Ezekiel · chapter 22 · verse 28
Ezekiel 22:28 in Kannada
ಅವರ ಪ್ರವಾದಿಗಳು ಅವರಿಗೆ ಸುಣ್ಣ ಹಚ್ಚುತ್ತಾರೆ, ಮೋಸವನ್ನು ದರ್ಶಿಸಿ ಸುಳ್ಳು ಶಕುನ ಹೇಳುತ್ತಾರೆ; ಕರ್ತನು ಮಾತನಾಡದಿರುವದರಿಂದ ದೇವರಾದ ಕರ್ತನು ಹೀಗೆ ಹೇಳುತ್ತಾನೆಂದು ಹೇಳು ತ್ತಾರೆ.
Avara pravaadigalu avarige sunna hachchuttaare, mosavannu darshisi sullu shakuna heluttaare; kartanu maatanaadadiruvadarinda devaraada kartanu heege heluttaanendu helu ttaare.
Ezekiel 22:28 in English
- King James Version (KJV)
- And her prophets have daubed them with untempered [morter], seeing vanity, and divining lies unto them, saying, Thus saith the Lord GOD, when the LORD hath not spoken.
- World English Bible (WEB)
- Her prophets have plastered for them with whitewash, seeing false visions, and divining lies to them, saying, ‘The Lord GOD says,’ when the LORD has not spoken.
- American Standard Version (ASV)
- And her prophets have daubed for them with untempered [mortar], seeing false visions, and divining lies unto them, saying, Thus saith the Lord Jehovah, when Jehovah hath not spoken.
- Bible in Basic English (BBE)
- And her prophets have been using whitewash, seeing foolish visions and making false use of secret arts, saying, This is what the Lord has said, when the Lord has said nothing.
- Darby Translation (DBY)
- And her prophets have daubed for them with untempered [mortar], seeing vanity and divining lies unto them, saying, Thus saith the Lord Jehovah! and Jehovah hath not spoken.
- Webster's Bible (WBS)
- And her prophets have daubed them with untempered [mortar] , seeing vanity, and divining lies to them, saying, Thus saith the Lord GOD, when the LORD hath not spoken.
- Young's Literal Translation (YLT)
- And its prophets have daubed for them with chalk, Seeing a vain thing, and divining for them a lie, Saying, 'Thus said the Lord Jehovah:' And Jehovah hath not spoken.
Read in context
- 26ಅದರ ಯಾಜಕರು ನನ್ನ ವಿಧಿಗಳನ್ನು ಭಂಗಪಡಿಸಿದ್ದಾರೆ; ನನ್ನ ಪರಿಶುದ್ಧ ವಸ್ತುಗಳನ್ನು ಅಪವಿತ್ರಪಡಿಸಿದ್ದಾರೆ; ಪರಿಶುದ್ಧ ವಾದದ್ದಕ್ಕೂ ಅಪವಿತ್ರವಾದದ್ದಕ್ಕೂ ಭೇದವೆಣಿಸಲಿಲ್ಲ; ಶುದ್ಧಾಶುದ್ಧ ವಿವೇಚನೆಯನ್ನು ಬೋಧಿಸಲಿಲ್ಲ, ನನ್ನ ಸಬ್ಬತ್ತುಗಳಿಗೆ ತಮ್ಮ ಕಣ್ಣುಗಳನ್ನು ಮರೆಮಾಡಿದ್ದಾರೆ. ಆದದರಿಂದ ನಾನು ಅವರಲ್ಲಿ ಅಪವಿತ್ರನಾದೆನು.
- 27ಅಲ್ಲಿನ ಪ್ರಧಾನರು ಸುಲಿಗೆಗಾಗಿ ರಕ್ತ ಸುರಿಸಿ ಪ್ರಾಣ ಗಳನ್ನು ನುಂಗುವ ಹಾಗೆ ಬೇಟೆಯ ತೋಳಗಳಂತಿ ದ್ದಾರೆ.
