Ezekiel · chapter 26 · verse 2
Ezekiel 26:2 in Kannada
ಮನುಷ್ಯಪುತ್ರನೇ, ತೂರ್, ಯೆರೂಸಲೇಮಿನ ವಿಷಯವಾಗಿ ಆಹಾ, ಜನರ ದ್ವಾರವಾಗಿದ್ದದ್ದು ಮುರಿದು ಹೋಯಿತು, ಅದು ನನ್ನ ಕಡೆಗೆ ತಿರುಗಿಕೊಂಡಿದೆ, ಯೆರೂಸಲೇಮು ಹಾಳಾದ ಕಾರಣ ನಾನು ತುಂಬಿಕೊಳ್ಳುವೆನು ಎಂದು ಹೇಳಿದ್ದರಿಂದ
Manushyaputrane, toor, yeroosalemina vishayavaagi aahaa, janara dvaaravaagiddaddu muridu hoyitu, adu nanna kadege tirugikondide, yeroosalemu haalaada kaarana naanu tumbikolluvenu endu heliddarinda
Ezekiel 26:2 in English
- King James Version (KJV)
- Son of man, because that Tyrus hath said against Jerusalem, Aha, she is broken [that was] the gates of the people: she is turned unto me: I shall be replenished, [now] she is laid waste:
- World English Bible (WEB)
- “Son of man, because Tyre has said against Jerusalem, ‘Aha! She is broken! She who was the gateway of the peoples has been returned to me. I will be replenished, now that she is laid waste;’
- American Standard Version (ASV)
- Son of man, because that Tyre hath said against Jerusalem, Aha, she is broken [that was] the gate of the peoples; she is turned unto me; I shall be replenished, now that she is laid waste:
- Bible in Basic English (BBE)
- Son of man, because Tyre has said against Jerusalem, Aha, she who was the doorway of the peoples is broken; she is turned over to them; she who was full is made waste;
- Darby Translation (DBY)
- Son of man, because Tyre hath said against Jerusalem, Aha, she is broken, the gate of the peoples! she is turned unto me: I shall be replenished [now] she is laid waste;
- Webster's Bible (WBS)
- Son of man, because that Tyre hath said against Jerusalem, Aha, she is broken [that was] the gates of the people: she is turned to me: I shall be replenished, [now] she is laid waste:
- Young's Literal Translation (YLT)
- Because that Tyre hath said of Jerusalem: Aha, she hath been broken, the doors of the peoples, She hath turned round unto me, I am filled — she hath been laid waste,
Read in context
- 1ಹನ್ನೊಂದನೇ ವರುಷದ ತಿಂಗಳಿನ ಮೊದಲನೇ ದಿನದಲ್ಲಿ ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ--
- 2ಮನುಷ್ಯಪುತ್ರನೇ, ತೂರ್, ಯೆರೂಸಲೇಮಿನ ವಿಷಯವಾಗಿ ಆಹಾ, ಜನರ ದ್ವಾರವಾಗಿದ್ದದ್ದು ಮುರಿದು ಹೋಯಿತು, ಅದು ನನ್ನ ಕಡೆಗೆ ತಿರುಗಿಕೊಂಡಿದೆ, ಯೆರೂಸಲೇಮು ಹಾಳಾದ ಕಾರಣ ನಾನು ತುಂಬಿಕೊಳ್ಳುವೆನು ಎಂದು ಹೇಳಿದ್ದರಿಂದ
- 3ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಇಗೋ, ತೂರ್ ದೇಶವೇ, ನಾನು ನಿನಗೆ ವಿರೋಧವಾಗಿದ್ದೇನೆ, ಸಮುದ್ರವು ತನ್ನ ಅಲೆಗಳನ್ನು ಹೇಗೆ ಬರಮಾಡುವದೋ ಹಾಗೆಯೇ ನಾನು ನಿನಗೆ ವಿರೋಧವಾಗಿ ಅನೇಕ ಜನಾಂಗಗಳನ್ನು ನಿನ್ನ ಮೇಲೆ ಬರಮಾಡುವೆನು.
