Ezekiel · chapter 23 · verse 30
Ezekiel 23:30 in Kannada
ನೀನು ಅನ್ಯಜನಾಂಗಗಳ ಹಿಂದೆ ಹೋಗಿ ವ್ಯಭಿಚರಿಸಿದ್ದರಿಂದಲೂ ಅವರ ವಿಗ್ರಹ ಗಳಿಂದ ನಿನ್ನನ್ನು ಅಪವಿತ್ರಪಡಿಸಿಕೊಂಡಿದ್ದರಿಂದಲೂ ಇವುಗಳನ್ನು ನಾನು ನಿನಗೆ ಮಾಡುತ್ತೇನೆ.
Neenu anyajanaangagala hinde hogi vyabhicharisiddarindaloo avara vigraha galinda ninnannu apavitrapadisikondiddarindaloo ivugalannu naanu ninage maaduttene.
Ezekiel 23:30 in English
- King James Version (KJV)
- I will do these [things] unto thee, because thou hast gone a whoring after the heathen, [and] because thou art polluted with their idols.
- World English Bible (WEB)
- These things will be done to you because you have played the prostitute after the nations, and because you are polluted with their idols.
- American Standard Version (ASV)
- These things shall be done unto thee, for that thou hast played the harlot after the nations, and because thou art polluted with their idols.
- Bible in Basic English (BBE)
- They will do these things to you because you have been untrue to me, and have gone after the nations, and have become unclean with their images.
- Darby Translation (DBY)
- These things shall be done unto thee, because thou hast gone a whoring after the nations, because thou hast defiled thyself with their idols.
- Webster's Bible (WBS)
- I will do these [things] to thee, because thou hast gone astray after the heathen, [and] because thou art polluted with their idols.
- Young's Literal Translation (YLT)
- To do these things to thee, In thy going a-whoring after nations, Because thou hast been defiled with their idols,
Read in context
- 28ದೇವರಾದ ಕರ್ತನು ಹೀಗೆ ಹೇಳುತ್ತಾನೆ --ಇಗೋ, ನೀನು ಹಗೆಮಾಡುವವರ ಕೈಯಲ್ಲಿಯೂ ಯಾರ ಕಡೆಯಿಂದ ನಿನ್ನ ಮನಸ್ಸು ಅಗಲಿ ಹೋಯಿತೋ ಅವರ ಕೈಯಲ್ಲಿಯೂ ನಿನ್ನನ್ನು ಒಪ್ಪಿಸುತ್ತೇನೆ.
- 29ಅವರು ನಿನ್ನ ವಿಷಯದಲ್ಲಿ ಹಗೆಯವರಾಗಿ ನಡೆಯುವರು; ನಿನ್ನ ಕಷ್ಟಾರ್ಜಿತವನ್ನು ತೆಗೆದುಕೊಂಡು ನಿನ್ನನ್ನು ಬೆತ್ತಲೆಯಾಗಿಯೂ ಬರಿದಾಗಿಯೂ ಮಾಡಿ ಬಿಡುವರು. ಆಗ ನಿನ್ನ ವ್ಯಭಿಚಾರವೂ ದುಷ್ಕರ್ಮವೂ ಜಾರತ್ವವೂ ಪ್ರಕಟವಾಗುವದು.
- 30ನೀನು ಅನ್ಯಜನಾಂಗಗಳ ಹಿಂದೆ ಹೋಗಿ ವ್ಯಭಿಚರಿಸಿದ್ದರಿಂದಲೂ ಅವರ ವಿಗ್ರಹ ಗಳಿಂದ ನಿನ್ನನ್ನು ಅಪವಿತ್ರಪಡಿಸಿಕೊಂಡಿದ್ದರಿಂದಲೂ ಇವುಗಳನ್ನು ನಾನು ನಿನಗೆ ಮಾಡುತ್ತೇನೆ.
- 31ನೀನು ನಿನ್ನ ಸಹೋದರಿಯ ಮಾರ್ಗದಲ್ಲಿಯೇ ನಡೆದದ್ದರಿಂದ ಅವಳ ಪಾತ್ರೆಯನ್ನು ನಿನ್ನ ಕೈಗೆ ಕೊಡುತ್ತೇನೆ.
- 32ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನೀನು ನಿನ್ನ ಸಹೋದರಿಯ ಆಳವಾದ ದೊಡ್ಡ ಪಾತ್ರೆಯಲ್ಲಿ ಕುಡಿಯುವಿ. ನೀನು ಹಾಸ್ಯಕ್ಕೂ ನಿಂದೆಗೂ ಗುರಿ ಯಾಗುವಿ. ಅದೇ ನಿನಗೆ ಹೆಚ್ಚಾಗುವದು.
