Ezekiel · chapter 28 · verse 15
Ezekiel 28:15 in Kannada
ನಿನ್ನ ಸೃಷ್ಟಿಯ ದಿನದಿಂದ ನಿನ್ನಲ್ಲಿ ಅಪರಾಧವು ಸಿಕ್ಕುವ ತನಕ ನಿನ್ನ ನಡತೆಯು ನಿರ್ದೋಷವಾಗಿ ಕಾಣುತ್ತಿತ್ತು.
Ninna srushtiya dinadinda ninnalli aparaadhavu sikkuva tanaka ninna nadateyu nirdoshavaagi kaanuttittu.
Ezekiel 28:15 in English
- King James Version (KJV)
- Thou [wast] perfect in thy ways from the day that thou wast created, till iniquity was found in thee.
- World English Bible (WEB)
- You were perfect in your ways from the day that you were created, until unrighteousness was found in you.
- American Standard Version (ASV)
- Thou wast perfect in thy ways from the day that thou wast created, till unrighteousness was found in thee.
- Bible in Basic English (BBE)
- There has been no evil in your ways from the day when you were made, till sin was seen in you.
- Darby Translation (DBY)
- Thou wast perfect in thy ways, from the day that thou wast created, till unrighteousness was found in thee.
- Webster's Bible (WBS)
- Thou [wast] perfect in thy ways from the day that thou wast created, till iniquity was found in thee.
- Young's Literal Translation (YLT)
- Perfect [art] thou in thy ways, From the day of thy being produced, Till perversity hath been found in thee.
Read in context
- 13ದೇವರ ತೋಟ ವಾದ ಏದೆನಿನಲ್ಲಿ ನೀನಿದ್ದಿ. ಮಾಣಿಕ್ಯ, ಪುಷ್ಯರಾಗ, ಪಚ್ಚೆ, ಪೀತರತ್ನ, ವಜ್ರ, ವೈಡೂರ್ಯ, ನೀಲ ಗೋಮೇ ಧಿಕ, ಕೆಂಪು, ಸ್ಪಟಿಕ, ಚಿನ್ನ ಈ ಅಮೂಲ್ಯವಾದವು ಗಳಿಂದ ಭೂಷಿತವಾಗಿದ್ದಿ. ನಿನ್ನಲ್ಲಿದ್ದ ದಮ್ಮಡಿಗಳೂ ಕೊಳಲುಗಳೂ ಇವುಗಳ ಕೆಲಸವು ನಿನ್ನಲ್ಲಿದ್ದು ನಿನ್ನ ಸೃಷ್ಟಿಯ ದಿನದಲ್ಲಿ ಸಿದ್ಧವಾದವು.
- 14ನೀನೇ ಮುಚ್ಚು ವಂತ ಅಭಿಷೇಕಿಸಲ್ಪಟ್ಟ ಕೆರೂಬಿಯು ದೇವರ ಪರಿಶುದ್ಧ ಪರ್ವತದಲ್ಲಿ ನಿನ್ನನ್ನು ಇಟ್ಟೆನು; ಅಲ್ಲೇ ನೀನಿದ್ದಿ, ಬೆಂಕಿಯ ಕಲ್ಲುಗಳ, ಮಧ್ಯದಲ್ಲಿ ನೀನು ಕೆಳಗೂ ಮೇಲಕ್ಕೂ ತಿರುಗಾಡಿದಿ.
- 15ನಿನ್ನ ಸೃಷ್ಟಿಯ ದಿನದಿಂದ ನಿನ್ನಲ್ಲಿ ಅಪರಾಧವು ಸಿಕ್ಕುವ ತನಕ ನಿನ್ನ ನಡತೆಯು ನಿರ್ದೋಷವಾಗಿ ಕಾಣುತ್ತಿತ್ತು.
- 16ನಿನ್ನ ಮಿತಿಯಿಲ್ಲದ ವ್ಯಾಪಾರದಿಂದ ನಿನ್ನಲ್ಲಿ ಬಲಾತ್ಕಾರವು ತುಂಬಿ ನೀನು ಪಾಪಿಯಾದಿ; ಆದದರಿಂದ ನಿನ್ನನ್ನು ಅಪವಿತ್ರನೆಂದು ದೇವರ ಪರ್ವತದೊಳಗಿನಿಂದ ನಾನು ಬಿಸಾಡುವೆನು. ಓ ಮುಚ್ಚುವ ಕೆರೂಬಿಯೇ, ಬೆಂಕಿಯ ಕಲ್ಲುಗಳ ಮಧ್ಯದಿಂದ ನಿನ್ನನ್ನು ನಾಶಮಾಡುವೆನು.