- 4ಅವರು ತೂರಿನ ಗೋಡೆಗಳನ್ನು ಕೆಡಿಸಿ ಅದರ ಗೋಪುರಗಳನ್ನು ಒಡೆದು ಬಿಡುವರು, ನಾನು ಅದರ ದೂಳನ್ನು ಅದರಿಂದ ಒರಿಸಿ ಅದನ್ನು ಬಂಡೆಯ ತುದಿಯಂತೆ ಮಾಡುವೆನು.
Cross references
- Isaiah 23:1–18 ಯೆಶಾಯ 23:1–18ತೂರಿನ ವಿಷಯವಾದ ದೈವೋಕ್ತಿ. ತಾರ್ಷೀಷಿನ ಹಡಗುಗಳೇ, ಗೋಳಾ ಡಿರಿ; ಅದು ಹಾಳಾಗಿರುವದರಿಂದ ನಿಮಗೆ ಮನೆಯಿಲ್ಲ ಮತ್ತು ಒಳಗೆ ಪ್ರವೇಶವೂ ಇಲ್ಲ. ಇದು ಕಿತ್ತೀಮ್ ದೇಶದವರಿಂದ ಅವರಿಗೆ ತಿಳಿಯಿತು. ದ್ವೀಪಗಳ ನಿವಾಸಿಗಳೇ, ಸಮುದ್ರವನ್ನು ದಾಟುವ ಚೀದೋನಿನ ವರ್ತಕರಿಂದ ಸಮೃದ್ಧಿಯನ್ನು ಹೊಂದಿದವರೇ, ಮೌನ ವಾಗಿರ್ರಿ. ವಿಶಾಲವಾದ ನೀರುಗಳಿಂದ ಸೀಹೋರಿನ ಧಾನ್ಯವೂ ನದಿಯ ಸುಗ್ಗಿಯೂ ನೈಲಿನ ಬೆಳೆಯಿಂ ದಲೂ ಅದಕ್ಕೆ ಆದಾಯವಾಗಿತ್ತು. ಅನೇಕ ಜನಾಂಗ ಗಳಿಗೆ ವ್ಯಾಪಾರ ಸ್ಥಳವಾಗಿತ್ತು. ಚೀದೋನೇ, ನಾಚಿಕೆ ಪಡು, ಸಮುದ್ರವು, ಸಮುದ್ರದುರ್ಗವೂ--ನಾವು ಪ್ರಸವವೇದನೆ ಪಡುವದಿಲ್ಲ, ಹೆರುವದಿಲ್ಲ; ಇಲ್ಲವೆ ಮಕ್ಕಳನ್ನು ಬೆಳೆಸುವದಿಲ್ಲ ಕನ್ಯಾಸ್ತ್ರೀಯರನ್ನು ಸಾಕಿ ಸಲ ಹಲಿಲ್ಲ ಎಂದು ಹೇಳಿದೆಯಷ್ಟೆ. ಐಗುಪ್ತದ ಸುದ್ದಿಗೆ ಆದ ಹಾಗೆ ತೂರಿನ ಸುದ್ದಿಗೆ ಬಹಳ ವೇದನೆಪಡು ವರು. ತಾರ್ಷೀಷಿಗೆ ದಾಟಿಹೋಗಿರಿ, ದ್ವೀಪ ನಿವಾ ಸಿಗಳೇ ಗೋಳಾಡಿರಿ. ನಿಮ್ಮ ಉಲ್ಲಾಸದ ಪಟ್ಟಣವೂ ಪೂರ್ವಕಾಲದ ಹಳೆಯ ಸಂಪ್ರದಾಯದಿಂದ ಬಂದಿದ್ದೂ ಇದೆಯೋ? ಅವಳ ಸ್ವಂತ ಕಾಲುಗಳು ಅದನ್ನು