Ezekiel · chapter 22 · verse 27
Ezekiel 22:27 in Kannada
ಅಲ್ಲಿನ ಪ್ರಧಾನರು ಸುಲಿಗೆಗಾಗಿ ರಕ್ತ ಸುರಿಸಿ ಪ್ರಾಣ ಗಳನ್ನು ನುಂಗುವ ಹಾಗೆ ಬೇಟೆಯ ತೋಳಗಳಂತಿ ದ್ದಾರೆ.
Allina pradhaanaru suligegaagi rakta surisi praana galannu nunguva haage beteya tolagalanti ddaare.
Ezekiel 22:27 in English
- King James Version (KJV)
- Her princes in the midst thereof [are] like wolves ravening the prey, to shed blood, [and] to destroy souls, to get dishonest gain.
- World English Bible (WEB)
- Her princes within it are like wolves ravening the prey, to shed blood and to destroy souls, that they may get dishonest gain.
- American Standard Version (ASV)
- Her princes in the midst thereof are like wolves ravening the prey, to shed blood, [and] to destroy souls, that they may get dishonest gain.
- Bible in Basic English (BBE)
- Her rulers in her are like wolves violently taking their food; putting men to death and causing the destruction of souls, so that they may get their profit.
- Darby Translation (DBY)
- Her princes in the midst of her are like wolves ravening the prey, to shed blood, to destroy souls, to get dishonest gain.
- Webster's Bible (WBS)
- Her princes in the midst of her [are] like wolves ravening the prey, to shed blood, [and] to destroy souls, to get dishonest gain.
- Young's Literal Translation (YLT)
- Its princes in its midst [are] as wolves, Tearing prey, to shed blood, to destroy souls, For the sake of gaining dishonest gain.
Read in context
- 25ಕೊಳ್ಳೆಯನ್ನು ಸುಲಿದುಕೊಳ್ಳುವ ಘರ್ಜಿಸುವ ಸಿಂಹದ ಹಾಗೆ ಅದರ ಮಧ್ಯದಲ್ಲಿ ಪ್ರವಾದಿಗಳ ಒಳಸಂಚು ಉಂಟು; ಪ್ರಾಣಗಳನ್ನು ತಿಂದುಬಿಟ್ಟಿದ್ದಾರೆ. ಸಂಪತ್ತನ್ನೂ ಅಮೂಲ್ಯವಾದ ವಸ್ತುವನ್ನೂ ದೋಚಿ ಕೊಂಡಿದ್ದಾರೆ, ಅವರು ಅದರ ಮಧ್ಯದಲ್ಲಿ ಬಹಳ ಜನರನ್ನು ವಿಧವೆಯರನ್ನಾಗಿ ಮಾಡಿದ್ದಾರೆ.
- 26ಅದರ ಯಾಜಕರು ನನ್ನ ವಿಧಿಗಳನ್ನು ಭಂಗಪಡಿಸಿದ್ದಾರೆ; ನನ್ನ ಪರಿಶುದ್ಧ ವಸ್ತುಗಳನ್ನು ಅಪವಿತ್ರಪಡಿಸಿದ್ದಾರೆ; ಪರಿಶುದ್ಧ ವಾದದ್ದಕ್ಕೂ ಅಪವಿತ್ರವಾದದ್ದಕ್ಕೂ ಭೇದವೆಣಿಸಲಿಲ್ಲ; ಶುದ್ಧಾಶುದ್ಧ ವಿವೇಚನೆಯನ್ನು ಬೋಧಿಸಲಿಲ್ಲ, ನನ್ನ ಸಬ್ಬತ್ತುಗಳಿಗೆ ತಮ್ಮ ಕಣ್ಣುಗಳನ್ನು ಮರೆಮಾಡಿದ್ದಾರೆ. ಆದದರಿಂದ ನಾನು ಅವರಲ್ಲಿ ಅಪವಿತ್ರನಾದೆನು.
- 27ಅಲ್ಲಿನ ಪ್ರಧಾನರು ಸುಲಿಗೆಗಾಗಿ ರಕ್ತ ಸುರಿಸಿ ಪ್ರಾಣ ಗಳನ್ನು ನುಂಗುವ ಹಾಗೆ ಬೇಟೆಯ ತೋಳಗಳಂತಿ ದ್ದಾರೆ.
