Ezekiel · chapter 22 · verse 3
Ezekiel 22:3 in Kannada
ನೀನು ಹೇಳಬೇಕಾದದ್ದೇನಂದರೆ, ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಪಟ್ಟಣವು ಅದರ ಮಧ್ಯದಲ್ಲಿ ಅದರ ಕಾಲ ಬರುವ ಹಾಗೆ ರಕ್ತವನ್ನು ಚೆಲ್ಲುತ್ತದೆ. ತನ್ನನ್ನು ಅಶುದ್ಧ ಮಾಡುವ ಹಾಗೆ ತನ್ನಲ್ಲಿ ವಿಗ್ರಹಗಳನ್ನು ಮಾಡಿಕೊಂಡಿದೆ.
Neenu helabekaadaddenandare, devaraada kartanu heege heluttaane--pattanavu adara madhyadalli adara kaala baruva haage raktavannu chelluttade. Tannannu ashuddha maaduva haage tannalli vigrahagalannu maadikondide.
Ezekiel 22:3 in English
- King James Version (KJV)
- Then say thou, Thus saith the Lord GOD, The city sheddeth blood in the midst of it, that her time may come, and maketh idols against herself to defile herself.
- World English Bible (WEB)
- You shall say, ‘The Lord GOD says: “A city that sheds blood within herself, that her time may come, and that makes idols against herself to defile her!
- American Standard Version (ASV)
- And thou shalt say, Thus saith the Lord Jehovah: A city that sheddeth blood in the midst of her, that her time may come, and that maketh idols against herself to defile her!
- Bible in Basic English (BBE)
- And you are to say, This is what the Lord has said: A town causing blood to be drained out in her streets so that her time may come, and making images in her to make her unclean!
- Darby Translation (DBY)
- and say, Thus saith the Lord Jehovah: A city that sheddeth blood in her midst, that her time may come, and maketh idols against herself to defile herself.
- Webster's Bible (WBS)
- Then say thou, Thus saith the Lord GOD; The city sheddeth blood in the midst of it, that her time may come, and maketh idols against herself to defile herself.
- Young's Literal Translation (YLT)
- and thou hast said: Thus said the Lord Jehovah: The city is shedding blood in its midst, For the coming in of its time, And it hath made idols on it for defilement.
Read in context
- 1ಇದಲ್ಲದೆ ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ--
- 2ಈಗ ಮನುಷ್ಯ ಪುತ್ರನೇ, ನೀನು ನ್ಯಾಯತೀರಿಸುವೆಯಾ? ರಕ್ತಾಪರಾಧ ವುಳ್ಳ ಪಟ್ಟಣಕ್ಕೆ ನ್ಯಾಯತೀರಿಸುವೆಯಾ ಹೌದು ಅದರ ಅಸಹ್ಯವಾದವುಗಳನ್ನೆಲ್ಲಾ ಅದಕ್ಕೆ ತಿಳಿಸುವಿ.
- 3ನೀನು ಹೇಳಬೇಕಾದದ್ದೇನಂದರೆ, ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಪಟ್ಟಣವು ಅದರ ಮಧ್ಯದಲ್ಲಿ ಅದರ ಕಾಲ ಬರುವ ಹಾಗೆ ರಕ್ತವನ್ನು ಚೆಲ್ಲುತ್ತದೆ. ತನ್ನನ್ನು ಅಶುದ್ಧ ಮಾಡುವ ಹಾಗೆ ತನ್ನಲ್ಲಿ ವಿಗ್ರಹಗಳನ್ನು ಮಾಡಿಕೊಂಡಿದೆ.
