Ezekiel · chapter 22 · verse 8
Ezekiel 22:8 in Kannada
ನೀನು ನನ್ನ ಪರಿಶುದ್ಧ ಸಂಗತಿಗಳನು ತಿರಸ್ಕರಿಸಿ ನನ್ನ ಸಬ್ಬತ್ತುಗಳನ್ನು ಅಪವಿತ್ರಪಡಿಸಿದ್ದೀ.
Neenu nanna parishuddha sangatigalanu tiraskarisi nanna sabbattugalannu apavitrapadisiddee.
Ezekiel 22:8 in English
- King James Version (KJV)
- Thou hast despised mine holy things, and hast profaned my sabbaths.
- World English Bible (WEB)
- You have despised my holy things, and have profaned my Sabbaths.
- American Standard Version (ASV)
- Thou hast despised my holy things, and hast profaned my sabbaths.
- Bible in Basic English (BBE)
- You have made little of my holy things, and have made my Sabbaths unclean.
- Darby Translation (DBY)
- Thou hast despised my holy things, and hast profaned my sabbaths.
- Webster's Bible (WBS)
- Thou hast despised my holy things, and hast profaned my sabbaths.
- Young's Literal Translation (YLT)
- My holy things thou hast despised, And My sabbaths thou hast polluted.
Read in context
- 6ಇಗೋ ಇಸ್ರಾ ಯೇಲಿನ ಪ್ರಭುಗಳಲ್ಲಿ ಪ್ರತಿಯೊಬ್ಬನು ತನ್ನ ತನ್ನ ಶಕ್ತ್ಯಾನುಸಾರವಾಗಿ ರಕ್ತವನ್ನು ನಿನ್ನ ಮೇಲೆ ಚೆಲ್ಲುತ್ತಲೇ ಇದ್ದಾನೆ.
- 7ನಿನ್ನಲ್ಲಿ ತಂದೆಯನ್ನೂ ತಾಯಿಯನ್ನೂ ಅಲಕ್ಷ್ಯ ಮಾಡಿದ್ದಾರೆ; ನಿನ್ನಲ್ಲಿ ಅಪರಿಚಿತರಿಗೆ ಬಲಾತ್ಕಾರ ಮಾಡಿದ್ದಾರೆ; ನಿನ್ನಲ್ಲಿ ದಿಕ್ಕಿಲ್ಲದವನನ್ನೂ ವಿಧವೆಯನ್ನೂ ಪೀಡಿಸಿದ್ದಾರೆ.
- 8ನೀನು ನನ್ನ ಪರಿಶುದ್ಧ ಸಂಗತಿಗಳನು ತಿರಸ್ಕರಿಸಿ ನನ್ನ ಸಬ್ಬತ್ತುಗಳನ್ನು ಅಪವಿತ್ರಪಡಿಸಿದ್ದೀ.
- 9ನಿನ್ನಲ್ಲಿ ರಕ್ತಚೆಲ್ಲುವ ಹಾಗೆ ಚಾಡಿ ಹೇಳುವ ಜನ ಇದ್ದಾರೆ; ಬೆಟ್ಟಗಳ ಮೇಲೆ ತಿನ್ನುವವರಿದ್ದಾರೆ; ದುರಾ ಚಾರಿಗಳು ನಿನ್ನ ಮಧ್ಯದಲ್ಲಿದ್ದಾರೆ.
- 10ನಿನ್ನಲ್ಲಿ ತಂದೆಯ ಬೆತ್ತಲೆತನವನ್ನು ಹೊರಗೆಡವಿದ್ದಾರೆ; ನಿನ್ನಲ್ಲಿ ಮುಟ್ಟಾಗಿ ಪ್ರತ್ಯೇಕವಾಗಿರುವವರನ್ನು ಕೂಡಿದ್ದಾರೆ;
Cross references
- Ezekiel 23:38–39 ಯೆಹೆಜ್ಕೇಲನು 23:38–39ಇದಲ್ಲದೆ ಇದನ್ನು ಮಾಡಿದ ದಿನದಲ್ಲಿಯೇ ನನ್ನ ಪರಿಶುದ್ಧಸ್ಥಳವನ್ನು ಅಪವಿತ್ರಪಡಿಸಿ ನನ್ನ ಸಬ್ಬತ್ತುಗಳನ್ನು ಕೆಡಿಸಿದ್ದಾರೆ. ತಮ್ಮ ಮಕ್ಕಳನ್ನು ವಿಗ್ರಹಗಳಿಗೋಸ್ಕರ ಕೊಂದು ಹಾಕಿದ ಮೇಲೆ ಅದೇ ದಿನದಲ್ಲಿ ನನ್ನ ಪರಿಶುದ್ಧ ಸ್ಥಳವನ್ನು ಕೆಡಿಸುವದಕ್ಕೆ ಬಂದರು. ಇಗೋ, ಅವರು ನನ್ನ ಆಲಯದ ಮಧ್ಯದಲ್ಲಿಯೇ ಹೀಗೆ ಮಾಡಿದ್ದಾರೆ;
- Ezekiel 20:13 ಯೆಹೆಜ್ಕೇಲನು 20:13ಆದರೆ ಇಸ್ರಾಯೇಲಿನ ಮನೆತನದವರು ಅರಣ್ಯದಲ್ಲಿಯೂ ನನಗೆ ವಿರುದ್ಧ ವಾಗಿ ತಿರುಗಿಬಿದ್ದರು; ಆಜ್ಞಾವಿಧಿಗಳನ್ನು ಅನುಸರಿಸುವ ಮನುಷ್ಯನು ಬದುಕುವನು. ಅವುಗಳಲ್ಲಿ ನಡೆಯದೆ ನನ್ನ ನ್ಯಾಯಗಳನ್ನು ಅಸಡ್ಡೆ ಮಾಡಿ ನನ್ನ ಸಬ್ಬತ್ ದಿನಗಳನ್ನು ಸಹ ಬಹಳವಾಗಿ ಅಪವಿತ್ರಪಡಿಸಿದರು; ಆಗ ನಾನು ಅವರ ಮೇಲೆ ನನ್ನ ರೋಷದಿಂದ ದಹಿಸಿಬಿಡುವೆನೆಂದು ಹೇಳಿದೆನು.
