Ezekiel · chapter 22 · verse 26
Ezekiel 22:26 in Kannada
ಅದರ ಯಾಜಕರು ನನ್ನ ವಿಧಿಗಳನ್ನು ಭಂಗಪಡಿಸಿದ್ದಾರೆ; ನನ್ನ ಪರಿಶುದ್ಧ ವಸ್ತುಗಳನ್ನು ಅಪವಿತ್ರಪಡಿಸಿದ್ದಾರೆ; ಪರಿಶುದ್ಧ ವಾದದ್ದಕ್ಕೂ ಅಪವಿತ್ರವಾದದ್ದಕ್ಕೂ ಭೇದವೆಣಿಸಲಿಲ್ಲ; ಶುದ್ಧಾಶುದ್ಧ ವಿವೇಚನೆಯನ್ನು ಬೋಧಿಸಲಿಲ್ಲ, ನನ್ನ ಸಬ್ಬತ್ತುಗಳಿಗೆ ತಮ್ಮ ಕಣ್ಣುಗಳನ್ನು ಮರೆಮಾಡಿದ್ದಾರೆ. ಆದದರಿಂದ ನಾನು ಅವರಲ್ಲಿ ಅಪವಿತ್ರನಾದೆನು.
Adara yaajakaru nanna vidhigalannu bhangapadisiddaare; nanna parishuddha vastugalannu apavitrapadisiddaare; parishuddha vaadaddakkoo apavitravaadaddakkoo bhedavenisalilla; shuddhaashuddha vivechaneyannu bodhisalilla, nanna sabbattugalige tamma kannugalannu maremaadiddaare. Aadadarinda naanu avaralli apavitranaadenu.
Ezekiel 22:26 in English
- King James Version (KJV)
- Her priests have violated my law, and have profaned mine holy things: they have put no difference between the holy and profane, neither have they shewed [difference] between the unclean and the clean, and have hid their eyes from my sabbaths, and I am profaned among them.
- World English Bible (WEB)
- Her priests have done violence to my law and have profaned my holy things. They have made no distinction between the holy and the common, neither have they caused men to discern between the unclean and the clean, and have hidden their eyes from my Sabbaths. So I am profaned among them.
- American Standard Version (ASV)
- Her priests have done violence to my law, and have profaned my holy things: they have made no distinction between the holy and the common, neither have they caused men to discern between the unclean and the clean, and have hid their eyes from my sabbaths, and I am profaned among them.
- Bible in Basic English (BBE)
- Her priests have been acting violently against my law; they have made my holy things unclean: they have made no division between what is holy and what is common, and they have not made it clear that the unclean is different from the clean, and their eyes have been shut to my Sabbaths, and I am not honoured among them.
- Darby Translation (DBY)
- her priests do violence to my law, and profane my holy things: they put no difference between the holy and profane, neither do they make known [the difference] between the unclean and the clean, and they hide their eyes from my sabbaths, and I am profaned among them.
- Webster's Bible (WBS)
- Her priests have violated my law, and have profaned my holy things: they have put no difference between the holy and profane, neither have they shown [difference] between the unclean and the clean, and have hid their eyes from my sabbaths, and I am profaned among them.
- Young's Literal Translation (YLT)
- Its priests have wronged My law, And they pollute My holy things, Between holy and common they have not made separation, And between the unclean and the clean they have not made known, And from my sabbaths they have hidden their eyes, And I am pierced in their midst.
