Ezekiel · chapter 23 · verse 38
Ezekiel 23:38 in Kannada
ಇದಲ್ಲದೆ ಇದನ್ನು ಮಾಡಿದ ದಿನದಲ್ಲಿಯೇ ನನ್ನ ಪರಿಶುದ್ಧಸ್ಥಳವನ್ನು ಅಪವಿತ್ರಪಡಿಸಿ ನನ್ನ ಸಬ್ಬತ್ತುಗಳನ್ನು ಕೆಡಿಸಿದ್ದಾರೆ.
Idallade idannu maadida dinadalliye nanna parishuddhasthalavannu apavitrapadisi nanna sabbattugalannu kedisiddaare.
Ezekiel 23:38 in English
- King James Version (KJV)
- Moreover this they have done unto me: they have defiled my sanctuary in the same day, and have profaned my sabbaths.
- World English Bible (WEB)
- Moreover this they have done to me: they have defiled my sanctuary in the same day, and have profaned my Sabbaths.
- American Standard Version (ASV)
- Moreover this they have done unto me: they have defiled my sanctuary in the same day, and have profaned my sabbaths.
- Bible in Basic English (BBE)
- Further, this is what she has done to me: she has made my holy place unclean and has made my Sabbaths unclean.
- Darby Translation (DBY)
- Moreover this have they done unto me: in the same day have they defiled my sanctuary and profaned my sabbaths.
- Webster's Bible (WBS)
- Moreover this they have done to me: they have defiled my sanctuary in the same day, and have profaned my sabbaths.
- Young's Literal Translation (YLT)
- Again, this they have done to Me, They defiled My sanctuary in that day, And My sabbaths they have polluted.
Read in context
- 36ಇದಲ್ಲದೆ ಕರ್ತನು ನನಗೆ ಹೇಳಿದ್ದೇನಂದರೆ --ಮನುಷ್ಯಪುತ್ರನೇ, ಒಹೊಲಳಿಗೂ ಒಹೊಲೀ ಬಳಿಗೂ ನ್ಯಾಯತೀರಿಸುವಿಯೋ? ಹೌದು, ಅವರ ಅಸಹ್ಯಗಳನ್ನು ಅವರಿಗೆ ತಿಳಿಸು.
- 37ಹೇಗಂದರೆ, ಅವರು ವ್ಯಭಿಚಾರ ಮಾಡಿದ್ದಾರೆ, ರಕ್ತವು ಅವರ ಕೈಗಳಲ್ಲಿ ಅದೆ; ತಮ್ಮ ವಿಗ್ರಹಗಳಿಂದ ವ್ಯಭಿಚಾರ ಮಾಡಿದ್ದಾರೆ, ನನಗೆ ಹೆತ್ತ ತಮ್ಮ ಗಂಡು ಮಕ್ಕಳನ್ನು ಆ ವಿಗ್ರಹಗಳಿಗೆ ಬಲಿಯಾಗಿ ಕೊಟ್ಟಿದ್ದಾರೆ.
- 38ಇದಲ್ಲದೆ ಇದನ್ನು ಮಾಡಿದ ದಿನದಲ್ಲಿಯೇ ನನ್ನ ಪರಿಶುದ್ಧಸ್ಥಳವನ್ನು ಅಪವಿತ್ರಪಡಿಸಿ ನನ್ನ ಸಬ್ಬತ್ತುಗಳನ್ನು ಕೆಡಿಸಿದ್ದಾರೆ.
