Ezekiel · chapter 24 · verse 11
Ezekiel 24:11 in Kannada
ಆಮೇಲೆ ಅದರ ಹಿತ್ತಾಳೆ ಬಿಸಿಯಾಗಿ ಮೈಲಿಗೆ ಕರಗಿ ಕಲ್ಮಶವು ಹೋಗುವ ಹಾಗೆ ಅದನ್ನು ಬರಿದು ಮಾಡಿ ಕೆಂಡಗಳ ಮೇಲೆ ಇಡು.
Aamele adara hittaale bisiyaagi mailige karagi kalmashavu hoguva haage adannu baridu maadi kendagala mele idu.
Ezekiel 24:11 in English
- King James Version (KJV)
- Then set it empty upon the coals thereof, that the brass of it may be hot, and may burn, and [that] the filthiness of it may be molten in it, [that] the scum of it may be consumed.
- World English Bible (WEB)
- Then set it empty on its coals, that it may be hot, and its bronze may burn, and that its filthiness may be molten in it, that its rust may be consumed.
- American Standard Version (ASV)
- Then set it empty upon the coals thereof, that it may be hot, and the brass thereof may burn, and that the filthiness of it may be molten in it, that the rust of it may be consumed.
- Bible in Basic English (BBE)
- And I will put her on the coals so that she may be heated and her brass burned, so that what is unclean in her may become soft and her waste be completely taken away.
- Darby Translation (DBY)
- Then set it empty upon its coals, that it may be hot, and the brass of it may burn, and that its filthiness may be molten in it, [and] that its rust may be consumed.
- Webster's Bible (WBS)
- Then set it empty upon its coals, that the brass of it may be hot, and may burn, and [that] the filthiness of it may be melted in it, [that] the scum of it may be consumed.
- Young's Literal Translation (YLT)
- And cause it to stand on its coals empty, So that its brass is hot and burning, Melted hath been in its midst its uncleanness, Consumed is its scum.
Read in context
- 9ಆದದರಿಂದ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಆ ರಕ್ತಾಪರಾಧವುಳ್ಳ ಪಟ್ಟಣವು ಹಾಳಾ ಗಲಿ, ನಾನೇ ಬೆಂಕಿಯನ್ನು ರಾಶಿಯಾಗಿ ಹೆಚ್ಚಿಸುವೆನು.
- 10ಬಹಳ ಸೌದೆ ಹಾಕಿ, ಬೆಂಕಿಯನ್ನು ಹೆಚ್ಚಿಸಿ, ಮಾಂಸ ವನ್ನು ಬೇಯಿಸು; ಮಸಾಲೆ ಚೆನ್ನಾಗಿ ಇರಲಿ, ಮತ್ತು ಎಲುಬುಗಳು ಸುಡಲಿ.
- 11ಆಮೇಲೆ ಅದರ ಹಿತ್ತಾಳೆ ಬಿಸಿಯಾಗಿ ಮೈಲಿಗೆ ಕರಗಿ ಕಲ್ಮಶವು ಹೋಗುವ ಹಾಗೆ ಅದನ್ನು ಬರಿದು ಮಾಡಿ ಕೆಂಡಗಳ ಮೇಲೆ ಇಡು.
- 12ಅದರ ಕಲ್ಮಶವು ಆಯಾಸವನ್ನುಂಟು ಮಾಡಿತೇ ಹೊರತು ಅದಕ್ಕೆ ಹತ್ತಿದ್ದ ಆ ಬಹಳವಾದ ಕಿಲುಬು ಹೋಗಲಿಲ್ಲ, ಅದು ಬೆಂಕಿಯಲ್ಲಿರಲಿ;
- 13ನಿನ್ನ ಅಶುದ್ಧ ತ್ವವು ದುಷ್ಕರ್ಮವುಳ್ಳದ್ದು; ನಾನು ನಿನ್ನನ್ನು ಪರಿಶುದ್ಧ ಮಾಡಿದರೂ ನೀನು ಶುದ್ಧವಾಗದ ಕಾರಣ ನಾನು ನನ್ನ ರೋಷವನ್ನು ನಿನ್ನ ಮೇಲೆ ಕಳುಹಿಸುವಷ್ಟು ಕಾಲದ ವರೆಗೂ ಇನ್ನು ಮೇಲೆ ನೀನು ನಿನ್ನ ಅಪವಿತ್ರತ್ವದಿಂದ ಇನ್ನು ಶುದ್ಧವಾಗುವದಿಲ್ಲ.
