Ezekiel · chapter 22 · verse 21
Ezekiel 22:21 in Kannada
ಹೌದು, ನನ್ನ ರೋಷದ ಬೆಂಕಿಯಿಂದ ನಾನು ನಿಮ್ಮ ಮೇಲೆ ಊದುವೆನು. ನೀವು ಅದರೊಳಗೆ ಕರಗಿ ಹೋಗುವಿರಿ.
Haudu, nanna roshada benkiyinda naanu nimma mele ooduvenu. Neevu adarolage karagi hoguviri.
Ezekiel 22:21 in English
- King James Version (KJV)
- Yea, I will gather you, and blow upon you in the fire of my wrath, and ye shall be melted in the midst thereof.
- World English Bible (WEB)
- Yes, I will gather you, and blow on you with the fire of my wrath, and you will be melted in the middle of it.
- American Standard Version (ASV)
- Yea, I will gather you, and blow upon you with the fire of my wrath, and ye shall be melted in the midst thereof.
- Bible in Basic English (BBE)
- Yes, I will take you, breathing on you the fire of my wrath, and you will become soft in it.
- Darby Translation (DBY)
- Yea, I will collect you, and blow upon you the fire of my wrath, and ye shall be melted in the midst thereof.
- Webster's Bible (WBS)
- Yes, I will gather you, and blow upon you in the fire of my wrath, and ye shall be melted in the midst of it.
- Young's Literal Translation (YLT)
- And I have heaped you up, And blown on you in the fire of My wrath, And ye have been melted in its midst.
Read in context
- 19ಆದದರಿಂದ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ನೀವೆಲ್ಲರೂ ಕಿಟ್ಟವಾಗಿರುವದರಿಂದ ಇಗೋ, ನಾನು ನಿಮ್ಮನ್ನು ಯೆರೂಸಲೇಮಿನ ಮಧ್ಯಕ್ಕೆ ಕೂಡಿಸುತ್ತೇನೆ.
- 20ಅವರು ಬೆಳ್ಳಿ, ಹಿತ್ತಾಳೆ, ಕಬ್ಬಿಣ, ಸೀಸ ಮತ್ತು ತಗಡುಗಳನ್ನು ಹೇಗೆ ಒಲೆಯೊಳಗೆ ಕೂಡಿಸಿ ಅದಕ್ಕೆ ಬೆಂಕಿಯನ್ನೂದಿ ಕರಗಿಸುವರೋ ಹಾಗೆಯೇ ನಾನು ನಿಮ್ಮನ್ನು ನನ್ನ ಕೋಪದಲ್ಲಿಯೂ ನನ್ನ ರೋಷದಲ್ಲಿಯೂ ಕರಗಿಸಿಬಿಡುವೆನು.
- 21ಹೌದು, ನನ್ನ ರೋಷದ ಬೆಂಕಿಯಿಂದ ನಾನು ನಿಮ್ಮ ಮೇಲೆ ಊದುವೆನು. ನೀವು ಅದರೊಳಗೆ ಕರಗಿ ಹೋಗುವಿರಿ.
- 22ಬೆಳ್ಳಿಯು ಕುಲುಮೆಯಲ್ಲಿ ಕರಗುವ ಹಾಗೆ ನೀವು ನನ್ನ ರೋಷಾಗ್ನಿಯಲ್ಲಿ ಕರಗು ವಿರಿ; ನಿನ್ನ ಮೇಲೆ ರೋಷಾಗ್ನಿಯನ್ನು ಸುರಿಸಿದಾತನು ಕರ್ತನಾದ ನಾನೇ ಎಂದು ನಿಮಗೆ ತಿಳಿಯುತ್ತದೆ.
- 23ಇದಲ್ಲದೆ ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ --
Cross references
- Psalm 50:3 ಕೀರ್ತನೆಗಳು 50:3ನಮ್ಮ ದೇವರು ಬರುತ್ತಾನೆ, ಮೌನವಾಗಿರನು; ಬೆಂಕಿಯು ಆತನ ಮುಂದೆ ದಹಿಸುವದು; ಅದು ಆತನ ಸುತ್ತಲು ದೊಡ್ಡ ಬಿರುಗಾಳಿಯಂತಿರುವದು.