Read in context
- 24ಮನುಷ್ಯಪುತ್ರನೇ, ಅದಕ್ಕೆ ಹೀಗೆ ಹೇಳು ಅಶುದ್ಧರಾಗದಂಥ ರೌದ್ರದ ದಿವಸ ಗಳಲ್ಲಿ ಮಳೆ ಸುರಿಯುವಂತಹ ದೇಶವು ನೀನೇ,
- 25ಕೊಳ್ಳೆಯನ್ನು ಸುಲಿದುಕೊಳ್ಳುವ ಘರ್ಜಿಸುವ ಸಿಂಹದ ಹಾಗೆ ಅದರ ಮಧ್ಯದಲ್ಲಿ ಪ್ರವಾದಿಗಳ ಒಳಸಂಚು ಉಂಟು; ಪ್ರಾಣಗಳನ್ನು ತಿಂದುಬಿಟ್ಟಿದ್ದಾರೆ. ಸಂಪತ್ತನ್ನೂ ಅಮೂಲ್ಯವಾದ ವಸ್ತುವನ್ನೂ ದೋಚಿ ಕೊಂಡಿದ್ದಾರೆ, ಅವರು ಅದರ ಮಧ್ಯದಲ್ಲಿ ಬಹಳ ಜನರನ್ನು ವಿಧವೆಯರನ್ನಾಗಿ ಮಾಡಿದ್ದಾರೆ.
- 26ಅದರ ಯಾಜಕರು ನನ್ನ ವಿಧಿಗಳನ್ನು ಭಂಗಪಡಿಸಿದ್ದಾರೆ; ನನ್ನ ಪರಿಶುದ್ಧ ವಸ್ತುಗಳನ್ನು ಅಪವಿತ್ರಪಡಿಸಿದ್ದಾರೆ; ಪರಿಶುದ್ಧ ವಾದದ್ದಕ್ಕೂ ಅಪವಿತ್ರವಾದದ್ದಕ್ಕೂ ಭೇದವೆಣಿಸಲಿಲ್ಲ; ಶುದ್ಧಾಶುದ್ಧ ವಿವೇಚನೆಯನ್ನು ಬೋಧಿಸಲಿಲ್ಲ, ನನ್ನ ಸಬ್ಬತ್ತುಗಳಿಗೆ ತಮ್ಮ ಕಣ್ಣುಗಳನ್ನು ಮರೆಮಾಡಿದ್ದಾರೆ. ಆದದರಿಂದ ನಾನು ಅವರಲ್ಲಿ ಅಪವಿತ್ರನಾದೆನು.
- 27ಅಲ್ಲಿನ ಪ್ರಧಾನರು ಸುಲಿಗೆಗಾಗಿ ರಕ್ತ ಸುರಿಸಿ ಪ್ರಾಣ ಗಳನ್ನು ನುಂಗುವ ಹಾಗೆ ಬೇಟೆಯ ತೋಳಗಳಂತಿ ದ್ದಾರೆ.
- 28ಅವರ ಪ್ರವಾದಿಗಳು ಅವರಿಗೆ ಸುಣ್ಣ ಹಚ್ಚುತ್ತಾರೆ, ಮೋಸವನ್ನು ದರ್ಶಿಸಿ ಸುಳ್ಳು ಶಕುನ ಹೇಳುತ್ತಾರೆ; ಕರ್ತನು ಮಾತನಾಡದಿರುವದರಿಂದ ದೇವರಾದ ಕರ್ತನು ಹೀಗೆ ಹೇಳುತ್ತಾನೆಂದು ಹೇಳು ತ್ತಾರೆ.
Cross references
- Leviticus 10:10 ಯಾಜಕಕಾಂಡ 10:10ನೀವು ಶುದ್ಧವಾದದ್ದಕ್ಕೂ ಅಶುದ್ಧವಾದದ್ದಕ್ಕೂ ಪವಿತ್ರವಾದದ್ದಕ್ಕೂ ಅಪವಿತ್ರ ವಾದದ್ದಕ್ಕೂ ವ್ಯತ್ಯಾಸವನ್ನು ತೋರಿಸುವದಕ್ಕಾಗಿಯೂ
- Ezekiel 22:8 ಯೆಹೆಜ್ಕೇಲನು 22:8ನೀನು ನನ್ನ ಪರಿಶುದ್ಧ ಸಂಗತಿಗಳನು ತಿರಸ್ಕರಿಸಿ ನನ್ನ ಸಬ್ಬತ್ತುಗಳನ್ನು ಅಪವಿತ್ರಪಡಿಸಿದ್ದೀ.