Cross references
- Jeremiah 21:10 ಯೆರೆಮೀಯ 21:10ಅವನ ಪ್ರಾಣವು ಅವನಿಗೆ ಕೊಳ್ಳೆಯಾಗಿರುವದು. ನಾನು ಒಳ್ಳೇದಕ್ಕಲ್ಲ ಕೆಟ್ಟದ್ದಕ್ಕೆ ಈ ಪಟ್ಟಣದ ಮೇಲೆ ನನ್ನ ದೃಷ್ಟಿಯನ್ನಿಟ್ಟಿದ್ದೇನೆಂದು ಕರ್ತನು ಹೇಳುತ್ತಾನೆ; ಅದು ಬಾಬೆಲಿನ ಅರಸನ ಕೈಯಲ್ಲಿ ಒಪ್ಪಿಸಲ್ಪಡುವದು; ಅವನು ಅದನ್ನು ಬೆಂಕಿ ಯಿಂದ ಸುಟ್ಟುಬಿಡುವನು.
- Isaiah 1:25 ಯೆಶಾಯ 1:25ನನ್ನ ಕೈಯನ್ನು ನಿನ್ನ ಕಡೆಗೆ ತಿರುಗಿಸಿ ಮಲಿನವನ್ನು ಸ್ವಚ್ಚವಾಗಿ ಶುದ್ಧಮಾಡಿ ನಿನ್ನ ಎಲ್ಲಾ ಕಲ್ಮಷವನ್ನು ತೆಗೆದು ಬಿಡುವೆನು.
- Malachi 4:1 ಮಲಾಕಿಯ 4:1ಇಗೋ, ಆ ದಿನವು ಬರುತ್ತದೆ; ಅದು ಒಲೆಯ ಹಾಗೆ ಉರಿಯುವದು; ಆಗ ಗರ್ವಿಷ್ಠರೆಲ್ಲರೂ ಹೌದು, ಕೆಟ್ಟದ್ದನ್ನು ಮಾಡುವವ ರೆಲ್ಲರೂ ಹುಲ್ಲಿನಂತಿರುವರು; ಬರುವ ಆ ದಿನವು ಅವರನ್ನು ಸುಟ್ಟುಬಿಡುವದು; ಬೇರನ್ನಾದರೂ ಕೊಂಬೆ ಯನ್ನಾದರೂ ಅವರಿಗೆ ಬಿಡದು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- Zechariah 13:1–2 ಜೆಕರ್ಯ 13:1–2ಆ ದಿನದಲ್ಲಿ ದಾವೀದನ ಮನೆತನದ ವರಿಗೂ ಯೆರೂಸಲೇಮಿನ ನಿವಾಸಿಗ ಳಿಗೂ ಪಾಪದ ನಿಮಿತ್ತ ಮತ್ತು ಅಶುದ್ಧತ್ವದ ನಿಮಿತ್ತ ಬುಗ್ಗೆ ತೆರೆಯಲ್ಪಡುವದು. ಸೈನ್ಯಗಳ ಕರ್ತನು--ಆ ದಿನದಲ್ಲಿ ಆಗುವದೇನಂದರೆ, ನಾನು ವಿಗ್ರಹಗಳ ಹೆಸರುಗಳನ್ನು ದೇಶದೊಳಗಿಂದ ಕಡಿದುಬಿಡುವೆನು; ಅವು ಇನ್ನು ಮೇಲೆ ಜ್ಞಾಪಕಕ್ಕೆ ಬರುವದಿಲ್ಲ; ಪ್ರವಾದಿಗಳನ್ನೂ ಅಶುದ್ಧ ಆತ್ಮವನ್ನೂ ದೇಶದೊಳಗಿಂದ ತೊಲಗಿ ಹೋಗುವಂತೆ ಮಾಡುವೆನು ಎಂದು ಅನ್ನುತ್ತಾನೆ.