- 39ತಮ್ಮ ಮಕ್ಕಳನ್ನು ವಿಗ್ರಹಗಳಿಗೋಸ್ಕರ ಕೊಂದು ಹಾಕಿದ ಮೇಲೆ ಅದೇ ದಿನದಲ್ಲಿ ನನ್ನ ಪರಿಶುದ್ಧ ಸ್ಥಳವನ್ನು ಕೆಡಿಸುವದಕ್ಕೆ ಬಂದರು. ಇಗೋ, ಅವರು ನನ್ನ ಆಲಯದ ಮಧ್ಯದಲ್ಲಿಯೇ ಹೀಗೆ ಮಾಡಿದ್ದಾರೆ;
- 40ದೂತನನ್ನು ಕಳುಹಿಸಿ ದೂರದಿಂದ ಬರಬೇಕೆಂದು ಮನುಷ್ಯರನ್ನು ಕರೇ ಕಳುಹಿಸಿದ್ದಾರೆ; ಇಗೋ, ಬಂದರು. ಅವರಿಗಾಗಿ ನೀನು ಸ್ನಾನಮಾಡಿ ಕಣ್ಣಿಗೆ ಕಾಡಿಗೆ ಹಚ್ಚಿಕೊಂಡು ನಿನ್ನನ್ನು ಆಭರಣಗಳಿಂದ ಅಲಂಕರಿಸಿ ಕೊಂಡೆ.
Cross references
- Ezekiel 20:13 ಯೆಹೆಜ್ಕೇಲನು 20:13ಆದರೆ ಇಸ್ರಾಯೇಲಿನ ಮನೆತನದವರು ಅರಣ್ಯದಲ್ಲಿಯೂ ನನಗೆ ವಿರುದ್ಧ ವಾಗಿ ತಿರುಗಿಬಿದ್ದರು; ಆಜ್ಞಾವಿಧಿಗಳನ್ನು ಅನುಸರಿಸುವ ಮನುಷ್ಯನು ಬದುಕುವನು. ಅವುಗಳಲ್ಲಿ ನಡೆಯದೆ ನನ್ನ ನ್ಯಾಯಗಳನ್ನು ಅಸಡ್ಡೆ ಮಾಡಿ ನನ್ನ ಸಬ್ಬತ್ ದಿನಗಳನ್ನು ಸಹ ಬಹಳವಾಗಿ ಅಪವಿತ್ರಪಡಿಸಿದರು; ಆಗ ನಾನು ಅವರ ಮೇಲೆ ನನ್ನ ರೋಷದಿಂದ ದಹಿಸಿಬಿಡುವೆನೆಂದು ಹೇಳಿದೆನು.
- Ezekiel 7:20 ಯೆಹೆಜ್ಕೇಲನು 7:20ಅವನ ಆಭರಣದ ಸೌಂದರ್ಯವಾ ದರೋ ಅವನು ಅದನ್ನು ಘನತೆಗಾಗಿ ಇಟ್ಟನು. ಆದರೆ ಅವರು ತಮ್ಮ ಅಸಹ್ಯಗಳ ವಿಗ್ರಹಗಳನ್ನೂ ಹೇಸಿಗೆ ಗಳನ್ನೂ ಅದರಲ್ಲಿ ಮಾಡಿದ್ದರಿಂದ ಅದನ್ನು ನಾನು ಅವರಿಂದ ದೂರಮಾಡಿದ್ದೇನೆ.
- 2 Kings 21:7 2 ಅರಸುಗಳು 21:7ಈ ಮನೆಯಲ್ಲಿಯೂ ಇಸ್ರಾಯೇಲಿನ ಸಕಲ ಗೋತ್ರಗಳ ಲ್ಲಿಯೂ ನಾನು ಆದುಕೊಂಡ ಯೆರೂಸಲೇಮಿನ ಲ್ಲಿಯೂ ನನ್ನ ನಾಮವನ್ನು ಯುಗಯುಗಕ್ಕೂ ಇರುವಂತೆ ಮಾಡುವೆನೆಂದು ಕರ್ತನು ದಾವೀದನಿಗೂ ಅವನ ಮಗನಾದ ಸೊಲೊಮೋನನಿಗೂ ಯಾವದನ್ನು ಕುರಿತು ಹೇಳಿದ್ದನೋ ಆ ಮನೆಯಲ್ಲಿ ತಾನು ಮಾಡಿದ ತೋಪಿನ ಕೆತ್ತಿದ ವಿಗ್ರಹವನ್ನು ಇಟ್ಟನು.
