Ezekiel · chapter 27 · verse 29
Ezekiel 27:29 in Kannada
ಹುಟ್ಟು ಹಾಕುವವರೆಲ್ಲರೂ ಅಂಬಿಗರೂ ಸಮುದ್ರದ ಸಕಲ ನಾವಿಕರೂ ತಮ್ಮ ತಮ್ಮ ಹಡಗುಗಳಿಂದಿಳಿದು ನೆಲದ ಮೇಲೆ ನಿಂತುಕೊಂಡು,
Huttu haakuvavarellaroo ambigaroo samudrada sakala naavikaroo tamma tamma hadagugalindilidu nelada mele nintukondu,
Ezekiel 27:29 in English
- King James Version (KJV)
- And all that handle the oar, the mariners, [and] all the pilots of the sea, shall come down from their ships, they shall stand upon the land;
- World English Bible (WEB)
- All who handle the oars, the mariners and all the pilots of the sea, will come down from their ships. They will stand on the land,
- American Standard Version (ASV)
- And all that handle the oar, the mariners, [and] all the pilots of the sea, shall come down from their ships; they shall stand upon the land,
- Bible in Basic English (BBE)
- And all the boatmen, the seamen and those who are expert at guiding a ship through the sea, will come down from their ships and take their places on the land;
- Darby Translation (DBY)
- And all that handle the oar, the mariners, all the pilots of the sea, shall come down from their ships; they shall stand upon the land,
- Webster's Bible (WBS)
- And all that handle the oar, the mariners, [and] all the pilots of the sea, shall come down from their ships, they shall stand upon the land;
- Young's Literal Translation (YLT)
- And come down from their ships have all handling an oar, Mariners, all the pilots of the sea, on the land they stand,
Read in context
- 27ನಿನ್ನ ಆಸ್ತಿಪಾಸ್ತಿಗಳೂ ಸರಕುಗಳೂ ನಾವಿಕರೂ ಅಂಬಿಗರೂ ಒಡಕುಗಳನ್ನು ಮುಚ್ಚುವವರೂ ವ್ಯಾಪಾರಿ ಗಳೂ ನಿನ್ನಲ್ಲಿನ ಸಮಸ್ತ ಸೈನಿಕರೂ ಅಂತೂ ನಿನ್ನೊಳಗೆ ಸೇರಿಕೊಂಡಿರುವ ಸಿಬ್ಬಂದಿಯೆಲ್ಲವೂ ನಿನ್ನ ನಾಶನದ ದಿನದಲ್ಲಿ ಸಮುದ್ರದೊಳಗೆ ನಿನ್ನೊಂದಿಗೆ ಮುಳುಗಿ ಹೋಗುವರು.
- 28ನಿನ್ನ ನಾವಿಕರ ಕಿರಿಚಾಟಕ್ಕೆ ಉಪ ನಗರಗಳು, ಪ್ರದೇಶಗಳು, ನಡುಗುವವು.
- 29ಹುಟ್ಟು ಹಾಕುವವರೆಲ್ಲರೂ ಅಂಬಿಗರೂ ಸಮುದ್ರದ ಸಕಲ ನಾವಿಕರೂ ತಮ್ಮ ತಮ್ಮ ಹಡಗುಗಳಿಂದಿಳಿದು ನೆಲದ ಮೇಲೆ ನಿಂತುಕೊಂಡು,
- 30ನಿನ್ನ ನಿಮಿತ್ತ ದುಃಖದಿಂದ ಅರಚಿ ತಲೆಗೆ ದೂಳೆರೆಚಿಕೊಂಡು ಬೂದಿಯಲ್ಲಿ ಬಿದ್ದು ಹೊರಳಾಡಿ;
- 31ನಿನಗಾಗಿ ತಲೆಬೋಳಿಸಿಕೊಂಡು ಗೋಣಿಚೀಲವನ್ನು ಸುತ್ತಿಕೊಂಡು ಮನೋವ್ಯಥೆ ಯಿಂದ ಗೋಳಾಡಿ ನಿನಗೋಸ್ಕರ ಬಿಕ್ಕಿಬಿಕ್ಕಿ ಅಳುವರು.