- 17ನಿನ್ನ ಸೌಂದರ್ಯದ ನಿಮಿತ್ತ ನಿನ್ನ ಹೃದಯವು ಉಬ್ಬಿ ಕೊಂಡಿತು; ನಿನ್ನ ಪ್ರಕಾಶದ ನಿಮಿತ್ತ ನಿನ್ನ ಜ್ಞಾನವನ್ನು ಕೆಡಿಸಿಕೊಂಡಿ; ನಾನು ನಿನ್ನನ್ನು ನೆಲಕ್ಕೆ ಹಾಕುವೆನು. ಅರಸನ ಮುಂದೆ ಅವರು ನೋಡುವ ಹಾಗೆ ನಿನ್ನನ್ನು ಇಡುತ್ತೇನೆ;
Cross references
- 2 Peter 2:4 2 ಪೇತ್ರನು 2:4ಹೇಗೆಂದರೆ ದೂತರು ಪಾಪಮಾಡಿದಾಗ ದೇವರು ಅವರನ್ನು ಸುಮ್ಮನೆ ಬಿಡದೆ ನರಕಕ್ಕೆ ದೊಬ್ಬಿ ನ್ಯಾಯ ತೀರ್ಪನ್ನು ಹೊಂದುವದಕ್ಕೆ ಇಡಲ್ಪಟ್ಟವರಾಗಿರ ಬೇಕೆಂದು ಕತ್ತಲೆಯ ಸಂಕೋಲೆಗಳಿಗೆ ಒಪ್ಪಿಸಿದನು.
- Ezekiel 28:17–18 ಯೆಹೆಜ್ಕೇಲನು 28:17–18ನಿನ್ನ ಸೌಂದರ್ಯದ ನಿಮಿತ್ತ ನಿನ್ನ ಹೃದಯವು ಉಬ್ಬಿ ಕೊಂಡಿತು; ನಿನ್ನ ಪ್ರಕಾಶದ ನಿಮಿತ್ತ ನಿನ್ನ ಜ್ಞಾನವನ್ನು ಕೆಡಿಸಿಕೊಂಡಿ; ನಾನು ನಿನ್ನನ್ನು ನೆಲಕ್ಕೆ ಹಾಕುವೆನು. ಅರಸನ ಮುಂದೆ ಅವರು ನೋಡುವ ಹಾಗೆ ನಿನ್ನನ್ನು ಇಡುತ್ತೇನೆ; ನಿನ್ನ ಅಪಾರವಾದ ಅಪರಾಧಗ ಳಿಂದಲೂ ಅನ್ಯಾಯವಾದ ವ್ಯಾಪಾರಗಳಿಂದಲೂ ನಿನ್ನಲ್ಲಿನ ಪವಿತ್ರಾಲಯಗಳನ್ನು ಹೊಲಸು ಮಾಡಿದೆ. ಆದಕಾರಣ ನಾನು ನಿನ್ನೊಳಗಿಂದ ಬೆಂಕಿಯನು ಬರಮಾಡಿದೆನು, ಅದು ನಿನ್ನನ್ನು ನುಂಗಿತು; ನೋಡು ವವರೆಲ್ಲರ ಮುಂದೆ ನಿನ್ನನ್ನು ಬೂದಿ ಮಾಡುವೆನು;
- Genesis 1:26–27 ಆದಿಕಾಂಡ 1:26–27ತರುವಾಯ ದೇವರು--ನಮ್ಮ ರೂಪದಲ್ಲಿ ನಮ್ಮ ಹೋಲಿಕೆಗೆ ಸರಿಯಾಗಿ ಮನುಷ್ಯನನ್ನು ಮಾಡೋಣ; ಅವರು ಸಮುದ್ರದ ವಿಾನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ಪಶುಗಳ ಮೇಲೆಯೂ ಎಲ್ಲಾ ಭೂಮಿಯ ಮೇಲೆಯೂ ಭೂಮಿಯ ಮೇಲೆ ಹರಿದಾಡುವ ಪ್ರತಿಯೊಂದು ಕ್ರಿಮಿಯ ಮೇಲೆಯೂ ದೊರೆತನಮಾಡಲಿ ಅಂದನು. ಹೀಗೆ ದೇವರು ಮನುಷ್ಯನನ್ನು ತನ್ನ ಸ್ವರೂಪದಲ್ಲಿ ಸೃಷ್ಟಿಸಿದನು, ದೇವರರೂಪದಲ್ಲಿ ಆತನು ಅವನನ್ನು ಸೃಷ್ಟಿಸಿದನು. ಆತನು ಅವರನ್ನು ಗಂಡು ಹೆಣ್ಣಾಗಿ ಸೃಷ್ಟಿಸಿದನು.
