Ezekiel · chapter 24 · verse 21
Ezekiel 24:21 in Kannada
ಇಸ್ರಾಯೇಲ್ಯರ ಮನೆ ತನದವರೊಂದಿಗೆ ಮಾತನಾಡಿ ದೇವರಾದ ಕರ್ತನು ಹೀಗೆ ಹೇಳುತ್ತಾನೆಂದು ಹೇಳು--ಇಗೋ, ನಾನು ನನ್ನ ಪರಿಶುದ್ಧ ಸ್ಥಳವನ್ನೂ ನಿಮ್ಮ ಬಲದ ಶ್ರೇಷ್ಠತ್ವವನ್ನೂ ನಿಮ್ಮ ನೇತ್ರಾನಂದಕರವಾದದ್ದನ್ನೂ ನಿಮ್ಮ ಮನಸ್ಸು ಅಭಿಲಾಷಿಸುವದನ್ನೂ ನಾನು ಅಪವಿತ್ರಪಡಿಸುವೆನು; ನೀವು ಬಿಟ್ಟಿರುವ ನಿಮ್ಮ ಕುಮಾರರೂ ಕುಮಾರ್ತೆಯರೂ ಕತ್ತಿಯಿಂದ ಬೀಳುವರು.
Israayelyara mane tanadavarondige maatanaadi devaraada kartanu heege heluttaanendu helu--igo, naanu nanna parishuddha sthalavannoo nimma balada shreshthatvavannoo nimma netraanandakaravaadaddannoo nimma manassu abhilaashisuvadannoo naanu apavitrapadisuvenu; neevu bittiruva nimma kumaararoo kumaarteyaroo kattiyinda beeluvaru.
Ezekiel 24:21 in English
- King James Version (KJV)
- Speak unto the house of Israel, Thus saith the Lord GOD; Behold, I will profane my sanctuary, the excellency of your strength, the desire of your eyes, and that which your soul pitieth; and your sons and your daughters whom ye have left shall fall by the sword.
- World English Bible (WEB)
- ‘Speak to the house of Israel, “The Lord GOD says: ‘Behold, I will profane my sanctuary, the pride of your power, the desire of your eyes, and that which your soul pities; and your sons and your daughters whom you have left behind will fall by the sword.
- American Standard Version (ASV)
- Speak unto the house of Israel, Thus saith the Lord Jehovah: Behold, I will profane my sanctuary, the pride of your power, the desire of your eyes, and that which your soul pitieth; and your sons and your daughters whom ye have left behind shall fall by the sword.
- Bible in Basic English (BBE)
- Say to the people of Israel, The Lord has said, See, I will make my holy place unclean, the pride of your strength, the pleasure of your eyes, and the desire of your soul; and your sons and daughters, who did not come with you here, will be put to the sword.
- Darby Translation (DBY)
- Say unto the house of Israel, Thus saith the Lord Jehovah: Behold, I will profane my sanctuary, the pride of your strength, the desire of your eyes, and your soul's longing; and your sons and your daughters whom ye have left behind shall fall by the sword.
- Webster's Bible (WBS)
- Speak to the house of Israel, Thus saith the Lord GOD; Behold, I will profane my sanctuary, the excellence of your strength, the desire of your eyes, and that which your soul pitieth; and your sons and your daughters whom ye have left shall fall by the sword.
- Young's Literal Translation (YLT)
- Say to the house of Israel: Thus said the Lord Jehovah: Lo, I am polluting My sanctuary, The excellency of your strength, The desire of your eyes, and the pitied of your soul, And your sons and your daughters whom ye have left, by sword they do fall.
Read in context
- 19ಆಗ ಜನರು--ನೀನು ಮಾಡುವ ಆ ಸಂಗತಿಗಳಿಂದ ನಮಗೆ ಪ್ರಯೋಜನವೇ ನೆಂದು ತಿಳಿಸುವದಿಲ್ಲವೇ ಎಂದರು.
