Ezekiel · chapter 26 · verse 18
Ezekiel 26:18 in Kannada
ಈಗ ನೀನು ಬೀಳುವ ದಿವಸದಲ್ಲಿ ದ್ವೀಪಗಳು ನಡುಗುವವು ಹೌದು, ನೀನು ಹೋಗಿಬಿಡುವದರಿಂದ ಸಮುದ್ರದಲ್ಲಿರುವ ದ್ವೀಪಗಳು ಗಾಬರಿಯಾಗುವವು.
Eega neenu beeluva divasadalli dveepagalu naduguvavu haudu, neenu hogibiduvadarinda samudradalliruva dveepagalu gaabariyaaguvavu.
Ezekiel 26:18 in English
- King James Version (KJV)
- Now shall the isles tremble in the day of thy fall; yea, the isles that [are] in the sea shall be troubled at thy departure.
- World English Bible (WEB)
- Now the islands will tremble in the day of your fall. Yes, the islands that are in the sea will be dismayed at your departure.’
- American Standard Version (ASV)
- Now shall the isles tremble in the day of thy fall; yea, the isles that are in the sea shall be dismayed at thy departure.
- Bible in Basic English (BBE)
- Now the sea-lands will be shaking in the day of your fall; and all the ships on the sea will be overcome with fear at your going.
- Darby Translation (DBY)
- Now shall the isles tremble in the day of thy fall; and the isles that are in the sea shall be troubled at thy departure.
- Webster's Bible (WBS)
- Now shall the isles tremble in the day of thy fall; yes, the isles that [are] in the sea shall be disturbed at thy departure.
- Young's Literal Translation (YLT)
- Now they tremble, is it not the day of thy fall? Troubled have been the isles that [are] in the sea, at thine outgoing.
Read in context
- 16ಆಮೇಲೆ ಸಮುದ್ರದ ಎಲ್ಲಾ ಪ್ರಭುಗಳು ತಮ್ಮ ಸಿಂಹಾಸನಗಳನ್ನು ಬಿಟ್ಟು ಇಳಿಯುವರು; ತಮ್ಮ ನಿಲು ವಂಗಿಗಳನ್ನು ತೆಗೆದುಹಾಕುವರು, ಚಿತ್ರವಾಗಿ ಹೊಲಿದ ತಮ್ಮ ವಸ್ತ್ರಗಳನ್ನು ಇಟ್ಟುಬಿಡುವರು; ನಡುಗುವಿಕೆಯನ್ನು ಹೊದ್ದುಕೊಳ್ಳುವರು; ನೆಲದ ಮೇಲೆ ಕುಳಿತುಕೊಳ್ಳು ವರು, ಕ್ಷಣಕ್ಷಣಕ್ಕೂ ನಡುಗುವರು, ನಿನ್ನ ವಿಷಯ ವಾಗಿ ಆಶ್ಚರ್ಯಪಡುವರು.
- 17ನಿನ್ನ ವಿಷಯದಲ್ಲಿ ಗೋಳಾಟವನ್ನೆತ್ತಿ ನಿನಗೆ ಹೇಳುವದೇನಂದರೆ, ಸಮು ದ್ರಗಳ ಬಳಿಯಲ್ಲಿ ವಾಸಿಸಿದವಳೇ, ಹೆಸರು ಗೊಂಡ ಪಟ್ಟಣವೇ, ನೀನೂ ತನ್ನ ನಿವಾಸಿಗಳೂ ಸಮುದ್ರದಲ್ಲಿ ಬಲವಾಗಿದ್ದವಳೇ, ಅದರ ಸಮುದ್ರ ಸಂಚಾರವನ್ನೂ ಭಯಪಡಿಸಿದವಳೇ, ಅಯ್ಯೋ, ಹೇಗೆ ನಾಶವಾದಿ?
- 18ಈಗ ನೀನು ಬೀಳುವ ದಿವಸದಲ್ಲಿ ದ್ವೀಪಗಳು ನಡುಗುವವು ಹೌದು, ನೀನು ಹೋಗಿಬಿಡುವದರಿಂದ ಸಮುದ್ರದಲ್ಲಿರುವ ದ್ವೀಪಗಳು ಗಾಬರಿಯಾಗುವವು.