- Ezekiel 44:23 ಯೆಹೆಜ್ಕೇಲನು 44:23ಅವರು ನನ್ನ ಜನರಿಗೆ ಪರಿಶುದ್ಧವಾದದ್ದಕ್ಕೂ ಅಪವಿತ್ರವಾದದ್ದಕ್ಕೂ ಹೆಚ್ಚು ಕಡಿಮೆಯನ್ನು ಬೋಧಿಸಿ, ಅವರಿಗೆ ಹೊಲೆ ಯಾದದ್ದನ್ನೂ ಶುದ್ಧವಾದದ್ದನ್ನೂ ತಿಳಿಸಬೇಕು.
- Malachi 2:8 ಮಲಾಕಿಯ 2:8ಆದರೆ ನೀವು ಮಾರ್ಗವನ್ನು ಬಿಟ್ಟುಹೋಗಿದ್ದೀರಿ; ಅನೇಕರನ್ನು ನ್ಯಾಯಪ್ರಮಾಣಕ್ಕೆ ಎಡವುವಂತೆ ಮಾಡಿದ್ದೀರಿ; ಲೇವಿಯ ಒಡಂಬಡಿಕೆಯನ್ನು ಕೆಡಿಸಿದ್ದೀರೆಂದು ಸೈನ್ಯ ಗಳ ಕರ್ತನು ಹೇಳುತ್ತಾನೆ.
- Micah 3:11–12 ಮೀಕ 3:11–12ಅದರ ಮುಖ್ಯಸ್ಥರು ಲಂಚಕ್ಕೆ ನ್ಯಾಯತೀರಿಸುತ್ತಾರೆ; ಅದರ ಯಾಜಕರು ಸಂಬಳಕ್ಕೆ ಬೋಧಿಸುತ್ತಾರೆ; ಅದರ ಪ್ರವಾ ದಿಗಳು ಹಣಕ್ಕೆ ಶಕುನ ಹೇಳುತ್ತಾರೆ; ಆದರೂ ಕರ್ತನ ಮೇಲೆ ಆತುಕೊಂಡು--ಕರ್ತನು ನಮ್ಮ ಮಧ್ಯದಲ್ಲಿ ಇಲ್ಲವೋ? ನಮ್ಮ ಮೇಲೆ ಕೇಡು ಬರುವದಿಲ್ಲ ಅನ್ನು ತ್ತಾರೆ.ಆದಕಾರಣ ನಿಮ್ಮ ನಿಮಿತ್ತವೇ, ಚೀಯೋನು ಹೊಲದ ಹಾಗೆ ಉಳಲ್ಪಡುವದು; ಯೆರೂಸಲೇಮು ದಿಬ್ಬೆಗಳಾಗುವದು, ಆಲಯದ ಪರ್ವತವು ಅಡವಿಯ ಉನ್ನತ ಸ್ಥಳಗಳ ಹಾಗಾಗುವದು. ಆದಕಾರಣ ನಿಮ್ಮ ನಿಮಿತ್ತವೇ, ಚೀಯೋನು ಹೊಲದ ಹಾಗೆ ಉಳಲ್ಪಡುವದು; ಯೆರೂಸಲೇಮು ದಿಬ್ಬೆಗಳಾಗುವದು, ಆಲಯದ ಪರ್ವತವು ಅಡವಿಯ ಉನ್ನತ ಸ್ಥಳಗಳ ಹಾಗಾಗುವದು.