- Ezekiel 22:15–23 ಯೆಹೆಜ್ಕೇಲನು 22:15–23ನಿನ್ನನ್ನು ಅನ್ಯ ಜನಾಂಗಗಳಲ್ಲಿ ಚದರಿಸಿ, ದೇಶಗಳಲ್ಲಿ ಹರಡಿಸುವೆನು; ನಿನ್ನ ಅಶುದ್ಧತ್ವವನ್ನು ನಿನ್ನಿಂದ ತೆಗೆದು ನಾಶಮಾಡುವೆನು. ಆಗ ನೀನು ಅನ್ಯಜನಾಂಗಗಳ ಮುಂದೆ ನೀನು ನಿನ್ನ ಬಾಧ್ಯತೆಯನ್ನು ತಕ್ಕೊಳ್ಳುವಿ; ನಾನೇ ಕರ್ತನೆಂದು ನೀನು ತಿಳಿದುಕೊಳ್ಳುವಿ. ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇ ನಂದರೆ -- ಮನುಷ್ಯಪುತ್ರನೇ, ಇಸ್ರಾಯೇಲಿನ ಮನೆತನದವರು ನನಗೆ (ಮಂಡೂರ) ಕಿಟ್ಟದ ಹಾಗಾದರು ಅವರೆಲ್ಲರೂ ಬಲೆಯ ಮಧ್ಯದಲ್ಲಿರುವ ಹಿತ್ತಾಳೆ, ತವರ, ಕಬ್ಬಿಣದ, ಹಾಗೆ ಇದ್ದಾರೆ. ಸೀಸದ ಮತ್ತು ಬೆಳ್ಳಿಯ ಕಿಟ್ಟಗಳ ಹಾಗೆಯೂ ಇದ್ದಾರೆ. ಆದದರಿಂದ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ನೀವೆಲ್ಲರೂ ಕಿಟ್ಟವಾಗಿರುವದರಿಂದ ಇಗೋ, ನಾನು ನಿಮ್ಮನ್ನು ಯೆರೂಸಲೇಮಿನ ಮಧ್ಯಕ್ಕೆ ಕೂಡಿಸುತ್ತೇನೆ. ಅವರು ಬೆಳ್ಳಿ, ಹಿತ್ತಾಳೆ, ಕಬ್ಬಿಣ, ಸೀಸ ಮತ್ತು ತಗಡುಗಳನ್ನು ಹೇಗೆ ಒಲೆಯೊಳಗೆ ಕೂಡಿಸಿ ಅದಕ್ಕೆ ಬೆಂಕಿಯನ್ನೂದಿ ಕರಗಿಸುವರೋ ಹಾಗೆಯೇ ನಾನು ನಿಮ್ಮನ್ನು ನನ್ನ ಕೋಪದಲ್ಲಿಯೂ ನನ್ನ ರೋಷದಲ್ಲಿಯೂ ಕರಗಿಸಿಬಿಡುವೆನು. ಹೌದು, ನನ್ನ ರೋಷದ ಬೆಂಕಿಯಿಂದ ನಾನು ನಿಮ್ಮ ಮೇಲೆ ಊದುವೆನು. ನೀವು ಅದರೊಳಗೆ ಕರಗಿ ಹೋಗುವಿರಿ. ಬೆಳ್ಳಿಯು ಕುಲುಮೆಯಲ್ಲಿ ಕರಗುವ ಹಾಗೆ ನೀವು ನನ್ನ ರೋಷಾಗ್ನಿಯಲ್ಲಿ ಕರಗು ವಿರಿ; ನಿನ್ನ ಮೇಲೆ ರೋಷಾಗ್ನಿಯನ್ನು ಸುರಿಸಿದಾತನು ಕರ್ತನಾದ ನಾನೇ ಎಂದು ನಿಮಗೆ ತಿಳಿಯುತ್ತದೆ. ಇದಲ್ಲದೆ ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ --
