Ezekiel · chapter 23 · verse 25
Ezekiel 23:25 in Kannada
ಇದಲ್ಲದೆ ನನ್ನ ಅಸೂಯೆಯನ್ನು ನಿನಗೆ ವಿರುದ್ಧವಾಗಿ ಬರಮಾಡುವೆನು; ಅವರು ನಿನ್ನಲ್ಲಿ ಕೋಪತೀರಿಸಿ ಕೊಳ್ಳುವರು; ನಿನ್ನ ಮೂಗನ್ನೂ ಕಿವಿಗಳನ್ನೂ ತೆಗೆದು ಹಾಕುವರು; ನಿನ್ನಲ್ಲಿ ಉಳಿದವರು ಕತ್ತಿಯಿಂದ ಬೀಳು ವರು; ನಿನ್ನ ಗಂಡು ಹೆಣ್ಣು ಮಕ್ಕಳನ್ನು ಅಪಹರಿಸುವರು; ನಿನ್ನಲ್ಲಿ ಉಳಿದವರೆಲ್ಲರೂ ಅಗ್ನಿಗೆ ಆಹುತಿಯಾಗುವರು.
Idallade nanna asooyeyannu ninage viruddhavaagi baramaaduvenu; avaru ninnalli kopateerisi kolluvaru; ninna moogannoo kivigalannoo tegedu haakuvaru; ninnalli ulidavaru kattiyinda beelu varu; ninna gandu hennu makkalannu apaharisuvaru; ninnalli ulidavarellaroo agnige aahutiyaaguvaru.
Ezekiel 23:25 in English
- King James Version (KJV)
- And I will set my jealousy against thee, and they shall deal furiously with thee: they shall take away thy nose and thine ears; and thy remnant shall fall by the sword: they shall take thy sons and thy daughters; and thy residue shall be devoured by the fire.
- World English Bible (WEB)
- I will set my jealousy against you, and they will deal with you in fury. They will take away your nose and your ears. Your remnant will fall by the sword. They will take your sons and your daughters; and the rest of you will be devoured by the fire.
- American Standard Version (ASV)
- And I will set my jealousy against thee, and they shall deal with thee in fury; they shall take away thy nose and thine ears; and thy residue shall fall by the sword: they shall take thy sons and thy daughters; and thy residue shall be devoured by the fire.
- Bible in Basic English (BBE)
- And my bitter feeling will be working against you, and they will take you in hand with passion; they will take away your nose and your ears, and the rest of you will be put to the sword: they will take your sons and daughters, and the rest of you will be burned up in the fire.
- Darby Translation (DBY)
- And I will set my jealousy against thee, and they shall deal furiously with thee: they shall cut off thy nose and thine ears, and thy remnant shall fall by the sword; they shall take thy sons and thy daughters; and thy residue shall be devoured by the fire.
- Webster's Bible (WBS)
- And I will set my jealousy against thee, and they shall deal furiously with thee: they shall take away thy nose and thy ears; and thy remnant shall fall by the sword: they shall take thy sons and thy daughters; and thy residue shall be devoured by the fire.
- Young's Literal Translation (YLT)
- And I have set My jealousy against thee, And they have dealt with thee in fury, Thy nose and thine ears they turn aside, And thy posterity by sword falleth, They, thy sons and thy daughters do take away, And thy posterity is devoured by fire.
Read in context
- 23ಬಾಬೆಲಿನವರು, ಎಲ್ಲಾ ಕಸ್ದೀಯರು, ಪೆಕೋದಿನವರು, ಷೋಯದವರು ಕೋಯದವರು, ಮತ್ತು ಎಲ್ಲಾ ಅಶ್ಶೂರ್ಯರ ಜೊತೆಗೆ ಅವರೆಲ್ಲಾ ಅಪೇಕ್ಷಿಸುವಂತಹ ಯೌವನಸ್ಥರೂ ಸೈನ್ಯಾಧಿಪತಿಗಳೂ ಅಧಿಕಾರಸ್ಥರೂ ಯುದ್ಧಶಾಲಿಗಳೂ ಖ್ಯಾತಿಹೊಂದಿ ದವರೂ ಎಲ್ಲರೂ ಕುದುರೆಗಳ ಮೇಲೆ ಸವಾರಿಮಾಡಿ ದವರೇ.