- 28ಅವರ ಪ್ರವಾದಿಗಳು ಅವರಿಗೆ ಸುಣ್ಣ ಹಚ್ಚುತ್ತಾರೆ, ಮೋಸವನ್ನು ದರ್ಶಿಸಿ ಸುಳ್ಳು ಶಕುನ ಹೇಳುತ್ತಾರೆ; ಕರ್ತನು ಮಾತನಾಡದಿರುವದರಿಂದ ದೇವರಾದ ಕರ್ತನು ಹೀಗೆ ಹೇಳುತ್ತಾನೆಂದು ಹೇಳು ತ್ತಾರೆ.
- 29ದೇಶದ ಜನರು ಬಲಾತ್ಕಾರ ಮಾಡಿದ್ದಾರೆ, ಕೊಳ್ಳೆಯನ್ನು ಹೊಡೆದಿದ್ದಾರೆ. ಬಡವನನ್ನೂ ದರಿದ್ರ ರನ್ನೂ ಪೀಡಿಸಿದ್ದಾರೆ; ಹೌದು, ಅವರು ನ್ಯಾಯವಿಲ್ಲದೆ ಒಬ್ಬ ಅಪರಿಚಿತನನ್ನು ಬಲಾತ್ಕಾರಪಡಿಸಿದ್ದಾರೆ.
- 30ಬೇಲಿ ಕಟ್ಟುವ ಮನುಷ್ಯನನ್ನು ದೇಶಕ್ಕೋಸ್ಕರ ನಾನು ಅದನು ನಾಶಮಾಡದ ಹಾಗೆ ಪೌಳಿಯ ಒಡಕಿನಲ್ಲಿ ನಿಲ್ಲತಕ್ಕ ವನನ್ನು ಹುಡುಕಿದೆನು, ಆದರೆ ಸಿಕ್ಕಲಿಲ್ಲ.ಆದದ ರಿಂದ ನನ್ನ ರೋಷವನ್ನು ಅವರ ಮೇಲೆ ಸುರಿಸಿದ್ದೇನೆ; ನನ್ನ ಸಿಟ್ಟಿನ ಬೆಂಕಿಯಿಂದ ಅವರನ್ನು ಸಂಹರಿಸಿದ್ದೇನೆ; ಅವರ ಮಾರ್ಗವನ್ನು ಅವರ ತಲೆಗಳ ಮೇಲೆ ಮುಯ್ಯಿ ತೀರಿಸಿದ್ದೇನೆಂದು ದೇವರಾದ ಕರ್ತನು ಹೇಳುತ್ತಾನೆ.
Cross references
- Ezekiel 13:6–7 ಯೆಹೆಜ್ಕೇಲನು 13:6–7ಅವರು ವ್ಯರ್ಥವಾದದ್ದನ್ನೂ ಸುಳ್ಳು ಭವಿಷ್ಯ ವಾದದ್ದನ್ನೂ ನೋಡಿದ್ದಾರೆಂದು ಕರ್ತನು ಹೇಳುತ್ತಾನೆ; ಆದರೆ ಕರ್ತನು ಅವರನ್ನು ಕಳುಹಿಸಲಿಲ್ಲ; ತಾವು ನುಡಿದ ಮಾತು ಬೇರೆಯವರು ನಿರೀಕ್ಷಿಸುವಂತೆ ಮಾಡುತ್ತಾರೆ. ವ್ಯರ್ಥ ದರ್ಶನವನ್ನು ನೋಡಿರುವಿ ರಲ್ಲಾ. ಸುಳ್ಳಾದ ಭವಿಷ್ಯವನ್ನು ಹೇಳಿದ್ದೀರಲ್ಲಾ. ನಾನು ಮಾತನಾಡದೆ ಇದ್ದರೂ--ಕರ್ತನೇ ಹೇಳಿದನೆಂದು ಹೇಳಿದ್ದಿರಲ್ಲಾ.