- Romans 7:9 ರೋಮಾಪುರದವರಿಗೆ 7:9ಮೊದಲು ನಾನು ನ್ಯಾಯಪ್ರಮಾಣವಿಲ್ಲದವನಾಗಿದ್ದು ಜೀವದಿಂದಿದ್ದೆನು. ಆಜ್ಞೆಯು ಬಂದಾಗ ಪಾಪವು ಪುನರ್ಜೀವವಾಗಿ ನಾನು ಸತ್ತೆನು.
- Ezekiel 28:3–6 ಯೆಹೆಜ್ಕೇಲನು 28:3–6ಇಗೋ, ನೀನು ದಾನಿಯೇಲನಿಗಿಂತ ಜ್ಞಾನಿಯಾಗಿರುವೆ; ರಹಸ್ಯವಾದದ್ದು ಏನಿದ್ದರೂ ನಿನಗೆ ಮರೆಯಾಗಿರುವದಿಲ್ಲ. ನಿನ್ನ ಜ್ಞಾನ ದಿಂದಲೂ ವಿವೇಕದಿಂದಲೂ ನಿನಗೆ ದ್ರವ್ಯವನ್ನುಂಟು ಮಾಡಿಕೊಂಡಿರುವೆ. ಚಿನ್ನವನ್ನೂ ಬೆಳ್ಳಿಯನ್ನೂ ನಿನ್ನ ಭಂಡಾರಗಳಲ್ಲಿ ಇಟ್ಟುಕೊಂಡಿರುವೆ. ನಿನ್ನ ಅಧಿಕ ಜ್ಞಾನದಿಂದಲೂ ವ್ಯಾಪಾರದಿಂದಲೂ ಸಂಪತ್ತನ್ನು ವೃದ್ಧಿಮಾಡಿಕೊಂಡಿರುವಿ. ನಿನ್ನ ಆಸ್ತಿಯ ನಿಮಿತ್ತ ನಿನ್ನ ಹೃದಯವು ಹೆಚ್ಚಿಸಿಕೊಂಡಿದೆ; ಆದದರಿಂದ ದೇವ ರಾದ ಕರ್ತನು ಹೀಗೆ ಹೇಳುತ್ತಾನೆ--ನೀನು ನಿನ್ನ ಹೃದಯವನ್ನು ದೇವರ ಹೃದಯದಂತೆ ಮಾಡಿಕೊಂಡ ದ್ದರಿಂದ;
- Ezekiel 27:3–4 ಯೆಹೆಜ್ಕೇಲನು 27:3–4ತೂರಿಗೆ ಹೇಳು--ಸಮುದ್ರದ ಪ್ರವೇಶದಲ್ಲಿ ವಾಸಿಸುವವಳೇ, ಬಹು ದ್ವೀಪಗಳಿಗೆ ಜನರ ವ್ಯಾಪಾರವನ್ನು ನಡಿಸುವ ವಳೇ, ದೇವರಾದ ಕರ್ತನು ಹೀಗೆ ಹೇಳುತ್ತಾನೆ-- ಓ ತೂರೇ, ನಾನು ಪೂರ್ಣ ಸೌಂದರ್ಯವಂತಳೆಂದು ನೀನು ಹೇಳಿದ್ದೀ. ನಿನ್ನ ಮೇರೆಗಳು ಸಮುದ್ರದ ಮಧ್ಯದಲ್ಲಿವೆ, ನಿನ್ನನ್ನು ಕಟ್ಟಿದವರು ನಿನ್ನ ಸೌಂದರ್ಯ ವನ್ನು ಸಂಪೂರ್ಣಪಡಿಸಿದ್ದಾರೆ.