Cross references
- Ezekiel 32:10 ಯೆಹೆಜ್ಕೇಲನು 32:10ಹೌದು, ನಾನು ಅನೇಕ ಜನರನ್ನು ನಿನ್ನ ವಿಷಯದಲ್ಲಿ ವಿಸ್ಮಯಗೊಳಿಸುವೆನು, ನಾನು ಅವರ ಮುಂದೆ ನನ್ನ ಕತ್ತಿಯನ್ನು ಬೀಸುವಾಗ ಅವರ ಅರಸರು ನಿನ್ನ ವಿಷಯದಲ್ಲಿ ಭಯಭ್ರಾಂತಿಗೊಳ್ಳುವರು. ನೀನು ಬೀಳುವ ಆ ದಿನದಲ್ಲಿ ಅವರು ಕ್ಷಣಕ್ಷಣಕ್ಕೆ ತಮ್ಮ ತಮ್ಮ ಪ್ರಾಣದ ಬಗ್ಗೆ ನಡುಗುವರು.
- Ezekiel 26:16 ಯೆಹೆಜ್ಕೇಲನು 26:16ಆಮೇಲೆ ಸಮುದ್ರದ ಎಲ್ಲಾ ಪ್ರಭುಗಳು ತಮ್ಮ ಸಿಂಹಾಸನಗಳನ್ನು ಬಿಟ್ಟು ಇಳಿಯುವರು; ತಮ್ಮ ನಿಲು ವಂಗಿಗಳನ್ನು ತೆಗೆದುಹಾಕುವರು, ಚಿತ್ರವಾಗಿ ಹೊಲಿದ ತಮ್ಮ ವಸ್ತ್ರಗಳನ್ನು ಇಟ್ಟುಬಿಡುವರು; ನಡುಗುವಿಕೆಯನ್ನು ಹೊದ್ದುಕೊಳ್ಳುವರು; ನೆಲದ ಮೇಲೆ ಕುಳಿತುಕೊಳ್ಳು ವರು, ಕ್ಷಣಕ್ಷಣಕ್ಕೂ ನಡುಗುವರು, ನಿನ್ನ ವಿಷಯ ವಾಗಿ ಆಶ್ಚರ್ಯಪಡುವರು.
- Revelation 18:17–24 ಪ್ರಕಟನೆ 18:17–24ಅಷ್ಟು ದೊಡ್ಡ ಐಶ್ವರ್ಯವು ಒಂದೇ ಗಳಿಗೆಯಲ್ಲಿ ಇಲ್ಲದೆ ಹೋಯಿತಲ್ಲಾ ಅನ್ನುವರು. ಇದಲ್ಲದೆ ಹಡಗುಗಳ ಯಜಮಾನರೂ ಹಡಗುಗಳಲ್ಲಿ ಜೊತೆಯಾಗಿರುವವರೂ ನಾವಿಕರೂ ಸಮುದ್ರದ ಮೇಲೆ ವ್ಯಾಪಾರ ಮಾಡುವವರೆಲ್ಲರೂ ದೂರದಲ್ಲಿ ನಿಂತು ಅವಳ ದಹನದ ಹೊಗೆಯನ್ನು ನೋಡುತ್ತಾ--ಈ ಮಹಾ ಪಟ್ಟಣಕ್ಕೆ ಸಮಾನವಾದ ಪಟ್ಟಣವು ಯಾವದು ಎಂದು ಕೂಗಿ ಹೇಳಿದರು. ಆಗ ಅವರು ತಮ್ಮ ತಲೆಗಳ ಮೇಲೆ ಧೂಳನು ಹೊಯಿದುಕೊಂಡು ಕೂಗುತ್ತಾ ಅಳುತ್ತಾ, ಗೋಳಾ ಡುತ್ತಾ--ಅಯ್ಯೋ, ಅಯ್ಯೋ ಸಮುದ್ರದ ಮೇಲೆ ಹಡಗುಗಳಿದ್ದವರೆಲ್ಲರನ್ನು ತನ್ನ ಅಮೂಲ್ಯ ದ್ರವ್ಯ ಗಳಿಂದ ಐಶ್ವರ್ಯವಂತರನ್ನಾಗಿ ಮಾಡಿದ ಆ ಮಹಾ ನಗರಿಯು ಒಂದೇ ಗಳಿಗೆಯಲ್ಲಿ ಹಾಳಾದಳಲ್ಲಾ ಎಂದು ಪರಲೋಕವೇ, ಪರಿಶುದ್ಧರಾದ ಅಪೊಸ್ತಲರೇ, ಪ್ರವಾದಿಗಳೇ, ಅವಳ ವಿಷಯವಾಗಿ ಆನಂದಪಡಿರಿ. ಯಾಕಂದರೆ ನಿಮ್ಮ ನಿಮಿತ್ತವಾಗಿ ದೇವರು ಇವಳಿಗೆ ಪ್ರತಿ ದಂಡನೆಯನ್ನು ಮಾಡಿದನು ಎಂದು ಹೇಳಿತು. ಆಗ ಬಲಿಷ್ಠನಾದ ಒಬ್ಬ ದೂತನು ಬೀಸುವ ದೊಡ್ಡ ಕಲ್ಲಿನಂತಿರುವ ಒಂದು ಕಲ್ಲನ್ನು ಎತ್ತಿ ಸಮುದ್ರ ದೊಳಗೆ ಹಾಕಿ--ಮಹಾ ಪಟ್ಟಣವಾದ ಆ ಬಾಬೆಲು ಹೀಗೆಯೇ ಬಲಾತ್ಕಾರದಿಂದ ಕೆಡವಲ್ಲಟ್ಟು ಇನ್ನೆಂದಿಗೂ ಕಾಣಿಸುವದಿಲ್ಲ. ನಿನ್ನಲ್ಲಿ ವೀಣೆಗಾರರೂ ವಾದ್ಯ ಗಾರರೂ ಕೊಳಲೂದುವವರೂ ತುತೂರಿಯವರು ಮಾಡುವ ಧ್ವನಿಯೂ ಇನ್ನೆಂದಿಗೂ ಕೇಳಿಸುವದಿಲ್ಲ. ಯಾವ ವಿಧವಾದ ಕೈಗಾರಿಕೆಯನ್ನು ಮಾಡುವವರು ನಿಮ್ಮಲ್ಲಿ ಇನ್ನೆಂದಿಗೂ ಸಿಕ್ಕುವದಿಲ್ಲ; ಬೀಸುವ ಕಲ್ಲಿನ ಶಬ್ದವೂ ನಿನ್ನಲ್ಲಿ ಇನ್ನೆಂದಿಗೂ ಕೇಳಿಸುವದಿಲ್ಲ. ದೀಪದ ಬೆಳಕು ನಿನ್ನಲ್ಲಿ ಇನ್ನೆಂದಿಗೂ ಪ್ರಕಾಶಿಸು ವದಿಲ್ಲ. ವಧೂವರರ ಸ್ವರವು ನಿನ್ನಲ್ಲಿ ಇನ್ನೆಂದಿಗೂ ಕೇಳಿಸುವದಿಲ್ಲ; ನಿನ್ನ ವರ್ತಕರು ಭೂಮಿಯ ಪ್ರಧಾನ ರಾಗಿದ್ದದ್ದಲ್ಲದೆ ನಿನ್ನ ಮಾಟದಿಂದ ಎಲ್ಲಾ ಜನಾಂಗ ದವರು ಮೋಸ ಹೋದರು.ಪ್ರವಾದಿಗಳ, ಪರಿ ಶುದ್ಧರ ಮತ್ತು ಭೂಮಿಯ ಮೇಲೆ ಕೊಲ್ಲಲ್ಪಟ್ಟವರೆಲ್ಲರ ರಕ್ತವು ನಿನ್ನಲ್ಲಿ ಸಿಕ್ಕಿತು ಎಂದು ಹೇಳಿದನು. ಪ್ರವಾದಿಗಳ, ಪರಿ ಶುದ್ಧರ ಮತ್ತು ಭೂಮಿಯ ಮೇಲೆ ಕೊಲ್ಲಲ್ಪಟ್ಟವರೆಲ್ಲರ ರಕ್ತವು ನಿನ್ನಲ್ಲಿ ಸಿಕ್ಕಿತು ಎಂದು ಹೇಳಿದನು.