Cross references
- Ezekiel 6:9 ಯೆಹೆಜ್ಕೇಲನು 6:9ನಿಮ್ಮಲ್ಲಿ ತಪ್ಪಿಸಿಕೊಂಡವರು ತಾವು ಸೆರೆಗೆ ಒಯ್ಯಲ್ಪ ಡುವ ಜನಾಂಗಗಳಲ್ಲಿ ನನ್ನನ್ನು ಜ್ಞಾಪಕಮಾಡಿಕೊಳ್ಳು ವರು, ಯಾಕಂದರೆ ನನ್ನನ್ನು ಬಿಟ್ಟುಬಿಡುವ ಅವರ ಜಾರಹೃದಯದಿಂದಲೂ ಅವರ ದೇವರ ವಿಗ್ರಹಗಳ ಹಿಂದೆ ಜಾರತ್ವ ಮಾಡುವವರ ಕಣ್ಣುಗಳಿಂದಲೂ ಮುರಿದುಹೋದೆನು; ಅವರು ತಮ್ಮ ಅಸಹ್ಯಗಳಲ್ಲಿ ಮಾಡುವ ಕೇಡುಗಳ ನಿಮಿತ್ತ ತಮಗೆ ತಾವೇ ಹೇಸಿ ಕೊಳ್ಳುವರು.
- Ezekiel 23:7 ಯೆಹೆಜ್ಕೇಲನು 23:7ಅವರಿಗೆ ಅವಳು ತನ್ನನ್ನು ವ್ಯಭಿಚಾರಿಣಿಯಾಗಿ ಒಪ್ಪಿಸಿದಳು, ಅವರೆಲ್ಲರೂ ಅಶ್ಶೂರದಲ್ಲಿ ಆರಿಸಲ್ಪಟ್ಟವರಾಗಿದ್ದರು. (ನೇಮಿಸ ಲ್ಪಟ್ಟವರು) ಅವಳು ಯಾರನ್ನು ಮೋಹಿಸಿದಳೋ ಅವರ ವಿಗ್ರಹಗಳಿಂದ ತನ್ನನ್ನು ಅಪವಿತ್ರಪಡಿಸಿಕೊಂಡಳು.
- Psalm 106:35–38 ಕೀರ್ತನೆಗಳು 106:35–38ಆದರೆ ಅನ್ಯಜನಾಂಗ ಗಳ ಸಂಗಡ ಕೂಡಿಕೊಂಡು; ಅವರ ಕೆಲಸಗಳನ್ನು ಕಲಿತುಕೊಂಡರು. ಅವರ ವಿಗ್ರಹಗಳಿಗೆ ಸೇವೆ ಮಾಡಿದರು ಅವು ಅವರಿಗೆ ನೇಣು ಆದವು. ತಮ್ಮ ಗಂಡು ಹೆಣ್ಣು ಮಕ್ಕಳನ್ನೂ ದೆವ್ವಗಳಿಗೆ ಅರ್ಪಿಸಿದರು. ಇದಲ್ಲದೆ ತಮ್ಮ ಗಂಡು ಹೆಣ್ಣು ಮಕ್ಕಳ ನಿರಪರಾ ಧದ ರಕ್ತವನ್ನು ಚೆಲ್ಲಿ, ಕಾನಾನಿನ ವಿಗ್ರಹಗಳಿಗೆ ಅರ್ಪಿಸಿ; ದೇಶವನ್ನು ರಕ್ತದಿಂದ ಅಶುದ್ಧಮಾಡಿದರು.
