Ezekiel · chapter 25 · verse 2
Ezekiel 25:2 in Kannada
ಮನುಷ್ಯಪುತ್ರನೇ, ನೀನು ಅಮ್ಮೋನನ ಕುಮಾರರಿಗೆ ಅಭಿಮುಖನಾಗಿ ಅವರಿಗೆ ವಿರೋಧವಾಗಿ ಪ್ರವಾದಿಸು;
Manushyaputrane, neenu ammonana kumaararige abhimukhanaagi avarige virodhavaagi pravaadisu;
Ezekiel 25:2 in English
- King James Version (KJV)
- Son of man, set thy face against the Ammonites, and prophesy against them;
- World English Bible (WEB)
- “Son of man, set your face toward the children of Ammon, and prophesy against them.
- American Standard Version (ASV)
- Son of man, set thy face toward the children of Ammon, and prophesy against them:
- Bible in Basic English (BBE)
- Son of man, let your face be turned to the children of Ammon, and be a prophet against them:
- Darby Translation (DBY)
- Son of man, set thy face against the children of Ammon, and prophesy against them;
- Webster's Bible (WBS)
- Son of man, set thy face against the Ammonites, and prophesy against them;
- Young's Literal Translation (YLT)
- 'Son of man, set thy face unto the sons of Ammon, and prophesy against them;
Read in context
- 1ಇದಲ್ಲದೆ ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ--
- 2ಮನುಷ್ಯಪುತ್ರನೇ, ನೀನು ಅಮ್ಮೋನನ ಕುಮಾರರಿಗೆ ಅಭಿಮುಖನಾಗಿ ಅವರಿಗೆ ವಿರೋಧವಾಗಿ ಪ್ರವಾದಿಸು;
- 3ಅಮ್ಮೋನನ ಕುಮಾರರಿಗೆ ಹೇಳು, ದೇವರಾದ ಕರ್ತನ ವಾಕ್ಯವನ್ನು ಕೇಳಿರಿ; ದೇವರಾದ ಕರ್ತನು ಹೇಳುವದೇನಂದರೆ --ನೀನು ನನ್ನ ಪರಿಶುದ್ದಸ್ಥಳವನ್ನು ಅಪವಿತ್ರಪಡಿಸಿದಾ ಗಲೂ ಇಸ್ರಾಯೇಲಿನ ದೇಶವು ಹಾಳಾದಾಗಲೂ ಯೆಹೂದನ ಮನೆತನದವರು ಸೆರೆಯಲ್ಲಿದ್ದಾಗಲೂ ಅಹಾ, ಅಂದವಾದದರಿಂದ ನಿನ್ನನ್ನು ಹೆಚ್ಚಿಸಿಕೊಂಡದ್ದ ರಿಂದ
- 4ಇಗೋ, ನಾನು ನಿನ್ನನ್ನು ಮೂಡಣದವರಿಗೆ ಸ್ವಾಸ್ತ್ಯವಾಗಿ ಕೊಡುತ್ತೇನೆ, ಅವರು ತಮ್ಮ ಭವನಗಳನ್ನು ನಿನ್ನಲ್ಲಿ ಇರಿಸುವರು, ತಮ್ಮ ನಿವಾಸಗಳನ್ನು ನಿನ್ನಲ್ಲಿ ಮಾಡಿಕೊಳ್ಳುವರು, ಅವರು ನಿನ್ನ ಫಲವನ್ನು ತಿಂದು ನಿನ್ನ ಹಾಲನ್ನೇ ಕುಡಿಯುವರು.