- 19ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಾನು ನಿನ್ನನ್ನು ನಿವಾಸಿಗಳಿಲ್ಲದ ಪಟ್ಟಣದ ಹಾಗೆ ಹಾಳಾದ ಪಟ್ಟಣವಾಗಿ ಮಾಡುವಾಗ ಹೆಚ್ಚು ನೀರು ಮುಚ್ಚುವ ಹಾಗೆ ಅಗಾಧವನ್ನು ನಿನ್ನ ಮೇಲೆ ಬರ ಮಾಡುವೆನು.
- 20ನಿನ್ನನ್ನು ಅಧೋಲೋಕಕ್ಕೆ ತಳ್ಳಿ ಪಾತಾಳಕ್ಕೆ ಇಳಿದ ನಿಮ್ಮ ಪೂರ್ವ ಕಾಲದವರೊಂದಿಗೆ ವಾಸಿಸುವಂತೆ ಮಾಡುವೆನು. ನಾನು ನಿನ್ನ ಮಹಿಮೆಯನ್ನು ಜೀವ ಲೋಕದಲ್ಲಿ ನೆಲೆಗೊಳಿಸದ ನಿರ್ನಿವಾಸಿಯಾಗುವಂತೆ ನಿನ್ನನ್ನು ಪಾತಾಳಕ್ಕಿಳಿದವರ ಸಹವಾಸಕ್ಕೆ ಸೇರಿಸುವೆನು.ನಾನೂ ನಿನ್ನನ್ನು ದಿಗಿಲುಪಡಿಸುವೆನು, ಇನ್ನು ಮೇಲೆ ನೀನು ಇರುವದಿಲ್ಲ; ಆಮೇಲೆ ನಿನ್ನನ್ನು ಎಷ್ಟು ಹುಡು ಕಿದರೂ ನೀನು ಸಿಗುವದಿಲ್ಲ ಎಂದು ದೇವರಾದ ಕರ್ತನು ಹೇಳುತ್ತಾನೆ.
Cross references
- Isaiah 23:5–7 ಯೆಶಾಯ 23:5–7ಐಗುಪ್ತದ ಸುದ್ದಿಗೆ ಆದ ಹಾಗೆ ತೂರಿನ ಸುದ್ದಿಗೆ ಬಹಳ ವೇದನೆಪಡು ವರು. ತಾರ್ಷೀಷಿಗೆ ದಾಟಿಹೋಗಿರಿ, ದ್ವೀಪ ನಿವಾ ಸಿಗಳೇ ಗೋಳಾಡಿರಿ. ನಿಮ್ಮ ಉಲ್ಲಾಸದ ಪಟ್ಟಣವೂ ಪೂರ್ವಕಾಲದ ಹಳೆಯ ಸಂಪ್ರದಾಯದಿಂದ ಬಂದಿದ್ದೂ ಇದೆಯೋ? ಅವಳ ಸ್ವಂತ ಕಾಲುಗಳು ಅದನ್ನು ದೂರ ದೇಶದಲ್ಲಿ ನಿವಾಸಿಸುವದಕ್ಕೆ ತಕ್ಕೊಂಡು ಹೋ ಗುವವು.
- Ezekiel 26:15 ಯೆಹೆಜ್ಕೇಲನು 26:15ದೇವರಾದ ಕರ್ತನು ತೂರಿಗೆ ಹೀಗೆ ಹೇಳು ತ್ತಾನೆ--ನಿಮ್ಮನ್ನು ಬೀಳುವಿಕೆಯ ಶಬ್ದದಿಂದಲೂ ಗಾಯ ಪಟ್ಟವರು ಕೂಗುವಾಗಲೂ ನಿನ್ನ ಮಧ್ಯದಲ್ಲಿ ಕೊಲೆ ಯಾಗುವಾಗಲೂ ದ್ವೀಪಗಳು ನಡುಗುವದಿಲ್ಲವೇ?