- Ezekiel 28:12 ಯೆಹೆಜ್ಕೇಲನು 28:12ಮನುಷ್ಯಪುತ್ರನೇ, ತೂರಿನ ಅರಸನ ವಿಷಯದಲ್ಲಿ ಶೋಕಗೀತೆಯನ್ನೆತ್ತಿ ಅವನಿಗೆ ಹೀಗೆ ಹೇಳು--ದೇವರಾದ ಕರ್ತನು ಹೀಗೆ ಹೇಳು ತ್ತಾನೆ, ಸಂಪೂರ್ಣ ಜ್ಞಾನಿ, ಪರಿಪೂರ್ಣ ಸುಂದರವಾದ ನೀನು ಲೆಕ್ಕವನ್ನು ಮುದ್ರಿಸುತ್ತೀ.
- Lamentations 5:16 ಪ್ರಲಾಪಗಳು 5:16ಕಿರೀಟವು ನಮ್ಮ ತಲೆಯ ಮೇಲಿಂದ ಬಿದ್ದು ಹೋಯಿತು; ನಮಗೆ ಅಯ್ಯೋ, ನಾವು ಪಾಪಮಾಡಿದ್ದೇವೆ.
- Ecclesiastes 7:29 ಪ್ರಸಂಗಿ 7:29ಇಗೋ, ದೇವರು ಮನುಷ್ಯನನ್ನು ಸತ್ಯವಂತನನ್ನಾಗಿ ಮಾಡಿದನು. ಇದನ್ನು ಮಾತ್ರ ನಾನು ಕಂಡುಕೊಂಡಿದ್ದೇನೆ, ಅವರಾದರೋ ಅನೇಕ ಕಲ್ಪನೆ ಗಳನ್ನು ಹುಡುಕಿದ್ದಾರೆ.
- Isaiah 14:12 ಯೆಶಾಯ 14:12ಓ ಲೂಸಿಫರ್ ಉದಯದ ಮಗನೇ. ಆಕಾಶದಿಂದ ನೀನು ಹೇಗೆ ಬಿದ್ದೀ? ಜನಾಂಗಗಳನ್ನು ಬಲಹೀನ ಮಾಡಿದ ನೀನು ಭೂಮಿಗೆ ಹೇಗೆ ಕಡಿಯಲ್ಪಟ್ಟಿದ್ದೀ?
- Genesis 6:5–6 ಆದಿಕಾಂಡ 6:5–6ಮನುಷ್ಯನ ದುಷ್ಟತ್ವವು ಭೂಮಿಯಲ್ಲಿ ಹೆಚ್ಚಿದ್ದನ್ನೂ ಅವನ ಹೃದಯದ ಆಲೋಚನೆಗಳ ಕಲ್ಪನೆಗಳೆಲ್ಲಾ ಯಾವಾಗಲೂ ಬರೀ ಕೆಟ್ಟವುಗಳೆಂದೂ ದೇವರು ನೋಡಿದನು. ಕರ್ತನು ಭೂಮಿಯ ಮೇಲೆ ಮನುಷ್ಯನನ್ನು ಉಂಟುಮಾಡಿದ್ದಕ್ಕೋಸ್ಕರ ಪಶ್ಚಾತ್ತಾಪ ಪಟ್ಟು ತನ್ನ ಹೃದಯದಲ್ಲಿ ನೊಂದುಕೊಂಡನು.
- Proverbs 14:34 ಜ್ಞಾನೋಕ್ತಿಗಳು 14:34ನೀತಿಯು ಜನಾಂಗವನ್ನು ವೃದ್ಧಿಮಾಡುತ್ತದೆ; ಯಾವ ಪ್ರಜೆಗಾದರೂ ಪಾಪವು ಅವಮಾನವಾಗಿದೆ.ಜ್ಞಾನ ವುಳ್ಳ ಸೇವಕನ ಕಡೆಗೆ ಅರಸನ ದಯೆ ಇದೆ; ನಾಚಿಕೆ ಪಡಿಸುವವನ ಕಡೆಗೆ ಅವನ ರೌದ್ರವಿದೆ.