Cross references
- Jeremiah 49:1–6 ಯೆರೆಮೀಯ 49:1–6ಅಮ್ಮೋನ್ಯರ ವಿಷಯವಾಗಿ ಕರ್ತನು ಹೀಗೆ ಹೇಳುತ್ತಾನೆ--ಇಸ್ರಾಯೇಲಿಗೆ ಕುಮಾರರಿ ಲ್ಲವೋ? ಅವನಿಗೆ ಬಾಧ್ಯನಿಲ್ಲವೋ? ಅವರ ಅರಸನು ಗಾದನ್ನು ಬಾಧ್ಯವಾಗಿ ತಕ್ಕೊಳ್ಳುವದು ಯಾಕೆ? ಅವನ ಜನರು ಅದರ ಪಟ್ಟಣಗಳಲ್ಲಿ ವಾಸಮಾಡುವದು ಯಾಕೆ? ಆದದರಿಂದ ಇಗೋ, ದಿನಗಳು ಬರುವ ವೆಂದು ಕರ್ತನು ಅನ್ನುತ್ತಾನೆ; ಆಗ ಅಮ್ಮೋನನ ಮಕ್ಕಳು ರಬ್ಬಾದಲ್ಲಿ ಯುದ್ಧದ ಆರ್ಭಟವನ್ನು ಕೇಳುವಂತೆ ನಾನು ಮಾಡುವೆನು; ಅದು ಹಾಳು ದಿಬ್ಬೆಯಾಗುವದು; ಅದರ ಕುಮಾರ್ತೆಯರು ಸಹ ಬೆಂಕಿಯಿಂದ ಸುಡಲ್ಪಡು ವರು; ಆಗ ಇಸ್ರಾಯೇಲು ತನ್ನ ಬಾಧ್ಯಸ್ಥರ ಬಾಧ್ಯ ವನ್ನು ಹೊಂದುವದೆಂದು ಕರ್ತನು ಹೇಳುತ್ತಾನೆ. ಹೆಷ್ಬೋನೇ, ಗೋಳಾಡು; ಆಯಿ ಹಾಳಾಯಿತು; ರಬ್ಬಾದ ಕುಮಾರ್ತೆಯರೇ ಕೂಗಿರಿ; ಗೋಣಿತಟ್ಟನ್ನು ಕಟ್ಟಿಕೊಳ್ಳಿರಿ; ಪ್ರಲಾಪಿಸಿರಿ, ಬೇಲಿಗಳ ಬಳಿಯಲ್ಲಿ ಅತ್ತಿತ್ತ ಓಡಾಡಿರಿ; ಅವರ ಅರಸನೂ ಅವನ ಯಾಜಕರೂ ಅವನ ಪ್ರಧಾನರೂ ಒಟ್ಟಾಗಿ ಸೆರೆಗೆ ಹೋಗುವರು. ಹಿಂತಿರುಗು, ಹಿಂಜರಿದು ಹೋದ ಮಗಳೇ, ನನ್ನ ಬಳಿಗೆ ಬರುವವರು ಯಾರೆಂದು ಹೇಳಿ ನಿನ್ನ ಬೊಕ್ಕಸ ಗಳಲ್ಲಿ ನಂಬಿಕೆ ಇಟ್ಟವಳೇ, ನಿನ್ನ ತಗ್ಗು ಹರಿದು ಹೋಗುತ್ತದಲ್ಲಾ? ತಗ್ಗುಗಳ ವಿಷಯ ಯಾಕೆ ಹೆಚ್ಚಳ ಪಡುತ್ತೀ? ಇಗೋ, ನಾನು ನಿನ್ನ ಸುತ್ತಲಿರುವ ವರೆಲ್ಲರಿಂದ ನಿನ್ನ ಮೇಲೆ ಭಯವನ್ನು ಬರಮಾಡು ವೆನೆಂದು ಸೈನ್ಯಗಳ ಕರ್ತನಾದ ದೇವರು ಅನ್ನುತ್ತಾನೆ. ಆಗ ನಿಮ್ಮಲ್ಲಿ ಒಬ್ಬೊಬ್ಬನು ಮುಂದಕ್ಕೆ ಓಡಿಸಲ್ಪಡುವನು; ಅಲೆದಾಡುವವನನ್ನು ಕೂಡಿಸುವವನೂ ಒಬ್ಬನೂ ಇರುವದಿಲ್ಲ. ಆದರೆ ತರುವಾಯ ಅಮ್ಮೋನನ ಮಕ್ಕಳನ್ನು ಸೆರೆಯಿಂದ ತಿರುಗಿ ತರುವೆನೆಂದು ಕರ್ತನು ಅನ್ನುತ್ತಾನೆ.
