Ezekiel · chapter 24 · verse 14
Ezekiel 24:14 in Kannada
ಕರ್ತನಾದ ನಾನೇ ಅದನ್ನು ಹೇಳಿದ್ದೇನೆ, ಅದು ನಡೆಯುವದು; ನಾನು ಅದನ್ನು ಮಾಡದೆ ಬಿಡುವದಿಲ್ಲ; ಕಟಾಕ್ಷ ತೋರಿಸು ವದಿಲ್ಲ; ಪಶ್ಚಾತ್ತಾಪಪಡುವದಿಲ್ಲ. ನಿನ್ನ ಮಾರ್ಗಗಳ ಪ್ರಕಾರವೂ ನಿನ್ನ ಕ್ರಿಯೆಗಳ ಪ್ರಕಾರವೂ ನಿನಗೆ ನ್ಯಾಯ ತೀರಿಸುವೆನೆಂದು ದೇವರಾದ ಕರ್ತನು ಹೇಳುತ್ತಾನೆ.
Kartanaada naane adannu heliddene, adu nadeyuvadu; naanu adannu maadade biduvadilla; kataaksha torisu vadilla; pashchaattaapapaduvadilla. Ninna maargagala prakaaravoo ninna kriyegala prakaaravoo ninage nyaaya teerisuvenendu devaraada kartanu heluttaane.
Ezekiel 24:14 in English
- King James Version (KJV)
- I the LORD have spoken [it:] it shall come to pass, and I will do [it;] I will not go back, neither will I spare, neither will I repent; according to thy ways, and according to thy doings, shall they judge thee, saith the Lord GOD.
- World English Bible (WEB)
- “‘“I, the LORD, have spoken it. It will happen, and I will do it. I won’t go back. I won’t spare. I won’t repent. According to your ways and according to your doings, they will judge you,” says the Lord GOD.’”
- American Standard Version (ASV)
- I, Jehovah, have spoken it: it shall come to pass, and I will do it: I will not go back, neither will I spare, neither will I repent; according to thy ways, and according to thy doings, shall they judge thee, saith the Lord Jehovah.
- Bible in Basic English (BBE)
- I the Lord have said the word and I will do it; I will not go back or have mercy, and my purpose will not be changed; in the measure of your ways and of your evil doings you will be judged, says the Lord.
- Darby Translation (DBY)
- I Jehovah have spoken [it]: it shall come to pass, and I will do it; I will not go back, neither will I spare, nor will I repent. According to thy ways, and according to thy doings, shall they judge thee, saith the Lord Jehovah.
- Webster's Bible (WBS)
- I the LORD have spoken [it] ; it shall come to pass, and I will do [it] ; I will not go back, neither will I spare, neither will I repent; according to thy ways, and according to thy doings, shall they judge thee, saith the Lord GOD.
- Young's Literal Translation (YLT)
- I, Jehovah, hath spoken, It hath come, and I have done [it], I do not free, nor do I spare, nor do I repent, According to thy ways, and according to thine acts, they have judged thee, An affirmation of the Lord Jehovah.'
Read in context
- 12ಅದರ ಕಲ್ಮಶವು ಆಯಾಸವನ್ನುಂಟು ಮಾಡಿತೇ ಹೊರತು ಅದಕ್ಕೆ ಹತ್ತಿದ್ದ ಆ ಬಹಳವಾದ ಕಿಲುಬು ಹೋಗಲಿಲ್ಲ, ಅದು ಬೆಂಕಿಯಲ್ಲಿರಲಿ;
- 13ನಿನ್ನ ಅಶುದ್ಧ ತ್ವವು ದುಷ್ಕರ್ಮವುಳ್ಳದ್ದು; ನಾನು ನಿನ್ನನ್ನು ಪರಿಶುದ್ಧ ಮಾಡಿದರೂ ನೀನು ಶುದ್ಧವಾಗದ ಕಾರಣ ನಾನು ನನ್ನ ರೋಷವನ್ನು ನಿನ್ನ ಮೇಲೆ ಕಳುಹಿಸುವಷ್ಟು ಕಾಲದ ವರೆಗೂ ಇನ್ನು ಮೇಲೆ ನೀನು ನಿನ್ನ ಅಪವಿತ್ರತ್ವದಿಂದ ಇನ್ನು ಶುದ್ಧವಾಗುವದಿಲ್ಲ.
- 14ಕರ್ತನಾದ ನಾನೇ ಅದನ್ನು ಹೇಳಿದ್ದೇನೆ, ಅದು ನಡೆಯುವದು; ನಾನು ಅದನ್ನು ಮಾಡದೆ ಬಿಡುವದಿಲ್ಲ; ಕಟಾಕ್ಷ ತೋರಿಸು ವದಿಲ್ಲ; ಪಶ್ಚಾತ್ತಾಪಪಡುವದಿಲ್ಲ. ನಿನ್ನ ಮಾರ್ಗಗಳ ಪ್ರಕಾರವೂ ನಿನ್ನ ಕ್ರಿಯೆಗಳ ಪ್ರಕಾರವೂ ನಿನಗೆ ನ್ಯಾಯ ತೀರಿಸುವೆನೆಂದು ದೇವರಾದ ಕರ್ತನು ಹೇಳುತ್ತಾನೆ.
