Ezekiel · chapter 27 · verse 12
Ezekiel 27:12 in Kannada
ತಾರ್ಷೀಷಿನವರು ನಿನ್ನ ಕಡೆಯ ವರ್ತಕರಾಗಿ ಬೆಳ್ಳಿ, ಕಬ್ಬಿಣ, ತವರ, ಸೀಸಗಳಿಂದ ನಿನ್ನ ಸಂತೆಗಳಲ್ಲಿ ವ್ಯಾಪಾರ ಮಾಡಿದರು; ಅಪಾರವಾದ ಬಗೆಬಗೆಯ ಆಸ್ತಿಯು ನಿನಗೆ ಬೇಕಾಗಿತ್ತು.
Taarsheeshinavaru ninna kadeya vartakaraagi belli, kabbina, tavara, seesagalinda ninna santegalalli vyaapaara maadidaru; apaaravaada bagebageya aastiyu ninage bekaagittu.
Ezekiel 27:12 in English
- King James Version (KJV)
- Tarshish [was] thy merchant by reason of the multitude of all [kind of] riches; with silver, iron, tin, and lead, they traded in thy fairs.
- World English Bible (WEB)
- “‘“Tarshish was your merchant by reason of the multitude of all kinds of riches. They traded for your wares with silver, iron, tin, and lead.
- American Standard Version (ASV)
- Tarshish was thy merchant by reason of the multitude of all kinds of riches; with silver, iron, tin, and lead, they traded for thy wares.
- Bible in Basic English (BBE)
- Tarshish did business with you because of the great amount of your wealth; they gave silver, iron, tin, and lead for your goods.
- Darby Translation (DBY)
- Tarshish dealt with thee by reason of the abundance of all substance; with silver, iron, tin, and lead, they furnished thy markets.
- Webster's Bible (WBS)
- Tarshish [was] thy merchant by reason of the multitude of all [kind of] riches; with silver, iron, tin, and lead, they traded in thy fairs.
- Young's Literal Translation (YLT)
- Tarshish [is] thy merchant, Because of the abundance of all wealth, For silver, iron, tin, and lead, They have given out thy remnants.
Read in context
- 10ಪಾರಸೀಯರೂ ಲೂದ್ಯರೂ ಪೂಟ್ಯರೂ ನಿನ್ನ ಸೈನ್ಯಾಧಿಕಾರಿಗಳಾಗಿ ನಿನ್ನ ಸೈನ್ಯದಲ್ಲಿದ್ದರು; ಗುರಾಣಿ ಯನ್ನೂ ಶಿರಸ್ತ್ರಾಣವನ್ನೂ ನಿನ್ನಲ್ಲಿ ತೂಗಿಸಿದರು. ಇವರು ನಿನಗೆ ಮಹತ್ತನ್ನು ಕೊಟ್ಟರು.
- 11ಅರ್ವಾದಿನವರು ನಿನ್ನ ದಂಡಿನ ಸಂಗಡ ನಿನ್ನ ಗೋಡೆಗಳ ಸುತ್ತಲೂ ಮೇಲೆ ಇದ್ದರು; ಗಮ್ಮಾದ್ಯರು ನಿನ್ನ ಕೊತ್ತಲುಗಳಲ್ಲಿ ಕಾವಲಾಗಿದ್ದರು. ತಮ್ಮ ಖೇಡ್ಯಗಳನ್ನು ಸುತ್ತ ಮುತ್ತಲೂ ನಿನ್ನ ಗೋಡೆಗಳ ಮೇಲೆ ನೇತುಹಾಕಿ ಇವರು ನಿನ್ನ ಸೌಂದರ್ಯವನ್ನು ಪೂರ್ತಿಗೊಳಿಸಿದರು.
- 12ತಾರ್ಷೀಷಿನವರು ನಿನ್ನ ಕಡೆಯ ವರ್ತಕರಾಗಿ ಬೆಳ್ಳಿ, ಕಬ್ಬಿಣ, ತವರ, ಸೀಸಗಳಿಂದ ನಿನ್ನ ಸಂತೆಗಳಲ್ಲಿ ವ್ಯಾಪಾರ ಮಾಡಿದರು; ಅಪಾರವಾದ ಬಗೆಬಗೆಯ ಆಸ್ತಿಯು ನಿನಗೆ ಬೇಕಾಗಿತ್ತು.