- 1 Samuel 2:12–17 1 ಸಮುವೇಲನು 2:12–17ಆದರೆ ಏಲಿಯ ಕುಮಾರರು ಕರ್ತನನ್ನು ಅರಿಯದೆ ಬೆಲಿಯಾಳನ ಮಕ್ಕಳಾಗಿದ್ದರು. ಆ ಯಾಜಕರು ಜನರನ್ನು ನಡಿಸಿದ ವಿಧ ಏನಂದರೆ, ಯಾವನಾದರೂ ಬಲಿ ಅರ್ಪಿಸಿದರೆ ಅರ್ಪಿಸಿದ ಆ ಬಲಿಯ ಮಾಂಸವನ್ನು ಬೇಯಿಸುವಾಗ ಯಾಜಕನ ಸೇವಕನು ಮೂರು ಮುಳ್ಳು ಗಳುಳ್ಳ ಕೊಂಡಿಯನ್ನು ತಕ್ಕೊಂಡು ಅದನ್ನು ತಪ್ಪಲೆ ಯಲ್ಲಾಗಲಿ ಪಾತ್ರೆಯಲ್ಲಾಗಲಿ ತಟ್ಟೆಯಲ್ಲಾಗಲಿ ಗಡಿಗೆ ಯಲ್ಲಾಗಲಿ ಚುಚ್ಚುವನು. ಆ ಆಯುಧದಲ್ಲಿ ಬರುವ ದನ್ನೆಲ್ಲಾ ಯಾಜಕನು ತನಗೆ ತಕ್ಕೊಳ್ಳುವನು. ಹೀಗೆಯೇ ಅವರು ಶೀಲೋವಿನಲ್ಲಿ ಅಲ್ಲಿಗೆ ಬರುವ ಸಮಸ್ತ ಇಸ್ರಾಯೇಲ್ಯರಿಗೆ ಮಾಡಿದರು. ಇದಲ್ಲದೆ ಕೊಬ್ಬನ್ನು ಸುಡುವದಕ್ಕಿಂತ ಮುಂಚೆ ಯಾಜಕನ ಸೇವಕನು ಬಂದು ಬಲಿಯನ್ನು ಅರ್ಪಿಸುವವನ ಸಂಗಡ--ಯಾಜಕನಿಗೆ ಸುಡುವದಕ್ಕೆ ಮಾಂಸವನ್ನು ಕೊಡು; ಯಾಕಂದರೆ ಅವನು ನಿನ್ನ ಕೈಯಿಂದ ಬೆಂದ ಮಾಂಸವನ್ನು ತಕ್ಕೊಳ್ಳು ವದಿಲ್ಲ; ಅದು ಹಸಿಮಾಂಸವೇ ಆಗಬೇಕು ಅನ್ನು ವನು. ಯಾವ ಮನುಷ್ಯನಾದರೂ ಅವನಿಗೆ--ಅವರು ದಿನವೆಲ್ಲಾ ಹಾಗೆ ಕೊಬ್ಬನ್ನು ಸುಡಲೇಬೇಕು. ತರುವಾಯ ನೀನು ನಿನ್ನ ಪ್ರಾಣದ ಇಚ್ಛೆಯ ಪ್ರಕಾರ ತೆಗೆದುಕೋ ಎಂದು ಹೇಳಿದರೆ ಅವನು--ಹಾಗಲ್ಲ, ಈಗಲೇ ಕೊಡು; ಇಲ್ಲದಿದ್ದರೆ ಬಲವಂತವಾಗಿ ತಕ್ಕೊಳ್ಳುವೆನು ಎಂದು ಅನ್ನುವನು. ಆ ಯೌವನಸ್ಥರ ಪಾಪವು ಕರ್ತನ ಸನ್ನಿಧಿಯಲ್ಲಿ ಅಧಿಕವಾಗಿತ್ತು. ಆದದರಿಂದ ಜನರು ಕರ್ತನ ಅರ್ಪಣೆಯನ್ನು ತುಚ್ಛ ವಾಗಿ ಕಂಡರು.
- Jeremiah 2:8 ಯೆರೆಮೀಯ 2:8ಯಾಜಕರು--ಕರ್ತನು ಎಲ್ಲಿದ್ದಾನೆ ಎಂದು ಹೇಳಲಿಲ್ಲ; ನ್ಯಾಯ ಪ್ರಮಾಣವನ್ನು ಉಪಯೋಗಿಸುವವರು ನನ್ನನ್ನು ತಿಳಿಯಲಿಲ್ಲ; ಪಾಲಕರು ನನಗೆ ವಿರೋಧವಾಗಿ ದ್ರೋಹಮಾಡಿದರು; ಪ್ರವಾದಿಗಳು ಬಾಳನಿಂದ ಪ್ರವಾದಿಸಿದರು; ಪ್ರಯೋಜನವಿಲ್ಲದವುಗಳನ್ನು ಹಿಂದ ಟ್ಟಿದರು.