- Ezekiel 6:2 ಯೆಹೆಜ್ಕೇಲನು 6:2ಮನುಷ್ಯಪುತ್ರನೇ, ನೀನು ಇಸ್ರಾಯೇಲಿನ ಪರ್ವತಗಳಿಗೆ ಅಭಿಮುಖನಾಗಿ ನಿಂತು ಅವುಗಳಿಗೆ ವಿರೋಧವಾಗಿ ಪ್ರವಾದಿಸಿ
- Amos 1:13–15 ಆಮೋಸ 1:13–15ಕರ್ತನು ಹೀಗೆ ಹೇಳುತ್ತಾನೆ--ಅಮ್ಮೋನಿನ ಮಕ್ಕಳ ಮೂರು ಮತ್ತು ನಾಲ್ಕರ ಅಪರಾಧಗಳ ನಿಮಿತ್ತ ವಾಗಿ ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವ ದಿಲ್ಲ; ತಮ್ಮ ಮೇರೆಯನ್ನು ವಿಸ್ತಾರ ಮಾಡುವದಕ್ಕಾಗಿ ಗಿಲ್ಯಾದಿನ ಗರ್ಭಿಣಿಯರನ್ನು ಸೀಳಿದ್ದಾರೆ. ಆದರೆ ನಾನು ರಬ್ಬದ ಗೋಡೆಯಲ್ಲಿ ಬೆಂಕಿಯನ್ನು ಹತ್ತಿಸುವೆನು; ಅದು ಯುದ್ಧದ ದಿನದಲ್ಲಿ ಆರ್ಭಟದ ಸಂಗಡವೂ ಬಿರುಗಾಳಿಯ ದಿನದಲ್ಲಿ ಸುಳಿಗಾಳಿಯ ಸಂಗಡವೂ ಅಲ್ಲಿಯ ಅರಮನೆಗಳನ್ನು ನುಂಗಿಬಿಡುವದು.ಅವರ ಅರಸನು ತಾನು ತನ್ನ ರಾಜಕುಮಾರರ ಸಂಗಡ ಸೆರೆಗೆ ಹೋಗುವನೆಂದು ಕರ್ತನು ಹೇಳುತ್ತಾನೆ. ಅವರ ಅರಸನು ತಾನು ತನ್ನ ರಾಜಕುಮಾರರ ಸಂಗಡ ಸೆರೆಗೆ ಹೋಗುವನೆಂದು ಕರ್ತನು ಹೇಳುತ್ತಾನೆ.
- Genesis 19:38 ಆದಿಕಾಂಡ 19:38ಚಿಕ್ಕವಳು ಸಹ ಮಗನನ್ನು ಹೆತ್ತು ಅವನಿಗೆ ಬೆನಮ್ಮಿ ಎಂದು ಹೆಸರಿಟ್ಟಳು. ಇಂದಿನ ವರೆಗೂ ಅಮ್ಮೋನನ ಮಕ್ಕಳಿಗೆ ಇವನೇ ತಂದೆ.
