (KJV)
- And thou shalt take thine inheritance in thyself in the sight of the heathen, and thou shalt know that I [am] the LORD.
- World English Bible (WEB)
- You will be profaned in yourself in the sight of the nations. Then you will know that I am the LORD.”’”
- American Standard Version (ASV)
- And thou shalt be profaned in thyself, in the sight of the nations; and thou shalt know that I am Jehovah.
- Bible in Basic English (BBE)
- And you will be made low before the eyes of the nations; and it will be clear to you that I am the Lord.
- Darby Translation (DBY)
- And thou shalt be polluted through thyself in the sight of the nations, and thou shalt know that I [am] Jehovah.
- Webster's Bible (WBS)
- And thou shalt take thy inheritance in thyself in the sight of the heathen, and thou shalt know that I [am] the LORD.
- Young's Literal Translation (YLT)
- And thou hast been polluted in thyself Before the eyes of nations, And thou hast known that I [am] Jehovah.'
Read in context
- 14ನಾನು ನಿನ್ನೊಳಗೆ ಕೆಲಸ ನಡೆಸುವ ದಿವಸಗಳಲ್ಲಿ ನಿನ್ನ ಹೃದಯವು ನಿಲ್ಲುವದೋ? ನಿನ್ನ ಕೈಗಳು ಬಲವಾಗಿರುವವೋ? ಕರ್ತನಾದ ನಾನೇ ಹೇಳಿದ್ದೇನೆ, ನಾನೇ ಅದನ್ನು ಮಾಡುತ್ತೇನೆ.
- 15ನಿನ್ನನ್ನು ಅನ್ಯ ಜನಾಂಗಗಳಲ್ಲಿ ಚದರಿಸಿ, ದೇಶಗಳಲ್ಲಿ ಹರಡಿಸುವೆನು; ನಿನ್ನ ಅಶುದ್ಧತ್ವವನ್ನು ನಿನ್ನಿಂದ ತೆಗೆದು ನಾಶಮಾಡುವೆನು.
- 16ಆಗ ನೀನು ಅನ್ಯಜನಾಂಗಗಳ ಮುಂದೆ ನೀನು ನಿನ್ನ ಬಾಧ್ಯತೆಯನ್ನು ತಕ್ಕೊಳ್ಳುವಿ; ನಾನೇ ಕರ್ತನೆಂದು ನೀನು ತಿಳಿದುಕೊಳ್ಳುವಿ.
- 17ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇ ನಂದರೆ --
- 18ಮನುಷ್ಯಪುತ್ರನೇ, ಇಸ್ರಾಯೇಲಿನ ಮನೆತನದವರು ನನಗೆ (ಮಂಡೂರ) ಕಿಟ್ಟದ ಹಾಗಾದರು ಅವರೆಲ್ಲರೂ ಬಲೆಯ ಮಧ್ಯದಲ್ಲಿರುವ ಹಿತ್ತಾಳೆ, ತವರ, ಕಬ್ಬಿಣದ, ಹಾಗೆ ಇದ್ದಾರೆ. ಸೀಸದ ಮತ್ತು ಬೆಳ್ಳಿಯ ಕಿಟ್ಟಗಳ ಹಾಗೆಯೂ ಇದ್ದಾರೆ.
Cross references
- Psalm 83:18 ಕೀರ್ತನೆಗಳು 83:18ನೀನು ಮಾತ್ರ ಯೆಹೋವ ನೆಂಬ ಹೆಸರುಳ್ಳ ನೀನು ಸಮಸ್ತ ಭೂಮಿಯ ಮೇಲೆ ಮಹೋನ್ನತನಾಗಿದ್ದೀ ಎಂದು ತಿಳುಕೊಳ್ಳಲಿ.
- Ezekiel 6:7 ಯೆಹೆಜ್ಕೇಲನು 6:7ಹತವಾದವರು ನಿಮ್ಮ ಮಧ್ಯದಲ್ಲಿ ಬೀಳು ವರು, ಆಗ ನೀವು ನಾನೇ ಕರ್ತನೆಂದು ತಿಳಿಯುವಿರಿ.
