Ezekiel · chapter 23 · verse 36
Ezekiel 23:36 in Kannada
ಇದಲ್ಲದೆ ಕರ್ತನು ನನಗೆ ಹೇಳಿದ್ದೇನಂದರೆ --ಮನುಷ್ಯಪುತ್ರನೇ, ಒಹೊಲಳಿಗೂ ಒಹೊಲೀ ಬಳಿಗೂ ನ್ಯಾಯತೀರಿಸುವಿಯೋ? ಹೌದು, ಅವರ ಅಸಹ್ಯಗಳನ್ನು ಅವರಿಗೆ ತಿಳಿಸು.
Idallade kartanu nanage heliddenandare --manushyaputrane, oholaligoo oholee baligoo nyaayateerisuviyo? Haudu, avara asahyagalannu avarige tilisu.
Ezekiel 23:36 in English
- King James Version (KJV)
- The LORD said moreover unto me; Son of man, wilt thou judge Aholah and Aholibah? yea, declare unto them their abominations;
- World English Bible (WEB)
- The LORD said moreover to me: “Son of man, will you judge Oholah and Oholibah? Then declare to them their abominations.
- American Standard Version (ASV)
- Jehovah said moreover unto me: Son of man, wilt thou judge Oholah and Oholibah? then declare unto them their abominations.
- Bible in Basic English (BBE)
- Then the Lord said to me: Son of man, will you be the judge of Oholibah? then make clear to her the disgusting things she has done.
- Darby Translation (DBY)
- And Jehovah said unto me, Son of man, wilt thou judge Oholah and Oholibah? yea, declare unto them their abominations.
- Webster's Bible (WBS)
- The LORD said moreover to me; Son of man, wilt thou judge Aholah and Aholibah? yes, declare to them their abominations;
- Young's Literal Translation (YLT)
- And Jehovah saith unto me, 'Son of man, Dost thou judge Aholah and Aholibah? Declare then to them their abominations.
Read in context
- 34ನೀನು ಅದರಲ್ಲಿ ಸ್ವಲ್ಪವೂ ಉಳಿಯದಂತೆ ಹೀರಿ ಕುಡಿದು ಅದನ್ನು ಬೋಕಿಗಳ ಹಾಗೆ ಒಡೆದುಹಾಕುವಿ ಮತ್ತು ನೀನೇ ನಿನ್ನ ಸ್ತನಗಳನ್ನು ಕಿತ್ತುಕೊಳ್ಳುವಿ; ನಾನೇ ಅದನ್ನು ಹೇಳಿದ್ದೇನೆಂದು ದೇವರಾದ ಕರ್ತನು ಹೇಳಿದ್ದಾನೆ.
- 35ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನೀನು ನನ್ನನ್ನು ಮರೆತುಬಿಟ್ಟು ನನ್ನನ್ನು ನಿನ್ನ ಬೆನ್ನ ಹಿಂದಕ್ಕೆ ಎಸೆದು ಮರೆತದ್ದರಿಂದ ನಿನ್ನ ದುಷ್ಕರ್ಮವನ್ನೂ ವ್ಯಭಿಚಾರವನ್ನೂ ಅನುಭವಿಸಲೇಬೇಕು.
- 36ಇದಲ್ಲದೆ ಕರ್ತನು ನನಗೆ ಹೇಳಿದ್ದೇನಂದರೆ --ಮನುಷ್ಯಪುತ್ರನೇ, ಒಹೊಲಳಿಗೂ ಒಹೊಲೀ ಬಳಿಗೂ ನ್ಯಾಯತೀರಿಸುವಿಯೋ? ಹೌದು, ಅವರ ಅಸಹ್ಯಗಳನ್ನು ಅವರಿಗೆ ತಿಳಿಸು.
- 37ಹೇಗಂದರೆ, ಅವರು ವ್ಯಭಿಚಾರ ಮಾಡಿದ್ದಾರೆ, ರಕ್ತವು ಅವರ ಕೈಗಳಲ್ಲಿ ಅದೆ; ತಮ್ಮ ವಿಗ್ರಹಗಳಿಂದ ವ್ಯಭಿಚಾರ ಮಾಡಿದ್ದಾರೆ, ನನಗೆ ಹೆತ್ತ ತಮ್ಮ ಗಂಡು ಮಕ್ಕಳನ್ನು ಆ ವಿಗ್ರಹಗಳಿಗೆ ಬಲಿಯಾಗಿ ಕೊಟ್ಟಿದ್ದಾರೆ.