- Jeremiah 9:25–26 ಯೆರೆಮೀಯ 9:25–26ಕರ್ತನು ಹೇಳುವದೇನಂದರೆ --ಇಗೋ, ನಾನು ಸುನ್ನತಿಯಿಲ್ಲದವರ ಸಂಗಡ ಸುನ್ನತಿ ಯುಳ್ಳವರೆಲ್ಲರನ್ನೂಐಗುಪ್ತವನ್ನೂ ಯೆಹೂದ ವನ್ನೂ ಎದೋಮನ್ನೂ ಅಮ್ಮೋನನ ಮಕ್ಕಳನ್ನೂ ಮೋವಾಬನ್ನೂ ಅರಣ್ಯ ನಿವಾಸಿಗಳಾಗಿರುವ ಕಟ್ಟ ಕಡೆಯ ಮೂಲೆಯಲ್ಲಿ ಇರುವವರನ್ನೂ ನಾನು ಶಿಕ್ಷಿಸುವ ದಿನಗಳು ಬರುತ್ತವೆ. ಈ ಜನಾಂಗಗಳವರು ಸುನ್ನತಿ ಯಿಲ್ಲದವರು; ಇಸ್ರಾಯೇಲಿನ ಮನೆತನದವರೆಲ್ಲರೂ ಹೃದಯದಲ್ಲಿ ಸುನ್ನತಿಯಿಲ್ಲದವರಾಗಿದ್ದಾರೆ. ಐಗುಪ್ತವನ್ನೂ ಯೆಹೂದ ವನ್ನೂ ಎದೋಮನ್ನೂ ಅಮ್ಮೋನನ ಮಕ್ಕಳನ್ನೂ ಮೋವಾಬನ್ನೂ ಅರಣ್ಯ ನಿವಾಸಿಗಳಾಗಿರುವ ಕಟ್ಟ ಕಡೆಯ ಮೂಲೆಯಲ್ಲಿ ಇರುವವರನ್ನೂ ನಾನು ಶಿಕ್ಷಿಸುವ ದಿನಗಳು ಬರುತ್ತವೆ. ಈ ಜನಾಂಗಗಳವರು ಸುನ್ನತಿ ಯಿಲ್ಲದವರು; ಇಸ್ರಾಯೇಲಿನ ಮನೆತನದವರೆಲ್ಲರೂ ಹೃದಯದಲ್ಲಿ ಸುನ್ನತಿಯಿಲ್ಲದವರಾಗಿದ್ದಾರೆ.
- Ezekiel 35:2 ಯೆಹೆಜ್ಕೇಲನು 35:2ಮನುಷ್ಯಪುತ್ರನೇ, ನೀನು ಸೇಯಾರ್ ಪರ್ವತಕ್ಕೆ ಅಭಿಮುಖವಾಗಿ ಅದಕ್ಕೆ ವಿರೋಧವಾಗಿ ಪ್ರವಾದಿಸು;
- Zephaniah 2:8–11 ಚೆಫನ್ಯ 2:8–11ನನ್ನ ಜನರನ್ನು ನಿಂದಿಸಿ, ಅವರ ಮೇರೆಗೆ ಮೋವಾ ಬ್ಯರೂ ಅಮ್ಮೋನ್ಯರೂ ವಿರೋಧವಾಗಿ ತಮ್ಮನ್ನು ಹೆಚ್ಚಿಸಿ ಕೊಂಡದ್ದನ್ನು ನಾನು ಕೇಳಿದ್ದೇನೆ. ಆದದರಿಂದ ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೇಳು ವದೇನಂದರೆ--ನನ್ನ ಜೀವದಾಣೆ, ನಿಶ್ಚಯವಾಗಿ ಮೋವಾಬು ಸೊದೋಮಿನ ಹಾಗಾಗುವದು; ಅಮ್ಮೋ ನನ ಮಕ್ಕಳು ಗೊಮೋರದ ಹಾಗಾಗುವರು; ತುರುಚಿ ಗಿಡಗಳನ್ನು ಹುಟ್ಟಿಸುವಂಥ ಉಪ್ಪಿನ ಕುಣಿಗಳುಳ್ಳಂಥ ನಿತ್ಯವಾಗಿ ಹಾಳಾಗುವಂಥ ಸ್ಥಳವಾಗುವರು; ನನ್ನ ಜನರಲ್ಲಿ ಉಳಿದವರು ಅವರನ್ನು ಸುಲುಕೊಳ್ಳುವರು; ನನ್ನ ಜನರಲ್ಲಿ ಮಿಕ್ಕಾದವರು ಅವರನ್ನು ಸ್ವಾಧೀನ ಮಾಡಿಕೊಳ್ಳುವರು. ಅವರ ಗರ್ವಕ್ಕೋಸ್ಕರ ಇದೇ ಅವರಿಗೆ ಸಿಕ್ಕುವದು; ಅವರು ಸೈನ್ಯಗಳ ಕರ್ತನ ಜನರಿಗೆ ವಿರೋಧವಾಗಿ ನಿಂದಿಸಿ ತಮ್ಮನ್ನು ಹೆಚ್ಚಿಸಿಕೊಂಡ ದ್ದರಿಂದಲೇ ಕರ್ತನು ಅವರಿಗೆ ಭಯಂಕರನಾಗಿ ರುವನು. ಆತನು ಭೂಮಿಯ ಎಲ್ಲಾ ದೇವರುಗಳನ್ನು ಕ್ಷೀಣಮಾಡುವನು; ಅನ್ಯಜನಾಂಗಗಳ ದ್ವೀಪಗಳವ ರೆಲ್ಲರು ತಮ್ಮ ತಮ್ಮ ಸ್ಥಳಗಳಿಂದ ಆತನನ್ನು ಆರಾ ಧಿಸುವರು.
- Jeremiah 27:3 ಯೆರೆಮೀಯ 27:3ಅವುಗಳನ್ನು ಎದೋಮಿನ ಅರಸನಿಗೂ ಮೋವಾಬಿನ ಅರಸನಿಗೂ ಅಮ್ಮೋನ್ಯರ ಅರಸನಿಗೂ ತೂರಿನ ಅರಸನಿಗೂ ಚೀದೋನಿನ ಅರಸನಿಗೂ ಯೆಹೂದದ ಅರಸನಾದ ಚಿದ್ಕೀಯನ ಬಳಿಗೆ ಬರುವ ಸುದ್ದಿಗಾರರ ಕೈಯಿಂದ ಕಳುಹಿಸು.
- Ezekiel 20:46 ಯೆಹೆಜ್ಕೇಲನು 20:46ಮನುಷ್ಯಪುತ್ರನೇ, ದಕ್ಷಿಣದ ಕಡೆಗೆ ಮುಖಮಾಡಿ ತೆಂಕಣದ ಕಡೆಗೆ ಮಾತ ನಾಡು; ದಕ್ಷಿಣ ಬಯಲು ಅರಣ್ಯಕ್ಕೆ ವಿರೋಧವಾಗಿ ಪ್ರವಾದಿಸು.
- Ezekiel 21:28–32 ಯೆಹೆಜ್ಕೇಲನು 21:28–32ಮನುಷ್ಯಪುತ್ರನೇ, ನೀನು ಪ್ರವಾದಿಸಿ ಹೇಳ ಬೇಕಾದದ್ದೇನಂದರೆ--ದೇವರಾದ ಕರ್ತನು ಅಮ್ಮೋನಿ ಯರ ವಿಷಯವಾಗಿಯೂ ಅವರ ನಿಂದೆಯ ವಿಷಯವಾಗಿಯೂ ಹೀಗೆ ಹೇಳುತ್ತಾನೆ--ಹೌದು, ನೀನು ಹೀಗೆ ಹೇಳು, ಹಿರಿದ ಕತ್ತಿಯು ಥಳಥಳಿಸುವದ ರಿಂದ ಸಂಹರಿಸುವದಕ್ಕೆ ಹಿಡಿದಿದೆ; ಮಿಂಚುವಂತೆ ಬಹಳವಾಗಿ ಮಸೆದಿದೆ. ನಿನ್ನ ಜೋಯಿಸರು ವ್ಯರ್ಥವಾದದ್ದನ್ನು ನೋಡಿ ಸಾಕ್ಷಾತ್ಕರಿಸಿ ಸುಳ್ಳಾಗಿ ಶಕುನ ಹೇಳುತ್ತಿದ್ದಾರೆ, ಹೀಗೆ ನಿನ್ನನ್ನು ಹತವಾದ ದುಷ್ಟರ ಕುತ್ತಿಗೆಗಳ ಮೇಲೆ ತಂದಿದ್ದಾರೆ. ಅವರ ಅಂತ್ಯದಿನವು ಬಂದಿದೆ; ಅದೇ ಅವರ ಅಕ್ರಮಗಳಿಗೆ ಅಂತ್ಯವಾಗಿದೆ. ಅದನ್ನು ನಾನು ಮತ್ತೆ ಒರೆಗೆ ಸೇರಿಸುವೆನೋ? ನೀನು ನಿರ್ಮಿಸಲ್ಪಟ್ಟ ಸ್ಥಳದಲ್ಲಿಯೇ ನೀನು ಹುಟ್ಟಿದ ಸ್ಥಳದಲ್ಲಿಯೇ ನಿನಗೆ ನ್ಯಾಯತೀರಿಸುವೆನು. ನನ್ನ ಕ್ರೋಧವನ್ನು ನಿನ್ನ ಮೇಲೆ ಸುರಿಸುವೆನು. ನನ್ನ ಉಗ್ರದ ಬೆಂಕಿಯನ್ನು ನಿನ್ನ ಮೇಲೆ ಊದಿ ನಾಶಪಡಿಸುವದರಲ್ಲಿ ಗಟ್ಟಿಗರಾದಂಥ ಕ್ರೂರ ಜನರ ಕೈಗೆ ನಿನ್ನನ್ನು ಒಪ್ಪಿಸು ವೆನು.ನೀನು ಅಗ್ನಿಗೆ ಆಹುತಿಯಾಗುವ ಸೌದೆಯಾ ಗುವಿ, ನಿನ್ನ ರಕ್ತವು ದೇಶದ ಮಧ್ಯದಲ್ಲೆಲ್ಲಾ ಇರುವದು; ನೀನು ಇನ್ನು ಮೇಲೆ ಜ್ಞಾಪಕಕ್ಕೆ ಬರುವದಿಲ್ಲವೆಂದು ಕರ್ತನಾದ ನಾನೇ ಹೇಳಿದ್ದೇನೆ. ನೀನು ಅಗ್ನಿಗೆ ಆಹುತಿಯಾಗುವ ಸೌದೆಯಾ ಗುವಿ, ನಿನ್ನ ರಕ್ತವು ದೇಶದ ಮಧ್ಯದಲ್ಲೆಲ್ಲಾ ಇರುವದು; ನೀನು ಇನ್ನು ಮೇಲೆ ಜ್ಞಾಪಕಕ್ಕೆ ಬರುವದಿಲ್ಲವೆಂದು ಕರ್ತನಾದ ನಾನೇ ಹೇಳಿದ್ದೇನೆ.
- Jeremiah 25:21 ಯೆರೆಮೀಯ 25:21ಎದೋಮಿಗೂ ಮೋವಾ ಬಿಗೂ ಅಮ್ಮೋನನ ಮಕ್ಕಳಿಗೂ
- Ezekiel 21:2 ಯೆಹೆಜ್ಕೇಲನು 21:2ಮನುಷ್ಯಪುತ್ರನೇ, ನೀನು ಯೆರೂಸಲೇಮಿಗೆ ಅಭಿಮುಖನಾಗಿ ಅಲ್ಲಿನ ಪರಿಶುದ್ಧ ಸ್ಥಳಗಳ ಕಡೆಗೆ ಮಾತನಾಡುತ್ತಾ ಇಸ್ರಾ ಯೇಲ್ ದೇಶಕ್ಕೆ ವಿರುದ್ಧವಾಗಿ ಪ್ರವಾದಿಸು.