- Ezekiel 7:24 ಯೆಹೆಜ್ಕೇಲನು 7:24ಆದ ಕಾರಣ ನಾನು ಅನ್ಯಜನಾಂಗಗಳಲ್ಲಿ ಕೆಟ್ಟವರನ್ನು ತರುತ್ತೇನೆ ಮತ್ತು ಅವರು ಅವರ ಮನೆಗಳನ್ನು ವಶ ಪಡಿಸಿಕೊಳ್ಳುವರು; ನಾನು ಬಲಿಷ್ಠರ ಅಟ್ಟಹಾಸವನ್ನು ನಿಲ್ಲಿಸುತ್ತೇನೆ ಮತ್ತು ಅವರ ಪರಿಶುದ್ಧ ಸ್ಥಳಗಳು ಅಪವಿತ್ರವಾಗುವವು.
- Isaiah 37:20 ಯೆಶಾಯ 37:20ಹೀಗಿರುವದರಿಂದ ಓ ಕರ್ತನಾದ ನಮ್ಮ ದೇವರೇ, ನೀನೇ, ನೀನೊಬ್ಬನೇ ಕರ್ತನೆಂದು ಭೂಮಿಯ ಎಲ್ಲಾ ರಾಜ್ಯಗಳು ತಿಳಿದುಕೊಳ್ಳುವಂತೆ ಅವನ ಕೈಯಿಂದ ನಮ್ಮನ್ನು ರಕ್ಷಿಸು ಎಂದು ಹಿಜ್ಕೀಯನು ಕರ್ತನಿಗೆ ಪ್ರಾರ್ಥಿಸಿದನು.
- Ezekiel 39:28 ಯೆಹೆಜ್ಕೇಲನು 39:28ಆಮೇಲೆ ಅವರನ್ನು ಅನ್ಯಜನಾಂಗಗಳೊಳಗಿಂದ ಸೆರೆಗೈದವನೂ ಇನ್ನು ಮೇಲೆ ಅವರಲ್ಲಿ ಒಬ್ಬನನ್ನಾದರೂ ಉಳಿಸದೆ ದೇಶಕ್ಕೆ ಕೂಡಿಸಿದವನು ನಾನೇ ಅವರ ದೇವರಾದ ಕರ್ತನೆಂದು ಅವರು ತಿಳಿಯುವರು.ಇಲ್ಲವೇ ನಾನು ನನ್ನ ಮುಖವನ್ನು ಎಂದಿಗೂ ಮರೆಮಾಡುವದಿಲ್ಲ; ನಾನು ನನ್ನ ಆತ್ಮವನ್ನು ಇಸ್ರಾ ಯೇಲಿನ ಮನೆತನದವರ ಮೇಲೆ ಸುರಿದಿರುವೆನೆಂದು ದೇವರಾದ ಕರ್ತನು ಹೇಳುತ್ತಾನೆ.
- Ezekiel 39:6–7 ಯೆಹೆಜ್ಕೇಲನು 39:6–7ನಾನು ಮಾಗೋಗ್ ಮತ್ತು ಅವ ರೊಂದಿಗೆ ದ್ವೀಪಗಳಲ್ಲಿ ನಿರ್ಲಕ್ಷ್ಯವಾಗಿ ವಾಸಿಸುವವರ ಮೇಲೆ ಬೆಂಕಿಯನ್ನು ಕಳುಹಿಸುತ್ತೇನೆ; ಅವರು ನಾನೇ ಕರ್ತನೆಂದು ತಿಳಿಯುವರು. ಹೀಗೆ ನನ್ನ ಜನರಾದ ಇಸ್ರಾಯೇಲಿನ ಮಧ್ಯದಲ್ಲಿ ನಾನು ನನ್ನ ಪರಿಶುದ್ಧವಾದ ಹೆಸರನ್ನು ವ್ಯಕ್ತಪಡಿಸುತ್ತೇನೆ; ಅವರು ಇನ್ನೆಂದಿಗೂ ನನ್ನ ಪರಿಶುದ್ಧ ಹೆಸರನ್ನು ಅಪವಿತ್ರವಾಗದ ಹಾಗೆ ನಾನು ಮಾಡುತ್ತೇನೆ. ಅನ್ಯಜನರು ಇಸ್ರಾಯೇಲ್ಯರಲ್ಲಿ ಒಬ್ಬ ಪರಿಶುದ್ಧನಾದ ಕರ್ತನು ನಾನೇ ಎಂದು ತಿಳಿಯುವರು.
- Daniel 4:25 ದಾನಿಯೇಲನು 4:25ಅವರು ನಿನ್ನನ್ನು ಮನುಷ್ಯರೊಳಗಿಂದ ತಳ್ಳಿ ಬಿಡುವರು; ನಿನ್ನ ನಿವಾಸವು ಕಾಡುಮೃಗಗಳ ಸಂಗಡ ಇರುವದು; ನಿನಗೆ ಎತ್ತುಗಳ ಸಂಗಡ ಹುಲ್ಲನ್ನು ಮೇಯಿಸುವರು. ಆಕಾಶದ ಮಂಜಿನಿಂದ ನಿನ್ನನ್ನು ತೇವ ಮಾಡುವರು. ಮಹೋನ್ನತನು ಮನುಷ್ಯರ ರಾಜ್ಯವನ್ನು ಆಳುವನೆಂದೂ ತನ್ನ ಮನಸ್ಸಿಗೆ ಸರಿಬಂದ ವರಿಗೆ ಅದನ್ನು ಕೊಡುತ್ತಾನೆಂದೂ ನೀನು ತಿಳಿಯುವ ವರೆಗೂ ಆ ಏಳು ಕಾಲಗಳು ಕಳೆದು ಹೋಗುವವು.
- 1 Kings 20:13 1 ಅರಸುಗಳು 20:13ಆಗ ಇಗೋ, ಒಬ್ಬ ಪ್ರವಾದಿಯು ಇಸ್ರಾಯೇ ಲಿನ ಅರಸನಾದ ಅಹಾಬನ ಬಳಿಗೆ ಬಂದು--ಈ ದೊಡ್ಡ ಗುಂಪನ್ನು ನೋಡಿದಿಯೋ? ಇಗೋ, ನಾನೇ ಕರ್ತನೆಂದು ನೀನು ತಿಳಿಯುವ ಹಾಗೆ ಈ ಹೊತ್ತು ಅದನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಡುವೆನೆಂದು ಕರ್ತನು ಹೇಳುತ್ತಾನೆ ಅಂದನು.
- 1 Kings 20:28 1 ಅರಸುಗಳು 20:28ಆಗ ದೇವರ ಮನುಷ್ಯನೊಬ್ಬನು ಬಂದು ಇಸ್ರಾ ಯೇಲಿನ ಅರಸನಿಗೆ--ಕರ್ತನು ತಗ್ಗುಗಳ ದೇವರಾ ಗಿರದೆ ಪರ್ವತಗಳ ದೇವರಾಗಿದ್ದಾನೆಂಬದಾಗಿ ಅರಾ ಮ್ಯರು ಹೇಳಿದ್ದರಿಂದ ನಾನು ಕರ್ತನಾಗಿದ್ದೇನೆಂದು ನೀವು ತಿಳಿಯುವ ಹಾಗೆ ಆ ದೊಡ್ಡ ಸಮೂಹವನ್ನೆಲ್ಲಾ ನಿನ್ನ ಕೈಯಲ್ಲಿ ಒಪ್ಪಿಸುವೆನೆಂದು ಕರ್ತನು ಹೇಳುತ್ತಾನೆ ಅಂದನು.
- Exodus 8:22 ವಿಮೋಚನಕಾಂಡ 8:22ಆದರೆ ಆ ದಿವಸದಲ್ಲಿ ನಾನೇ ಭೂಲೋಕದಲ್ಲಿ ಕರ್ತನೆಂದು ನೀನು ತಿಳಿದುಕೊಳ್ಳುವಂತೆ ನನ್ನ ಜನರು ವಾಸಿಸುವ ಗೋಷೆನ್ ಸೀಮೆಯಲ್ಲಿ ನೊಣಗಳು ಇರದ ಹಾಗೆ ಅದನ್ನು ನಾನು ಪ್ರತ್ಯೇಕಿಸುವೆನು.