- Ezekiel 20:24 ಯೆಹೆಜ್ಕೇಲನು 20:24ಅವರು ನನ್ನ ನ್ಯಾಯಗಳಲ್ಲಿ ನಡೆಯದೆ, ನನ್ನ ನಿಯಮಗಳನ್ನು ಅಲಕ್ಷಿಸಿ ನನ್ನ ಸಬ್ಬತ್ತುಗಳನ್ನು ಅಪವಿತ್ರಪಡಿಸಿದರು; ತಮ್ಮ ಪಿತೃಗಳ ವಿಗ್ರಹಗಳ ಕಡೆಗೆ ಕಣ್ಣಿಟ್ಟಿದ್ದರು.
- 2 Kings 23:11–12 2 ಅರಸುಗಳು 23:11–12ಬೈಲ ಲ್ಲಿರುವ ಪ್ರಧಾನನಾದ ನಾತಾನ್ ಮೆಲೆಕನ ಕೊಠಡಿಯ ಹತ್ತಿರ ಇದ್ದ ಕರ್ತನ ಮನೆಯ ದ್ವಾರದ ಬಳಿಯಲ್ಲಿ ಯೆಹೂದದ ಅರಸುಗಳು ಸೂರ್ಯನಿಗೆ ಕೊಟ್ಟ ಕುದುರೆ ಗಳನ್ನು ತೆಗೆದುಹಾಕಿ ಸೂರ್ಯನ ರಥಗಳನ್ನು ಬೆಂಕಿ ಯಿಂದ ಸುಟ್ಟುಬಿಟ್ಟನು. ಯೆಹೂದದ ಅರಸರು ಉಂಟು ಮಾಡಿದ ಆಹಾಜನ ಮೇಲು ಮಾಳಿಗೆಯ ಮೇಲೆ ಇದ್ದ ಬಲಿಪೀಠಗಳನ್ನೂ ಮನಸ್ಸೆಯು ಕರ್ತನ ಮನೆಯ ಎರಡು ಅಂಗಳಗಳಲ್ಲಿ ಮಾಡಿದ ಬಲಿಪೀಠ ಗಳನ್ನೂ ಅರಸನು ಕೆಡವಿಸಿ ಅಲ್ಲಿಂದ ಅದರ ಧೂಳನ್ನು ಕಿದ್ರೋನ್ ಹಳ್ಳದಲ್ಲಿ ಹಾಕಿಸಿದನು.
- Ezekiel 22:8 ಯೆಹೆಜ್ಕೇಲನು 22:8ನೀನು ನನ್ನ ಪರಿಶುದ್ಧ ಸಂಗತಿಗಳನು ತಿರಸ್ಕರಿಸಿ ನನ್ನ ಸಬ್ಬತ್ತುಗಳನ್ನು ಅಪವಿತ್ರಪಡಿಸಿದ್ದೀ.
- Nehemiah 13:17–18 ನೆಹೆಮೀಯ 13:17–18ಆಗ ನಾನು ಯೆಹೂದದ ಶ್ರೇಷ್ಠರನ್ನು ಗದರಿಸಿ, ಅವರಿಗೆ -- ಸಬ್ಬತ್ ದಿನವನ್ನು ನೀವು ಅಪವಿತ್ರಮಾಡುವ ಈ ಕೆಟ್ಟಕಾರ್ಯವೇನು? ನಿಮ್ಮ ತಂದೆಗಳು ಈ ಪ್ರಕಾರ ಮಾಡಿದ್ದರಿಂದ ನಮ್ಮ ದೇವರು ನಮ್ಮ ಮೇಲೆಯೂ ಪಟ್ಟಣದ ಮೇಲೆಯೂ ಈ ಕೇಡನ್ನೆಲ್ಲಾ ಬರಮಾಡಲ್ಲಿಲ್ಲವೋ? ಆದರೆ ನೀವು ಸಬ್ಬತ್ ದಿವಸವನ್ನು ಅಪವಿತ್ರ ಮಾಡುವದರಿಂದ ಇಸ್ರಾಯೇಲಿನ ಮೇಲೆ ಇನ್ನೂ ಉರಿಯನ್ನು ಬರಮಾಡುವಿರಿ.