- Ezekiel 36:20 ಯೆಹೆಜ್ಕೇಲನು 36:20ಅವರು ಆ ಅನ್ಯಜನಾಂಗಗಳೊಳಗೆ ಸೇರಿಕೊಂಡ ಮೇಲೆ--ಇವರೇ ಕರ್ತನ ಜನರು ಮತ್ತು ಇವರು ಆತನ ದೇಶದಿಂದ ಹೊರಟುಹೋದರು ಎಂದು ಅವರಿಗೆ ಹೇಳಿ ನನ್ನ ಪರಿಶುದ್ಧ ಹೆಸರನ್ನು ಅಪವಿತ್ರಮಾಡುವರು.
- Jeremiah 15:19 ಯೆರೆಮೀಯ 15:19ಆದದರಿಂದ ಕರ್ತನು -- ನೀನು ಹಿಂತಿರುಗಿ ಕೊಂಡರೆ ನಾನು ನಿನ್ನನ್ನು ತಿರುಗಿ ತರುವೆನು; ಆಗ ನೀನು ನನ್ನ ಮುಂದೆ ನಿಲ್ಲುವಿ; ನೀನು ಅಮೂಲ್ಯವಾದ ದ್ದನ್ನು ನೀಚವಾದದರೊಳಗಿಂದ ಹೊರಗೆ ತಂದರೆ ನನ್ನ ಬಾಯಿಯ ಹಾಗಿರುವಿ; ಅವರು ನಿನ್ನ ಕಡೆಗೆ ತಿರುಗಲಿ, ಆದರೆ ನೀನು ಅವರ ಕಡೆಗೆ ಹಿಂತಿರುಗಬೇಡ.
- 1 Samuel 2:22 1 ಸಮುವೇಲನು 2:22ಆದರೆ ಏಲಿಯು ಬಹಳ ವೃದ್ಧನಾಗಿದ್ದನು. ತನ್ನ ಕುಮಾರರು ಇಸ್ರಾಯೇಲಿಗೆ ಮಾಡುವದೆಲ್ಲವನ್ನೂ ಅವರು ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ಕೂಡಿ ಬರುವ ಸ್ತ್ರೀಯರ ಸಂಗಡ ಮಲಗಿದ್ದರೆಂಬದನ್ನೂ ಕೇಳಿ ಅವರಿಗೆ--
- Haggai 2:11–14 ಹಗ್ಗಾಯ 2:11–14ಸೈನ್ಯಗಳ ಕರ್ತನು ಹೇಳುವದೇ ನಂದರೆ--ನ್ಯಾಯಪ್ರಮಾಣದ ವಿಷಯವಾಗಿ ಯಾಜಕ ರಿಗೆ-- ಒಬ್ಬನು ತನ್ನ ವಸ್ತ್ರದ ಸೆರಗಿನಲ್ಲಿ ಪರಿಶುದ್ಧ ಮಾಂಸವನ್ನು ಹೊತ್ತು, ತನ್ನ ಸೆರಗಿನಿಂದ ರೊಟ್ಟಿಯ ನ್ನಾದರೂ ಬೇಯಿಸಿದ್ದನ್ನಾದರೂ ದ್ರಾಕ್ಷಾರಸವನ್ನಾ ದರೂ ಎಣ್ಣೆಯನ್ನಾದರೂ ಯಾವ ವಿಧದ ಆಹಾರವ ನ್ನಾದರೂ ಮುಟ್ಟಿದರೆ ಅದು ಪರಿಶುದ್ಧವಾಗುವದೋ ಕೇಳು ಅಂದನು. ಯಾಜಕರು--ಇಲ್ಲವೆಂದು ಉತ್ತರ ಕೊಟ್ಟರು. ಆಗ ಹಗ್ಗಾಯನು--ಆದರೆ ಹೆಣದಿಂದ ಅಶುದ್ಧನಾದವನು, ಇವುಗಳಲ್ಲಿ ಯಾವದನ್ನಾದರೂ ಮುಟ್ಟಿದರೆ, ಅಶುದ್ಧವಾಗುವದೋ ಅಂದನು. ಯಾಜ ಕರು ಉತ್ತರ ಕೊಟ್ಟು--ಅಶುದ್ದವಾಗುವದು ಅಂದರು. ಆಗ ಹಗ್ಗಾಯನು ಉತ್ತರಕೊಟ್ಟು ಹೇಳಿದ್ದೇನಂದರೆ --ಈ ಜನರೂ ಈ ಜನಾಂಗವೂ ನನ್ನ ಮುಂದೆ ಹೀಗೆಯೇ ಇದ್ದಾರೆ ಎಂದು ಕರ್ತನು ಅನ್ನುತ್ತಾನೆ; ಅವರ ಕೈಕೆಲಸಗಳೆಲ್ಲಾ ಹೀಗೆಯೇ; ಅವರು ಅರ್ಪಿಸು ವಂಥದ್ದು ಅಶುದ್ಧವೇ.