- 24ಅವರೆಲ್ಲರೂ ರಥಗಳ ಸಂಗಡಲೂ ಬಂಡಿ ಗಳ ಸಂಗಡಲೂ ಜನಗಳ ಸಮೂಹದ ಸಂಗಡಲೂ ಬಲವುಳ್ಳವರಾಗಿ ನಿನಗೆ ವಿರುದ್ಧವಾಗಿ ಬರುವರು. ಸುತ್ತಲೂ ಖೇಡ್ಯವನ್ನೂ ಗುರಾಣಿಯನ್ನೂ ಶಿರಸ್ತ್ರಾಣ ವನ್ನೂ ನಿನಗೆ ವಿರುದ್ಧವಾಗಿರಿಸುವೆನು. ಇದಲ್ಲದೆ ನಾನು ಅವರ ಮುಂದೆ ನ್ಯಾಯವನ್ನು ಇಡುವೆನು; ಅವರು ತಮ್ಮ ನ್ಯಾಯಗಳ ಪ್ರಕಾರ ನಿನಗೆ ನ್ಯಾಯತೀರಿಸುವರು.
- 25ಇದಲ್ಲದೆ ನನ್ನ ಅಸೂಯೆಯನ್ನು ನಿನಗೆ ವಿರುದ್ಧವಾಗಿ ಬರಮಾಡುವೆನು; ಅವರು ನಿನ್ನಲ್ಲಿ ಕೋಪತೀರಿಸಿ ಕೊಳ್ಳುವರು; ನಿನ್ನ ಮೂಗನ್ನೂ ಕಿವಿಗಳನ್ನೂ ತೆಗೆದು ಹಾಕುವರು; ನಿನ್ನಲ್ಲಿ ಉಳಿದವರು ಕತ್ತಿಯಿಂದ ಬೀಳು ವರು; ನಿನ್ನ ಗಂಡು ಹೆಣ್ಣು ಮಕ್ಕಳನ್ನು ಅಪಹರಿಸುವರು; ನಿನ್ನಲ್ಲಿ ಉಳಿದವರೆಲ್ಲರೂ ಅಗ್ನಿಗೆ ಆಹುತಿಯಾಗುವರು.
- 26ಇದಲ್ಲದೆ ನಿನ್ನ ವಸ್ತ್ರಗಳನ್ನು ತೆಗೆದುಹಾಕಿ, ನಿನ್ನ ಸೌಂದರ್ಯದ ಒಡವೆಗಳನ್ನು ಕಸಿದುಕೊಳ್ಳುವರು;
- 27ಹೀಗೆ ನಾನು ನಿನ್ನ ದುಷ್ಕರ್ಮವನ್ನು ನೀನು ಐಗುಪ್ತದಲ್ಲಿದ್ದಂದಿನಿಂದ ನಡೆಸಿದ ವ್ಯಭಿಚಾರವನ್ನು ನಿನ್ನಿಂದ ತೊಲಗಿಸುವೆನು; ಆಮೇಲೆ ನೀನು ಅವರ ಕಡೆಗೆ ಕಣ್ಣೆತ್ತದೆ, ಐಗುಪ್ತವನ್ನು ಜ್ಞಾಪಕಕ್ಕೆ ತರದೇ ಇರುವಿ.
Cross references
- Ezekiel 23:47 ಯೆಹೆಜ್ಕೇಲನು 23:47ಆ ಸಂಘದವರು ಅವರ ಮೇಲೆ ಕಲ್ಲೆಸೆದು ತಮ್ಮ ಕತ್ತಿಗಳಿಂದ ಕೊಯ್ದು ಅವರ ಕುಮಾರರನ್ನೂ ಕುಮಾರ್ತೆಯರನ್ನೂ ಕೊಂದು ಹಾಕಿ ಬೆಂಕಿಯಿಂದ ಅವರ ಮನೆಗಳನ್ನೆಲ್ಲಾ ಸುಟ್ಟು ಬಿಡುವರು.
- Ezekiel 20:47–48 ಯೆಹೆಜ್ಕೇಲನು 20:47–48ದಕ್ಷಿಣದ ಅರಣ್ಯಕ್ಕೆ ಹೇಳಬೇಕಾದ ದ್ದೇನಂದರೆ--ಕರ್ತನ ವಾಕ್ಯವನ್ನು ಕೇಳು, ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ನಿನ್ನಲ್ಲಿ ಬೆಂಕಿ ಹಚ್ಚುತ್ತೇನೆ; ಅದು ನಿನ್ನಲ್ಲಿರುವ ಎಲ್ಲಾ ಹಸೀ ಮರಗಳನ್ನು ಮತ್ತು ಎಲ್ಲಾ ಒಣಮರಗಳನ್ನು ತಿಂದುಬಿಡುವದು; ಉರಿಯುವ ಉರಿ ಆರಿಹೋಗು ವದಿಲ್ಲ; ದಕ್ಷಿಣ ಮೊದಲುಗೊಂಡು ಉತ್ತರದ ವರೆಗೂ ಎಲ್ಲಾ ಮುಖಗಳು ಅದರಲ್ಲಿ ಸುಟ್ಟು ಹೋಗುವವು. ಕರ್ತನಾದ ನಾನೇ ಅದನ್ನು ಹಚ್ಚಿದೆನೆಂದು ಶರೀರ ದಲ್ಲಿರುವವರೆಲ್ಲರೂ ತಿಳಿದುಕೊಳ್ಳುವರು! ಅದು ಆರಿ ಹೋಗುವ ದಿಲ್ಲ.ಆಗ ನಾನು ಹೇಳಿದ್ದೇನಂದರೆ --ಹಾ, ದೇವರಾದ ಕರ್ತನೇ, ಅವನು ಸಾಮ್ಯಗಳನ್ನು ಹೇಳುವದಿಲ್ಲವೇ ಎಂದು ನನ್ನ ವಿಷಯವಾಗಿ ಹೇಳುತ್ತಾರೆ.