- 15ಇದಲ್ಲದೆ, ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ--
- 16ಮನುಷ್ಯಪುತ್ರನೇ, ಇಗೋ, ಒಂದೇ ಏಟಿನಿಂದ ನೇತ್ರಾನಂದವಾಗಿರುವದನ್ನು ನಿನ್ನಿಂದ ತೆಗೆಯುತ್ತೇನೆ; ಆದರೆ ನೀನು ದುಃಖಪಡಬೇಡ, ಅಳಬೇಡ, ನಿನ್ನ ಕಣ್ಣೀರು ಹರಿದು ಹೋಗದಿರಲಿ.
Cross references
- Matthew 16:27 ಮತ್ತಾಯನು 16:27ಯಾಕಂದರೆ ಮನುಷ್ಯಕುಮಾರನು ತನ್ನ ತಂದೆಯ ಮಹಿಮೆಯಲ್ಲಿ ತನ್ನ ದೂತರೊಡನೆ ಬಂದಾಗ ಆತನು ಪ್ರತಿಯೊಬ್ಬ ನಿಗೂ ಅವನವನ ಕೆಲಸಗಳಿಗೆ ತಕ್ಕಂತೆ ಪ್ರತಿಫಲವನ್ನು ಕೊಡುವನು ಎಂದು ಹೇಳಿದನು.ನಿಮಗೆ ನಿಜವಾಗಿ ಹೇಳುವದೇನಂದರೆ--ಇಲ್ಲಿ ನಿಂತವರಲ್ಲಿ ಕೆಲವರು ಮನುಷ್ಯಕುಮಾರನು ತನ್ನ ರಾಜ್ಯದಲ್ಲಿ ಬರುವದನ್ನು ನೋಡುವವರೆಗೆ ಮರಣದ ರುಚಿಯನ್ನು ನೋಡುವದೇ ಇಲ್ಲ ಅಂದನು.
- Ezekiel 18:30 ಯೆಹೆಜ್ಕೇಲನು 18:30ಆದದರಿಂದ ಇಸ್ರಾಯೇಲಿನ ಮನೆತನದವರೇ, ನಿಮ್ಮ ನಿಮ್ಮ ಮಾರ್ಗಗಳ ಪ್ರಕಾರ ನ್ಯಾಯತೀರಿಸುವೆನಂದು ದೇವ ರಾದ ಕರ್ತನು ಹೇಳುತ್ತಾನೆ; ನಿಮ್ಮ ದುಷ್ಟತ್ವಗಳನ್ನೆಲ್ಲಾ ಬಿಟ್ಟು ತಿರುಗಿಕೊಂಡು ಪಶ್ಚಾತ್ತಾಪಪಡಿರಿ; ಆಗ ಅಕ್ರಮ ಗಳು ನಿಮ್ಮನ್ನು ಆಳುವದಿಲ್ಲ.
- Isaiah 3:11 ಯೆಶಾಯ 3:11ಕೆಡುಕರಿಗೆ ಅಯ್ಯೋ! ಅವರಿಗೆ ಕೇಡೇ ಇರಲಿ; ಅವನ ಕೈಗಳ ಪ್ರತಿಫಲವು ಅವನಿಗೆ ಕೊಡಲ್ಪಡುವದು.
- Jeremiah 13:14 ಯೆರೆಮೀಯ 13:14ಅವರ ತಂದೆಗಳನ್ನೂ ಮಕ್ಕಳನ್ನೂ ಕೂಡ ಒಬ್ಬನ ಮೇಲೊಬ್ಬನನ್ನು ಅಪ್ಪಳಿಸು ವೆನು. ನಾನು ಅವರನ್ನು ಕನಿಕರಿಸುವದಿಲ್ಲ, ಕರುಣಿಸು ವದಿಲ್ಲ ಅಂತಃಕರುಣೆಪಡುವದಿಲ್ಲ ಅವರನ್ನು ಕೆಡಿಸು ವೆನು ಎಂದು ಕರ್ತನು ಅನ್ನುತ್ತಾನೆ.
- 1 Samuel 15:29 1 ಸಮುವೇಲನು 15:29ಇಸ್ರಾ ಯೇಲಿನ ನಿತ್ಯ ಬಲವಾದಾತನು ಸುಳ್ಳು ಹೇಳುವಾತ ನಲ್ಲ, ಪಶ್ಚಾತ್ತಾಪಪಡುವಾತನೂ ಅಲ್ಲ. ಯಾಕಂದರೆ ಆತನು ಪಶ್ಚಾತ್ತಾಪಪಡುವಂತೆ ಮನುಷ್ಯನಲ್ಲ ಅಂದನು.