- 20ಆಮೇಲೆ ನಾನು ಅವರಿಗೆ ಉತ್ತರಿಸಿದೆನು; ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ--
- 21ಇಸ್ರಾಯೇಲ್ಯರ ಮನೆ ತನದವರೊಂದಿಗೆ ಮಾತನಾಡಿ ದೇವರಾದ ಕರ್ತನು ಹೀಗೆ ಹೇಳುತ್ತಾನೆಂದು ಹೇಳು--ಇಗೋ, ನಾನು ನನ್ನ ಪರಿಶುದ್ಧ ಸ್ಥಳವನ್ನೂ ನಿಮ್ಮ ಬಲದ ಶ್ರೇಷ್ಠತ್ವವನ್ನೂ ನಿಮ್ಮ ನೇತ್ರಾನಂದಕರವಾದದ್ದನ್ನೂ ನಿಮ್ಮ ಮನಸ್ಸು ಅಭಿಲಾಷಿಸುವದನ್ನೂ ನಾನು ಅಪವಿತ್ರಪಡಿಸುವೆನು; ನೀವು ಬಿಟ್ಟಿರುವ ನಿಮ್ಮ ಕುಮಾರರೂ ಕುಮಾರ್ತೆಯರೂ ಕತ್ತಿಯಿಂದ ಬೀಳುವರು.
- 22ನಾನು ಮಾಡಿದ ಹಾಗೆ ನೀವು ಮಾಡುವಿರಿ; ನಿಮ್ಮ ತುಟಿಗಳನ್ನು ಮುಚ್ಚಿಕೊಳ್ಳ ಬಾರದು ಅವರ ರೊಟ್ಟಿಯನ್ನೂ ತಿನ್ನಬಾರದು.
- 23ನಿಮ್ಮ ರುಮಾಲುಗಳು ತಲೆಯ ಮೇಲೆಯೂ ನಿಮ್ಮ ಜೋಡು ಗಳು ನಿಮ್ಮ ಪಾದಗಳ ಅಡಿಯಲ್ಲಿಯೂ ಇರುವವು; ನೀವು ಗೋಳಾಡದೆ ಅಳದೆ ನಿಮ್ಮ ಅಕ್ರಮಗಳಿಂದ ಕುಂದಿಹೋಗಿ ಒಬ್ಬರ ಸಂಗಡಲೊಬ್ಬರು ನರುಳುವಿರಿ.
Cross references
- Ezekiel 23:47 ಯೆಹೆಜ್ಕೇಲನು 23:47ಆ ಸಂಘದವರು ಅವರ ಮೇಲೆ ಕಲ್ಲೆಸೆದು ತಮ್ಮ ಕತ್ತಿಗಳಿಂದ ಕೊಯ್ದು ಅವರ ಕುಮಾರರನ್ನೂ ಕುಮಾರ್ತೆಯರನ್ನೂ ಕೊಂದು ಹಾಕಿ ಬೆಂಕಿಯಿಂದ ಅವರ ಮನೆಗಳನ್ನೆಲ್ಲಾ ಸುಟ್ಟು ಬಿಡುವರು.
- Jeremiah 7:14 ಯೆರೆಮೀಯ 7:14ಆದಕಾರಣ ನನ್ನ ಹೆಸರಿನಿಂದ ಕರೆ ಯಲ್ಪಟ್ಟಂಥ ನೀವು ನಂಬಿಕೊಂಡಿರುವಂಥ ಈ ಆಲಯಕ್ಕೂ ನಾನು ನಿಮಗೂ ನಿಮ್ಮ ಪಿತೃಗಳಿಗೂ ಕೊಟ್ಟ ಸ್ಥಳಕ್ಕೂ ಶಿಲೋವಿಗೆ ಮಾಡಿದ ಹಾಗೆ ಮಾಡುವೆನು.
- Psalm 27:4 ಕೀರ್ತನೆಗಳು 27:4ಒಂದ ನ್ನೇ ಕರ್ತನಿಂದ ಬಯಸಿದೆನು, ಅದನ್ನೇ ಹುಡುಕುವೆನು; ಕರ್ತನ ರಮ್ಯತೆಯನ್ನು ದೃಷ್ಟಿಸುವದೂ ಆತನ ಮಂದಿರ ದಲ್ಲಿ ವಿಚಾರಿಸುವದೂ ನನ್ನ ಜೀವನದ ದಿನಗಳಲ್ಲೆಲ್ಲಾ ಕರ್ತನ ಆಲಯದಲ್ಲಿ ವಾಸಮಾಡುವದೂ ಆಗಿದೆ.
- Ezekiel 23:25 ಯೆಹೆಜ್ಕೇಲನು 23:25ಇದಲ್ಲದೆ ನನ್ನ ಅಸೂಯೆಯನ್ನು ನಿನಗೆ ವಿರುದ್ಧವಾಗಿ ಬರಮಾಡುವೆನು; ಅವರು ನಿನ್ನಲ್ಲಿ ಕೋಪತೀರಿಸಿ ಕೊಳ್ಳುವರು; ನಿನ್ನ ಮೂಗನ್ನೂ ಕಿವಿಗಳನ್ನೂ ತೆಗೆದು ಹಾಕುವರು; ನಿನ್ನಲ್ಲಿ ಉಳಿದವರು ಕತ್ತಿಯಿಂದ ಬೀಳು ವರು; ನಿನ್ನ ಗಂಡು ಹೆಣ್ಣು ಮಕ್ಕಳನ್ನು ಅಪಹರಿಸುವರು; ನಿನ್ನಲ್ಲಿ ಉಳಿದವರೆಲ್ಲರೂ ಅಗ್ನಿಗೆ ಆಹುತಿಯಾಗುವರು.
- Psalm 84:1 ಕೀರ್ತನೆಗಳು 84:1ಸೈನ್ಯಗಳ ಓ ಕರ್ತನೇ, ನಿನ್ನ ನಿವಾಸಗಳು ಎಷ್ಟೋ ರಮ್ಯವಾಗಿವೆ!
- Lamentations 2:6–7 ಪ್ರಲಾಪಗಳು 2:6–7ಆತನು ತನ್ನ ಗುಡಾರವನ್ನು ತೋಟದಂತೆ ಬಲಾತ್ಕಾರವಾಗಿ ತೆಗೆದುಹಾಕಿದ್ದಾನೆ. ಆತನು ತನ್ನ ಸಭಾಸ್ಥಾನಗಳನ್ನು ನಾಶಮಾಡಿದ್ದಾನೆ; ಕರ್ತನು ಚೀಯೋನಿನಲ್ಲಿ ಪವಿತ್ರ ಹಬ್ಬಗಳನ್ನೂ ಸಬ್ಬತ್ತನ್ನೂ ಮರೆತುಬಿಡುವಂತೆ ಮಾಡಿದ್ದಾನೆ, ತನ್ನ ಕೋಪದ ಉರಿಯಲ್ಲಿ ಅರಸನನ್ನೂ ಯಾಜಕನನ್ನೂ ತುಚ್ಛೀಕರಿ ಸಿದ್ದಾನೆ. ಕರ್ತನು ತನ್ನ ಯಜ್ಞವೇದಿಯನ್ನು ತಳ್ಳಿಬಿಟ್ಟಿ ದ್ದಾನೆ; ತನ್ನ ಪರಿಶುದ್ಧ ಸ್ಥಳವನ್ನು ಅಸಹ್ಯಪಡಿಸಿದ್ದಾನೆ; ಆತನು ಅವಳ ಅರಮನೆಗಳ ಗೋಡೆಗಳನ್ನು ಶತ್ರುವಿನ ಕೈಯಲ್ಲಿ ಒಪ್ಪಿಸಿಕೊಟ್ಟಿದ್ದಾನೆ; ಪರಿಶುದ್ಧ ಹಬ್ಬದ ದಿನದಲ್ಲಿ ಮಾಡಿದ ಹಾಗೆ ಅವರು ಕರ್ತನ ಆಲಯದಲ್ಲಿ ಶಬ್ದಮಾಡಿದ್ದಾರೆ.
- Jeremiah 6:11 ಯೆರೆಮೀಯ 6:11ಆದದರಿಂದ ಕರ್ತನ ಕೋಪದಿಂದ ನಾನು ತುಂಬಿ ದ್ದೇನೆ, ಅದನ್ನು ನನ್ನೊಳಗೆ ಬಿಗಿಹಿಡಿದು ನನಗೆ ಸಾಕಾಯಿತು; ಅದನ್ನು ದೂರ ಇರುವ ಮಕ್ಕಳ ಮೇಲೆ ಮತ್ತು ಯೌವನಸ್ಥರ ಕೂಟ ಸಹಿತವಾಗಿ ಅವರ ಮೇಲೆ ಸುರಿಸುವೆನು. ನಿಶ್ಚಯವಾಗಿ ಗಂಡನು ಹೆಂಡತಿಯ ಸಂಗಡಲೂ ಮುದುಕನು ದಿನ ತುಂಬಿದವನ ಸಂಗ ಡಲೂ ಹಿಡಿಯಲ್ಪಡುವರು.
- Ezekiel 24:16 ಯೆಹೆಜ್ಕೇಲನು 24:16ಮನುಷ್ಯಪುತ್ರನೇ, ಇಗೋ, ಒಂದೇ ಏಟಿನಿಂದ ನೇತ್ರಾನಂದವಾಗಿರುವದನ್ನು ನಿನ್ನಿಂದ ತೆಗೆಯುತ್ತೇನೆ; ಆದರೆ ನೀನು ದುಃಖಪಡಬೇಡ, ಅಳಬೇಡ, ನಿನ್ನ ಕಣ್ಣೀರು ಹರಿದು ಹೋಗದಿರಲಿ.
