Ezekiel · chapter 23 · verse 22
Ezekiel 23:22 in Kannada
ಆದದರಿಂದ ಒಹೊಲೀಬಳೇ, ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ಯಾರಿಂದ ನಿನ್ನ ಮನಸ್ಸು ಅಗಲಿಹೋಯಿತೋ ಆ ನಿನ್ನ ಪ್ರಿಯನನ್ನು ನಾನು ನಿನಗೆ ವಿರೋಧವಾಗಿ ಎಬ್ಬಿಸುತ್ತೇನೆ, ನಾನು ಅವರನ್ನು ಪ್ರತಿಯೊಂದು ಕಡೆಗೂ ವಿರೋಧವಾಗಿ ತರುತ್ತೇನೆ.
Aadadarinda oholeebale, devaraada kartanu heege heluttaane--igo, yaarinda ninna manassu agalihoyito aa ninna priyanannu naanu ninage virodhavaagi ebbisuttene, naanu avarannu pratiyondu kadegoo virodhavaagi taruttene.
Ezekiel 23:22 in English
- King James Version (KJV)
- Therefore, O Aholibah, thus saith the Lord GOD; Behold, I will raise up thy lovers against thee, from whom thy mind is alienated, and I will bring them against thee on every side;
- World English Bible (WEB)
- “Therefore, Oholibah, the Lord GOD says: ‘Behold, I will raise up your lovers against you, from whom your soul is alienated, and I will bring them against you on every side:
- American Standard Version (ASV)
- Therefore, O Oholibah, thus saith the Lord Jehovah: Behold, I will raise up thy lovers against thee, from whom thy soul is alienated, and I will bring them against thee on every side:
- Bible in Basic English (BBE)
- For this cause, O Oholibah, this is what the Lord has said: See, I will make your lovers come up against you, even those from whom your soul is turned away in disgust; and I will make them come up against you on every side;
- Darby Translation (DBY)
- Therefore, Oholibah, thus saith the Lord Jehovah: Behold, I will raise up thy lovers against thee, from whom thy soul is alienated, and I will bring them against thee on every side.
- Webster's Bible (WBS)
- Therefore, O Aholibah, thus saith the Lord GOD; Behold, I will raise up thy lovers against thee, from whom thy mind is alienated, and I will bring them against thee on every side;
- Young's Literal Translation (YLT)
- Therefore, O Aholibah, thus said the Lord Jehovah: Lo, I am stirring up thy lovers against thee, From whom thy soul hath been alienated, And have brought them in against thee from round about.
Read in context
- 20ಹೇಗಂದರೆ, ಕತ್ತೆಗಳ ಮಾಂಸದಂತೆ ಮಾಂಸ ವುಳ್ಳವರಾಗಿಯೂ ಕುದುರೆಗಳ ವೀರ್ಯದಂತೆ ವೀರ್ಯ ವುಳ್ಳವರಾಗಿಯೂ ಇರುವ ತನ್ನ ಉಪಪತಿಗಳನ್ನು ಮೋಹಿಸಿದರು.
- 21ಹೀಗೆ ಐಗುಪ್ತರಿಂದ ನಿನ್ನ ಯೌವ ನದ ಸ್ತನಗಳ ತೊಟ್ಟುಗಳನ್ನು ಒತ್ತಿಸಿಕೊಂಡು ನಿನ್ನ ಯೌವನದ ದುಷ್ಕರ್ಮವನ್ನು ನೆನಪಿಗೆ ತಂದುಕೋ.
- 22ಆದದರಿಂದ ಒಹೊಲೀಬಳೇ, ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ಯಾರಿಂದ ನಿನ್ನ ಮನಸ್ಸು ಅಗಲಿಹೋಯಿತೋ ಆ ನಿನ್ನ ಪ್ರಿಯನನ್ನು ನಾನು ನಿನಗೆ ವಿರೋಧವಾಗಿ ಎಬ್ಬಿಸುತ್ತೇನೆ, ನಾನು ಅವರನ್ನು ಪ್ರತಿಯೊಂದು ಕಡೆಗೂ ವಿರೋಧವಾಗಿ ತರುತ್ತೇನೆ.
- 23ಬಾಬೆಲಿನವರು, ಎಲ್ಲಾ ಕಸ್ದೀಯರು, ಪೆಕೋದಿನವರು, ಷೋಯದವರು ಕೋಯದವರು, ಮತ್ತು ಎಲ್ಲಾ ಅಶ್ಶೂರ್ಯರ ಜೊತೆಗೆ ಅವರೆಲ್ಲಾ ಅಪೇಕ್ಷಿಸುವಂತಹ ಯೌವನಸ್ಥರೂ ಸೈನ್ಯಾಧಿಪತಿಗಳೂ ಅಧಿಕಾರಸ್ಥರೂ ಯುದ್ಧಶಾಲಿಗಳೂ ಖ್ಯಾತಿಹೊಂದಿ ದವರೂ ಎಲ್ಲರೂ ಕುದುರೆಗಳ ಮೇಲೆ ಸವಾರಿಮಾಡಿ ದವರೇ.