- 4ನೀನು ಚೆಲ್ಲಿದ ನಿನ್ನ ರಕ್ತದಿಂದ ನಿನಗೆ ಅಪರಾಧ ಬಂದಿತು; ನೀನು ಮಾಡಿದ ನಿನ್ನ ವಿಗ್ರಹಗಳಿಂದ ನೀನು ಅಶುದ್ಧವಾದೆ; ನಿನ್ನ ದಿನಗಳನ್ನು ಸವಿಾಪಿಸಿರುವೆ; ನಿನ್ನ ವರುಷಗಳನ್ನು ಮುಟ್ಟಿರುವೆ. ಆದದರಿಂದ ನಿನ್ನನ್ನು ಅನ್ಯಜನಾಂಗಗಳಿಗೆ ನಾಚಿಕೆ ಯಾಗಿಯೂ ಎಲ್ಲಾ ದೇಶಗಳಿಗೆ ನಿಂದೆಯಾಗಿಯೂ ಮಾಡಿದ್ದೇನೆ.
- 5ಅಶುದ್ಧ ಹೆಸರುಳ್ಳವಳೇ, ಬಹಳ ತೊಂದರೆಗೊಳಗಾದವಳೇ, ನಿನಗೆ ಹತ್ತಿರದವರೂ ದೂರದವರೂ ನಿಂದಿಸುವರು.
Cross references
- Ezekiel 22:27 ಯೆಹೆಜ್ಕೇಲನು 22:27ಅಲ್ಲಿನ ಪ್ರಧಾನರು ಸುಲಿಗೆಗಾಗಿ ರಕ್ತ ಸುರಿಸಿ ಪ್ರಾಣ ಗಳನ್ನು ನುಂಗುವ ಹಾಗೆ ಬೇಟೆಯ ತೋಳಗಳಂತಿ ದ್ದಾರೆ.
- 2 Kings 21:2–9 2 ಅರಸುಗಳು 21:2–9ಕರ್ತನು ಇಸ್ರಾಯೇಲಿನ ಮಕ್ಕಳ ಮುಂದೆ ಹೊರಡಿಸಿದ ಅನ್ಯ ಜನಾಂಗಗಳ ಅಸಹ್ಯವಾದವುಗಳ ಹಾಗೆಯೇ ಅವನು ಕರ್ತನ ದೃಷ್ಟಿಗೆ ಕೆಟ್ಟದ್ದನ್ನು ಮಾಡಿದನು. ಅವನು ತನ್ನ ತಂದೆಯಾದ ಹಿಜ್ಕೀಯನು ನಾಶಮಾಡಿದ ಉನ್ನತ ಸ್ಥಳಗಳನ್ನು ತಿರಿಗಿ ಕಟ್ಟಿಸಿ ಬಾಳನಿಗೆ ಬಲಿಪೀಠ ಗಳನ್ನು ಉಂಟುಮಾಡಿ ಇಸ್ರಾಯೇಲಿನ ಅರಸನಾದ ಅಹಾಬನು ಮಾಡಿದ ಹಾಗೆ ವಿಗ್ರಹದ ತೋಪನ್ನು ಮಾಡಿ ಆಕಾಶದ ಎಲ್ಲಾ ಸೈನ್ಯಕ್ಕೆ ಅಡ್ಡಬಿದ್ದು ಅವುಗಳನ್ನು ಸೇವಿಸಿದನು. ಇದಲ್ಲದೆ ಯೆರೂಸಲೇಮಿನಲ್ಲಿ ನನ್ನ ನಾಮವನ್ನು ಇರಿಸುವೆನೆಂದು ಕರ್ತನು ಯಾವದನ್ನು ಕುರಿತು ಹೇಳಿದ್ದನೋ ಆ ಕರ್ತನ ಮನೆಯಲ್ಲಿ ಅವನು