- Ezekiel 22:26 ಯೆಹೆಜ್ಕೇಲನು 22:26ಅದರ ಯಾಜಕರು ನನ್ನ ವಿಧಿಗಳನ್ನು ಭಂಗಪಡಿಸಿದ್ದಾರೆ; ನನ್ನ ಪರಿಶುದ್ಧ ವಸ್ತುಗಳನ್ನು ಅಪವಿತ್ರಪಡಿಸಿದ್ದಾರೆ; ಪರಿಶುದ್ಧ ವಾದದ್ದಕ್ಕೂ ಅಪವಿತ್ರವಾದದ್ದಕ್ಕೂ ಭೇದವೆಣಿಸಲಿಲ್ಲ; ಶುದ್ಧಾಶುದ್ಧ ವಿವೇಚನೆಯನ್ನು ಬೋಧಿಸಲಿಲ್ಲ, ನನ್ನ ಸಬ್ಬತ್ತುಗಳಿಗೆ ತಮ್ಮ ಕಣ್ಣುಗಳನ್ನು ಮರೆಮಾಡಿದ್ದಾರೆ. ಆದದರಿಂದ ನಾನು ಅವರಲ್ಲಿ ಅಪವಿತ್ರನಾದೆನು.
- Ezekiel 20:24 ಯೆಹೆಜ್ಕೇಲನು 20:24ಅವರು ನನ್ನ ನ್ಯಾಯಗಳಲ್ಲಿ ನಡೆಯದೆ, ನನ್ನ ನಿಯಮಗಳನ್ನು ಅಲಕ್ಷಿಸಿ ನನ್ನ ಸಬ್ಬತ್ತುಗಳನ್ನು ಅಪವಿತ್ರಪಡಿಸಿದರು; ತಮ್ಮ ಪಿತೃಗಳ ವಿಗ್ರಹಗಳ ಕಡೆಗೆ ಕಣ್ಣಿಟ್ಟಿದ್ದರು.
- Ezekiel 20:21 ಯೆಹೆಜ್ಕೇಲನು 20:21ಆದಾಗ್ಯೂ ಮಕ್ಕಳು ನನಗೆ ವಿರೋಧವಾಗಿ ತಿರುಗಿ ಬಿದ್ದರು; ಯಾವವುಗಳನ್ನು ಮನುಷ್ಯನು ಮಾಡಿದರೆ ಬದುಕುವನೋ ಆ ನನ್ನ ನಿಯಮಗಳಲ್ಲಿ ನಡೆಯಲಿಲ್ಲ ನನ್ನ ನ್ಯಾಯಗಳನ್ನು ಕೈಕೊಂಡುಮಾಡಲಿಲ್ಲ; ನನ್ನ ಸಬ್ಬತ್ತುಗಳನ್ನು ಅಪವಿತ್ರ ಪಡಿಸಿದಾಗ ಅವರ ಮೇಲೆ ನನ್ನ ರೋಷವನ್ನು ಸುರಿದುಬಿಡುವೆನೆಂದೂ ನನ್ನ ಕೋಪ ವನ್ನು ಅರಣ್ಯದಲ್ಲಿ ಅವರ ಮೇಲೆ ತೀರಿಸಿಬಿಡುವೆ ನೆಂದೂ ಹೇಳಿದೆನು.