- 13ಯಾವಾನ್, ತೂಬಲ್, ಮೇಷೆಕ್ ಇವರು ನಿನ್ನ ವರ್ತಕರಾಗಿದ್ದರು; ಮನುಷ್ಯರ ಪ್ರಾಣಗಳಿಂದಲೂ (ವ್ಯಕ್ತಿ) ಹಿತ್ತಾಳೆಯ ಪಾತ್ರೆ ಗಳಿಂದಲೂ ನಿನ್ನ ಸಂತೆಯಲ್ಲಿ ವ್ಯಾಪಾರ ನಡಿಸಿದರು.
- 14ತೋಗರ್ಮದ ಮನೆತನದವರು ಕುದುರೆಗಳಿಂ ದಲೂ ಕುದುರೆ ಸವಾರಿಗಳಿಂದಲೂ ಹೇಸರ ಕತ್ತೆ ಗಳಿಂದಲೂ ನಿನ್ನ ಸಂತೆಗಳಲ್ಲಿ ವ್ಯಾಪಾರ ನಡಿಸಿದರು.
Cross references
- 1 Kings 10:22 1 ಅರಸುಗಳು 10:22ಅರಸನಿಗೆ ತಾರ್ಷೀ ಷಿನ ಹಡಗುಗಳು ಹೀರಾಮನ ಹಡಗುಗಳ ಸಂಗಡ ಸಮುದ್ರದಲ್ಲಿ ಇದ್ದವು. ಮೂರು ವರುಷಕ್ಕೆ ಒಂದು ಸಾರಿ ತಾರ್ಷೀಷಿನ ಹಡಗುಗಳು ಬೆಳ್ಳಿಬಂಗಾರ ವನ್ನೂ ದಂತವನ್ನೂ ಕೋತಿಗಳನ್ನೂ ನವಿಲುಗಳನ್ನೂ ತಕ್ಕೊಂಡು ಬರುತ್ತಿದ್ದವು.
- Genesis 10:4 ಆದಿಕಾಂಡ 10:4ಯಾವಾನನ ಕುಮಾರರು ಯಾರಂದರೆ, ಎಲೀಷಾ ತಾರ್ಷೀಷ್ ಕಿತ್ತೀಮ್ ದೋದಾನಿಮ್ ಇವರೇ.
- Ezekiel 38:13 ಯೆಹೆಜ್ಕೇಲನು 38:13ಶೇಬಾ, ದೇದಾನ್ ಮತ್ತು ತಾರ್ಷೀಷಿನ ವರ್ತಕರು, ಎಲ್ಲಾ ಪ್ರಾಯದ ಸಿಂಹಗಳೊಂದಿಗೆ ಅಲ್ಲಿ ನಿನಗೆ--ನೀನು ಸುಲಿಗೆ ತೆಗೆದುಕೊಳ್ಳಬೇಕೆಂದು ಬಂದಿಯಾ ಕೊಳ್ಳೆಹೊಡೆಯುವದಕ್ಕಾಗಿಯೇ ನಿನ್ನ ತಂಡ ವನ್ನು ಕೂಡಿಸಿದೆಯೋ? ಬಂಗಾರ ಮತ್ತು ಬೆಳ್ಳಿಯನ್ನು ಹೊತ್ತುಕೊಂಡು ದನಗಳನ್ನು ಸಂಪತ್ತನ್ನೂ ತೆಗೆದು ಕೊಂಡು ಮಹಾಸುಲಿಗೆ ತೆಗೆದುಕೊಳ್ಳಬೇಕೆಂದೋ ಅನ್ನುವರು.
- Isaiah 23:10 ಯೆಶಾಯ 23:10ತಾರ್ಷೀಷಿನ ಮಗಳೇ, ನದಿಯಂತೆ ನಿನ್ನ ದೇಶದಲ್ಲಿ ಹಾದುಹೋಗು, ಅಲ್ಲಿ ಇನ್ನು ಬಲವು ಇರುವುದೇ ಇಲ್ಲ.
- Ezekiel 27:16 ಯೆಹೆಜ್ಕೇಲನು 27:16ನಿನ್ನ ಕೈಕೆಲಸದ ವಸ್ತುಗಳು ಅಪಾರವಾಗಿದ್ದದರಿಂದ ಅರಾಮಿನವರು ನಿನ್ನವರಾಗಿ ವ್ಯಾಪಾರಮಾಡಿ ಕೆಂಪರಳು, ರಕ್ತಾಂಬರ, ಕಸೂತಿಯ ವಸ್ತ್ರ, ನಾರುಬಟ್ಟೆ, ಹವಳ, ಮಾಣಿಕ್ಯ ಮೊದಲಾದ ಸರಕುಗಳನ್ನು ನಿನಗೆ ತಂದು ಸುರಿದರು.