ದೂರ ದೇಶದಲ್ಲಿ ನಿವಾಸಿಸುವದಕ್ಕೆ ತಕ್ಕೊಂಡು ಹೋ ಗುವವು. ಅದು ಕಿರೀಟದಾಯಕವಾದ ಪಟ್ಟಣವು ಅದರ ವರ್ತಕರಾದ ಪ್ರಭುಗಳು, ವ್ಯಾಪಾರಿಗಳು ಭೂಮಿಯಲ್ಲಿ ಘನವುಳ್ಳವರಾಗಿದ್ದಾರೆ. ಇಂಥ ತೂರಿಗೆ ವಿರುದ್ಧವಾಗಿ ಈ ಆಲೋಚನೆ ಮಾಡಿದವರು ಯಾರು? ಗರ್ವದ ಸಕಲ ವೈಭವವನ್ನು ಹೊಲಸು ಮಾಡಬೇ ಕೆಂತಲೂ ಭೂಮಿಯಲ್ಲಿ ಘನವುಳ್ಳವರೆಲ್ಲರನ್ನು ಅವ ಮಾನಪಡಿಸಬೇಕೆಂತಲೂ ಸೈನ್ಯಗಳ ಕರ್ತನೇ, ಹೀಗೆ ಸಂಕಲ್ಪಿಸಿದ್ದಾನೆ. ತಾರ್ಷೀಷಿನ ಮಗಳೇ, ನದಿಯಂತೆ ನಿನ್ನ ದೇಶದಲ್ಲಿ ಹಾದುಹೋಗು, ಅಲ್ಲಿ ಇನ್ನು ಬಲವು ಇರುವುದೇ ಇಲ್ಲ. ಆತನು ಸಮುದ್ರದ ಮೇಲೆ ತನ್ನ ಕೈಚಾಚಿ ರಾಜ್ಯಗಳನ್ನು ನಡುಗಿಸಿದ್ದಾನೆ; ಕರ್ತನು ವ್ಯಾಪಾರದ ಪಟ್ಟಣವನ್ನು (ಕಾನಾನ್) ಅದರ ದುರ್ಗ ಗಳನ್ನು ನಾಶಮಾಡಬೇಕೆಂದು ಆಜ್ಞಾಪಿಸಿದ್ದಾನೆ. ಆತನು ಹೇಳಿದ್ದೇನಂದರೆ--ಹಿಂಸೆಗೆ ಈಡಾದ ಕನ್ಯೆಯಂತಿರುವ ಚೀದೋನ್ ನಗರಿಯೇ, ಇನ್ನು ಮೇಲೆ ನಿನಗೆ ಹರ್ಷವೇ ಇಲ್ಲ; ಎದ್ದು ಕಿತ್ತೀಮಿಗೆ ಸಮುದ್ರದ ಮೇಲೆ ಹಾದುಹೋಗು ಅಲ್ಲಿಯೂ ನಿನಗೆ ವಿಶ್ರಾಂತಿ ಇರದು. ಇಗೋ, ಕಸ್ದೀಯರ ದೇಶವು! ಅಶ್ಶೂರರು ಅದನ್ನು ಅರಣ್ಯ ನಿವಾಸಿಗಳಿಗೆ ಈಡು ಮಾಡುವತನಕ ಈ ಜನರು ಇರಲಿಲ್ಲ. (ನಿರ್ನಾ ಮವಾಗಿರಲಿಲ್ಲ) ಅವರು ಗೋಪುರಗಳನ್ನೂ ಅದರ ಅರಮನೆಗಳನ್ನೂ ಕಟ್ಟಿಸಿಕೊಂಡು ಅದನ್ನು ಹಾಳು ಮಾಡಿದ್ದಾರೆ. ತಾರ್ಷೀಷಿನ ಹಡಗುಗಳೇ, ಗೋ ಳಾಡಿರಿ! ನಮ್ಮ ಆಶ್ರಯಸ್ಥಾನವು