- Leviticus 10:1–3 ಯಾಜಕಕಾಂಡ 10:1–3ಇದಲ್ಲದೆ ಆರೋನನ ಕುಮಾರರಾದ ನಾದಾಬ್ ಅಬೀಹು ಅವರವರ ಅಗ್ನಿ ಪಾತ್ರೆಗಳನ್ನು ತೆಗೆದುಕೊಂಡು ಅದರಲ್ಲಿ ಬೆಂಕಿಯನ್ನಿಟ್ಟು ಅದರ ಮೇಲೆ ಸುವಾಸನೆಯ ಧೂಪವನ್ನು ಹಾಕಿ ಕರ್ತನು ಆಜ್ಞಾಪಿಸದೆ ಇದ್ದ ಬೇರೆ ಬೆಂಕಿಯನ್ನು ಕರ್ತನ ಸನ್ನಿಧಿಯಲ್ಲಿ ಸಮರ್ಪಿಸಿದರು. ಆಗ ಕರ್ತನ ಬಳಿಯಿಂದ ಬೆಂಕಿಯು ಹೊರಟು ಅವರನ್ನು ದಹಿಸಿ ಬಿಟ್ಟಿತು; ಅವರು ಕರ್ತನ ಮುಂದೆ ಸತ್ತುಹೋದರು. ತರುವಾಯ ಮೋಶೆಯು ಆರೋನನಿಗೆ--ಕರ್ತನು ಹೇಳಿದ್ದು ಇದೇ, ಅದೇನಂದರೆ--ನನ್ನನ್ನು ಸವಿಾಪಿಸು ವವರನ್ನು ನಾನು ಪರಿಶುದ್ಧಪಡಿಸುವೆನು, ಜನರೆಲ್ಲರ ಮುಂದೆ ನಾನು ಘನ ಹೊಂದುವೆನು ಅಂದನು. ಆಗ ಆರೋನನು ಸುಮ್ಮನಿದ್ದನು.
Original words (Hebrew)
- priests · H3548כֹּהֵן kôhên
- violated · H2554חָמַס châmaç
- law · H8451תּוֹרָה tôwrâh
- profaned · H2490חָלַל châlal
- things · H6944קֹדֶשׁ qôdesh
- difference · H914בָּדַל bâdal
- holy · H6944קֹדֶשׁ qôdesh
- profane · H2455חֹל chôl
- shewed · H3045יָדַע yâdaʻ
- unclean · H2931טָמֵא ṭâmêʼ
- clean · H2889טָהוֹר ṭâhôwr
- hid · H5956עָלַם ʻâlam
- eyes · H5869עַיִן ʻayin
- sabbaths · H7676שַׁבָּת shabbâth
- profaned · H2490חָלַל châlal
- among · H8432תָּוֶךְ tâvek