Ezekiel · chapter 28 · verse 24
Ezekiel 28:24 in Kannada
ಇಸ್ರಾಯೇಲ್ ವಂಶದವರಿಗೆ ಚುಚ್ಚುವ ದತ್ತೂರಿ ಸುತ್ತಲೂ ಹೀನೈಸುವ ನೋಯಿಸುವ ಮುಳ್ಳು ಇನ್ನಿರದು; ನಾನೇ ದೇವರಾದ ಕರ್ತನೆಂದು ಅವರಿಗೆ ತಿಳಿಯುವದು.
Israayel vanshadavarige chuchchuva dattoori suttaloo heenaisuva noyisuva mullu inniradu; naane devaraada kartanendu avarige tiliyuvadu.
Ezekiel 28:24 in English
- King James Version (KJV)
- And there shall be no more a pricking brier unto the house of Israel, nor [any] grieving thorn of all [that are] round about them, that despised them; and they shall know that I [am] the Lord GOD.
- World English Bible (WEB)
- “‘“There will no longer be a pricking brier to the house of Israel, nor a hurting thorn of any that are around them that scorned them. Then they will know that I am the Lord GOD.”
- American Standard Version (ASV)
- And there shall be no more a pricking brier unto the house of Israel, nor a hurting thorn of any that are round about them, that did despite unto them; and they shall know that I am the Lord Jehovah.
- Bible in Basic English (BBE)
- And there will no longer be a plant with sharp points wounding the children of Israel, or a thorn troubling them among any who are round about them, who put shame on them; and they will be certain that I am the Lord.
- Darby Translation (DBY)
- And there shall be no more a wounding sting for the house of Israel, nor any grieving thorn, among all that were round about them, that despised them: and they shall know that I [am] the Lord Jehovah.
- Webster's Bible (WBS)
- And there shall be no more a pricking brier to the house of Israel, nor [any] grieving thorn of all [that are] around them, that despised them; and they shall know that I [am] the Lord GOD.
- Young's Literal Translation (YLT)
- And there is no more to the house of Israel A pricking brier, and paining thorn, Of all round about them — despising them, And they have known that I [am] the Lord Jehovah.
Read in context
- 22ನೀನು ಹೇಳಬೇಕಾದದ್ದೇನಂದರೆ -- ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ಚಿದೋನೇ ನಾನು ನಿನಗೆ ವಿರೋಧವಾಗಿದ್ದೇನೆ; ನಿನ್ನ ಮಧ್ಯದಲ್ಲಿ ಘನವನ್ನು ಹೊಂದುವೆನು. ಆಗ ನಾನು ಅದರಲ್ಲಿ ನ್ಯಾಯಗಳನ್ನು ತೀರಿಸಿ, ಪರಿಶುದ್ಧನಾಗುವಾಗ ನಾನೇ ಕರ್ತನೆಂದು ತಿಳಿಯುವರು.
- 23ಅದರಲ್ಲಿ ವ್ಯಾಧಿಯನ್ನೂ ಬೀದಿಗಳಲ್ಲಿ ರಕ್ತವನ್ನು ಕಳುಹಿಸುವೆನು; ಸುತ್ತಲೂ ಅದಕ್ಕೆ ವಿರುದ್ಧವಾಗಿ ಕತ್ತಿಯಿಂದ ಹತವಾದವರು ಅದರಲ್ಲಿ ಬೀಳುವರು; ಆಗ ನಾನೇ ಕರ್ತನೆಂದು ತಿಳಿಯುವರು.
- 24ಇಸ್ರಾಯೇಲ್ ವಂಶದವರಿಗೆ ಚುಚ್ಚುವ ದತ್ತೂರಿ ಸುತ್ತಲೂ ಹೀನೈಸುವ ನೋಯಿಸುವ ಮುಳ್ಳು ಇನ್ನಿರದು; ನಾನೇ ದೇವರಾದ ಕರ್ತನೆಂದು ಅವರಿಗೆ ತಿಳಿಯುವದು.