ಹಾಳಾಯಿತು. ಆ ದಿವಸದಲ್ಲಿ ಆಗುವದೇನಂದರೆ, ತೂರ್ ಪಟ್ಟಣವು ಒಬ್ಬ ಅರಸನ ದಿವಸಗಳ ಪ್ರಕಾರ ಎಪ್ಪತ್ತು ವರುಷಗಳ ತನಕ (ಮೂಲ ದಿನಗಳು) ಜ್ಞಾಪಕಕ್ಕೆ ಬಾರದೇ ಇರುವದು; ಎಪ್ಪತ್ತು ವರುಷಗಳ ಕೊನೆಯಲ್ಲಿ ತೂರ್ ಪಟ್ಟಣವು ಸೂಳೆಯರ ವಿಷಯವಾದ ಗೀತೆಯ ಹಾಗಾಗುವದು. ಮರೆತುಹೋದ ಸೂಳೆಯೇ, ಕಿನ್ನರಿಯನ್ನು ತಕ್ಕೋ, ಪಟ್ಟಣಗಳಲ್ಲಿ ಅಲೆಯುತ್ತಾ ನೀನು ನೆನಪಾಗುವ ಹಾಗೆ ಚೆನ್ನಾಗಿ ನುಡಿಸಿ ಬಹಳ ಗೀತೆಗಳನ್ನು ಹಾಡು (ಎಂಬದೇ). ಎಪ್ಪತ್ತು ವರುಷ ಗಳಾದ ಮೇಲೆ ಆಗುವದೇನಂದರೆ -- ಕರ್ತನು ತೂರನ್ನು ಪರಾಮರಿಸುವನು (ಹಿತ ತರುವನು). ಅದು ತನ್ನ ಆದಾಯಕ್ಕಾಗಿ ಹಿಂದಿರುಗಿ ಭೂಲೋಕ ದಲ್ಲಿರುವ ಎಲ್ಲಾ ರಾಜ್ಯಗಳ ಸಂಗಡ ಭೂಮಿಯ ಮೇಲೆ ಸೂಳೆತನ ಮಾಡುವದು.(ಆದರೆ) ಅವಳ ವ್ಯಾಪಾರವೂ ಆದಾಯವೂ ಬೊಕ್ಕಸದಲ್ಲಿ ಹಾಕದೆ ಇಲ್ಲವೆ ಇಟ್ಟುಕೊಳ್ಳದೆ ಕರ್ತನಿಗೆ ಪರಿಶುದ್ಧವಾಗು ವದು. ಅವಳ ವ್ಯಾಪಾರವು ಕರ್ತನ ಸನ್ನಿಧಾನದಲ್ಲಿ ವಾಸಿಸುವ ವರೆಗೆ ಬೇಕಾದಷ್ಟು ಅನ್ನವನ್ನೂ ಶ್ರೇಷ್ಠವಾದ ಉಡುಪನ್ನೂ ಒದಗಿಸಲು ಅನು ಕೂಲವಾಗುವದು. (ಆದರೆ) ಅವಳ ವ್ಯಾಪಾರವೂ ಆದಾಯವೂ ಬೊಕ್ಕಸದಲ್ಲಿ ಹಾಕದೆ ಇಲ್ಲವೆ ಇಟ್ಟುಕೊಳ್ಳದೆ ಕರ್ತನಿಗೆ ಪರಿಶುದ್ಧವಾಗು ವದು. ಅವಳ ವ್ಯಾಪಾರವು ಕರ್ತನ ಸನ್ನಿಧಾನದಲ್ಲಿ ವಾಸಿಸುವ ವರೆಗೆ ಬೇಕಾದಷ್ಟು ಅನ್ನವನ್ನೂ ಶ್ರೇಷ್ಠವಾದ ಉಡುಪನ್ನೂ ಒದಗಿಸಲು ಅನು ಕೂಲವಾಗುವದು.