- Jeremiah 16:3–4 ಯೆರೆಮೀಯ 16:3–4ಈ ಸ್ಥಳದಲ್ಲಿ ಹುಟ್ಟಿರುವ ಕುಮಾರ ಕುಮಾರ್ತೆ ರಯರನ್ನು ಕುರಿತಾಗಿಯೂ ಅವರನ್ನು ಹೆತ್ತ ತಾಯಿಗಳನ್ನು ಈ ದೇಶದಲ್ಲಿ ಅವರನ್ನು ಪಡೆದ ತಂದೆಗಳನ್ನು ಕುರಿ ತಾಗಿಯೂ ಕರ್ತನು ಹೀಗೆ ಹೇಳುತ್ತಾನೆ-- ಅವರು ಬಹು ಕ್ರೂರವಾದ ಮರಣಗಳಿಂದ ಸಾಯುವರು; ಅವರಿಗೋಸ್ಕರ ಗೋಳಾಟ ಆಗುವದಿಲ್ಲ; ಅವರು ಹೂಣಿಡಲ್ಪಡುವದಿಲ್ಲ; ಭೂಮಿಯ ಮೇಲೆ ಅವರು ಗೊಬ್ಬರವಾಗುವರು; ಕತ್ತಿಯಿಂದಲೂ ಕ್ಷಾಮದಿಂದಲೂ ಸಂಹಾರವಾಗುವರು; ಅವರ ಹೆಣಗಳು ಆಕಾಶದ ಪಕ್ಷಿಗಳಿಗೂ ಭೂಮಿಯ ಮೃಗಗಳಿಗೂ ಆಹಾರ ವಾಗುವವು.
- Psalm 132:8 ಕೀರ್ತನೆಗಳು 132:8ಓ ಕರ್ತನೇ, ನೀನು ಬಲವುಳ್ಳ ನಿನ್ನ ಮಂಜೂಷದೊಂದಿಗೆ ನಿನ್ನ ವಿಶ್ರಾಂತಿಗೆ ಎದ್ದೇಳು.
- Ezekiel 9:7 ಯೆಹೆಜ್ಕೇಲನು 9:7ಆತನು ಅವರಿಗೆ--ಆಲಯವನ್ನು ಅಶುದ್ಧ ಮಾಡಿರಿ, ಹತರಾದವರಿಂದ ಅಂಗಳಗಳನ್ನು ತುಂಬಿಸಿ, ಹೊರಡಿರಿ ಎಂದು ಹೇಳಿದನು. ಅವರು ಹೊರಟು ನಗರದಲ್ಲಿದ್ದವರನ್ನು ಹತಮಾಡಿದರು.
- Psalm 79:1 ಕೀರ್ತನೆಗಳು 79:1ದೇವರೇ, ಅನ್ಯಜನಾಂಗಗಳು ನಿನ್ನ ಬಾಧ್ಯತೆಯೊಳಗೆ ಬಂದು, ನಿನ್ನ ಪರಿಶುದ್ಧ ಮಂದಿರವನ್ನು ಅಪವಿತ್ರ ಮಾಡಿ, ಯೆರೂಸಲೇಮನ್ನು ಹಾಳು ದಿಬ್ಬಗಳಾಗಿ ಮಾಡಿದ್ದಾರೆ.
Original words (Hebrew)
- Speak · H559אָמַר ʼâmar
- house · H1004בַּיִת bayith
- Israel · H3478יִשְׂרָאֵל Yisrâʼêl
- saith · H559אָמַר ʼâmar
- Lord · H136אֲדֹנָי ʼĂdônây
- profane · H2490חָלַל châlal
- sanctuary · H4720מִקְדָּשׁ miqdâsh
- excellency · H1347גָּאוֹן gâʼôwn
- strength · H5797עֹז ʻôz
- desire · H4261מַחְמָד machmâd
- eyes · H5869עַיִן ʻayin
- soul · H5315נֶפֶשׁ nephesh
- pitieth · H4263מַחְמָל machmâl
- sons · H1121בֵּן bên
- daughters · H1323בַּת bath
- left · H5800עָזַב ʻâzab
- fall · H5307נָפַל nâphal
- sword · H2719חֶרֶב chereb