ಬಲಿಪೀಠಗಳನ್ನು ಕಟ್ಟಿಸಿದನು. ಕರ್ತನ ಮನೆಯ ಎರಡು ಅಂಗಳಗಳಲ್ಲಿ ಆಕಾಶದ ಎಲ್ಲಾ ಸೈನ್ಯಕ್ಕೋಸ್ಕರ ಬಲಿಪೀಠಗಳನ್ನು ಕಟ್ಟಿಸಿದನು. ಅವನು ತನ್ನ ಮಗನನ್ನು ಬೆಂಕಿಯಲ್ಲಿ ದಾಟುವಂತೆ ಮಾಡಿದನು; ಮೇಘ ಮಂತ್ರ ಗಳನ್ನೂ ಸರ್ಪಮಂತ್ರಗಳನ್ನೂ ಮಾಡಿದನು; ಯಕ್ಷಿಣಿ ಗಾರರ ಬಳಿಯಲ್ಲೂ ಮಂತ್ರಜ್ಞರ ಬಳಿಯಲ್ಲೂ ವಿಚಾರಿ ಸಿದನು; ಕರ್ತನಿಗೆ ಕೋಪವನ್ನು ಎಬ್ಬಿಸಲು ಆತನ ದೃಷ್ಟಿಯಲ್ಲಿ ಅತ್ಯಂತ ಕೆಟ್ಟತನವನ್ನು ಮಾಡಿದನು. ಈ ಮನೆಯಲ್ಲಿಯೂ ಇಸ್ರಾಯೇಲಿನ ಸಕಲ ಗೋತ್ರಗಳ ಲ್ಲಿಯೂ ನಾನು ಆದುಕೊಂಡ ಯೆರೂಸಲೇಮಿನ ಲ್ಲಿಯೂ ನನ್ನ ನಾಮವನ್ನು ಯುಗಯುಗಕ್ಕೂ ಇರುವಂತೆ ಮಾಡುವೆನೆಂದು ಕರ್ತನು ದಾವೀದನಿಗೂ ಅವನ ಮಗನಾದ ಸೊಲೊಮೋನನಿಗೂ ಯಾವದನ್ನು ಕುರಿತು ಹೇಳಿದ್ದನೋ ಆ ಮನೆಯಲ್ಲಿ ತಾನು ಮಾಡಿದ ತೋಪಿನ ಕೆತ್ತಿದ ವಿಗ್ರಹವನ್ನು ಇಟ್ಟನು. ಕರ್ತನು --ನಾನು ಅವರಿಗೆ ಆಜ್ಞಾಪಿಸಿದ ಎಲ್ಲಾದರ ಪ್ರಕಾರವೂ ನನ್ನ ಸೇವಕನಾದ ಮೋಶೆಯು ಅವರಿಗೆ ಆಜ್ಞಾಪಿಸಿದ ಎಲ್ಲಾ ನ್ಯಾಯಪ್ರಮಾಣದ ಪ್ರಕಾರವೂ ಮಾಡಿ ಅವುಗಳನ್ನು ಅವರು ಕೈಕೊಂಡರೆ ನಾನು ಅವರ ತಂದೆಗಳಿಗೆ ಕೊಟ್ಟ ದೇಶದೊಳಗಿಂದ ಅವರ ಪಾದಗಳು ಇನ್ನು ಕದಲುವಂತೆ ಮಾಡುವದಿಲ್ಲವೆಂದು ಹೇಳಿದನು. ಆದರೆ ಅವರು ಕೇಳದೆ ಹೋದರು; ಕರ್ತನು ಇಸ್ರಾಯೇಲ್ ಮಕ್ಕಳ ಮುಂದೆ ನಾಶಮಾಡಿದ ಜನಾಂಗಗಳ ಕೆಟ್ಟತನಕ್ಕಿಂತ ಅಧಿಕ ವಾಗಿ ಮಾಡಲು ಮನಸ್ಸೆಯು ಅವರನ್ನು ಮಾರ್ಗ ತಪ್ಪಿಸಿದನು.