- Jeremiah 9:7 ಯೆರೆಮೀಯ 9:7ಆದದರಿಂದ ಸೈನ್ಯಗಳ ಕರ್ತನು ಹೇಳುವದೇ ನಂದರೆ--ಇಗೋ, ನಾನು ಅವರನ್ನು ಕರಗಿಸಿ ಶೋಧಿ ಸುತ್ತೇನೆ; ನನ್ನ ಜನರ ಮಗಳಿಗೋಸ್ಕರ ನಾನು ಹೇಗೆ ಮಾಡಲಿ?
- Deuteronomy 4:24 ಧರ್ಮೋಪದೇಶಕಾಂಡ 4:24ನಿನ್ನ ದೇವರಾದ ಕರ್ತನು ದಹಿಸುವ ಅಗ್ನಿಯೂ ರೋಷವುಳ್ಳ ದೇವರೂ ಆಗಿದ್ದಾನೆ.
- Isaiah 30:33 ಯೆಶಾಯ 30:33ಪೂರ್ವದಿಂದ (ಪುರಾತನದಿಂದ) ತೋಫೆತ್ ಸಿದ್ಧ ವಾಗಿದೆ; ಹೌದು, ಯಾಕಂದರೆ ಅದು ಆಳವಾಗಿಯೂ ಅಗಲವಾಗಿಯೂ ಅರಸನಿಗೆ ಸಿದ್ಧವಾಗಿದೆ. ಅದರ ಅಗ್ನಿಕುಂಡವು ಬೆಂಕಿಯೂ ಬಹಳ ಕಟ್ಟಿಗೆಯೂ ಉಳ್ಳದ್ದು; ಕರ್ತನ ಶ್ವಾಸವು ಗಂಧಕದ ಪ್ರವಾಹದಂತೆ ಅದನ್ನು ಉರಿಸುವದು.
- Isaiah 64:2 ಯೆಶಾಯ 64:2ಬೆಂಕಿ ಕಟ್ಟಿಗೆಯನ್ನು ಹೊತ್ತಿಸುವಂತೆಯೂ ಬೆಂಕಿ ನೀರನ್ನು ಉಕ್ಕಿಸುವಂತೆಯೂ ನಿನ್ನ ಹೆಸರು ನಿನ್ನ ವೈರಿಗಳಿಗೆ ತಿಳಿಯುವಂತೆಯೂ ಮಾಡು!
- Ezekiel 15:6–7 ಯೆಹೆಜ್ಕೇಲನು 15:6–7ಆದದ ರಿಂದ ದೇವರಾದ ಕರ್ತನು ಹೀಗೆ ಹೇಳುತ್ತಾನೆ-- ವನವೃಕ್ಷಗಳಲ್ಲಿ ದ್ರಾಕ್ಷೇಗಿಡಗಳನ್ನು ನಾನು ಹೇಗೆ ಬೆಂಕಿಗೆ ಸೌದೆಗಾಗಿ ಮಾಡಿರುವೆನೋ? ಹಾಗೆಯೇ ನಾನು ಯೆರೂಸಲೇಮಿನ ನಿವಾಸಿಗಳನ್ನೂ ಕೊಟ್ಟಿದ್ದೇನೆ. ನನ್ನ ಮುಖವನ್ನು ಅವರಿಗೆ ವಿರೋಧವಾಗಿ ತಿರುಗಿಸುತ್ತೇನೆ. ಅವರು ಹೊರಗೆ ಬಂದು ಬೆಂಕಿಯೊಳಗಿಂದ ತಪ್ಪಿಸಿ ಕೊಂಡರೂ ಮತ್ತೊಂದು ಬೆಂಕಿಯು ಅವರನ್ನು ನುಂಗಿ ಬಿಡುವದು. ನಾನು ನನ್ನ ಮುಖವನ್ನು ಅವರಿಗೆ ವಿರೋಧವಾಗಿ ಇಡುವಾಗ ನಾನೇ ಕರ್ತನೆಂದು ತಿಳಿದುಕೊಳ್ಳುವಿರಿ.ಅವರು ಅತಿಕ್ರಮಿಸಿದ್ದರಿಂದ ನಾನು ಆ ದೇಶವನ್ನು ಹಾಳು ಮಾಡುವೆನೆಂದು ದೇವರಾದ ಕರ್ತನು ಹೇಳುತ್ತಾನೆ.
- 2 Kings 25:9 2 ಅರಸುಗಳು 25:9ಕರ್ತನ ಮನೆಯನ್ನೂ ಅರಮನೆಯನ್ನೂ ಯೆರೂಸಲೇಮಿನಲ್ಲಿರುವ ಎಲ್ಲಾ ಮನೆಗಳನ್ನೂ ಪ್ರತಿ ದೊಡ್ಡ ಮನುಷ್ಯನ ಮನೆಯನ್ನೂ ಬೆಂಕಿಯಿಂದ ಸುಟ್ಟು ಬಿಟ್ಟನು.
