Ezekiel · chapter 27 · verse 13
Ezekiel 27:13 in Kannada
ಯಾವಾನ್, ತೂಬಲ್, ಮೇಷೆಕ್ ಇವರು ನಿನ್ನ ವರ್ತಕರಾಗಿದ್ದರು; ಮನುಷ್ಯರ ಪ್ರಾಣಗಳಿಂದಲೂ (ವ್ಯಕ್ತಿ) ಹಿತ್ತಾಳೆಯ ಪಾತ್ರೆ ಗಳಿಂದಲೂ ನಿನ್ನ ಸಂತೆಯಲ್ಲಿ ವ್ಯಾಪಾರ ನಡಿಸಿದರು.
Yaavaan, toobal, meshek ivaru ninna vartakaraagiddaru; manushyara praanagalindaloo (vyakti) hittaaleya paatre galindaloo ninna santeyalli vyaapaara nadisidaru.
Ezekiel 27:13 in English
- King James Version (KJV)
- Javan, Tubal, and Meshech, they [were] thy merchants: they traded the persons of men and vessels of brass in thy market.
- World English Bible (WEB)
- “‘“Javan, Tubal, and Meshech were your traders. They traded the persons of men and vessels of bronze for your merchandise.
- American Standard Version (ASV)
- Javan, Tubal, and Meshech, they were thy traffickers; they traded the persons of men and vessels of brass for thy merchandise.
- Bible in Basic English (BBE)
- Javan, Tubal, and Meshech were your traders; they gave living men and brass vessels for your goods.
- Darby Translation (DBY)
- Javan, Tubal, and Meshech, they were thy traffickers: they bartered with thee the persons of men, and vessels of bronze.
- Webster's Bible (WBS)
- Javan, Tubal, and Meshech, they [were] thy merchants: they traded in the persons of men and vessels of brass in thy market.
- Young's Literal Translation (YLT)
- Javan, Tubal, and Meshech — they [are] thy merchants, For persons of men, and vessels of brass, They have given out thy merchandise.
Read in context
- 11ಅರ್ವಾದಿನವರು ನಿನ್ನ ದಂಡಿನ ಸಂಗಡ ನಿನ್ನ ಗೋಡೆಗಳ ಸುತ್ತಲೂ ಮೇಲೆ ಇದ್ದರು; ಗಮ್ಮಾದ್ಯರು ನಿನ್ನ ಕೊತ್ತಲುಗಳಲ್ಲಿ ಕಾವಲಾಗಿದ್ದರು. ತಮ್ಮ ಖೇಡ್ಯಗಳನ್ನು ಸುತ್ತ ಮುತ್ತಲೂ ನಿನ್ನ ಗೋಡೆಗಳ ಮೇಲೆ ನೇತುಹಾಕಿ ಇವರು ನಿನ್ನ ಸೌಂದರ್ಯವನ್ನು ಪೂರ್ತಿಗೊಳಿಸಿದರು.
- 12ತಾರ್ಷೀಷಿನವರು ನಿನ್ನ ಕಡೆಯ ವರ್ತಕರಾಗಿ ಬೆಳ್ಳಿ, ಕಬ್ಬಿಣ, ತವರ, ಸೀಸಗಳಿಂದ ನಿನ್ನ ಸಂತೆಗಳಲ್ಲಿ ವ್ಯಾಪಾರ ಮಾಡಿದರು; ಅಪಾರವಾದ ಬಗೆಬಗೆಯ ಆಸ್ತಿಯು ನಿನಗೆ ಬೇಕಾಗಿತ್ತು.
- 13ಯಾವಾನ್, ತೂಬಲ್, ಮೇಷೆಕ್ ಇವರು ನಿನ್ನ ವರ್ತಕರಾಗಿದ್ದರು; ಮನುಷ್ಯರ ಪ್ರಾಣಗಳಿಂದಲೂ (ವ್ಯಕ್ತಿ) ಹಿತ್ತಾಳೆಯ ಪಾತ್ರೆ ಗಳಿಂದಲೂ ನಿನ್ನ ಸಂತೆಯಲ್ಲಿ ವ್ಯಾಪಾರ ನಡಿಸಿದರು.
- 14ತೋಗರ್ಮದ ಮನೆತನದವರು ಕುದುರೆಗಳಿಂ ದಲೂ ಕುದುರೆ ಸವಾರಿಗಳಿಂದಲೂ ಹೇಸರ ಕತ್ತೆ ಗಳಿಂದಲೂ ನಿನ್ನ ಸಂತೆಗಳಲ್ಲಿ ವ್ಯಾಪಾರ ನಡಿಸಿದರು.