- Ezekiel 7:4 ಯೆಹೆಜ್ಕೇಲನು 7:4ನನ್ನ ಕಣ್ಣುಗಳು ನಿನ್ನನ್ನು ಕಟಾಕ್ಷಿಸುವದಿಲ್ಲ; ನಾನು ನಿನ್ನನ್ನು ಕನಿಕರಿಸು ವದೂ ಇಲ್ಲ, ಆದರೆ ನಿನ್ನ ಮಾರ್ಗಗಳ ಪ್ರಕಾರ ನಿನ್ನ ಮೇಲೆ ಮುಯ್ಯಿ ತೀರಿಸುತ್ತೇನೆ, ನಿನ್ನ ಅಸಹ್ಯಗಳು ನಿನ್ನ ಮಧ್ಯೆ ಇರುವವು, ನಾನೇ ಕರ್ತನೆಂದು ನಿನಗೆ ತಿಳಿಯುವದು.
- Numbers 23:19 ಅರಣ್ಯಕಾಂಡ 23:19ಸುಳ್ಳಾಡುವ ಹಾಗೆ ದೇವರು ಮನುಷ್ಯನಲ್ಲ, ಪಶ್ಚಾತ್ತಾಪಪಡುವ ಹಾಗೆ ನರಪುತ್ರನಲ್ಲ; ಆತನು ನುಡಿದದ್ದನ್ನು ಮಾಡದಿರುವನೇ? ಮಾತನಾಡಿದ್ದನ್ನು ಆತನು ಸ್ಥಾಪಿಸನೇ?
- Psalm 33:9 ಕೀರ್ತನೆಗಳು 33:9ಆತನು ಹೇಳಲು ಆಯಿತು; ಆಜ್ಞಾಪಿಸಲು ಅದು ಸ್ಥಿರವಾಯಿತು.
- Isaiah 55:11 ಯೆಶಾಯ 55:11ನನ್ನ ಬಾಯಿಂದ ಹೊರಡುವ ನನ್ನ ವಾಕ್ಯವು ಹಾಗೆಯೂ ಇರುವದು; ಅದು ಸುಮ್ಮನೆ ನನ್ನ ಬಳಿಗೆ ಹಿಂತಿರುಗದೆ ನಾನು ಯಾವದನ್ನು ಮೆಚ್ಚು ತ್ತೇನೋ ಅದನ್ನು ಅದು ಮಾಡುವದು; ನಾನು ಅದನ್ನು ಯಾವದರ ನಿಮಿತ್ತ ಕಳುಹಿಸಿದೆನೋ ಅದರಲ್ಲಿ ಅದು ಸಫಲವಾಗುವದು.
- Ezekiel 9:10 ಯೆಹೆಜ್ಕೇಲನು 9:10ಆದದರಿಂದ ನಾನಂತೂ ಕನಿಕರಿಸುವದೂ ಇಲ್ಲ ಕಟಾಕ್ಷಿಸುವದೂ ಇಲ್ಲ ಆದರೆ ಅವರ ಮಾರ್ಗದಲ್ಲಿಯೇ ಅವರ ತಲೆಯ ಮೇಲೆ ಮುಯ್ಯಿತೀರಿಸುವೆನು ಅಂದನು.ಇಗೋ, ನಾರುಮಡಿಯನ್ನು ತನ್ನ ಪಕ್ಕೆ ಯಲ್ಲಿ ಧರಿಸಿಕೊಂಡಂಥ ಆ ಮನುಷ್ಯನು ವರ್ತಮಾನ ವನ್ನು ತಂದು ನೀನು ಆಜ್ಞಾಪಿಸಿದ ಹಾಗೆ ಮಾಡಿದ್ದೇನೆ ಅಂದನು.
- Ezekiel 5:11 ಯೆಹೆಜ್ಕೇಲನು 5:11ಆದಕಾರಣ ನನ್ನ ಜೀವದಾಣೆ, ದೇವರಾದ ಕರ್ತನು --ನಿಶ್ಚಯವಾಗಿ ನೀನು ನನ್ನ ಪರಿಶುದ್ಧ ಸ್ಥಳವನ್ನು ನಿನ್ನ ಎಲ್ಲಾ ಹೇಸಿಗೆಗಳಿಂದಲೂ ಅಸಹ್ಯಗಳಿಂದಲೂ ಅಪವಿತ್ರಪಡಿಸಿದ ಕಾರಣ ನಾನೂ ಸಹ ನಿನ್ನನ್ನು ಕುಂದಿಸುವೆನು ಮತ್ತು ನನ್ನ ಕಣ್ಣು ಕನಿಕರಿಸುವದಿಲ್ಲ, ಇಲ್ಲವೆ ಕಟಾಕ್ಷವನ್ನು ತೋರಿಸುವದಿಲ್ಲ.
- Jeremiah 23:20 ಯೆರೆಮೀಯ 23:20ಆತನು ತನ್ನ ಹೃದಯದ ಅಲೋ ಚನೆಗಳನ್ನು ನಡೆಸಿ ತೀರಿಸುವ ವರೆಗೂ ಕರ್ತನ ಕೋಪವು ತಿರುಗುವದಿಲ್ಲ; ಅಂತ್ಯದಿನಗಳಲ್ಲಿ ಅದನ್ನು ಸಂಪೂರ್ಣವಾಗಿ ಯೋಚನೆ ಮಾಡುವಿರಿ.