- 24ಅವರೆಲ್ಲರೂ ರಥಗಳ ಸಂಗಡಲೂ ಬಂಡಿ ಗಳ ಸಂಗಡಲೂ ಜನಗಳ ಸಮೂಹದ ಸಂಗಡಲೂ ಬಲವುಳ್ಳವರಾಗಿ ನಿನಗೆ ವಿರುದ್ಧವಾಗಿ ಬರುವರು. ಸುತ್ತಲೂ ಖೇಡ್ಯವನ್ನೂ ಗುರಾಣಿಯನ್ನೂ ಶಿರಸ್ತ್ರಾಣ ವನ್ನೂ ನಿನಗೆ ವಿರುದ್ಧವಾಗಿರಿಸುವೆನು. ಇದಲ್ಲದೆ ನಾನು ಅವರ ಮುಂದೆ ನ್ಯಾಯವನ್ನು ಇಡುವೆನು; ಅವರು ತಮ್ಮ ನ್ಯಾಯಗಳ ಪ್ರಕಾರ ನಿನಗೆ ನ್ಯಾಯತೀರಿಸುವರು.
Cross references
- Ezekiel 16:37 ಯೆಹೆಜ್ಕೇಲನು 16:37ಇಗೋ, ನೀನು ಆನಂದ ಪಟ್ಟವರೊಂದಿಗೆ ಪ್ರೀತಿ ಮಾಡಿದವರೆ ಲ್ಲರನ್ನೂ ಹಗೆಮಾಡಿದವರೆಲ್ಲರನ್ನೂ ಸಹ ಕೂಡಿಸು ವೆನು; ನಾನು ಅವರನ್ನು ನಿನಗೆ ವಿರುದ್ಧವಾಗಿ ಸುತ್ತಲೂ ಕೂಡಿಸಿ ಅವರಿಗೆ ನಿನ್ನ ಬೆತ್ತಲೆಯನ್ನು ಪ್ರಕಟಪಡಿಸು ವೆನು. ಆಗ ಅವರು ನಿನ್ನ ಬೆತ್ತಲೆಯನ್ನು ನೋಡುವರು.
- Revelation 17:16 ಪ್ರಕಟನೆ 17:16ಮೃಗದ ಮೇಲೆ ನೀನು ನೋಡಿದ ಹತ್ತು ಕೊಂಬು ಗಳು ಆ ಜಾರ ಸ್ತ್ರೀಯನ್ನು ದ್ವೇಷಿಸಿ ಅವಳನ್ನು ಗತಿಗೆಟ್ಟ ವಳನ್ನಾಗಿಯೂ ಬಟ್ಟೆಯಿಲ್ಲದವಳನ್ನಾಗಿಯೂ ಮಾಡಿ ಅವಳ ಮಾಂಸವನ್ನು ತಿಂದು ಅವಳನ್ನು ಬೆಂಕಿಯಿಂದ ಸುಟ್ಟುಬಿಡುವವು.
- Isaiah 10:5–6 ಯೆಶಾಯ 10:5–6ಓ ನನ್ನ ಕೋಪದ ಕೋಲಾದ ಅಶ್ಶೂರವೇ, ಕೈಯಲ್ಲಿರುವ ಬೆತ್ತವು ನನ್ನ ರೌದ್ರವೇ. ನಾನು ಅವನನ್ನು ಭ್ರಷ್ಠಜನರಿಗೆ ವಿರುದ್ಧವಾಗಿ ಕಳುಹಿಸಿ ನನ್ನ ಕೋಪಕ್ಕೆ ಗುರಿಯಾದ (ನನ್ನ) ಪ್ರಜೆಯನ್ನು ಸೂರೆ ಮಾಡಿ ಕೊಳ್ಳೆಹೊಡೆದು ಬೀದಿಯ ಕೆಸರನ್ನೋ ಎಂಬಂತೆ ತುಳಿದು ಹಾಕಬೇಕೆಂದು ಅಪ್ಪಣೆ ಕೊಡು ವೆನು.