- Isaiah 23:10–12 ಯೆಶಾಯ 23:10–12ತಾರ್ಷೀಷಿನ ಮಗಳೇ, ನದಿಯಂತೆ ನಿನ್ನ ದೇಶದಲ್ಲಿ ಹಾದುಹೋಗು, ಅಲ್ಲಿ ಇನ್ನು ಬಲವು ಇರುವುದೇ ಇಲ್ಲ. ಆತನು ಸಮುದ್ರದ ಮೇಲೆ ತನ್ನ ಕೈಚಾಚಿ ರಾಜ್ಯಗಳನ್ನು ನಡುಗಿಸಿದ್ದಾನೆ; ಕರ್ತನು ವ್ಯಾಪಾರದ ಪಟ್ಟಣವನ್ನು (ಕಾನಾನ್) ಅದರ ದುರ್ಗ ಗಳನ್ನು ನಾಶಮಾಡಬೇಕೆಂದು ಆಜ್ಞಾಪಿಸಿದ್ದಾನೆ. ಆತನು ಹೇಳಿದ್ದೇನಂದರೆ--ಹಿಂಸೆಗೆ ಈಡಾದ ಕನ್ಯೆಯಂತಿರುವ ಚೀದೋನ್ ನಗರಿಯೇ, ಇನ್ನು ಮೇಲೆ ನಿನಗೆ ಹರ್ಷವೇ ಇಲ್ಲ; ಎದ್ದು ಕಿತ್ತೀಮಿಗೆ ಸಮುದ್ರದ ಮೇಲೆ ಹಾದುಹೋಗು ಅಲ್ಲಿಯೂ ನಿನಗೆ ವಿಶ್ರಾಂತಿ ಇರದು.
- Ezekiel 27:35 ಯೆಹೆಜ್ಕೇಲನು 27:35ದ್ವೀಪದ ನಿವಾಸಿಗಳೆಲ್ಲಾ ನಿನ್ನ ಸ್ಥಿತಿಗೆ ಬೆಚ್ಚಿ ವಿಸ್ಮಯರಾಗಿದ್ದಾರೆ. ಅರಸರು ಬಹಳ ವಾಗಿ ಭಯಪಟ್ಟಿದ್ದಾರೆ. ರಾಜರುಗಳು ನಡುಗಿ ಭೀತಿ ಗೊಂಡರು.ಜನಾಂಗಗಳ ವರ್ತಕರು ನಿನ್ನನ್ನು ನೋಡಿ ಸಿಳ್ಳುಹಾಕುತ್ತಾರೆ. ನೀನು ಸಂಪೂರ್ಣ ಧ್ವಂಸ ವಾಗಿ ಇನ್ನೆಂದಿಗೂ ಇಲ್ಲದಂತಾಗಿರುವೆ.
- Ezekiel 27:28–30 ಯೆಹೆಜ್ಕೇಲನು 27:28–30ನಿನ್ನ ನಾವಿಕರ ಕಿರಿಚಾಟಕ್ಕೆ ಉಪ ನಗರಗಳು, ಪ್ರದೇಶಗಳು, ನಡುಗುವವು. ಹುಟ್ಟು ಹಾಕುವವರೆಲ್ಲರೂ ಅಂಬಿಗರೂ ಸಮುದ್ರದ ಸಕಲ ನಾವಿಕರೂ ತಮ್ಮ ತಮ್ಮ ಹಡಗುಗಳಿಂದಿಳಿದು ನೆಲದ ಮೇಲೆ ನಿಂತುಕೊಂಡು, ನಿನ್ನ ನಿಮಿತ್ತ ದುಃಖದಿಂದ ಅರಚಿ ತಲೆಗೆ ದೂಳೆರೆಚಿಕೊಂಡು ಬೂದಿಯಲ್ಲಿ ಬಿದ್ದು ಹೊರಳಾಡಿ;
- Isaiah 41:5 ಯೆಶಾಯ 41:5ದ್ವೀಪ ನಿವಾಸಿಗಳೆಲ್ಲರೂ ನೋಡಿ ಬೆರಗಾದರು; ಭೂಮಿಯ ಕಟ್ಟಕಡೆಯವರು ನಡುಗಿದರು. ಅವರ ಸವಿಾಪಕ್ಕೆ ಬಂದರು.