- Ezekiel 13:10–16 ಯೆಹೆಜ್ಕೇಲನು 13:10–16ಸಮಾಧಾನ ವಿಲ್ಲದಿರುವಾಗ ಅವರು ಸಮಾಧಾನವೆಂದು ಹೇಳಿದ್ದರಿಂ ದಲೂ ಮತ್ತು ಇಗೋ, ಒಬ್ಬನು ಗೋಡೆಯನ್ನು ಕಟ್ಟಿದರೆ ಮತ್ತೊಬ್ಬನು ಅದಕ್ಕೆ ಸುಣ್ಣ ಹಚ್ಚಿದ್ದರಿಂದಲೂ ಸುಣ್ಣ ಹಚ್ಚುತ್ತಿರುವವನಿಗೆ--ಅದು ಬೀಳುವದೆಂದು ಹೇಳು; ಅಲ್ಲಿ ವಿಪರೀತ ಮಳೆ ಬರುವದು ಮತ್ತು ದೊಡ್ಡ ಕಲ್ಮಳೆಯು ಬೀಳುವದು; ಬಿರುಗಾಳಿಯು ಅದನ್ನು ಸೀಳಿಬಿಡುವದು. ಇಗೋ, ಗೋಡೆ ಬಿದ್ದು ಹೋದಮೇಲೆ--ನೀವು ಹಚ್ಚಿದ ಸುಣ್ಣ ಎಲ್ಲಿ ಎಂದು ನಿಮಗೆ ಹೇಳುವರಲ್ಲಾ? ಆದದರಿಂದ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಅದನ್ನು ನನ್ನ ಉರಿಯಲ್ಲಿ ಬಿರುಗಾಳಿಯಿಂದ ಸೀಳಿಬಿಡುವೆನು. ಅದನ್ನು ನಾಶ ಪಡಿಸುವ ಹಾಗೆ ನನ್ನ ಕೋಪದಿಂದ ವಿಪರೀತ ಮಳೆಯೂ ನನ್ನ ಉರಿಯಿಂದ ಕಲ್ಮಳೆಯ ಕಲ್ಲುಗಳೂ ಸುರಿಯುವವು; ನೀವು ಸುಣ್ಣ ಬಳಿದ ಗೋಡೆಯನ್ನು ನಾನು ಈಗ ಕೆಡವಿ ನೆಲಸಮ ಮಾಡಿ ಅದರ ಅಸ್ತಿವಾರ ವನ್ನು ಕಾಣದ ಹಾಗೆ ಮಾಡುವೆನು. ಅದು ಬಿದ್ದು ಹೋಗುವದು, ನೀವು ಅದರಲ್ಲಿ ನಾಶ ಮಾಡಲ್ಪಡು ವಿರಿ. ಆಗ ನಾನೇ ಕರ್ತನೆಂದು ನಿಮಗೆ ತಿಳಿದು ಬರುವದು. ಹೀಗೆ ನಾನು ಗೋಡೆಯಲ್ಲಿಯೂ ಅದಕ್ಕೆ ಸುಣ್ಣ ಬಳಿದವರಲ್ಲಿಯೂ ರೋಷವನ್ನು ತೀರಿಸಿ ಕೊಂಡು ಇನ್ನು ಗೋಡೆಯಾದರೂ ಅದಕ್ಕೆ ಸುಣ್ಣ ಹಚ್ಚಿದವರಾದರೂ ಇಲ್ಲವೆಂದು ಯೆರೂಸಲೇಮಿನ ವಿಷಯ ಪ್ರವಾದಿಸಿ ಸಮಾಧಾನವಿಲ್ಲದಿರುವಾಗ ಅದಕ್ಕೆ ಸಮಾಧಾನದ ದರ್ಶನವನ್ನು ಕಂಡ ಇಸ್ರಾಯೇಲಿನ ಪ್ರವಾದಿಗಳು ನಿಮಗೆ ಇಲ್ಲವೆಂದು ದೇವರಾದ ಕರ್ತನು ಹೇಳುತ್ತಾನೆ.