- 25ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಾನು ಇಸ್ರಾಯೇಲ್ಯರ ಮನೆತನದವರನ್ನು ಚದರಿಹೋದ ಜನಾಂಗದಿಂದ ಒಂದುಗೂಡಿಸಿ ಅನ್ಯಜನಾಂಗಗಳ ಮುಂದೆ ಅವರಲ್ಲಿ ಪರಿಶುದ್ಧವಾದ ಮೇಲೆ ಇಸ್ರಾ ಯೇಲ್ಯರು ನನ್ನ ಸೇವಕನಾದ ಯಾಕೋಬನಿಗೆ ನಾನು ಅನುಗ್ರಹಿಸಿದ ತಮ್ಮ ದೇಶದಲ್ಲಿಯೇ ವಾಸಿಸುವರು;ಅವರು ನಿರ್ಭಯರಾಗಿ ಅಲ್ಲಿ ವಾಸಿಸುವರು; ಮನೆ ಗಳನ್ನು ಕಟ್ಟುವರು; ದ್ರಾಕ್ಷೇತೋಟಗಳನ್ನು ನೆಡುವರು; ಹೌದು, ಸುತ್ತಲಾಗಿ ಅವರನ್ನು ಅಸಡ್ಡೆ ಮಾಡಿದವರೆಲ್ಲರ ಮೇಲೆ ನಾನು ನ್ಯಾಯ ತೀರಿಸಿದ ಮೇಲೆ ಅವರು ನಿರ್ಭಯರಾಗಿ ವಾಸಿಸುವರು. ಕರ್ತನಾದ ನಾನೇ ಅವರ ದೇವರೆಂದು ತಿಳಿಯುವರು.
- 26ಅವರು ನಿರ್ಭಯರಾಗಿ ಅಲ್ಲಿ ವಾಸಿಸುವರು; ಮನೆ ಗಳನ್ನು ಕಟ್ಟುವರು; ದ್ರಾಕ್ಷೇತೋಟಗಳನ್ನು ನೆಡುವರು; ಹೌದು, ಸುತ್ತಲಾಗಿ ಅವರನ್ನು ಅಸಡ್ಡೆ ಮಾಡಿದವರೆಲ್ಲರ ಮೇಲೆ ನಾನು ನ್ಯಾಯ ತೀರಿಸಿದ ಮೇಲೆ ಅವರು ನಿರ್ಭಯರಾಗಿ ವಾಸಿಸುವರು. ಕರ್ತನಾದ ನಾನೇ ಅವರ ದೇವರೆಂದು ತಿಳಿಯುವರು.
Cross references
- Joshua 23:13 ಯೆಹೋಶುವ 23:13ನಿಮ್ಮ ದೇವರಾದ ಕರ್ತನು ಇನ್ನು ಮೇಲೆ ಈ ಜನಾಂಗಗಳನ್ನು ನಿಮ್ಮ ಮುಂದೆ ಹೊರಡಿಸಿ ಬಿಡುವದಿಲ್ಲ. ನಿಮ್ಮ ದೇವರಾದ ಕರ್ತನು ನಿಮಗೆ ಕೊಟ್ಟ ಈ ಒಳ್ಳೇ ದೇಶದೊಳಗಿಂದ ನೀವು ನಾಶವಾಗುವ ವರೆಗೂ ಅವರು ನಿಮಗೆ ಉರುಲಾಗಿಯೂ ಬೋನಾ ಗಿಯೂ ನಿಮ್ಮ ಪಕ್ಕೆಯಲ್ಲಿ ಶೂಲವಾಗಿಯೂ ನಿಮ್ಮ ಕಣ್ಣುಗಳಿಗೆ ಮುಳ್ಳುಗಳಾಗಿಯೂ ಇರುವರೆಂದು ನಿಶ್ಚಯ ವಾಗಿ ತಿಳಿದುಕೊಳ್ಳುವಿರಿ.
- Numbers 33:55 ಅರಣ್ಯಕಾಂಡ 33:55ಆದರೆ ನೀವು ನಿಮ್ಮ ಮುಂದೆ ದೇಶದ ನಿವಾಸಿ ಗಳನ್ನು ಹೊರಡಿಸದಿದ್ದರೆ ನೀವು ಉಳಿಸಿದವರು ನಿಮ್ಮ ಕಣ್ಣುಗಳಲ್ಲಿ ಮುಳ್ಳುಗಳಾಗಿಯೂ ನಿಮ್ಮ ಪಾರ್ಶ್ವಗಳಲ್ಲಿ ಕಂಟಕಗಳಾಗಿಯೂ ಇರುವರು; ನೀವು ವಾಸಿಸುವ ದೇಶದಲ್ಲಿ ಅವರು ನಿಮ್ಮನ್ನು ಶ್ರಮೆಪಡಿಸುವರು.ಇದಲ್ಲದೆ ನಾನು ಅವರಿಗೆ ಮಾಡಬೇಕೆಂದಿದ್ದ ಹಾಗೆ ನಿಮಗೆ ಮಾಡುವೆನು.
- 2 Corinthians 12:7 2 ಕೊರಿಂಥದವರಿಗೆ 12:7ಇದಲ್ಲದೆ ಹೇರಳವಾದ ಪ್ರಕಟಣೆಗಳ ಮೂಲಕ ನಾನು ಮಿತಿವಿಾರಿ ಹೆಚ್ಚಿಸಿ ಕೊಳ್ಳಬಾರದೆಂದು ನನ್ನನ್ನು ಗುದ್ದುವದಕ್ಕಾಗಿ ಸೈತಾನನ ದೂತನಂತೆ ನನ್ನ ಶರೀರದಲ್ಲಿ ಒಂದು ಮುಳ್ಳು ನನಗೆ ಕೊಡಲ್ಪಟ್ಟಿದೆ; ಹೀಗೆ ನಾನು ಮಿತಿವಿಾರಿ ಹೆಚ್ಚಿಸಿ ಕೊಳ್ಳಲಾರದಂತೆ ಇದಾಯಿತು.
- Isaiah 55:13 ಯೆಶಾಯ 55:13ಮುಳ್ಳಿಗೆ ಬದಲಾಗಿ ಫರ್ (ತುರಾಯಿ) ಮರವು ಮತ್ತು ದತ್ತೂರಿಗೆ ಬದಲಾಗಿ ಸುವಾಸನೆ ಬೀರುವ ಮರವು ಹುಟ್ಟುವವು; ಅದು ಕರ್ತನ ಹೆಸರಿಗಾಗಿ ಮತ್ತು ಶಾಶ್ವತವಾದ ಗುರುತಾಗಿ ಎಂದಿಗೂ ಅಳಿಯದಿರುವದು.
- Ezekiel 2:6 ಯೆಹೆಜ್ಕೇಲನು 2:6ಇದಲ್ಲದೆ ಮನುಷ್ಯಪುತ್ರನೇ, ನೀನು ಅವರಿಗಾ ಗಲೀ ಅವರ ಮಾತುಗಳಿಗಾಗಲೀ ಭಯಪಡಬೇಡ. ಮುಳ್ಳುಗಳೂ ದತ್ತೂರಿಗಳೂ ನಿನ್ನ ಸಂಗಡ ಇದ್ದರೂ ಚೇಳುಗಳ ನಡುವೆ ನೀನು ವಾಸಿಸಿದರೂ ಸರಿ; ನೀನು ಅವರ ಮಾತುಗಳಿಗೆ ಭಯಪಡಬೇಡ, ಅವರು ತಿರುಗಿ ಬೀಳುವ ಮನೆಯವರಾದರೂ ಅವರ ನೋಟಗಳಿಗೆ ಅಂಜಬೇಡ.