- Ezekiel 8:5–16 ಯೆಹೆಜ್ಕೇಲನು 8:5–16ಆಮೇಲೆ ಆತನು ನನಗೆ --ಮನುಷ್ಯಪುತ್ರನೇ, ಈಗ ಉತ್ತರದ ಕಡೆಗೆ ನಿನ್ನ ಕಣ್ಣುಗಳನ್ನು ಎತ್ತು ಅಂದಾಗ ನಾನು ಉತ್ತರದ ಕಡೆಗೆ ಕಣ್ಣುಗಳನ್ನೆತ್ತಿದೆನು; ಇಗೋ, ಉತ್ತರದಲ್ಲಿ ಯಜ್ಞ ವೇದಿಯ ಬಾಗಿಲಲ್ಲಿ ಅಸೂಯೆ ವಿಗ್ರಹವು ಪ್ರವೇಶ ದಲ್ಲಿತ್ತು. ಇದಲ್ಲದೆ ಆತನು ನನಗೆ ಹೇಳಿದ್ದೇನಂದರೆ --ಮನುಷ್ಯಪುತ್ರನೇ, ಅವರು ಮಾಡುತ್ತಿರುವದನ್ನು ನೋಡುತ್ತಿರುವಿಯಾ? ನಾನು ನನ್ನ ಪರಿಶುದ್ಧ ಸ್ಥಳವನ್ನು ಬಿಟ್ಟು ದೂರ ಹೋಗುವ ಹಾಗೆ ಇಸ್ರಾಯೇಲಿನ ಮನೆತನದವರು ಇಲ್ಲಿ ನಡೆಸುತ್ತಿರುವ ದೊಡ್ಡ ಅಸಹ್ಯ ಗಳನ್ನು ನೋಡುತ್ತಿರುವಿಯಾ? ಆದರೆ ಮತ್ತೆ ತಿರು ಗಿಕೋ, ನೀನು ಇನ್ನೂ ದೊಡ್ಡ ಅಸಹ್ಯಗಳನ್ನು ನೋಡುವಿ ಅಂದನು. ಆಗ ಅವನು ನನ್ನನ್ನು ಅಂಗಳದ ಬಾಗಲಿಗೆ ತಂದನು; ಮತ್ತು ನಾನು ನೋಡುವಾಗ ಇಗೋ, ಗೋಡೆಯಲ್ಲಿ ಒಂದು ರಂಧ್ರವನ್ನು ಕಂಡೆನು ಆಮೇಲೆ ಆತನು ನನಗೆ--ಮನುಷ್ಯಪುತ್ರನೇ, ಈಗ ಗೋಡೆಯಲ್ಲಿ ಕೊರೆ ಎಂದು ಹೇಳಿದನು. ಯಾವಾಗ ನಾನು ಗೋಡೆಯನ್ನು ಕೊರೆದೆನೋ ಒಂದು ಬಾಗಿಲು ಕಾಣಿಸಿತು. ಆಗ ಆತನು ನನಗೆ--ಒಳಗೆ ಹೋಗು; ಅವರು ಮಾಡುವ ಕೆಟ್ಟ ಅಸಹ್ಯಗಳನ್ನು ನೋಡು ಅಂದನು. ಹಾಗೆಯೇ ನಾನು ಒಳಗೆ ಹೋಗಿ ನೋಡಿದೆನು; ಇಗೋ, ಎಲ್ಲಾ ಜಾತಿಯ ಕ್ರಿಮಿಕೀಟಗಳೂ ಅಸಹ್ಯ ಮೃಗಗಳೂ ಇಸ್ರಾಯೇಲ್ಯರು ಪೂಜಿಸುವ ಸಕಲ ಮೂರ್ತಿಗಳೂ ಈ ಗೋಡೆಯ ಸುತ್ತಲೂ ಚಿತ್ರಿಸ ಲ್ಪಟ್ಟಿವೆ. ಇದಲ್ಲದೆ ಇಸ್ರಾಯೇಲಿನ ಮನೆತನ ದವರಲ್ಲಿ ಎಪ್ಪತ್ತು