- Jeremiah 23:25–32 ಯೆರೆಮೀಯ 23:25–32ನನ್ನ ಹೆಸರಿನಲ್ಲಿ ಸುಳ್ಳನ್ನು ಪ್ರವಾದಿಸುವ ಪ್ರವಾದಿಗಳು ಹೇಳುವದನ್ನು ಕೇಳಿದ್ದೇನೆ. ಅವರು--ನಾನು ಕನಸು ಕಂಡಿದ್ದೇನೆ, ಕನಸು ಕಂಡಿದ್ದೇನೆ ಅನ್ನುತ್ತಾರೆ. ಸುಳ್ಳು ಪ್ರವಾದಿಸುವ ಪ್ರವಾದಿಗಳ ಹೃದಯದಲ್ಲಿ ಇದು ಎಷ್ಟರ ವರೆಗೆ ಇರುವದು? ಹೌದು, ಅವರು ತಮ್ಮ ಹೃದಯದ ಮೋಸವನ್ನು ಪ್ರವಾದಿಸುವವರೇ; ಅವರ ತಂದೆ ಗಳು ಬಾಳನಿಂದ ನನ್ನ ಹೆಸರನ್ನು ಹೇಗೆ ಮರೆತರೋ ಹಾಗೆಯೇ ಇವರು ತಮ್ಮ ತಮ್ಮ ನೆರೆಯವರಿಗೆ ತಿಳಿಸುವ ಕನಸುಗಳಿಂದ ನನ್ನ ಜನರು ನನ್ನ ಹೆಸರನ್ನು ಮರೆತು ಬಿಡುವಂತೆ ಮಾಡುವದಕ್ಕೆ ಯೋಚಿಸುತ್ತಾರೆ. ಕನಸು ಉಂಟಾದ ಪ್ರವಾದಿಯು ಕನಸನ್ನು ತಿಳಿಸಲಿ, ನನ್ನ ವಾಕ್ಯ ಉಂಟಾದವನು ನನ್ನ ವಾಕ್ಯವನ್ನು ನಂಬಿಗಸ್ತನಾಗಿ ಹೇಳಲಿ; ಗೋಧಿಗೂ ಹೊಟ್ಟಿಗೂ ಸಂಬಂಧವೇನೆಂದು ಕರ್ತನು ಅನ್ನುತ್ತಾನೆ. ನನ್ನ ವಾಕ್ಯವು ಬೆಂಕಿಯ ಹಾಗಲ್ಲವೋ ಎಂದು ಕರ್ತನು ಅನ್ನುತ್ತಾನೆ. ಅದು ಬಂಡೆಯನ್ನು ತುಂಡು ಮಾಡುವ ಸುತ್ತಿಗೆಯ ಹಾಗಲ್ಲವೋ? ಆದದರಿಂದ ಇಗೋ, ಪ್ರತಿಯೊಬ್ಬನೂ ತನ್ನ ನೆರೆಯವನಿಂದ ನನ್ನ ವಾಕ್ಯಗಳನ್ನು ಕದ್ದುಕೊಳ್ಳುವ ಪ್ರವಾದಿಗಳಿಗೆ ವಿರೋಧವಾಗಿದ್ದೇನೆಂದು ಕರ್ತನು ಅನ್ನುತ್ತಾನೆ. ಇಗೋ, ತಮ್ಮ ನಾಲಿಗೆಗಳನ್ನು ಆಡಿ ಸುತ್ತಾ--ಆತನು ನುಡಿಯುತ್ತಾನೆ ಎಂದು ಅನ್ನುವ ಪ್ರವಾದಿಗಳಿಗೆ ನಾನು ವಿರೋಧವಾಗಿದ್ದೇನೆಂದು ಕರ್ತನು ಅನ್ನುತ್ತಾನೆ. ಇಗೋ, ಸುಳ್ಳಿನ ಕನಸುಗಳನ್ನು ಪ್ರವಾದಿಸಿ; ತಮ್ಮ ಸುಳ್ಳುಗಳಿಂದಲೂ ನಿರರ್ಥಕವಾದ ವುಗಳಿಂದಲೂ ನನ್ನ ಜನರು ತಪ್ಪುವಂತೆ ಮಾಡುವವರಿಗೆ ವಿರೋಧವಾಗಿದ್ದೇನೆ; ನಾನು ಅವರನ್ನು ಕಳುಹಿಸಲಿಲ್ಲ, ಅವರಿಗೆ ಅಪ್ಪಣೆಕೊಡಲಿಲ್ಲ; ಆದದರಿಂದ ಅವರು ಹೇಗೂ ಈ ಜನರಿಗೆ ಪ್ರಯೋಜನವಾಗಿರುವದೇ ಇಲ್ಲವೆಂದು ಕರ್ತನು ಅನ್ನುತ್ತಾನೆ.