- Revelation 21:4 ಪ್ರಕಟನೆ 21:4ದೇವರು ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವನು. ಇನ್ನು ಮರಣ ವಿರುವದಿಲ್ಲ. ಇನ್ನು ದುಃಖವಾಗಲಿ ಗೋಳಾಟವಾಗಲಿ ನೋವಾಗಲಿ ಇರುವದೇ ಇಲ್ಲ. ಮೊದಲಿದ್ದವುಗಳೆಲ್ಲಾ ಇಲ್ಲದೆ ಹೋದವು ಎಂದು ಹೇಳಿತು.
- Judges 2:3 ನ್ಯಾಯಸ್ಥಾಪಕರು 2:3ಆದದರಿಂದ--ನಾನು ಸಹ ಅವರನ್ನು ನಿಮ್ಮ ಎದುರಿನಿಂದ ಓಡಿಸಿಬಿಡುವದಿಲ್ಲ. ಅವರು ನಿಮ್ಮ ಪಕ್ಕದಲ್ಲಿ ಮುಳ್ಳುಗಳಂತಿರುವರು; ಅವರ ದೇವರುಗಳು ನಿಮಗೆ ಉರುಲಾಗುವವೆಂದು ನಾನು ಹೇಳಿದ್ದೆನು.
- Jeremiah 12:14 ಯೆರೆಮೀಯ 12:14ನನ್ನ ಕೆಟ್ಟ ನೆರೆಯವರೆಲ್ಲರಿಗೆ ನನ್ನ ಜನರಾದ ಇಸ್ರಾಯೇಲ್ಯರಿಗೆ ಸ್ವಾಧೀನಮಾಡಿಕೊಳ್ಳುವದಕ್ಕೆ ನಾನು ಕೊಟ್ಟ ಸ್ವಾಸ್ತ್ಯವನ್ನು ಮುಟ್ಟುವವರಿಗೆ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಅವರನ್ನು ಅವರ ಭೂಮಿಯೊಳಗಿಂದ ಕಿತ್ತುಹಾಕುವೆನು; ಯೆಹೂದನ ಮನೆತನದವರನ್ನು ಅವರೊಳಗಿಂದ ಕಿತ್ತುಹಾಕುವೆನು.
- Isaiah 35:9 ಯೆಶಾಯ 35:9ಸಿಂಹವು ಅಲ್ಲಿ ಇರದು ಇಲ್ಲವೆ ಕ್ರೂರ ವಾದ ಮೃಗಗಳು ಅದರ ಮೇಲೆ ಹೋಗವು, ಅವು ಅಲ್ಲಿ ಕಾಣುವದೇ ಇಲ್ಲ; ಬಿಡುಗಡೆಯಾದವರೇ ಅಲ್ಲಿ ನಡೆಯುವರು.ಕರ್ತನಿಂದ ವಿಮೋಚಿಸಲ್ಪಟ್ಟವರು ಹಿಂತಿರುಗಿಕೊಂಡು ತಮ್ಮ ತಲೆಗಳ ಮೇಲೆ ಉತ್ಸಾಹಧ್ವನಿ ನಿತ್ಯವಾದ ಸಂತೋಷಗಳೊಂದಿಗೆ ಚೀಯೋನಿಗೆ ಬರು ವರು; ಅವರು ಹರ್ಷಾನಂದಗಳನ್ನು ಅನುಭವಿಸು ವರು. ದುಃಖವೂ, ನಿಟ್ಟುಸಿರೂ ಓಡಿಹೋಗುವವು.
- Ezekiel 28:26 ಯೆಹೆಜ್ಕೇಲನು 28:26ಅವರು ನಿರ್ಭಯರಾಗಿ ಅಲ್ಲಿ ವಾಸಿಸುವರು; ಮನೆ ಗಳನ್ನು ಕಟ್ಟುವರು; ದ್ರಾಕ್ಷೇತೋಟಗಳನ್ನು ನೆಡುವರು; ಹೌದು, ಸುತ್ತಲಾಗಿ ಅವರನ್ನು ಅಸಡ್ಡೆ ಮಾಡಿದವರೆಲ್ಲರ ಮೇಲೆ ನಾನು ನ್ಯಾಯ ತೀರಿಸಿದ ಮೇಲೆ ಅವರು ನಿರ್ಭಯರಾಗಿ ವಾಸಿಸುವರು. ಕರ್ತನಾದ ನಾನೇ ಅವರ ದೇವರೆಂದು ತಿಳಿಯುವರು.