- Daniel 4:32–35 ದಾನಿಯೇಲನು 4:32–35ಅವರು ನಿನ್ನನ್ನು ಮನುಷ್ಯರೊಳಗಿಂದ ತಳ್ಳಿಬಿಡುವರು. ನಿನ್ನ ನಿವಾಸವು ಕಾಡುಮೃಗಗಳ ಸಂಗಡ ಇರುವದು, ನಿನಗೆ ಎತ್ತುಗಳ ಹಾಗೆ ಹುಲ್ಲನ್ನು ಮೇಯಿಸುವರು. ಮಹೋ ನ್ನತನು ಮನುಷ್ಯರ ರಾಜ್ಯವನ್ನಾಳುವನೆಂದೂ ತನ್ನ ಮನಸ್ಸಿಗೆ ಸರಿಬಂದವರಿಗೆ ಅದನ್ನು ಕೊಡುವೆನೆಂದೂ ನೀನು ತಿಳಿಯುವಷ್ಟರಲ್ಲಿ ಏಳು ಕಾಲಗಳು ನಿನ್ನನ್ನು ದಾಟಿ ಹೋಗುವವು. ಅದೇ ಗಳಿಗೆಯಲ್ಲಿ ಈ ಸಂಗತಿಯು ನೆಬೂಕದ್ನೆಚ್ಚರನಲ್ಲಿ ನೆರವೇರಿತು. ಅವನು ಮನುಷ್ಯ ರಿಂದ ತಳ್ಳಲ್ಪಟ್ಟು ಎತ್ತುಗಳಂತೆ ಹುಲ್ಲು ಮೇಯುತ್ತಿದ್ದನು. ಕೊನೆಗೆ ಅವನ ಕೂದಲು ಹದ್ದಿನ ಗರಿಗಳಂತೆಯೂ ಅವನ ಉಗುರುಗಳು ಪಕ್ಷಿಗಳ ಉಗುರುಗಳ ಹಾಗೂ ಬೆಳೆಯುವ ವರೆಗೆ ಅವನ ಶರೀರವು ಆಕಾಶದ ಮಂಜಿ ನಿಂದ ತೇವವಾಯಿತು. ಆ ಕೊನೆಯ ದಿನಗಳಲ್ಲಿ ನೆಬೂಕದ್ನೆಚ್ಚರನಾದ ನಾನು ನನ್ನ ಕಣ್ಣುಗಳನ್ನು ಪರ ಲೋಕದ ಕಡೆಗೆ ಎತ್ತಿದೆನು; ನನ್ನ ತಿಳುವಳಿಕೆ ನನಗೆ ತಿರುಗಿ ಬಂತು; ಆಗ ನಾನು ಮಹೋನ್ನತನನ್ನು ಸ್ತುತಿಸಿ ನಿರಂತರವಾಗಿ ಜೀವಿಸುವಾತನೂ ನಿತ್ಯವಾದ ಆಳ್ವಿಕೆ ಯನ್ನು ಆಳುವಾತನನ್ನು ತಲತಲಾಂತರಗಳ ವರೆಗೂ ರಾಜ್ಯ ಉಳ್ಳಾತನನ್ನು ಹೊಗಳಿ ಘನಪಡಿಸಿದೆನು. ಭೂ ನಿವಾಸಿಗಳೆಲ್ಲರೂ ಏನೂ ಇಲ್ಲದ ಹಾಗೆ ಎಣಿಸಲ್ಪಟ್ಟಿ ದ್ದಾರೆ; ಆತನು ಪರಲೋಕದ ಸೈನ್ಯದಲ್ಲಿಯೂ ಭೂ ನಿವಾಸಿಗಳಲ್ಲಿಯೂ ತನ್ನ ಚಿತ್ತದ ಪ್ರಕಾರವೇ ಮಾಡು ತ್ತಾನೆ. ಯಾರೂ ಆತನ ಹಸ್ತವನ್ನು ಹಿಂತೆಗೆಯಲಾರರು; ನೀನು ಏನು ಮಾಡುತ್ತಿರುವಿ ಎಂದು ಆತನಿಗೆ ಯಾರೂ ಕೇಳಲಾರರು.
- Isaiah 43:28 ಯೆಶಾಯ 43:28ಆದಕಾರಣ ಪರಿಶುದ್ಧ ಸ್ಥಾನದ ಪ್ರಧಾನರನ್ನು ಅಪವಿತ್ರಮಾಡಿ, ಯಾಕೋ ಬನ್ನು ಶಾಪಕ್ಕೂ, ಇಸ್ರಾಯೇಲನ್ನು ದೂಷಣೆಗಳಿಗೂ ಒಪ್ಪಿಸಿಬಿಟ್ಟಿದ್ದೇನೆ.