- Ezekiel 5:13 ಯೆಹೆಜ್ಕೇಲನು 5:13ಈ ಪ್ರಕಾರ ನನ್ನ ಕೋಪವನ್ನು ತೀರಿಸಿಕೊಳ್ಳುವೆನು. ನನ್ನ ಉರಿಯನ್ನು ಅವರ ಮೇಲೆ ಶಾಂತಪಡಿಸಿ, ಸಮಾಧಾನ ಹೊಂದು ವೆನು; ಹೀಗೆ ನಾನು ನನ್ನ ಉರಿಯನ್ನು ಅವರ ಮೇಲೆ ತೀರಿಸಿದ ತರುವಾಯ ಕರ್ತನಾದ ನಾನು ನನ್ನ ಉದ್ದೇಶ ಪೂರ್ವಕವಾಗಿ ಮಾಡಿದ್ದೇನೆಂದು ಅವರಿಗೆ ಗೊತ್ತಾಗು ವದು.
- Ezekiel 16:38–42 ಯೆಹೆಜ್ಕೇಲನು 16:38–42ದಾಂಪತ್ಯವನ್ನು ಮುರಿದು ರಕ್ತ ಸುರಿಸುವಂಥ ಹೆಂಗಸರಿಗೆ ವಿಧಿಸುವಂಥ ತಕ್ಕ ದಂಡನೆಗಳನ್ನು ನಿನಗೂ ವಿಧಿಸಿ, ಕೋಪೋದ್ರೇಕದಿಂದಲೂ ರೋಷಾವೇಶ ದಿಂದಲೂ ನಿನಗೆ ರಕ್ತವನ್ನು ಸುರಿಸುವೆನು. ಇದಲ್ಲದೆ ನಿನ್ನನ್ನು ಅವರ ಕೈಗಳಲ್ಲಿ ಒಪ್ಪಿಸುವೆನು. ಅವರು ನಿನ್ನ ಎತ್ತರ ಸ್ಥಳಗಳನ್ನೆಲ್ಲಾ ಕೆಡವಿಹಾಕಿ ನಿನ್ನ ಉನ್ನತ ಸ್ಥಾನ ಗಳನ್ನು ಒಡೆದು ಬಿಡುವರು; ಅವರು ನಿನ್ನ ವಸ್ತ್ರಗಳನ್ನು ತೆಗೆದುಹಾಕಿ ನಿನ್ನ ಸೌಂದರ್ಯವುಳ್ಳ ಆಭರಣಗಳನ್ನು ಕಸಿದುಕೊಂಡು ನಿನ್ನನ್ನು ಬರೀ ಬೆತ್ತಲೆಯನ್ನಾಗಿ ಮಾಡಿ ಬಿಟ್ಟು ಹೋಗುವರು. ಅವರು ನಿನಗೆ ವಿರುದ್ಧವಾಗಿ ಒಂದು ಕೂಟವನ್ನು ಕರಕೊಂಡು ಬಂದು ಕಲ್ಲುಗಳನ್ನು ನಿನ್ನ ಮೇಲೆ ಎಸೆದು, ತಮ್ಮ ಕತ್ತಿಗಳಿಂದ ನಿನ್ನನ್ನು ತಿವಿಯುವರು. ಅವರು ನಿನ್ನ ಮನೆಗಳನ್ನು ಸುಟ್ಟು ಬಹಳ ಸ್ತ್ರೀಯರ ಕಣ್ಣುಗಳ ಮುಂದೆ ನಿನಗೆ ನ್ಯಾಯ ತೀರಿಸುವರು; ನೀನು ವ್ಯಭಿಚಾರ ಮಾಡುವದನ್ನು ನಾನು ನಿಲ್ಲಿಸುವೆನು; ಆಗ ನೀನು ಕೂಲಿ ಸಹ ಕೊಡುವದನ್ನು ನಿಲ್ಲಿಸುವೆನು; ಈ ರೀತಿ ನನ್ನ ಸಿಟ್ಟನ್ನು ನಿನ್ನಲ್ಲಿ ವಿಶ್ರಾಂತಿ ಪಡಿಸುತ್ತೇನೆ, ನನ್ನ ರೋಷವನ್ನು ನಿನ್ನ ಕಡೆಯಿಂದ ತೊಲಗಿಸುತ್ತೇನೆ; ಶಾಂತನಾಗಿ ನಿನ್ನ ಮೇಲೆ ಕೋಪ ಗೊಳ್ಳುವದಿಲ್ಲ.