ಮಂದಿಯೂ ಅವರ ಮಧ್ಯದಲ್ಲಿ ಶಾಫಾನನ ಮಗನಾದ ಯಾಜನ್ಯನೂ ನಿಂತುಕೊಂಡಿ ದ್ದರು; ಪ್ರತಿಯೊಬ್ಬನ ಕೈಯಲ್ಲೂ ಅವನವನ ಧೂಪಾ ರತಿ ಇತ್ತು; ಧೂಪದ ಸುವಾಸನೆಯು ಮೇಘವಾಗಿ ಏರುತ್ತಿತ್ತು. ಆಗ ಆತನು ನನಗೆ ಮನುಷ್ಯಪುತ್ರನೇ, ಇಸ್ರಾಯೇಲಿನ ಮನೆತನದವರ ಪೂರ್ವಿಕರು ಕತ್ತಲೆ ಯಲ್ಲಿ ಪ್ರತಿಯೊಬ್ಬನೂ ತನ್ನ ಕೊಠಡಿಗಳಲ್ಲಿ ಚಿತ್ರಗಳನ್ನು ಮಾಡುವದನ್ನು ನೋಡಿದೆಯಾ?--ಕರ್ತನು ನಮ್ಮನ್ನು ನೋಡುವದಿಲ್ಲ, ಕರ್ತನು ಭೂಮಿಯನ್ನು ತೊರೆದು ಬಿಟ್ಟಿದ್ದಾನೆ ಎಂದು ಹೇಳುವರು. ಇದಲ್ಲದೆ ಆತನು ಹೇಳಿದ್ದೇನಂದರೆ--ಮತ್ತೊಂದು ಸಾರಿ ತಿರುಗಿಕೋ; ಅವರು ಮಾಡುವ ಇನ್ನೂ ಮಹಾ ಅಸಹ್ಯವಾದವು ಗಳನ್ನು ನೋಡುವಿ ಅಂದನು. ಆಗ ಅವನು ನನ್ನನ್ನು ಕರ್ತನ ಆಲಯದ ಉತ್ತರ ಕಡೆಗೆ ಎದುರಾಗಿ ಬಾಗಲಿದ್ದ ಕಡೆಗೆ ತಂದನು; ಇಗೋ, ಅಲ್ಲಿ ತಮ್ಮೂಜ್ಗೋಸ್ಕರ ಅಳುವ ಹೆಂಗಸರು ಕೂತಿದ್ದರು. ಆಮೇಲೆ ನನಗೆ ಆತನು, ಓ ನರಪುತ್ರನೇ, ನೋಡಿದಿಯೋ? ಮತ್ತೊಂದು ಸಾರಿ ತಿರುಗಿಕೋ ಇವುಗಳಿಗಿಂತ ಇನ್ನೂ ದೊಡ್ಡ ಅಸಹ್ಯವಾದವುಗಳನ್ನು ನೋಡುವಿ ಎಂದು ಹೇಳಿದನು. ಆಗ ಅವನು ನನ್ನನ್ನು ಕರ್ತನ ಆಲ ಯದ ಒಳಗಿನ ಅಂಗಳಕ್ಕೆ ಕರೆದುಕೊಂಡು ಹೋದನು. ಇಗೋ, ಕರ್ತನ ಮಂದಿರದ ಬಾಗಿಲಲ್ಲಿ ದ್ವಾರಾಂಗ ಳಕ್ಕೂ ಯಜ್ಞವೇದಿಗೂ ಮಧ್ಯದಲ್ಲಿ ಸುಮಾರು ಇಪ್ಪ ತ್ತೈದು ಮಂದಿಯು ಕರ್ತನ ಮಂದಿರಕ್ಕೆ ಬೆನ್ನು ಕೊಟ್ಟು, ಪೂರ್ವದಿಕ್ಕಿನ ಕಡೆಗೆ ತಮ್ಮ ಮುಖಗಳನ್ನು ತಿರು ಗಿಸಿ ಸೂರ್ಯ ನಮಸ್ಕಾರ ಮಾಡುತ್ತಿದ್ದರು.