- Amos 8:4–6 ಆಮೋಸ 8:4–6ಬಡವರನ್ನು ನುಂಗುವವರೇ, ದೇಶದ ಬಡವರನ್ನು ಮುಗಿಸಬೇಕೆಂದಿರುವವರೇ, ಇದನ್ನು ಕೇಳಿರಿ. ನಾವು ಧಾನ್ಯವನ್ನು ಮಾರುವ ಹಾಗೆ ಅಮಾವಾಸ್ಯೆಯು ಗೋಧಿ ಯನ್ನು ಇಡುವ ಹಾಗೆ ಸಬ್ಬತ್ತು ಯಾವಾಗ ತೀರುವದೆಂದೂ ಎಫವನ್ನು ಚಿಕ್ಕದಾಗಿಯು ಶೆಕೇಲನ್ನು ದೊಡ್ಡದಾಗಿಯು ಕಳ್ಳತ್ರಾಸುಗಳನ್ನು ಮೋಸಕ್ಕಾಗಿ ಮಾಡೋಣವೆಂದೂ ಬಡವರನ್ನು ಬೆಳ್ಳಿಗೆ ದರಿದ್ರ ರನ್ನು ಕೆರಗಳ ಜೋಡಿಗೆ ಕೊಂಡುಕೊಂಡು ಗೋಧಿಯ ಕಸವನ್ನು ಮಾರೋಣವೆಂದೂ ಹೇಳುತ್ತೀರಲ್ಲಾ?
- Malachi 1:12 ಮಲಾಕಿಯ 1:12ಆದರೆ ನೀವು--ಕರ್ತನ ಮೇಜು ಅಶುದ್ಧವಾ ದದ್ದೆಂದೂ ಅದರ ಫಲವೂ ಅದರ ಊಟವೂ ಹೀನ ವಾದದ್ದೆಂದೂ ಹೇಳಿ ಅದನ್ನು ಅಪವಿತ್ರಮಾಡಿದ್ದೀರಿ.
- Leviticus 19:30 ಯಾಜಕಕಾಂಡ 19:30ನನ್ನ ಸಬ್ಬತ್ತುಗಳನ್ನು ನೀನು ಕೈಕೊಳ್ಳಬೇಕು; ನನ್ನ ಪವಿತ್ರ ಸ್ಥಳವನ್ನು ಭಯಭಕ್ತಿಯಿಂದ ಕಾಣಬೇಕು; ನಾನೇ ಕರ್ತನು.
- Malachi 1:6–8 ಮಲಾಕಿಯ 1:6–8ಮಗನು ತಂದೆಯನ್ನು ದಾಸನು ಯಜಮಾನನನ್ನು ಸನ್ಮಾನಿಸುತ್ತಾನೆ; ನಾನು ತಂದೆಯಾಗಿದ್ದರೆ ನನ್ನ ಸನ್ಮಾನ ವೆಲ್ಲಿ? ನಾನು ಯಜಮಾನನಾಗಿದ್ದರೆ ನನ್ನ ಭಯವು ಎಲ್ಲಿ ಎಂದು ನನ್ನ ಹೆಸರನ್ನು ಅಸಡ್ಡೆ ಮಾಡುವ ಯಾಜಕರಾದ ನಿಮಗೆ ಸೈನ್ಯಗಳ ಕರ್ತನು ಹೇಳುತ್ತಾನೆ. ಆದರೆ ನೀವು--ನಿನ್ನ ಹೆಸರನ್ನು ಯಾವದರಲ್ಲಿ ನಾವು ಅಸಡ್ಡೆ ಮಾಡಿದ್ದೇವೆಂದು ಹೇಳುತ್ತೀರಿ. ನನ್ನ ಬಲಿಪೀಠದ ಮೇಲೆ ಅಪವಿತ್ರವಾದ ರೊಟ್ಟಿಯನ್ನು ಅರ್ಪಿಸಿ--ಯಾವದರಲ್ಲಿ ನಿನ್ನನ್ನು ನಾವು ಅಪವಿತ್ರ ಮಾಡಿದ್ದೇವೆಂದು ಹೇಳುತ್ತೀರಿ. ಕರ್ತನ ಮೇಜು ಹೀನವಾದದ್ದೆಂದು ನೀವು ಹೇಳುವದರಿಂದಲೇ. ಇದ ಲ್ಲದೆ ನೀವು ಕುರುಡಾದದ್ದನ್ನು ಬಲಿಗಾಗಿ ಅರ್ಪಿಸಿ ದರೆ ಅದು ಕೆಟ್ಟದ್ದಲ್ಲವೋ? ಕುಂಟಾದದ್ದನ್ನೂ ರೋಗ ವುಳ್ಳದ್ದನ್ನೂ ಅರ್ಪಿಸಿದರೆ ಅದು ಕೆಟ್ಟದ್ದಲ್ಲವೋ? ಸೈನ್ಯ ಗಳ ಕರ್ತನು--ಅದನ್ನು ನಿನ್ನ ದೊರೆಗೆ ಅರ್ಪಿಸು, ಅವನು ನಿನಗೆ ಮೆಚ್ಚುವನೋ? ಇಲ್ಲವೆ ನಿನಗೆ ಮುಖ ದಾಕ್ಷಿಣ್ಯ ತೋರಿಸುವನೋ?