- Jeremiah 10:9 ಯೆರೆಮೀಯ 10:9ಬೆಳ್ಳಿಯ ತಗಡುಗಳನ್ನು ತಾರ್ಷೀಷಿನಿಂದಲೂ ಬಂಗಾರವನ್ನು ಊಫಜಿನಿಂದಲೂ ತರುತ್ತಾರೆ; ಅದು ಕೆತ್ತನೆಯವನ ಕೆಲಸ, ಎರಕ ಹೊಯ್ಯುವವನ ಕೈಯಿಂದ ಉಂಟಾ ದದ್ದು. ನೀಲಿಯೂ ಧೂಮ್ರ ವರ್ಣವೂ ಅವುಗಳ ವಸ್ತ್ರವಾಗಿದೆ; ಅವುಗಳೆಲ್ಲಾ ಕೌಶಲ್ಯಗಾರರ ಕೆಲಸವೇ.
- Isaiah 60:9 ಯೆಶಾಯ 60:9ನಿಶ್ಚಯವಾಗಿ ದ್ವೀಪಗಳು, ತಾರ್ಷೀಷಿನ ಹಡಗುಗಳು ಮೊದಲಾಗಿ, ನನಗೋಸ್ಕರ ದೂರದಿಂದ ನಿನ್ನ ಕುಮಾರರನ್ನು ತಮ್ಮ ಬೆಳ್ಳಿಬಂಗಾರದ ಸಹಿತವಾಗಿ ನಿನ್ನ ದೇವರಾದ ಕರ್ತನ ಹೆಸರಿನ ಬಳಿಗೂ ನಿನ್ನನ್ನು ಶೃಂಗರಿಸಿರುವ ಇಸ್ರಾಯೇಲಿನ ಪರಿಶುದ್ಧನ ಬಳಿಗೂ ತರುವದರಲ್ಲಿ ಮುಂದಾಗುತ್ತಿವೆ.
- Isaiah 23:14 ಯೆಶಾಯ 23:14ತಾರ್ಷೀಷಿನ ಹಡಗುಗಳೇ, ಗೋ ಳಾಡಿರಿ! ನಮ್ಮ ಆಶ್ರಯಸ್ಥಾನವು ಹಾಳಾಯಿತು.
- Jonah 1:3 ಯೋನ 1:3ಆದರೆ ಯೋನನು ಕರ್ತನ ಸಮ್ಮುಖದಿಂದ ತಾರ್ಷೀಷಿಗೆ ಓಡಿ ಹೋಗುವದಕ್ಕೆ ಎದ್ದು ಯೊಪ್ಪಕ್ಕೆ ಇಳಿದು ತಾರ್ಷೀಷಿಗೆ ಹೋಗುವ ಹಡಗನ್ನು ಕಂಡು ಅದರ ಪ್ರಯಾಣದ ತೆರವನ್ನು ಕೊಟ್ಟು ಕರ್ತನ ಸಮ್ಮುಖದಿಂದ ಅವರ ಸಂಗಡ ತಾರ್ಷಿಷಿಗೆ ಹೋಗುವದಕ್ಕೆ ಅದನ್ನು ಹತ್ತಿದನು.
- Ezekiel 27:18 ಯೆಹೆಜ್ಕೇಲನು 27:18ನಿನ್ನ ಕೈಕೆಲಸದ ವಸ್ತುಗಳು ನಿನ್ನಲ್ಲಿ ಅಪಾರವಾಗಿ ದ್ದದರಿಂದಲೂ ಅಪರಿಮಿತವಾದ ಬಗೆ ಬಗೆಯ ಆಸ್ತಿಯೂ ನಿನಗೆ ಬೇಕಾಗಿದ್ದರಿಂದಲೂ
- Psalm 72:10 ಕೀರ್ತನೆಗಳು 72:10ತಾರ್ಷೀಷಿನ ಅರಸರೂ ದ್ವೀಪಗಳ ಅರಸರೂ ಕಾಣಿಕೆಗಳನ್ನು ತರುವರು; ಶೆಬಾ ಮತ್ತು ಸೆಬಾದ ಅರಸರು ದಾನಗಳನ್ನು ಅರ್ಪಿಸುವರು.
- Isaiah 2:16 ಯೆಶಾಯ 2:16ಎಲ್ಲಾ ತಾರ್ಷೀಷ್ ಹಡಗುಗಳು, ಅಂತೂ ನೋಡತಕ್ಕ ಮನೋಹರವಾದ ಎಲ್ಲಾ ಚಿತ್ರಗಳ ಮೇಲೆಯೂ ಆ ದಿನವು ಬರುವದು.