- Isaiah 30:10 ಯೆಶಾಯ 30:10ಅವರು ನೋಡುವವರಿಗೆ--ನೋಡಬೇಡಿರೆಂದು, ದಿವ್ಯದರ್ಶಿಗಳಿಗೆ ನಿಮಗೆ ದರ್ಶನವಾಗದಿರಲೆನ್ನು ತ್ತಾರೆ. ಪ್ರವಾದಿಗಳಿಗೆ--ನಮಗೆ ನ್ಯಾಯವಾದವು ಗಳನ್ನು ಪ್ರವಾದಿಸಬೇಡಿರಿ ನಯವಾದವುಗಳನ್ನೇ ನುಡಿ ಯಿರಿ, ಮೋಸವಾದವುಗಳನ್ನೆ ಪ್ರವಾದಿಸಿರಿ ಅನ್ನು ತ್ತಾರೆ.
- Jeremiah 37:19 ಯೆರೆಮೀಯ 37:19ಬಾಬೆಲಿನ ಅರಸನು ನಿಮ್ಮ ಮೇಲೆಯೂ ಈ ದೇಶದ ಮೇಲೆಯೂ ಬರುವದಿಲ್ಲವೆಂದು ನಿಮಗೆ ಪ್ರವಾದಿಸಿದ ನಿಮ್ಮ ಪ್ರವಾದಿಗಳು ಈಗ ಎಲ್ಲಿ? ಆದದರಿಂದ ಈಗ ಕಿವಿಗೊಡು,
- Ezekiel 22:25 ಯೆಹೆಜ್ಕೇಲನು 22:25ಕೊಳ್ಳೆಯನ್ನು ಸುಲಿದುಕೊಳ್ಳುವ ಘರ್ಜಿಸುವ ಸಿಂಹದ ಹಾಗೆ ಅದರ ಮಧ್ಯದಲ್ಲಿ ಪ್ರವಾದಿಗಳ ಒಳಸಂಚು ಉಂಟು; ಪ್ರಾಣಗಳನ್ನು ತಿಂದುಬಿಟ್ಟಿದ್ದಾರೆ. ಸಂಪತ್ತನ್ನೂ ಅಮೂಲ್ಯವಾದ ವಸ್ತುವನ್ನೂ ದೋಚಿ ಕೊಂಡಿದ್ದಾರೆ, ಅವರು ಅದರ ಮಧ್ಯದಲ್ಲಿ ಬಹಳ ಜನರನ್ನು ವಿಧವೆಯರನ್ನಾಗಿ ಮಾಡಿದ್ದಾರೆ.
- Lamentations 2:14 ಪ್ರಲಾಪಗಳು 2:14ನಿನ್ನ ಪ್ರವಾದಿಗಳು ನಿನಗಾಗಿ ವ್ಯರ್ಥವಾದ ಮೂರ್ಖತನದ ವಿಷಯಗಳನ್ನು ನೋಡಿದ್ದಾರೆ. ಅವರು ನಿನ್ನ ದುರವಸ್ಥೆಯನ್ನು ನೀಗಿಸುವದಕ್ಕಾಗಿ ನಿನ್ನ ದುಷ್ಟತನ ವನ್ನು ಬಯಲಿಗೆ ತರಲಿಲ್ಲ; ಆದರೆ ನಿನಗಾಗಿ ಸುಳ್ಳಿನ ಭಾರಗಳನ್ನು ಮತ್ತು ಗಡೀಪಾರು ಮಾಡುವ ಕಾರಣ ಗಳನ್ನು ನೋಡಿದ್ದಾರೆ.