- Ezekiel 36:36–38 ಯೆಹೆಜ್ಕೇಲನು 36:36–38ಆಮೇಲೆ ನಿಮ್ಮ ಸುತ್ತಲೂ ಉಳಿದಿರುವ ಅನ್ಯಜನಾಂಗಗಳು ನಶಿಸಿ ಹೋಗಿರುವ ಸ್ಥಳಗಳನ್ನು ಮತ್ತು ಹಾಳಾಗಿರುವ ಸ್ಥಳದಲ್ಲಿ ಗಿಡ ನೆಟ್ಟ ವನು ಕರ್ತನಾದ ನಾನೇ ಎಂದು ತಿಳಿಯುವರು; ಕರ್ತನಾದ ನಾನೇ ಇದನ್ನು ಹೇಳಿದ್ದೇನೆ, ನಾನೇ ಇದನ್ನು ಮಾಡುತ್ತೇನೆ. ದೇವರಾದ ಕರ್ತನು ಹೀಗೆ ಹೇಳುತ್ತಾನೆ; ಇದನ್ನು ಅವರಿಗೆ ಮಾಡಲು ನಾನಿನ್ನೂ ಇಸ್ರಾಯೇಲನ ಮನೆ ತನದವರಿಂದ ವಿಚಾರಿಸುವೆನು; ನಾನು ಅವರನ್ನು ಮನುಷ್ಯರಲ್ಲಿ ಮಂದೆಯಂತೆ ಹೆಚ್ಚಿಸುವೆನು.ಪರಿ ಶುದ್ಧ ಮಂದೆಯ ಹಾಗೆಯೂ ಯೆರೂಸಲೇಮಿನ ಪರಿಶುದ್ಧ ಹಬ್ಬಗಳ ಮಂದೆಯ ಹಾಗೆಯೂ ಇರುವರು; ಆದಕಾರಣ ಬೀಡಾದ ಪಟ್ಟಣಗಳು ಮನುಷ್ಯರ ಮಂದೆಗಳಿಂದ ತುಂಬುವವು; ನಾನೇ ಕರ್ತನೆಂದು ಅವರಿಗೆ ತಿಳಿಯುವದು. ಪರಿ ಶುದ್ಧ ಮಂದೆಯ ಹಾಗೆಯೂ ಯೆರೂಸಲೇಮಿನ ಪರಿಶುದ್ಧ ಹಬ್ಬಗಳ ಮಂದೆಯ ಹಾಗೆಯೂ ಇರುವರು; ಆದಕಾರಣ ಬೀಡಾದ ಪಟ್ಟಣಗಳು ಮನುಷ್ಯರ ಮಂದೆಗಳಿಂದ ತುಂಬುವವು; ನಾನೇ ಕರ್ತನೆಂದು ಅವರಿಗೆ ತಿಳಿಯುವದು.
- Micah 7:4 ಮೀಕ 7:4ಅವರಲ್ಲಿ ಉತ್ತಮನು ದತ್ತೂರಿಯ ಹಾಗೆಯೂ ಬಹು ಯಥಾರ್ಥನು ಮುಳ್ಳಿನ ಬೇಲಿಯ ಹಾಗೆಯೂ ಇದ್ದಾನೆ; ನಿನ್ನ ಕಾವಲುಗಾರರ ದಿವಸವೂ ನಿನ್ನ ವಿಚಾರಣೆಯೂ ಬರುತ್ತದೆ, ಈಗಲೇ ಅವರಿಗೆ ಗಾಬರಿಯಾಗುವದು.