- 38ಇದಲ್ಲದೆ ಇದನ್ನು ಮಾಡಿದ ದಿನದಲ್ಲಿಯೇ ನನ್ನ ಪರಿಶುದ್ಧಸ್ಥಳವನ್ನು ಅಪವಿತ್ರಪಡಿಸಿ ನನ್ನ ಸಬ್ಬತ್ತುಗಳನ್ನು ಕೆಡಿಸಿದ್ದಾರೆ.
Cross references
- Ezekiel 22:2 ಯೆಹೆಜ್ಕೇಲನು 22:2ಈಗ ಮನುಷ್ಯ ಪುತ್ರನೇ, ನೀನು ನ್ಯಾಯತೀರಿಸುವೆಯಾ? ರಕ್ತಾಪರಾಧ ವುಳ್ಳ ಪಟ್ಟಣಕ್ಕೆ ನ್ಯಾಯತೀರಿಸುವೆಯಾ ಹೌದು ಅದರ ಅಸಹ್ಯವಾದವುಗಳನ್ನೆಲ್ಲಾ ಅದಕ್ಕೆ ತಿಳಿಸುವಿ.
- Ezekiel 20:4 ಯೆಹೆಜ್ಕೇಲನು 20:4ಅವರಿಗೆ ನ್ಯಾಯತೀರಿಸುವಿಯೋ? ಮನುಷ್ಯಪುತ್ರನೇ, ನೀನು ಅವರಿಗೆ ನ್ಯಾಯತೀರಿಸು ವಿಯೋ? ಅವರ ತಂದೆಗಳ ಅಸಹ್ಯವಾದವುಗಳನ್ನು ಅವರಿಗೆ ತಿಳಿಸು.
- Ezekiel 16:2 ಯೆಹೆಜ್ಕೇಲನು 16:2ಮನುಷ್ಯಪುತ್ರನೇ, ಯೆರೂಸಲೇಮಿಗೆ ಅದರ ಅಸಹ್ಯವಾದವುಗಳನ್ನು ತಿಳಿದುಕೊಳ್ಳುವ ಹಾಗೆ ಮಾಡು.
- Isaiah 58:1 ಯೆಶಾಯ 58:1ಗಟ್ಟಿಯಾಗಿ ಕೂಗು, ಹಿಂತೆಗೆಯಬೇಡ. ತುತೂರಿಯಂತೆ ನಿನ್ನ ಸ್ವರವನ್ನೆತ್ತು, ನನ್ನ ಜನರಿಗೆ ಅವರ ದ್ರೋಹವನ್ನೂ ಯಾಕೋಬನ ಮನೆಯವರಿಗೆ ಅವರ ಪಾಪವನ್ನೂ ತೋರಿಸು.
- Jeremiah 1:10 ಯೆರೆಮೀಯ 1:10ನೋಡು, ನಿನ್ನನ್ನು ಕೀಳುವದಕ್ಕೂ ಕೆಳಗೆ ಹಾಕಿ ಬಿಡುವದಕ್ಕೂ ನಾಶಮಾಡುವದಕ್ಕೂ ಕೆಡವಿಹಾಕುವದಕ್ಕೂ ಕಟ್ಟುವದಕ್ಕೂ ನೆಡುವದಕ್ಕೂ ಜನಾಂಗಗಳ ಮೇಲೆಯೂ ರಾಜ್ಯಗಳ ಮೇಲೆಯೂ ಈ ದಿನ ನಿನ್ನನ್ನು ನೇಮಿಸಿದ್ದೇನೆ ಅಂದನು.
