Ezekiel · chapter 27 · verse 3
Ezekiel 27:3 in Kannada
ತೂರಿಗೆ ಹೇಳು--ಸಮುದ್ರದ ಪ್ರವೇಶದಲ್ಲಿ ವಾಸಿಸುವವಳೇ, ಬಹು ದ್ವೀಪಗಳಿಗೆ ಜನರ ವ್ಯಾಪಾರವನ್ನು ನಡಿಸುವ ವಳೇ, ದೇವರಾದ ಕರ್ತನು ಹೀಗೆ ಹೇಳುತ್ತಾನೆ-- ಓ ತೂರೇ, ನಾನು ಪೂರ್ಣ ಸೌಂದರ್ಯವಂತಳೆಂದು ನೀನು ಹೇಳಿದ್ದೀ.
Toorige helu--samudrada praveshadalli vaasisuvavale, bahu dveepagalige janara vyaapaaravannu nadisuva vale, devaraada kartanu heege heluttaane-- o toore, naanu poorna saundaryavantalendu neenu heliddee.
Ezekiel 27:3 in English
- King James Version (KJV)
- And say unto Tyrus, O thou that art situate at the entry of the sea, [which art] a merchant of the people for many isles, Thus saith the Lord GOD; O Tyrus, thou hast said, I [am] of perfect beauty.
- World English Bible (WEB)
- and tell Tyre, ‘You who dwell at the entry of the sea, who are the merchant of the peoples to many islands, the Lord GOD says: “You, Tyre, have said, ‘I am perfect in beauty.’
- American Standard Version (ASV)
- and say unto Tyre, O thou that dwellest at the entry of the sea, that art the merchant of the peoples unto many isles, thus saith the Lord Jehovah: Thou, O Tyre, hast said, I am perfect in beauty.
- Bible in Basic English (BBE)
- And say to Tyre, O you who are seated at the doorway of the sea, trading for the peoples with the great sea-lands, these are the words of the Lord: You, O Tyre, have said, I am a ship completely beautiful.
- Darby Translation (DBY)
- and say unto Tyre: O thou that art situate at the entries of the sea, and traffickest with the peoples in many isles, thus saith the Lord Jehovah: Thou, Tyre, hast said, I am perfect in beauty.
- Webster's Bible (WBS)
- And say to Tyre, O thou that art situated at the entry of the sea, [which art] a merchant of the people for many isles, Thus saith the Lord GOD; O Tyre, thou hast said, I [am] of perfect beauty.
- Young's Literal Translation (YLT)
- O dweller on the entrances of the sea, Merchant of the peoples unto many isles, Thus said the Lord Jehovah: O Tyre, thou — thou hast said: I [am] the perfection of beauty.
Read in context
- 1ಇದಲ್ಲದೆ ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ--
- 2ಮನುಷ್ಯಪುತ್ರನೇ, ಈಗ ತೂರಿನ ಬಗ್ಗೆ ನೀನು ಗೋಳಾಟವನ್ನೆತ್ತು;
- 3ತೂರಿಗೆ ಹೇಳು--ಸಮುದ್ರದ ಪ್ರವೇಶದಲ್ಲಿ ವಾಸಿಸುವವಳೇ, ಬಹು ದ್ವೀಪಗಳಿಗೆ ಜನರ ವ್ಯಾಪಾರವನ್ನು ನಡಿಸುವ ವಳೇ, ದೇವರಾದ ಕರ್ತನು ಹೀಗೆ ಹೇಳುತ್ತಾನೆ-- ಓ ತೂರೇ, ನಾನು ಪೂರ್ಣ ಸೌಂದರ್ಯವಂತಳೆಂದು ನೀನು ಹೇಳಿದ್ದೀ.
- 4ನಿನ್ನ ಮೇರೆಗಳು ಸಮುದ್ರದ ಮಧ್ಯದಲ್ಲಿವೆ, ನಿನ್ನನ್ನು ಕಟ್ಟಿದವರು ನಿನ್ನ ಸೌಂದರ್ಯ ವನ್ನು ಸಂಪೂರ್ಣಪಡಿಸಿದ್ದಾರೆ.
- 5ಸೆನೀರಿನ ತುರಾಯಿ ಮರಗಳಿಂದ ನಿನ್ನ ಹಡಗಿನ ಹಲಗೆಗಳನ್ನೆಲ್ಲಾ ಕಟ್ಟಿ ದ್ದಾರೆ, ನಿನಗೆ ಪಠಸ್ತಂಭಗಳನ್ನು ಮಾಡುವದಕ್ಕೆ ಲೆಬ ನೋನಿನಿಂದ ದೇವದಾರುಗಳನ್ನು ತಂದಿದ್ದಾರೆ.
Cross references
- Ezekiel 27:4 ಯೆಹೆಜ್ಕೇಲನು 27:4ನಿನ್ನ ಮೇರೆಗಳು ಸಮುದ್ರದ ಮಧ್ಯದಲ್ಲಿವೆ, ನಿನ್ನನ್ನು ಕಟ್ಟಿದವರು ನಿನ್ನ ಸೌಂದರ್ಯ ವನ್ನು ಸಂಪೂರ್ಣಪಡಿಸಿದ್ದಾರೆ.
- Ezekiel 27:10–36 ಯೆಹೆಜ್ಕೇಲನು 27:10–36ಪಾರಸೀಯರೂ ಲೂದ್ಯರೂ ಪೂಟ್ಯರೂ ನಿನ್ನ ಸೈನ್ಯಾಧಿಕಾರಿಗಳಾಗಿ ನಿನ್ನ ಸೈನ್ಯದಲ್ಲಿದ್ದರು; ಗುರಾಣಿ ಯನ್ನೂ ಶಿರಸ್ತ್ರಾಣವನ್ನೂ ನಿನ್ನಲ್ಲಿ ತೂಗಿಸಿದರು. ಇವರು ನಿನಗೆ ಮಹತ್ತನ್ನು ಕೊಟ್ಟರು. ಅರ್ವಾದಿನವರು ನಿನ್ನ ದಂಡಿನ ಸಂಗಡ ನಿನ್ನ ಗೋಡೆಗಳ ಸುತ್ತಲೂ ಮೇಲೆ ಇದ್ದರು; ಗಮ್ಮಾದ್ಯರು ನಿನ್ನ ಕೊತ್ತಲುಗಳಲ್ಲಿ ಕಾವಲಾಗಿದ್ದರು. ತಮ್ಮ ಖೇಡ್ಯಗಳನ್ನು ಸುತ್ತ ಮುತ್ತಲೂ ನಿನ್ನ ಗೋಡೆಗಳ ಮೇಲೆ ನೇತುಹಾಕಿ ಇವರು ನಿನ್ನ ಸೌಂದರ್ಯವನ್ನು ಪೂರ್ತಿಗೊಳಿಸಿದರು. ತಾರ್ಷೀಷಿನವರು ನಿನ್ನ ಕಡೆಯ ವರ್ತಕರಾಗಿ ಬೆಳ್ಳಿ, ಕಬ್ಬಿಣ, ತವರ, ಸೀಸಗಳಿಂದ ನಿನ್ನ ಸಂತೆಗಳಲ್ಲಿ ವ್ಯಾಪಾರ ಮಾಡಿದರು; ಅಪಾರವಾದ ಬಗೆಬಗೆಯ ಆಸ್ತಿಯು ನಿನಗೆ ಬೇಕಾಗಿತ್ತು. ಯಾವಾನ್, ತೂಬಲ್, ಮೇಷೆಕ್ ಇವರು ನಿನ್ನ ವರ್ತಕರಾಗಿದ್ದರು; ಮನುಷ್ಯರ ಪ್ರಾಣಗಳಿಂದಲೂ (ವ್ಯಕ್ತಿ) ಹಿತ್ತಾಳೆಯ ಪಾತ್ರೆ ಗಳಿಂದಲೂ ನಿನ್ನ ಸಂತೆಯಲ್ಲಿ ವ್ಯಾಪಾರ ನಡಿಸಿದರು. ತೋಗರ್ಮದ ಮನೆತನದವರು ಕುದುರೆಗಳಿಂ ದಲೂ ಕುದುರೆ ಸವಾರಿಗಳಿಂದಲೂ ಹೇಸರ ಕತ್ತೆ ಗಳಿಂದಲೂ ನಿನ್ನ ಸಂತೆಗಳಲ್ಲಿ ವ್ಯಾಪಾರ ನಡಿಸಿದರು. ದೇದಾನಿನವರು ನಿನ್ನ ವರ್ತಕರಾಗಿದ್ದರು; ಅನೇಕ ದ್ವೀಪಗಳು ನಿನ್ನ ಕೈಕೆಳಗೆ ವ್ಯಾಪಾರವನ್ನು