- Ezekiel 8:1–18 ಯೆಹೆಜ್ಕೇಲನು 8:1–18ಆರನೇ ವರುಷದ ಆರನೆಯ ತಿಂಗಳಿನ ಐದನೆಯ ದಿನದಲ್ಲಿ ಆಗಿದ್ದೇನಂದರೆ--ನಾನೂ ಯೆಹೂದದ ಹಿರಿಯರೂ ನನ್ನ ಮನೆಯಲ್ಲಿ ಕುಳಿತುಕೊಂಡಿರುವಾಗ ಅಲ್ಲಿ ದೇವರಾದ ಕರ್ತನ ಹಸ್ತವು ನನ್ನ ಮೇಲೆ ಬಿತ್ತು. ಆಮೇಲೆ ನಾನು ನೋಡಲಾಗಿ ಇಗೋ, ಬೆಂಕಿಯಂತೆ ತೋರುವ ಒಬ್ಬನ ರೂಪವು ಕಾಣಿಸಿತು; ಅವನ ನಡುವಿನ ಮೇಲ್ಗಡೆಯೂ ಕೆಳಗಡೆಯೂ ಮೆರಗು ಮಾಡಿದ ಪೀತರತ್ನ ವರ್ಣದ ಹಾಗೆ ಹೊಳೆಯುತ್ತಿತ್ತು. ಕೈಯ ಹಾಗಿರುವ ಹಸ್ತವನ್ನು ಚಾಚಿ, ನನ್ನ ತಲೆಯ ಕೂದಲಿನಿಂದ ನನ್ನನ್ನು ಹಿಡಿ ದನು; ಆಗ ಆತ್ಮನು ನನ್ನನ್ನು ಭೂಮಿಗೂ ಆಕಾಶಕ್ಕೂ ಮಧ್ಯದಲ್ಲಿ ಎತ್ತಿ ನನ್ನನ್ನು ದೇವರದರ್ಶನಗಳಲ್ಲಿ ಯೆರೂ ಸಲೇಮಿಗೆ ಉತ್ತರದ ಕಡೆಗೆ ಎದುರಾಗಿರುವ ಒಳ ಬಾಗಲಿನ ಕಡೆಗೆ ಅಸೂಯೆ ಎಬ್ಬಿಸುವ ವಿಗ್ರಹವು ಇದ್ದಲ್ಲಿಗೆ ತೆಗೆದುಕೊಂಡು ಹೋದನು. ಇಗೋ, ಇಸ್ರಾ ಯೇಲಿನ ದೇವರ ಮಹಿಮೆಯು ನಾನು ಆ ಬಯಲು ಸೀಮೆಯಲ್ಲಿ ನೋಡಿದ ಆಕಾರದ ಪ್ರಕಾ ರವೇ ಅಲ್ಲಿ ಇತ್ತು. ಆಮೇಲೆ ಆತನು ನನಗೆ --ಮನುಷ್ಯಪುತ್ರನೇ, ಈಗ ಉತ್ತರದ ಕಡೆಗೆ ನಿನ್ನ ಕಣ್ಣುಗಳನ್ನು ಎತ್ತು ಅಂದಾಗ ನಾನು ಉತ್ತರದ ಕಡೆಗೆ ಕಣ್ಣುಗಳನ್ನೆತ್ತಿದೆನು; ಇಗೋ, ಉತ್ತರದಲ್ಲಿ ಯಜ್ಞ ವೇದಿಯ ಬಾಗಿಲಲ್ಲಿ ಅಸೂಯೆ ವಿಗ್ರಹವು ಪ್ರವೇಶ ದಲ್ಲಿತ್ತು. ಇದಲ್ಲದೆ ಆತನು ನನಗೆ ಹೇಳಿದ್ದೇನಂದರೆ --ಮನುಷ್ಯಪುತ್ರನೇ, ಅವರು ಮಾಡುತ್ತಿರುವದನ್ನು ನೋಡುತ್ತಿರುವಿಯಾ? ನಾನು ನನ್ನ ಪರಿಶುದ್ಧ ಸ್ಥಳವನ್ನು ಬಿಟ್ಟು ದೂರ ಹೋಗುವ ಹಾಗೆ ಇಸ್ರಾಯೇಲಿನ ಮನೆತನದವರು ಇಲ್ಲಿ ನಡೆಸುತ್ತಿರುವ ದೊಡ್ಡ ಅಸಹ್ಯ ಗಳನ್ನು ನೋಡುತ್ತಿರುವಿಯಾ? ಆದರೆ ಮತ್ತೆ ತಿರು ಗಿಕೋ, ನೀನು ಇನ್ನೂ ದೊಡ್ಡ ಅಸಹ್ಯಗಳನ್ನು ನೋಡುವಿ ಅಂದನು. ಆಗ ಅವನು ನನ್ನನ್ನು ಅಂಗಳದ ಬಾಗಲಿಗೆ ತಂದನು; ಮತ್ತು ನಾನು ನೋಡುವಾಗ ಇಗೋ, ಗೋಡೆಯಲ್ಲಿ ಒಂದು ರಂಧ್ರವನ್ನು ಕಂಡೆನು ಆಮೇಲೆ ಆತನು ನನಗೆ--ಮನುಷ್ಯಪುತ್ರನೇ, ಈಗ ಗೋಡೆಯಲ್ಲಿ ಕೊರೆ ಎಂದು ಹೇಳಿದನು. ಯಾವಾಗ ನಾನು ಗೋಡೆಯನ್ನು ಕೊರೆದೆನೋ ಒಂದು ಬಾಗಿಲು ಕಾಣಿಸಿತು. ಆಗ ಆತನು ನನಗೆ--ಒಳಗೆ ಹೋಗು; ಅವರು ಮಾಡುವ ಕೆಟ್ಟ ಅಸಹ್ಯಗಳನ್ನು ನೋಡು ಅಂದನು. ಹಾಗೆಯೇ ನಾನು ಒಳಗೆ ಹೋಗಿ ನೋಡಿದೆನು; ಇಗೋ, ಎಲ್ಲಾ ಜಾತಿಯ ಕ್ರಿಮಿಕೀಟಗಳೂ ಅಸಹ್ಯ ಮೃಗಗಳೂ ಇಸ್ರಾಯೇಲ್ಯರು ಪೂಜಿಸುವ ಸಕಲ ಮೂರ್ತಿಗಳೂ ಈ ಗೋಡೆಯ ಸುತ್ತಲೂ ಚಿತ್ರಿಸ ಲ್ಪಟ್ಟಿವೆ. ಇದಲ್ಲದೆ ಇಸ್ರಾಯೇಲಿನ ಮನೆತನ ದವರಲ್ಲಿ ಎಪ್ಪತ್ತು ಮಂದಿಯೂ ಅವರ ಮಧ್ಯದಲ್ಲಿ ಶಾಫಾನನ ಮಗನಾದ ಯಾಜನ್ಯನೂ ನಿಂತುಕೊಂಡಿ ದ್ದರು; ಪ್ರತಿಯೊಬ್ಬನ ಕೈಯಲ್ಲೂ ಅವನವನ ಧೂಪಾ ರತಿ ಇತ್ತು; ಧೂಪದ ಸುವಾಸನೆಯು ಮೇಘವಾಗಿ ಏರುತ್ತಿತ್ತು. ಆಗ ಆತನು ನನಗೆ ಮನುಷ್ಯಪುತ್ರನೇ, ಇಸ್ರಾಯೇಲಿನ ಮನೆತನದವರ ಪೂರ್ವಿಕರು ಕತ್ತಲೆ ಯಲ್ಲಿ ಪ್ರತಿಯೊಬ್ಬನೂ ತನ್ನ ಕೊಠಡಿಗಳಲ್ಲಿ ಚಿತ್ರಗಳನ್ನು ಮಾಡುವದನ್ನು ನೋಡಿದೆಯಾ?--ಕರ್ತನು ನಮ್ಮನ್ನು ನೋಡುವದಿಲ್ಲ, ಕರ್ತನು ಭೂಮಿಯನ್ನು ತೊರೆದು ಬಿಟ್ಟಿದ್ದಾನೆ ಎಂದು ಹೇಳುವರು. ಇದಲ್ಲದೆ ಆತನು ಹೇಳಿದ್ದೇನಂದರೆ--ಮತ್ತೊಂದು ಸಾರಿ ತಿರುಗಿಕೋ; ಅವರು ಮಾಡುವ ಇನ್ನೂ ಮಹಾ ಅಸಹ್ಯವಾದವು ಗಳನ್ನು ನೋಡುವಿ ಅಂದನು. ಆಗ ಅವನು ನನ್ನನ್ನು