- Jeremiah 2:1–3 ಯೆರೆಮೀಯ 2:1–3ಇದಲ್ಲದೆ ಕರ್ತನ ವಾಕ್ಯವು ನನಗೆ ಉಂಟಾಗಿ ಹೇಳಿದ್ದೇನಂದರೆ-- ನೀನು ಹೋಗಿ ಯೆರೂಸಲೇಮಿನ ಕಿವಿಗಳಲ್ಲಿ ಕೂಗಿ ಹೇಳ ಬೇಕಾದದ್ದೇನಂದರೆ, ಕರ್ತನು ಹೀಗೆ ಹೇಳುತ್ತಾನೆ --ನಾನು ನಿನ್ನನ್ನು ನಿನ್ನ ಯೌವನದ ವಾತ್ಸಲ್ಯವನ್ನೂ ನಿನ್ನ ನಿಶ್ಚಿತಾರ್ಥದ ಪ್ರೀತಿಯನ್ನೂ ನೀನು ಅರಣ್ಯದಲ್ಲಿ ಬಿತ್ತಲ್ಪಡದ ದೇಶದಲ್ಲಿ ನನ್ನನ್ನು ಹಿಂಬಾಲಿಸಿದ್ದನ್ನೂ ಜ್ಞಾಪಕಮಾಡಿಕೊಳ್ಳುತ್ತೇನೆ. ಇಸ್ರಾಯೇಲು ಕರ್ತನಿಗೆ ಪರಿಶುದ್ಧವೂ ಆತನ ಹುಟ್ಟುವಳಿಯ ಪ್ರಥಮ ಫಲವೂ ಆಗಿತ್ತು; ಅದನ್ನು ತಿಂದುಬಿಟ್ಟವರೆಲ್ಲರೂ ಅಪರಾಧಿ ಗಳಾಗುವರು; ಅವರಿಗೆ ಕೇಡು ಬರುವದೆಂದು ಕರ್ತನು ಅನ್ನುತ್ತಾನೆ.
- Ezekiel 12:25 ಯೆಹೆಜ್ಕೇಲನು 12:25ನಾನೇ ಕರ್ತನು, ನಾನೇ ಮಾತನಾಡುತ್ತೇನೆ. ನಾನು ಆಡುವ ಮಾತು ನೆರವೇರುವದು, ಅದು ಇನ್ನು ನಿಧಾನವಾಗುವದಿಲ್ಲ. ಓ ತಿರುಗಿ ಬೀಳುವ ಮನೆತನ ದವರೇ, ನಿಮ್ಮ ದಿವಸಗಳಲ್ಲಿ ನಾನು ನುಡಿದದ್ದನ್ನು ನಡಿಸುವೆನೆಂದು ದೇವರಾದ ಕರ್ತನು ಹೇಳುತ್ತಾನೆ.
- Ezekiel 24:6–9 ಯೆಹೆಜ್ಕೇಲನು 24:6–9ಆದಕಾರಣ ದೇವರಾದ ಕರ್ತನು ಹೀಗೆ ಹೇಳು ತ್ತಾನೆ; ರಕ್ತಮಯವಾದ ಆ ಪಟ್ಟಣಕ್ಕೆ ಅಯ್ಯೋ! ಯಾವದರ ಕಲ್ಮಶವು ಹೊರಗೆ ಬಾರದೆ ಅದರಲ್ಲಿ ಉಳಿದಿರುವದೋ ಆ ಹಂಡೆಗೆ ಅಯ್ಯೋ, ಅದರಿಂದ ತುಂಡು ತುಂಡಾಗಿ ಹೊರಗೆ ತೆಗೆ; ಆಯ್ಕೆಯ ಚೀಟಿಯು ಅದರ ಮೇಲೆ ಬೀಳದಿರಲಿ. ಅದರ ರಕ್ತವು ಅದರ ಮಧ್ಯದಲ್ಲಿದೆ; ಅದು ಅದನ್ನು ಬಂಡೆಯ ತುದಿಯಲ್ಲಿ ಇಟ್ಟಿದೆ; ದೂಳು ಮುಚ್ಚುವ ಹಾಗೆ ನೆಲದ ಮೇಲೆ ಚೆಲ್ಲಲಿಲ್ಲ; ಮುಯ್ಯಿಗೆಮುಯ್ಯಿ ತೀರಿಸುವದಕ್ಕೆ ರೋಷ ವನ್ನೆಬ್ಬಿಸುವ ಹಾಗೆ ನಾನು ಅದರ ರಕ್ತಾಪರಾಧವನ್ನು ಮುಚ್ಚಿಬಿಡದಂತೆ ಬಂಡೆಯ ತುದಿಯ ಮೇಲೆ ಇಟ್ಟಿ ದ್ದೇನೆ; ಆದದರಿಂದ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಆ ರಕ್ತಾಪರಾಧವುಳ್ಳ ಪಟ್ಟಣವು ಹಾಳಾ ಗಲಿ, ನಾನೇ ಬೆಂಕಿಯನ್ನು ರಾಶಿಯಾಗಿ ಹೆಚ್ಚಿಸುವೆನು.