ನಡೆಸಿದವು; ಅವರು ದಂತದಕೊಂಬುಗಳನ್ನೂ ಕರೀ ಮರಗಳನ್ನೂ ನಿನಗೆ ಕಾಣಿಕೆಯಾಗಿ ತರುತ್ತಿದ್ದರು. ನಿನ್ನ ಕೈಕೆಲಸದ ವಸ್ತುಗಳು ಅಪಾರವಾಗಿದ್ದದರಿಂದ ಅರಾಮಿನವರು ನಿನ್ನವರಾಗಿ ವ್ಯಾಪಾರಮಾಡಿ ಕೆಂಪರಳು, ರಕ್ತಾಂಬರ, ಕಸೂತಿಯ ವಸ್ತ್ರ, ನಾರುಬಟ್ಟೆ, ಹವಳ, ಮಾಣಿಕ್ಯ ಮೊದಲಾದ ಸರಕುಗಳನ್ನು ನಿನಗೆ ತಂದು ಸುರಿದರು. ಯೆಹೂದವೂ ಇಸ್ರಾಯೇಲ್ ದೇಶವೂ ನಿನ್ನ ಕಡೆಯ ವರ್ತಕರಾಗಿ ಮಿನ್ನೀಥಿನ ಗೋಧಿಯಿಂದಲೂ ಕಂಡಸಕ್ಕರೆ, ಜೇನು, ಎಣ್ಣೆ ಮತ್ತು ಸುಗಂಧ ತೈಲ ದಿಂದಲೂ ನಿನ್ನ ಸಂತೆಯಲ್ಲಿ ವ್ಯಾಪಾರ ನಡೆಸಿದರು. ನಿನ್ನ ಕೈಕೆಲಸದ ವಸ್ತುಗಳು ನಿನ್ನಲ್ಲಿ ಅಪಾರವಾಗಿ ದ್ದದರಿಂದಲೂ ಅಪರಿಮಿತವಾದ ಬಗೆ ಬಗೆಯ ಆಸ್ತಿಯೂ ನಿನಗೆ ಬೇಕಾಗಿದ್ದರಿಂದಲೂ ದಾನ್ ಮತ್ತು ಯಾವಾನ್ ಸಹ ಹೋಗುವಾಗ ಬರುವಾಗ ನಿನ್ನ ಸಂತೆಗಳಲ್ಲಿ ವ್ಯಾಪಾರ ನಡೆಸಿದರು. ಮೆರಗುವ ಕಬ್ಬಿಣ ದಾಲ್ಚಿನ್ನಿ, ಬಜೆ ಇವುಗಳು ನಿನ್ನ ಸಂತೆಯಲ್ಲಿ ಇದ್ದವು. ದೇದಾನು ರಥಗಳ ಸವಾರಿಗಳಿಗೆ ತಕ್ಕ ಒಳ್ಳೆಯ ಬಟ್ಟೆಗಳಿಂದ ನಿನ್ನ ಸಂಗಡ ವ್ಯಾಪಾರ ಮಾಡುತ್ತಿತ್ತು. ಅರಬಿಯ ಮತ್ತು ಕೇದಾರಿನ ಎಲ್ಲಾ ಪ್ರಧಾನಿಗಳು ನಿನ್ನ ಕೈಕೆಲಸದ ವ್ಯಾಪಾರಿಗಳಾಗಿದ್ದರು; ಕುರಿಮರಿಗಳಿಂದಲೂ ಟಗರುಗಳಿಂದಲೂ ಹೋತಗ ಳಿಂದಲೂ ನಿನ್ನೊಡನೆ ವ್ಯಾಪಾರ ಮಾಡಿದರು. ಶೆಬ ದವರು, ರಗ್ಮದವರು ನಿನ್ನ ಕಡೆಯ ವರ್ತಕರಾಗಿ ಶ್ರೇಷ್ಟವಾದ ಎಲ್ಲಾ ಸುಗಂಧ ದ್ರವ್ಯದಿಂದಲೂ ಬೆಲೆ ಯುಳ್ಳ ಎಲ್ಲಾ ರತ್ನಗಳಿಂದಲೂ ಚಿನ್ನದಿಂದಲೂ ನಿನ್ನ ಸಂತೆಗಳಲ್ಲಿ ವ್ಯಾಪಾರ ನಡೆಸಿದರು. ಹಾರಾನ್, ಕನ್ನೆ, ಏದೆನ್, ಶೆಬ, ಅಶ್ಶೂರ್ ಮತ್ತು ಕಿಲ್ಮದ್ವರು ನಿನ್ನ ವ್ಯಾಪಾರಿಗಳಾಗಿದ್ದರು. ಇವರು ಎಲ್ಲಾ ತರಹದ ಸಾಮಾನುಗಳಲ್ಲೂ ನಿನ್ನ ವ್ಯಾಪಾರಿಗಳಾಗಿದ್ದರು. ಅಂದರೆ ನೀಲಿಬಟ್ಟೆಗಳು, ಕಸೂತಿಯ ಕೆಲಸ ದೇವ ದಾರುವಿನಿಂದ ಮಾಡಿ ಹಗ್ಗಗಳಿಂದ ಕಟ್ಟಿದಂತ, ರೇಷ್ಮೆ ತುಂಬಿಸಿದ ಪೆಟ್ಟಿಗೆಗಳನ್ನು ತಂದು ನಿನ್ನ ಪಟ್ಟಣಗಳಲ್ಲಿ ವರ್ತಕರಾಗಿದ್ದರು. ತಾರ್ಷೀಷಿನ ಹಡಗುಗಳು ನಿನ್ನ ಮಾರುಕಟ್ಟೆಯಲ್ಲಿ ಸರಕುಗಳನ್ನು ತರುತ್ತಿದ್ದವು; ಹೀಗೆ ನೀನು ತುಂಬಿದ್ದೀ ಮತ್ತು ಸಮುದ್ರಗಳ ಮಧ್ಯದಲ್ಲಿ ಬಹಳ ಘನವುಳ್ಳವಳಾದಿ. ಹುಟ್ಟುಹಾಕುವವರು ನಿನ್ನನ್ನು (ಮಹಾತರಂಗ ಗಳಿಗೆ) ಸಿಕ್ಕಿಸಿದ್ದಾರೆ. ಮೂಡಣ ಗಾಳಿಯು ಸಮುದ್ರದ ಮಧ್ಯದಲ್ಲಿ ನಿನ್ನನ್ನು ಮುರಿದಿದೆ. ನಿನ್ನ ಆಸ್ತಿಪಾಸ್ತಿಗಳೂ ಸರಕುಗಳೂ ನಾವಿಕರೂ ಅಂಬಿಗರೂ ಒಡಕುಗಳನ್ನು ಮುಚ್ಚುವವರೂ ವ್ಯಾಪಾರಿ ಗಳೂ ನಿನ್ನಲ್ಲಿನ ಸಮಸ್ತ ಸೈನಿಕರೂ ಅಂತೂ ನಿನ್ನೊಳಗೆ ಸೇರಿಕೊಂಡಿರುವ ಸಿಬ್ಬಂದಿಯೆಲ್ಲವೂ ನಿನ್ನ ನಾಶನದ ದಿನದಲ್ಲಿ ಸಮುದ್ರದೊಳಗೆ ನಿನ್ನೊಂದಿಗೆ ಮುಳುಗಿ ಹೋಗುವರು. ನಿನ್ನ ನಾವಿಕರ ಕಿರಿಚಾಟಕ್ಕೆ ಉಪ ನಗರಗಳು, ಪ್ರದೇಶಗಳು, ನಡುಗುವವು. ಹುಟ್ಟು ಹಾಕುವವರೆಲ್ಲರೂ ಅಂಬಿಗರೂ ಸಮುದ್ರದ ಸಕಲ ನಾವಿಕರೂ ತಮ್ಮ ತಮ್ಮ ಹಡಗುಗಳಿಂದಿಳಿದು ನೆಲದ ಮೇಲೆ ನಿಂತುಕೊಂಡು, ನಿನ್ನ ನಿಮಿತ್ತ ದುಃಖದಿಂದ ಅರಚಿ ತಲೆಗೆ ದೂಳೆರೆಚಿಕೊಂಡು ಬೂದಿಯಲ್ಲಿ ಬಿದ್ದು ಹೊರಳಾಡಿ; ನಿನಗಾಗಿ ತಲೆಬೋಳಿಸಿಕೊಂಡು ಗೋಣಿಚೀಲವನ್ನು ಸುತ್ತಿಕೊಂಡು ಮನೋವ್ಯಥೆ ಯಿಂದ ಗೋಳಾಡಿ ನಿನಗೋಸ್ಕರ ಬಿಕ್ಕಿಬಿಕ್ಕಿ ಅಳುವರು. ಅವರು ಗೋಳಾಡುತ್ತಾ ನಿನ್ನ ವಿಷಯವಾಗಿ ಶೋಕ ಗೀತವನ್ನೆತ್ತಿ ಹೀಗೆ ಪ್ರಲಾಪಿಸುವರು--ಸಮುದ್ರದ ನಡುವೆ ಹಾಳಾಗಿರುವ ತೂರಿನಂತ ಪಟ್ಟಣ ಯಾವದು? ನಿನ್ನ ಸರಕು ಸಮುದ್ರದಿಂದ ಹೊರಟಾಗ ಅನೇಕ ಜನರಿಗೆ ತೃಪ್ತಿಪಡಿಸಿದೆ; ಅವುಗಳಿಂದ ಬಹು ಜನಾಂಗ ಗಳನ್ನು ತುಂಬಿಸಿದೆ; ನಿನ್ನ ಅಪಾರವಾದ ಐಶ್ವರ್ಯ ದಿಂದಲೂ ವ್ಯಾಪಾರದ ದಿನಸುಗಳಿಂದಲೂ ಭೂರಾಜ ರನ್ನು ಸಮೃದ್ಧಿಪಡಿಸಿದೆ. ಈಗಲಾದರೋ ನೀನು ಸಮುದ್ರದಿಂದ ಹಾಳಾದೆ, ನಿನ್ನ ಸರಕುಗಳೂ ನಿನ್ನಲ್ಲಿ ಸೇರಿಕೊಂಡಿದ್ದ ಸಕಲ ಜನರೂ ಅಗಾಧ ಜಲದಲ್ಲಿ ಮುಳುಗಿ ಹೋದರು. ದ್ವೀಪದ ನಿವಾಸಿಗಳೆಲ್ಲಾ ನಿನ್ನ ಸ್ಥಿತಿಗೆ ಬೆಚ್ಚಿ ವಿಸ್ಮಯರಾಗಿದ್ದಾರೆ. ಅರಸರು ಬಹಳ ವಾಗಿ ಭಯಪಟ್ಟಿದ್ದಾರೆ. ರಾಜರುಗಳು ನಡುಗಿ ಭೀತಿ ಗೊಂಡರು.ಜನಾಂಗಗಳ ವರ್ತಕರು ನಿನ್ನನ್ನು ನೋಡಿ ಸಿಳ್ಳುಹಾಕುತ್ತಾರೆ. ನೀನು ಸಂಪೂರ್ಣ ಧ್ವಂಸ ವಾಗಿ ಇನ್ನೆಂದಿಗೂ ಇಲ್ಲದಂತಾಗಿರುವೆ. ಜನಾಂಗಗಳ ವರ್ತಕರು ನಿನ್ನನ್ನು ನೋಡಿ ಸಿಳ್ಳುಹಾಕುತ್ತಾರೆ. ನೀನು ಸಂಪೂರ್ಣ ಧ್ವಂಸ ವಾಗಿ ಇನ್ನೆಂದಿಗೂ ಇಲ್ಲದಂತಾಗಿರುವೆ.
- Isaiah 23:2–3 ಯೆಶಾಯ 23:2–3ದ್ವೀಪಗಳ ನಿವಾಸಿಗಳೇ, ಸಮುದ್ರವನ್ನು ದಾಟುವ ಚೀದೋನಿನ ವರ್ತಕರಿಂದ ಸಮೃದ್ಧಿಯನ್ನು ಹೊಂದಿದವರೇ, ಮೌನ ವಾಗಿರ್ರಿ. ವಿಶಾಲವಾದ ನೀರುಗಳಿಂದ ಸೀಹೋರಿನ ಧಾನ್ಯವೂ ನದಿಯ ಸುಗ್ಗಿಯೂ ನೈಲಿನ ಬೆಳೆಯಿಂ ದಲೂ ಅದಕ್ಕೆ ಆದಾಯವಾಗಿತ್ತು. ಅನೇಕ ಜನಾಂಗ ಗಳಿಗೆ ವ್ಯಾಪಾರ ಸ್ಥಳವಾಗಿತ್ತು.