- Jeremiah 25:22 ಯೆರೆಮೀಯ 25:22ತೂರಿನ ಅರಸರೆ ಲ್ಲರಿಗೂ ಚೀದೋನಿನ ಅರಸರೆಲ್ಲರಿಗೂ ಸಮುದ್ರದ ಆಚೆಯಲ್ಲಿರುವ ದ್ವೀಪದ ಅರಸರಿಗೂ
- Ezekiel 36:2 ಯೆಹೆಜ್ಕೇಲನು 36:2ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಯಾಕಂದರೆ ನಿನ್ನ ಶತ್ರುವು ನಿನಗೆ ವಿರೋಧವಾಗಿ ಆಹಾ, ಪೂರ್ವದ ಉತ್ತಮ ಸ್ಥಳಗಳು ನಮಗೆ ಸ್ವಾಸ್ತ್ಯವಾದವು ಎಂದು ಹೇಳುವರು;
- Joel 3:4 ಯೋವೇಲ 3:4ಹೌದು, ಓ ತೂರೇ, ಚೀದೋನೇ, ಪಾಲೆಸ್ತಿನದ ಎಲ್ಲಾ ಪ್ರಾಂತ್ಯಗಳೇ, ನನ್ನ ಕೂಡ ನಿಮಗೇನು? ನನಗೆ ಮುಯ್ಯಿಗೆ ಮುಯ್ಯಿ ಸಲ್ಲಿಸುವಿರೋ? ನೀವು ನನಗೆ ಸಲ್ಲಿಸಿದರೆ ಜಾಗ್ರತೆಯಾಗಿಯೂ ತ್ವರೆಯಾಗಿಯೂ ನಿಮ್ಮ ತಲೆಯ ಮೇಲೆ ಮುಯ್ಯಿಗೆ ಮುಯ್ಯಿ ತರಿಸುವೆನು.
- Joshua 19:29 ಯೆಹೋಶುವ 19:29ರಾಮಕ್ಕೆ ಹೋಗಿ ತೂರ್ ಎಂಬ ಬಲವಾದ ಪಟ್ಟಣದ ವರೆಗೂ ತಿರುಗಿ ಅಲ್ಲಿಂದ ಹೋಸಾಕ್ಕೆ ಹೊರಟು ಸಮುದ್ರದ ಬಳಿಯ ಅಕ್ಜೀಬಿನ ಮೇರೆಯ ಅಂಚಿಗೆ ಮುಗಿಯುವದು.
- Ezekiel 25:6 ಯೆಹೆಜ್ಕೇಲನು 25:6ದೇವ ರಾದ ಕರ್ತನು ಹೀಗೆ ಹೇಳುತ್ತಾನೆ--ನೀನು ಕೈತಟ್ಟಿ ಕಾಲಿನಿಂದ ತುಳಿದು ಇಸ್ರಾಯೇಲ್ ದೇಶವನ್ನು ಮನಃ ಪೂರ್ವಕವಾಗಿ ತಿರಸ್ಕರಿಸಿ ಅದರ ಆ ಸ್ಥಿತಿಗೆ ಸಂತೋಷ ಪಟ್ಟದ್ದರಿಂದ
- Amos 1:9–10 ಆಮೋಸ 1:9–10ಕರ್ತನು ಹೀಗೆ ಹೇಳುತ್ತಾನೆ--ತೂರಿನ ಮೂರು ಮತ್ತು ನಾಲ್ಕರ ನಿಮಿತ್ತ ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವದಿಲ್ಲ; ಅವರು ಸಹೋದರರ ಒಡಂಬ ಡಿಕೆಯನ್ನು ಜ್ಞಾಪಕಮಾಡಲಿಲ್ಲ; ಪೂರ್ಣ ಸೆರೆಯನ್ನು ಎದೋಮಿಗೆ ಒಪ್ಪಿಸಿಬಿಟ್ಟರು. ಆದರೆ ನಾನು ತೂರಿನ ಗೋಡೆಯ ಮೇಲೆ ಬೆಂಕಿಯನ್ನು ಕಳುಹಿಸುವೆನು, ಅದು ಅಲ್ಲಿಯ ಅರಮನೆಗಳನ್ನು ನುಂಗಿಬಿಡುವದು.