- Ezekiel 22:20–22 ಯೆಹೆಜ್ಕೇಲನು 22:20–22ಅವರು ಬೆಳ್ಳಿ, ಹಿತ್ತಾಳೆ, ಕಬ್ಬಿಣ, ಸೀಸ ಮತ್ತು ತಗಡುಗಳನ್ನು ಹೇಗೆ ಒಲೆಯೊಳಗೆ ಕೂಡಿಸಿ ಅದಕ್ಕೆ ಬೆಂಕಿಯನ್ನೂದಿ ಕರಗಿಸುವರೋ ಹಾಗೆಯೇ ನಾನು ನಿಮ್ಮನ್ನು ನನ್ನ ಕೋಪದಲ್ಲಿಯೂ ನನ್ನ ರೋಷದಲ್ಲಿಯೂ ಕರಗಿಸಿಬಿಡುವೆನು. ಹೌದು, ನನ್ನ ರೋಷದ ಬೆಂಕಿಯಿಂದ ನಾನು ನಿಮ್ಮ ಮೇಲೆ ಊದುವೆನು. ನೀವು ಅದರೊಳಗೆ ಕರಗಿ ಹೋಗುವಿರಿ. ಬೆಳ್ಳಿಯು ಕುಲುಮೆಯಲ್ಲಿ ಕರಗುವ ಹಾಗೆ ನೀವು ನನ್ನ ರೋಷಾಗ್ನಿಯಲ್ಲಿ ಕರಗು ವಿರಿ; ನಿನ್ನ ಮೇಲೆ ರೋಷಾಗ್ನಿಯನ್ನು ಸುರಿಸಿದಾತನು ಕರ್ತನಾದ ನಾನೇ ಎಂದು ನಿಮಗೆ ತಿಳಿಯುತ್ತದೆ.
- Psalm 112:10 ಕೀರ್ತನೆಗಳು 112:10ದುಷ್ಟನು ನೋಡಿ ದುಃಖಪಡುವನು; ತನ್ನ ಹಲ್ಲು ಗಳನ್ನು ಕಡಿದು ಕರಗಿಹೋಗುವನು; ದುಷ್ಟರ ಆಶೆಯು ನಾಶವಾಗುವದು.
- Zephaniah 1:18 ಚೆಫನ್ಯ 1:18ಕರ್ತನ ರೌದ್ರದ ದಿನದಲ್ಲಿ ಅವರ ಬೆಳ್ಳಿಯಾದರೂ ಅವರ ಬಂಗಾರ ವಾದರೂ ಅವರನ್ನು ತಪ್ಪಿಸಲಾರವು; ಆತನ ಕೋಪದ ಬೆಂಕಿಯು ದೇಶವನ್ನೆಲ್ಲಾ ನುಂಗುವದು.
- Psalm 21:9 ಕೀರ್ತನೆಗಳು 21:9ನೀನು ಕೋಪಿಸುವ ಕಾಲದಲ್ಲಿ ಅವರನ್ನು ಬೆಂಕಿಯ ಒಲೆಯ ಹಾಗೆ ಮಾಡುವಿ; ಕರ್ತನು ತನ್ನ ಕೋಪದಿಂದ ಅವರನ್ನು ನುಂಗಿಬಿಡುವನು; ಬೆಂಕಿಯು ಅವರನ್ನು ದಹಿಸಿ ಬಿಡು ವದು.
- Isaiah 64:7 ಯೆಶಾಯ 64:7ನಿನ್ನ ಹೆಸರನ್ನು ಕರೆಯುವವನೂ ನಿನ್ನನ್ನು ಹಿಡು ಕೊಳ್ಳುವದಕ್ಕೆ ತನ್ನನ್ನು ಪ್ರೇರಿಸಿಕೊಳ್ಳುವವನು ಒಬ್ಬನೂ ಇಲ್ಲ; ನಿನ್ನ ಮುಖವನ್ನು ನಮಗೆ ಮರೆಮಾಡಿದ್ದೀ; ನಮ್ಮ ಅಕ್ರಮಗಳಿಗಾಗಿ ನಮ್ಮನ್ನು ದಹಿಸಿಬಿಟ್ಟಿದ್ದೀ.