- Ezekiel 28:2–3 ಯೆಹೆಜ್ಕೇಲನು 28:2–3ಮನುಷ್ಯಪುತ್ರನೇ, ತೂರಿನ ಪ್ರಭುವಿಗೆ ಹೇಳಬೇಕಾದದ್ದೇನಂದರೆ, ದೇವ ರಾದ ಕರ್ತನು ಹೀಗೆ ಹೇಳುತ್ತಾನೆ--ನಿನ್ನ ಹೃದಯವು ಹೆಚ್ಚಿಸಲ್ಪಟ್ಟಿದ್ದರಿಂದ--ನಾನೇ ದೇವರು ದೇವರ ಸ್ಥಾನದಲ್ಲಿ ಸಮುದ್ರಗಳ ಮಧ್ಯದಲ್ಲಿ ಕುಳಿತುಕೊಂಡಿ ರುವೆನೆಂದು ಹೇಳಿದ್ದರಿಂದ ನೀನು ದೇವರಲ್ಲ, ಮನು ಷ್ಯನೇ; ಆದರೂ ನೀನು ನಿನ್ನ ಹೃದಯವನ್ನು ದೇವರ ಹೃದಯದಂತೆ ಮಾಡಿಕೊಂಡಿರುವೆ. ಇಗೋ, ನೀನು ದಾನಿಯೇಲನಿಗಿಂತ ಜ್ಞಾನಿಯಾಗಿರುವೆ; ರಹಸ್ಯವಾದದ್ದು ಏನಿದ್ದರೂ ನಿನಗೆ ಮರೆಯಾಗಿರುವದಿಲ್ಲ.
- Isaiah 23:11 ಯೆಶಾಯ 23:11ಆತನು ಸಮುದ್ರದ ಮೇಲೆ ತನ್ನ ಕೈಚಾಚಿ ರಾಜ್ಯಗಳನ್ನು ನಡುಗಿಸಿದ್ದಾನೆ; ಕರ್ತನು ವ್ಯಾಪಾರದ ಪಟ್ಟಣವನ್ನು (ಕಾನಾನ್) ಅದರ ದುರ್ಗ ಗಳನ್ನು ನಾಶಮಾಡಬೇಕೆಂದು ಆಜ್ಞಾಪಿಸಿದ್ದಾನೆ.
- Ezekiel 26:17 ಯೆಹೆಜ್ಕೇಲನು 26:17ನಿನ್ನ ವಿಷಯದಲ್ಲಿ ಗೋಳಾಟವನ್ನೆತ್ತಿ ನಿನಗೆ ಹೇಳುವದೇನಂದರೆ, ಸಮು ದ್ರಗಳ ಬಳಿಯಲ್ಲಿ ವಾಸಿಸಿದವಳೇ, ಹೆಸರು ಗೊಂಡ ಪಟ್ಟಣವೇ, ನೀನೂ ತನ್ನ ನಿವಾಸಿಗಳೂ ಸಮುದ್ರದಲ್ಲಿ ಬಲವಾಗಿದ್ದವಳೇ, ಅದರ ಸಮುದ್ರ ಸಂಚಾರವನ್ನೂ ಭಯಪಡಿಸಿದವಳೇ, ಅಯ್ಯೋ, ಹೇಗೆ ನಾಶವಾದಿ?
- Psalm 50:2 ಕೀರ್ತನೆಗಳು 50:2ಸೌಂದರ್ಯದ ಪರಿಪೂರ್ಣತೆಯಾದ ಚೀಯೋನಿ ನಿಂದ ದೇವರು ಪ್ರಕಾಶಿಸಿದ್ದಾನೆ.
- Revelation 18:3 ಪ್ರಕಟನೆ 18:3ಎಲ್ಲಾ ಜನಾಂಗಗಳು ಅವಳ ಜಾರತ್ವವೆಂಬ ಕೋಪದ ದ್ರಾಕ್ಷಾರಸವನ್ನು ಕುಡಿದು ಮತ್ತರಾದರು; ಅವಳೊಂದಿಗೆ ಭೂರಾಜರು ಜಾರತ್ವ ಮಾಡಿದರು; ಅವಳ ಅತಿಶಯವಾದ ವೈಭವದಿಂದ ಭೂಲೋಕದ ವರ್ತಕರು ಐಶ್ವರ್ಯವಂತರಾದರು ಎಂದು ಹೇಳಿದನು.
- Isaiah 23:8–9 ಯೆಶಾಯ 23:8–9ಅದು ಕಿರೀಟದಾಯಕವಾದ ಪಟ್ಟಣವು ಅದರ ವರ್ತಕರಾದ ಪ್ರಭುಗಳು, ವ್ಯಾಪಾರಿಗಳು ಭೂಮಿಯಲ್ಲಿ ಘನವುಳ್ಳವರಾಗಿದ್ದಾರೆ. ಇಂಥ ತೂರಿಗೆ ವಿರುದ್ಧವಾಗಿ ಈ ಆಲೋಚನೆ ಮಾಡಿದವರು ಯಾರು? ಗರ್ವದ ಸಕಲ ವೈಭವವನ್ನು ಹೊಲಸು ಮಾಡಬೇ ಕೆಂತಲೂ ಭೂಮಿಯಲ್ಲಿ ಘನವುಳ್ಳವರೆಲ್ಲರನ್ನು ಅವ ಮಾನಪಡಿಸಬೇಕೆಂತಲೂ ಸೈನ್ಯಗಳ ಕರ್ತನೇ, ಹೀಗೆ ಸಂಕಲ್ಪಿಸಿದ್ದಾನೆ.