- 2 Kings 21:4 2 ಅರಸುಗಳು 21:4ಇದಲ್ಲದೆ ಯೆರೂಸಲೇಮಿನಲ್ಲಿ ನನ್ನ ನಾಮವನ್ನು ಇರಿಸುವೆನೆಂದು ಕರ್ತನು ಯಾವದನ್ನು ಕುರಿತು ಹೇಳಿದ್ದನೋ ಆ ಕರ್ತನ ಮನೆಯಲ್ಲಿ ಅವನು ಬಲಿಪೀಠಗಳನ್ನು ಕಟ್ಟಿಸಿದನು.
- Jeremiah 17:27 ಯೆರೆಮೀಯ 17:27ಆದರೆ ನೀವು ಸಬ್ಬತ್ತಿನ ದಿವಸವನ್ನು ಪರಿಶುದ್ಧ ಮಾಡಬೇಕೆಂದೂ ಸಬ್ಬತ್ತಿನ ದಿವಸದಲ್ಲಿ ಹೊರೆಯನ್ನು ಹೊತ್ತುಕೊಂಡು ಯೆರೂಸಲೇಮಿನ ಬಾಗಿಲುಗಳಲ್ಲಿ ಪ್ರವೇಶಿಸಬಾರದೆಂದೂ ಹೇಳಿದ ನನ್ನ ಮಾತನ್ನು ಕೇಳದೆ ಹೋದರೆ, ಅದರ ಬಾಗಿಲುಗಳಲ್ಲಿ ಬೆಂಕಿಯನ್ನು ಹಚ್ಚುತ್ತೇನೆ; ಅದು ಆರಿ ಹೋಗದೆ ಯೆರೂಸಲೇಮಿನ ಅರಮನೆಗಳನ್ನು ದಹಿಸಿಬಿಡುವದು.
- Ezekiel 5:11 ಯೆಹೆಜ್ಕೇಲನು 5:11ಆದಕಾರಣ ನನ್ನ ಜೀವದಾಣೆ, ದೇವರಾದ ಕರ್ತನು --ನಿಶ್ಚಯವಾಗಿ ನೀನು ನನ್ನ ಪರಿಶುದ್ಧ ಸ್ಥಳವನ್ನು ನಿನ್ನ ಎಲ್ಲಾ ಹೇಸಿಗೆಗಳಿಂದಲೂ ಅಸಹ್ಯಗಳಿಂದಲೂ ಅಪವಿತ್ರಪಡಿಸಿದ ಕಾರಣ ನಾನೂ ಸಹ ನಿನ್ನನ್ನು ಕುಂದಿಸುವೆನು ಮತ್ತು ನನ್ನ ಕಣ್ಣು ಕನಿಕರಿಸುವದಿಲ್ಲ, ಇಲ್ಲವೆ ಕಟಾಕ್ಷವನ್ನು ತೋರಿಸುವದಿಲ್ಲ.