- Lamentations 1:1 ಪ್ರಲಾಪಗಳು 1:1ಜನಭರಿತವಾಗಿದ್ದ ನಗರಿಯು ಹೇಗೆ ಒಂಟಿಯಾಗಿ ಕೂತುಕೊಂಡಿದ್ದಾಳೆ! ಅವಳು ಹೇಗೆ ವಿಧವೆಯಾದಳು! ಜನಾಂಗಗಳಲ್ಲಿ ಶ್ರೇಷ್ಠಳಾದವಳೂ ಸಂಸ್ಥಾನಗಳಲ್ಲಿ ರಾಜಕುಮಾರಿಯಾಗಿದ್ದವಳೂ ಹೇಗೆ ಕಪ್ಪವನ್ನು ಕೊಡುವಂಥವಳಾದಳು!
- Psalm 40:15 ಕೀರ್ತನೆಗಳು 40:15ಆಹಾ, ಆಹಾ ಎಂದು ನನಗೆ ಹೇಳುವವರು ತಮ್ಮ ನಾಚಿಕೆಯ ಫಲಕ್ಕಾಗಿ ಹಾಳಾಗಲಿ;
- Psalm 35:21 ಕೀರ್ತನೆಗಳು 35:21ಹೌದು, ನನಗೆ ವಿರೋಧವಾಗಿ ತಮ್ಮ ಬಾಯನ್ನು ಅಗಲ ಮಾಡಿ--ಆಹಾ, ಆಹಾ ನಮ್ಮ ಕಣ್ಣು ಅದನ್ನು ನೋಡಿತು ಅನ್ನುತ್ತಾರೆ.
- Jeremiah 49:1 ಯೆರೆಮೀಯ 49:1ಅಮ್ಮೋನ್ಯರ ವಿಷಯವಾಗಿ ಕರ್ತನು ಹೀಗೆ ಹೇಳುತ್ತಾನೆ--ಇಸ್ರಾಯೇಲಿಗೆ ಕುಮಾರರಿ ಲ್ಲವೋ? ಅವನಿಗೆ ಬಾಧ್ಯನಿಲ್ಲವೋ? ಅವರ ಅರಸನು ಗಾದನ್ನು ಬಾಧ್ಯವಾಗಿ ತಕ್ಕೊಳ್ಳುವದು ಯಾಕೆ? ಅವನ ಜನರು ಅದರ ಪಟ್ಟಣಗಳಲ್ಲಿ ವಾಸಮಾಡುವದು ಯಾಕೆ?
- Psalm 83:7 ಕೀರ್ತನೆಗಳು 83:7ಗೆಬಾಲ್ಯರೂ ಅಮ್ಮೋನಿ ಯರೂ ಮಾಲೇಕ್ಯರೂ ತೂರಿನ ನಿವಾಸಿಗಳು ಸಹಿತವಾಗಿ ಫಿಲಿಷ್ಟಿಯರದೇ;
Original words (Hebrew)
- Son · H1121בֵּן bên
- man · H120אָדָם ʼâdâm
- Tyrus · H6865צֹר Tsôr
- said · H559אָמַר ʼâmar
- Jerusalem · H3389יְרוּשָׁלַ͏ִם Yᵉrûwshâlaim
- Aha · H1889הֶאָח heʼâch
- broken · H7665שָׁבַר shâbar
- gates · H1817דֶּלֶת deleth
- people · H5971עַם ʻam
- turned · H5437סָבַב çâbab
- replenished · H4390מָלֵא mâlêʼ
- waste · H2717חָרַב chârab