- Jeremiah 2:18–20 ಯೆರೆಮೀಯ 2:18–20ಈಗ ಸಿಹೋರಿನ ನೀರು ಕುಡಿಯುವದಕ್ಕಾಗಿ ಐಗುಪ್ತದ ದಾರಿಯಲ್ಲಿ ನಿನಗೇನು ಕೆಲಸ? ಇಲ್ಲವೆ ನದಿಯ ನೀರು ಕುಡಿ ಯುವದಕ್ಕಾಗಿ ಅಶ್ಶೂರಿನ ದಾರಿಯಲ್ಲಿ ನಿನಗೇನು ಕೆಲಸ? ನಿನ್ನ ಕೆಟ್ಟತನವೇ ನಿನ್ನನ್ನು ತಿದ್ದುವದು; ನಿನ್ನ ಹಿಂಜಾರಿಕೆಗಳೇ ನಿನ್ನನ್ನು ಗದರಿಸುವವು; ಹೀಗಿ ರುವದರಿಂದ ನೀನು ನಿನ್ನ ದೇವರಾದ ಕರ್ತನನ್ನು ಬಿಟ್ಟದ್ದೂ ನನ್ನ ಭಯವೂ ನಿನ್ನಲ್ಲಿ ಇಲ್ಲದಿರುವದೂ ಕೆಟ್ಟದ್ದೂ ಕಹಿಯಾದದ್ದೂ ಎಂದು ತಿಳುಕೊಂಡು ನೋಡು ಎಂದು ಸೈನ್ಯಗಳ ಕರ್ತನಾದ ದೇವರು ಅನ್ನುತ್ತಾನೆ. ಪೂರ್ವದಲ್ಲಿ ನಾನು ನಿನ್ನ ನೊಗವನ್ನು ಮುರಿದು ನಿನ್ನ ಬಂಧನಗಳನ್ನು ಹರಿದುಬಿಟ್ಟೆನು; ನೀನು--ನಾನು ವಿಾರುವದಿಲ್ಲ ಎಂದು ನೀನು ಹೇಳಿದಿ; ಆದರೆ ಒಂದೊಂದು ಎತ್ತರವಾದ ಗುಡ್ಡದ ಮೇಲೆಯೂ ಒಂದೊಂದು ಹಸುರಾದ ಮರದ ಕೆಳಗೂ ನೀನು ಸೂಳೆಯಾಗಿ ಅಲೆದಾಡುತ್ತಿ.
- Jeremiah 22:8–9 ಯೆರೆಮೀಯ 22:8–9ಅನೇಕ ಜನಾಂಗಗಳು ಈ ಪಟ್ಟಣವನ್ನು ಹಾದುಹೋಗುವರು, ಕರ್ತನು ಈ ದೊಡ್ಡ ಪಟ್ಟಣಕ್ಕೆ ಯಾಕೆ ಈ ಪ್ರಕಾರ ಮಾಡಿ ದ್ದಾನೆಂದು ನೆರೆಯವರು ಒಬ್ಬರಿಗೊಬ್ಬರು ಹೇಳಿಕೊಳ್ಳು ವರು. ಆಗ ಅವರು--ತಮ್ಮ ದೇವರಾದ ಕರ್ತನ ಒಡಂಬಡಿಕೆಯನ್ನು ಬಿಟ್ಟು, ಬೇರೆ ದೇವರುಗಳಿಗೆ ನಮ ಸ್ಕರಿಸಿ ಸೇವಿಸಿದ್ದರಿಂದಲೇ ಎಂದು ಅವರು ಉತ್ತರ ಕೊಡುವರು.
- Ezekiel 23:12–21 ಯೆಹೆಜ್ಕೇಲನು 23:12–21ಅವಳು ತನ್ನ ನೆರೆಯವರಾದ ಅಶ್ಶೂರ್ಯ ರನ್ನೂ ನಾಯಕರು ಮತ್ತು ಅಧಿಕಾರಸ್ಥರು ಗಂಭೀರವಾಗಿ ಧರಿಸಲ್ಪಟ್ಟು ಕುದುರೆಗಳ ಮೇಲೆ ಸವಾರಿಮಾಡುವ ರಾಹುತರಾಗಿಯೂ ಅಪೇಕ್ಷಿಸತಕ್ಕ ಯೌವನಸ್ಥರಾ ಗಿಯೂ ಇರುವಂಥ ಅವರನ್ನು ಮೋಹಿಸಿದಳು. ಆಗ ನಾನು ಅವಳು ಅಪವಿತ್ರವಾದಳೆಂದು ನೋಡಿದೆನು; ಅವರಿಬ್ಬರೂ ಒಂದೇ ಮಾರ್ಗವನ್ನು ಹಿಡಿದರು. ಅವಳು ತನ್ನ ವ್ಯಭಿಚಾರವನ್ನು ಇನ್ನು ಹೆಚ್ಚಿಸಿದಳು; ಗೋಡೆಯ ಮೇಲೆ ಬರೆಯಲ್ಪಟ್ಟ ಮನುಷ್ಯರನ್ನೂ ಕುಂಕುಮ ಇಟ್ಟುಕೊಂಡ ಕಸ್ದೀಯರ ಹಾಗೆ ಕಂಡು ಬರುವ ಪ್ರತಿಮೆಗಳನ್ನೂ (ಮನುಷ್ಯ ಆಕಾರಗಳನ್ನೂ) ನೋಡಿದಾಗ, ಸೊಂಟಕ್ಕೆ ನಡುಕಟ್ಟನ್ನು ಕಟ್ಟಿ ಕೊಂಡಂಥ ತನ್ನ ತಲೆಗಳಲ್ಲಿ ಅಲಂಕಾರವಾದ ರುಮಾ ಲನ್ನು ಧರಿಸಿದಂಥ ಎಲ್ಲರೂ ನೋಟದಲ್ಲಿ ಅವರ ಸ್ವದೇಶವಾದ ಕಸ್ದೀಯಕ್ಕೆ ಸೇರಿದ ಬಾಬೆಲಿನ ಕುಮಾರರ ಹಾಗಿರುವದನ್ನು; ಅವಳು ಅವಳ ಕಣ್ಣುಗಳಿಂದ ತಕ್ಷಣವೇ ಅವರನ್ನು ನೋಡಿದಾಗ ಅವರನ್ನು ಮೋಹಿಸಿ ದಳು; ಅವರ ಬಳಿಗೆ ಕಸ್ದೀಯಕ್ಕೆ ದೂತರನ್ನು ಕಳುಹಿಸಿ ದಳು. ಬಾಬೆಲಿನವರು ಅವಳ, ಪ್ರೀತಿಯ ಹಾಸಿ ಗೆಯ ಮೇಲೆ ಬಂದು ಅವಳನ್ನು ವ್ಯಭಿಚಾರದಿಂದ ಅಪವಿತ್ರಪಡಿಸಿದರು; ಅವಳು ಅವರಿಂದ ಹಾಳಾದ ಮೇಲೆ ತನ್ನ ಮನಸ್ಸನ್ನು ಅವರ ಕಡೆಯಿಂದ ಅಗಲಿಸಿ ಕೊಂಡಳು. ಹೀಗೆ ಅವಳು ವ್ಯಭಿಚಾರವನ್ನು ಕಂಡುಹಿಡಿದು ತನ್ನ ಬೆತ್ತಲೆತನವನು ಬಯಲುಪಡಿಸಿ ಕೊಂಡಾಗ, ತನ್ನ ಅನುರಾಗವು ಮೊದಲು ಇವಳ ಸಹೋದರಿಯಿಂದ ಅಗಲಿದ ಹಾಗೆ ಇವಳಿಂದಲೂ ಅಗಲಿತು. ಆದರೂ ಅವಳು ಐಗುಪ್ತದೇಶದಲ್ಲಿ ವ್ಯಭಿಚಾರ ಮಾಡಿದಾಗ ತನ್ನ ಯೌವನದ ದಿನಗಳನ್ನು ಜ್ಞಾಪಕಮಾಡಿಕೊಂಡು ತನ್ನ ವ್ಯಭಿಚಾರವನ್ನು ಹೆಚ್ಚಿಸಿ ದಳು. ಹೇಗಂದರೆ, ಕತ್ತೆಗಳ ಮಾಂಸದಂತೆ ಮಾಂಸ ವುಳ್ಳವರಾಗಿಯೂ ಕುದುರೆಗಳ ವೀರ್ಯದಂತೆ ವೀರ್ಯ ವುಳ್ಳವರಾಗಿಯೂ ಇರುವ ತನ್ನ ಉಪಪತಿಗಳನ್ನು ಮೋಹಿಸಿದರು. ಹೀಗೆ ಐಗುಪ್ತರಿಂದ ನಿನ್ನ ಯೌವ ನದ ಸ್ತನಗಳ ತೊಟ್ಟುಗಳನ್ನು ಒತ್ತಿಸಿಕೊಂಡು ನಿನ್ನ ಯೌವನದ ದುಷ್ಕರ್ಮವನ್ನು ನೆನಪಿಗೆ ತಂದುಕೋ.
- Jeremiah 16:11–12 ಯೆರೆಮೀಯ 16:11–12ನಿಮ್ಮ ತಂದೆಗಳು ನನ್ನನ್ನು ಬಿಟ್ಟು ಬೇರೆ ದೇವರುಗಳನ್ನು ಹಿಂಬಾಲಿಸಿ ಸೇವಿಸಿ ಆರಾಧಿಸಿ ನನ್ನನ್ನು ತೊರೆದುಬಿಟ್ಟು, ನನ್ನ ನ್ಯಾಯ ಪ್ರಮಾಣವನ್ನು ಕೈಕೊಳ್ಳಲಿಲ್ಲ. ನೀವು ನಿಮ್ಮ ತಂದೆಗಳಿಗಿಂತ ಇನ್ನೂ ಕೆಟ್ಟ ಕೆಲಸ ಮಾಡಿದ್ದೀರಿ; ಇಗೋ, ನನ್ನನ್ನು ಕೇಳದ ಹಾಗೆ ನಿಮ್ಮ ನಿಮ್ಮ ಕೆಟ್ಟ ಹೃದಯದ ಕಲ್ಪನೆಯ ಪ್ರಕಾರ ನಡೆದುಕೊಂಡಿದ್ದೀರಿ.