- Isaiah 39:3–4 ಯೆಶಾಯ 39:3–4ಆಗ ಪ್ರವಾದಿಯಾದ ಯೆಶಾಯನು ಅರಸನಾದ ಹಿಜ್ಕೀ ಯನ ಬಳಿಗೆ ಬಂದು ಅವನಿಗೆ--ಈ ಮನುಷ್ಯರು ಎಲ್ಲಿಂದ ನಿನ್ನ ಬಳಿಗೆ ಬಂದರು, ಅವರು ನಿನಗೆ ಏನು ಹೇಳಿದರು ಎಂದು ಕೇಳಲು, ಹಿಜ್ಕೀಯನು--ಅವರು ಬಹುದೂರ ದೇಶವಾದ ಬಾಬೆಲಿನಿಂದ ಬಂದರು ಎಂದು ಹೇಳಿದನು. ಅದಕ್ಕೆ ಅವನು ಅವನನ್ನು--ಅವರು ನಿನ್ನ ಮನೆಯಲ್ಲಿ ಏನನ್ನು ನೋಡಿದರು ಎಂದು ಕೇಳಲು, ಹಿಜ್ಕೀಯನು--ನನ್ನ ಮನೆಯಲ್ಲಿರುವದೆಲ್ಲ ವನ್ನು ಅವರು ನೋಡಿದರು; ನನ್ನ ಭಂಡಾರದಲ್ಲಿ ನಾನು ಅವರಿಗೆ ತೋರಿಸದೆ ಇದ್ದದ್ದು ಏನೂ ಇರು ವದಿಲ್ಲ ಎಂದು ಉತ್ತರಕೊಟ್ಟನು.
- Jeremiah 12:9–12 ಯೆರೆಮೀಯ 12:9–12ನನ್ನ ಸ್ವಾಸ್ತ್ಯವು ನನಗೆ ಚಿತ್ರ ವರ್ಣದ ಪಕ್ಷಿಯಾಯಿತು. ಸುತ್ತಲಾಗಿ ಪಕ್ಷಿಗಳು ಅದಕ್ಕೆ ವಿರೋಧವಾಗಿವೆ; ಬನ್ನಿ, ಹೊಲದ ಮೃಗಗಳ ನ್ನೆಲ್ಲಾ ಕೂಡಿಸಿರಿ, ತಿನ್ನುವದಕ್ಕೆ ಅವುಗಳನ್ನು ತನ್ನಿರಿ; ಅನೇಕ ಕುರುಬರು ನನ್ನ ದ್ರಾಕ್ಷೇ ತೋಟವನ್ನು ಕೆಡಿಸಿದ್ದಾರೆ, ನನ್ನ ಭಾಗವನ್ನು ತುಳಿದುಬಿಟ್ಟಿದ್ದಾರೆ, ನಾನು ಮೆಚ್ಚಿದ ಭಾಗವನ್ನು ಹಾಳಾದ ಅರಣ್ಯವಾಗ ಮಾಡಿದ್ದಾರೆ. ಅದನ್ನು ಹಾಳು ಮಾಡಿದ್ದಾರೆ; ಅದು ಹಾಳಾ ಗಿಯೇ ನನ್ನ ಕಡೆಗೆ ದುಃಖಿಸುತ್ತದೆ, ದೇಶವೆಲ್ಲಾ ಹಾಳಾ ಯಿತು. ಆದಾಗ್ಯೂ ಒಬ್ಬನಾದರೂ ಅದನ್ನು ಮನಸ್ಸಿಗೆ ತರುವದಿಲ್ಲ. ಅರಣ್ಯದಲ್ಲಿರುವ ಎಲ್ಲಾ ಉನ್ನತ ಸ್ಥಳಗಳ ಮೇಲೆ ಕೆಡಿಸುವವರು ಬಂದಿದ್ದಾರೆ; ಕರ್ತನ ಕತ್ತಿಯು ದೇಶದ ಒಂದು ಕಡೆಯಿಂದ ಇನ್ನೊಂದು ಕಡೆಯ ವರೆಗೂ ತಿಂದು ಬಿಡುತ್ತದೆ ಯಾವ ಮನುಷ್ಯನಿಗೂ ಸಮಾಧಾನವಿಲ್ಲ.