- Jeremiah 8:10–11 ಯೆರೆಮೀಯ 8:10–11ಆದದರಿಂದ ಅವರ ಹೆಂಡತಿಯರನ್ನು ಬೇರೊಬ್ಬರಿಗೂ ಅವರ ಹೊಲಗಳನ್ನು ಸ್ವಾಧೀನಮಾಡಿಕೊಳ್ಳುವವರಿಗೂ ನಾನು ಕೊಡುವೆನು; ಚಿಕ್ಕವನು ಮೊದಲುಗೊಂಡು ದೊಡ್ಡವನ ತನಕ ಅವರೆಲ್ಲರು ಲೋಭಕ್ಕೆ ಒಪ್ಪಿಸಿಕೊಟ್ಟಿದ್ದಾರೆ. ಪ್ರವಾದಿ ಮೊದಲುಗೊಂಡು ಯಾಜಕನ ವರೆಗೂ ಪ್ರತಿ ಯೊಬ್ಬನು ಮೋಸದಿಂದ ವರ್ತಿಸುತ್ತಾನೆ. ಅವರು ನನ್ನ ಜನರ ಮಗಳ ಗಾಯವನ್ನು ಸ್ವಲ್ಪವಾಗಿ ಸ್ವಸ್ಥಮಾಡಿ ಸಮಾಧಾನವಿಲ್ಲದಿರುವಾಗ--ಸಮಾಧಾನ, ಸಮಾ ಧಾನ ಎಂದನ್ನುತ್ತಾರೆ. ಅಸಹ್ಯವಾದದ್ದನ್ನು ಮಾಡಿದ ಮೇಲೆ ಅವರು ನಾಚಿಕೆಪಟ್ಟರೋ?
- Ezekiel 21:29 ಯೆಹೆಜ್ಕೇಲನು 21:29ನಿನ್ನ ಜೋಯಿಸರು ವ್ಯರ್ಥವಾದದ್ದನ್ನು ನೋಡಿ ಸಾಕ್ಷಾತ್ಕರಿಸಿ ಸುಳ್ಳಾಗಿ ಶಕುನ ಹೇಳುತ್ತಿದ್ದಾರೆ, ಹೀಗೆ ನಿನ್ನನ್ನು ಹತವಾದ ದುಷ್ಟರ ಕುತ್ತಿಗೆಗಳ ಮೇಲೆ ತಂದಿದ್ದಾರೆ. ಅವರ ಅಂತ್ಯದಿನವು ಬಂದಿದೆ; ಅದೇ ಅವರ ಅಕ್ರಮಗಳಿಗೆ ಅಂತ್ಯವಾಗಿದೆ.
- Jeremiah 23:21 ಯೆರೆಮೀಯ 23:21ನಾನು ಪ್ರವಾದಿಗಳನ್ನು ಕಳುಹಿಸಲಿಲ್ಲ, ಆದಾಗ್ಯೂ ಅವರು ಓಡಿದರು; ನಾನು ಅವರ ಸಂಗಡ ಮಾತನಾಡಲಿಲ್ಲ ಆದಾಗ್ಯೂ ಪ್ರವಾದಿಸಿದರು.
- Jeremiah 29:8–9 ಯೆರೆಮೀಯ 29:8–9ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಿಮ್ಮ ಮಧ್ಯ ದಲ್ಲಿರುವ ನಿಮ್ಮ ಪ್ರವಾದಿಗಳೂ ಶಕುನದವರೂ ನಿಮಗೆ ಮೋಸಮಾಡದಿರಲಿ; ನಿಮಗಾಗಿ ಕನಸು ಕಂಡು ಹೇಳು ವವರಿಗೆ ಕಿವಿಗೊಡಬೇಡಿರಿ. ಅವರು ನಿಮಗೆ ನನ್ನ ಹೆಸರಿನಲ್ಲಿ ಸುಳ್ಳಾಗಿ ಪ್ರವಾದಿಸುತ್ತಾರೆ; ನಾನು ಅವರನ್ನು ಕಳುಹಿಸಲಿಲ್ಲವೆಂದು ಕರ್ತನು ಅನ್ನುತ್ತಾನೆ.
- Zephaniah 3:4 ಚೆಫನ್ಯ 3:4ಅದರ ಪ್ರವಾದಿಗಳು ಹಗುರವಾಗಿಯೂ ವಂಚಕರಾಗಿಯೂ ಇದ್ದಾರೆ; ಅದರ ಯಾಜಕರು ಪರಿಶುದ್ಧ ಸ್ಥಳವನ್ನು ಅಪವಿತ್ರ ಮಾಡಿ ದ್ದಾರೆ; ನ್ಯಾಯಪ್ರಮಾಣಕ್ಕೆ ಬಲಾತ್ಕಾರಮಾಡಿದ್ದಾರೆ.