- Ezekiel 23:45 ಯೆಹೆಜ್ಕೇಲನು 23:45ನೀತಿ ಯುಳ್ಳ ಮನುಷ್ಯರು ಅವರಿಗೆ ನ್ಯಾಯತೀರಿಸಿ ವ್ಯಭಿ ಚಾರಿಣಿಯರಿಗೂ ರಕ್ತಸುರಿಸುವ ಹೆಂಗಸರಿಗೂ ತಕ್ಕ ದಂಡನೆಯನ್ನು ವಿಧಿಸುವರು; ಅವರು ವ್ಯಭಿಚಾರಿಣಿ ಯರು, ಅವರ ಕೈ ರಕ್ತವಾಗಿದೆ.
- Romans 2:5 ರೋಮಾಪುರದವರಿಗೆ 2:5ಹೀಗೆ ನಿನ್ನ ಕಾಠಿಣ್ಯತೆ ಮತ್ತು ಪಶ್ಚಾತ್ತಾಪವಿಲ್ಲದ ಹೃದಯದಿಂದ ಉಗ್ರತೆಯ ದಿನಕ್ಕಾಗಿಯೂ ದೇವರ ನೀತಿಯುಳ್ಳ ನ್ಯಾಯತೀರ್ವಿಕೆಯ ಪ್ರತ್ಯಕ್ಷತೆಗಾಗಿಯೂ ದೇವರ ಕೋಪವನ್ನು ನಿನಗೋಸ್ಕರ ಕೂಡಿಸಿಟ್ಟುಕೊಳ್ಳುತ್ತಾ ಇದ್ಧೀ.
- Ezekiel 23:37 ಯೆಹೆಜ್ಕೇಲನು 23:37ಹೇಗಂದರೆ, ಅವರು ವ್ಯಭಿಚಾರ ಮಾಡಿದ್ದಾರೆ, ರಕ್ತವು ಅವರ ಕೈಗಳಲ್ಲಿ ಅದೆ; ತಮ್ಮ ವಿಗ್ರಹಗಳಿಂದ ವ್ಯಭಿಚಾರ ಮಾಡಿದ್ದಾರೆ, ನನಗೆ ಹೆತ್ತ ತಮ್ಮ ಗಂಡು ಮಕ್ಕಳನ್ನು ಆ ವಿಗ್ರಹಗಳಿಗೆ ಬಲಿಯಾಗಿ ಕೊಟ್ಟಿದ್ದಾರೆ.
- 2 Peter 2:3 2 ಪೇತ್ರನು 2:3ಅವರು ದ್ರವ್ಯಾಶೆಯುಳ್ಳವರಾಗಿ ಕಲ್ಪನೆಯ ಮಾತು ಗಳನ್ನು ಹೇಳುತ್ತಾ ನಿಮ್ಮಿಂದ ಲಾಭವನ್ನು ಸಂಪಾದಿಸ ಬೇಕೆಂದಿರುವರು. ಅಂಥವರಿಗೆ ಬಹಳ ಕಾಲದಿಂದಿದ್ದ ತೀರ್ಪು ತಡವಾಗುವದಿಲ್ಲ. ಅವರಿಗಾಗುವ ನಾಶನವು ತೂಕಡಿಸುವದಿಲ್ಲ.
- Zephaniah 3:3 ಚೆಫನ್ಯ 3:3ಅದರ ಮಧ್ಯದಲ್ಲಿರುವ ಪ್ರಧಾನರುಗಳು ಗರ್ಜಿಸುವ ಸಿಂಹಗಳಾಗಿದ್ದಾರೆ; ಅದರ ನ್ಯಾಯಾಧಿಪತಿಗಳು ಸಂಜೆಯ ತೋಳಗಳಾಗಿದ್ದಾರೆ; ಮರುದಿನದ ವರೆಗೂ ಕಡಿಯುವದಕ್ಕೆ ಎಲುಬುಗಳಿಲ್ಲ.
- Ezekiel 22:6 ಯೆಹೆಜ್ಕೇಲನು 22:6ಇಗೋ ಇಸ್ರಾ ಯೇಲಿನ ಪ್ರಭುಗಳಲ್ಲಿ ಪ್ರತಿಯೊಬ್ಬನು ತನ್ನ ತನ್ನ ಶಕ್ತ್ಯಾನುಸಾರವಾಗಿ ರಕ್ತವನ್ನು ನಿನ್ನ ಮೇಲೆ ಚೆಲ್ಲುತ್ತಲೇ ಇದ್ದಾನೆ.
- Ezekiel 7:2–12 ಯೆಹೆಜ್ಕೇಲನು 7:2–12ಮನುಷ್ಯಪುತ್ರನೇ, ದೇವರಾದ ಕರ್ತನು ಇಸ್ರಾ ಯೇಲ್ ದೇಶಕ್ಕೆ ಹೀಗೆ ಹೇಳುತ್ತಾನೆ--ಅಂತ್ಯವು ಬಂದಿದೆ; ಈ ದೇಶದ ನಾಲ್ಕು ಮೂಲೆಗಳಲ್ಲೂ ಅಂತ್ಯವು ಬಂದಿದೆ. ಈಗ ನಿನ್ನ ಮೇಲೂ ಅಂತ್ಯವು ಬಂದಿದೆ ಮತ್ತು ನನ್ನ ಕೋಪವನ್ನು ನಿನ್ನ ಮೇಲೆ ಕಳುಹಿಸುತ್ತೇನೆ; ನಿನ್ನ ಮಾರ್ಗಗಳ ಪ್ರಕಾರ ನಿನಗೆ ನ್ಯಾಯತೀರಿಸುತ್ತೇನೆ. ನಿನ್ನ ಎಲ್ಲಾ ಅಸಹ್ಯಗಳಿಗೋಸ್ಕರ ನಿನ್ನ ಮೇಲೆ ಮುಯ್ಯಿ ತೀರಿಸುವೆನು. ನನ್ನ ಕಣ್ಣುಗಳು ನಿನ್ನನ್ನು ಕಟಾಕ್ಷಿಸುವದಿಲ್ಲ; ನಾನು ನಿನ್ನನ್ನು ಕನಿಕರಿಸು ವದೂ ಇಲ್ಲ, ಆದರೆ ನಿನ್ನ ಮಾರ್ಗಗಳ ಪ್ರಕಾರ ನಿನ್ನ ಮೇಲೆ ಮುಯ್ಯಿ ತೀರಿಸುತ್ತೇನೆ, ನಿನ್ನ ಅಸಹ್ಯಗಳು ನಿನ್ನ ಮಧ್ಯೆ ಇರುವವು, ನಾನೇ ಕರ್ತನೆಂದು ನಿನಗೆ ತಿಳಿಯುವದು. ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಕೇಡು ಒಂದೇ ಒಂದು ಕೇಡು, ಇಗೋ, ಬಂತು. ಅಂತ್ಯವು ಬಂತು. ಅಂತ್ಯವು ಬಂದು ಅದು ನಿನಗೋಸ್ಕರ ಕಾಯುತ್ತಾ ಇದೆ. ಇಗೋ, ಅದು ಬಂತು. ಓ ದೇಶದಲ್ಲಿ ವಾಸಿಸುವವನೇ, ನಿನಗಾಗಿ ಮುಂಜಾನೆ ಬಂತು, ಕಾಲವು ಬಂತು, ತೊಂದರೆಯ ದಿನವು ಹತ್ತಿರವಾಯಿತು ಮತ್ತು ಪರ್ವತಗಳ ಆರ್ಭಟದ ಧ್ವನಿ ಇಲ್ಲ. ಈಗ ಸ್ವಲ್ಪ ಹೊತ್ತಿನಲ್ಲಿ ನನ್ನ ಉಗ್ರವನ್ನು ನಿನ್ನ ಮೇಲೆ ಸುರಿಯುವೆನು; ನನ್ನ ಕೋಪವನ್ನು ನಿನ್ನ ಮೇಲೆ ತೀರಿಸಿಬಿಡುವೆನು; ನಾನು ನಿನ್ನ ಮಾರ್ಗಗಳ ಪ್ರಕಾರ ಮುಯ್ಯಿ ತೀರಿಸುವೆನು; ನಿನ್ನ ಎಲ್ಲಾ ಅಸಹ್ಯಗಳ ಪ್ರಕಾರ ನಿನ್ನ ಮೇಲೆ ಮುಯ್ಯಿ ತೀರಿಸುವೆನು. ನನ್ನ ಕಣ್ಣು ಕಟಾಕ್ಷಿಸುವದಿಲ್ಲ; ನಾನು ನಿನ್ನನ್ನು ಕನಿಕರಿಸುವದೂ ಇಲ್ಲ, ನಿನ್ನ ಮಾರ್ಗಗಳಿಗೂ ನಿನ್ನ ಮಧ್ಯದಲ್ಲಿರುವ ಅಸಹ್ಯಗಳಿಗೂ ತಕ್ಕದ್ದನ್ನು ನಿನಗೆ ಮುಯ್ಯಿ ತೀರಿಸುತ್ತೇನೆ. ಆಗ ಕರ್ತನಾದ ನಾನೇ ಹೊಡೆಯುತ್ತಿರುವನೆಂದು ನಿನಗೆ ತಿಳಿಯುವದು. ಇಗೋ, ಆ ದಿನವು ಬಂತು, ಮುಂಜಾನೆ ಹೊರಟುಹೋಯಿತು. ಕೋಲು ಚಿಗು ರಿತು, ಗರ್ವ ಅರಳಿತು. ಬಲಾತ್ಕಾರವು ದುಷ್ಟತ್ವದ ಕೋಲಾಗಿ ಎದ್ದಿತು; ಅವರಲ್ಲಿಯೂ ಅವರ ಜನ ಸಮೂಹದಲ್ಲಿಯೂ ಅವರ ಸಂಪತ್ತಿನಲ್ಲಿಯೂ ಏನೂ ಉಳಿಯುವದಿಲ್ಲ; ಅವರಿಗೋಸ್ಕರ ಗೋಳಾಟವೂ ಇರುವದಿಲ್ಲ. ಕಾಲವು ಬಂತು, ದಿನವು ಸವಿಾಪ ವಾಯಿತು; ಕೊಂಡುಕೊಳ್ಳುವವನಿಗೆ ಸಂತೋಷವಿಲ್ಲ ದಿರಲಿ, ಮಾರುವವನು ದುಃಖಿಸದಿರಲಿ; ಯಾಕಂದರೆ ಎಲ್ಲಾ ಜನಸಮೂಹದ ಮೇಲೆ ರೌದ್ರವಿದೆ.