- Revelation 18:11–15 ಪ್ರಕಟನೆ 18:11–15ಇದಲ್ಲದೆ ಭೂಲೋಕದ ವರ್ತಕರು ಅವಳ ನಿಮಿತ್ತವಾಗಿ ಅತ್ತು ಗೋಳಾಡುವರು. ಯಾಕಂದರೆ ಅವರ ಸರಕುಗಳನ್ನು ಅಂದರೆ ಚಿನ್ನ, ಬೆಳ್ಳಿ, ಅಮೂಲ್ಯವಾದ ಕಲ್ಲುಗಳು, ಮುತ್ತುಗಳು, ನಯವಾದ ನಾರುಮಡಿ, ಧೂಮ್ರವರ್ಣದ ವಸ್ತ್ರ, ರೇಶ್ಮೆ, ರಕ್ತಾಂಬರ, ಸಕಲ ವಿಧವಾದ ಅಗಿಲುಮರ, ಸಕಲ ವಿಧವಾದ ದಂತದ ಪಾತ್ರೆಗಳು, ಬಹು ಅಮೂಲ್ಯವಾದ ಮರ, ಹಿತ್ತಾಳೆ, ಸಕಲ ವಿಧವಾದ ಪಾತ್ರೆಗಳು, ಕಬ್ಬಿಣ, ಚಂದ್ರಕಾಂತ, ಲವಂಗ, ಚೆಕ್ಕೆ, ಧೂಪ, ಸುಗಂಧ ತೈಲ, ಸಾಂಬ್ರಾಣಿ, ದ್ರಾಕ್ಷಾರಸ, ಎಣ್ಣೆ, ನಯವಾದಹಿಟ್ಟು, ಗೋಧಿ, ದನಗಳು, ಕುರಿ ಗಳು, ಕುದುರೆಗಳು, ರಥಗಳು, ಗುಲಾಮರು, ಮನುಷ್ಯರ ಪ್ರಾಣಗಳು ಇವೇ ಮೊದಲಾದವುಗಳನ್ನು ಯಾರೂ ಎಂದೂ ಕೊಂಡುಕೊಳ್ಳುವರಿಲ್ಲ ಎಂದು ದುಃಖಿಸುವರು. ನಿನ್ನ ಜೀವವು ಅಪೇಕ್ಷಿಸಿದ ಹಣ್ಣು ಗಳು ನಿನ್ನನ್ನು ಬಿಟ್ಟು ಹೋದವು; ಸೊಗಸಾಗಿಯೂ ಶೋಭಾಯಮಾನವಾಗಿಯೂ ಇರುವವುಗಳೆಲ್ಲವೂ ನಿನ್ನನ್ನು ಬಿಟ್ಟು ಹೋದವು. ಅವು ಇನ್ನು ಮೇಲೆ ನಿನಗೆ ಸಿಕ್ಕುವದೇ ಇಲ್ಲ. ಅವಳಿಂದ ಐಶ್ವರ್ಯವಂತ ರಾದ ಈ ಸರಕುಗಳ ವರ್ತಕರು ಅವಳ ಯಾತನೆಗೆ ಭಯಪಟ್ಟು ದೂರದಲ್ಲಿ ನಿಂತು ಅಳುತ್ತಾ ಗೋಳಾ ಡುತ್ತಾ--
- Ezekiel 28:12–17 ಯೆಹೆಜ್ಕೇಲನು 28:12–17ಮನುಷ್ಯಪುತ್ರನೇ, ತೂರಿನ ಅರಸನ ವಿಷಯದಲ್ಲಿ ಶೋಕಗೀತೆಯನ್ನೆತ್ತಿ ಅವನಿಗೆ ಹೀಗೆ ಹೇಳು--ದೇವರಾದ ಕರ್ತನು ಹೀಗೆ ಹೇಳು ತ್ತಾನೆ, ಸಂಪೂರ್ಣ ಜ್ಞಾನಿ, ಪರಿಪೂರ್ಣ ಸುಂದರವಾದ ನೀನು ಲೆಕ್ಕವನ್ನು ಮುದ್ರಿಸುತ್ತೀ. ದೇವರ ತೋಟ ವಾದ ಏದೆನಿನಲ್ಲಿ ನೀನಿದ್ದಿ. ಮಾಣಿಕ್ಯ, ಪುಷ್ಯರಾಗ, ಪಚ್ಚೆ, ಪೀತರತ್ನ, ವಜ್ರ, ವೈಡೂರ್ಯ, ನೀಲ ಗೋಮೇ ಧಿಕ, ಕೆಂಪು, ಸ್ಪಟಿಕ, ಚಿನ್ನ ಈ ಅಮೂಲ್ಯವಾದವು ಗಳಿಂದ ಭೂಷಿತವಾಗಿದ್ದಿ. ನಿನ್ನಲ್ಲಿದ್ದ ದಮ್ಮಡಿಗಳೂ ಕೊಳಲುಗಳೂ ಇವುಗಳ ಕೆಲಸವು ನಿನ್ನಲ್ಲಿದ್ದು ನಿನ್ನ ಸೃಷ್ಟಿಯ ದಿನದಲ್ಲಿ ಸಿದ್ಧವಾದವು. ನೀನೇ ಮುಚ್ಚು ವಂತ ಅಭಿಷೇಕಿಸಲ್ಪಟ್ಟ ಕೆರೂಬಿಯು ದೇವರ ಪರಿಶುದ್ಧ ಪರ್ವತದಲ್ಲಿ ನಿನ್ನನ್ನು ಇಟ್ಟೆನು; ಅಲ್ಲೇ ನೀನಿದ್ದಿ, ಬೆಂಕಿಯ ಕಲ್ಲುಗಳ, ಮಧ್ಯದಲ್ಲಿ ನೀನು ಕೆಳಗೂ ಮೇಲಕ್ಕೂ ತಿರುಗಾಡಿದಿ. ನಿನ್ನ ಸೃಷ್ಟಿಯ ದಿನದಿಂದ ನಿನ್ನಲ್ಲಿ ಅಪರಾಧವು ಸಿಕ್ಕುವ ತನಕ ನಿನ್ನ ನಡತೆಯು ನಿರ್ದೋಷವಾಗಿ ಕಾಣುತ್ತಿತ್ತು. ನಿನ್ನ ಮಿತಿಯಿಲ್ಲದ ವ್ಯಾಪಾರದಿಂದ ನಿನ್ನಲ್ಲಿ ಬಲಾತ್ಕಾರವು ತುಂಬಿ ನೀನು ಪಾಪಿಯಾದಿ; ಆದದರಿಂದ ನಿನ್ನನ್ನು ಅಪವಿತ್ರನೆಂದು ದೇವರ ಪರ್ವತದೊಳಗಿನಿಂದ ನಾನು ಬಿಸಾಡುವೆನು. ಓ ಮುಚ್ಚುವ ಕೆರೂಬಿಯೇ, ಬೆಂಕಿಯ ಕಲ್ಲುಗಳ ಮಧ್ಯದಿಂದ ನಿನ್ನನ್ನು ನಾಶಮಾಡುವೆನು. ನಿನ್ನ ಸೌಂದರ್ಯದ ನಿಮಿತ್ತ ನಿನ್ನ ಹೃದಯವು ಉಬ್ಬಿ ಕೊಂಡಿತು; ನಿನ್ನ ಪ್ರಕಾಶದ ನಿಮಿತ್ತ ನಿನ್ನ ಜ್ಞಾನವನ್ನು ಕೆಡಿಸಿಕೊಂಡಿ; ನಾನು ನಿನ್ನನ್ನು ನೆಲಕ್ಕೆ ಹಾಕುವೆನು. ಅರಸನ ಮುಂದೆ ಅವರು ನೋಡುವ ಹಾಗೆ ನಿನ್ನನ್ನು ಇಡುತ್ತೇನೆ;
Original words (Hebrew)
- say · H559אָמַר ʼâmar
- Tyrus · H6865צֹר Tsôr
- situate · H3427יָשַׁב yâshab
- entry · H3997מְבוֹאָה mᵉbôwʼâh
- sea · H3220יָם yâm
- merchant · H7402רָכַל râkal
- people · H5971עַם ʻam
- many · H7227רַב rab
- isles · H339אִי ʼîy
- saith · H559אָמַר ʼâmar
- Lord · H136אֲדֹנָי ʼĂdônây
- Tyrus · H6865צֹר Tsôr
- said · H559אָמַר ʼâmar
- perfect · H3632כָּלִיל kâlîyl
- beauty · H3308יֳפִי yŏphîy