- 28ಅವರ ಪ್ರವಾದಿಗಳು ಅವರಿಗೆ ಸುಣ್ಣ ಹಚ್ಚುತ್ತಾರೆ, ಮೋಸವನ್ನು ದರ್ಶಿಸಿ ಸುಳ್ಳು ಶಕುನ ಹೇಳುತ್ತಾರೆ; ಕರ್ತನು ಮಾತನಾಡದಿರುವದರಿಂದ ದೇವರಾದ ಕರ್ತನು ಹೀಗೆ ಹೇಳುತ್ತಾನೆಂದು ಹೇಳು ತ್ತಾರೆ.
- 29ದೇಶದ ಜನರು ಬಲಾತ್ಕಾರ ಮಾಡಿದ್ದಾರೆ, ಕೊಳ್ಳೆಯನ್ನು ಹೊಡೆದಿದ್ದಾರೆ. ಬಡವನನ್ನೂ ದರಿದ್ರ ರನ್ನೂ ಪೀಡಿಸಿದ್ದಾರೆ; ಹೌದು, ಅವರು ನ್ಯಾಯವಿಲ್ಲದೆ ಒಬ್ಬ ಅಪರಿಚಿತನನ್ನು ಬಲಾತ್ಕಾರಪಡಿಸಿದ್ದಾರೆ.
Cross references
- Ezekiel 22:13 ಯೆಹೆಜ್ಕೇಲನು 22:13ಆದದರಿಂದ ಇಗೋ, ನೀನು ಮಾಡಿದ ಈ ದುರ್ಲಾಭದಿಂದಲೂ ನಿನ್ನಲ್ಲಿರುವ ನಿನ್ನ ರಕ್ತಾಪ ರಾಧದಿಂದಲೂ ನಾನು ನನ್ನ ಕೈ ಬಡಿದುಕೊಂಡಿದ್ದೇನೆ.
- Isaiah 1:23 ಯೆಶಾಯ 1:23ನಿನ್ನ ಪ್ರಭುಗಳು ಎದುರು ಬೀಳುವವರೂ ಕಳ್ಳರ ಜೊತೆಗಾರರೂ ಆಗಿ ದ್ದಾರೆ; ಪ್ರತಿಯೊಬ್ಬನು ಲಂಚ ಪ್ರಿಯನೂ ಬಹು ಮಾನಗಳನ್ನು ಅಪೇಕ್ಷಿಸುವವನೂ ಆಗಿದ್ದಾನೆ; ಅವರು ಅನಾಥರಿಗೆ ನ್ಯಾಯತೀರಿಸರು, ಇಲ್ಲವೆ ವಿಧವೆಯರ ವ್ಯಾಜ್ಯವು ಅವರ ಬಳಿಗೆ ಬರುವದಿಲ್ಲ.
- Ezekiel 22:6 ಯೆಹೆಜ್ಕೇಲನು 22:6ಇಗೋ ಇಸ್ರಾ ಯೇಲಿನ ಪ್ರಭುಗಳಲ್ಲಿ ಪ್ರತಿಯೊಬ್ಬನು ತನ್ನ ತನ್ನ ಶಕ್ತ್ಯಾನುಸಾರವಾಗಿ ರಕ್ತವನ್ನು ನಿನ್ನ ಮೇಲೆ ಚೆಲ್ಲುತ್ತಲೇ ಇದ್ದಾನೆ.
- Micah 3:9–11 ಮೀಕ 3:9–11ಯಾಕೋಬನ ಮನೆತನದವರ ಪ್ರಧಾನರೇ, ಇಸ್ರಾಯೇಲಿನ ಮನೆತನದವರ ನ್ಯಾಯಾ ಧಿಪತಿಗಳೇ, ನ್ಯಾಯವನ್ನು ಅಸಹ್ಯಿಸಿ ಎಲ್ಲಾ ಯಥಾರ್ಥ ತ್ವವನ್ನು ಡೊಂಕು ಮಾಡುವವರೇ, ಚೀಯೋನನ್ನು ರಕ್ತದಿಂದಲೂ ಯೆರೂಸಲೇಮನ್ನು ಅಕ್ರಮದಿಂದಲೂ ಕಟ್ಟುವವರೇ, ಈಗ ಇದನ್ನು ಕೇಳಿರಿ. ಅದರ ಮುಖ್ಯಸ್ಥರು ಲಂಚಕ್ಕೆ ನ್ಯಾಯತೀರಿಸುತ್ತಾರೆ; ಅದರ ಯಾಜಕರು ಸಂಬಳಕ್ಕೆ ಬೋಧಿಸುತ್ತಾರೆ; ಅದರ ಪ್ರವಾ ದಿಗಳು ಹಣಕ್ಕೆ ಶಕುನ ಹೇಳುತ್ತಾರೆ; ಆದರೂ ಕರ್ತನ ಮೇಲೆ ಆತುಕೊಂಡು--ಕರ್ತನು ನಮ್ಮ ಮಧ್ಯದಲ್ಲಿ ಇಲ್ಲವೋ? ನಮ್ಮ ಮೇಲೆ ಕೇಡು ಬರುವದಿಲ್ಲ ಅನ್ನು ತ್ತಾರೆ.ಆದಕಾರಣ ನಿಮ್ಮ ನಿಮಿತ್ತವೇ, ಚೀಯೋನು ಹೊಲದ ಹಾಗೆ ಉಳಲ್ಪಡುವದು; ಯೆರೂಸಲೇಮು ದಿಬ್ಬೆಗಳಾಗುವದು, ಆಲಯದ ಪರ್ವತವು ಅಡವಿಯ ಉನ್ನತ ಸ್ಥಳಗಳ ಹಾಗಾಗುವದು.