- Jeremiah 14:11 ಯೆರೆಮೀಯ 14:11ಆಗ ಕರ್ತನು ನನಗೆ ಈ ಜನರಿಗೋಸ್ಕರ ಒಳ್ಳೇದಕ್ಕಾಗಿ ಪ್ರಾರ್ಥನೆ ಮಾಡಬೇಡ;
- Luke 11:39–52 ಲೂಕನು 11:39–52ಆಗ ಕರ್ತನು ಅವನಿಗೆ-- ಫರಿಸಾಯರಾದ ನೀವು ಪಾತ್ರೆಯ ಮತ್ತು ತಟ್ಟೆಯ ಹೊರಭಾಗವನ್ನು ಶುಚಿಮಾಡುತ್ತೀರಿ; ಆದರೆ ನಿಮ್ಮ ಒಳಭಾಗವು ಸುಲಿಗೆಯಿಂದಲೂ ಕೆಟ್ಟತನ ದಿಂದಲೂ ತುಂಬಿರುತ್ತದೆ ಮೂರ್ಖರೇ, ಹೊರ ಭಾಗವನ್ನು ಮಾಡಿದಾತನು ಒಳಭಾಗವನ್ನು ಸಹ ಮಾಡಿದನಲ್ಲವೇ? ಆದರೆ ನಿಮಗೆ ಇರುವವುಗಳಲ್ಲಿ ನೀವು ದಾನಾಕೊಡಿರಿ; ಆಗ ಇಗೋ, ನಿಮಗೆ ಎಲ್ಲವು ಗಳು ಶುದ್ಧವಾಗಿರುವವು. ಆದರೆ ಫರಿಸಾಯರೇ, ನಿಮಗೆ ಅಯ್ಯೋ! ಯಾಕಂದರೆ ನೀವು ಮರುಗಪತ್ರೆ ಸದಾಪು ಸಕಲ ವಿಧವಾದ ಸೊಪ್ಪುಗಳಲ್ಲಿ ದಶಮಭಾಗವನ್ನು ಕೊಟ್ಟು ನ್ಯಾಯತೀರ್ಪನ್ನೂ ದೇವರಪ್ರೀತಿಯನ್ನೂ ಲಕ್ಷಿಸದೆ ಹೋಗುತ್ತೀರಿ. ಇವುಗಳನ್ನು ತಪ್ಪದೆ ಮಾಡಿ ಬೇರೆಯವು ಗಳನ್ನು ಬಿಡದೆ ಮಾಡಬೇಕಾಗಿತ್ತು. ಫರಿಸಾಯರೇ, ನಿಮಗೆ ಅಯ್ಯೋ! ಯಾಕಂದರೆ ನೀವು ಸಭಾಮಂದಿರ ಗಳಲ್ಲಿ ಅತ್ಯುನ್ನತ ಸ್ಥಾನಗಳನ್ನೂ ಸಂತೆಗಳಲ್ಲಿ ವಂದನೆಗಳನ್ನೂ ಪ್ರೀತಿಸುತ್ತೀರಿ. ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೊ! ಯಾಕಂದರೆ ನೀವು ಕಾಣಿಸದ ಸಮಾಧಿಗಳಂತೆ ಇದ್ದೀರಿ; ಅವುಗಳ ಮೇಲೆ ನಡೆದಾಡುವ ಮನುಷ್ಯರು ಅವುಗಳನ್ನು ಅರಿಯರು ಎಂದು ಹೇಳಿದನು. ಆಗ ನ್ಯಾಯಶಾಸ್ತ್ರಿಗಳಲ್ಲಿ ಒಬ್ಬನು ಆತನಿಗೆ-- ಬೋಧಕನೇ, ನೀನು ಇವುಗಳನ್ನು ಹೇಳುವದರಿಂದ ನಮ್ಮನ್ನು ಸಹ ಅವಮಾನಪಡಿಸುತ್ತೀ ಅಂದನು. ಅದಕ್ಕೆ ಆತನು--ನ್ಯಾಯಶಾಸ್ತ್ರಿಗಳಾದ ನಿಮಗೂ ಅಯ್ಯೋ! ಯಾಕಂದರೆ ಹೊರಲು ಕಠಿಣವಾದ ಹೊರೆ ಗಳನ್ನು ಮನುಷ್ಯರ ಮೇಲೆ ಹೊರಿಸಿ ನಿಮ್ಮ ಬೆರಳುಗಳಲ್ಲಿ ಒಂದರಿಂದಾದರೂ ನೀವು ಆ ಹೊರೆಗಳನ್ನು ಮುಟ್ಟು ವದಿಲ್ಲ. ನಿಮಗೆ ಅಯ್ಯೋ! ಯಾಕಂದರೆ ನಿಮ್ಮ ತಂದೆಗಳು ಪ್ರವಾದಿಗಳನ್ನು ಕೊಂದರು. ನೀವು ಅವರ ಸಮಾಧಿಗಳನ್ನು ಕಟ್ಟುತ್ತೀರಿ. ಇದರಿಂದ ನಿಜವಾ ಗಿಯೂ ನಿಮ್ಮ ತಂದೆಗಳ ಕೃತ್ಯಗಳನ್ನು ನೀವು ಒಪ್ಪಿ ಕೊಳ್ಳುವಂತೆ ಸಾಕ್ಷೀಕರಿಸುತ್ತೀರಿ; ಯಾಕಂದರೆ ಅವರು ನಿಜವಾಗಿಯೂ ಅವರನ್ನು ಕೊಂದರು; ನೀವು ಅವರ ಸಮಾಧಿಗಳನ್ನು ಕಟ್ಟುತ್ತೀರಿ. ಆದದರಿಂದ ದೇವರ ಜ್ಞಾನವು ಸಹ ಹೇಳಿದ್ದೇನಂದರೆ -- ನಾನು ಅವರ ಬಳಿಗೆ ಪ್ರವಾದಿಗಳನ್ನೂ ಅಪೊಸ್ತಲರನ್ನೂ ಕಳುಹಿಸು ವೆನು; ಅವರಲ್ಲಿ ಕೆಲವರನ್ನು ಅವರು ಕೊಲ್ಲುವರು ಮತ್ತು ಹಿಂಸಿಸುವರು. ಹೀಗೆ ಜಗತ್ತಿನ ಅಸ್ತಿವಾರ ಮೊದಲುಗೊಂಡು ಸುರಿಸಲ್ಪಟ್ಟ ಎಲ್ಲಾ ಪ್ರವಾದಿಗಳ ರಕ್ತಕ್ಕೆ ಈ ಸಂತತಿಯು ಉತ್ತರ ಕೊಡಬೇಕಾಗಿರುವದು. ಹೇಬೆಲನ ರಕ್ತ ಮೊದಲುಗೊಂಡು ಯಜ್ಞವೇದಿಗೂ ದೇವಾಲಯಕ್ಕೂ ಮಧ್ಯದಲ್ಲಿ ಹತವಾದ ಜಕರೀಯನ ರಕ್ತದವರೆಗೂ ಈ ಸಂತತಿಯು ಉತ್ತರಕೊಡಬೇಕು; ಹೌದು, ಈ ಸಂತತಿಯವರೇ ಉತ್ತರಕೊಡಬೇಕೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ. ನ್ಯಾಯ ಶಾಸ್ತ್ರಿಗಳೇ, ನಿಮಗೆ ಅಯ್ಯೋ! ಯಾಕಂದರೆ ನೀವು ಜ್ಞಾನದ ಬೀಗದ ಕೈಯನ್ನು ತಕ್ಕೊಂಡಿದ್ದೀರಿ, ನೀವಂತೂ ಒಳಗೆ ಪ್ರವೇಶಿಸಲಿಲ್ಲ. ಒಳಗೆ ಪ್ರವೇಶಿಸುತ್ತಿರುವವ ರಿಗೂ ನೀವು ತಡೆದಿರಿ ಎಂದು ಹೇಳಿದನು.
- Matthew 23:13–35 ಮತ್ತಾಯನು 23:13–35ಆದರೆ ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ನೀವು ಮನುಷ್ಯರ ಮುಂದೆ ಪರ ಲೋಕರಾಜ್ಯವನ್ನು ಮುಚ್ಚುತ್ತೀರಿ. ನೀವಂತೂ ಪ್ರವೇಶಿ ಸುವದಿಲ್ಲ, ಪ್ರವೇಶಿಸುವವರನ್ನೂ ನೀವು ಒಳಗೆ ಹೋಗಗೊಡಿಸುವದಿಲ್ಲ. ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ನೀವು ವಿಧವೆಯರ ಮನೆಗಳನ್ನು ನುಂಗುತ್ತೀರಿ; ಮತ್ತು ನಟನೆಗಾಗಿ ಉದ್ದವಾದ ಪ್ರಾರ್ಥನೆಯನ್ನು ಮಾಡುತ್ತೀರಿ; ಆದದರಿಂದ ನೀವು ಹೆಚ್ಚಾದ ದಂಡನೆಯನ್ನು ಹೊಂದುವಿರಿ. ಕಪಟಿಗಳಾದ ಫರಿಸಾಯರೇ, ಶಾಸ್ತ್ರಿಗಳೇ, ನಿಮಗೆ ಅಯ್ಯೋ! ಒಬ್ಬನನ್ನು ಮತಾಂತರ ಮಾಡು ವದಕ್ಕೆ ನೀವು ಸಮುದ್ರವನ್ನೂ ಭೂಮಿಯನ್ನೂ ಸುತ್ತುತ್ತೀರಿ; ಮತಾಂತರ ಮಾಡಿದ ಮೇಲೆ ಅವನನ್ನು ನಿಮಗಿಂತಲೂ ಎರಡರಷ್ಟು ನರಕದ ಮಗನನ್ನಾಗಿ ಮಾಡುತ್ತೀರಿ. ಕುರುಡರಾದ ಮಾರ್ಗದರ್ಶಕರೇ, ನಿಮಗೆ ಅಯ್ಯೋ! ಒಬ್ಬನು ದೇವಾಲಯದ ಮೇಲೆ ಆಣೆಯಿಟ್ಟರೆ ಅದು ಏನೂ ಅಲ್ಲ ಅನ್ನುತ್ತೀರಿ; ಆದರೆ ಯಾವನಾದರೂ ದೇವಾಲಯದ ಚಿನ್ನದ ಮೇಲೆ ಆಣೆಯಿಟ್ಟರೆ ಅವನು ಸಾಲಗಾರನು ಎಂದು ಅನ್ನುತ್ತೀರಿ. ಮೂರ್ಖರೇ, ಕುರುಡರೇ, ಯಾವದು ದೊಡ್ಡದು? ಚಿನ್ನವೋ ಇಲ್ಲವೆ ಚಿನ್ನವನ್ನು ಪಾವನ ಮಾಡುವ ದೇವಾಲಯವೋ? ಯಾರಾದರೂ ಯಜ್ಞವೇದಿಯ ಮೇಲೆ ಆಣೆಯಿಡುವದಾದರೆ ಅದು ಏನೂ ಅಲ್ಲವೆಂದೂ ಯಾರಾದರೂ ಅದರಲ್ಲಿರುವ ಕಾಣಿಕೆಯ ಮೇಲೆ ಆಣೆಯಿಟ್ಟರೆ ಅವನು ಅಪರಾಧಿ ಯೆಂದೂ ಅನ್ನುತ್ತೀರಿ. ಮೂರ್ಖರೇ, ಕುರುಡರೇ, ಯಾವದು ದೊಡ್ಡದು? ಕಾಣಿಕೆಯೋ ಇಲ್ಲವೆ ಕಾಣಿಕೆಯನ್ನು ಪಾವನಮಾಡುವ ಯಜ್ಞವೇದಿಯೋ? ಆದದರಿಂದ ಯಜ್ಞವೇದಿಯ ಮೇಲೆ ಆಣೆಯಿಡು ವವನು ಅದರ ಮೇಲೆಯೂ ಅದರಲ್ಲಿರುವಂಥವುಗಳ ಮೇಲೆಯೂ ಆಣೆಯಿಡುವವನಾಗಿದ್ದಾನೆ. ದೇವಾ ಲಯದ ಮೇಲೆ ಆಣೆಯಿಡುವವನು ಅದರ ಮೇಲೆ ಯೂ ಆದರಲ್ಲಿ ವಾಸಿಸುವಾತನ ಮೇಲೆಯೂ ಆಣೆ ಯಿಡುವವನಾಗಿದ್ದಾನೆ. ಪರಲೋಕದ ಮೇಲೆ ಆಣೆ ಯಿಡುವವನು ದೇವರ ಸಿಂಹಾಸನದ ಮೇಲೆಯೂ ಅದರ ಮೇಲೆ ಕೂತಿರುವಾತನ ಮೇಲೆಯೂ ಆಣೆಯಿಡುವವನಾಗಿದ್ದಾನೆ. ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ನೀವು ಮರುಗ ಸೋಪು ಜೀರಿಗೆ ಗಳಲ್ಲಿ ದಶಮ ಭಾಗವನ್ನು ಸಲ್ಲಿಸುತ್ತೀರಿ. ಆದರೆ ನ್ಯಾಯ ಪ್ರಮಾಣದ ತೀರ್ಪು ಕರುಣೆ ನಂಬಿಕೆ ಎಂಬ ಈ ಪ್ರಾಮುಖ್ಯವಾದವುಗಳನ್ನು ಬಿಟ್ಟುಬಿಟ್ಟಿದ್ದೀರಿ. ಇವುಗ ಳೊಂದಿಗೆ ಆ ಬೇರೆಯವುಗಳನೂ ಕುರುಡ ಮಾರ್ಗದರ್ಶಕರಾದ ನೀವು ಸೊಳ್ಳೇ ಸೋಸುವವರು ಮತ್ತು ಒಂಟೇ ನುಂಗುವವರು. ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ನೀವು ಪಾತ್ರೆಯ ಮತ್ತು ತಟ್ಟೆಯ ಹೊರಭಾಗವನ್ನು ಶುಚಿಮಾಡುತ್ತೀರಿ. ಆದರೆ ಅವು ಒಳಗೆ ಸುಲಿಗೆಯಿಂದಲೂ ದುರಾಶೆಯಿಂದಲೂ ತುಂಬಿರುತ್ತವೆ. ಕುರುಡನಾದ ಫರಿಸಾಯನೇ, ಮೊದಲು ಪಾತ್ರೆಯ ಮತ್ತು ತಟ್ಟೆಯ ಒಳಗಿನ ಭಾಗ ವನ್ನು ಶುಚಿಮಾಡು; ಆಗ ಅವುಗಳ ಹೊರ ಭಾಗವೂ ಶುಚಿಯಾಗುವದು. ಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ಯಾಕಂದರೆ ನೀವು ಸುಣ್ಣಾ ಹಚ್ಚಿದ ಸಮಾಧಿ ಗಳಿಗೆ ಹೋಲಿಕೆಯಾಗಿದ್ದೀರಿ. ಅವು ಹೊರಗೆ ನಿಜಕ್ಕೂ ಅಂದವಾಗಿ ಕಾಣುತ್ತವೆ; ಆದರೆ ಒಳಗೆ ಸತ್ತವರ ಎಲುಬು ಗಳಿಂದಲೂ ಎಲ್ಲಾ ಅಶುದ್ಧತೆಯಿಂದಲೂ ತುಂಬಿರು ತ್ತವೆ. ಅದರಂತೆಯೇ ನೀವು ಸಹ ಹೊರಗಡೆ ಮನುಷ್ಯರಿಗೆ ನೀತಿವಂತರಂತೆ ಕಾಣಿಸಿಕೊಳ್ಳುತ್ತೀರಿ; ಆದರೆ ನೀವು ಒಳಗೆ ಕಪಟದಿಂದಲೂ ದುಷ್ಟತನ ದಿಂದಲೂ ತುಂಬಿದವರಾಗಿದ್ದೀರಿ. ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ಯಾಕಂದರೆ ನೀವು ಪ್ರವಾದಿಗಳ ಸಮಾಧಿಗಳನ್ನು ಕಟ್ಟಿ ನೀತಿವಂತರ ಸಮಾಧಿಗಳನ್ನು ಅಲಂಕರಿಸುತ್ತೀರಿ. ಆದರೂ--ನಾವು ನಮ್ಮ ಪಿತೃಗಳ ದಿನಗಳಲ್ಲಿ ಇರುತ್ತಿದ್ದರೆ ಪ್ರವಾದಿಗಳ ರಕ್ತದಲ್ಲಿ ಅವರೊಂದಿಗೆ ಪಾಲುಗಾರರಾಗುತ್ತಿರಲಿಲ್ಲ ಎಂದು ಹೇಳುತ್ತೀರಿ. ಆದದರಿಂದ ನೀವು ಆ ಪ್ರವಾದಿ ಗಳನ್ನು ಕೊಂದವರ ಮಕ್ಕಳೇ ಎಂದು ನಿಮಗೆ ನೀವೇ ಸಾಕ್ಷಿಗಳಾಗಿದ್ದೀರಿ. ಹಾಗಾದರೆ ನಿಮ ಪಿತೃಗಳ ಅಳತೆಯನ್ನು ನೀವೇ ತುಂಬಿಸಿರಿ. ಹಾವು ಗಳೇ, ಸರ್ಪಸಂತತಿಯವರೇ, ನೀವು ನರಕದಂಡನೆ ಯಿಂದ ಹೇಗೆ ತಪ್ಪಿಸಿಕೊಂಡೀರಿ? ಆದದರಿಂದ ಇಗೋ, ನಾನು ಪ್ರವಾದಿಗಳನ್ನೂ ಜ್ಞಾನಿಗಳನ್ನೂ ಶಾಸ್ತ್ರಿಗಳನ್ನೂ ನಿಮ್ಮ ಬಳಿಗೆ ಕಳುಹಿ ಸುತ್ತೇನೆ. ಅವರಲ್ಲಿ ಕೆಲವರನ್ನು ನೀವು ಕೊಂದು ಶಿಲುಬೆಗೆ ಹಾಕುವಿರಿ; ಮತ್ತು ಕೆಲವರನ್ನು ನೀವು ನಿಮ್ಮ ಸಭಾಮಂದಿರಗಳಲ್ಲಿ ಕೊರಡೆಗಳಿಂದ ಹೊಡೆದು ಅವ ರನ್ನು ಪಟ್ಟಣದಿಂದ ಪಟ್ಟಣಕ್ಕೆ ಅಟ್ಟಿ ಹಿಂಸಿಸ ಹೀಗೆ ನೀತಿವಂತನಾದ ಹೇಬೆಲನ ರಕ್ತ ಮೊದಲು ಗೊಂಡು ದೇವಾಲಯಕ್ಕೂ ಯಜ್ಞವೇದಿಗೂ ನಡುವೆ ನೀವು ಕೊಂದು ಹಾಕಿದ ಬರಕೀಯನ ಮಗನಾದ ಜಕರೀಯನ ರಕ್ತದವರೆಗೂ ಭೂಮಿಯ ಮೇಲೆ ಸುರಿಸಲ್ಪಟ್ಟ ಎಲ್ಲಾ ನೀತಿವಂತರ ರಕ್ತಾಪರಾಧವು ನಿಮ್ಮ ಮೇಲೆ ಬರುವದು.
- Micah 3:8–11 ಮೀಕ 3:8–11ಆದರೆ ನಿಶ್ಚಯವಾಗಿ ನಾನು ಯಾಕೋ ಬ್ಯರಿಗೆ ಅವನ ಅಪರಾಧವನ್ನೂ ಇಸ್ರಾಯೇಲಿಗೆ ಅವನ ಪಾಪವನ್ನೂ ತಿಳಿಸುವದಕ್ಕೆ ದೇವರ ಆತ್ಮನ ಮುಖಾಂತರ ಶಕ್ತಿಯಿಂದಲೂ ನ್ಯಾಯದಿಂದಲೂ ತ್ರಾಣದಿಂದಲೂ ತುಂಬಿದ್ದೇನೆ. ಯಾಕೋಬನ ಮನೆತನದವರ ಪ್ರಧಾನರೇ, ಇಸ್ರಾಯೇಲಿನ ಮನೆತನದವರ ನ್ಯಾಯಾ ಧಿಪತಿಗಳೇ, ನ್ಯಾಯವನ್ನು ಅಸಹ್ಯಿಸಿ ಎಲ್ಲಾ ಯಥಾರ್ಥ ತ್ವವನ್ನು ಡೊಂಕು ಮಾಡುವವರೇ, ಚೀಯೋನನ್ನು ರಕ್ತದಿಂದಲೂ ಯೆರೂಸಲೇಮನ್ನು ಅಕ್ರಮದಿಂದಲೂ ಕಟ್ಟುವವರೇ, ಈಗ ಇದನ್ನು ಕೇಳಿರಿ. ಅದರ ಮುಖ್ಯಸ್ಥರು ಲಂಚಕ್ಕೆ ನ್ಯಾಯತೀರಿಸುತ್ತಾರೆ; ಅದರ ಯಾಜಕರು ಸಂಬಳಕ್ಕೆ ಬೋಧಿಸುತ್ತಾರೆ; ಅದರ ಪ್ರವಾ ದಿಗಳು ಹಣಕ್ಕೆ ಶಕುನ ಹೇಳುತ್ತಾರೆ; ಆದರೂ ಕರ್ತನ ಮೇಲೆ ಆತುಕೊಂಡು--ಕರ್ತನು ನಮ್ಮ ಮಧ್ಯದಲ್ಲಿ ಇಲ್ಲವೋ? ನಮ್ಮ ಮೇಲೆ ಕೇಡು ಬರುವದಿಲ್ಲ ಅನ್ನು ತ್ತಾರೆ.ಆದಕಾರಣ ನಿಮ್ಮ ನಿಮಿತ್ತವೇ, ಚೀಯೋನು ಹೊಲದ ಹಾಗೆ ಉಳಲ್ಪಡುವದು; ಯೆರೂಸಲೇಮು ದಿಬ್ಬೆಗಳಾಗುವದು, ಆಲಯದ ಪರ್ವತವು ಅಡವಿಯ ಉನ್ನತ ಸ್ಥಳಗಳ ಹಾಗಾಗುವದು.