- 15ದೇದಾನಿನವರು ನಿನ್ನ ವರ್ತಕರಾಗಿದ್ದರು; ಅನೇಕ ದ್ವೀಪಗಳು ನಿನ್ನ ಕೈಕೆಳಗೆ ವ್ಯಾಪಾರವನ್ನು ನಡೆಸಿದವು; ಅವರು ದಂತದಕೊಂಬುಗಳನ್ನೂ ಕರೀ ಮರಗಳನ್ನೂ ನಿನಗೆ ಕಾಣಿಕೆಯಾಗಿ ತರುತ್ತಿದ್ದರು.
Cross references
- Genesis 10:2 ಆದಿಕಾಂಡ 10:2ಯೆಫೆತನ ಕುಮಾರರು ಯಾರಂದರೆ, ಗೋಮೆರ್ ಮಾಗೋಗ್ ಮಾದಯ್ ಯಾವಾನ್ ತೂಬಲ್ ಮೇಷೆಕ್ ತೀರಾಸ್ ಎಂಬವರು.
- Isaiah 66:19 ಯೆಶಾಯ 66:19ಅವರ ಮಧ್ಯದಲ್ಲಿ ಒಂದು ಗುರುತನ್ನಿಟ್ಟು ಅವರಲ್ಲಿ ತಪ್ಪಿಸಿಕೊಂಡವರನ್ನು ಜನಾಂಗಗಳಿಗೂ ತಾರ್ಷೀಷಿಗೂ ಫೂಲಿಗೂ ಲೂದಿಗೂ ಬಿಲ್ಲು ಬೊಗ್ಗಿಸುವವರಿಗೂ ತೂಬಲಿಗೂ ಯಾವಾನಿಗೂ ನನ್ನ ಸಮಾಚಾರವನ್ನು ಕೇಳದೆ ನನ್ನ ಮಹಿಮೆಯನ್ನು ನೋಡದೆ ಇರುವ ದೂರದ ದ್ವೀಪ ಗಳಿಗೂ ಕಳುಹಿಸುವೆನು; ಅವರು ಅನ್ಯಜನಾಂಗಗಳಲ್ಲಿ ನನ್ನ ಮಹಿಮೆಯನ್ನು ತಿಳಿಸುವರು.
- 1 Chronicles 1:5 1 ಪೂರ್ವಕಾಲವೃತ್ತಾಂತ 1:5ಯೆಫೆತನ ಮಕ್ಕಳು--ಗೋಮೆರನು ಮಾಗೋ ಗನು ಮಾದಯನು, ಯಾವಾನನು, ತೂಬಲನು, ಮೇಷಕನು, ತೀರಾಸನು.
- Ezekiel 39:1 ಯೆಹೆಜ್ಕೇಲನು 39:1ಆದದರಿಂದ, ಮನುಷ್ಯಪುತ್ರನೇ, ನೀನು, ಗೋಗನಿಗೆ ವಿರುದ್ಧವಾಗಿ ಪ್ರವಾದಿಸಿ, ದೇವರಾದ ಕರ್ತನು ಹೀಗೆ ಹೇಳುತ್ತಾನೆಂದು ಹೇಳು --ಇಗೋ, ಮೇಷಕ್ ಮತ್ತು ತೂಬಲಿಗೆ ಮುಖ್ಯ ಪ್ರಭುವಾದ ಓ ಗೋಗನೇ, ನಾನು ನಿನಗೆ ವಿರೋಧ ವಾಗಿದ್ದೇನೆ;
- Revelation 18:13 ಪ್ರಕಟನೆ 18:13ಲವಂಗ, ಚೆಕ್ಕೆ, ಧೂಪ, ಸುಗಂಧ ತೈಲ, ಸಾಂಬ್ರಾಣಿ, ದ್ರಾಕ್ಷಾರಸ, ಎಣ್ಣೆ, ನಯವಾದಹಿಟ್ಟು, ಗೋಧಿ, ದನಗಳು, ಕುರಿ ಗಳು, ಕುದುರೆಗಳು, ರಥಗಳು, ಗುಲಾಮರು, ಮನುಷ್ಯರ ಪ್ರಾಣಗಳು ಇವೇ ಮೊದಲಾದವುಗಳನ್ನು ಯಾರೂ ಎಂದೂ ಕೊಂಡುಕೊಳ್ಳುವರಿಲ್ಲ ಎಂದು ದುಃಖಿಸುವರು.
- Joel 3:3 ಯೋವೇಲ 3:3ನನ್ನ ಜನರಿ ಗೋಸ್ಕರ ಚೀಟು ಹಾಕಿ ಹುಡುಗನನ್ನು ಸೂಳೆಗಾಗಿ ಕೊಟ್ಟು, ಹುಡುಗಿಯನ್ನು ದ್ರಾಕ್ಷಾರಸಕ್ಕಾಗಿ ಮಾರಿ ಅವರು ಕುಡಿಯುವ ಹಾಗೆ ಮಾರಿದ್ದಾರಲ್ಲಾ?