- James 2:6–7 ಯಾಕೋಬನು 2:6–7ನೀವಾದರೋ ಬಡವರನ್ನು ಅವಮಾನಪಡಿಸಿದ್ದೀರಿ. ನಿಮ್ಮನ್ನು ಬಾಧಿಸಿ ನ್ಯಾಯಸ್ಥಾನಗಳ ಮುಂದೆ ಎಳೆದು ಕೊಂಡು ಹೋಗುವವರು ಐಶ್ವರ್ಯವಂತರಲ್ಲವೋ? ನೀವು ಕರೆಯಲ್ಪಟ್ಟ ಆ ಯೋಗ್ಯವಾದ ನಾಮವನ್ನು ದೂಷಿಸುವವರು ಅವರಲ್ಲವೋ?
- Ezekiel 45:9 ಯೆಹೆಜ್ಕೇಲನು 45:9ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಓ ಇಸ್ರಾಯೇಲಿನ ಪ್ರಭುಗಳೇ, ನೀವು ಸಾಕುಮಾಡಿರಿ, ಬಲಾತ್ಕಾರವನ್ನು ಸುಲಿಗೆಯನ್ನು ಬಿಡಿರಿ; ನ್ಯಾಯವನ್ನೂ ನೀತಿಯನ್ನೂ ಮಾಡಿರಿ; ನನ್ನ ಜನರನ್ನು ಓಡಿಸಬೇಡಿರಿ ಎಂದು ದೇವರಾದ ಕರ್ತನು ಹೇಳುತ್ತಾನೆ.
- Micah 7:8 ಮೀಕ 7:8ನನ್ನ ಶತ್ರುವೇ, ನನ್ನ ಮೇಲೆ ಸಂತೋಷಪಡಬೇಡ; ನಾನು ಬಿದ್ದಿದ್ದರೂ ತಿರುಗಿ ಏಳುವೆನು; ಕತ್ತಲೆಯಲ್ಲಿ ಕೂತುಕೊಂಡರೂ ನನಗೆ ಬೆಳಕು ಕರ್ತನೇ.
- Ezekiel 19:3–6 ಯೆಹೆಜ್ಕೇಲನು 19:3–6ತನ್ನ ಮರಿಗಳಲ್ಲಿ ಒಂದನ್ನು ಬೆಳೆಸಿದಳು; ಇದು ಪ್ರಾಯದ ಸಿಂಹವಾಯಿತು, ಇದು ಕೊಳ್ಳೆ ಹೊಡೆಯು ವದನ್ನು ಕಲಿತು ಮನುಷ್ಯರನ್ನು ನುಂಗಿಬಿಟ್ಟಿತು. ಜನಾಂಗಗಳವರು ಅದರ ಸುದ್ದಿಯನ್ನು ಕೇಳಿದರು; ಅವರ ಹಳ್ಳದಲ್ಲಿ ಇದನ್ನು ಹಿಡಿದುಕೊಂಡರು, ಸಂಕೋ ಲೆಗಳಿಂದ ಬಂಧಿಸಿ ಐಗುಪ್ತದೇಶಕ್ಕೆ ತೆಗೆದುಕೊಂಡು ಹೋದರು. ಆಗ ಅವಳು ಅದನ್ನು ನೋಡಿ ತನ್ನ ನಿರೀಕ್ಷೆ ಕೆಟ್ಟುಹೋಯಿತೆಂದು ಕಾದು ತನ್ನ ಮರಿಗಳಲ್ಲಿ ಮತ್ತೊಂದನ್ನು ತೆಗೆದುಕೊಂಡು ಅದನ್ನು ಪ್ರಾಯದ ಸಿಂಹವಾಗಿ ಮಾಡಿದಳು. ಅದು ಸಿಂಹಗಳ ಮಧ್ಯೆ ತಿರುಗಾಡಿ ಪ್ರಾಯದ ಸಿಂಹವಾಗಿ ಕೊಳ್ಳೆ ಹೊಡೆ ಯುವದನ್ನು ಕಲಿತು ಮನುಷ್ಯರನ್ನು ನುಂಗಿಬಿಟ್ಟಿತು.