- 1 Corinthians 6:2–3 1 ಕೊರಿಂಥದವರಿಗೆ 6:2–3ಪರಿಶುದ್ಧರು ಲೋಕಕ್ಕೆ ತೀರ್ಪುಮಾಡು ವರೆಂಬದು ನಿಮಗೆ ತಿಳಿಯದೋ? ಲೋಕವು ನಿಮ್ಮಿಂದ ತೀರ್ಪು ಹೊಂದಬೇಕಾಗಿರುವಾಗ ಅತ್ಯಲ್ಪವಾದವುಗಳ ವಿಷಯದಲ್ಲಿ ತೀರ್ಪುಮಾಡು ವದಕ್ಕೆ ನೀವು ಅಯೋಗ್ಯರಾಗಿದ್ದೀರೋ? ನಾವು ದೂತರಿಗೆ ತೀರ್ಪುಮಾಡುವೆವೆಂದು ನಿಮಗೆ ಗೊತ್ತಿಲ್ಲವೋ? ಹಾಗಾದರೆ ಐಹಿಕ ಜೀವಿತಕ್ಕೆ ಸಂಬಂಧ ಪಟ್ಟ ವಿಷಯಗಳಲ್ಲಿ ಇನ್ನು ಎಷ್ಟೋ ಹೆಚ್ಚಾಗಿ ತೀರ್ಪುಮಾಡಬಹುದಲ್ಲವೇ?
- Hosea 2:2 ಹೋಶೇಯ 2:2ನಿಮ್ಮ ತಾಯಿಯ ಸಂಗಡ ವಾದಿಸಿರಿ, ವಾದಿಸಿರಿ; ಅವಳು ನನ್ನ ಹೆಂಡತಿಯಲ್ಲ; ಇಲ್ಲವೆ ನಾನು ಅವಳ ಗಂಡನಲ್ಲ; ಆದದರಿಂದ ಅವಳು ತನ್ನ ದೃಷ್ಟಿಯಿಂದ ತನ್ನ ವ್ಯಭಿಚಾರತ್ವಗಳನ್ನು ತನ್ನ ಸ್ತನಗಳ ಮಧ್ಯದಿಂದ ತನ್ನ ವ್ಯಭಿಚಾರಗಳನ್ನು ತೊಲಗಿಸಲಿ.
- Acts 7:51–53 ಅಪೊಸ್ತಲರ ಕೃತ್ಯಗಳು 7:51–53ಬಗ್ಗದ ಕುತ್ತಿಗೆಯುಳ್ಳವರೇ, ಹೃದಯದಲ್ಲಿಯೂ ಕಿವಿಗಳಲ್ಲಿಯೂ ಸುನ್ನತಿಯಿಲ್ಲದವರೇ, ನಿಮ್ಮ ಪಿತೃಗಳು ಹೇಗೋ ಹಾಗೆಯೇ ನೀವು ಯಾವಾಗಲೂ ಪವಿತ್ರಾತ್ಮನನ್ನು ಎದುರಿಸುವವರಾಗಿದ್ದೀರಿ. ಪ್ರವಾದಿ ಗಳಲ್ಲಿ ನಿಮ್ಮ ಪಿತೃಗಳು ಹಿಂಸೆಪಡಿಸದವರು ಯಾರಿ ದ್ದಾರೆ? ಅವರು ಆ ನೀತಿವಂತನ ಆಗಮನದ ವಿಷಯದಲ್ಲಿ ಮುಂತಿಳಿಸಿದವರನ್ನು ಕೊಂದರು. ನೀವು ಈಗ ಆತನನ್ನು ಹಿಡುಕೊಟ್ಟು ಕೊಂದವರಾದಿರಿ. ದೇವದೂತರ ಮೂಲಕ ನೇಮಕವಾದ ನ್ಯಾಯ ಪ್ರಮಾಣವನ್ನು ನೀವು ಹೊಂದಿದವರಾದರೂ ಅದನ್ನು ಅನುಸರಿಸಲಿಲ್ಲ ಎಂದು ಹೇಳಿದನು.