- 1 Corinthians 3:12–13 1 ಕೊರಿಂಥದವರಿಗೆ 3:12–13ಈ ಅಸ್ತಿವಾರದ ಮೇಲೆ ಚಿನ್ನ ಬೆಳ್ಳಿ ಅಮೂಲ್ಯವಾದ ಕಲ್ಲುಗಳು ಕಟ್ಟಿಗೆ ಹುಲ್ಲು ಆಪು ಇವುಗಳಲಿ ಯಾವದರಿಂದ ಕಟ್ಟಿದರೂ ಅವನವನ ಕೆಲಸವು ವ್ಯಕ್ತವಾಗುವದು; ಯಾಕಂದರೆ ಆ ದಿನವು ಬೆಂಕಿ ಯೊಡನೆ ಪ್ರತ್ಯಕ್ಷವಾಗಿ ಆ ಕೆಲಸವನ್ನು ಸ್ಪಷ್ಟವಾಗಿ ತೋರಿಸುವದು; ಅವನವನ ಕೆಲಸವೆಂಥದೋ ಆ ಬೆಂಕಿ ಶೋಧಿಸುವದು.
- Jeremiah 39:8 ಯೆರೆಮೀಯ 39:8ಅರಸನ ಮನೆಯನ್ನೂ ಜನರ ಮನೆಗಳನ್ನೂ ಕಸ್ದೀಯರು ಬೆಂಕಿಯಿಂದ ಸುಟ್ಟರು; ಮತ್ತು ಯೆರೂಸಲೇಮಿನ ಗೋಡೆಗಳನ್ನು ಕೆಡವಿಬಿಟ್ಟರು.
- Isaiah 27:9 ಯೆಶಾಯ 27:9ಹೀಗಿರಲು (ಈ ಕಾರಣದಿಂದ) ಯಾಕೋಬು ಯಜ್ಞವೇದಿಯ ಕಲ್ಲುಗಳನ್ನೆಲ್ಲಾ ಒಡೆದುಹೋದ ಸುಣ್ಣದ ಕಲ್ಲುಗಳಂತೆ ಮಾಡುವಾಗ ವಿಗ್ರಹಸ್ತಂಭಗಳೂ ಸೂರ್ಯಸ್ತಂಭ ಗಳೂ ಏಳುವದಿಲ್ಲ ಮತ್ತು ಅದರ ಪಾಪಪರಿಹಾರಕ್ಕೆ ಗುರುತಾದ ಪೂರ್ಣಫಲವು ಇದೇ.
- Micah 5:11–14 ಮೀಕ 5:11–14ನಿನ್ನ ದೇಶದ ಪಟ್ಟಣಗಳನ್ನು ಕಡಿದುಬಿಟ್ಟು ನಿನ್ನ ಕೋಟೆಗಳನ್ನೆಲ್ಲಾ ಕೆಡವಿಹಾಕುವೆನು. ನಿನ್ನ ಕೈಯೊಳಗಿಂದ ಮಂತ್ರತಂತ್ರವನ್ನು ಕಡಿದು ಬಿಡುವೆನು; ಕಣಿ ಹೇಳುವವರು ನಿನಗೆ ಇನ್ನು ಇರು ವದಿಲ್ಲ. ನಿನ್ನ ಕೆತ್ತಿದ ವಿಗ್ರಹಗಳನ್ನೂ ನಿಂತಿರುವ ನಿನ್ನ ಪ್ರತಿಮೆಗಳನ್ನೂ ನಿನ್ನ ಮಧ್ಯದೊಳಗಿಂದ ಕಡಿದು ಬಿಡುವೆನು; ನೀನು ಇನ್ನು ಸ್ವಂತ ಕೈಕೆಲಸಗಳನ್ನು ಆರಾಧಿಸುವದಿಲ್ಲ. ನಿನ್ನ ತೋಪುಗಳನ್ನು ನಿನ್ನ ಮಧ್ಯ ದೊಳಗಿಂದ ಕಿತ್ತುಹಾಕಿ ನಿನ್ನ ಪಟ್ಟಣಗಳನ್ನು ನಾಶ ಮಾಡುವೆನು.ಇದಲ್ಲದೆ ಕಿವಿಗೊಡದೆ ಇದ್ದ ಜನಾಂಗಗಳಿಗೆ ಕೋಪದಿಂದಲೂ ಉಗ್ರದಿಂದಲೂ ಮುಯ್ಯಿ ತೀರಿಸುವೆನು.
- Jeremiah 37:10 ಯೆರೆಮೀಯ 37:10ನಿಮ್ಮ ಸಂಗಡ ಯುದ್ಧ ಮಾಡುವ ಕಸ್ದೀಯರ ಸೈನ್ಯವನ್ನೆಲ್ಲಾ ನೀವು ಹೊಡೆದಿ ದ್ದಾಗ್ಯೂ ಗಾಯಪಟ್ಟ ಮನುಷ್ಯರು ಮಾತ್ರ ಅವರೊಳಗೆ ಉಳಿದಿದ್ದಾಗ್ಯೂ ಅವರೇ ತಮ್ಮ ತಮ್ಮ ಡೇರೆಗಳಲ್ಲಿ ಎದ್ದು ಈ ಪಟ್ಟಣವನ್ನು ಬೆಂಕಿಯಿಂದ ಸುಡುವರು.
- Ezekiel 23:47–48 ಯೆಹೆಜ್ಕೇಲನು 23:47–48ಆ ಸಂಘದವರು ಅವರ ಮೇಲೆ ಕಲ್ಲೆಸೆದು ತಮ್ಮ ಕತ್ತಿಗಳಿಂದ ಕೊಯ್ದು ಅವರ ಕುಮಾರರನ್ನೂ ಕುಮಾರ್ತೆಯರನ್ನೂ ಕೊಂದು ಹಾಕಿ ಬೆಂಕಿಯಿಂದ ಅವರ ಮನೆಗಳನ್ನೆಲ್ಲಾ ಸುಟ್ಟು ಬಿಡುವರು. ಹೀಗೆ ಸ್ತ್ರೀಯರೆಲ್ಲರೂ ನಿಮ್ಮ ದುಷ್ಕ ರ್ಮದ ಪ್ರಕಾರ ಮಾಡದಿರಲೆಂದು ಬೋಧಿಸಿ ದೇಶ ದೊಳಗಿಂದ ದುಷ್ಕರ್ಮವನ್ನು ತೆಗೆದುಹಾಕುವೆನು.ನಿಮ್ಮ ದುಷ್ಕರ್ಮದ ಫಲವನ್ನು ನಿಮ್ಮ ಮೇಲೆಯೇ ಮುಯ್ಯಿ ತೀರಿಸುವೆನು. ನೀವು ನಿಮ್ಮ ವಿಗ್ರಹಗಳ ಪಾಪಗಳನ್ನು ಹೊರುವಿರಿ; ಆಗ ದೇವರಾದ ಕರ್ತನು ನಾನೇ ಎಂದು ತಿಳಿದುಕೊಳ್ಳುವಿರಿ.
- Jeremiah 38:18 ಯೆರೆಮೀಯ 38:18ನೀನು ಬಾಬೆಲಿನ ಅರಸನ ಪ್ರಧಾನರ ಬಳಿಗೆ ಹೊರಗೆ ಹೋಗದಿದ್ದರೆ ಈ ಪಟ್ಟಣವು ಕಸ್ದೀಯರ ಕೈಯಲ್ಲಿ ಒಪ್ಪಿಸಲ್ಪಡುವದು; ಅವರು ಅದನ್ನು ಬೆಂಕಿಯಿಂದ ಸುಡುವರು; ನೀನು ಅವರ ಕೈಯಿಂದ ತಪ್ಪಿಸಿಕೊಳ್ಳುವದಿಲ್ಲ ಅಂದನು.