- Hosea 7:1–7 ಹೋಶೇಯ 7:1–7ನಾನು ಇಸ್ರಾಯೇಲನ್ನು ಗುಣಮಾಡ ಬೇಕೆಂದಿರುವಾಗ ಎಫ್ರಾಯಾಮಿನ ದುಷ್ಕೃತ್ಯವನ್ನೂ ಸಮಾರ್ಯದ ಕೆಟ್ಟತನವನ್ನೂ ಕಂಡು ಹಿಡಿಯುತ್ತೇನೆ; ಅವರು ಸುಳ್ಳನ್ನು ನಡಿಸುತ್ತಾರೆ; ಕಳ್ಳನು ಒಳಗೆ ಬರುತ್ತಾನೆ. ಕಳ್ಳರ ಗುಂಪು ಹೊರಗೆ ಸುಲುಕೊಳ್ಳು ತ್ತದೆ. ನಾನು ಅವರ ಕೆಟ್ಟತನವನ್ನೆಲ್ಲಾ ಜ್ಞಾಪಕಮಾಡು ತ್ತೇನೆಂದು ಅವರು ತಮ್ಮ ಹೃದಯಗಳಲ್ಲಿ ನೆನಸಿಕೊಳ್ಳು ವದಿಲ್ಲ; ಈಗ ಅವರ ಸ್ವಂತ ಕೃತ್ಯಗಳು ಅವರನ್ನು ಸುತ್ತಿಕೊಂಡಿವೆ; ಅವು ನನ್ನ ಮುಖದ ಮುಂದೆ ಇವೆ. ಅವರು ತಮ್ಮ ಕೆಟ್ಟತನದಿಂದ ಅರಸನನ್ನೂ ಸುಳ್ಳುಗ ಳಿಂದ ಪ್ರಧಾನರನ್ನೂ ಸಂತೋಷಪಡಿಸುತ್ತಾರೆ. ಅವರೆ ಲ್ಲರೂ ವ್ಯಭಿಚಾರಿಗಳು; ರೊಟ್ಟಿಗಾರನು ಬಿಸಿಮಾಡಿದ ಒಲೆಯ ಹಾಗೆ ಇದ್ದಾರೆ, ಅವನು ಹಿಟ್ಟು ನಾದಿದ ಮೇಲೆ ಅದು ಹುಳಿಯಾಗುವ ತನಕ ಬಿಸಿಮಾಡುವ ದನ್ನು ಬಿಟ್ಟುಬಿಡುತ್ತಾನೆ. ನಮ್ಮ ಅರಸನ ದಿನದಲ್ಲಿ ಪ್ರಧಾನರು ದ್ರಾಕ್ಷಾರಸದ ಬುದ್ದಲಿಗಳಿಂದ ಅಸ್ವಸ್ಥರಾ ಗುತ್ತಾರೆ, ಅವನು ಪರಿಹಾಸ್ಯಗಾರರ ಸಂಗಡ ತನ್ನ ಕೈಚಾಚುತ್ತಾನೆ. ಅವರು ಹೊಂಚು ಹಾಕಿಕೊಂಡಿ ರುವಾಗ ತಮ್ಮ ಹೃದಯವನ್ನು ಅವರು ಒಲೆಯ ಹಾಗೆ ಸಿದ್ಧಮಾಡಿದ್ದಾರೆ; ಅವರ ರೊಟ್ಟಿಗಾರನು ರಾತ್ರಿ ಯೆಲ್ಲಾ ನಿದ್ರೆ ಮಾಡುತ್ತಾನೆ, ಬೆಳಿಗ್ಗೆ ಅದು ಪ್ರಜ್ವಲಿ ಸುವ ಬೆಂಕಿಯ ಹಾಗೆ ಉರಿಯುತ್ತದೆ. ಅವರೆಲ್ಲರೂ ಒಲೆಯ ಹಾಗೆ ಬಿಸಿಯಾಗಿದ್ದಾರೆ; ತಮ್ಮ ನ್ಯಾಯಾ ಧಿಪತಿಗಳನ್ನು ನುಂಗಿಬಿಟ್ಟಿದ್ದಾರೆ; ಅವರ ಅರಸುಗಳೆಲ್ಲಾ ಬಿದ್ದು ಹೋಗಿದ್ದಾರೆ; ಅವರಲ್ಲಿ ಒಬ್ಬನಾದರೂ ನನ್ನನ್ನು ಪ್ರಾರ್ಥಿಸುವದೇ ಇಲ್ಲ.
- James 5:1–4 ಯಾಕೋಬನು 5:1–4ಧನಿಕರೇ, ನಿಮಗೆ ಬರುವ ದುರ್ದಶೆ ಗಳಿಗಾಗಿ ಕಣ್ಣೀರಿಡಿರಿ, ಗೋಳಾಡಿರಿ ನಿಮ್ಮ ಐಶ್ವರ್ಯವು ನಾಶವಾಗಿದೆ, ನಿಮ್ಮ ಬಟ್ಟೆಗಳಿಗೆ ನುಸಿ ಹಿಡಿದಿದೆ. ನಿಮ್ಮ ಚಿನ್ನ ಬೆಳ್ಳಿಗಳು ತುಕ್ಕು ಹಿಡಿದವೆ; ಅವುಗಳ ತುಕ್ಕು ನಿಮಗೆ ವಿರೋಧವಾಗಿ ಸಾಕ್ಷಿಯಾಗಿದ್ದು ಬೆಂಕಿಯಂತೆ ನಿಮ್ಮ ಮಾಂಸವನ್ನು ತಿಂದು ಬಿಡುವದು. ಕಡೇ ದಿನಗಳಿಗಾಗಿ ಸಂಪತ್ತನ್ನು ಕೂಡಿಸಿ ಇಟ್ಟುಕೊಂಡಿ ದ್ದೀರಿ. ಇಗೋ, ನಿಮ್ಮ ಹೊಲಗಳನ್ನು ಕೊಯಿದವರ ಕೂಲಿಯನ್ನು ನೀವು ಅನ್ಯಾಯವಾಗಿ ಹಿಡಿದುಕೊಂಡಿ ದ್ದೀರಿ. ಆ ಕೂಲಿ ಕೂಗಿಕೊಳ್ಳುತ್ತದೆ; ಕೊಯಿದವರ ಕೂಗು ಸೈನ್ಯಗಳ ಕರ್ತನ ಕಿವಿಗಳಲ್ಲಿ ಬಿದ್ದಿದೆ.
- Micah 3:2–3 ಮೀಕ 3:2–3ಒಳ್ಳೇದನ್ನು ಹಗೆಮಾಡಿ ಕೆಟ್ಟದ್ದನ್ನು ಪ್ರೀತಿಮಾಡುವವರೇ, ಅವರ ಮೇಲಿನಿಂದ ಅವರ ಚರ್ಮವನ್ನೂ ಅವರ ಎಲುಬುಗಳ ಮೇಲಿನಿಂದ ಅವರ ಮಾಂಸವನ್ನೂ ಕಿತ್ತುಕೊಳ್ಳು ವವರೇ, ನನ್ನ ಜನರ ಮಾಂಸವನ್ನು ತಿಂದು ಅವರ ಚರ್ಮವನ್ನು ಸುಲಿದು ಅವರ ಎಲುಬುಗಳನ್ನು ಮುರಿದು ಮಡಿಕೆಯಂತೆ ಅವರ ಮಾಂಸವನ್ನು ತುಂಡು ಮಾಡಿ ಕೊಪ್ಪರಿಗೆಯಲ್ಲಿ ಹಾಕುತ್ತೀರಿ.
- Matthew 21:13 ಮತ್ತಾಯನು 21:13ಆತನು ಅವರಿಗೆ--ನನ್ನ ಮನೆಯು ಪ್ರಾರ್ಥನೆಯ ಮನೆ ಎಂದು ಕರೆಯಲ್ಪಡುವದಾಗಿ ಬರೆದದೆ; ಆದರೆ ನೀವು ಅದನ್ನು ಕಳ್ಳರ ಗವಿಯನ್ನಾಗಿ ಮಾಡಿದ್ದೀರಿ ಎಂದು ಹೇಳಿದನು.