ಕರ್ತನ ಆಲಯದ ಉತ್ತರ ಕಡೆಗೆ ಎದುರಾಗಿ ಬಾಗಲಿದ್ದ ಕಡೆಗೆ ತಂದನು; ಇಗೋ, ಅಲ್ಲಿ ತಮ್ಮೂಜ್ಗೋಸ್ಕರ ಅಳುವ ಹೆಂಗಸರು ಕೂತಿದ್ದರು. ಆಮೇಲೆ ನನಗೆ ಆತನು, ಓ ನರಪುತ್ರನೇ, ನೋಡಿದಿಯೋ? ಮತ್ತೊಂದು ಸಾರಿ ತಿರುಗಿಕೋ ಇವುಗಳಿಗಿಂತ ಇನ್ನೂ ದೊಡ್ಡ ಅಸಹ್ಯವಾದವುಗಳನ್ನು ನೋಡುವಿ ಎಂದು ಹೇಳಿದನು. ಆಗ ಅವನು ನನ್ನನ್ನು ಕರ್ತನ ಆಲ ಯದ ಒಳಗಿನ ಅಂಗಳಕ್ಕೆ ಕರೆದುಕೊಂಡು ಹೋದನು. ಇಗೋ, ಕರ್ತನ ಮಂದಿರದ ಬಾಗಿಲಲ್ಲಿ ದ್ವಾರಾಂಗ ಳಕ್ಕೂ ಯಜ್ಞವೇದಿಗೂ ಮಧ್ಯದಲ್ಲಿ ಸುಮಾರು ಇಪ್ಪ ತ್ತೈದು ಮಂದಿಯು ಕರ್ತನ ಮಂದಿರಕ್ಕೆ ಬೆನ್ನು ಕೊಟ್ಟು, ಪೂರ್ವದಿಕ್ಕಿನ ಕಡೆಗೆ ತಮ್ಮ ಮುಖಗಳನ್ನು ತಿರು ಗಿಸಿ ಸೂರ್ಯ ನಮಸ್ಕಾರ ಮಾಡುತ್ತಿದ್ದರು. ಆಗ ಆತನು ನನಗೆ--ಓ ಮನುಷ್ಯಪುತ್ರನೇ, ನೋಡಿ ದೆಯಾ? ಅವರು ಇಲ್ಲಿ ಮಾಡುವ ಅಸಹ್ಯವಾದವುಗಳು ಯೆಹೂದನ ಮನೆತನದವರಿಗಲ್ಲವೇ? ಅವರು ದೇಶವನ್ನು ಹಿಂಸೆಯಿಂದ ತುಂಬಿಸಿದ್ದಲ್ಲದೆ ನನ್ನನ್ನು ಕೆಣಕಬೇಕೆಂದು ಮತ್ತೆ ಯತ್ನಿಸುತ್ತಿದ್ದಾರೆ. ನೋಡು, ಅವರ ಮೂಗಿಗೆ ಕೊಂಬೆಗಳನ್ನಿಟ್ಟು ಕೊಳ್ಳುತ್ತಾರೆ.ಆದದರಿಂದ ನಾನು ಸಹ ಉಗ್ರ ದಿಂದಲೇ ಇರುವೆನು. ನನ್ನ ಕಣ್ಣು ಕನಿಕರಿಸುವದೂ ಇಲ್ಲ, ನಾನು ಕಟಾಕ್ಷಿಸುವದೂ ಇಲ್ಲ, ಅವರು ನನ್ನ ಕಿವಿಗಳಲ್ಲಿ ಮಹಾಧ್ವನಿಯಿಂದ ಕಿರಿಚಿದರೂ ನಾನು ಕೇಳಿಸಿಕೊಳ್ಳುವದೂ ಇಲ್ಲ. ಆದದರಿಂದ ನಾನು ಸಹ ಉಗ್ರ ದಿಂದಲೇ ಇರುವೆನು. ನನ್ನ ಕಣ್ಣು ಕನಿಕರಿಸುವದೂ ಇಲ್ಲ, ನಾನು ಕಟಾಕ್ಷಿಸುವದೂ ಇಲ್ಲ, ಅವರು ನನ್ನ ಕಿವಿಗಳಲ್ಲಿ ಮಹಾಧ್ವನಿಯಿಂದ ಕಿರಿಚಿದರೂ ನಾನು ಕೇಳಿಸಿಕೊಳ್ಳುವದೂ ಇಲ್ಲ.
- Hosea 2:4–5 ಹೋಶೇಯ 2:4–5ಅವಳ ಮಕ್ಕಳನ್ನು ಸಹ ಕರುಣಿಸುವದಿಲ್ಲ; ಅವರು ಸೂಳೆತನದಿಂದಾದ ಮಕ್ಕಳೇ, ಅವರ ತಾಯಿ ಸೂಳೆ ತನ ಮಾಡಿದ್ದಾಳೆ; ಅವರನ್ನು ಹೆತ್ತವಳು ನಾಚಿಕೆಯಿ ಲ್ಲದೆ ನಡೆದಿದ್ದಾಳೆ; ಯಾಕಂದರೆ ಅವಳು--ನನ್ನ ರೊಟ್ಟಿ ಯನ್ನೂ ನನ್ನ ನೀರನ್ನೂ ನನ್ನ ಉಣ್ಣೆನಾರು ಗಳನ್ನೂ ನನ್ನ ತೈಲವನ್ನೂ ಪಾನವನ್ನೂ ನನಗೆ ಕೊಡುವ ನನ್ನ ಪ್ರಿಯರ ಹಿಂದೆ ಹೋಗುತ್ತೇನೆಂದು ಅಂದುಕೊಂಡಿದ್ದಾಳೆ.
- Exodus 34:14 ವಿಮೋಚನಕಾಂಡ 34:14ರೋಷವುಳ್ಳವನೆಂದು ಹೆಸರುಳ್ಳ ಕರ್ತನು ರೋಷ ವುಳ್ಳ ದೇವರಾಗಿರುವದರಿಂದ ನೀನು ಬೇರೆ ದೇವರು ಗಳನ್ನು ಆರಾಧಿಸಬಾರದು.
- Ezekiel 15:6–7 ಯೆಹೆಜ್ಕೇಲನು 15:6–7ಆದದ ರಿಂದ ದೇವರಾದ ಕರ್ತನು ಹೀಗೆ ಹೇಳುತ್ತಾನೆ-- ವನವೃಕ್ಷಗಳಲ್ಲಿ ದ್ರಾಕ್ಷೇಗಿಡಗಳನ್ನು ನಾನು ಹೇಗೆ ಬೆಂಕಿಗೆ ಸೌದೆಗಾಗಿ ಮಾಡಿರುವೆನೋ? ಹಾಗೆಯೇ ನಾನು ಯೆರೂಸಲೇಮಿನ ನಿವಾಸಿಗಳನ್ನೂ ಕೊಟ್ಟಿದ್ದೇನೆ. ನನ್ನ ಮುಖವನ್ನು ಅವರಿಗೆ ವಿರೋಧವಾಗಿ ತಿರುಗಿಸುತ್ತೇನೆ. ಅವರು ಹೊರಗೆ ಬಂದು ಬೆಂಕಿಯೊಳಗಿಂದ ತಪ್ಪಿಸಿ ಕೊಂಡರೂ ಮತ್ತೊಂದು ಬೆಂಕಿಯು ಅವರನ್ನು ನುಂಗಿ ಬಿಡುವದು. ನಾನು ನನ್ನ ಮುಖವನ್ನು ಅವರಿಗೆ ವಿರೋಧವಾಗಿ ಇಡುವಾಗ ನಾನೇ ಕರ್ತನೆಂದು ತಿಳಿದುಕೊಳ್ಳುವಿರಿ.ಅವರು ಅತಿಕ್ರಮಿಸಿದ್ದರಿಂದ ನಾನು ಆ ದೇಶವನ್ನು ಹಾಳು ಮಾಡುವೆನೆಂದು ದೇವರಾದ ಕರ್ತನು ಹೇಳುತ್ತಾನೆ.
- Deuteronomy 29:20 ಧರ್ಮೋಪದೇಶಕಾಂಡ 29:20ಅಂಥವನನ್ನು ಕರ್ತನು ಉಳಿಸುವದಿಲ್ಲ; ಆಗಲೇ ಕರ್ತನ ಕೋಪವೂ ರೋಷವೂ ಆ ಮನುಷ್ಯನ ಮೇಲೆ ಹೊಗೆ ಹಾಯುವವು. ಈ ಪುಸ್ತಕದಲ್ಲಿ ಬರೆದಿ ರುವ ಶಾಪವೆಲ್ಲಾ ಅವನ ಮೇಲೆ ನೆಲೆಯಾಗುವದು; ಕರ್ತನು ಅವನ ಹೆಸರನ್ನು ಆಕಾಶದ ಕೆಳಗಿನಿಂದ ಅಳಿಸಿಬಿಡುವನು.