- Habakkuk 1:6–10 ಹಬಕ್ಕೂಕ 1:6–10ಇಗೋ, ನಾನು ಕಸ್ದೀಯರನ್ನು ಎಬ್ಬಿಸುತ್ತೇನೆ; ಅದು ಕಹಿಯಾದ ತೀವ್ರವಾದ ಜನಾಂಗವು; ತಮ್ಮದಲ್ಲದ ನಿವಾಸಗಳನ್ನು ವಶಮಾಡಿ ಕೊಳ್ಳುವದಕ್ಕೆ ವಿಶಾಲ ವಾದ ದೇಶದಲ್ಲಿ ಹಾದುಹೋಗುವದು. ಅವರು ಭಯಂಕರವಾದವರು ಮತ್ತು ಕ್ರೂರವಾದವರು; ಅವರ ನ್ಯಾಯವೂ ಘನತೆಯೂ ಅವರಿಂದಲೇ ಹೊರಡುತ್ತವೆ. ಅವರ ಕುದುರೆಗಳು ಸಹ ಚಿರತೆಗಳಿಗಿಂತ ವೇಗ ವಾಗಿಯೂ ಸಂಜೆಯ ತೋಳಗಳಿಗಿಂತ ಚುರುಕಾ ಗಿಯೂ ಅವೆ; ಅವರ ಕುದುರೆ ಸವಾರರು ತಾವೇ ಹರಡಿಕೊಳ್ಳುವರು; ಅವರ ಸವಾರರು ದೂರದಿಂದ ಬರುವರು; ತಿನ್ನುವದಕ್ಕೆ ತ್ವರೆಪಡುವ ಹದ್ದಿನಂತೆ ಹಾರಿಬರುವರು. ಅವರೆಲ್ಲರು ಹಿಂಸಿಸುವದಕ್ಕೆ ಬರುವರು; ಅವರ ಮುಖಗಳು ಮೂಡಣ ಗಾಳಿ ಯಂತೆಯೇ ತಿಂದುಬಿಡುವವು; ಸೆರೆಯವರನ್ನು ಮರ ಳಿನ ಹಾಗೆ ಕೂಡಿಸುವರು. ಅವರು ಅರಸರನ್ನು ಧಿಕ್ಕರಿಸುವರು; ಪ್ರಧಾನರು ಅವರಿಗೆ ಪರಿಹಾಸ್ಯ ಮಾಡುವರು. ಕೋಟೆಗಳಿಗೆಲ್ಲಾ ಕುಚೋದ್ಯ ಮಾಡು ವರು. ಮಣ್ಣನ್ನು ಕುಪ್ಪೆಮಾಡಿ ಅದನ್ನು ಹಿಡಿಯುವರು.
- Ezekiel 23:9 ಯೆಹೆಜ್ಕೇಲನು 23:9ಆದದರಿಂದ ನಾನು ಅವಳನ್ನು ಅವಳ ಪ್ರಿಯರಿಂದಲೂ ಒಪ್ಪಿಸುವ ಅವಳ ಅಶ್ಶೂರ್ಯರಿಂದಲೂ ಅವರೆಲ್ಲರಿಂದಲೂ ಮೋಹಿಸ ಲ್ಪಟ್ಟಳು;
- Ezekiel 23:28 ಯೆಹೆಜ್ಕೇಲನು 23:28ದೇವರಾದ ಕರ್ತನು ಹೀಗೆ ಹೇಳುತ್ತಾನೆ --ಇಗೋ, ನೀನು ಹಗೆಮಾಡುವವರ ಕೈಯಲ್ಲಿಯೂ ಯಾರ ಕಡೆಯಿಂದ ನಿನ್ನ ಮನಸ್ಸು ಅಗಲಿ ಹೋಯಿತೋ ಅವರ ಕೈಯಲ್ಲಿಯೂ ನಿನ್ನನ್ನು ಒಪ್ಪಿಸುತ್ತೇನೆ.
- Jeremiah 6:22–23 ಯೆರೆಮೀಯ 6:22–23ಕರ್ತನು ಹೀಗೆ ಹೇಳುತ್ತಾನೆ--ಇಗೋ, ಒಂದು ಜನವು ಉತ್ತರ ದೇಶದಿಂದ ಬರುತ್ತದೆ; ದೊಡ್ಡ ಜನಾಂಗವು ಭೂಮಿಯ ಮೇರೆಗಳಿಂದ ಎದ್ದು ಬರು ತ್ತದೆ. ಅವರು ಬಿಲ್ಲನ್ನೂ ಬಲ್ಲೆಯನ್ನೂ ಹಿಡಿದ ಕ್ರೂರಿಗಳಾಗಿದ್ದಾರೆ, ಕನಿಕರ ತೋರಿಸುವದಿಲ್ಲ; ಅವರ ಶಬ್ದವು ಸಮುದ್ರದ ಹಾಗೆ ಘೋಷಿಸುತ್ತದೆ; ಕುದುರೆ ಗಳ ಮೇಲೆ ಸವಾರಿ ಮಾಡುತ್ತಾರೆ; ಚೀಯೋನಿನ ಕುಮಾರಿಯೇ, ನಿನಗೆ ವಿರೋಧವಾಗಿ ಯುದ್ದ ಮಾಡುವ ಮನುಷ್ಯರಂತೆ ಸಿದ್ಧಮಾಡಿಕೊಂಡಿದ್ದಾರೆ;