- Ezekiel 32:26 ಯೆಹೆಜ್ಕೇಲನು 32:26ಅಲ್ಲಿ ಮೇಷೆಕೂ ತೂಬಲೂ ಮತ್ತು ಅದರ ಎಲ್ಲಾ ಸಮೂಹವೂ ಅದರ ಸಮಾಧಿಗಳೂ ಅದರ ಸುತ್ತಲಾಗಿ ಇವೆ ಇವರೆಲ್ಲರೂ ಜೀವಿತರ ದೇಶದಲ್ಲಿ ಭಯಂಕರರಾಗಿ ದ್ದಾಗ್ಯೂ ಸುನ್ನತಿಯಿಲ್ಲದೆ ಕತ್ತಿಯಿಂದ ಹತರಾದವರು.
- 1 Chronicles 1:7 1 ಪೂರ್ವಕಾಲವೃತ್ತಾಂತ 1:7ಯಾವಾ ನನ ಮಕ್ಕಳು -- ಎಲೀಷನು, ತಾರ್ಷೀಷನು, ಕಿತ್ತೀ ಮನು, ದೋದಾನೀಮನು.
- Daniel 10:20 ದಾನಿಯೇಲನು 10:20ಅವನು ಹೇಳಿದ್ದೇನಂದರೆ--ನಾನು ನಿನ್ನ ಹತ್ತಿರ ಬಂದ ಕಾರಣವು ನಿನಗೆ ತಿಳಿಯಿತೇ? ಈಗ ನಾನು ಪಾರಸಿಯ ಪ್ರಭುವಿನ ಸಂಗಡ (ಕಾದಾಡಲು) ತಿರುಗಿ ಹೋಗುತ್ತೇನೆ; ನಾನು ಹೋದ ಮೇಲೆ ಇಗೋ, ಗ್ರೀಕ್ ಪ್ರಭುವು ಬರುವನು.ಆದರೆ ಸತ್ಯದ ಬರಹದಲ್ಲಿ ಸೂಚಿಸಲ್ಪಟ್ಟದ್ದನ್ನು ನಿನಗೆ ತಿಳಿಸುತ್ತೇನೆ; ನಿಮ್ಮ ಪ್ರಭುವಾದ ವಿಾಕಾಯೇಲನೇ ಹೊರತು ಮತ್ತೆ ಯಾರೂ ನನ್ನ ಸಂಗಡ ಈ ಸಂಗತಿಗಳಲ್ಲಿ ಬಲಗೊಳ್ಳಲಿಲ್ಲ.
- Daniel 8:21 ದಾನಿಯೇಲನು 8:21ಆ ಒರಟು ಹೋತವು ಗ್ರೀಕ್ನ ಅರಸನು ಮತ್ತು ಕಣ್ಣುಗಳ ಮಧ್ಯೆ ಇದ್ದ ಆ ದೊಡ್ಡ ಕೊಂಬು ಮೊದಲನೆಯ ಅರಸನು.
- Daniel 11:2 ದಾನಿಯೇಲನು 11:2ನಾನು ಈಗ ನಿನಗೆ ಸತ್ಯವನ್ನು ತಿಳಿಸುತ್ತೇನೆ; ಇಗೋ, ಪಾರಸಿಯರಲ್ಲಿ ಇನ್ನು ಮೂರು ಅರಸರು ನಿಲ್ಲುವರು; ನಾಲ್ಕನೆಯವನು ಅವರೆಲ್ಲರಿಗಿಂತಲೂ ಬಹಳ ಐಶ್ವರ್ಯವಂತನಾಗಿರುವನು; ಅವನು ತನ್ನ ಐಶ್ವರ್ಯದಿಂದಾಗುವ ಸಾಮರ್ಥ್ಯದಿಂದ ಗ್ರೀಕ್ ರಾಜ್ಯಕ್ಕೆ ವಿರೋಧವಾಗಿ ಎಲ್ಲರನ್ನೂ ಹುರಿದುಂಬಿಸು ವನು.
- Ezekiel 27:19 ಯೆಹೆಜ್ಕೇಲನು 27:19ದಾನ್ ಮತ್ತು ಯಾವಾನ್ ಸಹ ಹೋಗುವಾಗ ಬರುವಾಗ ನಿನ್ನ ಸಂತೆಗಳಲ್ಲಿ ವ್ಯಾಪಾರ ನಡೆಸಿದರು. ಮೆರಗುವ ಕಬ್ಬಿಣ ದಾಲ್ಚಿನ್ನಿ, ಬಜೆ ಇವುಗಳು ನಿನ್ನ ಸಂತೆಯಲ್ಲಿ ಇದ್ದವು.