- Ezekiel 22:18–22 ಯೆಹೆಜ್ಕೇಲನು 22:18–22ಮನುಷ್ಯಪುತ್ರನೇ, ಇಸ್ರಾಯೇಲಿನ ಮನೆತನದವರು ನನಗೆ (ಮಂಡೂರ) ಕಿಟ್ಟದ ಹಾಗಾದರು ಅವರೆಲ್ಲರೂ ಬಲೆಯ ಮಧ್ಯದಲ್ಲಿರುವ ಹಿತ್ತಾಳೆ, ತವರ, ಕಬ್ಬಿಣದ, ಹಾಗೆ ಇದ್ದಾರೆ. ಸೀಸದ ಮತ್ತು ಬೆಳ್ಳಿಯ ಕಿಟ್ಟಗಳ ಹಾಗೆಯೂ ಇದ್ದಾರೆ. ಆದದರಿಂದ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ನೀವೆಲ್ಲರೂ ಕಿಟ್ಟವಾಗಿರುವದರಿಂದ ಇಗೋ, ನಾನು ನಿಮ್ಮನ್ನು ಯೆರೂಸಲೇಮಿನ ಮಧ್ಯಕ್ಕೆ ಕೂಡಿಸುತ್ತೇನೆ. ಅವರು ಬೆಳ್ಳಿ, ಹಿತ್ತಾಳೆ, ಕಬ್ಬಿಣ, ಸೀಸ ಮತ್ತು ತಗಡುಗಳನ್ನು ಹೇಗೆ ಒಲೆಯೊಳಗೆ ಕೂಡಿಸಿ ಅದಕ್ಕೆ ಬೆಂಕಿಯನ್ನೂದಿ ಕರಗಿಸುವರೋ ಹಾಗೆಯೇ ನಾನು ನಿಮ್ಮನ್ನು ನನ್ನ ಕೋಪದಲ್ಲಿಯೂ ನನ್ನ ರೋಷದಲ್ಲಿಯೂ ಕರಗಿಸಿಬಿಡುವೆನು. ಹೌದು, ನನ್ನ ರೋಷದ ಬೆಂಕಿಯಿಂದ ನಾನು ನಿಮ್ಮ ಮೇಲೆ ಊದುವೆನು. ನೀವು ಅದರೊಳಗೆ ಕರಗಿ ಹೋಗುವಿರಿ. ಬೆಳ್ಳಿಯು ಕುಲುಮೆಯಲ್ಲಿ ಕರಗುವ ಹಾಗೆ ನೀವು ನನ್ನ ರೋಷಾಗ್ನಿಯಲ್ಲಿ ಕರಗು ವಿರಿ; ನಿನ್ನ ಮೇಲೆ ರೋಷಾಗ್ನಿಯನ್ನು ಸುರಿಸಿದಾತನು ಕರ್ತನಾದ ನಾನೇ ಎಂದು ನಿಮಗೆ ತಿಳಿಯುತ್ತದೆ.
- Zephaniah 1:18 ಚೆಫನ್ಯ 1:18ಕರ್ತನ ರೌದ್ರದ ದಿನದಲ್ಲಿ ಅವರ ಬೆಳ್ಳಿಯಾದರೂ ಅವರ ಬಂಗಾರ ವಾದರೂ ಅವರನ್ನು ತಪ್ಪಿಸಲಾರವು; ಆತನ ಕೋಪದ ಬೆಂಕಿಯು ದೇಶವನ್ನೆಲ್ಲಾ ನುಂಗುವದು.
- Revelation 18:8 ಪ್ರಕಟನೆ 18:8ಆದದರಿಂದ ಅವಳಿಗೆ ಮರಣ ದುಃಖ ಕ್ಷಾಮ ಎಂಬೀ ಉಪದ್ರವಗಳು ಒಂದೇ ದಿನದಲ್ಲಿ ಸಂಭವಿ ಸುವವು; ಅವಳು ಬೆಂಕಿಯಿಂದ ಸಂಪೂರ್ಣವಾಗಿ ಸುಟ್ಟುಹೋಗುವಳು. ಅವಳಿಗೆ ದಂಡನೆಯನ್ನು ವಿಧಿಸಿದ ದೇವರಾಗಿರುವ ಕರ್ತನು ಬಲಿಷ್ಠನಾಗಿದ್ದಾನೆ.
Original words (Hebrew)
- set · H5414נָתַן nâthan
- jealousy · H7068קִנְאָה qinʼâh
- deal · H6213עָשָׂה ʻâsâh
- furiously · H2534חֵמָה chêmâh
- away · H5493סוּר çûwr
- nose · H639אַף ʼaph
- ears · H241אֹזֶן ʼôzen
- remnant · H319אַחֲרִית ʼachărîyth
- fall · H5307נָפַל nâphal
- sword · H2719חֶרֶב chereb
- take · H3947לָקַח lâqach
- sons · H1121בֵּן bên
- daughters · H1323בַּת bath
- residue · H319אַחֲרִית ʼachărîyth
- devoured · H398אָכַל ʼâkal
- fire · H784אֵשׁ ʼêsh